Tag: drowning

  • ಯಮುನೆಯಲ್ಲಿ ದೋಣಿ ಮುಳುಗಿ 17 ಜನ ನಾಪತ್ತೆ – ಮೂವರ ಶವ ಪತ್ತೆ

    ಯಮುನೆಯಲ್ಲಿ ದೋಣಿ ಮುಳುಗಿ 17 ಜನ ನಾಪತ್ತೆ – ಮೂವರ ಶವ ಪತ್ತೆ

    ಲಕ್ನೋ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿ, ಅದರಲ್ಲಿದ್ದ 17 ಜನರು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಯಮುನಾ ನದಿಯಲ್ಲಿ ನಡೆದಿದೆ. ಗುರುವಾರ ನಡೆದ ಘಟನೆಯಲ್ಲಿ ಇಲ್ಲಿಯವರೆಗೆ ಕೇವಲ ಮೂವರ ಮೃತದೇಹ ಹೊರ ತೆಗೆಯಲಾಗಿದೆ, 13 ಜನರನ್ನು ರಕ್ಷಿಸಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

    ಗುರುವಾರ ಫತೇಪುರ್ ಜಿಲ್ಲೆಯ ಮರ್ಕಾದಿಂದ ಜರೌಲಿ ಘಾಟ್‌ಗೆ ತೆರಳುತ್ತಿದ್ದ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ. ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ಬರು ಮಹಿಳೆಯರು ಹಾಗೂ ಮಗುವಿನ ಶವ ನದಿಯಿಂದ ಹೊರತೆಗೆಯಲಾಗಿದೆ. ಇದನ್ನೂ ಓದಿ: ಪಂಚಾಯತ್‌ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ, ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ: ಸರ್ವೇಯಿಂದ ತಾರತಮ್ಯ ಬೆಳಕಿಗೆ

    ಜಿಲ್ಲೆಯ ಮಾರ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಡಿಐಜಿ ಮಿಶ್ರಾ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಸಹಾಯಕ್ಕಾಗಿ ಪ್ರಯಾಗ್‌ರಾಜ್‌ನಿಂದ ಡೈವರ್‌ಗಳನ್ನೂ ಕರೆಸಲಾಗಿದೆ. ಇದನ್ನೂ ಓದಿ: ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವರಾದ ರಾಕೇಶ್ ಸಚನ್ ಮತ್ತು ರಾಮಕೇಶ್ ನಿಶಾದ್ ಅವರನ್ನು ಸ್ಥಳಕ್ಕೆ ತಲುಪುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಆರ್ಥಿಕ ನೆರವು ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಹಳ್ಳಕ್ಕೆ ಸ್ನಾನಕ್ಕೆ ಇಳಿದಾಗ ಪಿಟ್ಸ್ ಬಂದು ವ್ಯಕ್ತಿ ನೀರುಪಾಲು

    ಹಳ್ಳಕ್ಕೆ ಸ್ನಾನಕ್ಕೆ ಇಳಿದಾಗ ಪಿಟ್ಸ್ ಬಂದು ವ್ಯಕ್ತಿ ನೀರುಪಾಲು

    ಧಾರವಾಡ: ಹಳ್ಳಕ್ಕೆ ಸ್ನಾನಕ್ಕೆ ಇಳಿದಾಗ ಪಿಟ್ಸ್ ಬಂದು ವ್ಯಕ್ತಿಯೊಬ್ಬರು ನೀರು ಪಾಲಾದ ಘಟನೆ ನವಲಗುಂದ ತಾಲೂಕಿನ ಯಮನೂರ ಬೆಣ್ಣಿಹಳ್ಳದಲ್ಲಿ ನಡೆದಿದೆ.

    ಮುದ್ದೆಬಿಹಾಳ ಮೂಲದ ವಾಸಿಂ (22) ಮೃತ ವ್ಯಕ್ತಿ. ಇವರು ಯಮನೂರ ಚಾಂಗದೇವ ದರ್ಶನಕ್ಕೆ ಬಂದಿದ್ದ ವೇಳೆ ಅವಘಡ ಸಂಭವಿಸಿದೆ. ತಾಯಿ ಜೊತೆಗೆ ಗೋವಾಕ್ಕೆ ದುಡಿಯಲು ಹೋಗಿದ್ದ ವಾಸಿಂ, ಕುಟುಂಬ ಸಮೇತ ಗೋವಾದಿಂದ ಯಮನೂರ ಚಾಂಗದೇವ ದರ್ಶನಕ್ಕೆ ಬಂದಿದ್ದರು. ಅಂತೆಯೇ ಸ್ನಾನ ಮಾಡಲೆಂದು ಬೆಣ್ಣಿಹಳ್ಳಕ್ಕೆ ಇಳಿದಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ಬುಲ್ಡೋಜರ್ ಸದ್ದು: 14 ಮನೆಗಳು ಸೇರಿದಂತೆ 17 ಟಿನ್ ಶೆಡ್ ತೆರವು

    ದರ್ಶನಕ್ಕೂ ಮೊದಲು ಸ್ನಾನ ಮಾಡಲು ಹಳ್ಳಕ್ಕೆ ಇಳಿದಿದ್ದ ವೇಳೆ ಪಿಟ್ಸ್ ಬಂದು ನೀರುಪಾಲಾಗಿದ್ದಾರೆ. ನವಲಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Live Tv

  • ಪ್ರಾಣ ಉಳಿದಿದೆ, ಜೀವಮಾನದ ಸಂಪಾದನೆ ಮಣ್ಣು ಪಾಲಾಗಿದೆ- ಉಡುಪಿ ನೆರೆಯಲ್ಲಿ ಮಾಣೈ ತತ್ತರ

    ಪ್ರಾಣ ಉಳಿದಿದೆ, ಜೀವಮಾನದ ಸಂಪಾದನೆ ಮಣ್ಣು ಪಾಲಾಗಿದೆ- ಉಡುಪಿ ನೆರೆಯಲ್ಲಿ ಮಾಣೈ ತತ್ತರ

    ಉಡುಪಿ: ಜಿಲ್ಲೆಯಲ್ಲಿ ಸುರಿದ ಮಹಾಮಳೆ ಅವಾಂತರವನ್ನೇ ಸೃಷ್ಟಿಸಿದೆ. ಸುವರ್ಣ ನದಿ ತೀರದಲ್ಲಿ ಹತ್ತಾರು ಮನೆಗಳು ನೆಲಸಮವಾಗಿದೆ. ಹಿರಿಯಡ್ಕದ ಮಾಣೈ ಪರಿಸರ ನೆರೆಗೆ ಮೊದಲು ತುತ್ತಾದ ಗ್ರಾಮ. ಈ ಭಾಗದಲ್ಲಿ ಮೂರು ಮನೆಗಳು ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರು ಉಟ್ಟ ಬಟ್ಟೆಯಲ್ಲಿ ಹೊರಬಂದು ಎಲ್ಲವನ್ನೂ ಕಳೆದುಕೊಂಡಿದ್ದಾರೆ.

    ಮಾಣೈನ ಪಮ್ಮು ಕುಲಾಲ್ತಿ ಎಂಬವರ ಮನೆ ಸಂಪೂರ್ಣ ಕುಸಿದಿದೆ. ಕಳೆದ ವರ್ಷ ಬೆಳೆದ ಅಕ್ಕಿ, ಕೊಟ್ಟಿಗೆಯಲ್ಲಿ ಇಡೀ ವರ್ಷಕ್ಕೆ ಬೇಕಾಗುವಷ್ಟು ಒಣಹುಲ್ಲು, ಜಮೀನಿನ ದಾಖಲೆಗಳು, ಚಿನ್ನ-ಹಣ ಎಲ್ಲವೂ ಮಣ್ಣಿನಡಿ ಸೇರಿದೆ. ಈ ಹಿಂದೆ ಅಂಗಳದ ತನಕ ನೀರು ಬರುತ್ತಿತ್ತು. ಆದರೆ ಈ ಬಾರಿ ಸಂಪೂರ್ಣವಾಗಿ ಮನೆ ಮುಳುಗಡೆಯಾಗಿದೆ ಎಂದು ಮನೆಯವರು ಕಣ್ಣೀರಿಟ್ಟಿದ್ದಾರೆ. ಲಕ್ಷ್ಮಣ ಕುಲಾಲ ಅವರ ಮನೆಯ ಒಂದು ಭಾಗ ಬಿದ್ದಿದ್ದು ಮನೆಗೆ ಹಾನಿಯಾಗಿದೆ ಆಗಿದೆ.

    ಜಗ್ಗು ಕುಲಾಲ್, ಸುಂದರ, ಉದಯ ಎಂಬವರ ಮನೆಯೂ ಹಾನಿಗೀಡಾಗಿದೆ. ನೋಡನೋಡುತ್ತಿದ್ದಂತೆ ಕಣ್ಣೆದುರೇ ಮನೆ ಕುಸಿದು ಬಿದ್ದಿರುವುದನ್ನು ನೆನೆದು ಮನೆಮಂದಿ ದಿಗ್ಬ್ರಾಂತಿಗೊಳಗಾಗಿದ್ದಾರೆ. ಉಟ್ಟ ಬಟ್ಟೆಯಲ್ಲೇ 8 ಕುಟುಂಬಗಳು ಸುರಕ್ಷಿತ ಕೇಂದ್ರಕ್ಕೆ ಶಿಫ್ಟ್ ಆಗಿವೆ. ದನಕರುಗಳನ್ನು ರಾತ್ರೋರಾತ್ರಿ ಎತ್ತರಪ್ರದೇಶಕ್ಕೆ ರವಾನೆ ಮಾಡಿದ್ದರಿಂದ ಅವುಗಳ ಪ್ರಾಣ ಉಳಿದಿದೆ. ಉಳಿದ ಮೂರು ಮನೆಗಳು ಭಾರಿ ನೆರೆ ನೀರಿಗೆ ತೋಯ್ದು ಹೋಗಿದ್ದು ಗೋಡೆಗಳು ಬಿರುಕು ಬಿಟ್ಟಿದೆ. ಸ್ಥಳೀಯ ಪಂಚಾಯತ್ ಅಧಿಕಾರಿಗಳು ಜನಪ್ರತಿನಿಧಿಗಳು ಭೇಟಿ ಕೊಟ್ಟು ಸೂಕ್ತ ಪರಿಹಾರ ತಿಳಿಸಿ ಕೊಡುವ ಭರವಸೆ ನೀಡಿದ್ದಾರೆ.

    ಈ ಬಾರಿಯ ಭತ್ತದ ಬೇಸಾಯ ಕೂಡ ಸಂಪೂರ್ಣವಾಗಿ ಮಳೆನೀರಿಗೆ ಕೊಚ್ಚಿಹೋಗಿದೆ. ಕೂಡಿಟ್ಟ ತರಗೆಲೆ, ಒಣಹುಲ್ಲಿನ ಮೂಟೆ ತನಕ ಸ್ವರ್ಣ ನದಿ ಹರಿದಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ ಎಂದು ಕುಟುಂಬಗಳು ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಮ್ಮು ಕುಲಾಲ್ತಿ, ಕಣ್ಣಮುಂದೆ ಕಟ್ಟಿದ ಮನೆ ಕುಸಿದು ಬಿದ್ದಾಗ ಪ್ರಾಣವೇ ಹೋದಂತಾಯಿತು. ಮುಂದೆ ಏನು ಮಾಡುವುದು ಗೊತ್ತಿಲ್ಲ. ಮನೆಯ ಒಳಗೆ ಇದ್ದ ಬಟ್ಟೆ, ಟಿವಿ, ಕಪಾಟು-ಅಕ್ಕಿ ಚಿನ್ನ ಎಲ್ಲವೂ ಮಣ್ಣು ಪಾಲಾಗಿದೆ. ಮತ್ತೆ ಅದನ್ನೆಲ್ಲ ಸಂಪಾದನೆ ಮಾಡುವ ಶಕ್ತಿ ನಮಗೆ ಇಲ್ಲ. ನಮ್ಮ ಪ್ರಾಣ ಉಳಿದಿದೆ ಅನ್ನೋದು ಬಿಟ್ಟು ಎಲ್ಲವನ್ನೂ ಕಳೆದುಕೊಂಡಿದ್ದೇವೆ ಎಂದರು.

  • ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರು: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಮಾನ್ವಿ ತಾಲೂಕಿನ ಮುಷ್ಟೂರು ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ ಸುಮಾರು 6 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ಮುಷ್ಠೂರು, ಜಾಗೀರ್ ಪನ್ನೂರು, ಯಡಿಯಾಳ್, ದೇವಿಪುರ, ಚೀಕಲಪರ್ವಿ ಸೇರಿದಂತೆ 6 ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಸಂಪರ್ಕ ಕಡಿತದಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮಾನ್ವಿ ಪಟ್ಟಣಕ್ಕೆ ಬರಲು 40 ಕಿ.ಮೀ ಹೆಚ್ಚುವರಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

    ಮುಳುಗಡೆಯಾದ ಸೇತುವೆ ಮಾರ್ಗ ಕೇವಲ 4 ಕಿ.ಮೀ ನಲ್ಲಿ ಮಾನ್ವಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನಾಲ್ಕು ಅಡಿಯಷ್ಟು ಎತ್ತರದಲ್ಲಿ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಕೆಲವು ಕಡೆ ರಸ್ತೆ ಕಿತ್ತು ಹೋಗಿದೆ. ನೂತನ ಸೇತುವೆ ಕಾರ್ಯ ಅರ್ಧಕ್ಕೆ ನಿಂತಿರುವುದರಿಂದ ಹಳ್ಳ ಬಂದಾಗಲೆಲ್ಲಾ ರಸ್ತೆ ಕಡಿತಗೊಳ್ಳುತ್ತಿದೆ. 2009ರಲ್ಲಿ ಉಂಟಾದ ಪ್ರವಾಹದಲ್ಲಿ ಸೇತುವೆ ಕೊಚ್ಚಿ ಹೋಗಿತ್ತು. 2011 ರಲ್ಲಿ ಆರಂಭಗೊಂಡಿದ್ದ ಸೇತುವೆ ಕಾರ್ಯ ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆ ಹಳ್ಳ ತುಂಬಿದ್ದರಿಂದ ಕೆಳಮಟ್ಟದ ಸೇತುವೆ ಮುಳುಗಡೆಯಾಗಿದೆ.

  • ಕೊಪ್ಪಳದಲ್ಲಿ ಈಜಲು ಹೋದ ಮೂವರು ಹೆಣ್ಣುಮಕ್ಕಳು ಸೇರಿ ಐವರು ನೀರುಪಾಲು!

    ಕೊಪ್ಪಳದಲ್ಲಿ ಈಜಲು ಹೋದ ಮೂವರು ಹೆಣ್ಣುಮಕ್ಕಳು ಸೇರಿ ಐವರು ನೀರುಪಾಲು!

    ಕೊಪ್ಪಳ: ಕೆರೆಯಲ್ಲಿ ಈಜಲು ಹೋಗಿ ಐದು ಜನ ನೀರು ಪಾಲಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಗ್ರಾಮದಲ್ಲಿ ನಡೆದಿದೆ.

    ನೀರು ಪಾಲಾದವರನ್ನು ರಾಘವೇಂದ್ರ (30) ಪವಿತ್ರಾ (14), ಪಾವನಿ(12), ಪೌರ್ಣಿಕಾ ಹಾಗೂ ಆಶಿಸ್ (14) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಹೈದರಾಬಾದ್ ಮೂಲದವರು ಎನ್ನಲಾಗಿದೆ.

    ಒಟ್ಟು ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಈಜಲು ತೆರಳಿದ್ರು. ನಿನ್ನೆ ಹೇಮಗುಡ್ಡದ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಇವರು ಕೆರೆಯಲ್ಲಿ ಈಜಲು ಹೋದಾಗ ಈ ದುರಂತ ನಡೆದಿದೆ. ಘಟನೆಯ ಬಳಿಕ ಇದೀಗ ಓರ್ವನ ಶವ ಪತ್ತೆಯಾಗಿದ್ದು, ಇನ್ನುಳಿದವರ ಮೃತ ದೇಹ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.