Tag: Droupadi Murmu

  • ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ

    ಇದೇ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ

    ನವದೆಹಲಿ: ರಾಷ್ಟ್ರಪತಿ ಭವನ (Rashtrapati Bhavan) ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಆಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾಗೆ (Poonam Gupta) ಇಂತಹ ಅದೃಷ್ಟ ಒಲಿದುಬಂದಿದೆ.

    ಇಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಫೆಬ್ರವರಿ 12ರಂದು ನಡೆಯುವ ಮದ್ವೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಅನುಮತಿ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ಪೂನಂ ಗುಪ್ತಾ ಮದ್ವೆ ನಿಗದಿ ಆಗಿದೆ. ಮಧುವೆಯಲ್ಲಿ ಸಂಬಂಧಿಕರು, ಸ್ನೇಹಿತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಪೂನಂ ಗುಪ್ತಾ ಯಾರು?
    ಪ್ರಸ್ತುತ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ (ಪಿಎಸ್‌ಒ) ಸೇವೆ ಸಲ್ಲಿಸುತ್ತಿರುವ ಪೂನಂ ಗುಪ್ತಾ 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು.

    ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಪೂನಂ ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ BEd ಪದವಿ ಪಡೆದುಕೊಂಡಿದ್ದಾರೆ. 2018ರ ಯುಪಿಎಸ್‌ಸಿ ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ 81ನೇ ರ‍್ಯಾಂಕ್‌ ವಿಜೇಯರಾಗಿದ್ದರು. ಬಿಹಾರದ ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದ ಪೂನಂ ಆ ಬಳಿಕ ಕಠಿಣ ಪ್ರದೇಶಗಳಲ್ಲೂ ತಮ್ಮ ಕರ್ತವ್ಯ ನಿಷ್ಠೆ ಮೆರೆದು ಸೈ ಎನಿಸಿಕೊಂಡಿದ್ದರು.

    ಸೋಷಿಯಲ್‌ ಮೀಡಿಯಾದಲ್ಲೂ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪೂನಂ, ಆಗಾಗ್ಗೆ ಮಹಿಳಾ ಸಬಲೀಕರಣ ಹಾಗೂ ಸ್ಪೂರ್ತಿದಾಯ ಸಂದೇಶಗಳನ್ನು ಸ್ಟ್‌ ಮಾಡುತ್ತಿರುತ್ತಾರೆ. ಜೊತೆಗೆ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಾ ಬರುತ್ತಿದ್ದಾರೆ.

  • ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮಾತನಾಡಿದರು. ಈ ಬಗ್ಗೆ ಸಂಸತ್‌ನ ಹೊರಗೆ ಮಾತನಾಡಿದ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ʻPoor Ladyʼ ಎಂದು ಕರೆದಿದ್ದು, ಬಿಜೆಪಿ ಕಟುವಾಗಿ ಟೀಕಿಸಿದೆ. ಈ ಬೆನ್ನಲ್ಲೇ ರಾಷ್ಟ್ರಪತಿ ಭವನ ಸೋನಿಯಾ ಗಾಂಧಿ ಅವರ ಹೆಸರು ಉಲ್ಲೇಖಿಸದೇ ಪ್ರತಿಕ್ರಿಯೆ ನೀಡಿದೆ.

    ಬಜೆಟ್​ ಅಧಿವೇಶನ ಭಾಷಣದ ವೇಳೆ ಎಲ್ಲಿಯೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಸ್ತಾಗಿಲ್ಲ. ಇದು ಉನ್ನತ ಹುದ್ದೆಯನ್ನು ಘಾಸಿಗೊಳಿಸುವ ಹೇಳಿಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ. ಇದನ್ನೂ ಓದಿ: ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ಮುಂದುವರಿದು… ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ರಾಷ್ಟ್ರಪತಿಗಳು ಯಾವುದೇ ಹಂತದಲ್ಲೂ ದಣಿದಿಲ್ಲ, ಆದರೆ ವಾಸ್ತವವಾಗಿ, ಅವರು ತಮ್ಮ ಭಾಷಣದ ಸಂದರ್ಭದಲ್ಲಿ ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ಪರವಾಗಿ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವುದು ಎಂದಿಗೂ ಆಯಾಸವಾಗುವುದಿಲ್ಲ ಎಂದು ನಂಬುತ್ತಾರೆ ಎಂದು ಸಹ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

    ರಾಷ್ಟ್ರಪತಿ ಭವನ ಪ್ರಕಟಣೆಯಲ್ಲೇನಿದೆ?
    ರಾಷ್ಟ್ರಪತಿಗಳು ಸಂಸತ್ತಿನಲ್ಲಿ ಮಾಡಿದ ಭಾಷಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ, ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಯನ್ನು ಘಾಸಿಗೊಳಿಸುವ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿಗಳು ಭಾಷಣದ ಕೊನೆಯಲ್ಲಿ ಸುಸ್ತಾಗಿದ್ದರು, ಮಾತನಾಡಲು ಕಷ್ಟಪಟ್ಟರು ಎಂದೂ ಹೇಳಿದ್ದಾರೆ. ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ.

    ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ಅವರು ಯಾವುದೇ ಹಂತದಲ್ಲೂ ದಣಿದಿರಲಿಲ್ಲ. ವಾಸ್ತವವಾಗಿ ಅಳಿವಿನ ಅಂಚಿನಲ್ಲಿರುವ ಸಮುದಾಯ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವಾಗ ಎಂದಿಗೂ ಆಯಾಸವಾಗುವುದಿಲ್ಲ ಎಂದು ಅವರು ನಂಬಿದ್ದರು. ಆದ್ರೆ ಈ ನಾಯಕರು ಹಿಂದಿಯಂತಹ ಭಾರತೀಯ ಭಾಷೆಗಳಲ್ಲಿನ ಭಾಷಾವೈಶಿಷ್ಟ್ಯ ಮತ್ತು ಪ್ರವಚನದ ಬಗ್ಗೆ ತಮ್ಮನ್ನು ತಾವು ಪರಿಚಯಿಸಿಕೊಂಡಿಲ್ಲ. ಇದರಿಂದಾಗಿ ತಪ್ಪು ಅನಿಸಿಕೆ ಉಂಟಾಗಿರಬಹುದು ಎಂದು ರಾಷ್ಟ್ರಪತಿಗಳ ಕಚೇರಿ ನಂಬುತ್ತದೆ. ದುರದೃಷ್ಟವಶಾತ್‌ ಅವರು ಕಳಪೆ ಅಭಿರುಚಿಯಲ್ಲಿದ್ದರೆ ಅದನ್ನು ತಪ್ಪಿಸಬಹುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಸೋನಿಯಾ ಗಾಂಧಿ ಹೇಳಿದ್ದೇನು?
    ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಮಾಧ್ಯಮಗಳು ಮಾತನಾಡಿಸಿವೆ. ಈ ವೇಳೆ ಸೋನಿಯಾ ಗಾಂಧಿ, Poor Lady ಭಾಷಣ ಮುಗಿಸುವ ಹೊತ್ತಿಗೆ ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬುಡಕಟ್ಟು ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಕೂಡಲೇ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಕೇಂದ್ರ ಸಚಿವ ಜೆಪಿ ನಡ್ಡಾ ಕಿಡಿ
    ಕೇಂದ್ರ ಸಚಿವ ಜೆ.ಪಿ. ನಡ್ಡಾ ಸಹ ತಮ್ಮ ಎಕ್ಸ್‌ ಖಾತೆ ಮೂಲಕ ಸೋನಿಯಾ ಗಾಂಧಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಾರ್ಟಿಯು ಭಾರತದ ಬುಡಕಟ್ಟು ಸಮುದಾಯಗಳ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಇಂತಹ ಪದಗಳನ್ನು ಉದ್ದೇಶಪೂರ್ವಕವಾಗಿ ಬಳಸುವ ಮೂಲಕ ಕಾಂಗ್ರೆಸ್ ಪಕ್ಷದ ಬಡವರ ವಿರೋಧಿ ಮತ್ತು ಬುಡಕಟ್ಟು ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ (Sonia Gandhi) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಬಗ್ಗೆ ಮಾತನಾಡಿದ ಒಂದು ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

    ಬಜೆಟ್‌ ಅಧಿವೇಶನದ (Union Budget Session) ಮುನ್ನ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು.

    ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಮಾಧ್ಯಮಗಳು ಮಾತನಾಡಿಸಿವೆ. ಇದನ್ನೂ ಓದಿ: Economic Survey 2025| ಜಿಡಿಪಿ 6.3-6.8% ನಿರೀಕ್ಷೆ – ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಯಾವ ವಲಯದ ಸಾಧನೆ ಎಷ್ಟಿದೆ?

    ಈ ವೇಳೆ ಸೋನಿಯಾ ಗಾಂಧಿ, Poor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


    ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬುಡಕಟ್ಟು ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಕೂಡಲೇ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

  • 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

    76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ಥವ್ಯ ಪಥದಲ್ಲಿ ನಡೆದ ಪಥಸಂಚಲನ (Republic Day Parade) ಗಮನ ಸೆಳೆಯಿತು.

    ಭಾರತೀಯ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಿಮಿತ್ತ ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಯಿತು. ಸೇನಾ ಪರೇಡ್ ನಲ್ಲಿ ಇಬ್ಬರು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರು, ಕಾರ್ಗಿಲ್‌ ಯುದ್ಧ ವೀರರು ಹಾಗೂ ಓರ್ವ ಅಶೋಕ ಚಕ್ರ ಪುರಸ್ಕೃತರು ಪರೇಡ್ ನಲ್ಲಿ ಭಾಗಿಯಾಗಿರುವುದು ವಿಶೇಷವಾಗಿತ್ತು. ಇದೇ ವೇಳೆ ಎಲ್ಲಾ ರಾಜ್ಯಗಳ ಸ್ತಬ್ಧ ಚಿತ್ರಗಳು ಆಯಾ ರಾಜ್ಯಗಳ ಹೆಮ್ಮೆಯ ಪ್ರತೀಕವಾಗಿದ್ದವು.

    ಅದರಲ್ಲೂ ಈ ಬಾರಿ ಮಧ್ಯಪ್ರದೇಶದ ಚೀತಾ ಯೋಜನೆ, ಉತ್ತರ ಪ್ರದೇಶದ ಮಹಾ ಕುಂಭಮೇಳ, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಲಕ್ಪತಿ ದೀದಿ ಯೋಜನೆ ಬಿಂಬಿಸುವ‌ ಟ್ಯಾಬ್ಲೊಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು.

    ಸೇನಾ ಶಕ್ತಿ ಪ್ರದರ್ಶನ:
    ಪರೇಡ್‌ನಲ್ಲಿ 22 ಯುದ್ಧ ವಿಮಾನಗಳು, 11 ಸಾರಿಗೆ ವಿಮಾನಗಳು ಹಾಗೂ 7 ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು 40 ವಿಮಾನಗಳು ಹತ್ತು ವಿಭಿನ್ನ ನೆಲೆಗಳಿಂದ ಹಾರಾಟ ನಡೆಸಿದವು. 130ಜೆ ಸೂಪರ್ ಹರ್ಕ’ಯುಲಸ್, ಸಿ-275, ಸಿ-17 ಗ್ರೋಬ್ ಮಾಸ್ಟರ್, ಪಿ-8ಐ, ಮಿಗ್-29 ಮತ್ತು ಸುಖೋಯ್-30, ಇತರ ವಿಮಾನಗಳು ದೇಶದ ಗರಿಮೆಗೆ ಸಾಕ್ಷಿಯಾದವು.

    ಸಾಂಸ್ಕೃತಿಕ ಕಲಾ ಪ್ರದರ್ಶನ:
    ಇದೇ ಮೊದಲಬಾರಿಗೆ ಕರ್ತವ್ಯ ಪಥದಲ್ಲಿ 5,000 ಜನಪದ ಮತ್ತು ಬುಡಕಟ್ಟು ಕಲಾವಿದರು ತಮ್ಮದೇ ಆದ ಮೂಲ ಮತ್ತು ಅಧಿಕೃತ ವೇಷಭೂಷಣಗಳು, ಆಭರಣಗಳು, ಶಿರಸ್ತ್ರಾಣಗಳು ಮತ್ತು ಈಟಿಗಳು, ಕತ್ತಿಗಳು ಮತ್ತು ಡ್ರಮ್‌ಗಳಂತಹ ಸಾಂಪ್ರದಾಯಿಕ ಪರಿಕರಗಳೊಂದಿಗೆ ನೃತ್ಯ ಪ್ರದರ್ಶನ ಮಾಡಿದರು. ವಿಭಿನ್ನ ಸಂಸ್ಕೃತಿಗಳನ್ನು ಕಲೆಯಲ್ಲಿ ಪ್ರದರ್ಶಿಸಿದ್ದು ಆಕರ್ಷಕವಾಗಿತ್ತು.

    ಬೈಕ್ ಸಿಗ್ನಲ್ ಕಾರ್ಪ್ಸ್ ತಂಡದಿಂದ ವಿಶಿಷ್ಟ ಸಾಹಸ:
    ಬೈಕ್ ಸಿಗ್ನಲ್ ಕಾರ್ಪ್ಸ್ ತಂಡ ಚಲಿಸುವ ಮೋಟಾರ್‌ಬೈಕ್‌ ತಂಡ ವಿಶಿಷ್ಠ ಸಾಧನೆಗೆ ಸಾಕ್ಷಿಯಾಯಿತು. ಬೈಕ್‌ನಲ್ಲಿ ಅಳವಡಿಸಲಾದ 12 ಅಡಿ ಏಣಿಯ ಮೇಲೆ ರಾಷ್ಟ್ರಪತಿಗಳಿಗೆ ಸೆಲ್ಯೂಟ್ ಸಲ್ಲಿಸಿದ ಮೊದಲ ಮಹಿಳಾ ಭಾರತೀಯ ಸೇನಾಧಿಕಾರಿ ಎಂಬ ವಿಶ್ವ ದಾಖಲೆಯನ್ನೂ ಬರೆಯಿತು. ಇದೇ ವೇಳೆ ʻತ್ರೀ ಪೀಕ್ ಡೆವಿಲ್ ರಚನೆʼ ಮೂಲಕ ಪ್ರೇಕ್ಷಕರ ಮನಗೆದ್ದಿತು.

  • 76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

    76ನೇ ಗಣರಾಜ್ಯೋತ್ಸವದ ಸಂಭ್ರಮ – ರಾಷ್ಟ್ರಪತಿಯಿಂದ ಧ್ವಜಾರೋಹಣ

    ನವದೆಹಲಿ: 76ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ಕರ್ತವ್ಯ ಪಥದಲ್ಲಿ (Kartavya Path) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬೆಳಗ್ಗೆ 10:30ಕ್ಕೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸೇನಾ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಠಿ ಸಲ್ಲಿಸಲಾಯಿತು.

    ಈ ಬಾರಿ ಮುಖ್ಯ ಅತಿಥಿಗಳಾಗಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಆಗಮಿಸಿದ್ದಾರೆ. ಹಾಗೆಯೇ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ (Narendra Modi), ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಹುತಾತ್ಮ ಯೋಧರಿಗೆ ಮೋದಿ ಗೌರವ
    76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಮಡಿದ ವೀರರಿಗೆ ಗೌರವ ಸಲ್ಲಿಸಿದರು. ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಮೆರವಣಿಗೆಯನ್ನು ವೀಕ್ಷಿಸಲು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

    ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣಗೊಳ್ಳುತ್ತಿದೆ. ಈ ಬಾರಿ ʻಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿʼ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, 10,000 ಗಣ್ಯರು ಪಾಲ್ಗೊಂಡಿದ್ದಾರೆ. ಅಲ್ಲದೇ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.

  • 139 ಸಾಧಕರಿಗೆ ಪದ್ಮ ಪ್ರಶಸ್ತಿ – ಕರ್ನಾಟಕದ ನವತಾರೆಗಳಿಗೂ ಗೌರವ

    139 ಸಾಧಕರಿಗೆ ಪದ್ಮ ಪ್ರಶಸ್ತಿ – ಕರ್ನಾಟಕದ ನವತಾರೆಗಳಿಗೂ ಗೌರವ

    ನವದೆಹಲಿ: 76ನೇ ಗಣರಾಜ್ಯೋತ್ಸವಕ್ಕೆ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು(Padma awards 2025) ಕೇಂದ್ರ ಸರ್ಕಾರ ಪ್ರಕಟಿಸಲಾಗಿದೆ. ತೆರೆಮರೆಯಲ್ಲಿದ್ದ 30 ಸಾಧಕರೂ ಸೇರಿ 139 ಸಾಧಕರ ಪಟ್ಟಿಯನ್ನು ಪಟ್ಟಿಯನ್ನು ಪ್ರಕಟಿಸಲಾಗಿದೆ.

    ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌ ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಮಾಜಿ ಕ್ರಿಕೆಟಿಗ ಆರ್‌. ಅಶ್ವಿನ್‌ ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 7 ಜನರಿಗೆ ಪದ್ಮವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಶಸ್ತಿ ಪಟ್ಟಿ ಹೊಂದಿದೆ.

    ಭಾರತಕ್ಕೆ ಮಾರುತಿ ಸುಝುಕಿ ಕಾರು ಪರಿಚಯಿಸಿದ ಜಪಾನ್‌ ಉದ್ಯಮಿ ಒಸಾಮು ಸುಜುಕಿ, ಮಲಯಾಳಂ ಸಾಹಿತ್ಯದ ದಂತಕಥೆ ಎಂ.ಟಿ ವಾಸುದೇವನ್ ನಾಯರ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ.

    30 ತೆರೆಮರೆ ಸಾಧಕರಿಗೆ ಪದ್ಮಶ್ರೀ
    2025ರ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಎಲೆಮರೆ ಕಾಯಿಯಂತಿದ್ದ 30 ಮಂದಿ ಸಾಧಕರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ರೆಜಿಲ್‌ನ ಹಿಂದೂ ಆಧ್ಯಾತ್ಮಿಕ ನಾಯಕ ಜೋನಾಸ್ ಮಾಸೆಟ್ಟಿ, ಭಾರತದ ಪರಂಪರೆಯ ಬಗ್ಗೆ ಸಾಹಿತ್ಯ ಕೃಷಿ ಮಾಡಿರುವ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ದಂಪತಿಗಳು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಭಕ್ತಿ ಗಾಯಕ ಭೇರು ಸಿಂಗ್ ಚೌಹಾಣ್, ಪತ್ರಕರ್ತ ಭೀಮ್ ಸಿಂಗ್ ಭವೇಶ್, ಕಾದಂಬರಿಕಾರ ಜಗದೀಶ್ ಜೋಶಿಲಾ, ಗರ್ಭಕಂಠದ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ನೀರ್ಜಾ ಭಟ್ಲಾ ಮತ್ತು ಕುವೈತ್‌ನ ಯೋಗಪಟು ಶೈಖಾ ಎಜೆ ಅಲ್ ಸಬಾ ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಗೋವಾದಲ್ಲಿ ಪೋರ್ಚುಗೀಸರ ವಿರುದ್ಧ ಹೋರಾಡಿದ 100 ವರ್ಷದ ಲಿಬಿಯಾ ಲೋಬೋ, ಪುರುಷ ಪ್ರಧಾನವಾಗಿದ್ದ ಢಾಕ್ ವಾದ್ಯದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡಿ ಕ್ರಾಂತಿ ಮಾಡಿದ ಪಶ್ಚಿಮ ಬಂಗಾಳದ ಢಾಕ್ ವಾದಕ ಗೋಕುಲ ಚಂದ್ರ ಡೇ (57), ಅಳಿವಿನಂಚಿನಲ್ಲಿದ್ದ ಮಾಹೇಶ್ವರಿ ಕ್ರಾಫ್ಟ್ ಅನ್ನು ಉಳಿಸುವುದಕ್ಕೋಸ್ಕರ ಮಧ್ಯಪ್ರದೇಶದ ಮಹೇಶ್ವರದಲ್ಲಿ ಕೈಮಗ್ಗ ಶಾಲೆಯನ್ನು ಪ್ರಾರಂಭಿಸಿ, ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದ ಸೈಲಿ ಹೋಳ್ಕರ್ (82) ಅವರು ಸಹ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕರ್ನಾಟಕದ ನವತಾರೆಗಳಿಗೆ ಪ್ರಶಸ್ತಿ
    ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ್ದು, ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

    ಪದ್ಮವಿಭೂಷಣ: ಪಿಟೀಲು ವಾದಕ ಲಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ.

    ಪದ್ಮಭೂಷಣ: ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತನಾಗ್‌, ಶಿಕ್ಷಣ ತಜ್ಞ ಹಾಗೂ ಅಂಕಣಕಾರ ಎ.ಸೂರ್ಯಪ್ರಕಾಶ್‌ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ

    ಪದ್ಮಶ್ರೀ: ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್‌, ವೈದ್ಯಕೀಯ ಕ್ಷೇತ್ರದ ವಿಜಯಲಕ್ಷ್ಮಿ ದೇಶಮಾನೆ, ಕಲಾ ಕ್ಷೇತ್ರದಲ್ಲಿ ವೆಂಕಪ್ಪ ಅಂಬಾಜಿ, ಹಾಸನ ರಘು, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಕೈಗಾರಿಕಾ ಕ್ಷೇತ್ರದಲ್ಲಿ ಪ್ರಶಾಂತ್‌ ಪ್ರಕಾಶ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.

  • ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

    ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

    – 139 ಸಾಧಕರಿಗೆ ಪದ್ಮ ಪ್ರಶಸ್ತಿ
    – 5,000 ಕಲಾವಿದರಿಂದ ಸಾಂಸ್ಕೃತಿಕ ಮೆರವಣಿಗೆ

    ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.

    76ನೇ ಗಣರಾಜೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.

    ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ವಿಶೇಷ ಅತಿಥಿ ಇಂಡೋನೇಷ್ಯಾ ಅಧ್ಯಕ್ಷರು ಸೇರಿ ಇತರ ಗಣ್ಯರು ಸಾಕ್ಷಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.

    ಹೇಗಿದೆ ಭದ್ರತೆ?
    ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.

    ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.

    139 ಸಾಧಕರಿಗೆ ಪದ್ಮ ಪ್ರಶಸ್ತಿ:
    ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಇದರ ಅಡಿಯಲ್ಲಿ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗುವ ವ್ಯಕ್ತಿಗಳ ಹೆಸರನ್ನು ಘೋಷಿಸಲಾಯಿತು. ಈ ಬಾರಿ ರಾಷ್ಟ್ರಪತಿಗಳು 139 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ.

    ಪಟ್ಟಿಯಲ್ಲಿ ಏಳು ಪದ್ಮವಿಭೂಷಣ ಮತ್ತು 19 ಪದ್ಮಭೂಷಣ ಪ್ರಶಸ್ತಿಗಳು ಸೇರಿವೆ. ಇದಲ್ಲದೇ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಸೇರಿದ್ದಾರೆ. ಈ ಪಟ್ಟಿಯಲ್ಲಿ 10 ವಿದೇಶಿಯರು, NRIಗಳು, ಪಿಐಒಗಳು, ಒಸಿಐ ವರ್ಗದ ವ್ಯಕ್ತಿಗಳು ಸೇರಿದ್ದಾರೆ. ಅದೇ ಸಮಯದಲ್ಲಿ, 13 ಮರಣೋತ್ತರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಇದರಲ್ಲಿ ಭೋಜ್‌ಪುರಿ ಗಾಯಕಿ ಶಾರದಾ ಸಿನ್ಹಾ (ಮರಣೋತ್ತರ), ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಮತ್ತು ಸುಜುಕಿ ಕಂಪನಿಯ ಒಸಾಮು ಸುಜುಕಿ (ಮರಣೋತ್ತರ), ಬಿಬೇಕ್ ಡೆಬ್ರಾಯ್, ಸುಶೀಲ್ ಮೋದಿ ಮತ್ತು ಮನೋಹರ್ ಜೋಶಿ (ಮರಣೋತ್ತರ) ಅವರ ಹೆಸರುಗಳು ಸೇರಿವೆ. ಪ್ರಮುಖವಾಗಿ ತಮಿಳು ನಟ ಅಜಿತ್‌ ಕುಮಾರ್‌ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಬಭೂಷಣ, ಟೀಂ ಇಂಡಿಯಾದ ನಿರ್ಗಮಿತ ಸ್ಟಾರ್‌ ಆಟಗಾರ ಆರ್‌. ಅಶ್ವಿನ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.

  • Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    Budget 2025 | ಜ.31 ರಿಂದ ಬಜೆಟ್‌ ಅಧಿವೇಶನ

    ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ (Budget Session) ಮೊದಲ ಭಾಗವು ಇದೇ ಜನವರಿ 31 ಮತ್ತು ಫೆಬ್ರವರಿ 13ರ ನಡುವೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಫೆ.1ರಂದು ತಮ್ಮ ದಾಖಲೆಯ 8ನೇ ಬಜೆಟ್‌ ಅನ್ನು ಮಂಡಿಸಲಿದ್ದಾರೆ.

    ಜ.31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುತ್ತದೆ. ಇನ್ನೂ ಬಜೆಟ್‌ ಅಧಿವೇಶನದ 2ನೇ ಭಾಗವು ಮಾರ್ಚ್‌ 10 ರಿಂದ ಏಪ್ರಿಲ್‌ 4ರ ವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ

    ಅಧಿವೇಶನದ ಮೊದಲ ಭಾಗವು ರಾಷ್ಟ್ರಪತಿಗಳ ವಂದನಾ ನಿರ್ಣಯದ ಮೇಲಿನ ಚರ್ಚೆಯಿಂದ ಆರಂಭವಾಗಲಿದೆ. ಹಾಗೂ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಧಾನಮಂತ್ರಿ ಅವರ ಉತ್ತರದೊಂದಿಗೆ ಅಧಿವೇಶನ ಕೊನೆಗೊಳ್ಳುತ್ತದೆ. ಇದನ್ನೂ ಓದಿ: ಮುಡಾ ಹಗರಣ – ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರ ಆಸ್ತಿ ಜಪ್ತಿ

  • 2025 ನಿಮಗೆ ಯಶಸ್ಸು, ಕೊನೆಯಿಲ್ಲದ ಸಂತೋಷ ತರಲಿ: ಜನತೆಗೆ ಹೊಸ ವರ್ಷದ ಶುಭಕೋರಿದ ಪ್ರಧಾನಿ ಮೋದಿ

    2025 ನಿಮಗೆ ಯಶಸ್ಸು, ಕೊನೆಯಿಲ್ಲದ ಸಂತೋಷ ತರಲಿ: ಜನತೆಗೆ ಹೊಸ ವರ್ಷದ ಶುಭಕೋರಿದ ಪ್ರಧಾನಿ ಮೋದಿ

    ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ.ಇದನ್ನೂ ಓದಿ: ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ

    ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಹೊಸ ವರ್ಷದ ಶುಭಾಶಯಗಳನ್ನು ಹಂಚಿಕೊಂಡಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ, ಭಾರತ ಮತ್ತು ಜಗತ್ತಿಗೆ ಉಜ್ವಲ ಮತ್ತು ಸುಸ್ಥಿರ ಭವಿಷ್ಯವನ್ನು ರಚಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನವೀಕರಿಸೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಜಾಮೀನು – ರಾತ್ರಿಯೇ ಜೈಲಿಂದ ರಿಲೀಸ್

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ (Justice Sanjiv Khanna) ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿರುವ ನ್ಯಾ.ಸಂಜೀವ ಖನ್ನಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    ಎರಡು ವರ್ಷಗಳ ಅವಧಿಯ ಬಳಿಕ ಹಾಲಿ ಸಿಜೆಐ ಡಿವೈ ಚಂದ್ರಚೂಡ್ (DY Chandrachud) ಅವರು ಭಾನುವಾರ ತಮ್ಮ ಅಧಿಕಾರದಿಂದ ನಿವೃತ್ತಿ ಹೊಂದಿದರು. ಅವರ ಶಿಫಾರಸಿನ ಮೇರೆಗೆ ಅ.24 ರಂದು ನ್ಯಾ.ಸಂಜೀವ ಖನ್ನಾ ಅವರನ್ನು ಮುಖ್ಯ ನ್ಯಾರ್ಯಮೂರ್ತಿಯಾಗಿ ನೇಮಕ ಮಾಡುವ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಸೋಮವಾರ ಅಧಿಕಾರ ಸ್ವೀಕರಿಸಲಿರುವ ನ್ಯಾ.ಖನ್ನಾ 2025ರ ಮೇ.31ರವರೆಗೆ ಅಧಿಕಾರದಲ್ಲಿರಲಿದ್ದಾರೆ.

    2019ರ ಜನವರಿಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ ನ್ಯಾ.ಖನ್ನಾ ಅವರು, ಸುಪ್ರೀಂ ಕೋರ್ಟ್‌ನ ಭಾಗವಾಗಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಚುನಾವಣಾ ಬಾಂಡ್‌ಗಳ ಯೋಜನೆ ರದ್ದು, ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.

    ಇನ್ನೂ ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ (Delhi) ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (AAP Arvind Kejrival) ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ