Tag: Drug Addiction

  • Tumakuru| ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ: ಹೆತ್ತ ತಾಯಿ ಅಳಲು

    Tumakuru| ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ: ಹೆತ್ತ ತಾಯಿ ಅಳಲು

    ತುಮಕೂರು: ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡಿರುವ ಘಟನೆ ತುಮಕೂರು (Tumakuru) ಜಿಲ್ಲೆ ತುರುವೇಕೆರೆ (Turuvekere) ಪಟ್ಟಣದಲ್ಲಿ ನಡೆದಿದೆ.

    ತುರುವೇಕೆರೆ ಪಟ್ಟಣದಲ್ಲಿ ಸಣ್ಣ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿರುವ ರೇಣುಕಮ್ಮ ಎಂಬ ಮಹಿಳೆಯ 20 ವರ್ಷ ವಯಸ್ಸಿನ ಮಗ ಅಭಿ ಕೆಟ್ಟ ಸ್ನೇಹಿತರ ಸಹವಾಸಕ್ಕೆ ಬಿದ್ದು ಕಲಿಯಬಾರದ ಚಟಗಳನ್ನೆಲ್ಲಾ ಕಲಿತಿದ್ದಾನೆ. ಚಟಗಳಿಂದ ಮುಕ್ತಗೊಳಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದೇನೆ. ಆದರೂ ಪ್ರಯೋಜನವಾಗಿಲ್ಲ. ಪಟ್ಟಣದಲ್ಲಿ ಗಾಂಜಾ ಸೇರಿದಂತೆ ಹಲವಾರು ಮಾದಕ ವಸ್ತುಗಳು ಮಾರಾಟವಾಗುತ್ತಿವೆ. ಇದು ಯುವಕರನ್ನು ಹಾಳು ಮಾಡುತ್ತಿದೆ. ನನ್ನ ಮಗನೂ ಇಂತಹ ಜಾಲಕ್ಕೆ ಬಿದ್ದು ತನ್ನ ಜೀವನವನ್ನು ಹಾಳು ಮಾಡಿಕೊಂಡಿದ್ದಾನೆ. ಹೀಗೆ ಪಟ್ಟಣದಲ್ಲಿ ಸಾಕಷ್ಟು ಯುವಕರಿದ್ದಾರೆ. ಇವರಿಗೆ ಮಾದಕ ವಸ್ತುಗಳನ್ನು ಸಾಗಾಣೆ ಮಾಡುತ್ತಿರುವವರು ಯಾರು ಎಂಬುದನ್ನು ದಯಮಾಡಿ ಪತ್ತೆ ಹಚ್ಚಿ ಅಮಾಯಕರನ್ನು ಕಾಪಾಡಿ ಎಂದು ರೇಣುಕಮ್ಮ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಾರವಾರ ಕದಂಬ ನೌಕಾನೆಲೆ ವ್ಯಾಪ್ತಿಯಲ್ಲಿ ಟ್ರ್ಯಾಕರ್‌ ಅಳವಡಿಸಿದ ರಣ ಹದ್ದು ಪತ್ತೆ!

    ಶನಿವಾರ ಮಧ್ಯಾಹ್ನ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ರೇಣುಕಮ್ಮಳ ಮಗ ಅಭಿ, ಅಲ್ಲಿದ್ದ ಕೆಲವು ಬಾಲಕಿಯರನ್ನು ಚುಡಾಯಿಸಿದ್ದಾನೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಭಿಯನ್ನು ಥಳಿಸಿದ್ದಾರೆ. ಇದನ್ನೂ ಓದಿ: ಅಬಕಾರಿಯಲ್ಲಿ 700 ಕೋಟಿ ಹಣ ಪಡೆಯೋಕಾಗುತ್ತಾ? ಸುಳ್ಳು ಹೇಳೋದು ಪ್ರಧಾನಿಗೆ ಅಗೌರವ – ಸಿಎಂ

  • ಮಾದಕ ವ್ಯಸನ ವಿರುದ್ಧ ಜಾಗೃತಿ ಮೂಡಿಸಲು 12 ಕಿಲೋ ಮೀಟರ್ ಪಾದಯಾತ್ರೆ ಮಾಡಿದ ಈಶಪ್ರಿಯತೀರ್ಥ ಸ್ವಾಮೀಜಿ

    ಮಾದಕ ವ್ಯಸನ ವಿರುದ್ಧ ಜಾಗೃತಿ ಮೂಡಿಸಲು 12 ಕಿಲೋ ಮೀಟರ್ ಪಾದಯಾತ್ರೆ ಮಾಡಿದ ಈಶಪ್ರಿಯತೀರ್ಥ ಸ್ವಾಮೀಜಿ

    ಉಡುಪಿ: ಯುವ ಜನಾಂಗ ಮಾದಕ ವ್ಯಸನದಿಂದ ದೂರವಾಗಬೇಕು ಎಂಬ ಉದ್ದೇಶದಿಂದ ಉಡುಪಿಯ ಅದಮಾರು ಮಠಾಧೀಶ ಈಶಪ್ರಿಯ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವೃತಾಚರಣೆಯ ನಡುವೆ 12 ಕಿಲೋಮೀಟರ್ ಪಾದಯಾತ್ರೆ ನಡೆಸಿದ್ದಾರೆ.

    ಉಡುಪಿಯಿಂದ ಮಣಿಪಾಲ- ಮಣಿಪಾಲದಿಂದ ಉಡುಪಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಯುವಜನರಲ್ಲಿ `ಸೇ ನೋ ಟು ಡ್ರಗ್ಸ್’ ಅನ್ನುವ ಜಾಗೃತಿ ಮೂಡಿಸಲು ಯತ್ನಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ನೇತೃತ್ವದಲ್ಲಿ ಎರಡು ತಿಂಗಳ ಕಾಲ ಮಾದಕ ವ್ಯಸನ ವಿರೋಧಿ ಮಾಸಾಚರಣೆಯಲ್ಲಿ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ದೇಹದ ಪಂಚೇಂದ್ರಿಯಗಳು ಕುದುರೆಯಂತೆ. ಮನಸ್ಸು ಕುದುರೆಯ ಮೇಲೆ ಸವಾರಿ ಮಾಡುತ್ತಿರುತ್ತದೆ. ಇಂದ್ರಿಯಗಳು ಮನಸ್ಸಿನ ಹಿಡಿತದಲ್ಲಿ ಇರುವುದರಿಂದ ಅವುಗಳು ಸ್ವಲ್ಪ ಎಚ್ಚರ ತಪ್ಪಿದರೂ ಜೀವನ ಹಾಳಾಗುತ್ತದೆ. ಕ್ಷಣಿಕ ಸುಖಕ್ಕೆ ಆಸಕ್ತಿ ವಹಿಸಿದರೆ ಇಡೀ ಜೀವನ, ಕುಟುಂಬ ಬಲಿಯಾಗುತ್ತದೆ ಎಂದು ಎಚ್ಚರಿಕೆಯ ಆಶೀರ್ವಚನ ನೀಡಿದರು.

    ಮಣಿಪಾಲದ ಕೆನರಾ ಮಾಲ್ ನಲ್ಲಿ `ಸೆಲ್ಫಿ ವಿಥ್ ಸೈನ್’ ಸಂಗ್ರಹ ಅಭಿಯಾನ ಆಯೋಜಿಸಿದ್ದು ಅದರಲ್ಲೂ ಪಾಲ್ಗೊಂಡ ಸ್ವಾಮೀಜಿ ಒಟ್ಟು ಮೂರುವರೆ ಗಂಟೆಗೂ ಹೆಚ್ಚು ಕಾಲ ಪಾದಯಾತ್ರೆ ಮಾಡಿ ಮಾದಕ ವ್ಯಸನಗಳಿಂದ ದೂರವಾಗುವಂತೆ ಯುವಕರಿಗೆ ಕರೆ ನೀಡಿದರು. ಸ್ವಾಮೀಜಿಗಳ ಜೊತೆ ಪಿಪಿಸಿ ಸಂಸ್ಥೆಯ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

    `ಸೆಲ್ಫಿ ವಿಥ್ ಸೈನ್’ ಅಭಿಯಾನದಲ್ಲಿ ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಮಲ್ಪೆ ಜಾಮೀಯಾ ಮಸೀದಿ ಮೌಲಾನಾ ಸಯ್ಯಾದಿನಾ ಅಬೂಬ್ಕರ್ ಸಿದ್ದಿಕಿ, ಉಡುಪಿ ಎಸ್‍ಪಿ ಲಕ್ಷ್ಮಣ ನಿಂಬರಗಿ ಪಾಲ್ಗೊಂಡಿದ್ದರು. ಈ ಅಭಿಯಾನ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದಾಗಿ ಎಲ್ಲಾ ಗಣ್ಯರು ಸಹಿ ಹಾಕಿ, ಬಣ್ಣದಲ್ಲಿ ಹಸ್ತ ಅದ್ದಿ ಪ್ರತಿಜ್ಞೆ ಮಾಡಿದರು. ಸೆಲ್ಫಿ ತೆಗೆದು ದಾಖಲು ಮಾಡಿಕೊಂಡರು. ವಿದ್ಯಾರ್ಥಿಗಳು ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ದಿನಪೂರ್ತಿ ಈ ಅಭಿಯಾನ ನಡೆದಿದ್ದು ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv