Tag: Drugs Case

  • ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ  ಸಿದ್ಧಾಂತ್ ಕಪೂರ್

    ಸ್ವಯಂ ಪ್ರೇರಿತನಾಗಿ ಡ್ರಗ್ಸ್ ಸೇವಿಸಿಲ್ಲ, ಬೆಂಗಳೂರು ಪೊಲೀಸ್ ಒಳ್ಳೆಯವರು : ಬಾಲಿವುಡ್ ನಟ ಸಿದ್ಧಾಂತ್ ಕಪೂರ್

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ಸಿದ್ಧಾಂತ್ ಕಪೂರ್, ಪೊಲೀಸರ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂದು ಸಿದ್ಧಾಂತ್ ಪರ ವಕೀಲರು ತಿಳಿಸಿದ್ದಾರೆ. ಸ್ಟೇಶನ್ ಬೇಲ್ ಕೊಡುವಂತಹ ಅಪರಾಧ ಅದಾಗಿದ್ದರಿಂದ, ಕಾನೂನು ರೀತಿಯಲ್ಲೇ ಎಲ್ಲವೂ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಸತತ ಎರಡು ದಿನಗಳಿಂದ ಪೊಲೀಸ್ ವಿಚಾರಣೆಯನ್ನು ಎದುರಿಸುತ್ತಿರುವ ಬಾಲಿವುಡ್ ನಟ ಸಿದ್ಧಾಂತ್, ತಾನು ಪದೇ ಪದೇ ಬೆಂಗಳೂರಿಗೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಹಲವಾರು ಪಾರ್ಟಿಗಳನ್ನು ಪಾಲ್ಗೊಂಡ ಬಗ್ಗೆಯೂ ವಿವರ ನೀಡಿದ್ದಾನೆ. ಯಾವತ್ತೂ ತಾವು ಡ್ರಗ್ಸ್ ಸೇವಿಸಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಗಂಡನ ಮನೆಯ ಫೋಟೋ ಹಂಚಿಕೊಂಡ ನಯನತಾರಾ : ಸಂಪ್ರದಾಯ ಪಾಲಿಸಿದ ನಟಿಗೆ ಅಭಿಮಾನಿಗಳ ಹಾರೈಕೆ

    ನಾನು ಪ್ರಜ್ಞಾಪೂರ್ವಕವಾಗಿ ಯಾವತ್ತೂ ಡ್ರಗ್ಸ್ ಸೇವಿಸಿಲ್ಲ. ಮೊನ್ನೆ ನಡೆದ ಪಾರ್ಟಿಯಲ್ಲೂ ನಾನು ಡ್ರಗ್ಸ್ ಸೇವಿಸಿಲ್ಲ. ಪೊಲೀಸರು ಹೇಳುತ್ತಿರುವ ಆರೋಪಿಗಳಲ್ಲಿ ನನ್ನ ಹೆಸರು ಇದೆ. ಹಾಗಾಗಿ ಸಿಗರೇಟ್ ಅಥವಾ ಮದ್ಯದಲ್ಲಿ ಏನಾದರೂ ಡ್ರಗ್ಸ್ ಹಾಕಿಕೊಟ್ಟಿರಬಹುದಾ ಗೊತ್ತಿಲ್ಲ ಎಂದು ಪೊಲೀಸ್ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ ಎನ್ನುತ್ತಿವೆ ಮೂಲಗಳು. ತನಿಖೆಯ ವೇಳೆ ಎಲ್ಲ ರೀತಿಯಿಂದಲೂ ಪೊಲೀಸರಿಗೆ ಸಹಕರಿಸಿರುವುದಾಗಿ ಹೇಳಿದ್ದಾನೆ.  ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ 

    ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧಾಂತ್, ‘ಬೆಂಗಳೂರು ಪೊಲೀಸರು ತುಂಬಾ ಒಳ್ಳೆಯವರು. ನನ್ನೊಂದಿಗೆ ಯಾವುದೇ ರೀತಿಯಲ್ಲೂ ಅವರು ಕೆಟ್ಟ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ತುಂಬಾ ಗೌರವದಿಂದ ಕಂಡರು. ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಎಷ್ಟು ಬಾರಿ ಕರೆದರೂ, ನಾನು ತನಿಖೆಗೆ ಸಹಕರಿಸುತ್ತೇನೆ” ಎಂದರು.

  • ಮಗ ಡ್ರಗ್ಸ್ ಸೇವಿಸಿದ್ದಾನೆ ಅನ್ನುವುದು ಪಿತೂರಿ : ಬಾಲಿವುಡ್ ನಟ ಶಕ್ತಿ ಕಪೂರ್

    ಮಗ ಡ್ರಗ್ಸ್ ಸೇವಿಸಿದ್ದಾನೆ ಅನ್ನುವುದು ಪಿತೂರಿ : ಬಾಲಿವುಡ್ ನಟ ಶಕ್ತಿ ಕಪೂರ್

    ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿಯಲ್ಲಿ ಬಾಲಿವುಡ್ ನಟ ಶಕ್ತಿ ಕಪೂರ್ ಪುತ್ರ ಸಿದ್ಧಾಂತ ಕಪೂರ್ ಬಂಧನಕ್ಕೆ ಒಳಗಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರಿಗೆ ಜಾಮೀನು ಸಿಕ್ಕರೂ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ಈ ಕುರಿತು ಸಿದ್ಧಾಂತ ತಂದೆ ಶಕ್ತಿ ಕಪೂರ್ ಪ್ರಕರಣದ ಕುರಿತು ಮಾತನಾಡಿದ್ದಾರೆ.

    ನನ್ನ ಮಗ ಡ್ರಗ್ಸ್ ತಗೆದುಕೊಳ್ಳುವುದಿಲ್ಲ. ನಮ್ಮದು ಸಂಪ್ರದಾಯಸ್ಥ ಕುಟುಂಬ. ಅವನು ಡಾನ್ಸ್ ಡಿಜೆ ಆಗಿರುವುದರಿಂದ ಇಂತಹ ಪಾರ್ಟಿಗಳಲ್ಲಿ ಭಾಗಿ ಆಗುತ್ತಾನೆ. ಆದರೆ, ಅವನು ಯಾವತ್ತೂ ಡ್ರಗ್ಸ್ ಸೇವಿಸುವುದಿಲ್ಲ. ಅವನ ಬಂಧನ ಮತ್ತು ವಿಚಾರಣೆ ಎಲ್ಲವೂ ಪಿತೂರಿಯ ಭಾಗ. ನನ್ನ ಮಕ್ಕಳನ್ನು ನಾನು ಆ ರೀತಿಯಲ್ಲಿ ಬೆಳೆಸಿಲ್ಲ ಎಂದಿದ್ದಾರೆ ಶಕ್ತಿ ಕಪೂರ್. ಅಲ್ಲದೇ, ಅವನು ಈ ಪ್ರಕರಣದಲ್ಲಿ ಆತಂಕ ಪಡುವುದು ಬೇಡ. ನಿರಪರಾಧಿಯಾಗಿ ಅವನು ಆಚೆ ಬರುತ್ತಾನೆ ಎಂದು ನುಡಿದಿದ್ದಾರೆ ಕಪೂರ್. ಇದನ್ನೂ ಓದಿ:ರಾಜಮೌಳಿ ಮುಂದಿನ ಚಿತ್ರಕ್ಕೆ ಐಶ್ವರ್ಯ ರೈ ನಾಯಕಿ?

    ಸಿದ್ಧಾಂತ ಕಪೂರ್ ಡ್ರಗ್ಸ್ ಕೇಸ್ ನಲ್ಲಿ ವಿಚಾರಣೆಗೆ ಒಳಗಾಗುತ್ತಿರುವುದು ಇದೆ ಮೊದಲೇನೂ ಅಲ್ಲ. 2008ರಲ್ಲಿ ಮುಂಬೈನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ 240 ಜನರನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆಯಲ್ಲಿ ಸಿದ್ಧಾಂತ ಕೂಡ ಇದ್ದರು. ಕೆಲ ಪೆಡ್ಲರ್ ಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಡ್ರಗ್ಸ್ ಅಂದು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೇ, ಕಪೂರ್ ಪುತ್ರಿಯನ್ನು ಸಹ ಇಂಥದ್ದೇ ಕೇಸ್ ನಲ್ಲಿ ವಿಚಾರಣೆ ಮಾಡಲಾಗಿದೆ.

  • ಡ್ರಗ್ಸ್ ಕೇಸ್ ಕ್ಲೀನ್ ಚಿಟ್ ಸಿಕ್ಕ ಬೆನ್ನಲ್ಲೆ ಅಮೆರಿಕಾಗೆ ಹೊರಟು ನಿಂತ ಶಾರುಖ್ ಪುತ್ರ

    ಡ್ರಗ್ಸ್ ಕೇಸ್ ಕ್ಲೀನ್ ಚಿಟ್ ಸಿಕ್ಕ ಬೆನ್ನಲ್ಲೆ ಅಮೆರಿಕಾಗೆ ಹೊರಟು ನಿಂತ ಶಾರುಖ್ ಪುತ್ರ

    ಕ್ರೂಸ್ ಶಿಪ್ ನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿಯಲ್ಲಿ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನವಾಗಿ, ಆನಂತರ ಜಾಮೀನು ಮೇಲೆ ಬಿಡುಗಡೆ ಆಗಿದ್ದರು. ಇದೀಗ ಆ ಕೇಸ್ ಕುರಿತಾಗಿ ವರದಿ ಸಲ್ಲಿಸಿದ್ದು, ಈ ಕೇಸ್ ನಲ್ಲಿ ಆರ್ಯನ್ ಗೆ ಕ್ಲೀನ್ ಚಿಟ್ ನೀಡಲಾಗಿದೆ. ಹಾಗಾಗಿ ವಶಪಡಿಸಿಕೊಂಡಿರುವ ಪಾಸ್ ಪೋರ್ಟ್ ಅವರಿಗೆ ಮರಳಿ ಸಿಗಲಿದೆ. ಇದನ್ನೂ ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ

    ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ಅವರಿಗೆ ವಿದೇಶಕ್ಕೆ ತೆರಳದಂತೆ ನಿರ್ಬಂಧ ಹೇರಿತ್ತು. ಪಾಸ್ ಪೋರ್ಟ್ ವಶಪಡಿಸಿಕೊಂಡಿತ್ತು. ಇದೀಗ ಕ್ಲೀನ್ ಚಿಟ್ ಸಿಕ್ಕಿದ್ದರಿಂದ ವಿದೇಶಕ್ಕೆ ತೆರಳಲು ಅನುಮತಿ ಸಿಗಲಿದೆ ಮತ್ತು ವಶದಲ್ಲಿರುವ ಪಾಸ್ ಪೋರ್ಟ್ ಮರಳಿ ಸಿಗಲಿದೆ. ಪಾಸ್ ಪೋರ್ಟ್ ಸಿಗುತ್ತಿದ್ದಂತೆಯೇ ಅಮೆರಿಕಾಗೆ ಹಾರಲು ಆರ್ಯನ್ ಸಿದ್ಧರಾಗುತ್ತಿದ್ದಾರೆ. ಇದನ್ನೂ ಓದಿ : ನಯನತಾರಾ ಮದುವೆ ದಿನಾಂಕ ಬದಲು, ರೆಸಾರ್ಟ್ ನಲ್ಲಿ ಸಪ್ತಪದಿ ತುಳಿಯಲಿದೆ ಜೋಡಿ

    ಶಾರುಖ್ ಖಾನ್ ಪುತ್ರಿಗೆ ನಟಿಯಾಗಿ ಸಿನಿಮಾ ರಂಗಕ್ಕೆ ಬರಲು ಒಲವಿದ್ದರೆ, ಮಗನಿಗೆ ನಟನಾಗಲು ಇಷ್ಟವಿಲ್ಲವಂತೆ. ನಿರ್ದೇಶನ ಮಾಡುವ ಉತ್ಸಾಹವಿದೆ. ಅಲ್ಲದೇ, ವೆಬ್ ಸೀರಿಸ್ ಮಾಡಲು ಸಿದ್ಧತೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದರ ತಯಾರಿಗಾಗಿ ಆರ್ಯನ್ ಅಮೆರಿಕಾಗೆ ಹೊರಡಬೇಕಂತೆ. ಅಮೆರಿಕಾದಲ್ಲೇ ಸಿದ್ಧತೆ ಮುಗಿಸಿಕೊಂಡು ಭಾರತಕ್ಕೆ ವಾಪಸ್ಸಾಗಲಿದ್ದಾರೆ ಎಂದು ಸುದ್ದಿಯಾಗಿದೆ. ಇದನ್ನೂ ಓದಿ : ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್

    ಆರ್ಯನ್ ಗೆ ನಿರ್ದೇಶಕನಾಗುವ ಕನಸು ಬಾಲ್ಯದಿಂದಲೇ ಇದೆಯಂತೆ. ಅಪ್ಪನಂತೆ ನಟನಾಗುವುದಕ್ಕಿಂತ ನಿರ್ದೇಶಕನಾಗಿ ಸಾಧನೆ ಮಾಡಬೇಕು ಎನ್ನುವುದು ಮೊದಲಿನಿಂದಲೂ ತುಡಿತ. ಅದಕ್ಕೆ ಶಾರುಖ್ ಕೂಡ ಬೆಂಬಲ ಕೊಡುತ್ತಿದ್ದಾರಂತೆ. ಹಾಗಾಗಿ ಮುಂದಿನ ದಿನಗಳಲ್ಲಿ ಆರ್ಯನ್ ನಿರ್ದೇಶಕನಾಗಿ ಲಾಂಚ್ ಆಗಲಿದ್ದಾರೆ.

  • ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ತಾಯಿ ಪತ್ರ – ಆರೋಪಿ ಅರೆಸ್ಟ್

    ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ತಾಯಿ ಪತ್ರ – ಆರೋಪಿ ಅರೆಸ್ಟ್

    ಮಂಗಳೂರು: ಡ್ರಗ್ಸ್ ದಂಧೆಗೆ ಯುವತಿಯನ್ನು ದೂಡಿದ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಬಂಧಿತ ಆರೋಪಿ. ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ಮಗಳಿಗೆ ಆಗುತ್ತಿರುವ ಸಮಸ್ಯೆಯನ್ನು ವಿಶ್ವ ಹಿಂದೂ ಪರಿಷತ್‌ಗೆ ಪತ್ರದ ಮೂಲಕ ತಿಳಿಸಿದ್ದರು. ಈ ಸಂಬಂಧ ವಿಎಚ್‌ಪಿ ಮುಖಂಡರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಯನ್ನು ಬಂಧಿಸಿಲಾಗಿದೆ.

    ಈಕೆಗೆ ನಾಲ್ಕು ವರ್ಷದ ಹಿಂದೆ ಫೇಸ್‌ಬುಕ್ ಮೂಲಕ ಸಿದ್ದಿಕ್‌ನ ಪರಿಚಯವಾಗಿದೆ. ಬಳಿಕ ಆತನ ಜೊತೆ ಯುವತಿ ಸಲುಗೆಯಿಂದ ಇದ್ದಳು.

    ಪತ್ರದಲ್ಲಿ ಏನಿದೆ?
    ಕಳೆದ ಮೂರು ವರ್ಷದಿಂದ ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬವನು ನಿರಂತರವಾಗಿ ಅವಳಿಗೆ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ವಸ್ತುಗಳನ್ನು ನಿರಂತರವಾಗಿ ಕೊಡುತ್ತಿದ್ದಾನೆ. ಇದರಿಂದಾಗಿ ಅವಳು ಡ್ರಗ್ಸ್ ಚಟಕ್ಕೆ ಬಿದ್ದು ಅವಳ ಆರೋಗ್ಯ ಹದಗೆಟ್ಟಿದೆ ಮತ್ತು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ.

    ನಿರಂತರ ಅವಳನ್ನು ಮನೆಯಿಂದ ಕರೆದುಕೊಂಡು ಹೋಗಿ ಅವನು ಮತ್ತೆ ಅವನ ಸ್ನೇಹಿತರು ಬಹಳ ದಿನಗಳವರೆಗೆ ಇರಿಸಿಕೊಳ್ಳುತ್ತಿದ್ದ. ಇದರಿಂದಾಗಿ ನನ್ನ ಭವಿಷ್ಯ ಹಾಳಾಗಿದೆ. ಈಗಾಗಲೇ ನಾನು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇನೆ ಮತ್ತು ನಮ್ಮ ಸಮುದಾಯದ ಗುರುಗಳಿಗೂ ದೂರು ಕೊಟ್ಟಿದ್ದೇನೆ. ಆದರೂ ನನ್ನ ಮಗಳಿಗೆ ನ್ಯಾಯ ಸಿಗಲಿಲ್ಲ. ಈಗಾಗಲೇ ಸಿದ್ದಿಕ್‌ಗೆ ಮೂರು, ನಾಲ್ಕು ಮದುವೆ ಆಗಿದೆ ಎಂದು ಮಾಹಿತಿ ಸಿಕ್ಕಿದೆ. ಇದೀಗ ನನ್ನ ಮಗಳ ಜೀವನ ಕೂಡ ಹಾಳು ಮಾಡಿದ್ದಾನೆ. ಆದುದರಿಂದ ನನ್ನ ಮಗಳನ್ನು ರಕ್ಷಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ನಿಮ್ಮಲ್ಲಿ ವಿನಮ್ರತೆಯಿಂದ ವಿನಂತಿಸಿಕೊಳ್ಳುತ್ತೇನೆ. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

    ಪೊಲೀಸರು ಹೇಳಿದ್ದೇನು?
    ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿ, ಮಹಿಳೆ ಕೊಟ್ಟಿರುವಂತಹ ದೂರಿನ ಮೇರೆಗೆ ಆರೋಪಿಯ ಮೇಲೆ ಸೆಕ್ಷನ್ 354   ಮತ್ತು 506 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಮ್ಮದ್ ಶರೀಫ್ ಸಿದ್ದಿಕಿಯನ್ನು ಬಂಧಿಸಲಾಗಿದೆ. ಆರೋಪಿಯು ಈಗಾಗಲೇ ಮೂರು ಮದುವೆಯಾಗಿದ್ದಾನೆ. ಇದರ ಜೊತೆ ಜೊತೆಗೆ ಗ್ರೇಸಿ ಪಿಂಟೋ ಮಗಳ ಜೊತೆಯೂ ಸುಮಾರು ವರ್ಷಗಳ ಹಿಂದೆಯಿಂದಲೇ  ಸಂಬಂಧವಿರುವುದು ತಿಳಿದು ಬಂದಿದೆ.

    ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆಯೇ ಎಂಡಿಎಂಎ ಡ್ರಗ್ಸ್ ಪೆಡ್ಲಿಂಗ್ ಮಾಡಿರುವ ಎರಡು ಪ್ರಕರಣಗಳು ಇದೆ. ಸದ್ಯ ಯುವತಿಗೆ ಕೌನ್ಸಿಲಿಂಗ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಬಳಿಕ ಈ ವಿಚಾರವಾಗಿ ಯುವತಿಯ ಹೇಳಿಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ತಾಯಿಯ ಮೇಲೆ ಬೆದರಿಕೆ ಹಾಕಿದ ಹಿನ್ನೆಲೆಯ ಒಳಗೆ ಈ ಕೇಸನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಹೇಳಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – 6 ಅಪ್ರಾಪ್ತರು ಪೊಲೀಸರ ವಶಕ್ಕೆ

  • ಡ್ರಗ್ಸ್ ಪ್ರಕರಣ- 22 ದಿನಗಳ ನಂತರ ಜೈಲಿನಿಂದ ಆರ್ಯನ್ ಖಾನ್ ಬಿಡುಗಡೆ

    ಡ್ರಗ್ಸ್ ಪ್ರಕರಣ- 22 ದಿನಗಳ ನಂತರ ಜೈಲಿನಿಂದ ಆರ್ಯನ್ ಖಾನ್ ಬಿಡುಗಡೆ

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಖ್ಯಾತ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಶನಿವಾರ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.

    ARYAN

    ನಾಲ್ಕು ವಾರಗಳು ಮುಂಬೈ ಜೈಲಿನಲ್ಲಿ ಬಂಧಿತನಾಗಿದ್ದ ಆರ್ಯನ್‍ಗೆ ಮುಂಬೈ ನ್ಯಾಯಾಲಯ ಗುರುವಾರ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸಮಯ ಹಿಡಿದಿದ್ದರಿಂದ ಬಿಡುಗಡೆ ವಿಳಂಬವಾಯಿತು. ಇದನ್ನೂ ಓದಿ: ತೆರೆದ ವಾಹನದಲ್ಲಿ ಅಪ್ಪು ಅಂತಿಮ ಯಾತ್ರೆ

    ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿ ರಕ್ಷಣೆಯೊಂದಿಗೆ ಆರ್ಯನ್ ಕಾರನ್ನು ಹತ್ತಿ ಮನೆ ಕಡೆ ಪ್ರಯಾಣ ಬೆಳೆಸಿದರು. ಆರ್ಯನ್ ಬಿಡುಗಡೆ ವಿಚಾರವಾಗಿ ಈವರೆಗೂ ಇದ್ದ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ.

    ARYAN

    ಇತ್ತ ಶಾರೂಖ್ ಖಾನ್ ಮನೆ ಮುಂದೆ ಬೆಳಗ್ಗೆ ಅಭಿಮಾನಿಗಳ ದಂಡು ನೆರೆದಿತ್ತು. “ಮನೆಗೆ ಸ್ವಾಗತ, ಆರ್ಯನ್” ಎಂಬ ಪೋಸ್ಟರ್‍ಗಳನ್ನು ಪ್ರದರ್ಶಿಸಿ ಅದ್ದೂರಿ ಸ್ವಾಗತಕ್ಕೆ ಅಣಿಯಾಗಿದ್ದರು. ಇದನ್ನೂ ಓದಿ: ಅಪ್ಪು ಅಗಲಿಕೆ ಬಗ್ಗೆ ಶಿವಣ್ಣ ಸುದೀಪ್‍ಗೆ ಹೇಳಿದ್ದೇನು? 

    ಐಷರಾಮಿ ಹಡಗಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಬಂಧನಕ್ಕೊಳಗಾಗಿದ್ದರು.

  • ಆರ್ಯನ್ ಖಾನ್ ಬಂಧನ ಕೇಸ್‍ಗೆ ತಿರುವು – ಸಮೀರ್ ಆಪ್ತ ಕಿರಣ್ ಗೋಸಾವಿ ಬಂಧನ

    ಆರ್ಯನ್ ಖಾನ್ ಬಂಧನ ಕೇಸ್‍ಗೆ ತಿರುವು – ಸಮೀರ್ ಆಪ್ತ ಕಿರಣ್ ಗೋಸಾವಿ ಬಂಧನ

    ಮುಂಬೈ: ಡ್ರಗ್ಸ್ ಪ್ರಕರಣ ಸಂಬಂಧ ಸ್ಟಾರ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜೈಲಿನಲ್ಲಿದ್ದರೆ, ಇತ್ತ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಸಮೀರ್ ವಾಂಖೆಡೆ ಆಪ್ತ ಕಿರಣ್ ಗೋಸಾವಿಯನ್ನು ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

    ಹೌದು. ಡ್ರಗ್ಸ್ ಪ್ರಕರಣ ಸಂಬಂಧ ಕಿರಣ್ ಗೋಸಾವಿಯನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ಮಾಹಿತಿ ನೀಡಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಕಿರಣ್, ಉತ್ತರ ಪ್ರದೇಶದ ಲಕ್ನೋ ಪೊಲೀಸ್ ಠಾಣೆಗೆ ಶರಣಾಗುವುದಾಗಿ ಹೇಳಿಕೆ ನೀಡಿದ್ದ. ಈ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಎನ್‍ಸಿಬಿ ಅಧಿಕಾರಿಗಳು ಆತನನ್ನು ಇಂದು ಪುಣೆಯಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ:  ಎನ್‍ಡಿಪಿಎಸ್ ಕಾಯ್ದೆಯನ್ನು ಎನ್‍ಸಿಬಿ ದುರುಪಯೋಗ ಪಡಿಸಿಕೊಂಡಿದೆ – ಆರ್ಯನ್ ಖಾನ್ ಜಾಮೀನು ಅರ್ಜಿ ಮುಂದೂಡಿಕೆ

    ಕಿರಣ್ ಮೇಲಿನ ಆರೋಪಗಳೇನು..?
    ಮಲೇಷಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ ವ್ಯಕ್ತಿಯೊಬ್ಬನಿಗೆ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿತ್ತು. ವ್ಯಕ್ತಿಗೆ ಉದ್ಯೋಗ ಕೊಡಿಸುವುದಾಗಲಿ, ಹಣ ವಾಪಸ್ ನೀಡುವುದಾಗಲಿ ಮಾಡಿರಲಿಲ್ಲ. ಹೀಗಾಗಿ ಕಿರಣ್ ವಿರುದ್ಧ 2018ರ ಮೇ 19ರಂದು ಪುಣೆಯ ಫರಸ್ಕನ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಇದಲ್ಲದೆ ಇನ್ನೂ ವಂಚನೆ ಆರೋಪಗಳು ಕೇಳಿಬಂದಿದ್ದವು. ಇತ್ತ ಕಿರಣ್ ಖಾಸಗಿ ಬಾಡಿಗಾರ್ಡ್ ಪ್ರಭಾಕರ್ ಸೈಲ್ ಮುಂಬೈ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾನೆ. ಇದನ್ನೂ ಓದಿ: ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯಾತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ

  • ಅಮಿತ್ ಶಾಗೆ ವಿಶ್ ಮಾಡಿ ಟ್ರೋಲ್‍ಗೊಳಗಾದ ನಟಿ ಸಾರಾ ಅಲಿಖಾನ್

    ಅಮಿತ್ ಶಾಗೆ ವಿಶ್ ಮಾಡಿ ಟ್ರೋಲ್‍ಗೊಳಗಾದ ನಟಿ ಸಾರಾ ಅಲಿಖಾನ್

    ನವದೆಹಲಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಅವರು ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಇದೀಗ ಟ್ರೋಲಿಗರಿಗೆ ಆಹಾರವಾಗಿದ್ದಾರೆ.

    ಹೌದು. ಇಂದು ಅಮಿತ್ ಶಾ ಅವರ ಹುಟ್ಟುಹಬ್ಬವಾಗಿತ್ತು. ಈ ಹಿನ್ನೆಲೆಯಲ್ಲಿ ನಟಿ, ಗೃಹ ಸಚಿವರಿಗೆ ವಿಶ್ ಮಾಡಿದ್ದಾರೆ. ಆದರೆ ಇದುವರೆಗೆ ವಿಶ್ ಮಾಡಿದಿರುವ ಸಾರಾ ಈ ಬಾರಿ ಶುಭಕೋರಿರುವುದಕ್ಕೆ ನೆಟ್ಟಿಗರು ಆಕೆಯನ್ನು ಟ್ರೋಲ್ ಮಾಡಿದ್ದಾರೆ.

    ಇತ್ತೀಚೆಗೆ ಬಾಲಿವುಡ್ ಸೆಲೆಬ್ರಿಟಿಗಳ ಮನೆ ಮೇಲೆ ಎನ್‍ಸಿಬಿ ದಾಳಿ ನಡೆಯುತ್ತಿದೆ. ಇದರಿಂದ ಪಾರಾಗುವ ಸಲುವಾಗಿ ಸಾರಾ ಅವರು ಅಮಿತ್ ಶಾಗೆ ವಿಶ್ ಮಾಡಿದ್ದಾರೆ ಎಂದು ಕಾಲೆಳೆದಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಕೇಸ್ – ಶಾರೂಖ್ ನಿವಾಸದ ಮೇಲೆ ಎನ್‍ಸಿಬಿ ದಾಳಿ

    ಸಾರಾ ಟ್ವೀಟ್ ನಲ್ಲೇನಿದೆ..?
    ಗೃಹ ಸಚಿವ ಅಮಿತ್ ಶಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಸಾರಾ ಟ್ವೀಟ್ ಮಾಡಿದ್ದಾರೆ. ನಟಿ ಈ ರೀತಿ ಟ್ವೀಟ್ ಮಾಡುತ್ತಿದ್ದಂತೆಯೇ ನೆಟ್ಟಿಗರು ಆಕೆಯನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಒಬ್ಬರು, ‘ನಿಮ್ಮ ಮನೆ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ಮಾಡಲ್ಲ. ಈ ಮೂಲಕ ನೀವು ಸರಕ್ಷಿತವಾಗಿದ್ದೀರಿ’ ಎಂದು ಕಾಮೆಂಟ್ ಮಾಡಿದ್ದಾರೆ. ಹೀಗೆ ಅನೇಕರು ಸಾರಾ ಕಾಲೆಳೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

    https://twitter.com/sunilssihag/status/1451430377298415622

    ಇತ್ತ ಮುಂಬೈನ ಕ್ರೂಸ್‍ನಲ್ಲಿ ನಡೆದ ಡ್ರಗ್ಸ್ ಕೇಸ್ ಪ್ರಕರಣದ ಬಗ್ಗೆ ಕೆದಕಿದಷ್ಟು ಮಾಹಿತಿ ಹೊರಬರ್ತಿದೆ. ಆರ್ಯನ್ ಖಾನ್ ಜೊತೆ ವಾಟ್ಸಪ್‍ನಲ್ಲಿ ಡ್ರಗ್ಸ್ ಬಗ್ಗೆ ಚಾಟಿಂಗ್ ಮಾಡಿದ್ದಂತೆ ನಟಿ ಅನನ್ಯ ಪಾಂಡೆಗೆ ಇಂದು ಕೂಡ ಎನ್‍ಸಿಬಿ ಡ್ರಿಲ್ ಮಾಡಿತು. ನಿಮಗೆ ಯಾರು ಡ್ರಗ್ಸ್ ತಂದು ಕೊಡ್ತಿದ್ರು..? ಯಾವ್ಯಾವ ಟೈಮಲ್ಲಿ ಡ್ರಗ್ಸ್ ತಗೋತಿದ್ರಿ..? ಆರ್ಯನ್ ಜೊತೆ ಎಷ್ಟು ದಿನಗಳಿಂದ ಡ್ರಗ್ಸ್ ತೆಗೆದುಕೊಳ್ತಿದ್ದೀರಿ..? ನಿಮ್ ಜೊತೆ ಯಾರ್ಯಾರು ಡ್ರಗ್ಸ್ ತಗೋತಿದ್ರು..? ಪೆಡ್ಲರ್‍ಗೆ ಹೇಗೆ ಹಣ ಕೊಡ್ತಿದ್ರಿ..? ಯಾವ್ಯಾವ ಸ್ಥಳದಲ್ಲಿ ಪೆಡ್ಲರ್‍ನ ಭೇಟಿಯಾಗ್ತಿದ್ರಿ ಅಂತಾ ಪ್ರಶ್ನಿಸಿದ್ದಾರೆ.

    https://twitter.com/Nher_who/status/1451429295012802566

    ಇದಕ್ಕೆ ಉತ್ತರಿಸಿರೋ ಅನನ್ಯ ಪಾಂಡೆ, ನಾನು ಡ್ರಗ್ಸ್ ತಗೋಳಲ್ಲ. ಆರ್ಯನ್ ಜೊತೆ ಗಾಂಜಾ ಕುರಿತು ಜೋಕ್ ಮಾಡಿದ್ದೇ ಅಷ್ಟೇ. ಅದೂ 1 ಒಂದು ವರ್ಷದ ಹಿಂದಿನ ಚಾಟ್ ಅದು ಅಂತ ಹೇಳಿದ್ದಾರೆ. ಆದರೆ ಆರ್ಯನ್ ಡ್ರಗ್ಸ್ ಕೇಳಿದಾಗ, ತಂದು ಕೊಡೋದಾಗಿ ಅನನ್ಯ ಪಾಂಡೆ ಚಾಟ್‍ನಲ್ಲಿ ಹೇಳಿದ್ದಳು ಅಂತ ಎನ್‍ಸಿಬಿ ಹೇಳಿದೆ.

    https://twitter.com/xecular7/status/1451448068822478848

  • ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

    ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

    ಮುಂಬೈ:  ಡ್ರಗ್ಸ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ (NCB) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಜಾಮೀನು ಪಡೆದು ಜೈಲಿನಿಂದ ಹೊರ ಬರುವವರೆಗೂ ಮನೆಯಲ್ಲಿ ಸಿಹಿ ತಿನಿಸು ಮಾಡದಂತೆ ಅಡುಗೆ ಸಿಬ್ಬಂದಿಗೆ ತಾಯಿ ಗೌರಿ ಖಾನ್ ಸೂಚನೆ ನೀಡಿದ್ದಾರೆ.

    ದಸರಾ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಮನ್ನತ್ ನಿವಾಸದಲ್ಲಿ ಖೀರ್ ಮಾಡಲಾಗುತ್ತಿತ್ತು. ಇದನ್ನು ಶಾರೂಖ್ ಖಾನ್ ಪತ್ನಿ ಗೌರಿ ಗಮನಿಸಿದ್ದಾರೆ. ಅಲ್ಲದೆ ಅಡುಗೆ ಸಿಬ್ಬಂದಿಗೆ ಆರ್ಯನ್ ಖಾನ್ ಜಾಮೀನು ಪಡೆದು ಜೈಲಿನಿಂದ ಹೊರ ಬರುವವರೆಗೂ ಸಿಹಿ ತಿನಿಸು ಮಾಡದಂತೆ ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

    ಆರ್ಯನ್ ಖಾನ್ ಜೈಲು ಸೇರಿದ ಮೇಲೆ ಮನ್ನತ್ ನಲ್ಲಿ ಖುಷಿಯ ವಾತಾವರಣ ಇಲ್ಲ. ಅವರು ಯಾರನ್ನೂ ಭೇಟಿಯಾಗಲು ಬಯಸುತ್ತಿಲ್ಲ ಎಂದು ಆಪ್ತ ಮೂಲಗಳು ಹೇಳಿವೆ. ಈ ಹಿನ್ನೆಲೆಯಲ್ಲಿ ಗೌರಿ ಹಬ್ಬದ ದಿನಗಳಲ್ಲೂ ಸಿಹಿ ತಿನಿಸು ಮಾಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.  ಇದನ್ನೂ ಓದಿ: ಜೈಲೂಟ ತಿನ್ನಲು ಆರ್ಯನ್ ಪರದಾಟ – ಕ್ಯಾಂಟೀನ್ ಊಟಕ್ಕೆ ಮನಿ ಆರ್ಡರ್ ಕಳುಹಿಸಿದ ಶಾರೂಖ್

    ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ಹೊರಟಿದ್ದ ಐಷರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತಿತ್ತು. ಈ ಪಾರ್ಟಿಯಲ್ಲಿ ಸ್ನೇಹಿತರ ಜೊತೆಗೆ ಭಾಗಿಯಾಗಿದ್ದ ಆರ್ಯನ್ ಖಾನ್ ಡ್ರಗ್ ಸೇವನೆ ಮಾಡಿದ್ದರು ಎಂದು ಆರೋಪಿಸಿ ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್ ಖಾನ್ ಜಾಮೀನು ಅರ್ಜಿ ಆದೇಶ ಅಕ್ಟೋಬರ್ 20 ರಂದು ಪ್ರಕಟವಾಗಲಿದೆ.

  • ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ  ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

    ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಇನ್ನೆರಡು ದಿನ ಜೈಲೇ ಗತಿ

    ಮುಂಬೈ: ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಮುಂಬೈ ಸೆಷನ್ಸ್ ಕೋರ್ಟ್ ಹೇಳಿದೆ. ಬುಧವಾರ ಮಧ್ಯಾಹ್ನದ ಬಳಿಕ ಸುದೀರ್ಘ ವಿಚಾರಣೆ ನಡೆಯಲಿದೆ.

    ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಬಳಿಕ ಸೆಷನ್ಸ್ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ವಿ.ವಿ ಪಾಟೀಲ್ ತನಿಖಾ ವರದಿ ಸಲ್ಲಿಸಲು ಎನ್‍ಸಿಬಿ(NCB) ಕಾಲಾವಕಾಶ ಕೇಳಿದ ಹಿನ್ನೆಲೆ ವಿಚಾರಣೆ ಮುಂದೂಡಿತು.

    ವಿಚಾರಣೆ ವೇಳೆ ವಾದ ಆರಂಭಿಸಿದ ಎನ್‍ಸಿಬಿ(NCB) ಪರ ವಕೀಲರು, ತನಿಖಾ ವರದಿ ಸಲ್ಲಿಸಲು ಒಂದು ವಾರದ ಸಮಯ ಬೇಕು ಈ ಹಿನ್ನೆಲೆ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು. ಆದರೆ ಎನ್‍ಸಿಬಿ(NCB) ವಾದಕ್ಕೆ ಆರ್ಯನ್ ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಮಿತ್ ದೇಸಾಯಿ ಮತ್ತು ವಕೀಲ ಸತೀಶ್ ಮನೇಶಿಂಧೆ ಆಕ್ಷೇಪ ವ್ಯಕ್ತಪಡಿಸಿ, ಒಂದು ವಾರದ ಸಮಯ ಸಾಧ್ಯವಿಲ್ಲ ಕೂಡಲೇ ವಿಚಾರಣೆ ಆರಂಭಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಗ ಇಲ್ಲದೇ ಹುಟ್ಟುಹಬ್ಬ ಆಚರಿಸಲ್ಲ: ಶಾರೂಖ್ ಪತ್ನಿ ಗೌರಿ ಖಾನ್

    ಆರ್ಯನ್ ಖಾನ್ ಪರ ವಕೀಲರ ಆಕ್ಷೇಪ ಹಿನ್ನೆಲೆ ಕನಿಷ್ಠ ಎರಡು ದಿನಗಳ ಕಾಲಾವಕಾಶ ಬೇಕು .ವಿಚಾರಣೆ ಗುರುವಾರ ನಡೆಸುವಂತೆ ಎನ್‍ಸಿಬಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎ.ಎಮ್ ಚಿಮಲ್ಕರ್ ಮನವಿ ಮಾಡಿದರು. ಬಳಿಕ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು ಬುಧವಾರ ಮಧ್ಯಾಹ್ನ ಬಳಿಕ ವಿಚಾರಣೆ ನಡೆಸೋಣ ಎಂದು ಹೇಳಿದರು. ಇದನ್ನೂ ಓದಿ: ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ವಿಚಾರಣೆ ವೇಳೆ ವಾದ ಮಂಡಿಸಿದ ಆರ್ಯನ್ ಖಾನ್ ಪರ ವಕೀಲರಾದ ಮನೇಶಿಂಧೆ ಮತ್ತು ದೇಸಾಯಿ, ಆರ್ಯನ್ ಖಾನ್ ನಿಂದ ಯಾವುದೇ ಕಾನೂನು ಬಾಹಿರ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ. ಜಾಮೀನು ನೀಡುವುದರಿಂದ ತನಿಖೆಗೆ ತೊಂದರೆಯಾಗುವುದಿಲ್ಲ ಎಂದರು. ಇನ್ನು ಕಳೆದ ಭಾನುವಾರದಿಂದ ಶುಕ್ರವಾರದವರೆಗೂ ಎನ್‍ಸಿಬಿ ಕಡ್ಡಿಯಲ್ಲಿ ಆರ್ಯನ್ ಇದ್ದು ಒಂದೇ ದಿನ ಮಾತ್ರ ಹೇಳಿಕೆ ಪಡೆಯಲಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ಕಿಂಗ್ ಖಾನ್ ಮಗನ ಡ್ರಗ್ಸ್ ಪ್ರಕರಣದಲ್ಲಿ ಕನ್ನಡಿಗನ ವಕಾಲತ್ತು 

    ಇದಕ್ಕೆ ಉತ್ತರಿಸಿದ ಎನ್‍ಸಿಬಿ ವಕೀಲರು, ಆರ್ಯನ್ ಖಾನ್ ಪರ ವಕೀಲರ ವಾದವನ್ನು ತಿರಸ್ಕರಿಸಿದರು. ಆರ್ಯನ್ ಖಾನ್ ಸೇರಿ ಇತರೆ ಆರೋಪಿಗಳಿಗೆ ಪ್ರಕರಣದೊಂದಿಗ ನಂಟಿದೆ. ಈ ಹಿನ್ನೆಲೆ ಅವರು ಜಾಮೀನು ನೀಡಬಾರದು. ಅಲ್ಲದೆ ಇದಕ್ಕೂ ಮುನ್ನ ಎಲ್ಲ ಅರ್ಜಿಗಳನ್ನು ಪ್ರತ್ಯೇಕ ವಿಚಾರಣೆ ನಡೆಸಬೇಕು ಎಂದಿದ್ದು ಮತ್ತೊರ್ವ ಆರೋಪಿಯ ಮನವಿಗೂ ಎನ್‍ಸಿಬಿ ವಿರೋಧ ವ್ಯಕ್ತಪಡಿಸಿತು.

  • ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ಡ್ರಗ್ಸ್‌ ಕೇಸ್‌ – ಶಾರೂಖ್ ಪುತ್ರ ಆರ್ಯನ್ ಜೈಲುಪಾಲು

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಆರೋಪಿಗಳು ಜೈಲುಪಾಲಾಗಿದ್ದಾರೆ.

    ಸುದೀರ್ಘ ಎರಡು ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದ ಮುಂಬೈನ ಖಿಲ್ಲಾ ಕೋರ್ಟ್, ಆರ್ಯನ್ ಖಾನ್ ಮತ್ತು ಇತರರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಅಲ್ಲದೇ, ಶಾರೂಖ್ ಪುತ್ರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಇದನ್ನೂ ಓದಿ: ಏರ್‌ಪೋರ್ಟ್‌ ಸಿಟಿಯಲ್ಲಿ ರೀಟೇಲ್ ಡೈನಿಂಗ್, ಎಂಟರ್​ಟೈನ್​ಮೆಂಟ್ ಗ್ರಾಮ ನಿರ್ಮಾಣ ಆರಂಭ 

    ಈ ಬೆನ್ನಲ್ಲೇ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿದ್ದು, ನಾಳೆ ವಿಚಾರಣೆಗೆ ಬರುವ ಸಾಧ್ಯತೆಯಿದೆ. ನಾಳೆಯೂ ಆರ್ಯನ್‍ಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಲು ಎನ್‍ಸಿಬಿ ತಯಾರಿ ನಡೆಸಿದೆ.

    ಇಂದಿನ ವಿಚಾರಣೆ ವೇಳೆ ವಾದ ಮಂಡಿಸಿದ ಎನ್‍ಸಿಬಿ ಪರ ವಕೀಲರು, ಪ್ರಕರಣದಲ್ಲಿ ಈವರೆಗೂ 17 ಮಂದಿಯನ್ನು ಬಂಧಿಸಲಾಗಿದೆ. ಸದ್ಯದಲ್ಲೇ ಇನ್ನಷ್ಟು ದಾಳಿ ನಡೆಸಲಿದ್ದೇವೆ. ಮುಂದೆ ಬಂಧಿಸುವ ಆರೋಪಿಗಳ ಗುರುತನ್ನು ಪತ್ತೆ ಹಚ್ಚಬೇಕಿದೆ. ಜೊತೆಗೆ ಆರ್ಯನ್‍ಗೂ ಡ್ರಗ್ ವ್ಯವಹಾರಕ್ಕೂ ಇರುವ ನಂಟು ಪತ್ತೆ ಹಚ್ಚಬೇಕಿದೆ. ಹೀಗಾಗಿ ಅಕ್ಟೋಬರ್ 11ರವರೆಗೂ ಕಸ್ಟಡಿಗೆ ನೀಡಿ ಎಂದು ವಾದ ಮಂಡಿಸಿದ್ರು. ಆದರೆ ಸದ್ಯದ ಮಟ್ಟಿಗೆ ವಿಚಾರಣೆ ಅಗತ್ಯವಿಲ್ಲ ಎಂದು ಭಾವಿಸಿದ್ದೇವೆ ಎಂದ ಕೋರ್ಟ್, ಎಲ್ಲರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿತು.