ಜೈಪುರ: ಸೋಮವಾರ ರಾಜಸ್ಥಾನದ ಶ್ರೀ ಗಂಗಾನಗರದಲ್ಲಿರುವ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಎರಡು ಡ್ರಗ್ಸ್ ಪ್ಯಾಕೆಟ್‍ಗಳನ್ನು ವಶಪಡಿಸಿಕೊಂಡಿದೆ.
ಬಿಎಸ್‍ಎಫ್ ತಂಡಕ್ಕೆ ಶ್ರೀಕರಣಪುರ ಗಡಿಯಲ್ಲಿರುವ ಮುಕ್ಕನ್ ಗ್ರಾಮದಲ್ಲಿ ಡ್ರಗ್ಸ್ ಇದೆ ಎಂಬ ಮಾಹಿತಿ ಸಿಕ್ಕಿದೆ. ಈ ಜಾಲವನ್ನು ಹುಡುಕಿಕೊಂಡು ಹೋದ ಬಿಎಸ್‍ಎಫ್ ತಂಡಕ್ಕೆ ಮುಕ್ಕನ್ ಗ್ರಾಮದ ಜಮೀನಿನಲ್ಲಿ ಎರಡು ಡ್ರಗ್ಸ್ ಪ್ಯಾಕೆಟ್‍ಗಳು ಪತ್ತೆಯಾಗಿವೆ. ಇದನ್ನೂ ಓದಿ: ರಾಜ್ಯದ ಜನರಿಗೆ ಕರೆಂಟ್ ಶಾಕ್ – ಜು. 1ರಿಂದ ವಿದ್ಯುತ್ ದರ ಏರಿಕೆ
ಪಾಕ್ ಸ್ಮಗ್ಲರ್‌ಗಳು ಈ ಡ್ರಗ್ಸ್ ಪ್ಯಾಕೆಟ್‍ಗಳನ್ನು ಕಳುಹಿಸಿದ್ದಾರೆ ಎಂದು ಬಿಎಸ್‍ಎಫ್‍ಗೆ ಮಾಹಿತಿ ಸಿಕ್ಕಿದೆ. ಆದರೆ ಇದನ್ನು ಹೇಗೆ ಕಳುಹಿಸಿದರು? ಯಾವ ತಂಡ ಕಳುಹಿಸಿತು? ಎಂಬುದರ ಬಗ್ಗೆ ಬಿಎಸ್‍ಎಫ್ ತನಿಖೆ ಮಾಡುತ್ತಿದೆ.
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ರಹಸ್ಯವನ್ನು ಇನ್ನೂ ಬೇಧಿಸಲು ಸಾಧ್ಯವಾಗಿಲ್ಲ. ಆ ಸಾವು ಅಭಿಮಾನಿಗಳ ಪಾಲಿಗೆ ಇನ್ನೂ ನಿಗೂಢವಾಗಿದೆ. ಅದು ಆತ್ಮಹತ್ಯೆಯೋ, ಕೊಲೆಯೋ ಈ ಹೊತ್ತಿಗೂ ಅದು ಚರ್ಚೆಯ ವಿಷಯವಾಗಿದೆ. ಈ ಮಧ್ಯ ಎನ್.ಸಿ.ಬಿಯು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು, ಆಚೆ ಇರುವ ಸುಶಾಂತ್ ಸಿಂಗ್ ಪ್ರೇಯಸಿ ಮತ್ತು ಪ್ರಕರಣದ ಮುಖ್ಯ ಆರೋಪಿ ರಿಯಾ ಚಕ್ರವರ್ತಿಗೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ.
ಬಾಲಿವುಡ್ ನಲ್ಲಿ ಏರುಗತಿಯಲ್ಲಿದ್ದ ನಟ ಸುಶಾಂತ್ ಸಿಂಗ್, ಸ್ಟಾರ್ ನಟರಾಗಿ ಮುಂಚುತ್ತಿರುವ ಹೊತ್ತಿನಲ್ಲೇ ಅಕಾಲಿಕ ಮರಣ ಹೊಂದಿದರು. ಯಾರೂ ಊಹಿಸಿಕೊಳ್ಳದೇ ಇರುವಂತಹ ಕೆಲಸಕ್ಕೆ ಕೈ ಹಾಕಿದರು. ಅದೂ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಪತ್ತೆಯಾದಾಗ, ಅವರು ಆ ರೀತಿ ಮಾಡಿಕೊಳ್ಳುವವರು ಅಲ್ಲ ಎಂದೇ ಆಪ್ತರು ಹೇಳಿದ್ದರು. ಸುಶಾಂತ್ ಅವರ ಈ ಸ್ಥಿತಿಗೆ ಕಾರಣ ಅವರ ಪ್ರೇಯಸಿ ರಿಯಾ ಚಕ್ರವರ್ತಿ ಎಂದು ಆರೋಪಿಸಲಾಯಿತು. ಇದನ್ನೂ ಓದಿ:ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಸುಶಾಂತ್ ಸಿಂಗ್ ಸಾವು ಒಂದು ಕಡೆ ನೋವಾಗಿ ಕಾಡಿದರೆ, ಮತ್ತೊಂದು ಕಡೆ ಅದು ಡ್ರಗ್ಸ್ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ದಂಧೆಗೆ ತಳುಕು ಹಾಕಿಕೊಂಡಿತು. ಸುಶಾಂತ್ ಸಿಂಗ್ ಡ್ರಗ್ಸ್ ಸೇವಿಸುತ್ತಿದ್ದ, ಅದನ್ನು ಸ್ವತಃ ರಿಯಾ ಚಕ್ರವರ್ತಿ ಹಾಗೂ ಶೋವಿಕ್ ಚಕ್ರವರ್ತಿಯೇ ಸಪ್ಲೈ ಮಾಡುತ್ತಿದ್ದರು ಎಂದು ಹೇಳಲಾಯಿತು. ರಿಯಾ ಚಕ್ರವರ್ತಿಯನ್ನು ಬಂಧಿಸಿ ಜೈಲಿಗೂ ಕಳುಹಿಸಲಾಯಿತು. ಆನಂತರ ಅವರು ಜಾಮೀನು ಪಡೆದು ಆಚೆ ಬಂದರು. ಇದೀಗ ಈ ಪ್ರಕರಣದ ಕುರಿತಂತೆ ಜಾರ್ಜಶೀಟ್ ಸಲ್ಲಿಕೆಯಾಗಿದೆ. ಅದರಲ್ಲಿ ಏನೆಲ್ಲ ರಹಸ್ಯಗಳಿವೆಯೋ ಕಾದು ನೋಡಬೇಕು.
ಬೆಂಗಳೂರು: ದಿ ಪಾರ್ಕ್ ಹೋಟೆಲ್‍ನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿತ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಇಂದು ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಐವರ ವಿರುದ್ಧ ಹಲಸೂರು ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ 20ಎ, 22ಬಿ, 27ಬಿನಡಿ ಪ್ರಕರಣ ದಾಖಲು ಮಾಡಲಾಗಿದೆ. ಸಿದ್ಧಾಂತ್ ಕಪೂರ್, ಮೈಂಡ್ ಫೈರ್ ಸೊಲ್ಯೂಷನ್ ಬಿಸಿನೆಸ್ ಮ್ಯಾನೇಜರ್ ಅಖಿಲ್ ಸೋನಿ, ಉದ್ಯಮಿ ಹರ್ ಜೋತ್ ಸಿಂಗ್, ಡಿಜಿಟಲ್ ಮಾರ್ಕೆಟಿಂಗ್ ಉದ್ಯಮಿ ಹನಿ ಹಾಗೂ ಫೋಟೋಗ್ರಾಫರ್ ಅಖಿಲ್ ಮೇಲೆ ಎಫ್‍ಐಆರ್ ದಾಖಲಾಗಿದೆ.
ಪಾರ್ಟಿ ಸ್ಥಳದಲ್ಲಿ 7 ಎಂಡಿಎಂಎ ಮಾತ್ರೆಗಳು, 10 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸಿದ್ದಾಂತ್ ಕಪೂರ್ ಮೊಬೈಲ್‍ನಲ್ಲಿದ್ದ ಅಶ್ಲೀಲ ವಿಡಿಯೋಗಳನ್ನು ಕಂಡು ಪೊಲೀಸರು ದಂಗಾಗಿದ್ದಾರೆ.
ನಟಿಯ ತಮ್ಮ ಆದ್ದರಿಂದ ಡಿಜೆಗಾಗಿ ಸಿದ್ದಾಂತ್ ಕಪೂರ್ ದಿನವೊಂದಕ್ಕೆ 1 ಲಕ್ಷ ರೂಪಾಯಿ ಬೇಡಿಕೆ ಇಡುತ್ತಿದ್ದ. ಅಲ್ಲದೇ ಡ್ರಗ್ಸ್ ಪಾರ್ಟಿಗೆ ಮಾಡೆಲ್‍ಗಳನ್ನು ಕರೆತಂದಿದ್ದ ಎನ್ನಲಾಗುತ್ತಿದೆ. ಇದನ್ನೂ ಓದಿ: ಮದುವೆಗೆ ಸಜ್ಜಾದ ನಿರೂಪಕಿ ಅನುಶ್ರೀ: ಹುಡುಗ ಯಾರು?
ಬ್ರೆಜಿಲ್ ಜರ್ಮನ್ ಮಾಡೆಲ್‍ಗಳನ್ನು ಮುಂದಿಟ್ಟುಕೊಂಡು ಡ್ರಗ್ಸ್ ಡೀಲ್ ಮಾಡ್ತಿದ್ದ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪಾರ್ಟಿ ಆಯೋಜಕರು, ಹೋಟೆಲ್‍ಗೆ ನೋಟಿಸ್ ನೀಡಲಾಗಿದೆ.
ಬೆಂಗಳೂರಿನ ಎಂಜಿ ರಸ್ತೆಯ ಟ್ರಿನಿಟಿ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಹೋಟೆಲ್ನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಈಗಾಗಲೇ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕ್ರಮ ತಗೆದುಕೊಳ್ಳುವುದಕ್ಕಾಗಿ ಈಗಾಗಲೇ ರಕ್ತದ ಮಾದರಿ ಸೇರಿದಂತೆ ಹಲವು ತಪಾಸಣೆಗಳನ್ನು ಮಾಡಲಾಗಿದೆ. ಈ ಕುರಿತು ರಾಜ್ಯ ಗೃಹಸಚಿವ ಆಗರ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವರು, “ಹಿಂದಿ ಸಿನಿಮಾ ರಂಗದ ನಟನೊಬ್ಬನನ್ನು ಬೆಂಗಳೂರು ಪೊಲೀಸರು ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಬಂಧಿಸಿದ್ದಾರೆ. ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ತಗೆದುಕೊಳ್ಳಲಾಗುತ್ತದೆ. ಕರ್ನಾಟಕ ಸರಕಾರ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರುದ್ಧ ಅಭಿಯಾನದ ರೂಪದಲ್ಲಿ ಕ್ರಮ ವಹಿಸುತ್ತಿದೆ. ಯುವಕರಲ್ಲಿ ಸಾಮಾಜಿಕ ಪಿಡುಗಾಗಿ ಕಾಡುತ್ತಿರುವ ಮಾದಕ ವಸ್ತುಗಳ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ – ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ
ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ. ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು: ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ ಸಹೋದರ ಮತ್ತು ಬಾಲಿವುಡ್ ನಟ, ಡಿಜೆ ಸಿದ್ಧಾಂತ್ ಕಪೂರ್ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ.
ಎಂ.ಜಿ ರಸ್ತೆಯ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರತಿಷ್ಠಿತ 5 ಸ್ಟಾರ್ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ಮಾಡಿದ್ದಾರೆ. ಪಾರ್ಟಿಯಲ್ಲಿ ತೊಡಗಿದ್ದ ಯುವಕ ಯುವತಿ ಸೇರಿ ಒಟ್ಟು 50 ಜನರನ್ನ ವಶಕ್ಕೆ ಪಡೆದಿದ್ದರು. ಈ ಗುಂಪಿನಲ್ಲಿದ್ದ 35 ಜನರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿದ್ದು, ಐವರು ಮಾದಕವಸ್ತು ಸೇವನೆ ಮಾಡಿರೋದು ದೃಢವಾಗಿದೆ. ಈ ಗುಂಪಿನಲ್ಲಿ ಸಿದ್ಧಾಂತ್ ಕಪೂರ್ ಸಹ ಇರುವುದು ಖಚಿತವಾಗಿದೆ. ಈ ಪರಿಣಾಮ ಸಿದ್ಧಾಂತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಪಾರ್ಟಿ – ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ
ಸಿದ್ಧಾಂತ್ ಹೋಟೆಲ್‍ನಲ್ಲಿ ಡಿಜೆ ಪ್ಲೈಯರ್ ಆಗಿದ್ದು, ಡ್ರಗ್ಸ್ ಸೇವನೆ ಮಾಡಿರೋದು ದೃಢವಾಗಿದೆ. ಸಿದ್ಧಾಂತ್ ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಮಗ ಆಗಿದ್ದು, ಶ್ರದ್ಧಾ ಕಪೂರ್ ಸಹೋದರ ಆಗಿದ್ದಾರೆ.
ಅಖೀಲ್ ಸೋನಿ, ಅಜೋದ್ ಸಿಂಗ್ ಪಂಜಾಬ್, ಅಖೀಲ್, ಅನಿ, ದರ್ಶನ್ ಸುರೇಶ್ ಬಂಧಿತ ಆರೋಪಿಗಳು. ಆರೋಪಿಗಳೇಲ್ಲರು ಟೆಕ್ಕಿಗಳಾಗಿದ್ದು, ರಾತ್ರಿ ಪಾರ್ಟಿ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ ಕೊಟ್ಟಿದ್ದಾರೆ.
ಕೊಲಂಬೊ: ಸತತ ಆರ್ಥಿಕ ದಿವಾಳಿತನದಿಂದ ಔಷಧಗಳ ಕೊರತೆ ಎದುರಿಸುತ್ತಿರುವ ಶ್ರೀಲಂಕಾಗೆ ಭಾರತ ತನ್ನ ನೆರವನ್ನು ಮುಂದುವರಿಸಿದೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಔಷಧಗಳ ಕೊರತೆ ಎದುರಿಸುತ್ತಿದ್ದ ಶ್ರೀಲಂಕಾ, ತುರ್ತು ಚಿಕಿತ್ಸೆಗಳಿಗೆ ಮಾತ್ರವೇ ಆದ್ಯತೆ ನೀಡಿತ್ತು. ಪ್ರಮುಖ ಶಸ್ತ್ರ ಚಿಕಿತ್ಸೆಗಳನ್ನು ನಿಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸತತವಾಗಿ ಶ್ರೀಲಂಕಾದ ನೆರವಿಗೆ ನಿಂತಿರುವ ಭಾರತ ಸರ್ಕಾರ ಸರಿ ಸುಮಾರು 3.3 ಟನ್‌ಗಳಷ್ಟು ಅಗತ್ಯ ಔಷಧಗಳನ್ನು ಸರಬರಾಜು ಮಾಡಿದೆ. ಇದನ್ನೂ ಓದಿ: ʻಒಂದು ಕುಟುಂಬ, ಒಂದು ಸರ್ಕಾರಿ ಕೆಲಸʼ – ನೀತಿಯನ್ನು ಎತ್ತಿ ಹಿಡಿದ ಹೈಕೋರ್ಟ್
ಜಾಫ್ನಾ ಟೀಚಿಂಗ್ ಆಸ್ಪತ್ರೆ (ಜೆಟಿಎಚ್)ಗೆ 2 ಟ್ರಕ್ ಲೋಡ್‌ಗಳಲ್ಲಿ 3.3 ಟನ್‌ಗಳಷ್ಟು ಜೀವ ರಕ್ಷಕ ಔಷಧಿ ಹಾಗೂ ವೈದ್ಯಕೀಯ ಸಾಧನಗಳನ್ನು ಸರಬರಾಜು ಮಾಡಿದೆ. ಭಾರತದ ಕನ್ಸೊಲೆಟ್ ಜನರಲ್ ಜಾಫ್ನಾ ರಾಕೇಶ್ ನಟರಾಜ್ ಅವರು ಜಾಫ್ನಾ ಆಸ್ಪತ್ರೆ ನಿರ್ದೇಶಕ ಡಾ.ನಂತಕುಮಾರ್ ಅವರಿಗೆ ಔಷಧಗಳನ್ನು ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ 50ನೇ ಹುಟ್ಟುಹಬ್ಬಕ್ಕೆ 111 ಅಡಿ ಎತ್ತರ ಕೇಕ್ ಸಿದ್ಧ
Another promise to the people of #SriLanka delivered!!! During his visit in March, EAM @DrSJaishankar was apprised of shortages of medicines faced by @1990SuwaSeriya. High Commissioner handed over 3.3 tons of medical supplies today to help the vital lifeline run smoothly. (1/2) pic.twitter.com/JeSNlzMmto
ಮಾರ್ಚ್ 2022 ರಲ್ಲಿ ಕೊಲಂಬೊದಲ್ಲಿರುವ ಸುವಾಸೇರಿಯಾ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈ ಶಂಕರ್ ಅವರಿಗೆ ಫೌಂಡೇಶನ್ ಎದುರಿಸುತ್ತಿರುವ ಔಷಧಗಳ ಕೊರತೆಯ ಬಗ್ಗೆ ಲಂಕಾದ ಅಧಿಕಾರಿ ಬಾಗ್ಲೇ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಶ್ರೀಲಂಕಾದ ನೆರವಿಗೆ ಮುಂದಾಗಿದೆ.
ಮೇ 27 ರಂದು, ಶ್ರೀಲಂಕಾದಲ್ಲಿ ಭಾರತದ ಹಂಗಾಮಿ ಹೈ ಕಮಿಷನರ್ ವಿನೋದ್ ಕೆ. ಜೇಕಬ್ ಅವರು ಕೊಲಂಬೊದಲ್ಲಿ ಆರೋಗ್ಯ ಸಚಿವ ಕೆಹೆಲಿಯಾ ರಂಬುಕ್ವೆಲ್ಲಾ ಅವರಿಗೆ 25 ಟನ್‌ಗಳಷ್ಟು ವೈದ್ಯಕೀಯ ಸಾಮಗ್ರಿಗಳನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೆ ವೈದ್ಯಕೀಯ ಸಾಮಗ್ರಿಗಳನ್ನು ಹಸ್ತಾಂತರಿಸಲಾಗಿದೆ.
ಮುಂಬೈ: ನಾಲ್ಕು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ನೈಜೀರಿಯಾ ಪ್ರಜೆಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಜನರು ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯ ವೇಳೆ ವ್ಯಕ್ತಿ ಡ್ರಗ್ಸ್ ನ ಅಮಲಿನಲ್ಲಿದ್ದ ಎನ್ನಲಾಗಿದೆ. ಕಳೆದ ತಿಂಗಳು, 20 ಗ್ರಾಂ ಕೊಕೇನ್ ಹೊಂದಿದ್ದಕ್ಕಾಗಿ ಇದೇ ನೈಜೀರಿಯನ್ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮಾದಕ ವಸ್ತುಗಳ ಮೌಲ್ಯ 6 ಲಕ್ಷ ರೂ. ಆಗಿದ್ದು, ಆರೋಪಿಯು ವಿಕ್ರೋಲಿಯ ಗಾರ್ಮೆಂಟ್ಸ್‌ವೊಂದರಲ್ಲಿ ಮಾರಾಟಗಾರನಾಗಿದ್ದನು.
ಕಳೆದ ತಿಂಗಳ ಆರಂಭದಲ್ಲಿ, ನಗರದ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಆರು ನೈಜೀರಿಯನ್ನರ ಗುಂಪನ್ನು ಮೇಘಾಲಯದಲ್ಲಿ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಆರೋಪಿಗಳು ವಾಣಿಜ್ಯ ಪ್ರವಾಸಿ ಕಾರಿನಲ್ಲಿ ಬಾಂಗ್ಲಾದೇಶಕ್ಕೆ ಪರಾರಿಯಾಗಿದ್ದರು.
ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದ ಬೆನ್ನಲ್ಲೆ ರಿಯಾ ಚಕ್ರವರ್ತಿ ವಿರುದ್ಧ ದಾಖಲಾದ ಡ್ರಗ್ ಪ್ರಕರಣದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ನಟಿ ರಿಯಾ ಪರ ವಕೀಲ ಸತೀಶ್ ಮನೇಶಿಂಡೆ ಒತ್ತಾಯಿಸಿದ್ದಾರೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ವಿಚಾರವಾಗಿ ಯಾವುದೇ ಸಾಕ್ಷಿ ಆಧಾರಯಿಲ್ಲದೇ ಇರುವ ಕಾರಣ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ರಿಯಾ ಚಕ್ರವರ್ತಿ ಪರ ವಕೀಲ ಡ್ರಗ್ಸ್ ಪ್ರಕರಣ ಹೊಸದಾಗಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದಾರೆ. ೨೦೨೦ರಲ್ಲಿ ರಿಯಾ ಮತ್ತು ಶ್ಲೋಕ್ ಚಕ್ರವರ್ತಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಳಿಕ ಕೆಲ ದಿನಗಳ ಬಳಿಕ ಇಬ್ಬರನ್ನು ರಿಲೀಸ್ ಮಾಡಲಾಯ್ತು. ಇದನ್ನೂ ಓದಿ:ಬೈಕಾಟ್ ಲಾಲ್ ಸಿಂಗ್ ಛಡ್ಡಾ: ಅಮೀರ್ ಖಾನ್ ಚಿತ್ರಕ್ಕೆ ಸಂಕಷ್ಟ
ಈಗ ಡ್ರಗ್ಸ್ ಪ್ರಕರಣದಲ್ಲಿ ಮತ್ತೆ ಹೊಸದಾಗಿ ತನಿಖೆಯಾಗಬೇಕು. ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ, ಯಾವುದೇ ಪರೀಕ್ಷೆ ಕೂಡ ಮಾಡಲಾಗಿಲ್ಲ. ಕೇವಲ ವಾಟ್ಸಾಪ್ ಚಾಟ್‌ಗಳಷ್ಟೇ ಇದ್ದವು. ಹಾಗಾಗಿ ಈ ಕುರಿತು ಹೆಚ್ಚಿನ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಕಷ್ಟು ಜನರಿಗೆ ಎನ್‌ಸಿಬಿ ತೊಂದರೆ ಕೊಟ್ಟಿದೆ. ಅವರ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ.
ನವದೆಹಲಿ: ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್‍ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಎನ್‍ಸಿಬಿ ಕ್ಲೀನ್‌ಚಿಟ್ ನೀಡಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಆರೋಪದಿಂದ ಮುಕ್ತಗೊಳಿಸಲಾಗಿದೆ.
ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸೈನ್ಸ್ (NDPS) ಕಾಯ್ದೆಯಡಿ ವಿಶೇಷ ನ್ಯಾಯಾಧೀಶರ ಮುಂದೆ NCB ಇಂದು ಪ್ರಕರಣದ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಅವರನ್ನು ಪ್ರಕರಣದಿಂದ ಕೈಬಿಡಲಾಗಿದೆ.
ಚಾರ್ಜ್‍ಶೀಟ್‍ನಲ್ಲಿ, ಎನ್‍ಸಿಬಿಯ ವಿಶೇಷ ತನಿಖಾ ತಂಡ (ಎಸ್‍ಐಟಿ) 20 ಆರೋಪಿಗಳಲ್ಲಿ 14 ಆರೋಪಿಗಳನ್ನು ಆರೋಪಿಸಿದ್ದು, ಖಾನ್ ಸೇರಿದಂತೆ 6 ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ವಿಚಾರಣೆ ನಡೆಸುತ್ತಿಲ್ಲ ಎಂದು ಹೇಳಿದೆ. ಆರ್ಯನ್ ಖಾನ್, ಅವಿನ್ ಶಾಹು, ಗೋಪಾಲ್ ಜಿ ಆನಂದ್, ಸಮೀರ್ ಸೈಘನ್, ಭಾಸ್ಕರ್ ಅರೋಡಾ ಮತ್ತು ಮಾನವ್ ಸಿಂಘಾರ ವಿರುದ್ಧ ತನಿಖೆ ನಡೆಸುತ್ತಿಲ್ಲ ಎಂದು ತಿಳಿಸಿದೆ.
20 ಮಂದಿಯ ಪೈಕಿ 14 ಮಂದಿಯ ವಿರುದ್ಧ ಎನ್‍ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ದೂರು ದಾಖಲಿಸಲಾಗುತ್ತಿದೆ. ಉಳಿದ 6 ಮಂದಿಯ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದ ಅರ್ಜಿ ಸಲ್ಲಿಸಲಾಗುತ್ತಿಲ್ಲ ಎಂದು ಎನ್‍ಸಿಬಿ ತನ್ನ ಮಾಧ್ಯಮ ಪ್ರಕಟಣೆಯಲ್ಲೂ ತಿಳಿಸಿದೆ.
ಅಕ್ಟೋಬರ್ 2, 2021 ರಂದು ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ ಎನ್‍ಸಿಬಿ, ಆರ್ಯನ್ ಖಾನ್ ಸೇರಿ ಹಲವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿತು. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ (ಎನ್‍ಡಿಪಿಎಸ್) ಕಾಯ್ದೆಯ ಸೆಕ್ಷನ್ 8(ಸಿ), 20(ಬಿ), 27, 28, 29 ಮತ್ತು 35 ರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೂಪಿಸಲಾಗಿತ್ತು. ಇದನ್ನೂ ಓದಿ:ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ
ಎನ್‍ಸಿಬಿ 13 ಗ್ರಾಂ ಕೊಕೇನ್, 5 ಗ್ರಾಂ ಮೆಫೆಡ್ರೋನ್ ಎಂಡಿ, 21 ಗ್ರಾಂ ಚರಸ್ ಮತ್ತು 22 ಎಂಡಿಎಂಎ ಎಕ್ಸ್‍ಟಾಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದೆ ಎಂದು ಈ ಹಿಂದೆ ಎನ್‍ಸಿಬಿ ಹೇಳಿತ್ತು. ಕೆಳ ಹಂತದ ನ್ಯಾಯಾಲಯಗಳಲ್ಲಿ ಜಾಮೀನು ನಿರಾಕರಿಸಿದ ಹಿನ್ನಲೆ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಆರ್ಯನ್ ಖಾನ್, ಅಕ್ಟೋಬರ್ 28, 2021 ರಂದು ಜಾಮೀನು ಪಡೆದುಕೊಂಡಿದ್ದರು. ಇದನ್ನೂ ಓದಿ:ಪೊಲೀಸರಿಂದ ದೌರ್ಜನ್ಯ ಆರೋಪ – ನಾಲ್ವರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಹೈದರಾಬಾದ್: ‘ವೈಟ್ ಚಾಲೆಂಜ್’ ಸ್ವೀಕರಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲು ಹಾಕುವ ಪೋಸ್ಟರ್‌ಗಳನ್ನು ತೆಲಂಗಾಣದಲ್ಲಿ ಹಾಕಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ(ಟಿಪಿಸಿಸಿ) ಎ.ರೇವಂತ್ ರೆಡ್ಡಿ ರಾಜಕಾರಣಿಗಳನ್ನು ‘ವೈಟ್ ಚಾಲೆಂಜ್’ ಸ್ವೀಕರಿಸುವಂತೆ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‍ಎಸ್) ನಾಯಕ ಕ್ರಿಶನ್, ಈ ಪರೀಕ್ಷೆಯನ್ನು ಗಾಂಧಿ ವಂಶಸ್ಥರೂ ತೆಗೆದುಕೊಳ್ಳಲಿ. ಈ ಸವಾಲನ್ನು ರಾಹುಲ್ ಗಾಂಧಿ ಏಕೆ ಸ್ವೀಕರಿಸುವುದಿಲ್ಲ ಎಂದು ಪ್ರಶ್ನೆಯನ್ನು ಕೇಳಿದರು. ಇದನ್ನೂ ಓದಿ: ಅಶ್ವತ್ಥ ನಾರಾಯಣ್ ವಿರುದ್ಧ ಡಿಕೆಶಿ ಷಡ್ಯಂತ್ರ ಮಾಡುತ್ತಿದ್ದಾರೆ: ಎಸ್.ಟಿ.ಸೋಮಶೇಖರ್
ರೆಡ್ಡಿ ಅವರು ದೇಶದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಹಾವಳಿ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘ವೈಟ್ ಚಾಲೆಂಜ್’ ಆರಂಭಿಸಿದ್ದಾರೆ. ಪರಿಣಾಮ ಈ ಸವಾಲನ್ನು ಮಾಜಿ ಸಂಸದ ಕೆ.ವಿಶೇಶ್ವರ್ ರೆಡ್ಡಿ ಅವರು ಸ್ವೀಕರಿಸಿದ್ದಾರೆ. ರಾಮರಾವ್ ಅವರು ಸಹ ಈ ಸವಾಲನ್ನು ಸ್ವೀಕರಿಸಲು ಧೈರ್ಯ ಮಾಡಿದ್ದಾರೆ ಎಂದು ರೇವಂತ್ ರೆಡ್ಡಿ ಹೇಳಿದ್ದರು. ಕೆ.ಟಿ.ರಾಮರಾವ್ ಅವರು ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಪುತ್ರ.
ಡ್ರಗ್ಸ್ ದಂಧೆಯಲ್ಲಿ ಕೆಟಿಆರ್‌ಗೆ ನಂಟು ಇದೆ ಎಂದು ರೇವಂತ್ ರೆಡ್ಡಿ ಆರೋಪ ಮಾಡಿದ್ದರು. ರೆಡ್ಡಿ ಆರೋಪಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆಟಿಆರ್, ನನಗೆ ಈ ಡ್ರಗ್ಸ್ ಪ್ರಕರಣ ಹೇಗೆ ಸಂಪರ್ಕವಿದೆ. ನಾನು ರಕ್ತ, ಕೂದಲು ಮತ್ತು ಯಕೃತ್ತಿನ ಪರೀಕ್ಷೆ ಮಾಡಿಸಿಕೊಳ್ಳಲು ಸಿದ್ಧ. ರಾಹುಲ್ ಗಾಂಧಿ ಅವರು ಸಹ ಪರೀಕ್ಷೆ ಮಾಡಿಸಿಕೊಳ್ಳುತ್ತಾರಾ ಎಂದು ಮರು ಪ್ರಶ್ನೆಯನ್ನು ಕೇಳಿದರು. ಪ್ರಸ್ತುತ ರಾಹುಲ್ ಗಾಂಧಿ ‘ವೈಟ್ ಚಾಲೆಂಜ್’ ತೆಗೆದುಕೊಳ್ಳಿ ಎಂಬ ಪೋಸ್ಟರ್ ತೆಲಂಗಾಣದಲ್ಲಿ ಹರಿದಾಡುತ್ತದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕಠ್ಮಂಡುವಿನ ನೈಟ್‍ಕ್ಲಬ್‍ನಲ್ಲಿ ರಾಹುಲ್ ಗಾಂಧಿ ಫೋಟೋ ವೈರಲ್ ಆಗಿದ್ದು, ವೀಡಿಯೋದಲ್ಲಿ ರಾಹುಲ್ ಅವರು ಕಾಣಿಸಿಕೊಂಡ ನಂತರ ಟಿಆರ್‍ಎಸ್ ‘ವೈಟ್ ಚಾಲೆಂಜ್’ ತೆಗೆದುಕೊಳ್ಳುವಂತೆ ಆಗ್ರಹ ಮಾಡುತ್ತಿವೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಮಾತಿನ ಸಮರ ಉಂಟು ಮಾಡುವಂತೆ ಮಾಡಿದೆ. ಇದನ್ನೂ ಓದಿ: ಅರಗ ಜ್ಞಾನೇಂದ್ರ, ಅಶ್ವತ್ಥ ನಾರಾಯಣ್ ಮೇಲಿನ ಆರೋಪಕ್ಕೆ ಹುರುಳು, ತಿರುಳು ಇಲ್ಲ: ಆರ್.ಅಶೋಕ್
ಬಿಜೆಪಿಯ ಅಮಿತ್ ಮಾಳವೀಯ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಈ ವೀಡಿಯೋವನ್ನು ಟ್ವೀಟ್ ಮಾಡಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಖಾಸಗಿ ವಿವಾಹ ಕಾರ್ಯಕ್ರಮಕ್ಕಾಗಿ ನೇಪಾಳಕ್ಕೆ ಭೇಟಿ ನೀಡಿದ್ದರು ಎಂದು ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.