Tag: Droupadi Murmu

  • ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ (Chiranjeevi), ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ ಬೀವಿ (M Fathima Beevi) ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆಗೈದ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu )ಇಂದು (ಗುರುವಾರ) ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ `ಬಾಂಬೆ ಸಮಾಚಾರ್’ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ (Hormusji N Cama), ಬಿಜೆಪಿ ನಾಯಕ ಓ.ರಾಜಗೋಪಾಲ್, ಲಡಾಖ್‍ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ ಕ್ಯಾಪ್ಟನ್ ವಿಜಯಕಾಂತ್, ಗುಜರಾತಿ ಪತ್ರಿಕೆ `ಜನ್ಮಭೂಮಿ’ ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು (Padma Awards) ಪ್ರದಾನ ಮಾಡಲಾಯಿತು. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..

    ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಫಾತಿಮಾ ಬೀವಿ, ಹಾರ್ಮುಸ್ಜಿ ಎನ್ ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದ್ದಾರೆ.

    ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    ಪ್ರತಿ ವರ್ಷ ಗಣರಾಜ್ಯೋತ್ಸವದ ಮೊದಲು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ 5 ಪದ್ಮ ವಿಭೂಷಣ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು. ಹೆಚ್ಚಿನ ಸಾಧಕರಿಗೆ ಏ.22 ರಂದು ಪ್ರಶಸ್ತಿ ನೀಡಲಾಗಿತ್ತು. ಇದನ್ನೂ ಓದಿ: ‘ಮೆಗಾಸ್ಟಾರ್’ಗೆ ಪದ್ಮವಿಭೂಷಣ: ಅಭಿನಂದಿಸಿದ ಸಂಸದೆ ಸುಮಲತಾ

     

  • ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಅಯೋಧ್ಯೆ: ಉದ್ಘಾಟನೆ ಬಳಿಕ ಮೊದಲ ಬಾರಿಗೆ ಅಯೋಧ್ಯೆ (Ayodhya) ರಾಮಮಂದಿರಕ್ಕೆ (Ram Temple) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದರು.

    ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು. ಅರ್ಚಕ ರಾಜು ದಾಸ್, ರಾಷ್ಟ್ರಪತಿಗೆ ಬೆಳ್ಳಿ ಗದೆ, ಬೆಳ್ಳಿ ರಾಮ್ ದರ್ಬಾರ್ ಮತ್ತು ಹಸುವಿನ ಪ್ರತಿಕೃತಿಯನ್ನು ನೀಡಿದರು. ಇದನ್ನೂ ಓದಿ: ಟಿಎಂಸಿಗಿಂತ ಬಿಜೆಪಿಗೆ ವೋಟ್‌ ಹಾಕೋದು ಉತ್ತಮ: ಕೈ ನಾಯಕ ಅಧೀರ್‌ ರಂಜನ್‌

    ಹನುಮಂತನಗರಕ್ಕೆ ಭೇಟಿ ನೀಡಿದ ನಂತರ ರಾಷ್ಟ್ರಪತಿಗಳು ಸರಯೂ ಘಾಟ್‌ನ ಆರತಿ ಸ್ಥಳಕ್ಕೆ ತಲುಪಿದರು. ಅಲ್ಲಿ ಅವರು ಮಹಾ ಆರತಿಯಲ್ಲಿ ಭಾಗವಹಿಸಿದರು. ಸರಯೂ ಘಾಟ್‌ನ ಸುತ್ತಲೂ ವೇದಮಂತ್ರಗಳ ಪ್ರತಿಧ್ವನಿ ಕೇಳಿಬಂತು.

    ರಾಷ್ಟ್ರಪತಿಯವರೊಂದಿಗೆ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮತ್ತು ಯುಪಿ ಸರ್ಕಾರದ ಸಚಿವ ಸೂರ್ಯ ಪ್ರತಾಪ್ ಶಾಹಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

  • ಎಲ್‌ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ

    ಎಲ್‌ಕೆ ಅಡ್ವಾಣಿ ನಿವಾಸದಲ್ಲೇ ಭಾರತ ರತ್ನ ಪ್ರದಾನ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu) ಅವರು ಬಿಜೆಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಎಲ್‌.ಕೆ.ಅಡ್ವಾಣಿ (LK Advani) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ (Bharat Ratna) ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದರು.

    ಈ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi), ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

    ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ. ಇದನ್ನೂ ಓದಿ: ಕಚ್ಚತೀವು ಪ್ರದೇಶವನ್ನು ಕಾಂಗ್ರೆಸ್‌ ಶ್ರೀಲಂಕಾಗೆ ನೀಡಿದೆ – ತಮಿಳುನಾಡಿನಲ್ಲಿ ಬಿರುಗಾಳಿ ಎಬ್ಬಿಸಿದ RTI ಉತ್ತರ

    ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಈ ವರ್ಷದ ಫೆಬ್ರವರಿಯಲ್ಲಿ ಪ್ರಕಟಿಸಿದ್ದರು.

    ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಕೇಕ್‌ ತಿಂದು 10ರ ಬಾಲಕಿ ಸಾವು

    ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ. ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಬರೆದಿದ್ದರು.

     

  • ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

    ಪಿ.ವಿ ನರಸಿಂಹ ರಾವ್ ಸೇರಿ ಐವರಿಗೆ `ಭಾರತ ರತ್ನ’

    – ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪ್ರದಾನ

    ನವದೆಹಲಿ: ಸಮಾಜವಾದಿ ನಾಯಕ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ (P.V Narasimha Rao), ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು (Bharat Ratna) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರದಾನ ಮಾಡಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನರಸಿಂಹರಾವ್ ಅವರ ಪುತ್ರ ಪಿ.ವಿ ಪ್ರಭಾಕರ್ ರಾವ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್, ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್‍ನಾಥ್ ಠಾಕೂರ್ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

    5ನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ ಅಡ್ವಾಣಿ (L.K Advani) ಅನಾರೋಗ್ಯದ ಕಾರಣ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಭಾನುವಾರ ಅವರ ನಿವಾಸದಲ್ಲೇ ಅವರಿಗೆ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

  • ‘ಒಂದು ರಾಷ್ಟ್ರ, ಒಂದು ಚುನಾವಣೆ’: ರಾಷ್ಟ್ರಪತಿಗೆ 18,000 ಪುಟಗಳ ವರದಿ ಸಲ್ಲಿಕೆ

    ‘ಒಂದು ರಾಷ್ಟ್ರ, ಒಂದು ಚುನಾವಣೆ’: ರಾಷ್ಟ್ರಪತಿಗೆ 18,000 ಪುಟಗಳ ವರದಿ ಸಲ್ಲಿಕೆ

    – ಇಂದು ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಸಮಿತಿ

    ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು (ಗುರುವಾರ) ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಸಲ್ಲಿಸಿದೆ.

    18,000 ಕ್ಕೂ ಅಧಿಕ ಪುಟಗಳ ಸುದೀರ್ಘ ವರದಿಯನ್ನು ಸಮಿತಿಯು ರಾಷ್ಟ್ರಪತಿಗಳಿಗೆ ಇಂದು ಬೆಳಗ್ಗೆ ಸಲ್ಲಿಸಿದೆ. ವರದಿ ಸಲ್ಲಿಕೆಗೆ 191 ದಿನಗಳ ಸಮಯವನ್ನು ಸಮಿತಿ ತೆಗೆದುಕೊಂಡಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆ ಸಂಗ್ರಹ ಸಂಗ್ರಹಿಸಲಾಗಿದೆ. ಇದನ್ನೂ ಓದಿ: ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಸಿಎಎಯಲ್ಲಿ ಅವಕಾಶವಿಲ್ಲ: ಅಮಿತ್ ಶಾ ಸ್ಪಷ್ಟನೆ

    ಒಂದು ರಾಷ್ಟ್ರ, ಒಂದು ಚುನಾವಣೆ (One Nation One Election) ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.

    ಭಾರತದಲ್ಲಿ ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಹಾಲಿ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತಿದೆ. ಇದನ್ನೂ ಓದಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

    ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ. ಕೋವಿಂದ್ ನೇತೃತ್ವದ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಇದ್ದರು.

  • ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

    ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

    ಡೆಹ್ರಾಡೂನ್: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬುಧವಾರ ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆಗೆ ಅನುಮೋದನೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿದೆ.

    ರಾಷ್ಟ್ರಪತಿಗಳ ಅನುಮೋದನೆಯೊಂದಿಗೆ ಉತ್ತರಾಖಂಡವು ಯುಸಿಸಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಲು ಸಿದ್ಧವಾಗಿದೆ. ಉತ್ತರಾಖಂಡದ (Uttarakhand) ರಾಜ್ಯಪಾಲ ಗುರ್ಮಿತ್ ಸಿಂಗ್ ಅವರು ಫೆ.29 ರಂದು ರಾಜ್ಯ ಸರ್ಕಾರವು ಕಳುಹಿಸಿದ್ದ ಮಸೂದೆಯನ್ನು ರಾಷ್ಟ್ರಪತಿ ಮುರ್ಮು ಅವರ ಅನುಮೋದನೆಗೆ ಕಳುಹಿಸಿದ್ದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಫೆ.6 ರಂದು ಯುಸಿಸಿ ಮಸೂದೆಯನ್ನು ಮಂಡಿಸಿ, ಅದರ ಮಹತ್ವವನ್ನು ಒತ್ತಿಹೇಳಿತ್ತು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯ ಅಂಗೀಕಾರವು ಉತ್ತರಾಖಂಡದ ಇತಿಹಾಸದಲ್ಲಿ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದರು.

    ಫೆ.7 ರಂದು ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಬಹುಮತದೊಂದಿಗೆ ಅಂಗೀಕರಿಸಲಾಗಿತ್ತು. ಎಲ್ಲಾ ಸಮುದಾಯಗಳಿಗೆ ಒಂದೇ ರೀತಿಯ ಅಥವಾ ಏಕರೂಪದ ಕಾನೂನುಗಳನ್ನು ಪ್ರಸ್ತಾಪಿಸುವ ಏಕರೂಪ ನಾಗರಿಕ ಸಂಹಿತೆಯನ್ನು ಮುಖ್ಯಮಂತ್ರಿಯವರು ವಿಶೇಷ ಅಧಿವೇಶನದಲ್ಲಿ ಮಂಡಿಸಿದ್ದರು. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ; 1835-2024ರ ವರೆಗೆ ಒಂದು ನೋಟ..

    ಏಕರೂಪ ನಾಗರಿಕ ಸಂಹಿತೆಯು ಭಾರತದಲ್ಲಿ ಎಲ್ಲಾ ನಾಗರಿಕರಿಗೆ ವೈಯಕ್ತಿಕ ವಿಷಯಗಳಿಗೆ ಏಕರೂಪದ ಕಾನೂನು ಅನ್ವಯಿಸುವ ಪ್ರಸ್ತಾಪವಾಗಿದೆ. ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕುಗಳು ಇದರಲ್ಲಿ ಸೇರಿವೆ. ಯುಸಿಸಿ ಎಲ್ಲಾ ನಾಗರಿಕರಿಗೆ ಅವರ ಧರ್ಮ, ಲಿಂಗ ಅಥವಾ ಲೈಂಗಿಕ ದೃಷ್ಟಿಕೋನವನ್ನು ಲೆಕ್ಕಿಸದೆ ಸಮಾನವಾಗಿ ಅನ್ವಯಿಸುತ್ತದೆ.

  • ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ

    ಇಂದಿನಿಂದ ಬಜೆಟ್‌ ಅಧಿವೇಶನ; ಹೊಸ ಸಂಸತ್‌ನಲ್ಲಿ ರಾಷ್ಟ್ರಪತಿ ಮೊದಲ ಭಾಷಣ

    – ವಿವಿಧ ವಲಯಗಳಲ್ಲಿ ಭಾರತೀಯರ ಸಾಧನೆ, ಕೇಂದ್ರದ ಅಭಿವೃದ್ಧಿ ಕಾರ್ಯ ಸ್ಮರಿಸಿದ ಮುರ್ಮು

    ನವದೆಹಲಿ: ಹೊಸ ಸಂಸತ್‌ ಭವನದಲ್ಲಿ ಇಂದಿನಿಂದ ಬಜೆಟ್‌ ಅಧಿವೇಶನ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹೊಸ ಸಂಸತ್‌ನಲ್ಲಿ ನನ್ನ ಮೊದಲ ಭಾಷಣ ಎಂದು ಸ್ಮರಿಸಿದ್ದಾರೆ.

    ಇಂದಿನಿಂದ ಬಜೆಟ್ ಅಧಿವೇಶನ (Budget Session 2024) ಹಿನ್ನೆಲೆ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದರು, ಹೊಸ ಸಂಸತ್ ‘ಏಕ ಭಾರತ್ ಶ್ರೇಷ್ಠ ಭಾರತ’ದ ಪರಿಕಲ್ಪನೆ ಇದೆ. ಭಾರತದ ಭವಿಷ್ಯದ ಕನಸುಗಳಿವೆ, ನಮ್ಮ ಸಂಸ್ಕೃತಿಗಳಿವೆ. ಇಲ್ಲಿ ಭಾರತದ ಉಜ್ವಲ ಭವಿಷ್ಯ ನಿರ್ಮಾಣವಾಗಲಿದೆ ಎಂದು ಭಾವಿಸುತ್ತೇನೆ. ಎಲ್ಲ ಸದಸ್ಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾಕ್ಕೆ 600 ಕೋಟಿ ಮೌಲ್ಯದ ಕೊಕೇನ್ ಅಕ್ರಮ ರಫ್ತು – ಭಾರತೀಯ ಮೂಲದ ದಂಪತಿಗೆ ಶಿಕ್ಷೆ

    ಕರ್ತವ್ಯ ಪಥದಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪಿಸಿದೆ. ಪ್ರಧಾನಮಂತ್ರಿಗಳ‌ ಮ್ಯೂಸಿಯಂ ಸ್ಥಾಪಿಸಿದೆ. ಬಿರ್ಸಾ ಮುಂಡಾ ಜನ್ಮ ದಿನಕ್ಕೆ ವಿಶೇಷ ಗೌರವ ನೀಡಿದೆ. ಭಾರತದ ಚಂದ್ರನ ದಕ್ಷಿಣ ಧ್ರುವದಲ್ಲಿ ಧ್ವಜ ಹಾರಿಸಿದ ಮೊದಲ ದೇಶವಾಗಿದೆ. ಸೂರ್ಯನತ್ತ ಉಪಗ್ರಹ ಕಳುಹಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ 100 ಕ್ಕೂ ಅಧಿಕ ಪದಕ ಗಳಿಸಿದೆ. ಅಮೃತ್ ಭಾರತ್ ರೈಲ್ವೆ ಆರಂಭವಾಗಿದೆ. ಭಾರತದ ಏರ್ ಕಂಪನಿ ಅತ್ಯಧಿಕ ವಿಮಾನಗಳ ನಿರ್ಮಾಣಕ್ಕೆ ಆರ್ಡರ್ ನೀಡಿದೆ. ಗುಲಾಮಿ ಕಾಲಘಟ್ಟದ ನ್ಯಾಯ ಪದ್ಧತಿ ಬದಲಾಯಿಸಿದೆ. ಹೊಸ ನ್ಯಾಯಸಂಹಿತೆ ದೇಶಕ್ಕೆ ಸಿಕ್ಕಿದೆ. ಡಿಜಿಟಲ್ ದತ್ತಾಂಶ ಮತ್ತಷ್ಟು ಸುರಕ್ಷಿತವಾಗಿದೆ. ರಾಮಮಂದಿರ ನಿರ್ಮಾಣವಾಗಿದೆ. ಜಮ್ಮು-ಕಾಶ್ಮೀರ 371 ರದ್ದು ಮಾಡಿದ್ದು ಇತಿಹಾಸವಾಗಿದೆ. ತ್ರಿವಳಿ ತಲಾಕ್ ರದ್ದು ಮಾಡಿದೆ. ಬೇರೆ ದೇಶದಿಂದ ಬರುವ ಅಲ್ಪಸಂಖ್ಯಾತರಿಗೆ ನಾಗರಿಕತೆ ನೀಡಿದೆ. ದೇಶದಲ್ಲಿ ಮೊದಲ ಬಾರಿಗೆ ಸಿಡಿಎಸ್ ನೇಮಕವಾಗಿದೆ ಎಂದು ಕೇಂದ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

    ಬಡತನ ನಿರ್ಮೂಲನೆ ಬಗ್ಗೆ ಕೇಳ್ತಾ ಬಂದಿದ್ದೆವು. ಈಗ ಅದನ್ನು ನೋಡುತ್ತಿದ್ದೇವೆ. ನೀತಿ ಆಯೋಗದ ಮಾಹಿತಿ ಪ್ರಕಾರ, 25 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ. ಟಾಪ್ 5 ಆರ್ಥಿಕತೆಯಲ್ಲಿ ಭಾರತ ಸೇರಿಕೊಂಡಿದೆ. ಎಫ್‌ಡಿಐ ದ್ವಿಗುಣಗೊಂಡಿದೆ. ಖಾದಿ ಉತ್ಪಾದನೆ ಮತ್ತು ಮಾರಾಟದಲ್ಲಿ ನಾಲ್ಕು ಪಟ್ಟು ಹೆಚ್ಚಳವಾಗಿದೆ. ದಶಕದ ಹಿಂದೆ ಕೆಲವೇ ಕೆಲವು ಸ್ಟಾರ್ಟ್‌ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಸ್ಟಾರ್ಟ್ಅಪ್‌ಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ಜಿಎಸ್‌ಟಿಯಿಂದ ಒಂದು ದೇಶ ಒಂದು ಟ್ಯಾಕ್ಸ್ ಕಲ್ಪನೆ ಸಕಾರಗೊಂಡಿದೆ. ಭಾರತದಲ್ಲಿ ಮೂಬೈಲ್ ತಯಾರಿಕೆ ಹೆಚ್ಚಳವಾಗಿದೆ. ಆಟಿಕೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಅವು ಭಾರತದಲ್ಲಿ ನಿರ್ಮಾಣವಾಗುತ್ತಿವೆ. ರಕ್ಷಣಾ ವಲಯದಲ್ಲಿ ಭಾರತ ಸ್ವಾವಲಂಬಿಯಾಗಿದೆ. ಹಲವು ಯುದ್ಧ ವಿಮಾನಗಳನ್ನು ಭಾರತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ವಿಮಾನದ ಇಂಜಿನ್ ಕೂಡಾ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣವಾಗಿದೆ ಎಂದು ಮಾತನಾಡಿದ್ದಾರೆ.

  • ಸಿಎಂ, ಸೋನಿಯಾ ಗಾಂಧಿಯವರಿಗೂ ಹೀಗೆ ಮಾತಾಡಿದ್ದಾರಾ?: ಛಲವಾದಿ ನಾರಾಯಣಸ್ವಾಮಿ

    ಸಿಎಂ, ಸೋನಿಯಾ ಗಾಂಧಿಯವರಿಗೂ ಹೀಗೆ ಮಾತಾಡಿದ್ದಾರಾ?: ಛಲವಾದಿ ನಾರಾಯಣಸ್ವಾಮಿ

    ಬೆಂಗಳೂರು: ಚಿತ್ರದುರ್ಗದಲ್ಲಿ ಅಹಿಂದ ಹೆಸರಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರಪತಿಗಳಿಗೆ ಏಕವಚನ ಪ್ರಯೋಗ ಮಾಡಿದ್ದಾರೆ. ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ (Siddaramaiah) ಹೀಗೇ ಏಕವಚನದಲ್ಲಿ ಮಾತಾಡಿದ್ದಾರಾ? ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಹಾಗೂ ಖರ್ಗೆಯವರಿಗೂ ಇವರು, ಇವನು, ಅವನು ಎಂದು ಏಕವಚನದಲ್ಲಿ ಕರೆಯುತ್ತಾರಾ? ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.

    ನಗರದ ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ಒಬ್ಬ ದಲಿತ ಹೆಣ್ಣು ಮಗಳಾಗಿರುವ ರಾಷ್ಟ್ರಪತಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿರೋದು ಖಂಡನೀಯ. ಹಳ್ಳಿಗಳಲ್ಲಿ ಹಾಗೇ ಕರೆಯೋದು ಎಂದು ಸಿಎಂ ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಮೂಲಕ ಹಳ್ಳಿ ಜನರನ್ನೂ ಸಿಎಂ ಅಪಮಾನ ಮಾಡಿದ್ದಾರೆ. ಹಳ್ಳಿ ಜನರು ಎಲ್ಲರನ್ನೂ ಗೌರವದಿಂದ ಮಾತಾಡಿಸುತ್ತಾರೆ. ಸಿದ್ದರಾಮಯ್ಯ ಯಾಕೆ ಇಷ್ಟು ಸುಳ್ಳು ಹೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ, ಅಹಂಕಾರ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಜನರ ಭಾವನೆಗಳಿಗೆ ಬೆಲೆ ಕೊಡಲಿ: ಅಶ್ವಥ್ ನಾರಾಯಣ್

    ರಾಷ್ಟ್ರಪತಿಗಳ ಬಣ್ಣದ ಬಗ್ಗೆಯೂ ಸಿದ್ದರಾಮಯ್ಯನವರು ಈ ಹಿಂದೆ ಕಾಮೆಂಟ್ ಮಾಡಿದ್ದರು. ನೀವು ಭಾಷೆ ಸರಿಪಡಿಸಿಕೊಳ್ಳಲು ಒಬ್ಬ ಟೀಚರ್‍ನ್ನು ನೇಮಿಸಿಕೊಳ್ಳಿ. ನಾನೇ ಬೇಕಾದ್ರೆ ನಿಮಗೆ ಟೀಚರ್ ಆಗಿ ಬಂದು ಭಾಷೆ ಬಳಕೆ ಹೇಳಿಕೊಡುತ್ತೇನೆ ಎಂದಿದ್ದಾರೆ.

    ಕೆರೆಗೋಡು ಹನುಮ ಧ್ವಜ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಯಾರನ್ನೂ ಓಲೈಸಿ ಹೀಗೆ ಮಾಡ್ತಿದೆ? ಪೊಲೀಸರು ಬೂಟ್ ಕಾಲಿನಲ್ಲಿ ಸಂಜೆ 3 ಗಂಟೆಗೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ರಾಷ್ಟ್ರಧ್ವಜ ಹಾರಿಸಲು ನಿಯಮಗಳಿವೆ, ಅದನ್ನು ಪೊಲೀಸರು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

  • ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

    ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

    ಬೆಂಗಳೂರು: ರಾಷ್ಟ್ರಪತಿಗಳ (President) ವಿರುದ್ಧ ಏಕವಚನ ಪ್ರಯೋಗ ಮಾಡಿ ಬಳಿಕ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಅವರು, ಸಿದ್ದರಾಮಯ್ಯ ಅವರನ್ನು ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಟೀಕಿಸಿದ್ದಾರೆ.

    ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ. ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು ಸಮರ್ಥಿಸಿಕೊಳ್ಳುತ್ತೀರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ್ಲ ಹೌದಲ್ಲವೇ? ಎಂದು ಕಿಡಿಕಾರಿದರು.

    2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ ಸರಿ. ಆದರ ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಸಿದ್ದರಾಮಯ್ಯನವರೇ? ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ, ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ ಎಂದು ಪ್ರಶ್ನಿಸಿದರು.

    ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು, ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಎಂದು ವಾಗ್ದಾಳಿ ನಡೆಸಿದರು.

    ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ. ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು. ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ ಎಂದು ಹರಿಹಾಯ್ದರು.

    14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಎಂದು ಟೀಕಿಸಿದ್ದಾರೆ.

  • ರಾಷ್ಟ್ರಪತಿ ಮುರ್ಮುಗೆ ಏಕವಚನ ಬಳಕೆ: ತಮ್ಮ ‌ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ

    ರಾಷ್ಟ್ರಪತಿ ಮುರ್ಮುಗೆ ಏಕವಚನ ಬಳಕೆ: ತಮ್ಮ ‌ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ

    – ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ ಎಂದ ಸಿದ್ದರಾಮಯ್ಯ

    ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಏಕವಚನ ಬಳಕೆ ಮಾಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಸಿದ್ದರಾಮಯ್ಯ, ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಇದನ್ನೂ ಓದಿ: ರಾಷ್ಟ್ರಪತಿಗೆ ತುಚ್ಛವಾಗಿ ಸಂಬೋಧಿಸಿದ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ವಜಾ ಮಾಡಿ: ಹೆಚ್‍ಡಿಕೆ ಆಗ್ರಹ

    ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ.

    ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

    ಆಗಿದ್ದೇನು?
    ರಾಷ್ಟ್ರಪತಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಿಎಂ ಹೇಳಿಕೆಗೆ ವಿಪಕ್ಷ ನಾಯಕರು ಟೀಕಾಪ್ರಹಾರ ನಡೆಸಿದ್ದರು. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿ ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ: ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ

    ಬಳಿಕ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಇದು ಬಾಯಿ ತಪ್ಪಿ ಆಡಿರುವ ಮಾತಿದು. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.