Tag: Drugs Case

  • ಡ್ರಗ್ಸ್ ಪ್ರಕರಣದ ಚೈನ್ ಲಿಂಕ್ ದೊಡ್ಡದಿದೆ: ಮಂಗ್ಳೂರು ಪೊಲೀಸ್ ಕಮಿಷನರ್

    ಡ್ರಗ್ಸ್ ಪ್ರಕರಣದ ಚೈನ್ ಲಿಂಕ್ ದೊಡ್ಡದಿದೆ: ಮಂಗ್ಳೂರು ಪೊಲೀಸ್ ಕಮಿಷನರ್

    – ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದಿರೋದು ಬೇರೆ ಕಾರಣ

    ಮಂಗಳೂರು: ಡ್ರಗ್ಸ್ ಪ್ರಕರಣ ಚೈನ್ ಲಿಂಕ್ ದೊಡ್ಡದಿದೆ. ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಇರೋದು ಬೇರೆ ಕಾರಣ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರ. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ ಎಂದಿದ್ದಾರೆ.

    ಪ್ರಕರಣದಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಈ ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

    ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು. ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

  • ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

    ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

    – ಉಪಚುನಾವಣೆಗೆ ಏನೂ ತೀರ್ಮಾನ ಮಾಡಿಲ್ಲ
    – ಏಳೆಂಟು ಮಂದಿ ಆಕಾಂಕ್ಷಿಗಳು ಇದ್ದಾರೆ

    ಬೆಳಗಾವಿ: ರಾಜದ್ಯಲ್ಲಿ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ರೂಪ ಪಡೆದುಕೊಳ್ಳುತ್ತಿದ್ದು, ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತೆಗೆದುಕೊಂಡಿಲ್ವಾ ಎಂದು ಪ್ರಶ್ನಿಸಿದ್ದಾರೆ.

    ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಡ್ರಗ್ಸ್ ಜಾಲದಲ್ಲಿ ಸಿಲುಕಿಕೊಂಡ ಅನುಶ್ರೀ ಸೇರಿ ಇತರರ ಜೊತೆ ಕೆಲವು ಪ್ರಭಾವಿಗಳ ನಂಟು ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನನಗೆ ಆ ಬಗ್ಗೆ ಗೊತ್ತಿಲ್ಲಪ್ಪ ನಶೆ-ಪಶೆ ಎಲ್ಲಾ ಗೊತ್ತಿಲ್ಲ. ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ?, ಇವರೇನಾ ತಗೊಂಡಿರೋದು?, ಟಿವಿಯಲ್ಲಿ ಬರೀ ಸಿನಿಮಾ ಇಂಡಸ್ಟ್ರಿಯವರಲ್ಲಿರೋರನ್ನ ನೋಡಿ ಆಶ್ಚರ್ಯ ಆಗ್ತಿದೆ ಎಂದರು.

    ಇದೇ ವೇಳೆ ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನಾನು ಏನೂ ತೀರ್ಮಾನ ಮಾಡಲ್ಲ, ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಒಂದು ಸಮಿತಿ ಮಾಡಿದ್ದೇನೆ. ಅವರು ಎಲ್ಲರ ಜೊತೆ ಸಭೆ ಮಾಡಿ ಶಿಫಾರಸು ಮಾಡ್ತಾರೆ. ನಾನು, ನನ್ನ ಶಾಸಕಾಂಗ ಪಕ್ಷದ ನಾಯಕರು, ವಿಪಕ್ಷ ನಾಯಕರು ಕುಳಿತು ಚರ್ಚೆ ಮಾಡ್ತೇವೆ ಎಂದರು.

    ಆರ್.ಆರ್.ನಗರ ಕ್ಷೇತ್ರದಲ್ಲಿ ದಿವಂಗತ ಡಿ.ಕೆ ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೆಲವರು ಶಿಫಾರಸು ಮಾಡ್ತಿದ್ದಾರೆ. ಕೆಲವು ಹಿರಿಯ ನಾಯಕರು ಟಿಕೆಟ್ ನೀಡುವಂತೆ ಶಿಫಾರಸು ಮಾಡಿದ್ದಾರೆ. ಅವರ ತಂದೆಯವರು ಏನೋ ನಮ್ಮ ಪಕ್ಷ ಬಿಟ್ಟು ಹೋಗಿದ್ರು, ಮಗಳದ್ದು ಪಾಪ ಏನಿದೆ. ಕೆಲವರು ಸಲಹೆ ಕೊಡ್ತಿದ್ದಾರೆ, ನಾನು ಇನ್ನೂ ಈ ಬಗ್ಗೆ ಚರ್ಚೆ ನಡೆಸಿಲ್ಲ. ಏಳೆಂಟು ಜನ ಆಕಾಂಕ್ಷಿಗಳು ಇದ್ದಾರೆ, ಬಾಲಕೃಷ್ಣ, ಎಂ. ಶ್ರೀನಿವಾಸ್ ಬಾಬು ಇದ್ದಾರೆ. ನಮ್ಮ ಡಿಸಿಸಿ ಪ್ರೆಸಿಡೆಂಟ್ ಸೇರಿ ಹಲವು ಜನರು ಇದ್ದಾರೆ ಎಂದು ಹೇಳಿದರು.

    ಮುನಿರತ್ನಗೆ ಬಿಜೆಪಿ ಟಿಕೆಟ್ ನೀಡದೇ ಇದ್ರೆ ಕಾಂಗ್ರೆಸ್ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಪಾರ್ಟಿಗೆ ಯಾರ ಬೇಕಾದರೂ ಅರ್ಜಿ ಕೊಡಬಹುದು. ಅರ್ಜಿಗಳೆಲ್ಲವೂ ಬರಲಿ, ಆಮೇಲೆ ಕುಳಿತುಕೊಂಡು ಮಾತನಾಡೋಣ. ಶಿರಾ ಕ್ಷೇತ್ರದಲ್ಲಿ ಎಲ್ಲರೂ ಸೇರಿ ಒಂದು ಅಭಿಪ್ರಾಯಕ್ಕೆ ಬಂದಿದ್ದಾರೆ. ಅವರು ಕಳಿಸಿದ ಅಭ್ಯರ್ಥಿಯನ್ನು ದೆಹಲಿಗೆ ಶಿಫಾರಸು ಮಾಡುವೆ. ಬೆಳಗಾವಿ ಲೋಕಸಭಾ ಅಭ್ಯರ್ಥಿ ವಿಚಾರ ಬಗ್ಗೆ ನನಗೇನೂ ಗೊತ್ತಿಲ್ಲ. ಫಸ್ಟ್ ಪಾರ್ಟಿ ಕಟ್ಟುವ ಕೆಲಸ, ಪಕ್ಷ ಸಂಘಟನೆ ಮಾಡಲು ಒತ್ತು. ವ್ಯಕ್ತಿ ಮೇಲೆ ನೆಕ್ಸ್ಟ್ ವಿಚಾರ, ಪಾರ್ಟಿ ಫಸ್ಟ್ ಎಂದು ತಿಳಿಸಿದರು.

    ಇದೇ ವೇಳೆ ಯಾವಾಗ ಬೇಕಾದರೂ ಸರ್ಕಾರ ಬೀಳಬಹುದು ಎಂಬ ಸಚಿವ ಆನಂದ್ ಸಿಂಗ್ ಹೇಳಿಕೆ ಕುರಿತು ಮಾತನಾಡಿ, ಅವರು ಹೇಳ್ತಾರೋ, ಬೆಳಗಾವಿಯ ಕೆಲವರು ಹೇಳ್ತಾರೋ ಯಾರ್ಯಾರೋ ಏನೇನೋ ಹೇಳ್ತಾರೆ. ಅದಕ್ಕೆಲ್ಲ ನಾನೇಕೆ ರಿಯ್ಯಾಕ್ಟ್ ಮಾಡಬೇಕು?, ಭದ್ರವಾಗಿ ಇರ್ತಿವಿ, ಬಿಗಿಯಾಗಿ ಇರ್ತೀವಿ ಆರು ತಿಂಗಳ ಇರ್ತೀವಿ, 150 ಜನ ಇದೀವಿ, ಇನ್ನೂ ಹತ್ತು ವರ್ಷ ಇರ್ತೀವಿ ಅಂತ ಬಿಎಸ್‍ವೈ ಹೇಳ್ತಾರೆ, ಅದಕ್ಕೆಲ್ಲ ನಾನೇಕೆ ರಿಯ್ಯಾಕ್ಟ್ ಮಾಡಲಿ ಎಂದು ಹೇಳಿದರು.

  • ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    ಅನುಶ್ರೀ ವಿಚಾರಣೆ ನಡೆಸಿದ್ದ ಇನ್ಸ್‌ಪೆಕ್ಟರ್ ವರ್ಗಾವಣೆ – ಸ್ಥಳೀಯ ಶಾಸಕರ ಪ್ರಭಾವದ ಶಂಕೆ

    – ದೆಹಲಿಯಿಂದ್ಲೂ ಪೊಲೀಸರಿಗೆ ಒತ್ತಡ
    – 6 ಸಿಮ್ ಬಳಸ್ತಿದ್ದ ನಿರೂಪಕಿ

    ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಅವರನ್ನು ವಿಚಾರಣೆ ನಡೆಸಿದ್ದ ಇನ್ಸ್ ಪೆಕ್ಟರ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದ್ದು, ಇದರ ಹಿಂದೆ ಸ್ಥಳೀಯ ಶಾಸಕರೊಬ್ಬರ ಕೈವಾಡವಿದೆ ಎಂಬ ಮಾಹಿತಿ ಸಿಸಿಬಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ಮಂಗಳೂರು ಸಿಸಿಬಿ ಪೊಲೀಸರು ವರ್ಗಾವಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮೊದಲು ಡಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದರು. ಈ ವೇಳೆ ಕಿಶೋರ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಶಾಸಕರು ಒತ್ತಡ ಹಾಕಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಂಡ್ಯದ ನಿಮಿಷಾಂಬ ದೇಗುಲಕ್ಕೆ ಅನುಶ್ರೀ ಭೇಟಿ – ವಿಶೇಷ ಪೂಜೆ ಸಲ್ಲಿಕೆ

    ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈ ಬಿಡುವಂತೆ ಒತ್ತಾಯ ಹೇರಿದ್ದರು. ಆದರೆ ಶಾಸಕನ ಒತ್ತಾಯಕ್ಕೆ ಶಿವಪ್ರಕಾಶ್ ಮಣಿದಿರಲಿಲ್ಲ. ಹೀಗಾಗಿ ಇದೀಗ ಶಿವಪ್ರಕಾಶ್ ನೇತೃತ್ವದಲ್ಲೇ ನಡೆಯುತ್ತಿದ್ದ ಕಂಪ್ಲೀಟ್ ಡ್ರಗ್ಸ್ ಪ್ರಕರಣ ತನಿಖಾ ಉತ್ತುಂಗದಲ್ಲಿದ್ದಾಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟು ಮಾತ್ರವಲ್ಲದೆ ಅನುಶ್ರೀ ಬಚಾವ್ ಮಾಡಲು ದೆಹಲಿಯಿಂದಲೂ ಪ್ರಭಾವ ಬೀರಲಾಗುತ್ತಿದೆ. ದೆಹಲಿಯಲ್ಲಿರುವ ಪ್ರಭಾವಿ ನಾಯಕರು ಕೂಡ ಪ್ರಕರಣದಿಂದ ಅನುಶ್ರೀಯನ್ನು ಕೈಬಿಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ. ಇದನ್ನೂ ಓದಿ: ಡ್ರಗ್ಸ್ ಕೇಸ್- ಅನುಶ್ರೀ ಮೊಬೈಲ್‍ನಿಂದ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ

    ಅನುಶ್ರೀ ದೂರವಾಣಿ ಕರೆಗಳ ಸಾಕ್ಷ್ಯ ಕೆದಕಿರುವ ಸಿಸಿಬಿಗೆ ಅಚ್ಚರಿಯಾಗಿದೆ. 6 ಸಿಮ್ ಬಳಸ್ತಿದ್ದ ಅನುಶ್ರೀ, ಸಿಸಿಬಿ ನೋಟಿಸ್ ಬೆನ್ನಲ್ಲೇ ನಾಲ್ವರು ಪ್ರಭಾವಿಗಳಿಗೆ ಫೋನ್ ಮಾಡಿದ್ದಾರೆ. ಮಾಜಿ ಸಿಎಂ, ಮಾಜಿ ಸಿಎಂ ಮಗ ಹಾಗೂ ಕರಾವಳಿ ಭಾಗದ ಪ್ರಭಾವಿ ರಾಜಕಾರಣಿಗೂ ಕರೆ ಮಾಡಿದ್ದರು. 3 ಪಕ್ಷಗಳ ಮೂವರು ನಾಯಕರಿಗೆ ಕಾಲ್ ಮಾಡಿದ್ದರು ಎಂದು ದೂರವಾಣಿ ಕರೆ ದಾಖಲೆ ಪರಿಶೀಲನೆ ವೇಳೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

  • ರಾಗಿಣಿ, ಸಂಜನಾ ಇರುವ ಜೈಲು ಕೊಠಡಿಗೆ ಬಂದಿದೆ ಹೊಸ ಟಿವಿ

    ರಾಗಿಣಿ, ಸಂಜನಾ ಇರುವ ಜೈಲು ಕೊಠಡಿಗೆ ಬಂದಿದೆ ಹೊಸ ಟಿವಿ

    ಬೆಂಗಳೂರು: ಜೈಲಿನಲ್ಲಿ ದುಡ್ಡು ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ ಎಂಬ ಆರೋಪ ಹೊಸದೇನಲ್ಲ. ಇದಕ್ಕೆ ಪೂರಕವಾಗಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿಯರಾದ ಸಂಜನಾ ಮತ್ತು ರಾಗಿಣಿ ಐಶಾರಾಮಿ ಜೀವನ ನಡೆಸ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

    ಜೈಲಿನ ಕ್ವಾರಂಟೈನ್ ಕೇಂದ್ರದಿಂದ ಎರಡು ದಿನಗಳ ಹಿಂದೆ ಹಳೆ ಜೈಲಿಗೆ ಶಿಫ್ಟ್ ಆಗಿರುವ ಸಂಜನಾ, ರಾಗಿಣಿಗೆ ಫೈವ್ ಸ್ಟಾರ್ ಹೋಟೆಲ್ ಮಾದರಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಿನ್ನೆ ಸಂಜೆ ರಾಗಿಣಿ, ಸಂಜನಾ ಇರುವ ಜೈಲು ಕೊಠಡಿಗೆ ಹೊಸ ಟಿವಿ ಬಂದಿದೆ. ರಾಗಿಣಿ ಆಪ್ತರು ತಂದು ಕೊಟ್ಟಿದ್ದ ಟಿವಿಯನ್ನು ಜೈಲು ಸಿಬ್ಬಂದಿ ಬಂದು ಫಿಟ್ ಮಾಡಿ ಕೊಟ್ಟಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಡ್ರಗ್ಸ್‌ ನಟಿಯರ ಕೂದಲ ಸ್ಯಾಂಪಲ್‌ ವಾಪಸ್‌ ಕಳುಹಿಸಿದ ಎಫ್‌ಎಸ್‌ಎಲ್‌ ಲ್ಯಾಬ್‌

    ಸಂಜನಾ ರಾಗಿಣಿಗೆ ಬೇಕಾದ ತಿಂಡಿ, ಊಟ ಎಲ್ಲವನ್ನು ಜೈಲು ಸಿಬ್ಬಂದಿ ಖುದ್ದಾಗಿ ಒದಗಿಸ್ತಿದ್ದಾರೆ. ಇಬ್ಬರು ನಟಿಯರು ಜೈಲಿನಲ್ಲಿ ಆರಾಮವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಜೈಲು ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಇಡಿ ವಿಚಾರಣೆ ವೇಳೆ, ನಟಿ ಸಂಜನಾ, ಬಡ್ಡಿ ವ್ಯವಹಾರ ಮಾಡುತ್ತಿದ್ದ ಬಗ್ಗೆಯೂ ಮಾಹಿತಿ ಬಯಲಾಗಿದೆ. ಹಲವು ಉದ್ಯಮಿಗಳಿಗೆ, ಮಾಲ್‍ಗಳ ಮಾಲೀಕರಿಗೆ ಕೋಟಿ ಕೋಟಿ ಸಾಲ ಕೊಟ್ಟಿದ್ದೇನೆ. ಕೊಟ್ಟ ಸಾಲವನ್ನು ಯಾರಾದರೂ ವಾಪಸ್ ನೀಡದಿದ್ರೆ ನಮ್ಮ ಹುಡುಗರ ಮೂಲಕ ವಸೂಲಿ ಮಾಡಿಸ್ತಿದ್ದೆ ಎಂದು ಸಂಜನಾ ಹೇಳಿದ್ದಾರೆ ಎನ್ನಲಾಗಿದೆ.

     

  • ಡ್ರಗ್ಸ್‌ ತನಿಖೆ – ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ದಿಢೀರ್‌ ವರ್ಗಾವಣೆ

    ಡ್ರಗ್ಸ್‌ ತನಿಖೆ – ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ದಿಢೀರ್‌ ವರ್ಗಾವಣೆ

    ಮಂಗಳೂರು: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಶಿವಪ್ರಕಾಶ್ ನಾಯ್ಕ್ ದಿಢೀರ್‌ ವರ್ಗಾವಣೆ ಆಗಿದ್ದಾರೆ.

    ಶಿವಪ್ರಕಾಶ್ ನಾಯ್ಕ್ ಅವರನ್ನು ವರ್ಗಾವಣೆ ಮಾಡಿದ್ದು ಅವರ ಜಾಗಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಆಗಿದ್ದ ಮಹೇಶ್ ಪ್ರಸಾದ್ ನೇಮಕವಾಗಿದ್ದಾರೆ. ಡ್ರಗ್ ಪೆಡ್ಲರ್ ಕಿಶೋರ್‌ನನ್ನು ಬಂಧಿಸಿದ್ದಕ್ಕೆ ಸಿಸಿಬಿ ಇನ್ಸ್‌ಪೆಕ್ಟರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ಯಾ ಎಂಬ ಅನುಮಾನ ಎದ್ದಿದೆ.

    ಕಿಶೋರ್ ಶೆಟ್ಟಿಯನ್ನು ಪ್ರಕರಣದಿಂದ ಕೈಬಿಡಲು ಶಿವಪ್ರಕಾಶ್‌ ಮೇಲೆ ಒತ್ತಡ ಬಂದಿತ್ತು.  ಕರಾವಳಿಯ ಪ್ರಭಾವಿ ಶಾಸಕರು  ಬಂಧಿಸದಂತೆ ಒತ್ತಡ ಹೇರಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

    ರಾಜಕಾರಣಿಯ ಒತ್ತಡಕ್ಕೆ ಮಣಿಯದೇ ಕಿಶೋರ್‌ನನ್ನು ಶಿವಪ್ರಕಾಶ್ ನಾಯ್ಕ್ ಬಂಧಿಸಿದ್ದರು. ಈ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮತು ಮಂಗಳೂರು ಪೊಲೀಸ್‌ ವಲಯದಿಂದ ಕೇಳಿ ಬರುತ್ತಿದೆ.

    ನಿರೂಪಕಿ ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಗುರುವಾರ ಸಿಕ್ಕಿತ್ತು.

    ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್‌ನನ್ನು ಕೈ ಬಿಡುವಂತೆ ಕರಾವಳಿಯ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ.

    ಒತ್ತಡ ಯಾಕೆ?
    ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಆ ಶಾಸಕನಿಗೆ ಆಪ್ತರಾಗಿದ್ದಾರೆ. ಆ ಪ್ರತಿಷ್ಠಿತ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ರೂವಾರಿ. ಕಿಶೋರ್ ಕೂಡ ಆತನ ಅಣತಿಯಂತೆ ಬುಕ್ಕಿಗಳಿಗೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದ. ಆ ಪ್ರತಿಷ್ಠಿತ ವ್ಯಕ್ತಿ ರಾಜಕೀಯ ಒತ್ತಡ ತಂದು ಕಿಶೋರ್ ನನ್ನು ಪ್ರಕರಣದಿಂದ ಕೈ ಬಿಡುವ ಯೋಜನೆ ಹಾಕಿದ್ದ. ಆದರೆ ಆ ಯೋಜನೆಯನ್ನು ಸಿಸಿಬಿ ಪೊಲೀಸರು ಸಂಪೂರ್ಣ ಪ್ಲಾಪ್ ಮಾಡಿದ್ದಾರೆ ಎನ್ನಲಾಗಿದೆ.

  • ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಕಣ್ಣೀರಿಟ್ಟ ಅನುಶ್ರೀಗೆ ಧೈರ್ಯ ತುಂಬಿದ ಗೀತಾಭಾರತಿ ಭಟ್

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧದ ಅಭಿಪ್ರಾಯಗಳಿಂದ ಮನನೊಂದು ವೀಡಿಯೋ ಮಾಡಿ ಕಣ್ಣೀರು ಹಾಕಿದ ನಿರೂಪಕಿ, ನಟಿ ಅನುಶ್ರೀಗೆ ಕಿರುತೆರೆ ನಟಿ ಗೀತಾಭಾರತಿ ಭಟ್ ಧೈರ್ಯ ತುಂಬಿದ್ದಾರೆ.

    ಅನುಶ್ರೀ ಅವರು ಇನ್ಸ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ ವೀಡಿಯೋಗೆ ಕಮೆಂಟ್ ಮಾಡಿರುವ ‘ಬ್ರಹ್ಮಗಂಟು’ ನಟಿ, ನಾವೆಲ್ಲರೂ ನಿಮ್ಮ ಜೊತೆಗಿದ್ದೇವೆ. ಧೈರ್ಯವಾಗಿದ್ದು, ಎದುರಿಸಿ. ನನ್ನ ಪ್ರೀತಿ ಹಾಗೂ ಧೈರ್ಯ ಸದಾ ನಿಮ್ಮೊಂದಿಗಿರುತ್ತೆ ಎಂದು ಸಾಂತ್ವನ ನೀಡಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಭಾರತಿ ಭಟ್ ಕೂಡ ಈ ಹಿಂದೆ ವಿಚಾರಣೆ ಎದುರಿಸಿದ್ದರು. ಅಲ್ಲದೆ ಮುಂದೆ ವಿಚಾರಣೆಗೆ ಕರೆದರೂ ಹಾಜರಾಗುವುದಾಗಿ ತಿಳಿಸಿದ್ದರು.

    ವೀಡಿಯೋದಲ್ಲಿ ಅನುಶ್ರೀ ಹೇಳಿದ್ದೇನು?
    20020ರ ಸೆಪ್ಟೆಂಬರ್ 24 ನನ್ನ ಜೀವನದ ಯಾವ ಘಟ್ಟದಲ್ಲೂ ನಾನು ಮತ್ತೆ ನೆನಪಿಸಿಕೊಳ್ಳೋದಕ್ಕೆ ಇಷ್ಟಪಡದಿರುವಂತಹ ದಿನ. 12 ವರ್ಷಗಳ ಹಿಂದೆ ನಾನು ಡ್ಯಾನ್ಸ್ ರಿಯಾಲಿಟಿ ಶೋ ಒಂದರಲ್ಲಿ ಗೆದ್ದಾಗ, ಆ ದಿನ ಭವಿಷ್ಯದಲ್ಲಿ ಮುಳ್ಳಾಗುತ್ತೆ ಅಂತ ಅಂದುಕೊಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನೋಟಿಸ್ ಬಂದಿರುವುದು ನನಗೆ ಬೇಜಾರಾಗಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿ ಅಂತ ಆಗುವುದಿಲ್ಲ. ಆ ವಿಚಾರದಲ್ಲಿ ನನ್ನನ್ನು ಬಿಂಬಿಸಿದ ರೀತಿ ನನಗೆ ತುಂಬಾನೇ ನೋವು ಮಾಡಿತ್ತು. ನೋವು ತುಂಬಾ ಸಣ್ಣ ಪದ. ಕಳೆದ ಒಂದು ವಾರದಿಂದ ನಮ್ಮ ಮನೆಯವರ ನೆಮ್ಮದಿಯನ್ನು ಹಾಳು ಮಾಡಿತ್ತು. ಆದರು ಕೂಡ ಈ ಕಷ್ಟಕಾಲದಲ್ಲಿ ಏನೂ ಹೆಳದೆ, ಏನೂ ಕೇಳದೆ ಅನುಶ್ರೀ ನಿವೇನು ಅಂತ ನಮಗೆ ಚೆನ್ನಾಗಿ ಗೊತ್ತು. ನಿಮ್ಮ ಮೇಲೆ ನಮಗೆ ಅಪಾರವಾದ ನಂಬಿಕೆ ಇದೆ ಅಂತ ನನ್ನ ಜೊತೆ ನಿಂತಿರುವ ಎಲ್ಲಾ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಇದನ್ನು ನಾನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದಾರೆ.

    ಇದನ್ನು ಮೀರಿ ಕೂಡ ಸುತ್ತಮುತ್ತ ಕೆಲವೊಂದಷ್ಟು ಅಭಿಪ್ರಾಯಗಳು, ವಿಚಾರಗಳು, ಅಂತೆಕಂತೆಗಳು ಇದು ನಮ್ಮ ನೆಮ್ಮದಿನ ತುಂಬಾನೇ ಹಾಳು ಮಾಡುತ್ತಿದೆ. ದಯಮಾಡಿ ಇಂತಹ ವಿಚಾರಗಳನ್ನು ಹರಿದಾಡಿಸುವ ಮುನ್ನ ಒಂದು ಬಾರಿ ನಮ್ಮ ಮನಸ್ಥಿತಿ ಬಗ್ಗೆ ಯೋಚನೆ ಮಾಡಿ. ನಾನಿಷ್ಟೆ ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಇಷ್ಟೊಂದು ಕಷ್ಟದ ದಿನಗಳಲ್ಲಿ ನನಗೆ ನೆರಳಾಗಿ ನಿಂತಿರುವ ನನ್ನ ಕುಟುಂಬ, ನನ್ನ ತಂಡ, ಸ್ನೇಹಿತರು ಎಲ್ಲರಿಗೂ ಧನ್ಯವಾದಗಳು. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನನ್ನನ್ನು ಬೆಂಬಲಿಸುತ್ತಿರೋ ಮಾಧ್ಯಮಮಿತ್ರರಿಗೂ ಧನ್ಯವಾದ. ಕನ್ನಡಿಗರು ಕೊಟ್ಟ ಈ ಹೆಸರಿಗೆ ಧಕ್ಕೆ ಬರುವಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳುತ್ತಾ ಅನುಶ್ರೀ ಗದ್ಗದಿತರಾಗಿದ್ದಾರೆ.

  • 14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    14 ವರ್ಷದ ಹಿಂದೆ ಬಸ್ ಹತ್ಕೊಂಡು ಬಂದು ಬೆಂಗ್ಳೂರಲ್ಲಿ ನೆಲೆ ಕಂಡಿದ್ದೇನೆ: ಗಳಗಳನೇ ಅತ್ತ ಅನುಶ್ರೀ

    ಬೆಂಗಳೂರು: ಎಲ್ಲವನ್ನು ಬಿಟ್ಟು ಒಬ್ಬಳೇ 14 ವರ್ಷದ ಹಿಂದೆ ಬೆಂಗಳೂರಿಗೆ ಬಸ್ ಹತ್ತಿಕೊಂಡು ಬಂದು ನನ್ನ ನೆಲೆ ಕಂಡುಕೊಂಡೆ. 12 ವರ್ಷ ನಾನು ಹಾಸ್ಟೆಲ್‍ನಲ್ಲೇ ಇದ್ದೆ. ತುಂಬಾ ಕಷ್ಟಪಟ್ಟು ಇಲ್ಲಿವರೆಗೂ ಬಂದಿದ್ದೇನೆ ಎಂದು ನಿರೂಪಕಿ ಅನುಶ್ರೀ ಗಳಗಳನೇ ಅತ್ತಿದ್ದಾರೆ. ಇದನ್ನೂ ಓದಿ: ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಿಲ್ಲ, ಯಾವತ್ತೂ ಮಾಡಲ್ಲ: ಕಣ್ಣೀರಿಟ್ಟ ಅನುಶ್ರೀ

    ಪಬ್ಲಿಕ್ ಟಿವಿ ಜೊತೆ ದೂರವಾಣಿ ಮೂಲಕ ಮಾತನಾಡಿದ ಅನುಶ್ರೀ, ಕಳೆದ ಒಂದು ವಾರದಿಂದ ನನ್ನ ಬಗ್ಗೆ ಕೆಲವು ಅಭಿಪ್ರಾಯಗಳು, ಬೆಳವಣಿಗೆಗಳು ಸುತ್ತಮುತ್ತ ನಡೆಯುತ್ತಿತ್ತು. ಅಲ್ಲದೇ ಸಿಸಿಬಿ ವಿಚಾರಣೆ ಆದ ಮೇಲೂ ನನ್ನ ಬಗ್ಗೆ ಕೆಲ ಅಭಿಪ್ರಾಯಗಳು ಕೇಳಿ ಬರುತ್ತಿತ್ತು. ಹೀಗಾಗಿ ಇದಕ್ಕೆ ಉತ್ತರ ಕೊಡಬೇಕು ಎಂದು ಲೈವ್ ಬಂದು ಮಾತನಾಡಿದೆ. ಅನೇಕರು ಕಾಲ್ ಮಾಡಿ, ಮೆಸೇಜ್ ಮೂಲಕ ಅನುಶ್ರೀ ಅವರೇ ನೀವು ತಲೆ ಕೆಡಿಸಿಕೊಳ್ಳಬೇಡಿ ಎಂದು ಹೇಳುತ್ತಿದ್ದರು. ಅವರಿಗೆ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿತ್ತು ಎಂದು ಹೇಳಿದರು.

    ನಾನು, ನನ್ನ ತಾಯಿ ಮತ್ತು ಸಂಬಂಧಿಕರು ಒಂದು ವಾರದಿಂದ ಟೆನ್ಶನ್ ತೆಗೆದುಕೊಂಡಿದ್ದೀವಿ. ಈ ರೀತಿ ನೋಟಿಸ್ ಬರುತ್ತೆ ಎಂದು ನಾವ್ಯಾರು ನಿರೀಕ್ಷಿಸಿರಲಿಲ್ಲ. ಆದರೆ ಬಂದಾಗ ಎಲ್ಲರಿಗೂ ಶಾಕ್ ಆಯಿತು. ಆದರೂ ನಾನೇನು ತಪ್ಪು ಮಾಡಿಲ್ಲ, ವಿಚಾರಣೆ ಕರೆದಿದ್ದಾರೆ ಅಷ್ಟೆ ಎಂದು ಹೋಗಿ ಮಾಹಿತಿ ಕೊಟ್ಟು ಬಂದೆ. ನನಗೆ ಅವರಿಬ್ಬರ ಪರಿಚಯವಿತ್ತು ಸಿಸಿಬಿ, ಮಾಧ್ಯಮಗಳಿಗೂ ಹೇಳಿದ್ದೇನೆ ಎಂದು ಅನುಶ್ರೀ ಹೇಳಿದರು.

    ಎಲ್ಲವನ್ನು ಬಿಟ್ಟು ಒಬ್ಬಳೇ 14 ವರ್ಷದ ಹಿಂದೆ ಬೆಂಗಳೂರಿಗೆ ಬಸ್ ಹತ್ತಿಕೊಂಡು ಬಂದು ನನ್ನ ನೆಲೆ ಕಂಡುಕೊಂಡೆ. 12 ವರ್ಷ ನಾನು ಹಾಸ್ಟೆಲ್‍ನಲ್ಲೇ ಇದ್ದೆ. ತುಂಬಾ ಕಷ್ಟಪಟ್ಟು ಇಲ್ಲಿವರೆಗೂ ಬಂದಿದ್ದೇನೆ. ಆದರೆ ಪೊಲೀಸ್ ಎಂದಾಗ ಸಹಜವಾಗಿ ಯಾವ ಹುಡುಗಿಗಾದರೂ ಭಯವಾಗುತ್ತದೆ. ನನಗೂ ಅದೇ ರೀತಿ ಭಯ ಆಯಿತು. ಆದರೆ ನನ್ನ ತಾಯಿ ನನಗೆ ಧೈರ್ಯ ಕೊಟ್ಟರು. ಹೀಗಾಗಿ ವಿಚಾರಣೆಗೆ ಹೋಗಿದ್ದೆ ಎಂದರು.

    ನನ್ನ ತಾಯಿಯೇ ನನಗೆ ಶಕ್ತಿ. ನಾವು ಕಷ್ಟಪಟ್ಟು ಮೇಲೆ ಬಂದಿದ್ದೇವೆ, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ, ನಾನು ಮಾಡುವ ಕೆಲಸಕ್ಕೆ ಯಾವತ್ತೂ ಮೋಸ ಮಾಡಿಲ್ಲ. ಹೀಗಾಗಿ ನಾನ್ಯಾಕೆ ಭಯ ಪಡಲಿ ಎಂದು ಧೈರ್ಯವಾಗಿದ್ದೇನೆ. ಆದರೆ ಕೆಲ ಅಭಿಪ್ರಾಯಗಳಿಂದ ಮಾನಸಿಕವಾಗಿ ತುಂಬಾ ಕುಗ್ಗೋದೆ ಎಂದು ಅನುಶ್ರೀ ಗಳಗಳನೇ ಕಣ್ಣೀರು ಹಾಕಿದರು.

    ನೋಟಿಸ್ ಬಂದ ವೇಳೆ ಫೇಸ್‍ಬುಕ್, ಇನ್‍ಸ್ಟಾಗ್ರಾಂ ಮೆಸೇಜ್, ಫೋನ್ ಮೂಲಕ ಧೈರ್ಯ ಹೇಳಿದ್ದರು. ನನಗೆ ಪರಿಚಯ ಇಲ್ಲದವರು, ಅಜ್ಜಿ-ಅಜ್ಜಂದಿರು ಕೂಡ ನೀನು ಭಯಪಡಬೇಡ, ನಿನಗೆ ಏನು ಆಗಲ್ಲ ಎಂದು ಸಮಾಧನಾ ಮಾಡಿದರು. ಅಲ್ಲದೇ ದೇವರಲ್ಲಿ ನನಗಾಗಿ ಹರಕೆ ಕಟ್ಟಿಕೊಂಡು ಪೂಜೆ ಮಾಡಿದ್ದಾರೆ ಎಂದು ಅನುಶ್ರೀ ಕಣ್ಣೀರು ಹಾಕಿದರು.

  • ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಡ್ರಗ್ಸ್ ಕೇಸ್ ಪ್ರಕರಣ – ಡ್ಯಾನ್ಸರ್ ಕಿಶೋರ್ ಕೇಸ್ ಕೈ ಬಿಡುವಂತೆ ಕರಾವಳಿ ಶಾಸಕನಿಂದ ಒತ್ತಡ

    ಮಂಗಳೂರು: ಆ್ಯಂಕರ್ ಕಂ ನಟಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್‍ನನ್ನು ಕೈ ಬಿಡುವಂತೆ ಕರಾವಳಿಯ ಶಾಸಕರೊಬ್ಬರು ಒತ್ತಡ ಹೇರುತ್ತಿದ್ದಾರೆ. ಶಾಸಕನ ಒತ್ತಡ ಸಫಲ ಆಗಿದ್ದರೆ ಅನುಶ್ರೀ ಸೇರಿದಂತೆ ಎಲ್ಲರು ಬಚಾವ್ ಆಗುತ್ತಿದ್ದರು ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

    ಡ್ರಗ್ ಪೆಡ್ಲರ್ ಗೂ ಶಾಸಕನಿಗೂ ಇರೋ ಸಂಬಂಧ ಏನು..?
    ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯೊಬ್ಬರು ಆ ಶಾಸಕನಿಗೆ ಆಪ್ತರಾಗಿದ್ದಾರೆ. ಆ ಪ್ರತಿಷ್ಠಿತ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯ ರೂವಾರಿ. ಕಿಶೋರ್ ಕೂಡ ಆತನ ಅಣತಿಯಂತೆ ಬುಕ್ಕಿಗಳಿಗೆ ಡ್ರಗ್ಸ್ ಪಾರ್ಟಿ ಕೊಟ್ಟಿದ್ದ. ಆ ಪ್ರತಿಷ್ಠಿತ ವ್ಯಕ್ತಿ ರಾಜಕೀಯ ಒತ್ತಡ ತಂದು ಕಿಶೋರ್ ನನ್ನು ಪ್ರಕರಣದಿಂದ ಕೈ ಬಿಡುವ ಯೋಜನೆ ಹಾಕಿದ್ದ. ಆದರೆ ಆ ಯೋಜನೆಯನ್ನು ಸಿಸಿಬಿ ಪೊಲೀಸರು ಸಂಪೂರ್ಣ ಪ್ಲಾಪ್ ಮಾಡಿದ್ದಾರೆ ಎನ್ನಲಾಗಿದೆ.

    ಮತ್ತೋರ್ವ ಕೋರಿಯೋಗ್ರಾಫರ್ ಅರೆಸ್ಟ್:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಕೋರಿಯೋಗ್ರಾಫರ್‍ನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಸ್ಯಾಮ್ ಫರ್ನಾಂಡೀಸ್ ನನ್ನು ಅರೆಸ್ಟ್ ಮಾಡಲಾಗಿದ್ದು, ಈತ ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ. ಅನುಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನಟ-ನಟಿಯರ ಹೆಸರುಗಳನ್ನು ಹೇಳಿದ್ದಾನೆ. ಬೆಂಗಳೂರು, ಮಂಗಳೂರಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಕಿರುತೆರೆ ಕಲಾವಿದರು, ಡ್ಯಾನ್ಸರ್ ಗಳು ಭಾಗಿಯಾಗಿದ್ರು. ವಿಶೇಷವಾಗಿ ಕಿರುತೆರೆ ಸ್ಟಾರ್ ಗಳು ಪಾರ್ಟಿಯಲ್ಲಿ ಭಾಗಿರುವುದಾಗಿ ಹೇಳಿದ್ದಾನೆ. ಸದ್ಯ ಸ್ಯಾಮ್ ಹೇಳಿಕೆಯಿಂದ ಕಿರುತೆರೆ, ರಿಯಾಲಿಟಿ ಶೋಗಳ ಸ್ಟಾರ್ ಗಳಿಗೆ ಢವ ಢವ ಶುರುವಾಗಿದೆ.

    ಅನುಶ್ರೀ ವಿಚಾರಣೆ:
    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಕಿಶೋರ್, ತರುಣ್ ಹಾಗೂ ನೌಶೀನ್ ಎಂಬವರನ್ನು ಬಂಧಿಸಲಾಗಿತ್ತು. ವಿಚಾರಣೆಯ ವೇಳೆ ತರುಣ್, ಅನುಶ್ರೀ ಕುಡಿತಿದ್ದಳು ಅಂತ ಮಾತ್ರ ಹೇಳಿದ್ದ. ಆದರೆ ಪೊಲೀಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಬಾಯ್ಬಿಟ್ಟಿದ್ದಾನೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಪಾರ್ಟಿಯಲ್ಲಿ ಅನುಶ್ರೀ ಡ್ರಗ್ಸ್ ತೆಗೆದುಕೊಳ್ಳತ್ತಿದ್ದಳು ಎಂದು ಬಾಯ್ಬಿಟ್ಟಿದ್ದಾನೆ ಎನ್ನಲಾಗಿತ್ತು. ಡ್ರಗ್ಸ್ ಪೆಡ್ಲರ್‍ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ನಿರೂಪಕಿ ಅನುಶ್ರೀಗೆ ಈ ಹಿಂದೆ ಸಿಸಿಬಿ ನೋಟಿಸ್ ನೀಡಿತ್ತು. ಹೀಗಾಗಿ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದರು.

  • ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್‍ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!

    ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್‍ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!

    ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಬಿಗ್ ಶಾಕಿಂಗ್ ನ್ಯೂಸ್ ಒಂದು ಇದೀಗ ಹೊರಬಿದ್ದಿದೆ.

    ಡ್ರಗ್ಸ್ ಕೇಸ್ ಬೆನ್ನು ಹತ್ತಿರೋ ಪೊಲೀಸರಿಗೆ ಸಿನಿಲೋಕದ ಡ್ರಗ್ಸ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಟಿ ರಾಗಿಣಿ, ಸಂಜನಾ ಮೊಬೈಲ್‍ನಲ್ಲಿ ಸ್ಫೋಟಕ ಸಾಕ್ಷ್ಯ ದೊರೆತಿದೆ. ಅದೇನೆಂದರೆ ಡ್ರಗ್ಸ್ ಕೇಸ್‍ನಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ಸೆಕ್ಸ್ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ.

    ಬಂಧಿತ ಆರೋಪಿಗಳ ಮೊಬೈಲ್‍ನಲ್ಲಿ ಸೆಕ್ಸ್ ದಂಧೆ ಸಾಕ್ಷ್ಯ ದೊರಕಿದ್ಯಂತೆ. ಸೆಕ್ಸ್ ದಂಧೆಗಾಗಿಯೇ ಆರೋಪಿಗಳು ವಾಟ್ಸಾಪ್ ಗ್ರೂಪ್ ಮಾಡ್ಕೊಂಡಿದ್ದರು. ಆದರೆ ಡ್ರಗ್ಸ್ ಕೇಸ್ ಬಯಲಾಗ್ತಿದ್ದಂತೆ ವಾಟ್ಸಾಪ್ ಗ್ರೂಪ್‍ನ್ನೇ ಡಿಲೀಟ್ ಮಾಡಿದ್ದರು. ಬಂಧಿತ ನಟಿಯರ ಮೊಬೈಲ್‍ನಲ್ಲಿಯೂ ಸಾಕ್ಷ್ಯ ಸಿಕ್ಕಿರುವ ಬಗ್ಗೆ ಸಿಸಿಬಿ ಮೂಲಗಳಿಂದ ಪಬ್ಲಿಕ್ ಟಿವಿಗೆ  ಮಾಹಿತಿ ಲಭ್ಯವಾಗಿದೆ.

    ನಿನ್ನೆಯಷ್ಟೇ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಹಾಗೂ ಉಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ಕೋರ್ಟ್ ವಜಾಗೊಳಿಸಿತ್ತು. ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನ ನ್ಯಾಯಾಲಯ ಸೆಪ್ಟೆಂಬರ್ 21ರಂದು ನಡೆಸಿತ್ತು. ವಿಚಾರಣೆಯ ಬಳಿಕ ಆದೇಶವನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದರು. ಇತ್ತ ಮತ್ತೋರ್ವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 24ರಂದು ನ್ಯಾಯಲಯ ಮುಂದೆ ಬಂದಿತ್ತು. ವಾದ- ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದು ಆದೇಶ ಕಾಯ್ದಿರಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಇಬ್ಬರು ನಟಿಯರನ್ನು ವಿಚಾರಣೆ ನಡೆಸಲು ನ್ಯಾಯಾಲಯದಿಂದ ಐದು ದಿನ ಅನುಮತಿ ಪಡೆದುಕೊಂಡಿತ್ತು. ನ್ಯಾಯಾಲಯದ ಆದೇಶದ ಹಿನ್ನೆಲೆ ರಾಗಿಣಿ ಮತ್ತು ಸಂಜನಾ ಇಬ್ಬರು ಪರಪ್ಪನ ಅಗ್ರಹಾರದಲ್ಲಿಯೇ ಇಡಿ ವಿಚಾರಣೆ ಎದುರಿಸಿದ್ದರು.

    https://www.youtube.com/watch?v=8RVxc4NofrA&ab_channel=PublicTV%7C%E0%B2%AA%E0%B2%AC%E0%B3%8D%E0%B2%B2%E0%B2%BF%E0%B2%95%E0%B3%8D%E0%B2%9F%E0%B2%BF%E0%B2%B5%E0%B2%BF