ಗಾಂಧಿನಗರ: ಗುಜರಾತಿನ ಕಚ್ ಜಿಲ್ಲೆಯ ಕಾಂಡ್ಲಾಪೋರ್ಟ್‌ನಲ್ಲಿ ಗುಜರಾತ್ ಭಯೋತ್ಪಾದನ ನಿಗ್ರಹದಳ (ATS) ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 1,300 ಕೋಟಿ ರೂ. ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ.
ಕಂಟೈನರ್‌ಗಳಲ್ಲಿ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗುಜರಾತ್ ಭಯೋತ್ಪಾದನ ನಿಗ್ರಹ ದಳವು ಡಿಆರ್‌ಐನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಕಂಟೈನರ್‌ನಲ್ಲಿದ್ದ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 70 ಲಕ್ಷ ಬೆಲೆ ಬಾಳುವ ಡ್ರಗ್ಸ್ ಮತ್ತು 800 ಗ್ರಾಂ ತೂಕದ ಎಂಡಿಎಂಎ, ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಪ್ರತಿ 5 ಸಾವಿರದಿಂದ 8 ಸಾವಿರಕ್ಕೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದನು.
ಆರೋಪಿಯು ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದನು. ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೆಜಿಎಫ್ 2 ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸಂಜಯ್ ದತ್ ಮತ್ತೆ ಪುಟಿದೆದ್ದಾರೆ. ಕೆಜಿಎಫ್ 2 ಸಿನಿಮಾದ ಅಧಿರ ಪಾತ್ರವನ್ನು ಅಭಿಮಾನಿಗಳು ಕೊಂಡಾಡುತ್ತಿದ್ದಂತೆಯೇ ಅವರು ಮತ್ತೆ ಅಭಿಮಾನಿಗಳ ಎದುರು ತಮ್ಮನ್ನು ತಾವು ತೆರೆದುಕೊಳ್ಳುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಅವರು ತಮ್ಮ ಖಾಸಗಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ : ‘ದಿ ಡೆಲ್ಲಿ ಫೈಲ್ಸ್’ : 1984ರ ಗಲಭೆಯೇ ಕಥಾವಸ್ತು ಎಂದ ವಿವೇಕ್ ಅಗ್ನಿಹೋತ್ರಿ
ಸಂಜಯ್ ದತ್ ಬದುಕು ಹೂವಿನ ಹಾಸಿಗೆಯಲ್ಲಿ ಪವಡಿಸಿದ್ದಲ್ಲ. ನಾನಾ ರೀತಿಯ ಏರುಪೇರುಗಳನ್ನು ಕಂಡಿದೆ. ಅದರಲ್ಲೂ ಎಕೆ 47 ಗನ್ ಇಟ್ಟುಕೊಂಡಿದ್ದು, ಡ್ರಗ್ಸ್ ತಗೆದುಕೊಳ್ಳುತ್ತಿದ್ದದ್ದು, ಜೈಲಿಗೆ ಹೋಗಿ ಬಂದದ್ದು, ತಮ್ಮ ತಂದೆ ತಾಯಿಗೆ ಬೇಡವಾದ ಮಗನಾಗಿದ್ದು ಹೀಗೆ ಹತ್ತಾರ ಎಡರುತೊಡರುಗಳನ್ನು ಸಂಜಯ್ ದಾಟಿಕೊಂಡು ಬಂದಿದ್ದಾರೆ. ಅವೆಲ್ಲದಕ್ಕೂ ಕಾರಣವನ್ನು ಅವರು ಕೊಟ್ಟಿದ್ದಾರೆ. ಹಾಗಂತ ಅದು ಸರಿಯಾದ ನಡೆಯೂ ಅಲ್ಲ ಎಂದು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾ
ಸಂಜಯ್ ಮೊದಲ ಬಾರಿಗೆ ಡ್ರಗ್ಸ್ ತಗೆದುಕೊಂಡಿದ್ದು ತಮ್ಮ ತಂದೆಯವರು ಬೈದರು ಎನ್ನುವ ಕಾರಣಕ್ಕಾಗಿ ಅಂತೆ. ಎರಡನೇ ಬಾರಿಗೆ ಡ್ರಗ್ಸ್ ತಗೆದುಕೊಂಡಿದ್ದು ಅವರ ತಾಯಿಯ ಕಾರಣಕ್ಕಾಗಿ ಅಂತೆ. ಅವತ್ತು ಅವರು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲವಂತೆ ಹಾಗಾಗಿ ಡ್ರಗ್ಸ್ ಮೂಲಕ ತಮ್ಮನ್ನು ತಾವು ಹಿಡಿದಿಟ್ಟುಕೊಳ್ಳುವ ಸಲುವಾಗಿ ಹಾಗೆಲ್ಲ ಮಾಡಿದ್ದಾರಂತೆ. ಇದನ್ನೂ ಓದಿ : ಲಾಕಪ್ ನಲ್ಲಿ ಗಳಗಳನೆ ಅತ್ತ ಪೂನಂ: ಈ ನಟಿಗೆ ಅದೆಂಥ ಅವಮಾನ?
‘ಹಲವು ವರ್ಷಗಳ ಕಾಲ ನಾನು ನನ್ನ ಲೀವಿಂಗ್ ರೂಮ್ ಮತ್ತು ಶೌಚಗೃಹವನ್ನು ಬಿಟ್ಟು ಆಚೆ ಬಂದಿಲ್ಲ. ಡ್ರಗ್ಸ್ ನನ್ನ ಊಟವಾಗಿತ್ತು. ಅದೇ ನನ್ನ ಸಂಗಾತಿ ಕೂಡ ಆಗಿತ್ತು. ನನ್ನಲ್ಲಿ ಅನೇಕ ನೋವುಗಳು ಇದ್ದವು. ಅವುಗಳನ್ನು ದಾಟಿಕೊಳ್ಳಲು ನಾನು ಹಾಗೆಲ್ಲ ಮಾಡಬೇಕಾಯಿತು. ಅದಕ್ಕಾಗಿ ನಾನು ನನ್ನ ಜೀವನವನ್ನೇ ಹಾಳುಮಾಡಿಕೊಂಡಿದ್ದೇನೆ’ ಎಂದಿದ್ದಾರೆ ಸಂಜಯ್. ಇದನ್ನೂ ಓದಿ : ಪುನೀತ್ ಬ್ಯಾನರ್ ಗಾಗಿ ನಡೆಯಿತು ಮಾರಾಮಾರಿ : ರಾಡ್ ಹಿಡಿದುಕೊಂಡು ಗಲಾಟೆ
ಹುಡುಗಿಯರನ್ನು ಮಾತನಾಡಿಸಲು ಅವರು ಹಿಂಜರಿಯುತ್ತಿದ್ದರಂತೆ. ಹುಡುಗಿಯರ ಜತೆ ಮಾತನಾಡುವ ಸಂದರ್ಭ ಬಂದಾಗ ಅವರು ಡ್ರಗ್ಸ್ ತಗೆದುಕೊಳ್ಳುತ್ತಿದ್ದಂತೆ. ಹಾಗೆ ಮಾಡಿದರೆ ಮಾತ್ರ ಅವರಿಗೆ ಧೈರ್ಯ ಬರುತ್ತಿತ್ತಂತೆ. ಹಾಗೆ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ದರಂತೆ. ಆಗ ಮಾಡಿದ್ದೆಲ್ಲವೂ ಸರಿಯಾಗಿ ಇರಲಲ್ಲ ಎಂದು ನೊಂದುಕೊಂಡಿದ್ದಾರೆ.
ಬೆಂಗಳೂರು: ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಇಲ್ಲಿನ ನೇಪಾಳಿ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬಾಗಲೂರಿನ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಮಾಹಿತಿ ನೀಡಿರುವ ಅಧಿಕಾರಿಗಳು, ನೇಪಾಳದಿಂದ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಬಂದಿದ್ದ ಈತ ಗೂಗಲ್‌ನಲ್ಲಿ ಹುಡುಕಿ ಡ್ರಗ್ಸ್ ಖರೀದಿ ಮಾಡಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಒಂದು ಗ್ರಾಂಗೆ 5 ರಿಂದ 10 ಸಾವಿರ ರೂ. ಪಡೆಯುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿದ್ದು, ಆತನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ: ಶಾಲಾ ಬಾಲಕನೊಬ್ಬ ಅನುಮಾನಾಸ್ಪದವಾಗಿ ನೇಣು ಬಿಗಿದ ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬೆಂಡೆಬೆಟ್ಟ ಹಾಡಿಯಲ್ಲಿ ನಡೆದಿದೆ.
ಗುಮ್ಮನಕೊಲ್ಲಿ ರಸ್ತೆಯ ಮೂಕಾಂಬಿಕ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಂಜುನಾಥ್ (15) ಮೃತ ಬಾಲಕ. ಪೋಷಕರಿಲ್ಲದ ಈತ ಕಳೆದ 5 ವರ್ಷದಿಂದ ಅಜ್ಜ, ಅಜ್ಜಿಯ ಮನೆಯಲ್ಲಿ ವಾಸವಾಗಿದ್ದ. ಗುರುವಾರ ವಾಸದ ಮನೆಯಲ್ಲಿ ವೇಲ್‍ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಆದರೆ ಈತನ ಸಾವಿನ ಬಗ್ಗೆ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಬಾಲಕನ ಅಜ್ಜ, ಅಜ್ಜಿ ಈತನ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಿದ್ದಾರೆ.
ಮೃತ ಬಾಲಕನ ಮೈಮೇಲೆ ಹಲ್ಲೆ ನಡೆಸಿದ ಗುರುತುಗಳಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ ಅಂತ ಒತ್ತಾಯಿಸಿದ್ದಾರೆ. ಈ ಸಂಬಂಧ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಮುಂದೆ ಬಾಲಕನ ಅಜ್ಜ, ಅಜ್ಜಿ ವಿರುದ್ಧ ಸಂಬಂಧಿಕರು ಹರಿಹಾಯ್ದಿದ್ದು, ಪೊಲೀಸರು ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ಗೆ ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಸಾವು
ಬಾಲಕನ ಅಜ್ಜ ಚಂದ್ರಶೇಖರ್ ಹೇಳಿಕೆಯಂತೆ ಬಾಲಕ ಮಂಜುನಾಥ್ ನಶೆಯ ಪದಾರ್ಥ ತೆಗೆದುಕೊಳ್ಳುವ ಚಟ ಅಂಟಿಸಿಕೊಂಡಿದ್ದ. ಈ ಬಗ್ಗೆ ಹಲವು ಬಾರಿ ಬುದ್ದಿವಾದ ಹೇಳಿ ಗದರಿಸಲಾಗಿತ್ತು. ಗುರುವಾರ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ಮಂಜೂರಾಗಿದ್ದರೂ ಕಾರಾಗೃಹದಲ್ಲಿ ಕೈದಿ ನೇಣಿಗೆ ಶರಣು
ಈ ನಡುವೆ ಬಾಲಕ ಸಾಯುವ ಮುನ್ನ ತನ್ನ ಸ್ನೇಹಿತರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಳಿಸಿದ ವಾಯ್ಸ್ ಮೆಸೇಜ್ ಹರಿದಾಡುತ್ತಿದ್ದು, ಮೃತನ ಅತ್ತೆ ಭಾಗ್ಯ ನೀಡಿದ ದೂರಿನ ಮೇರೆಗೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಮಡಿಕೇರಿಗೆ ರವಾನಿಸಿದ್ದಾರೆ.
ಬೆಂಗಳೂರು: ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು.
ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ. ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್ 1 ಸ್ಥಾನಕ್ಕೆ ಏರಲಿ ಎಂದರು.
ಅಂತ:ಕರಣ, ಮಾನವೀಯತೆ ಬಹಳ ಮುಖ್ಯ: ನಾಡಿನ, ಜನರ ರಕ್ಷಣೆ, ಸಮಾಜದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಇಲಾಖೆಯ ಪ್ರಮುಖ ಕರ್ತವ್ಯ. ಇಲಾಖೆಯಲ್ಲಿ ಶಿಸ್ತು, ದಕ್ಷತೆ, ನಿಷ್ಠೆ ಬಹಳ ಮುಖ್ಯ. ದೇಶದಲ್ಲಿ ಕರ್ನಾಟಕ ಪೊಲೀಸ್ ಉನ್ನತ ಸ್ಥಾನದಲ್ಲಿದೆ. ಚುನಾವಣೆ ಸಂದರ್ಭಗಳಲ್ಲಿ ಬೇರೆ ರಾಜ್ಯಗಳಿಂದ ಪೊಲೀಸ್ ತುಕಡಿ ಕರೆಸುವಾಗ ಕರ್ನಾಟಕಕ್ಕೆ ಆದ್ಯತೆ ನೀಡುತ್ತಾರೆ. ನಿಷ್ಪಕ್ಷಪಾತ, ಮಾನವೀಯತೆ, ಅಂತ:ಕಾರಣ ಹಾಗೂ ನಿಸ್ಪೃಹ ಕರ್ತವ್ಯಕ್ಕೆ ನಮ್ಮ ಪೊಲೀಸ್ ಹೆಸರುವಾಸಿಯಾಗಿದೆ ಎಂದು ಹೇಳಿದರು.
ಸಮಾಜದ ಸ್ವಾಸ್ಥ್ಯ, ಶಾಂತಿ ಕಾಪಾಡಲು ತಮ್ಮ ಅಂತ:ಕಾರಣ, ಮಾನವೀಯತೆ ಬಹಳ ಮುಖ್ಯ. ನ್ಯಾಯ ನಿಷ್ಠುರವಾಗಿ ಕೆಲಸ ಮಾಡಬೇಕು. ಫೋರೆನ್ಸಿಕ್ ಪ್ರಯೋಗಾಲಯ ಅಪರಾಧಿಗಳ ಶೋಧನೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೋರ್ಟ್‌ಗಳು ಅದರ ವರದಿಗೆ ಮಹತ್ವ ನೀಡುತ್ತದೆ. ಬೆಂಗಳೂರಿನಲ್ಲಿ ನಾರ್ಕೋಟಿಕ್ಸ್, ಸೈಬರ್ ಹಾಗೂ ಫೋರೆನ್ಸಿಕ್ ಲ್ಯಾಬ್ ವುಳ್ಳ ಠಾಣೆಗಳನ್ನು ತೆರೆಯಲಾಗಿದೆ ಎಂದು ಭರವಸೆ ನೀಡಿದರು.
ಹುಬ್ಬಳ್ಳಿ ಬಳ್ಳಾರಿಯಲ್ಲಿಯೂ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿವಮೊಗ್ಗ ಮುಂತಾದ ಕಡೆಗಳಲ್ಲಿಯೂ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಬೇಕೆಂದು ಸೂಚಿಸಿದರು.
ಕಲ್ಯಾಣ ಕಾರ್ಯಕ್ರಮ: ಪೊಲೀಸರ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸ್ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ, ಸೇವೆ, ಬಂದೋಬಸ್ತಿಗೆ ಭತ್ಯೆ, ಬಡ್ತಿಗಳನ್ನು ನೀಡಿದೆ. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಅನುಮೋದನೆ ಹಾಗೂ ಅನುದಾನ ನೀಡಿದೆ. ಪೊಲೀಸರ ಆರೋಗ್ಯಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪೊಲೀಸರ ದಕ್ಷತೆಗೆ ಅನುಗುಣವಾಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ವೇಗವಾಗಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.
ಆಧುನೀಕರಣ: ಆಧುನೀಕರಣಕ್ಕೆ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ಕರ್ನಾಟಕ ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ. ಸೈಬರ್ ಅಪರಾಧ ಮತ್ತು ನಾರ್ಕೋಟಿಕ್ಸ್ ತಡೆಯಲು ದೊಡ್ಡ ಪ್ರಮಾಣದಲ್ಲಿ ಆಧುನೀಕರಣ ಮಾಡುವ ಅವಶ್ಯಕತೆ ಇದೆ. Crime leads the law ಎನ್ನುವುದನ್ನು ಬದಲಾಯಿಸಿ ಕಾನೂನು ಅಪರಾಧಕ್ಕೆ ಮುಂಚಿತವಾಗಿ ರೂಪುಗೊಳ್ಳುವಂತೆ ಆಗಬೇಕು. ಅದಕ್ಕಾಗಿ ಸಿಬ್ಬಂದಿಗಳ ತರಬೇತಿ, ಆಧುನಿಕ ತಂತ್ರಜ್ಞಾನ ಬಳಕೆಯ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಕರ್ನಾಟಕ ಪೊಲೀಸ್ ಕೈಗೊಂಡಿದೆ ಎಂದರು.
ಆರ್ಥಿಕ ಅಪರಾಧಗಳನ್ನು ಪತ್ತೆ ಹಚ್ಚಲು ಎಸ್.ಎಂ.ಎಸ್. ಮೂಲಕವೇ ಪ್ರಕರಣ ದಾಖಲಿಸಿ ಖಾತೆಗಳನ್ನು ಮುಟ್ಟುಗೋಲು ಹಾಕುವ ಕ್ರಮ ಕೈಗೊಂಡಿದೆ. ಕಳ್ಳತನ ನಿಲ್ಲಿಸಲು ಕರ್ನಾಟಕ ಪೊಲೀಸರಿಗೆ ಸಾಧ್ಯವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:ರೈಲ್ವೆ ಇಲಾಖೆಯಿಂದ ಚಾರ್ ಧಾಮ್ ಯಾತ್ರೆಗೆ ಮೇ ತಿಂಗಳಲ್ಲಿ ವಿಶೇಷ ಆಫರ್
ಡ್ರಗ್ಸ್ ವಿರುದ್ದದ ಸಮರ ನಿರಂತರವಾಗಿರಲಿ: ಮಾದಕವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಕರ್ನಾಟಕ ಪೊಲೀಸ್‌ರು ಅತಿ ಹೆಚ್ಚು ಡ್ರಗ್ಸ್‌ನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ನೂತನ ಕಾನೂನಿನ ಅನ್ವಯ ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಡ್ರಗ್ಸ್ ವಿರುದ್ದದ ಸಮರ ನಿರಂತರವಾಗಿ ನಡೆಯಬೇಕು. ಸಂಪೂರ್ಣವಾಗಿ ನಿಷೇಧ ವಾಗುವವರೆಗೂ ಪ್ರಯತ್ನ ಜಾರಿಯಲ್ಲಿರಬೇಕು. ಶಾಲಾ, ಕಾಲೇಜು, ಯುವಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರೂಪಿಸಬೇಕು. ಸೈಬರ್ ಅಪರಾಧಗಳನ್ನು ಕಂಡುಹಿಡಿಯಲು ಪೊಲೀಸರಿಗೆ ವಿಶೇಷ ತರಬೇತಿ ನೀಡಬೇಕು ಎಂದ ಅವರು, ಕೋವಿಡ್ ಸಂದರ್ಭದಲ್ಲಿ ಪೊಲೀಸರು ಮುಂಚೂಣಿಯಲ್ಲಿದ್ದು ಕೆಲಸ ಮಾಡಿರುವುದು ಶ್ಲಾಘನೀಯ ಮತ್ತು ದಾಖಲಾರ್ಹ ಎಂದು ಅಭಿನಂದನೆ ಸಲ್ಲಿಸಿದರು.
ಸಿಂಧು ಲೋಕನಾಥ್ ಸದ್ದಿಲ್ಲದೇ ಸಿನಿಮಾವೊಂದರ ಶೂಟಿಂಗ್ ಮುಗಿಸಿದ್ದು, ಈ ಸಿನಿಮಾದಲ್ಲಿ ವಿಭಿನ್ನ ರೀತಿಯ ಪಾತ್ರ ಮಾಡಿದ್ದಾರಂತೆ. ಆ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ : ವರುಣ್ ದವನ್ ಜತೆ ‘ಸಿಟಾಡೆಲ್’ ನಲ್ಲಿ ಸಮಂತಾ: ಕ್ಯಾಮರಾ ಕಣ್ಣಿಗೆ ಹಬ್ಬ
ಶ್ರೀಮಂತ ಹುಡುಗಿಯು ತಪ್ಪು ದಾರಿ ತುಳಿದಾಗ ಅವಳ ಜೀವನ ಎತ್ತ ಸಾಗುತ್ತದೆ ಎನ್ನುವುದು ಇವರ ಪಾತ್ರದ ಹಿಂದಿರುವ ಹಿನ್ನೆಲೆಯಂತೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿಸಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?
ದಯಾನಂದ್ ಮತ್ತು ಅಮರ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ರಾಕೇಶ್ ಅಡಿಗ, ವಿನಯ್ ಗೌಡ ಮತ್ತು ಕುಶಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರಂತೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್
ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾವಾಗಿದ್ದು, ಮೊದಲ ಬಾರಿಗೆ ಸಿಂಧು ಇಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದಾರಂತೆ. ಪಾತ್ರಕ್ಕೆ ಹಲವು ಸಿನಿಮಾಗಳನ್ನೂ ನೋಡಿದ್ದಾರಂತೆ. ಯಾರಿಗೂ ಕೇರ್ ಮಾಡದಂತಹ ಹುಡುಗಿಯ ಪಾತ್ರ ಇದಾಗಿದ್ದರಿಂದ ಅನೇಕ ಹುಡುಗಿಯರಿಗೆ ಈ ಪಾತ್ರ ಕನೆಕ್ಟ್ ಆಗಬಹುದು ಎಂದಿದ್ದಾರೆ ಸಿಂಧು. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ
ಮೊನ್ನೆಯಷ್ಟೇ ಖಾಸಗಿ ವಾಹಿನಿಯ ಟಾಕ್ ಶೋನಲ್ಲಿ ಸಿಂಧು ಕಾಣಿಸಿಕೊಂಡಿದ್ದರು. ನೀನಾಸಂ ಸತೀಶ್ ಜತೆ ಡ್ಯುಯೆಟ್ ಹಾಡಿ, ಪ್ರೇಕ್ಷಕರನ್ನು ರಂಜಿಸಿದ್ದರು. ಈ ಕಂತು ಸಾಕಷ್ಟು ಜನರಿಗೆ ಹಿಡಿಸಿತ್ತು. ಇದೀಗ ಸಿನಿಮಾ ಸುದ್ದಿ ಕೊಟ್ಟು ಅಭಿಮಾನಿಗಳಿಗೆ ಖುಷಿ ಪಡಿಸಿದ್ದಾರೆ ಸಿಂಧು.
ಬೆಂಗಳೂರು: ಹುಳಿಮಾವು ಪೊಲೀಸರು ಗಾಂಜಾ ಸೀಜ್ ಪ್ರಕರಣದ ಆರೋಪದ ಮೇಲೆ ಲವ್ ಬರ್ಡ್ಸ್ ಗಳನ್ನು ಬಂಧಿಸಿದ್ದು, ಅವರ ರೋಚಕ ಸ್ಟೋರಿ ತನಿಖೆ ವೇಳೆ ಬಯಲಾಗಿದೆ.
ಬೆಂಗಳೂರಿನ ಹುಳಿಮಾವು ಪೊಲೀಸರು ಆರೋಪಿ ಸಿಗಿಲ್ ವರ್ಗಿಸ್ ಮತ್ತು ವಿಷ್ಣುಪ್ರಿಯಾರನ್ನು ಬಂಧಿಸಿದ್ದರು. ಈ ಪ್ರೇಮಿಗಳಿಂದ ಪೊಲೀಸರು 8 ಕೋಟಿ ರೂ. ಮೌಲ್ಯದ ಹ್ಯಾಶಿಶ್ ಆಯಿಲ್, ಗಾಂಜಾ ಸೀಜ್ ಮಾಡಿದ್ದರು. ದಾಳಿ ವೇಳೆ ಪ್ರೇಮಿಗಳ ಮನೆಯಲ್ಲಿದ್ದ 12 ಲೀಟರ್ 940 ಗ್ರಾಂ ಹ್ಯಾಶಿಶ್ ಆಯಿಲ್, 26 ಕೆಜಿ 250 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಬಂಧಿತ ಲವ್ ಬರ್ಡ್ಸ್ ತಮ್ಮ ರೋಚಕ ಕಥೆಯನ್ನು ಬಾಯಿಬಿಟ್ಟಿದ್ದಾರೆ.
ಸಿಗಿಲ್ ಮತ್ತು ವಿಷ್ಣುಪ್ರಿಯಾ ಕೇರಳ ಮೂಲದವರಾಗಿದ್ದರು. ವಿಷ್ಣುಪ್ರಿಯಾ ಕುಟುಂಬಸ್ಥರು ಕೇರಳದಿಂದ ಕೊಯಮತ್ತೂರುಗೆ ಶಿಫ್ಟ್ ಆಗಿದ್ರು. ವಿಷ್ಣುಪ್ರಿಯಾ ತಾಯಿ ಬಾಲ್ಯದಲ್ಲಿದ್ದಾಗಲೇ ಸಾವನ್ನಪ್ಪಿದ್ದು, ತಂದೆ ಜೊತೆಗೆ ವಾಸವಾಗಿದ್ದಳು. ನಂತರ ಕೊಯಮುತ್ತೂರಲ್ಲೇ ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ
ಪಿಯುಸಿವರೆಗೂ ಕೇರಳದಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಸಿಗಿಲ್, ನಂತರ ಬಿಬಿಎ ಗೆ ಕೊಯಮುತ್ತೂರು ಕಡೆ ಮುಖ ಮಾಡಿದ್ದನು. ಈ ವೇಳೆ ವಿಷ್ಣುಪ್ರಿಯಾ ಭೇಟಿಯಾಗಿದ್ದು, ಮೂಲತಃ ಇಬ್ಬರು ಕೇರಳದವರಾಗಿದ್ದರಿಂದ ಇವರ ಮಧ್ಯೆ ಹೆಚ್ಚು ಆತ್ಮೀಯತೆ ಬೆಳೆದಿದೆ. ಆತ್ಮೀಯತೆ ಇಬ್ಬರ ಮಧ್ಯೆ ಪ್ರೀತಿಯಾಗಿ ಬದಲಾಗಿದೆ.
ಇಬ್ಬರು ಕಾಲೇಜು ದಿನಗಳಿಂದಲೇ ಡ್ರಗ್ಸ್ ದಾಸರಾಗಿದ್ದರು. ಹೆಚ್ಚು ಹಣ ಕೊಟ್ಟು ಗಾಂಜಾ, ಮಾದಕ ವಸ್ತು ಖರೀದಿಸ್ತಿದ್ರು. ಆಗಲೇ ಇಬ್ಬರು ಡ್ರಗ್ಸ್ ಪೆಡ್ಲಿಂಗ್‍ಗೆ ಪ್ಲಾನ್ ಸಹ ಮಾಡಿಕೊಂಡಿದ್ರು. ಕೊಯಮತ್ತೂರಿಗಿಂತ ಬೆಂಗಳೂರಲ್ಲಿ ಡ್ರಗ್ಸ್‍ಗೆ ಹೆಚ್ಚು ಬೇಡಿಕೆ ಇರೋದನ್ನು ಇಬ್ಬರು ತಿಳಿದುಕೊಂಡಿದ್ದಾರೆ. ಈ ಹಿನ್ನೆಲೆ ಮೂರು ತಿಂಗಳ ಹಿಂದೆ ಕೊತ್ತನೂರಿಗೆ ಶಿಫ್ಟ್ ಆಗಿದ್ರು. ಸಿಗಿಲ್ ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕಾಲೇಜಿನಲ್ಲಿ ಸೀಟ್ ಕೊಡಿಸ್ತಿದ್ದ. ವಿಷ್ಣುಪ್ರಿಯಾ ಟ್ಯಾಟು ಆರ್ಟಿಸ್ಟ್ ಆಗಿದ್ದಳು. ಸಿಗಿಲ್ ಕಾಲೇಜಿಗೆ ಸೇರಿಸುವ ವಿದ್ಯಾರ್ಥಿಗಳಿಗೆ ಡ್ರಗ್ಸ್ ನಶೆ ಹತ್ತಿಸ್ತಿದ್ದನು. ಅವರ ಮೂಲಕ ವಿದ್ಯಾರ್ಥಿ ಸಮುದಾಯವನ್ನೇ ಟಾರ್ಗೆಟ್ ಮಾಡ್ತಿದ್ದ.
ಇಬ್ಬರು ವಿಶಾಖಪಟ್ಟಣಕ್ಕೆ ತೆರಳಿ ಬಸ್ ನಲ್ಲಿ ಹ್ಯಾಶಿಶ್ ಆಯಿಲ್ ತರುತ್ತಿದ್ದರು. ಬಸ್‍ನಲ್ಲಿ ಬಂದರೆ ಪೊಲೀಸರು ಪರಿಶೀಲನೆ ಮಾಡಲ್ಲ ಅನ್ನೋ ಯೋಜನೆಯಿಂದ ಈ ರೀತಿ ಮಾಡುತ್ತಿದ್ದರು. ತಾವು ಐಷಾರಾಮಿ ಜೀವನ ನಡೆಸುವುದಕ್ಕೆ ಬೇರೆ ವಿದ್ಯಾರ್ಥಿಗಳನ್ನು ಬಲಿಕೊಡುತ್ತಿದ್ದರು. ಇದನ್ನೂ ಓದಿ: ದಕ್ಷಿಣ ಕಾಶಿ ಶ್ರೀಕ್ಷೇತ್ರ ಶಿವಗಂಗೆಯಲ್ಲಿ ಗಾಂಜಾ ಮಾರಾಟ – ಆರೋಪಿ ಬಂಧನ
ಈ ಲವರ್ಸ್ ಮನೆಯಲ್ಲಿಯೇ ಡ್ರಗ್ಸ್ ಮತ್ತಲ್ಲಿ ಪ್ರತಿ ದಿನ ತೇಲಾಡ್ತಿದ್ದರು. ಮತ್ತಷ್ಟು ಕಿಕ್ ಏರಿಸಿಕೊಳ್ಳಲು ಮಾಡ್ಕೊಂಡಿದ್ರು ಖತರ್ನಾಕ್ ಪ್ಲಾನ್ ಮಾಡಿಕೊಂಡಿದ್ದು, ಮನೆಯಲ್ಲಿ ಕಲರ್ ಕಲರ್ ಲೈಟ್ ಹಾಕಿಕೊಂಡಿದ್ರು. ಮೊದಲು ಗಾಂಜಾ, ಹ್ಯಾಶಿಶ್ ಆಯಿಲ್ ತೆಗೆದುಕೊಳ್ತಿದ್ರು, ನಂತರ ಲೈಟ್ ಆಫ್ ಮಾಡಿ ಕಲರ್ ಲೈಟ್ ಆನ್ ಮಾಡ್ತಿದ್ರು. ಆಗ ಡ್ರಗ್ಸ್ ನಶೆಯಲ್ಲಿ ಕಲರ್ ಲೈಟ್ ನೋಡಿದ್ರೆ ಮತ್ತಷ್ಟು ಕಿಕ್ ಕೊಡುತ್ತಿತ್ತು ಎಂದು ತನಿಖೆ ವೇಳೆ ಹೇಳಿಕೊಂಡಿದ್ದಾರೆ.
ಏನಿದು ಪ್ರಕರಣ?
ಸಿಗಿಲ್ ವರ್ಗಿಸ್ ಮತ್ತು ವಿಷ್ಟುಪ್ರಿಯ ವಿದ್ಯಾಭ್ಯಾಸಕ್ಕಾಗಿ ಕೇರಳದಿಂದ ಬೆಂಗಳೂರಿಗೆ ಬಂದಿದ್ದರು. ಆದರೆ ಡ್ರಗ್ಸ್ ಸೇವನೆ ಚಟಕ್ಕೆ ಬಿದ್ದಿದ್ದ ಇಬ್ಬರು ಪ್ರೇಮಿಗಳು ಐಷಾರಾಮಿ ಜೀವನ ನಡೆಸಲು ಪೆಡ್ಲಿಂಗ್ ನಡೆಸಲು ಶುರುಮಾಡಿದ್ದಾರೆ.
ಕೇರಳ ಮತ್ತು ತಮಿಳುನಾಡಿನ ಕೊಯಮತ್ತೂರಿನಿಂದ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಈ ದಂಧೆಯ ಅಧಿಕೃತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 5 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ – ಪ್ರಾಂಶುಪಾಲ ಅರೆಸ್ಟ್!
ಬಂಧಿತ ಆರೋಪಿಗಳಿಂದ 8 ಕೋಟಿ ರೂ. ಮೌಲ್ಯದ ವಿವಿಧ ರೀತಿಯ ಡ್ರಗ್ಸ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಚಂಡೀಗಢ: ಫಿರೋಜ್‍ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಭದ್ರತೆಯನ್ನು ನೀಡಲಾಗದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಪಂಜಾಬ್‍ನ್ನು ಹೇಗೆ ರಕ್ಷಣೆ ಮಾಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದರು.
ಲುಧಿಯಾದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಚರಂಜಿತ್ ಚನ್ನಿ ಅವರು ಪಂಜಾಬ್‍ನಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ರಚಿಸುವ ಕನಸು ಕಾಣುತ್ತಿದ್ದಾರೆ. ಆದರೆ ಅವರು ದೇಶದ ಪ್ರಧಾನಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಲು ವಿಫಲವಾದ ಮುಖ್ಯಮಂತ್ರಿ ಎನಿಸಿದ್ದಾರೆ. ಇಂತಹವರು ಪಂಜಾಬ್‍ಗೆ ಭದ್ರತೆಯನ್ನು ಒದಗಿಸಲು ಸಾಧ್ಯವೆ ಎಂದು ಕಿಡಿಕಾರಿದರು.
ಕಳೆದ ತಿಂಗಳು ಪಂಜಾಬ್‍ನ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿಮೀ ದೂರದಲ್ಲಿ ಕೆಲವು ಪ್ರತಿಭಟನಾಕಾರರು ರಸ್ತೆ ತಡೆಯಿಂದಾಗಿ 15-20 ನಿಮಿಷಗಳ ಕಾಲ ಫ್ಲೈಓವರ್‌ನಲ್ಲಿ ಪ್ರಧಾನಿ ಮೋದಿ ಅವರ ಬೆಂಗಾವಲು ಪಡೆ ಸಿಲುಕಿಕೊಂಡಿತ್ತು.
ಇದೇ ವೇಳೆ ಪಂಜಾಬ್ ಚುನಾವಣೆಯ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ರಚನೆಯಾದರೆ ಡ್ರಗ್ಸ್ ಸಮಸ್ಯೆಯನ್ನು ನಿವಾರಿಸಲು ಹೆಚ್ಚಿನ ಮಹತ್ವ ನೀಡುತ್ತದೆ. ಪಂಜಾಬ್‍ನಲ್ಲಿ ಸರ್ಕಾರ ರಚನೆಯಾದ ನಂತರ, ನಾವು ರಾಜ್ಯದ ನಾಲ್ಕು ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಜೊತೆಗೆ ಮಾದಕ ದ್ರವ್ಯ ತಡೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕಾರ್ಯಪಡೆ ರಚಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ ಜಾತಿಗಣತಿ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಒತ್ತಾಯ
ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು ಮತ್ತು 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಸ್‍ಎಡಿ-ಬಿಜೆಪಿ ಸರ್ಕಾರವನ್ನು ಸೋಲಿಸಿತ್ತು. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್