Tag: drugs

  • ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಪೋಸ್ಟ್ ಮೂಲಕ ಡ್ರಗ್ಸ್ ಸರಬರಾಜು – ವ್ಯಕ್ತಿ ಅರೆಸ್ಟ್, 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಬೆಂಗಳೂರು: ಪೋಸ್ಟ್ ಮೂಲಕ ಡ್ರಗ್ಸ್ (Drugs ) ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ (CCB)  ಪೊಲೀಸರು ಬಂಧಿಸಿ 6.50 ಲಕ್ಷ ಮೌಲ್ಯದ ಡ್ರಗ್ಸ್ ವಶ ಪಡಿಸಿಕೊಂಡಿದ್ದಾರೆ.

    ರಿತಿಕ್ ರಾಜ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿ. ಜಾರ್ಖಂಡ್‌ನಿಂದ ನಗರಕ್ಕೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದನು. ಪೋಸ್ಟ್ ಮೂಲಕ ನಗರದ ವಿವಿಧ ಭಾಗಗಳಿಗೆ ಡ್ರಗ್ಸ್ ಸರಬರಾಜು ಮಾಡಲಾಗುತಿತ್ತು. ಇದನ್ನೂ ಓದಿ: ನಡು ರಸ್ತೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ

    ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ಬರುತ್ತಿದ್ದ ಪೋಸ್ಟ್ ಅನ್ನು ಟ್ರ್ಯಾಪ್ ಮಾಡಿದ್ದಾರೆ. ಬಳಿಕ ಪೋಸ್ಟ್ ಡೆಲಿವರಿ ಆಗುವ ಜಾಗದಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಿಫ್ಟ್ ಬಾಕ್ಸ್ ರೂಪದಲ್ಲಿ ನಗರಕ್ಕೆ ಚರಸ್ ಡ್ರಗ್ಸ್ನ ಕಳುಹಿಸಲಾಗಿತ್ತು. ನಂತರ ಬಂದಿದ್ದ ಬಾಕ್ಸ್ಗಳನ್ನು ಆರೋಪಿಯಿಂದಲೇ ಪೊಲೀಸರು ತೆಗೆಸಿದ್ದಾರೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್‌ ಪಿಎ ಹೆಸರು ಹೇಳಿ ಧೋನಿ ಮ್ಯಾನೇಜರ್‌ಗೆ ಲಕ್ಷ ಲಕ್ಷ ವಂಚನೆ

    ಬಾಕ್ಸ್ ತೆಗೆದು ನೋಡಿದ ಸುಮಾರು 6.50 ಲಕ್ಷ ಮೌಲ್ಯದ 130 ಗ್ರಾಂ ಚರಸ್ ಪತ್ತೆಯಾಗಿದೆ. ಇವುಗಳನ್ನು ಋಷಿಕೇಶದಿಂದ ಪೋಸ್ಟ್ ಮೂಲಕ ಕಳುಹಿಸಲಾಗಿತ್ತು. ಕೇರಳ ಮೂಲದ ಆರೋಪಿ ಅದಿತ್ ಸರ್ವೋತ್ತಮ್ ಎಂಬವನು ಪಾರ್ಸೆಲ್ ಮಾಡಿದ್ದನು. ಸದ್ಯ ಅದಿತ್ ತಲೆಮರೆಸಿಕೊಂಡಿದ್ದು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜಸ್ಥಾನ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್‌ ಪಾಸಿಟಿವ್‌

  • ಡ್ರಗ್ಸ್ ಪ್ರಕರಣ: ನಟ ರಾಜ್ ಪ್ರೇಯಸಿ ಬಂಧನ

    ಡ್ರಗ್ಸ್ ಪ್ರಕರಣ: ನಟ ರಾಜ್ ಪ್ರೇಯಸಿ ಬಂಧನ

    ಸಿನಿಮಾ ರಂಗದಲ್ಲಿ ಡ್ರಗ್ಸ್ (Drugs) ಹಾವಳಿ ಹೆಚ್ಚಾಗಿದೆ ಎಂದು ಪದೇ ಪದೇ ಪೊಲೀಸ್ ಇಲಾಖೆ ಹೇಳುತ್ತಲೇ ಇದೆ. ಭಾರತೀಯ ಸಿನಿಮಾ ರಂಗವು ಡ್ರಗ್ಸ್ ಹಾವಳಿಯಿಂದ ಮುಕ್ತವಾಗಿಸಲು ನಾನಾ ರೀತಿಯಲ್ಲಿ ಪ್ರಯತ್ನ ಮಾಡುತ್ತಲೇ ಇದ್ದಾರೆ ಪೊಲೀಸರು. ಹಾಗಾಗಿ ಕನ್ನಡವೂ ಸೇರಿದಂತೆ ಹಲವು ಚಿತ್ರರಂಗದ ನಟ ನಟಿಯರನ್ನು ಬಂಧಿಸಿಯೂ (Arrest) ಆಗಿದೆ. ಈಗ ತೆಲುಗಿನಲ್ಲಿ ನಟನೊಬ್ಬನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಸಿನಿಮಾ ಚೂಪಿಸ್ತ ಮಾವ, ಕುಮಾರಿ 21 ಎಫ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಯುವ ನಟ ರಾಜ್ ತರುಣ್ (Raj Tarun) ಅವರ ಪ್ರೇಯಸಿಯನ್ನು ಈ ಬಾರಿ ತೆಲಂಗಾಣ (Telangana) ಪೊಲೀಸರು ಬಂಧಿಸಿದ್ದಾರೆ. ಬಂಧಿಸಿದ ಯುವತಿಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿಲ್ಲ. ಹೆಸರೂ ಕೂಡ ಬಹಿರಂಗ ಪಡಿಸಿಲ್ಲ.

     

    ಗೋವಾದಿಂದ ಇವರಿಗೆಲ್ಲ ಡ್ರಗ್ಸ್ ಸರಬರಾಜು ಆಗುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಯುವತಿಯನ್ನು ಬಂಧಿಸಿದ ನಂತರ, ಯಾರಿಗೆಲ್ಲ ಡ್ರಗ್ಸ್ ಸರಬರಾಜು ಆಗುತ್ತಿತ್ತು, ಯಾರು ತಂದು ಕೊಡುತ್ತಿದ್ದರು. ಹೀಗೆ ಇತ್ಯಾದಿ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

  • ಕುಡಿತಿದ್ದೆ, ಡ್ರಗ್ಸ್ ತಗೋತಾ ಇರಲಿಲ್ಲ: ನಟಿ ಶ್ರುತಿ ಹಾಸನ್

    ಕುಡಿತಿದ್ದೆ, ಡ್ರಗ್ಸ್ ತಗೋತಾ ಇರಲಿಲ್ಲ: ನಟಿ ಶ್ರುತಿ ಹಾಸನ್

    ಖ್ಯಾತ ನಟ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್  (Shruti Haasan)ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಗಾಗ್ಗೆ ಮಾತಾಡ್ತಾ ಇರುತ್ತಾರೆ. ಬಾಯ್ ಫ್ರೆಂಡ್, ಡಿಪ್ರೆಷನ್ ಹೀಗೆ ಅನೇಕ ವಿಚಾರಗಳನ್ನು ಈವರೆಗೂ ಮಾತನಾಡಿದ್ದಾರೆ. ಈ ಬಾರಿ ಕುಡಿತ (Alcohol) ಮತ್ತು ಡ್ರಗ್ಸ್ (Drugs) ಬಗ್ಗೆ ಮಾತನಾಡಿದ್ದಾರೆ. ತಾನು ಕುಡಿತದ ಚಟಕ್ಕೆ ದಾಸಳಾಗಿದ್ದೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.

    ನಾನು ಸಾಕಷ್ಟು ಕುಡಿತಿದ್ದೆ. ಫ್ರೆಂಡ್ಸ್ ಸಿಕ್ಕಾಗೆಲ್ಲ ಕುಡಿತಿದ್ದೆ. ಕುಡಿತದ ಚಟ ನನ್ನನ್ನು ಆಳುತ್ತಿದೆ ಅಂತ ಅನಿಸಿತು. ಕುಡಿತದ ಬಗ್ಗೆ ಬೇಸರವಾಯಿತು. ಆಗ ಬಿಟ್ಟು ಬಿಟ್ಟು. ನಾನು ಕುಡಿಯೋದನ್ನು ಬಿಟ್ಟು ಎಂಟು ವರ್ಷಗಳೇ ಆಗಿವೆ. ಕುಡಿತಿದ್ದೆ ನಿಜ. ಆದರೆ, ಡ್ರಗ್ಸ್ ತಗೆದುಕೊಳ್ಳುತ್ತಿರಲಿಲ್ಲ. ಇವತ್ತಿನವರೆಗೂ ನಾನು ಒಂದೇ ಒಂದು ಬಾರಿಯೂ ಡ್ರಗ್ಸ್ ತೆಗೆದುಕೊಂಡಿಲ್ಲ ಎಂದಿದ್ದಾರೆ ಶ್ರುತಿ.

    ಯೂಟ್ಯೂಬ್ ವಾಹಿನಿಯೊಂದರ ಜೊತೆ ಮಾತನಾಡಿರುವ ಶ್ರುತಿ, ತಮ್ಮ ಬದುಕಿನ ಬಗ್ಗೆ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಅದರಲ್ಲೂ ಕುಡಿತದ ಬಗ್ಗೆ ಯಾವುದೇ ಮುಚ್ಚು ಮರೆ ಇಲ್ಲದೇ ಹೇಳಿಕೊಂಡಿದ್ದರು. ಜೊತೆಗೆ ಇನ್ನಷ್ಟೇ ರಿಲೀಸ್ ಆಗಬೇಕಿರುವ ಸಲಾರ್ ಸಿನಿಮಾದ ಬಗ್ಗೆಯೂ ಶ್ರುತಿ ಮಾತನಾಡಿದ್ದಾರೆ.

     

    ಎಂಟು ವರ್ಷಗಳಿಂದ ಅವರ ಮೇಲೆ ಅವರು ನಿಯಂತ್ರಣ ಹೊಂದಿದ್ದಾರಂತೆ. ಆ ಕಾರಣದಿಂದಾಗಿಯೇ ಮತ್ತಷ್ಟು ಸಾಧನೆ ಮಾಡೋಕೆ ಅವರಿಗೆ ಸಾಧ್ಯವಾಗಿದೆ ಅಂತೆ. ಈಗ ಸಂಪೂರ್ಣವಾಗಿ ಅವರು ಮದ್ಯಮುಕ್ತರಾಗಿದ್ದಾರಂತೆ.

  • ಅಡುಗೆ ಮಾಡುವ ಕುಕ್ಕರ್‌ನಲ್ಲೇ ಡ್ರಗ್ಸ್ ತಯಾರಿ – ಬೆಂಗಳೂರಲ್ಲಿ ಪೆಡ್ಲರ್ ಅರೆಸ್ಟ್

    ಅಡುಗೆ ಮಾಡುವ ಕುಕ್ಕರ್‌ನಲ್ಲೇ ಡ್ರಗ್ಸ್ ತಯಾರಿ – ಬೆಂಗಳೂರಲ್ಲಿ ಪೆಡ್ಲರ್ ಅರೆಸ್ಟ್

    ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ (Drugs) ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ (CCB) ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ ಪ್ರೆಶರ್ ಕುಕ್ಕರ್‌ಗೆ (Pressure Cooker) ಪೈಪ್ ಅಳವಡಿಸಿ ಆವಿಯಿಂದ ಕ್ರಿಸ್ಟಲ್ ಬರುವಂತೆ ಮಾಡಿ ಎಂಡಿಎಂಎ (MDMA) ತಯಾರು ಮಾಡುತ್ತಿದ್ದ.

    ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರಂಭದಲ್ಲಿ ಆರೋಪಿ ಬಳಿ 100 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಆರೋಪಿ ಎಲ್ಲಿಂದ ಎಂಡಿಎಂಎ ತರಿಸುತ್ತಿದ್ದಾನೆ ಎಂದು ಪರಿಶೀಲನೆ ನಡೆಸಿದ ವೇಳೆ ಬೆಂಜಮಿನ್ ವಾಸವಿದ್ದ ಮನೆಯಲ್ಲೇ ಎಂಡಿಎಂಎ ಕ್ರಿಸ್ಟಲ್ ತಯಾರಿಸುತಿದ್ದ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಾತ್ರೆ, ಒಳ ಉಡುಪಿನಲ್ಲಿ ಚಿನ್ನ ಕಳ್ಳಸಾಗಣೆ – ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಐವರ ಬಂಧನ

    ಎಂಡಿಎಂಎ ತಯಾರು ಮಾಡಲು ಬೇಕಿದ್ದ ಕಚ್ಚಾವಸ್ತುಗಳನ್ನು ಖರೀದಿ ಮಾಡುತ್ತಿದ್ದ ಆರೋಪಿ ನಂತರ ಹಂತ ಹಂತವಾಗಿ ಎಂಡಿಎಂಎ ತಯಾರು ಮಾಡುತ್ತಿದ್ದ. ಡ್ರಗ್ಸ್ ಡಿಮಾಂಡ್ ಎಷ್ಟು ಇದೆ, ಅಷ್ಟನ್ನು ತಯಾರು ಮಾಡಿ, ನಂತರ ಅದನ್ನು ಕೇವಲ ನೈಜೀರಿಯಾ ಮತ್ತು ಆಫ್ರಿಕಾ ಮೂಲದವರಿಗೆ ಮಾರಾಟ ಮಾಡುತ್ತಿದ್ದ ಎಂಬುದು ತಿಳಿದು ಬಂದಿದೆ. ತಯಾರು ಮಾಡಿಟ್ಟಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮತ್ತು ಅದನ್ನು ತಯಾರು ಮಾಡಲು ಬೇಕಾಗಿದ್ದ 5 ಕೆಜಿ ಕಚ್ಚಾವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್!

  • ಡ್ರಗ್ಸ್ ಪ್ರಕರಣ: ಅ.10ಕ್ಕೆ ವಿಚಾರಣೆಗೆ ಬರುವಂತೆ ನಟ ನವದೀಪ್ ಗೆ ನೋಟಿಸ್

    ಡ್ರಗ್ಸ್ ಪ್ರಕರಣ: ಅ.10ಕ್ಕೆ ವಿಚಾರಣೆಗೆ ಬರುವಂತೆ ನಟ ನವದೀಪ್ ಗೆ ನೋಟಿಸ್

    ಹೈದರಾಬಾದ್ ನ ಮಾದಾಪುರ ಪೊಲೀಸರು ನಡೆಸಿದ್ದ ಡ್ರಗ್ಸ್ ಕಾರ್ಯಾಚರಣೆಯಲ್ಲಿ ಹಲವರ ಬಂಧನವಾಗಿತ್ತು. ಇದರಲ್ಲಿ ಬೆಂಗಳೂರಿನ ಮೂವರು ವ್ಯಕ್ತಿಗಳೂ ಇದ್ದರು. ಈ ಪ್ರಕರಣದಲ್ಲಿ ನಟ ನವದೀಪ್ ಅವರ ಹೆಸರು ಕೂಡ ಕೇಳಿ ಬಂದಿತ್ತು. ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ನವದೀಪ್ ಗೆ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಆಧರಿಸಿದ ಇದೀಗ ಜಾರಿ ನಿರ್ದೇಶನಾಲಯ (ED) ಕೂಡ  ಅಕ್ಟೋಬರ್ 10ರಂದು ವಿಚಾರಣೆಗೆ ಬರುವಂತೆ ಸೂಚಿಸಿದೆ.

    ಈ ಹಿಂದೆ ನವದೀಪ್ ಅವರನ್ನು ಬಂಧಿಸಲು ತೆಲಂಗಾಣ ಪೊಲೀಸರು ಸಿದ್ಧತೆ ನಡೆಸಿದ್ದರು. ಮಾದಾಪುರ (Madapur) ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿದ್ದ ಇವರ ಬಂಧನಕ್ಕೆ (Arrest) ಅಧಿಕಾರಿಗಳು ಬಲೆ ಬೀಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್‍ ತಲೆಮರೆಸಿಕೊಂಡಿದ್ದರು. ಜೊತೆಗೆ ತೆಲಂಗಾಣ ಹೈಕೋರ್ಟಿಗೆ (High Court) ನಿರೀಕ್ಷಣಾ ಜಾಮೀನಿಗೆ ಅರ್ಜಿ ಕೂಡ ಸಲ್ಲಿದ್ದರು.

    ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಮಾನ್ಯ ತೆಲಂಗಾಣ ಉಚ್ಛ ನ್ಯಾಯಾಲಯವು ಬಲವಂತವಾಗಿ ನವದೀಪ್ ಅವರನ್ನು ಬಂಧಿಸುವಂತಿಲ್ಲ ಎಂದು ಆದೇಶ ನೀಡಿದೆ. ಜೊತೆಗೆ ಅವರನ್ನು ವಿಚಾರಣೆಗೆ ಕರೆಯಬಹುದು ಮತ್ತು ಪರೀಕ್ಷೆಗೂ ಒಳಪಡಿಸಬಹುದು. ಆದರೆ, ಈ ನೆಪದಲ್ಲಿ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದೆ.

    ಮೊನ್ನೆಯಷ್ಟೇ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ (Drugs) ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಈ ವೇಳೆ ನವದೀಪ್ ಕೂಡ ಇದ್ದಾರೆ ಎಂದು ಹೇಳಲಾಗಿತ್ತು.

    ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ರಗ್ಸ್ ಕೇಸ್: ಖ್ಯಾತ ನಟ ನವದೀಪ್ ಬಂಧನಕ್ಕೆ ಸಿದ್ಧತೆ

    ಡ್ರಗ್ಸ್ ಕೇಸ್: ಖ್ಯಾತ ನಟ ನವದೀಪ್ ಬಂಧನಕ್ಕೆ ಸಿದ್ಧತೆ

    ಮಾದಾಪುರ (Madapur) ಡ್ರಗ್ಸ್ ಕೇಸ್ ನ 37ನೇ ಆರೋಪಿ ಆಗಿರುವ ತೆಲುಗಿನ ಖ್ಯಾತ ನಟ ನವದೀಪ್ ಬಂಧನಕ್ಕೆ (Arrest) ಅಧಿಕಾರಿಗಳು ಬಲೆ ಬೀಸಿದ್ದಾರೆ. ತನಗೂ ಈ ಡ್ರಗ್ಸ್ ಕೇಸಿಗೂ ಸಂಬಂಧವೇ ಇಲ್ಲ ಎಂದು ಹೇಳಿಕೊಂಡು ಬಂದಿರುವ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಚಾರಣೆಗೂ ಒಳಗಾಗಿರುವ ನವದೀಪ್‍ ಸದ್ಯ ತಲೆಮರೆಸಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ.

    ಮೊನ್ನೆಯಷ್ಟೇ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ (Drugs) ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಹಿಂದೆ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು. ಇದನ್ನೂ ಓದಿ:ಕಣ್ಮುಂದೆಯೇ ರಶ್ಮಿಕಾ ಇದ್ದರೂ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್

    ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು.

     

    ಕನ್ನಡದಲ್ಲೂ ಈ ಹಿಂದೆ ಹಲವರ ಮೇಲೆ ಡ್ರಗ್ಸ್ ಸೇವಿಸುವ ಆರೋಪ ಕೇಳಿ ಬಂದಿತ್ತು. ರಾಗಿಣಿ, ಸಂಜನಾ ಸೇರಿದಂತೆ ಹಲವರು ಜೈಲು ವಾಸವನ್ನೂ ಅನುಭವಿಸಿ ಬಂದರು. ಇನ್ನೂ ಕೆಲವು ನಟರು ವಿಚಾರಣೆಗೆ ಹಾಜರಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ರಂಗದಲ್ಲಿ ಮತ್ತೆ ಡ್ರಗ್ಸ್ ಸದ್ದು: ನಟ ನವದೀಪ್ ಮನೆಯ ಮೇಲೆ ದಾಳಿ

    ಸಿನಿಮಾ ರಂಗದಲ್ಲಿ ಮತ್ತೆ ಡ್ರಗ್ಸ್ ಸದ್ದು: ನಟ ನವದೀಪ್ ಮನೆಯ ಮೇಲೆ ದಾಳಿ

    ಚಿತ್ರೋದ್ಯಮದಲ್ಲಿ ಹೆಚ್ಚೆಚ್ಚು ಡ್ರಗ್ಸ್ (Drugs) ಪ್ರಕರಣಗಳು ದಾಖಲಾಗುತ್ತಿದ್ದು, ಇದೀಗ ತೆಲುಗಿನ ನಟ ನವದೀಪ್ (Navdeep) ಮನೆಯ ಮೇಲೆ ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೊನ್ನೆಯಷ್ಟೇ ಹೋಟೆಲ್ ವೊಂದರ ಮೇಲೆ ದಾಳಿ ಮಾಡಿದ್ದ ಅಧಿಕಾರಿಗಳು ನಿರ್ಮಾಪಕನೂ ಸೇರಿದಂತೆ ಹಲವರನ್ನು ಬಂಧಿಸಿದ್ದರು.

    ಈ ಹಿಂದೆಯೂ ತೆಲುಗಿನ ಅನೇಕ ನಟರ ಮೇಲೆ ಡ್ರಗ್ಸ್ ಸೇವಿಸುವ ಆರೋಪ ಕೇಳಿ ಬಂದಿತ್ತು. ನೋಟಿಸ್ ನೀಡಿ ವಿಚಾರಣೆಗೂ ಕರೆಯಿಸಿಕೊಂಡಿದ್ದರು. ಆದರೂ ಚಿತ್ರರಂಗದ ಮೇಲೆ ಪದೇ ಪದೇ ಡ್ರಗ್ಸ್ ಕುರಿತಾಗಿ ಆರೋಪಗಳು ಕೇಳಿ ಬರುತ್ತಿವೆ. ಹಾಗಾಗಿ ಅನೇಕ ಬಾರಿ ದಾಳಿಗಳನ್ನೂ ಮಾಡಲಾಗಿದೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ತಾಯಿಯಾದ ‘ಬಿಗ್‌ ಬಾಸ್‌’ ಮಾಜಿ ಸ್ಪರ್ಧಿ ಆಶಿತಾ ಚಂದ್ರಪ್ಪ

    ಕೇವಲ ತೆಲುಗು ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಮಲಯಾಳಂ ಚಿತ್ರರಂಗದಲ್ಲೂ ಈ ವಿಷಗಾಳಿ ಬೀಸಿದೆ. ಸ್ವತಃ ಕೇರಳದ ಕಮಿಷ್ನರ್ ಪತ್ರಿಕಾಗೋಷ್ಠಿ ನಡೆಸಿ, ಶೂಟಿಂಗ್ ನಡೆಯುವ ಸ್ಥಳದಲ್ಲೇ ಪರಿಶೀಲನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು. ಕೆಲ ನಟರು ಶೂಟಿಂಗ್ ಸ್ಥಳದಲ್ಲೇ ಡ್ರಗ್ಸ್ ಸೇವಿಸಿದ್ದರ ಬಗ್ಗೆ ದೊಡ್ಡ ಮಟ್ಟದಲ್ಲೂ ಚರ್ಚೆ ನಡೆದಿತ್ತು.

     

    ಕನ್ನಡದಲ್ಲೂ ಈ ಹಿಂದೆ ಹಲವರ ಮೇಲೆ ಡ್ರಗ್ಸ್ ಸೇವಿಸುವ ಆರೋಪ ಕೇಳಿ ಬಂದಿತ್ತು. ರಾಗಿಣಿ, ಸಂಜನಾ ಸೇರಿದಂತೆ ಹಲವರು ಜೈಲು ವಾಸವನ್ನೂ ಅನುಭವಿಸಿ ಬಂದರು. ಇನ್ನೂ ಕೆಲವು ನಟರು ವಿಚಾರಣೆಗೆ ಹಾಜರಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾದಲ್ಲಿ ಡ್ರಗ್ಸ್ ದೃಶ್ಯಗಳಿದ್ದರೆ ನೋಟಿಸ್: ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

    ಸಿನಿಮಾದಲ್ಲಿ ಡ್ರಗ್ಸ್ ದೃಶ್ಯಗಳಿದ್ದರೆ ನೋಟಿಸ್: ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

    ಡ್ರಗ್ಸ್ (Drugs) ಪಿಡುಗನ್ನು ನಿರ್ನಾಮ ಮಾಡುವ ಪಣ ತೊಟ್ಟಿರುವ ಪೊಲೀಸ್ ಇಲಾಖೆಯು ಇದೀಗ ಸಿನಿಮಾಗಳ ಮೇಲೆ ಕಣ್ಣಿಟ್ಟಿದೆ. ಸಿನಿಮಾಗಳಲ್ಲಿ (Cinema) ಮಾದಕ ವಸ್ತುಗಳನ್ನು ಪ್ರಚೋದಿಸುವ ದೃಶ್ಯಗಳು ಇದ್ದರೆ, ಅಂತಹ ಸಿನಿಮಾಗಳಿಗೆ ನೋಟಿಸ್ (Notice) ನೀಡಲಾಗುವುದು ಎಂದು ಹೈದರಾಬಾದ್ ಪೊಲೀಸ್ ತಿಳಿಸಿದ್ದಾರೆ.

    ಹೈದರಾಬಾದ್ ಪೊಲೀಸರು ಇತ್ತೀಚೆಗಷ್ಟೇ ಮಾದಾಪುರದಲ್ಲಿ ನಡೆಸಿದ ಕಾರ್ಯಚರಣೆಯಲ್ಲಿ ವಿದೇಶಿ ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಿನಿಮಾ ನಿರ್ಮಾಪಕರು ಬಂಧನಕ್ಕೊಳಗಾಗಿದ್ದರು. ಅಲ್ಲದೇ, ಸಿನಿಮಾ ರಂಗದಲ್ಲಿ ಡ್ರಗ್ಸ್ ವಹಿವಾಟು ಜೋರಾಗಿದೆ ಎನ್ನುವ ಆರೋಪ ಕೂಡ ಇದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ. ಆನಂದ್, ‘ಸಿನಿಮಾಗಳಲ್ಲಿ ಡ್ರಗ್ಸ್ ಬಳಕೆ ಬಗ್ಗೆ ತೋರಿಸಿದರೆ ನೋಟಿಸ್ ನೀಡಿ, ಕಠಿಣ ಕ್ರಮಕ್ಕೆ ಮುಂದಾಗಲಾಗುವುದು’ ಎಂದಿದ್ದಾರೆ. ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಸೇಲ್ ಆಯಿತು ‘ಸಲಾರ್’ ಸ್ಯಾಟ್ ಲೈಟ್ ರೈಟ್ಸ್

    ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಜಯ್ ದೇವರಕೊಂಡ ಅವರ ಸಹೋದರನ ‘ಬೇಬಿ’ (Baby) ಚಿತ್ರ ತಂಡಕ್ಕೆ ನೋಟಿಸ್ ಕೂಡ ನೀಡಲಾಗಿದೆಯಂತೆ. ಈ ಸಿನಿಮಾದಲ್ಲಿ ಡ್ರಗ್ಸ್ ಬಳಕೆ ಕುರಿತಾಗಿ ದೃಶ್ಯವಿದೆ. ಅದರಿಂದ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂದು ನೋಟಿಸ್ ನೀಡಲಾಗಿದೆ. ಸಿನಿಮಾ ಪರಿಶೀಲನೆಯ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸಿನಿಮಾದಲ್ಲಿ ತೋರಿಸಿದ ರೀತಿಯಲ್ಲೇ ಡ್ರಗ್ಸ್ ಬಳಕೆ ಆಗುತ್ತಿದ್ದು ಎನ್ನುವ ಮಾಹಿತಿಯನ್ನೂ ಅಧಿಕಾರಿಗಳು ಹೊರ ಹಾಕಿದ್ದಾರೆ. ತಮಗೆ ನೋಟಿಸ್ ಬಂದಿರುವ ಕುರಿತು ಬೇಬಿ ಸಿನಿಮಾದ ನಿರ್ಮಾಪಕ ಸಾಯಿ ರಾಜೇಶ್ ಕೂಡ ಖಚಿತ ಪಡಿಸಿದ್ದಾರೆ. ಅದಕ್ಕೆ ತಮ್ಮದೇ ಆದ ರೀತಿಯಲ್ಲಿ ಉತ್ತರಿಸುವುದಾಗಿಯೂ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡ್ರೋನ್ ಮೂಲಕ ಪಂಜಾಬ್‌ಗೆ ಡ್ರಗ್ಸ್ ಸಪ್ಲೈ ಮಾಡಲಾಗ್ತಿದೆ: ಪಾಕ್ ಪ್ರಧಾನಿ ಆಪ್ತ

    ಡ್ರೋನ್ ಮೂಲಕ ಪಂಜಾಬ್‌ಗೆ ಡ್ರಗ್ಸ್ ಸಪ್ಲೈ ಮಾಡಲಾಗ್ತಿದೆ: ಪಾಕ್ ಪ್ರಧಾನಿ ಆಪ್ತ

    ಇಸ್ಲಾಮಾಬಾದ್/ ನವದೆಹಲಿ: ಪಾಕಿಸ್ತಾನದ (Pakistan) ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅವರ ಪ್ರಮುಖ ಆಪ್ತ ಸಹಾಯಕ ಭಾರತದ ಗಡಿಯುದ್ದಕ್ಕೂ ಡ್ರಗ್ಸ್ (Drugs) ಪೂರೈಕೆಯನ್ನು ಹೆಚ್ಚಿಸಲು ಡ್ರೋನ್‌ಗಳನ್ನು (Drone) ಬಳಸಲಾಗುತ್ತಿರುವುದಾಗಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

    ಪಾಕಿಸ್ತಾನದ ಹಿರಿಯ ಪತ್ರಕರ್ತ ಹಮೀದ್ ಮಿರ್ ಅವರೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಷರೀಫ್ ಅವರ ರಕ್ಷಣಾ ವಿಶೇಷ ಸಹಾಯಕ ಮಲಿಕ್ ಮೊಹಮ್ಮದ್ ಅಹ್ಮದ್ ಖಾನ್ (Malik Muhammad Ahmad Khan) ಪಾಕಿಸ್ತಾನ-ಭಾರತ ಗಡಿಯ ಬಳಿ ಕಸೂರ್‌ನ ಪ್ರವಾಹ ಪೀಡಿತ ಪ್ರದೇಶದಲ್ಲಿ ಡ್ರೋನ್‌ಗಳನ್ನು ಬಳಸಿ ಹೆರಾಯಿನ್ ಅನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ. ಪ್ರವಾಹ ಸಂತ್ರಸ್ತರ ಪುನರ್ವಸತಿಗಾಗಿ ವಿಶೇಷ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಲಾಗಿದ್ದು, ಇಲ್ಲದೇ ಹೋದರೆ ಸಂತ್ರಸ್ತರು ಕಳ್ಳಸಾಗಣೆಯಲ್ಲಿ ತೊಡಗಿಕೊಳ್ಳುತ್ತಾರೆ ಎಂದು ತಿಳಿಸಿರುವುದಾಗಿ ಹಮೀದ್ ಮಿರ್ ಜುಲೈ 17ರಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಮಿರ್, ಮೊಹಮ್ಮದ್ ಅಹ್ಮದ್ ಖಾನ್ ಅವರು ಕಸೂರ್‌ನಿಂದ ಎಂಪಿಎ ಆಗಿದ್ದಾರೆ. ಅವರು ಪಾಕಿಸ್ತಾನದ ರಾಜಕೀಯ ಮತ್ತು ಮಿಲಿಟರಿ ಸ್ಥಾಪನೆಗೆ ಬಹಳ ಹತ್ತಿರವಾಗಿದ್ದಾರೆ. ಅವರು ಹಿಂದಿನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಮತ್ತು ಈಗಿನ ಮಿಲಿಟರಿ ಶ್ರೇಣಿಗೆ ತುಂಬಾ ಹತ್ತಿರವಾಗಿದ್ದರು ಎಂದಿದ್ದಾರೆ. ಇದನ್ನೂ ಓದಿ: ಟೇಕಾಫ್ ಬಳಿಕ ರನ್ ವೇನಲ್ಲಿ ಟಯರ್ ಭಾಗಗಳು ಪತ್ತೆ – ದೆಹಲಿಗೆ ವಿಮಾನ ವಾಪಸ್

    ಕಸೂರ್ ಹಳ್ಳಿಗರಿಗೆ ಮೊಬೈಲ್ ಸಿಗ್ನಲ್‌ಗಳು ಸಿಗುವುದಿಲ್ಲ ಎಂದು ಹೇಳುತ್ತಾರೆ. ಅವರು ಡ್ರೋನ್‌ಗಳ ಚಲನೆ, ಪಾಕಿಸ್ತಾನದಿಂದ ಭಾರತಕ್ಕೆ ಮಾದಕವಸ್ತುಗಳ ಕಳ್ಳಸಾಗಣೆ ಮತ್ತು ಭಾರತದಿಂದ ಪಾಕಿಸ್ತಾನಕ್ಕೆ ಮದ್ಯದ ಸಾಗಾಟದ ಬಗ್ಗೆ ಮಾತನಾಡುತ್ತಾರೆ. ಗಡಿಯಾಚೆಗಿನ ಡ್ರೋನ್ ಚಲನವಲನಗಳಿಂದಾಗಿ ಇಲ್ಲಿನ ಮೊಬೈಲ್ ಸಿಗ್ನಲ್‌ಗಳು ಭದ್ರತಾ ಏಜೆನ್ಸಿಗಳಿಂದ ಜಾಮ್ ಆಗಿವೆ ಎಂದು ಖಾನ್ ನನಗೆ ತಿಳಿಸಿದ್ದಾರೆ ಎಂದು ಮಿರ್ ಹೇಳಿದ್ದಾರೆ.

    ಕಸೂರ್ ಪಂಜಾಬ್‌ನ ಖೇಮ್‌ಕರನ್ ಮತ್ತು ಫಿರೋಜ್‌ಪುರ ಪ್ರದೇಶದ ಗಡಿಗೆ ಅಂಟಿಕೊಂಡಿದೆ. ಪಂಜಾಬ್ ಪೊಲೀಸರ ಅಂಕಿಅಂಶಗಳ ಪ್ರಕಾರ ಫಿರೋಜ್‌ಪುರ ಜಿಲ್ಲೆಯೊಂದರಲ್ಲೇ 2022-2023 ಜುಲೈ ವರೆಗೆ ಎನ್‌ಡಿಪಿಎಸ್ ಕಾಯ್ದೆಯಡಿ 795 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪಾಕಿಸ್ತಾನದ ಗಡಿಯಲ್ಲಿರುವ ಪಂಜಾಬ್‌ನ ಆ ಜಿಲ್ಲೆಗಳಿಂದ ಹೆಚ್ಚಿನ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದತ್ತಾಂಶವು ತೋರಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಹುಲ್‌ಗೆ ಮೊಣಕಾಲು ನೋವು – ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ

    ಮಂಗಳೂರಲ್ಲಿ ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಡ್ರಗ್ಸ್ ಚಾಕ್ಲೇಟ್ ಮಾರಾಟ- ಇಬ್ಬರು ವಶಕ್ಕೆ

    ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ (Drugs) ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್‍ಗಳನ್ನು (Chocolate) ಪೊಲೀಸರು (Police) ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ (Mangaluru) ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಾನಹಾನಿ ಕೇಸ್‌ನಲ್ಲಿ ಜೈಲು ಶಿಕ್ಷೆ – ಸುಪ್ರೀಂ ಕೋರ್ಟ್‌ನಲ್ಲೂ ರಾಹುಲ್ ಗಾಂಧಿಗೆ ಹಿನ್ನಡೆ

    ಮಹಾಶಕ್ತಿ ಮುನಕ್ಕಾ, ಬಮ್‍ಬಮ್ ಮುನೆಕ್ಕಾವಟಿ, ಪಾವರ್ ಮುನಕ್ಕಾವಟಿ ಹಾಗೂ ಆನಂದ ಚೂರ್ಣ ಹೆಸರಿನಲ್ಲಿ ಈ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಒಂದು ಚಾಕ್ಲೇಟ್‍ಗೆ 30 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಚಾಕ್ಲೇಟ್‍ಗೆ ಅಮಲು ಪದಾರ್ಥ ಬೆರೆಸಿರುವ ಬಗ್ಗೆ ತಿಳಿಯಲು ಸ್ಯಾಂಪಲ್‍ನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಇವುಗಳಲ್ಲಿ ಗಾಂಜಾ ವಿಶ್ರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ಸೇತುವೆ ಮೇಲೆ ಬೈಕ್ ಸವಾರನ ಹುಚ್ಚಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]