Tag: Drugs Case

  • ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಅವಕಾಶ

    ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಅವಕಾಶ

    ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಏಕ ಸದಸ್ಯ ಪೀಠ ಅವಕಾಶ ನೀಡಿದೆ.

    ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ ವೇಳೆ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸಹ ಸೂಚಿಸಿದೆ.

    ಸೆಪ್ಟೆಂಬರ್ 8ರಂದು ಸಂಜನಾ ಗಲ್ರಾನಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇತ್ತ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷವನ್ನು ಕೂಡ ನಟಿ ಜೈಲಿನಲ್ಲಿ ಬರಮಾಡಿಕೊಳ್ಳಲಿದ್ದಾರೆ. ಇದನ್ನೂ ಓದಿ: ನಟಿ ಸಂಜನಾ ಹೆಸರಲ್ಲಿದೆ ಬರೋಬ್ಬರಿ 11 ಬ್ಯಾಂಕ್ ಅಕೌಂಟ್!

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಮೆಸೇಜ್, ಫೋಟೋಸ್ ಡಿಲೀಟ್ – ಸಂಜನಾಳ ಖತರ್ನಾಕ್ ಐಡಿಯಾಗೆ ಪೊಲೀಸ್ರು ಸುಸ್ತು

  • ಮೂರು ತಿಂಗಳಿಂದ ಜೈಲಲ್ಲಿರುವ ರಾಗಿಣಿಗೆ ಇಂದು ಸಿಗುತ್ತಾ ಬೇಲ್?

    ಮೂರು ತಿಂಗಳಿಂದ ಜೈಲಲ್ಲಿರುವ ರಾಗಿಣಿಗೆ ಇಂದು ಸಿಗುತ್ತಾ ಬೇಲ್?

    ಬೆಂಗಳೂರು: ಡ್ರಗ್ಸ್ ಡೀಲ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಗೆ ಬರಲಿದೆ.

    ಸುಪ್ರೀಂಕೋರ್ಟಿನ ನ್ಯಾ. ರೊಹ್ನಿಂಟನ್ ನಾರಿಮನ್ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಈ ಅರ್ಜಿ ವಿಚಾರಣೆಗೆ ಬರುವ ನಿರೀಕ್ಷೆಗಳಿದೆ. ಇಂದು ಕೇವಲ ಅರ್ಜಿ ವಿಚಾರಣೆ ಕೈಗೆತ್ತಿಗೊಳ್ಳಲಿದ್ದು ವಿಚಾರಣೆ ಮುಂದೂಡಿಕೆಯಾಗುವ ಸಾಧ್ಯತೆಗಳಿದೆ.

    ಈಗಾಗಲೇ ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರನಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು, ಈ ಹಿನ್ನಲೆ ತುಪ್ಪದ ಹುಡುಗಿಗೂ ಜಾಮೀನು ಸಿಗುವ ಆಸೆ ಚಿಗುರುದೊಡಿದಿದೆ. ಹೀಗಾಗಿ ಸೆಪ್ಟೆಂಬರ್ 16 ರಿಂದ ಜೈಲಿನಲ್ಲಿರುವ ರಾಗಿಣಿ ದ್ವಿವೇದಿಗೆ ಇಂದು ನಡೆಯಲಿರುವ ಅರ್ಜಿ ವಿಚಾರಣೆ ಮಹತ್ವದಾಗಿದೆ.

  • ಭಾರತಿ ಸಿಂಗ್ ಡ್ರಗ್ಸ್ ಪ್ರಕರಣ- ಇಬ್ಬರು ಎನ್‍ಸಿಬಿ ಅಧಿಕಾರಿಗಳ ಅಮಾನತು

    ಭಾರತಿ ಸಿಂಗ್ ಡ್ರಗ್ಸ್ ಪ್ರಕರಣ- ಇಬ್ಬರು ಎನ್‍ಸಿಬಿ ಅಧಿಕಾರಿಗಳ ಅಮಾನತು

    – ಜಾಮೀನಿಗೆ ಸಹಕರಿಸಿರುವ ಆರೋಪ
    – ಬೇರೆ ಅಧಿಕಾರಿಗಳ ನೇಮಕ

    ನವದೆಹಲಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಸಿಗಲು ಸಹಕರಿಸಿದ್ದಾರೆ ಎಂಬ ಆರೋಪಿದ ಮೇಲೆ ಇಬ್ಬರು ಎನ್‍ಸಿಬಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

    ಮುಂಬೈ ವಲಯ ಘಟಕದ ಇಬ್ಬರು ಎನ್‍ಸಿಬಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಅವರ ಜಾಗಕ್ಕೆ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಜಾಮೀನು ಪಡೆಯಲು ಸಹಕಾರ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

    ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಇವರ ಪತಿ ಹರ್ಷ್ ಲಿಂಬಾಚಿಯಾ ಹಾಗೂ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್ ವಿರುದ್ಧ ದಾಖಲಾಗಿದ್ದ ಪ್ರಕರಣಗಳಲ್ಲಿ ಈ ಇಬ್ಬರು ತನಿಖಾಧಿಕಾರಿ(ಐಒ)ಗಳ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಇಬ್ಬರು ಅಧಿಕಾರಿಗಳು ಮಾತ್ರವಲ್ಲದೆ ಎನ್‍ಸಿಬಿಯ ಪ್ರಾಸಿಕ್ಯೂಟರ್ ಪಾತ್ರದ ಕುರಿತು ಸಹ ತನಿಖೆ ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಎರಡೂ ಪ್ರಕರಣಗಳಲ್ಲಿ ನಿಗದಿತ ಜಾಮೀನು ವಿಚಾರಣೆ ವೇಳೆ ತನಿಖಾಧಿಕಾರಿಗಳು ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆ ಹಾಜರಾಗಲು ವಿಫಲರಾಗಿದ್ದಾರೆ ಎನ್ನಲಾಗಿದೆ.

    ಬಂಧನಕ್ಕೊಳಗಾಗಿದ್ದ ಡ್ರಗ್ ಪೆಡ್ಲರ್ ಹೇಳಿಕೆಯನ್ನಾಧರಿಸಿ ಎನ್‍ಸಿಬಿ ಅಕ್ಟೋಬರ್ 27ರಂದು ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಪ್ರಕಾಶ್ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅಕ್ಕಪಕ್ಕದವರ ಸಮ್ಮುಖದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ 2.7 ಗ್ರಾಂ. ಹಶಿಶ್ ವಶಪಡಿಸಿಕೊಳ್ಳಲಾಗಿತ್ತು.

    ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾಗೆ ನ್ಯಾಯಾಲಯ ನವೆಂಬರ್ 23ರಂದು ಷರತ್ತು ಬದ್ಧ ಜಾಮೀನು ನೀಡಿದೆ. ನ.21ರಂದು ಭಾರತಿ ಸಿಂಗ್ ನಿವಾಸ ಮತ್ತು ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದರು. ಭಾನುವಾರ ಇಬ್ಬರನ್ನ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

    ಇದೇ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಮತ್ತಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ದಂಪತಿಗೆ ಡಿಸೆಂಬರ್ 4ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಭಾರತಿ ಕಲ್ಯಾಣದ ಜೈಲಿಗೂ ಮತ್ತು ಹರ್ಷ್ ಟಲೇಜಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ಬಳಿಕ ದಂಪತಿ ಜಾಮೀನು ಕೋರಿ ಕಿಲಾ ನ್ಯಾಯಾಲಯದ ಮೊರೆ ಹೋಗಿದ್ದರು.

    ನ.21ರಂದು ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು.

  • ರಿಯಾ ಸೋದರ ಶೌವಿಕ್ ಚಕ್ರವರ್ತಿಗೆ ಜಾಮೀನು

    ರಿಯಾ ಸೋದರ ಶೌವಿಕ್ ಚಕ್ರವರ್ತಿಗೆ ಜಾಮೀನು

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಕಳೆದ ಮೂರು ತಿಂಗಳ ಬಳಿಕ ಶೌವಿಕ್ ಜೈಲಿನಿಂದ ಬಿಡುಗಡೆಯಾದಂತಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ರಿಯಾ ಚಕ್ರವರ್ತಿ ಹಾಗೂ ಶೌವಿಕ್ ಚಕ್ರವರ್ತಿ ಇಬ್ಬರನ್ನು ಬಂಧಿಸಿತ್ತು. ಈ ಹಿಂದೆ ರಿಯಾ ಚಕ್ರವರ್ತಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಅವರ ಸಹೋದರ ಶೌವಿಕ್ ಚಕ್ರವರ್ತಿಗೆ ವಿಶೇಷ ನ್ಯಾಯಾಲಯ ಜಾಮೀನು ಪ್ರಕಟಿಸಿದೆ.

    ಸೆಪ್ಟೆಂಬರ್ 4ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಜೊತೆಗೆ ಶೌವಿಕ್ ಚಕ್ರವರ್ತಿಯನ್ನು ಬಂಧಿಸಲಾಗಿತ್ತು. ಬಳಿಕ ಇಬ್ಬರನ್ನೂ ಎನ್‍ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಜೂನ್‍ನಲ್ಲಿ ಸುಶಾಂತ್ ಸಿಂಗ್ ಸಾವಿನ ಸುತ್ತ ಡ್ರಗ್ಸ್ ಸೇವನೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಎನ್‍ಸಿಬಿ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಿತ್ತು.

    ಮುಂಬೈ ಕೋರ್ಟ್ ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಎನ್‍ಸಿಬಿ ಅಧಿಕಾಗಳ ಮುಂದೆ ಹೇಳಿಕೆ ನೀಡಿರುವುದು ಹಾಗೂ ತಪ್ಪೊಪ್ಪಿಕೊಂಡಿರುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಚಕ್ರವರ್ತಿ ನವೆಂಬರ್ ಮೊದಲ ವಾರದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ ನಲ್ಲಿ ಶೌವಿಕ್ ಚಕ್ರವರ್ತಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಆದರೆ ಈ ವೇಳೆ ಸಹೋದರಿ, ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಲಾಗಿತ್ತು.

  • ಜೈಲಿನಿಂದ ಬಂದ ಬಳಿಕ ಭಾರತಿ ಸಿಂಗ್ ಮೊದಲ ಪ್ರತಿಕ್ರಿಯೆ

    ಜೈಲಿನಿಂದ ಬಂದ ಬಳಿಕ ಭಾರತಿ ಸಿಂಗ್ ಮೊದಲ ಪ್ರತಿಕ್ರಿಯೆ

    ಮುಂಬೈ: ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಏಳು ದಿನಗಳ ನಂತರ ಹಾಸ್ಯ ಕಲಾವಿದೆ ಭಾರತಿ ಸಿಂಗ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾರನ್ನ ನವೆಂಬರ್ 21ರಂದು ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಬಂಧಿಸಿತ್ತು. ನವೆಂಬರ್ 23ರಂದು ದಂಪತಿಗೆ ಜಾಮೀನು ಸಿಕ್ಕಿತ್ತು.

    ಇನ್‍ಸ್ಟಾಗ್ರಾಂನಲ್ಲಿ ಪತಿ ಹರ್ಷ್ ಜೊತೆಗಿನ ಸುಂದರ ಫೋಟೋಗಳನ್ನ ಹಂಚಿಕೊಂಡಿರುವ ಭಾರತಿ ಸಿಂಗ್ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ. ಕೆಲವೊಮ್ಮೆ ನಮ್ಮಲ್ಲಿರುವ ಆತ್ಮಸ್ಥೈರ್ಯವನ್ನ ಪ್ರದರ್ಶಿಸಲು ಕೆಲ ಪರೀಕ್ಷೆಗಳು ಎದುರಾಗುತ್ತವೆ. ಈ ಪರೀಕ್ಷೆಗಳಲ್ಲಿ ನಮ್ಮ ನ್ಯೂನ್ಯತೆಗಳನ್ನ ಪಕ್ಕಕ್ಕಿರಿಸಿ ಹೋರಾಡಬೇಕಾಗುತ್ತದೆ. ನನ್ನ ಶಕ್ತಿ, ಆತ್ಮಸ್ಥೈರ್ಯ, ಬೆನ್ನಲುಬು, ಬೆಸ್ಟ್ ಫ್ರೆಂಡ್ ಎಲ್ಲವೂ ಒನ್ ಆ್ಯಂಡ್ ಓನ್ಲಿ ಪತಿ ಹರ್ಷ್ ಲಿಂಬಾಚಿಯಾ. ಐ ಲವ್ ಯು ಎಂದು ಬರೆದು ಪತಿಯ ಮೇಲಿನ ಪ್ರೀತಿಯನ್ನ ವ್ಯಕ್ತಪಡಿಸಿದ್ದಾರೆ.

    ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿದ ಬಳಿಕ ಭಾರತಿಯನ್ನ ಕಪಿಲ್ ಶರ್ಮಾ ಶೋನಿಂದ ಕೈ ಬಿಡಲಾಗುವುದು ಎಂದು ವರದಿಯಾಗುತ್ತಿದ್ದು, ಆದ್ರೆ ಈ ಕುರಿತು ವಾಹಿನಿ ಸ್ಪಷ್ಟನೆ ನೀಡಿಲ್ಲ. ಈ ವದಂತಿಗಳ ಬೆನ್ನಲ್ಲೇ ಭಾರತಿ ಸಿಂಗ್ ಬೆಂಬಲಕ್ಕೆ ನಿಂತಿರುವ ಕೃಷ್ಣ ಅಭಿಷೇಕ್ ಆಕೆಗೆ ಎರಡನೇ ಅವಕಾಶ ನೀಡಬೇಕು. ಕಪಿಲ್ ಮತ್ತು ನಾನು ಸದಾ ಭಾರತಿ ಸಿಂಗ್ ಜೊತೆಯಲ್ಲಿರುತ್ತೇವೆ. ವಾಹಿನಿ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾರದು ಎಂಬ ನಮಗಿದೆ ಎಂದು ಹೇಳಿದ್ದಾರೆ.

  • ಡ್ರಗ್ಸ್ ಕೇಸ್ – ಭಾರತಿ ಸಿಂಗ್, ಹರ್ಷ್ ಲಿಂಬಾಚಿಯಾಗೆ ಜಾಮೀನು

    ಡ್ರಗ್ಸ್ ಕೇಸ್ – ಭಾರತಿ ಸಿಂಗ್, ಹರ್ಷ್ ಲಿಂಬಾಚಿಯಾಗೆ ಜಾಮೀನು

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಲಿಂಬಾಚಿಯಾಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

    ಶನಿವಾರ ಭಾರತಿ ಸಿಂಗ್ ನಿವಾಸ ಮತ್ತು ಕಚೇರಿಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದರು. ಭಾನುವಾರ ಇಬ್ಬರನ್ನ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

    ಇದೇ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ಮತ್ತಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ದಂಪತಿಗೆ ಡಿಸೆಂಬರ್ 4ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶಿಸಿತ್ತು. ಕೋರ್ಟ್ ಆದೇಶದ ಮೇರೆಗೆ ಭಾರತಿ ಕಲ್ಯಾಣದ ಜೈಲಿಗೂ ಮತ್ತು ಹರ್ಷ್ ಟಲೇಜಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ಬಳಿಕ ದಂಪತಿ ಕಿಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಕಿಲಾ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ಅರ್ಜಿ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ದಂಪತಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

    ಶನಿವಾರ ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿತಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು.

    ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ 21 ವರ್ಷದ ಯುವಕನ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಯುವಕನಿಂದ 40 ಗ್ರಾಂ ಗಾಂಜಾ ಮತ್ತು ಇನ್ನಿತರ ನಶೆ ಪದಾರ್ಥಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೇ ಯುವಕ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದ. ಯುವಕನ ಹೇಳಿಕೆಯನ್ನಾಧರಿಸಿ ಅಧಿಕಾರಿಗಳು ಭಾರತಿ ನಿಒವಾಸದ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.

  • ಡ್ರಗ್ಸ್ ಸೇವನೆ ಒಪ್ಪಿಕೊಂಡ ಭಾರತಿ ಸಿಂಗ್, ಹರ್ಷ್ – 86.5 ಗ್ರಾಂ ಗಾಂಜಾ ವಶಕ್ಕೆ

    ಡ್ರಗ್ಸ್ ಸೇವನೆ ಒಪ್ಪಿಕೊಂಡ ಭಾರತಿ ಸಿಂಗ್, ಹರ್ಷ್ – 86.5 ಗ್ರಾಂ ಗಾಂಜಾ ವಶಕ್ಕೆ

    ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋನಿಂದ ಬಂಧನಕ್ಕೊಳಗಾಗಿರುವ ಖ್ಯಾತ ಹಾಸ್ಯ ಕಲಾವಿದೆ, ನಿರೂಪಕಿ ಭಾರತಿ ಸಿಂಗ್ ಮತ್ತು ಪತಿ ಹರ್ಷ ಲಿಂಬಾಚಿಯಾ ಡ್ರಗ್ಸ್ ಸೇವನೆ ಮಾಡುತ್ತಿರೋದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ.

    ಶನಿವಾರ ಬೆಳಗ್ಗೆ ಭಾರತಿ ಸಿಂಗ್ ನಿವಾಸ ಮತ್ತು ಪ್ರೊಡೆಕ್ಷನ್ ಕಚೇರಿತಯ ಮೇಲೆ ಎನ್‍ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಎರಡೂ ಸ್ಥಳಗಳಿಂದ 86.5 ಗ್ರಾಂ ಗಾಂಜಾ ಲಭ್ಯವಾಗಿತ್ತು. ಈ ಹಿನ್ನೆಲೆ ವಿಚಾರಣೆಗಾಗಿ ದಂಪತಿಯನ್ನ ಎನ್‍ಸಿಬಿ ಕಚೇರಿಗೆ ಕರೆತರಲಾಗಿತ್ತು. 15 ಗಂಟೆ ವಿಚಾರಣೆ ನಡೆಸಿದ ಬಳಿಕ ರಾತ್ರಿ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿತ್ತು. ಇಂದು ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ತಮ್ಮ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

    ನವೆಂಬರ್ 21ರಂದು ಮುಂಬೈನ ಖಾರದಂಡಾ ಇಲಾಖೆಯ 21 ವರ್ಷದ ಯುವಕನ ನಿವಾಸದ ಮೇಲೆ ದಾಳಿ ನಡೆಸಿ ಆತನನ್ನು ಬಂಧಿಸಲಾಗಿತ್ತು. ಯುವಕನಿಂದ 40 ಗ್ರಾಂ ಗಾಂಜಾ ಮತ್ತು ಇನ್ನಿತರ ನಶೆ ಪದಾರ್ಥಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಇದೇ ಯುವಕ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಹೇಳಿದ್ದ. ಯುವಕನ ಹೇಳಿಕೆಯನ್ನಾಧರಿಸಿ ಅಧಿಕಾರಿಗಳು ಭಾರತಿ ನಿಒವಾಸದ ಮೇಲೆ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ.

  • ಡ್ರಗ್ಸ್ ಕೇಸ್ – ಅರ್ಜುನ್ ರಾಂಪಾಲ್‍ಗೆ ಎನ್‍ಸಿಬಿ ಸಮನ್ಸ್

    ಡ್ರಗ್ಸ್ ಕೇಸ್ – ಅರ್ಜುನ್ ರಾಂಪಾಲ್‍ಗೆ ಎನ್‍ಸಿಬಿ ಸಮನ್ಸ್

    – 2 ಬಾರಿ ವಿಚಾರಣೆಗೆ ಹಾಜರಾಗಿರೋ ರಾಂಪಾಲ್ ಗೆಳತಿ

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಗೆ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಸಮನ್ಸ್ ನೀಡಿದೆ. ನವೆಂಬರ್ 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಬುಧವಾರ ಎನ್‍ಸಿಬಿ ಅಧಿಕಾರಿಗಳ ಮುಂದೆ ರಾಂಪಾಲ್ ಗೆಳತಿ ಗ್ಯಾಬ್ರಿಯೆಲಾ ಹಾಜರಾಗಿದ್ದರು. ಇಂದು ಸಹ ಮತ್ತೆ ಗ್ಯಾಬ್ರಿಯೆಲಾರನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

    ನವೆಂಬರ್ 9ರಂದು ಮುಂಬೈನ ಬಾಂದ್ರಾ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದರು. ಈ ವೇಳೆ ನಿಷೇಧಿತ ಮಾತ್ರೆಗಳು (ಡ್ರಗ್ಸ್) ಲಭ್ಯವಾಗಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಸಿಕ್ಕ ವಸ್ತುಗಳ ಬಗ್ಗೆ ಅರ್ಜುನ್ ರಾಂಪಾಲ್ ಮತ್ತು ಗೆಬ್ರಿಯೆಲಾ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಎನ್‍ಸಿವಿ ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸುತ್ತಿದೆ. ಮನೆಯಲ್ಲಿ ಲಭ್ಯವಾಗಿರುವ ನಿಷೇಧಿತ ನಶೆ ಮಾತ್ರೆಗಳು ಹೇಗೆ ಬಂತು ಎಂಬುದರ ಕುರಿತು ರಾಂಪಾಲ್ ಉತ್ತರ ನೀಡಿಲ್ಲ ಎನ್ನಲಾಗಿದೆ. ದಾಳಿ ವೇಳೆ ಮೊಬೈಲ್ ಮತ್ತು ಲ್ಯಾಪ್‍ಟಾಪ್ ಸಹ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಫ್ತಿಯಲ್ಲಿ ಎನ್‍ಸಿಬಿ ದಾಳಿ – ಡ್ರಗ್ಸ್ ಖರೀದಿಸುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ

    ಕೆಲ ದಿನಗಳ ಹಿಂದೆ ಗೆಬ್ರಿಯೆಲಾ ಸೋದರ ಅಗಿಸಿಲಾಓಸ್ ನನ್ನು ಪುಣೆಯ ಲೋನಾವಾಲಾ ಬಳಿ ಬಂಧಿಸಲಾಗಿತ್ತು. ಬಂಧಿತ ಅಗಿಸಿಲಾಓಸ್ ಬಾಲಿವುಡ್ ಅಂಗಳದ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗ್ತಿದೆ. ಅಗಿಸಿಲಾಓಸ್ ಪೆಡ್ಲರ್ ಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವ ಆರೋಪ ಸಹ ಕೇಳಿ ಬಂದಿದೆ. ಮೃತ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಶೌವಿಕ್ ಜೊತೆ ಅಗಿಸಿಲಾಓಸ್ ನಿರಂತರ ಸಂಪರ್ಕದಲ್ಲಿದ್ದ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಎನ್‍ಸಿಬಿ ವಿರುದ್ಧ ಹೈಕೋರ್ಟ್ ಮೊರೆ ಹೋದ ಸುಶಾಂತ್ ಮನೆ ಸಹಾಯಕ

  • ಡ್ರಗ್ಸ್ ಕೇಸ್ ಬಗ್ಗೆ ನನಗೇನೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ

    ಡ್ರಗ್ಸ್ ಕೇಸ್ ಬಗ್ಗೆ ನನಗೇನೂ ಗೊತ್ತಿಲ್ಲ: ರುದ್ರಪ್ಪ ಲಮಾಣಿ

    ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪುತ್ರ ದರ್ಶನ್ ಕುಮಾರ್ ಬಂಧನದ ಕುರಿತು ಮಾಜಿ ಸಚಿವ ರುದ್ರಪ್ಪ ಲಮಾಣಿ ತಮ್ಮ ಮೊದಲ ಪ್ರತಿಕ್ರಿಯೆಯನ್ನ ನೀಡಿದ್ದಾರೆ. ಡ್ರಗ್ಸ್ ಕೇಸ್ ಬಗ್ಗೆ ನನಗೇನೂ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ಮಗನ ಬಂಧನವಾಗಿರುವ ವಿಷಯ ತಿಳಿಯಿತು ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರುದ್ರಪ್ಪ ಲಮಾಣಿ, ಮಾಧ್ಯಮಗಳ ಮೂಲಕವೇ ಮಗನ ಬಂಧನವಾಗಿರುವ ವಿಷಯ ನನಗೆ ತಿಳಿದಿದೆ. ಯಾವುದೋ ಪಾರ್ಸೆಲ್ ಬಿಡಿಸಿಕೊಂಡು ಬಂದಿರೋ ಹುಡುಗು ಕಸ್ಟಮ್ಸ್ ಅಧಿಕಾರಿಗಳಿಗೆ ನೀಡಿದ್ದಾನೆ. ನಂತರ ಅದೇ ಪಾರ್ಸೆಲ್ ಸಿಸಿಬಿ ಅಧಿಕಾರಿಳಿಗೆ ಹಸ್ತಾಂತರಿಸಲಾಗಿದೆ. ಪಾರ್ಸೆಲ್ ನೀಡಿರುವ ಕೆಲವರ ಹೆಸರು ಹೇಳಿದ್ದು, ಅದರಲ್ಲಿ ಪುತ್ರ ದರ್ಶನ್ ಹೆಸರು ಇದೆಯಂತೆ. ಹಾಗಾಗಿ ಸಿಸಿಬಿ ಅಧಿಕಾರಿಗಳು ಮಗನನ್ನು ವಿಚಾರಣೆಗೆ ಒಳಪಡಿಸಿರಬಹುದು. ಹೆಚ್ಚಿನ ಮಾಹಿತಿ ನನಗೂ ಗೊತ್ತಿಲ್ಲ ಎಂದ್ರು.

    ಪುತ್ರ ರಾಣೇಬೆನ್ನೂರಿನ ಕಾಲೇಜಿನಲ್ಲಿ ಓದುತ್ತಿದ್ದಾನೆ. ಈ ವರ್ಷ ಯಾವುದೇ ಕಾಲೇಜಿಗೆ ದಾಖಲಾಗಿಲ್ಲ. ವಿಚಾರಣೆ ನಡೆಸುವದರಲ್ಲಿ ಯಾವುದೇ ತಪ್ಪಿಲ್ಲ. ಯಾವ ಅಧಿಕಾರಿಗಳು ನನ್ನ ಗಮನಕ್ಕೆ ಬಂದಿಲ್ಲ. ಇಂದು ಬೆಂಗಳೂರಿಗೆ ಬಂದಾಗ ಮಧ್ಯಾಹ್ನ ಸುಮಾರು 1.30ಕ್ಕೆ ಬಂಧನದ ವಿಷಯ ತಿಳಿಯಿತು. ನಮ್ಮ ಶ್ರೀಮತಿಯವರಿಗೂ ಈ ವಿಷಯ ಗೊತ್ತಿಲ್ಲ ಎಂದು ತಿಳಿಸಿದರು.

    ಏನಿದು ಪ್ರಕರಣ?: ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಮತ್ತು ಸುನಿಶ್ ತಲೆ ಮರೆಸಿಕೊಂಡಿದ್ದರು. ಈ ಇಬ್ಬರಿಗೆ ದರ್ಶನ್ ಗೋವಾದಲ್ಲಿ ಆಶ್ರಯ ನೀಡಿದ ಆರೋಪಗಳು ಕೇಳಿ ಬಂದಿವೆ. ದರ್ಶನ್ ಲಮಾಣಿ ಸಹ ಆರೋಪಿಗಳಿಬ್ಬರ ಜೊತೆ ನಿಕಟ ಸಂಪರ್ಕ ಮತ್ತು ಅವರ ಜೊತೆಯಲ್ಲಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

  • ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್

    ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್

    ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಮತ್ತು ಸುನಿಶ್ ತಲೆ ಮರೆಸಿಕೊಂಡಿದ್ದರು. ಈ ಇಬ್ಬರಿಗೆ ದರ್ಶನ್ ಗೋವಾದಲ್ಲಿ ಆಶ್ರಯ ನೀಡಿದ ಆರೋಪಗಳು ಕೇಳಿ ಬಂದಿವೆ. ದರ್ಶನ್ ಲಮಾಣಿ ಸಹ ಆರೋಪಿಗಳಿಬ್ಬರ ಜೊತೆ ನಿಕಟ ಸಂಪರ್ಕ ಮತ್ತು ಅವರ ಜೊತೆಯಲ್ಲಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.