Tag: Droupadi Murmu

  • ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆಗಳು ಪಾಕ್‌ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

    ಭಾರತೀಯ ಸಶಸ್ತ್ರ ಪಡೆಗಳು, ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್‌ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಕರೆದಿದೆ. ಇದನ್ನೂ ಓದಿ: ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ’ ಅನ್ನು ಪ್ರಾರಂಭಿಸಿದವು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಭಾರತ ಸರ್ಕಾರ ಪ್ರತಿಜ್ಞೆ ಮಾಡಿತ್ತು.

  • 52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

    52ನೇ ಸಿಜೆಐ ಆಗಿ ನ್ಯಾ.ಬಿಆರ್ ಗವಾಯಿ ನೇಮಕ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರು ನ್ಯಾಯಮೂರ್ತಿ ಬಿ.ಆರ್. ಗವಾಯಿ (Justice B.R. Gavai) ಅವರನ್ನು  ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ  (Chief Justice of India) ನೇಮಕ ಮಾಡಲು ಅನುಮೋದಿಸಿದ್ದಾರೆ.

    ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಮೇ 14 ರಂದು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಗುರಿ, ಸಮಯವನ್ನು ನಿರ್ಧರಿಸಿ ಉಗ್ರರನ್ನು ಹೊಡೆದು ಹಾಕಿ- ಸೇನೆಗೆ ಪೂರ್ಣ ಅಧಿಕಾರ ಕೊಟ್ಟ ಮೋದಿ


    ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಭಾರತದ ಸಂವಿಧಾನವು ನೀಡಿರುವ ಅಧಿಕಾರದ ಅಡಿಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಪರಿಶಿಷ್ಟ ಜಾತಿಗೆ ಸೇರಿದ ನ್ಯಾಯಮೂರ್ತಿ ಗವಾಯಿ ಅವರಿಗೆ ಸಿಜೆಐ ಆಗಿ 6 ತಿಂಗಳಿಗೂ ಹೆಚ್ಚಿನ ಅವಧಿ ಸಿಗಲಿದ್ದು ಈ ವರ್ಷದ ನವೆಂಬರ್‌ 23ರಂದು ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ: 4 ದಿನದ ಮೊದಲೇ ಪಹಲ್ಗಾಮ್‌ನಿಂದ 7 ಕಿ.ಮೀ ದೂರದ ಜಾಗಕ್ಕೆ ಬಂದಿದ್ದ ಉಗ್ರರು

    1960ರ ನವೆಂಬರ್‌ 24ರಂದು ಅಮರಾವತಿಯಲ್ಲಿ ಜನಿಸಿದ ಗವಾಯಿ ಅವರು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ 2003ರ ನವೆಂಬರ್‌ 14ರಂದು ಅಧಿಕಾರ ವಹಿಸಿಕೊಂಡರು. 2005ರ ನವೆಂಬರ್‌ 12ರಂದು ಅವರ ಸೇವೆಯು ಕಾಯಂ ಆಯಿತು.

  • ಸ್ಪಿನ್‌ ಮಾಂತ್ರಿಕ ಅಶ್ವಿನ್‌, ಒಲಿಂಪಿಕ್ಸ್‌ ಪದಕ ವಿಜೇತ ಶ್ರೀಜೇಶ್‌ಗೆ ಪದ್ಮ ಪ್ರಶಸ್ತಿ ಗೌರವ

    ಸ್ಪಿನ್‌ ಮಾಂತ್ರಿಕ ಅಶ್ವಿನ್‌, ಒಲಿಂಪಿಕ್ಸ್‌ ಪದಕ ವಿಜೇತ ಶ್ರೀಜೇಶ್‌ಗೆ ಪದ್ಮ ಪ್ರಶಸ್ತಿ ಗೌರವ

    ನವದೆಹಲಿ: ರಾಷ್ಟ್ರಪತಿ ಭವನದಲ್ಲಿಂದು ನಡೆದ‌ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಟೀಂ ಇಂಡಿಯಾದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (R Ashwin) ಹಾಗೂ ಒಲಿಂಪಿಕ್ಸ್‌ ಪದಕ ವಿಜೇತರೂ ಆಗಿರುವ ಮಾಜಿ ಹಾಕಿ ಆಟಗಾರ ಪಿ.ಆರ್‌ ಶ್ರೀಜೇಶ್‌ಗೆ (PR Sreejesh) 2025ನೇ ಸಾಲಿನ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು, ರವಿಚಂದ್ರನ್ ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಹಾಗೂ ಪಿ.ಆರ್ ಶ್ರೀಜೇಶ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು. ಈ ವೇಳೆ ಮೇಜರ್ ಧ್ಯಾನ್ ಚಂದ್ ನಂತರ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ 2ನೇ ಭಾರತೀಯ ಹಾಕಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದನ್ನೂ ಓದಿ: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ – ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

    ಭಾರತದ ಕ್ರಿಕೆಟ್‌ ದಂತಕಥೆಗಳಲ್ಲಿ ಒಬ್ಬರಾದ ಅಶ್ವಿನ್‌, ಭಾರತ ಕ್ರಿಕೆಟ್‌ ತಂಡ 2011ರಲ್ಲಿ ಏಕದಿನ ವಿಶ್ವಕಪ್‌ ಹಾಗೂ 2013ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆದ್ದಾಗ ಟೀಂ ಇಂಡಿಯಾದ ಭಾಗವಾಗಿದ್ದರು. ಆಲ್‌ರೌಂಡರ್‌ ಪ್ರದರ್ಶನ ನೀಡುತ್ತಿದ್ದ ಅಶ್ವಿನ್‌ ತಮ್ಮ ಸ್ಪಿನ್‌ ಬೌಲಿಂಗ್‌ನಿಂದಲೇ ಮೋಡಿ ಮಾಡಿದ್ದರು. ಇದನ್ನೂ ಓದಿ: SRH Vs MI – ಇಶಾನ್ ಕಿಶನ್ ವಿವಾದಿತ `ಔಟ್’ – ಮ್ಯಾಚ್ ಫಿಕ್ಸಿಂಗ್ ಚರ್ಚೆ!

    ಭಾರತ ಕ್ರಿಕೆಟ್‌ ತಂಡಕ್ಕಾಗಿ ಆಡಿದ 106 ಪಂದ್ಯಗಳಲ್ಲಿ 537 ವಿಕೆಟ್‌ ಪಡೆಯುವ ಮೂಲಕ ಭಾರತದ 2ನೇ ಅತಿ ಹೆಚ್ಚು ವಿಕೆಟ್‌ ಪಡೆದ ದಾಖಲೆ ಬರೆದಿದ್ದಾರೆ. ಅಲ್ಲದೇ ಅಶ್ವಿನ್ 3,503 ಬಾರಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 6 ಶತಕ ಸಿಡಿಸಿದ್ದಾರೆ. ಏಕದಿನ ಪದ್ಯದಲ್ಲಿ 156 ವಿಕೆಟ್‌ ಹಾಗೂ ಟಿ20 ಕ್ರಿಕೆಟ್‌ನಲ್ಲಿ 72 ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ʼಇದು ನನ್ನ ಮೈದಾನʼ – ಟಾಂಗ್‌ ಕೊಟ್ಟ ಕೊಹ್ಲಿಗೆ ಕೈ ಸನ್ನೆ ಮಾಡಿ ತೋರಿಸಿದ ರಾಹುಲ್‌

    ಇನ್ನೂ ಭಾರತೀಯ ಹಾಕಿ ತಂಡದ ಮಾಜಿ ಆಟಗಾರ ಶ್ರೀಜೇಶ್, ಟೋಕಿಯೊ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಸತತ ಎರಡು ಕಂಚಿನ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಟೋಕಿಯೊ ಕ್ರೀಡಾಕೂಟದ ಕಂಚಿನ ಪದಕ ಸ್ಪರ್ಧೆಯಲ್ಲಿ ಭಾರತ ತಂಡವು ಜರ್ಮನಿಯನ್ನ ಸೋಲಿಸಿತ್ತು. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಸ್ಪೇನ್‌ ವಿರುದ್ಧ ಗೆದ್ದಿತ್ತು.

  • ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?

    ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?

    – ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ

    ನವದೆಹಲಿ: ಈ ವಾರಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್‌ ರಚನೆ (Modi Cabinet Expansion) ಸಾಧ್ಯತೆ ಇದೆ.

    ಏ.19 ಕ್ಕೆ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರ ಪ್ರವಾಸ ರದ್ದು ಮಾಡಿದ್ದಾರೆ. ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿಯಾಗಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

    ಮೋದಿ ಭೇಟಿ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದರು. ರಾಷ್ಟ್ರಪತಿಗಳನ್ನು ಕೇಂದ್ರ ಸಚಿವರು ಭೇಟಿಯಾಗಿದ್ದಾರೆ.

    ಬಿಹಾರ ಚುನಾವಣೆ ಹೊತ್ತಲ್ಲೇ ಸಂಪುಟದಲ್ಲಿ ಬದಲಾವಣೆ ಸುದ್ದಿ ಕೇಳಿಬಂದಿದೆ. ತಮಿಳುನಾಡು, ಪಶ್ಚಿಮ ಬಂಗಾಳ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ. ಇದನ್ನೂ ಓದಿ: ತಾಲಿಬಾನ್‌ ಜೊತೆ ಪಾಕಿಸ್ತಾನ ಡಬಲ್‌ ಗೇಮ್‌ ಆಡುತ್ತಿದೆ: ಜೈಶಂಕರ್‌

  • ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ನವದೆಹಲಿ: ಸಂಸತ್‌ನಲ್ಲಿ ತೀವ್ರ ಚರ್ಚೆಗೆ ಒಳಪಟ್ಟು, ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ (Waqf Amendment Bill) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಕಿತ ಹಾಕಿದ್ದಾರೆ.

    ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ, ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಇದಕ್ಕೂ ಮೊದಲು, ಗುರುವಾರ ಮುಂಜಾನೆ ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರೆ, 232 ಸದಸ್ಯರು ವಿರೋಧಿಸಿದರು. ಈ ರೀತಿಯಾಗಿ, ಎರಡೂ ಸದನಗಳಲ್ಲಿ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿ ರಾಷ್ಟ್ರಪತಿಗಳ ಒಪ್ಪಿಗೆಗೆ ರವಾನೆಯಾಗಿತ್ತು. ಪರ ವಿರೋಧಗಳ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿಗಳ ಅಂಕಿತ ಬೀಳುತ್ತಿದ್ದಂತೆ ವಕ್ಫ್ ತಿದ್ದುಪಡಿ ಮಸೂದೆ ಈಗ ಕಾನೂನಾಗಿದೆ. ಇದೇ ವೇಳೆ ಮುರ್ಮು ಅವರು, ಮುಸಲ್ಮಾನ್ ವಕ್ಫ್ (ಪುನರಾವರ್ತಿತ) ಮಸೂದೆ 2025ಕ್ಕೆ ಸಹ ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: 1996ರ ವಿಶ್ವಕಪ್ ಗೆದ್ದ ಲಂಕಾ ಕ್ರಿಕೆಟ್‌ ದಿಗ್ಗಜರ ಜೊತೆ ಮೋದಿ ಸಂವಾದ!

    ಈ ಶಾಸನ ‘ಮುಸ್ಲಿಂ ವಿರೋಧಿ’ ಮತ್ತು ‘ಅಸಂವಿಧಾನಿಕ’ ಎಂದು ವಿರೋಧ ಪಕ್ಷಗಳು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ. ಈ ತಿದ್ದುಪಡಿಯು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ‍್ಯದ ಮೇಲೆ ದಾಳಿ ಮಾಡುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ಆಕ್ಷೇಪಣೆಗಳು ಸಂಸತ್ತಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಆದರೆ ಮಸೂದೆಯು ‘ಐತಿಹಾಸಿಕ ಸುಧಾರಣೆ’ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಇದನ್ನೂ ಓದಿ: ಯಶಸ್ವಿ, ಪರಾಗ್‌ ಅಮೋಘ ಬ್ಯಾಟಿಂಗ್‌; ಪಂಜಾಬ್‌ಗೆ ರಾಯಲ್‌ ʻಪಂಚ್‌ʼ – ರಾಜಸ್ಥಾನ್‌ಗೆ 50 ರನ್‌ಗಳ ಭರ್ಜರಿ ಜಯ

    ಸರ್ಕಾರದ ಅಧಿಸೂಚನೆ ಹೊರಬಿದ್ದರೆ ಕಾನೂನು ರೂಪದಲ್ಲಿ ಇದು ಜಾರಿಗೆ ಬರಲಿದೆ. ಅಧಿಸೂಚನೆ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.  ಇದನ್ನೂ ಓದಿ: ಕುಮಾರಸ್ವಾಮಿ ಮಾತಿಗೆ ಹೆದರೋ ಮಗ ನಾನಲ್ಲ – ಡಿಕೆಶಿ ಕೌಂಟರ್‌

    ಜಂಟಿ ಸಂಸದೀಯ ಸಮಿತಿ ರಚನೆ ಸೇರಿದಂತೆ 6 ತಿಂಗಳುಗಳ ವಿಸ್ತೃತ ಚರ್ಚೆ ಹಾಗೂ ಸಮಾಲೋಚನೆಗಳ ಬಳಿಕ ಕಾಯ್ದೆಯನ್ನು ಸಂಸತ್‌ನಲ್ಲಿ ಮಂಡಿಸಲಾಗಿತ್ತು. ಹೊಸ ಕಾನೂನನ್ನು ಕಾಂಗ್ರೆಸ್, ಎಐಎಂಐಎಂ ಮತ್ತು ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿಗಳ ಮೂಲಕ ಪ್ರಶ್ನಿಸಿವೆ. ಆದರೆ  ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಗೆ ಸಮಯವನ್ನು ನಿಗದಿಪಡಿಸಿಲ್ಲ. ಇದನ್ನೂ ಓದಿ: ನಮ್ಮ ಭೂಮಿಯನ್ನು ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲು ಬಿಡಲ್ಲ: ಶ್ರೀಲಂಕಾ ಭರವಸೆ

  • 2015ರ ಬಳಿಕ ಭಾರತಕ್ಕೆ ಬಂದ ಕತಾರ್ ದೊರೆ – ಪ್ರಧಾನಿ ಮೋದಿಯಿಂದ ಆತ್ಮೀಯ ಸ್ವಾಗತ

    2015ರ ಬಳಿಕ ಭಾರತಕ್ಕೆ ಬಂದ ಕತಾರ್ ದೊರೆ – ಪ್ರಧಾನಿ ಮೋದಿಯಿಂದ ಆತ್ಮೀಯ ಸ್ವಾಗತ

    ನವದೆಹಲಿ: ಕತಾರ್ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ (Sheikh Tamim Bin Hamad Al-Thani) ಅವರು ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ (India) ಭೇಟಿ ನೀಡಿದ್ದಾರೆ.

    ಇಂದು ರಾತ್ರಿ 8:30ರ ಸುಮಾರಿಗೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಕತಾರ್‌ ದೊರೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದು, ಮಂಗಳವಾರ (ಫೆ.17) ಪ್ರಧಾನಿ ಮೋದಿ ಅವರೊಂದಿಗೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ.

    ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಅವರ ಕತಾರ್‌ ದೊರೆ ಭೇಟಿ ನೀಡಿದ್ದರೆ. ಇದು ಭಾರತಕ್ಕೆ ಅವರ 2ನೇ ಭೇಟಿಯಾಗಿದೆ. ಈ ಹಿಂದೆ 2015ರಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಸ್ಯಾಮ್‌ ಪಿತ್ರೋಡಾ ಮತ್ತೊಮ್ಮೆ ವಿವಾದ – ಬಿಜೆಪಿಯಿಂದ ಖಂಡನೆ.. ಅಂತರ ಕಾಯ್ದುಕೊಂಡ ಕಾಂಗ್ರೆಸ್

    ಭಾರತ ಮತ್ತು ಕತಾರ್ ಸ್ನೇಹ, ವಿಶ್ವಾಸ ಮತ್ತು ಪರಸ್ಪರ ಗೌರವದ ಆಳವಾದ ಬೇರೂರಿರುವ ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ಇತ್ತೀಚಿನ ವರ್ಷಗಳಲ್ಲಿ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಉಭಯ ದೇಶಗಳ ನಡುವಿನ ಸಂಬಂಧಗಳು ಬಲಗೊಳ್ಳುತ್ತಲೇ ಇವೆ. ಇದನ್ನೂ ಓದಿ: ಬ್ಯಾನ್ ಆದ ಚೀನಿ ಡ್ರೋನ್ ಹಾರಿಸಿ ವಿವಾದ ಮೈಮೇಲೆ ಎಳೆದುಕೊಂಡ ರಾಹುಲ್ ಗಾಂಧಿ

  • ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತ – ಪ್ರಧಾನಿ ಮೋದಿ ಸೇರಿ ಗಣ್ಯರ ವಿಷಾದ

    ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತ – ಪ್ರಧಾನಿ ಮೋದಿ ಸೇರಿ ಗಣ್ಯರ ವಿಷಾದ

    ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Delhi Railway Station Stampede) 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು (Narendra Modi) ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

    ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಸಂತಾಪವಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಸುಲಿಗೆ, ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸಹ ಸಂತಾಪ ಸೂಚಿಸಿದ್ದಾರೆ. ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಮನದಾಳದಿಂದ ಸಂತಾಪ ಸೂಚಿಸುತ್ತಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಅನೇಕರು ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : ಡಾಲಿ ಧನಂಜಯ್ ಕಲ್ಯಾಣ ವೈಭೋಗ

    ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕುಂಭಮೇಳಕ್ಕೆ ಹೊರಟಿದ್ದ 18 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ 11 ಮಹಿಳೆಯರು ಹಾಗೂ 4 ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ಮಹಾ ಕುಂಭಮೇಳದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ – ದೇಶದ ಒಳಿತಿಗೆ ಪ್ರಾರ್ಥನೆ

    ಮಹಾ ಕುಂಭಮೇಳದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ – ದೇಶದ ಒಳಿತಿಗೆ ಪ್ರಾರ್ಥನೆ

    ಪ್ರಯಾಗ್‌ರಾಜ್: 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಪಾಲ್ಗೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

    ಪ್ರಯಾಗ್‌ರಾಜ್‌ಗೆ (Prayagraj) ಬಂದಿಳಿದ  ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ಇದನ್ನೂ ಓದಿ: ವಿಷ ಕುಡಿಯುವ ಪ್ರತಿಭಟನೆಗೆ ಕಿಯೋನಿಕ್ಸ್ ವೆಂಡರ್ಸ್ ಕರೆ – ಕಚೇರಿ ಎದುರು ಹೈಡ್ರಾಮಾ

    ರಾಷ್ಟçಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್‌ರಾಜ್‌ನಲ್ಲಿ ಸಮಯ ಕಳೆಯಲಿದ್ದಾರೆ. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತೆ: ರಾಮಲಿಂಗಾ ರೆಡ್ಡಿ

    ಭಾನುವಾರ ತ್ರಿವೇಣಿ ಸಂಗಮದಲ್ಲಿ ಸುಮರು 8.4 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ಶುರುವಾದಾಗಿನಿಂದ ಇಲ್ಲಿಯವರೆಗೆ 42 ಕೋಟಿಗೂ ಅಧಿಕ ಜನರು ತ್ರಿವೇಣಿಯಲ್ಲಿ ಮಿಂದೆದ್ದಿದ್ದಾರೆ.  ಇದನ್ನೂ ಓದಿ: ಡಿಕೆಶಿ ಪುಣ್ಯಸ್ನಾನ – ಎಷ್ಟು ಪಾಪ ಕಳೀತು ಅಂತ ಖರ್ಗೆ ವರದಿ ಪಡೆಯಬೇಕು: ಯತ್ನಾಳ್ ಲೇವಡಿ

  • ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಹೆಚ್‌ಡಿಕೆ

    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಹೆಚ್‌ಡಿಕೆ

    ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.

    ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ – 20 ವರ್ಷದಲ್ಲಿ 2600 ಜೋಡಿ ಮದುವೆ

    ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಬ್ಯಾಂಕ್‌ ವಂಚನೆ ಕೇಸ್‌ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು

    ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ 11,400 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ 20,000 ಕೋಟಿ ರೂ.ಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು. ಇದನ್ನೂ ಓದಿ: ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆ: ಹೆಚ್‌ಡಿಡಿ

    ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಹೆಚ್‌ಡಿಕೆ ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು. ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್ – ಒಂದು ದಿನ ಮೊದಲೇ ವಿಚಾರಣೆಗೆ ಹಾಜರಾದ ನಲಪಾಡ್!

  • ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

    ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ – ಯಾರು ಈ ಪೂನಂ ಗುಪ್ತಾ?

    ದುವೆಯಾಗುವ ಪ್ರತಿಯೊಬ್ಬರು ತನ್ನ ಮದುವೆ ಹೀಗೇ ಇರಬೇಕು, ಇಂತಹ ಜಾಗದಲ್ಲೇ ವಿವಾಹವಾಗಬೇಕು ಎಂಬ ಕನಸನ್ನು ಕಂಡಿರುತ್ತಾರೆ. ಕೆಲವರು ಸಿಂಪಲ್‌ ಆಗಿ ಸಾಂಪ್ರದಾಯಿಕವಾಗಿ ಮದುವೆಯಾದರೇ ಇನ್ನೂ ಕೆಲವು ಜೋಡಿಗಳು ಹಿಲ್‌ ಸ್ಟೇಷನ್‌, ರೆಸಾರ್ಟ್‌ ಸೇರಿದಂತೆ ಡೆಸ್ಟಿನೇಷನ್‌ ವೆಡ್ಡಿಂಗ್‌ಗೆ ಪ್ಲಾನ್‌ ಮಾಡುತ್ತಾರೆ. ಆದರೆ ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಂಗಲೆಯಲ್ಲಿ ಮದುವೆಯೊಂದು ನಡೆಯಲಿದೆ.

    ಹೌದು, ಅತಿದೊಡ್ಡ ಸರ್ಕಾರಿ ಬಂಗಲೆ ಎನಿಸಿರುವ ಭಾರತದ ರಾಷ್ಟ್ರಪತಿ ಭವನ ಇತಿಹಾಸದಲ್ಲೇ ಮೊದಲ ಬಾರಿಗೆ ಮದುವೆ ಸಮಾರಂಭಕ್ಕೆ ಸಿದ್ಧಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಖಾಸಗಿ ಭದ್ರತಾ ಸಿಬಂದಿ ಆಗಿರುವ ಸಿಆರ್‌ಪಿಫ್ ಅಸಿಸ್ಟೆಂಟ್ ಕಮಾಂಡೆಂಟ್ ಪೂನಂ ಗುಪ್ತಾ ಮದುವೆಯನ್ನು ವೈಭವೋಪೇತ ಬಂಗಲೆಯಲ್ಲಿ ನಡೆಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

    ಪೂನಂ ಗುಪ್ತಾ ಅವರನ್ನು ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಆಗಿರುವ ಅವನೀಶ್ ಕುಮಾರ್ ಫೆ.12ರಂದು ವರಿಸಲಿದ್ದಾರೆ. 300 ಎಕ್ರೆ ವ್ಯಾಪ್ತಿಯ ರಾಷ್ಟ್ರಪತಿ ಭವನ ಸಂಕೀರ್ಣದ ಒಳಗಿನ ಮದರ್ ತೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಮದುವೆ ಸಮಾರಂಭ ನಡೆಯಲಿದ್ದು, ಕೇವಲ ಹತ್ತಿರದ ಸಂಬಂಧಿಕರಿಗೆ ಮಾತ್ರ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.

    ಪೂನಂ ಗುಪ್ತಾ ಯಾರು?
    ಪಿಎಸ್‌ಓ ಪೂನಂ ಗುಪ್ತಾ ಗಣಿತದಲ್ಲಿ ಪದವಿ, ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ ಬಿಎಡ್ ಪದವಿ ಪಡೆದಿದ್ದಾರೆ. 2018ರಲ್ಲಿ, ಅವರು ಯುಪಿಎಸ್‌ಸಿ ಸಿಎಪಿಎಫ್ ಪರೀಕ್ಷೆಯಲ್ಲಿ 81 ನೇ ರ‍್ಯಾಂಕ್ ಗಳಿಸಿದರು. ಭವನಕ್ಕೆ ಪೋಸ್ಟಿಂಗ್ ಆಗುವುದಕ್ಕೂ ಮುನ್ನ ಪೂನಮ್ ಗುಪ್ತಾ ಅವರು ಬಿಹಾರದಲ್ಲಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಕೆಲಸ ಮಾಡಿದ್ದರು.

    ದಕ್ಷ ಅಧಿಕಾರಿ ಎಂದೇ ಹೆಸರು ಪಡೆದಿರುವ ಪೂನಂ ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭದ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ಮುನ್ನಡೆಸಿದ್ದರು. ಗಣರಾಜ್ಯೋತ್ಸವ ಪರೇಡ್ ಸಂದರ್ಭದಲ್ಲಿ ಸಿಆರ್‌ಪಿಎಫ್ ಮಹಿಳೆಯರ ವಿಭಾಗವನ್ನು ಪೂನಂ ಗುಪ್ತಾ ಮುನ್ನಡೆಸಿದ್ದು ದೇಶದ ಗಮನಸೆಳೆದಿತ್ತು.

    ಪೂನಂ ಗುಪ್ತಾ ಇನ್‌ಸ್ಟಾಗ್ರಾಮ್‌ನಲ್ಲಿಯೂ ಸಹ ತುಂಬಾ ಸಕ್ರಿಯರಾಗಿದ್ದಾರೆ, ಅಲ್ಲಿ ಅವರು ತಮ್ಮ ಸಿಆರ್‌ಪಿಎಫ್ ಸಮವಸ್ತ್ರದಲ್ಲಿ ಹಲವಾರು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮಹಿಳಾ ಸಮಸ್ಯೆಗಳು ಮತ್ತು ಸಬಲೀಕರಣದ ಬಗ್ಗೆ ಉತ್ಸಾಹ ಹೊಂದಿರುವ ಅವರು ಆಗಾಗ್ಗೆ ತಮ್ಮ ಪೋಸ್ಟ್‌ಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತಾರೆ. ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ, ಅವರು ಮುನ್ನಡೆಸುವ ವಿವಿಧ ಅಭಿಯಾನಗಳ ಬಗ್ಗೆ ಜಾಗೃತಿ ಮೂಡಿಸುತ್ತಾರೆ ಮತ್ತು ಅವುಗಳ ಬಗ್ಗೆ ನಿಯಮಿತವಾಗಿ ಅಪ್‌ಡೇಟ್‌ಗಳನ್ನು ಪೋಸ್ಟ್ ಮಾಡುತ್ತಾರೆ.

    ಪೂನಂ ಅವರನ್ನು ವರಿಸಲಿರುವ ಅವನೀಶ್ ಕುಮಾರ್ ಸಿಆರ್‌ಪಿಎಫ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದು, ಜಮ್ಮು ಕಾಶ್ಮೀರ ಮೂಲದವರು. ಪೂನಂ ಗುಪ್ತಾ ಅವರ ಕೋರಿಕೆಯನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಒಪ್ಪಿಕೊಂಡಿದ್ದು, ರಾಷ್ಟ್ರಾಧ್ಯಕ್ಷರ ಬಂಗಲೆಯೊಳಗೆ ಮದುವೆಗೆ ಸಿದ್ಧತೆ ನಡೆಸಿದ್ದಾರೆ.

    ವಿವಾಹವಾಗುತ್ತಿರುವ ವ್ಯಕ್ತಿಯ ನಡವಳಿಕೆ ಮತ್ತು ಸೇವೆಯಿಂದ ಪ್ರಭಾವಿತರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಮದುವೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಆಯ್ದ ಅತಿಥಿಗಳ ಪಟ್ಟಿ ಇರುತ್ತದೆ. ಪ್ರವೇಶ ಅನುಮತಿ ನೀಡಲು ಅಗತ್ಯವಾದ ಔಪಚಾರಿಕ ಪ್ರಕ್ರಿಯೆಗಳು ನಡೆಯುತ್ತಿವೆ.

    ರಾಷ್ಟ್ರಪತಿ ಭವನದ ಬಗ್ಗೆ:
    ರಾಷ್ಟ್ರಪತಿ ಭವನ ದೇಶದ ಪರಮೋಚ್ಛ ಗೌರವದ ಹುದ್ದೆಯೆನಿಸಿರುವ ರಾಷ್ಟ್ರಾಧ್ಯಕ್ಷರ ಸರ್ಕಾರಿ ನಿವಾಸವಾಗಿದ್ದು, ಸುಂದರ ಕೆತ್ತನೆಗಳಿಂದಾಗಿ ಜಗತ್ತಿನಲ್ಲೇ ಅತ್ಯಂತ ಆಕರ್ಷಕ ಮತ್ತು ಹಳೆಯ ಬಂಗಲೆಗಳಲ್ಲಿ ಒಂದೆನಿಸಿದೆ.

    ಬ್ರಿಟಿಷ್ ಅಧಿಕಾರಿ ಸರ್ ಎಡ್ವಿನ್ ಲ್ಯೂಟನ್ಸ್ ಕಲ್ಪನೆಯಲ್ಲಿ 300 ಎಕ್ರೆ ವ್ಯಾಪ್ತಿಯಲ್ಲಿ ಪಾರ್ಕ್, ಭದ್ರತಾ ಕೊಠಡಿ ಒಳಗೊಂಡು ರಾಷ್ಟ್ರಾಧ್ಯಕ್ಷರ ನಿವಾಸವನ್ನು ನಿರ್ಮಿಸಲಾಗಿದೆ. 340 ಕೊಠಡಿಗಳನ್ನು ಒಳಗೊಂಡ ನಾಲ್ಕು ಅಂತಸ್ತಿನ ಬಂಗಲೆಯ ಕಟ್ಟಡ ಎರಡು ಲಕ್ಷ ಚದರಡಿಯಲ್ಲಿ ಹರಡಿಕೊಂಡಿದೆ. ದೇಶದ ಪರಮೋಚ್ಚ ನಾಯಕ ಸ್ಥಾನದ ವ್ಯಕ್ತಿ ನೆಲೆಸುವ ಜಗತ್ತಿನ ಎರಡನೇ ಅತಿ ದೊಡ್ಡ ಅಧಿಕೃತ ಸರ್ಕಾರಿ ನಿವಾಸವೂ ಇದಾಗಿದೆ. ಇಟಲಿಯ ಕ್ವಿರಿನಲ್ ಪ್ಯಾಲೇಸ್ ಜಗತ್ತಿನಲ್ಲಿ ಅತಿ ದೊಡ್ಡ ಸರ್ಕಾರಿ ನಿವಾಸ ಎಂದೆನಿಸಿದೆ. ಇಂಥ ಪ್ರತಿಷ್ಠಿತ ಬಂಗಲೆಯನ್ನು ವಿದೇಶಿ ಗಣ್ಯರಿಗೆ ಆತಿಥ್ಯ ನೀಡುವುದಕ್ಕೆ ಮಾತ್ರ ಬಳಸಲಾಗಿತ್ತು. ಈವರೆಗೂ ಖಾಸಗಿಯಾಗಿ ಯಾವುದೇ ಸಮಾರಂಭಕ್ಕೆ ಇಲ್ಲಿ ಅವಕಾಶ ನೀಡಿರಲಿಲ್ಲ.

    ಹೀಗಾಗಿ ರಾಷ್ಟ್ರಪತಿ ಭವನದಲ್ಲಿ ಮದುವೆ ಸಮಾರಂಭ ಏರ್ಪಡಿಸಲಾಗಿದೆ ಎನ್ನುವ ಸುದ್ದಿಯನ್ನು ಆರಂಭದಲ್ಲಿ ಯಾರೂ ನಂಬಿರಲಿಲ್ಲ. ಆದರೆ ದ್ರೌಪದಿ ಮುರ್ಮು ಅವರು ಪೂನಂ ಗುಪ್ತಾ ಅವರ ಬದ್ಧತೆ ಮತ್ತು ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಮದುವೆ ಸಮಾರಂಭಕ್ಕೆ ವಿಶೇಷ ಅನುಮತಿ ನೀಡಿದ್ದಾರೆ ಅನ್ನುವುದು ಈಗ ಮೂಲಗಳಿಂದ ದೃಢಪಟ್ಟಿದೆ. ಆದರೆ ಈ ಕುರಿತು ರಾಷ್ಟ್ರಪತಿ ಭವನದಿಂದ ಯಾವುದೇ ಮಾಹಿತಿ ಹೊರಬಿದ್ದಿಲ್ಲ.