Tag: DS Nagabhushan

  • ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ – ಗಣ್ಯರ ಸಂತಾಪ

    ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ – ಗಣ್ಯರ ಸಂತಾಪ

    ಬೆಂಗಳೂರು: ಹಿರಿಯ ಸಾಹಿತಿಗಳೂ ಆಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ್ ಬುಧವಾರ ತಡರಾತ್ರಿ ನಿಧನರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಚಿವ ಎಸ್.ಆರ್.ಪಾಟೀಲ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

    ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ ಅವರು, ಅನ್ಯಾಯ, ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆದ್ರೆ ತಾನೇ ಕೊಟ್ಟ ಭರವಸೆ ಈಡೇರಿಸುವುದು: ಬಿ.ಸಿ.ಪಾಟೀಲ್

    ಕೇಂದ್ರಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಹಾಗೂ ಸಾಮಾಜಿಕ ಚಿಂತಕ ಡಿ.ಎಸ್.ನಾಗಭೂಷಣ ಅವರು ಕಾಲವಾದ ವಿಷಯ ತಿಳಿದು ಬೇಸರವಾಯಿತು. ಗಾಂಧಿ ಚಿಂತನೆಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಿದ ಅವರ ಅಗಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲ, ಖ್ಯಾತ ವಿಮರ್ಶಕ, `ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿ.ಎಸ್.ನಾಗಭೂಷಣ್ ಅವರ ನಿಧನ ಸುದ್ಧಿ ದುಃಖ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.