Tag: DSP

  • ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಹೈದರಾಬಾದ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.

    ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು ಸೇರಿದಂತೆ ಭಾರತ ತಂಡಕ್ಕೆ ಸಲ್ಲಿಸಿದ ಸೇವೆಗಾಗಿ ಸಿರಾಜ್ ಅವರಿಗೆ ಗ್ರೂಪ್-1 ಸರ್ಕಾರಿ ಹುದ್ದೆಯನ್ನು ನೀಡಲಾಗುವುದು ಎಂದು ಘೋಷಿಸಿದ್ದರು. ಇದನ್ನೂ ಓದಿ: ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

    ತೆಲಂಗಾಣ ಪೊಲೀಸ್‌ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯ ಜೊತೆಗೆ, ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರ ಬಳಿ ಸರ್ಕಾರವು 600 ಚದರ ಗಜಗಳಷ್ಟು ಭೂಮಿಯನ್ನು ಕೂಡ ಮಂಜೂರು ಮಾಡಿದೆ.

    ಸಿರಾಜ್ ಪೊಲೀಸ್ ಸಮವಸ್ತ್ರದಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಗೌರವಕ್ಕಾಗಿ ಸಿರಾಜ್ ಅವರು ಸಿಎಂಗೆ ಅಪಾರ ಮೆಚ್ಚುಗೆ ಮತ್ತು ಕೃತಜ್ಞತೆಗಳನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

  • ಭದ್ರತಾ ಪಡೆಗಳ ದಾಳಿ – ಮೂವರು ನಕ್ಸಲರ ಹತ್ಯೆ

    ಭದ್ರತಾ ಪಡೆಗಳ ದಾಳಿ – ಮೂವರು ನಕ್ಸಲರ ಹತ್ಯೆ

    ಭುವನೇಶ್ವರ: ಭದ್ರತಾ ಪಡೆಗಳು ಎನ್‍ಕೌಂಟರ್ (Encounter) ನಡೆದಿ ಓರ್ವ ಕಮಾಂಡೋ ಸೇರಿದಂತೆ ಮೂವರು ನಕ್ಸಲರನ್ನು ಹತ್ಯೆ ಮಾಡಿದ ಘಟನೆ ಒಡಿಶಾದ (Odisha) ಕಲಹಂಡಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಕ್ಸಲ್ ನಿಗ್ರಹದಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಮಿತಾಭ್ ಠಾಕೂರ್, ಮಾವೋವಾದಿಗಳ (Maoists) ಬಗ್ಗೆ ಮಾಹಿತಿ ಸಂಗ್ರಹಿಸುವಾಗ ಕಂಧಮಾಲ್ ಜಿಲ್ಲೆಯ ಗಡಿಯಲ್ಲಿ ಅಡಗಿರುವ ಮಾಹಿತಿ ಸಿಕ್ಕಿತ್ತು. ತಕ್ಷಣ ಭದ್ರತಾ ಪಡೆಯನ್ನು ಕಾರ್ಯಾಚರಣೆಗೆ ಇಳಿಸಲಾಯಿತು. ಎರಡು ಕಡೆಗಳಿಂದ ಗುಂಡಿನ ದಾಳಿ ನಡೆದಿದ್ದು ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ವೇಳೆ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಒಬ್ಬರ ಕಾಲಿಗೆ ಗುಂಡು ತಗುಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಐವರು ಮಾವೋವಾದಿಗಳು ಶರಣು – 30 ದಶಕಗಳ ಬಳಿಕ ನಕ್ಸಲ್ ಮುಕ್ತಗೊಂಡ ಕೌಲೇಶ್ವರಿ ವಲಯ

    ಎನ್‍ಕೌಂಟರ್ ನಡೆದ ಸ್ಥಳದಲ್ಲಿ ಎಕೆ-47 ರೈಫಲ್‍ನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ನಕ್ಸಲರು ಅಡಗಿರುವ ಶಂಕೆ ಇದ್ದು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿವೆ. ಹಲವು ದಿನಗಳಿಂದ ನಕ್ಸಲರ ಚಲನವಲನಗಳನ್ನು ಗುಪ್ತಚರ ಇಲಾಖೆ ಗಮನಿಸಿದ್ದು, ಮಾಹಿತಿ ಕಲೆಹಾಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏ. 26 ರಂದು ಛತ್ತೀಸ್‍ಗಢದಲ್ಲಿ (Chhattisgarh) ನಡೆದ ನಕ್ಸಲ್ ದಾಳಿಯಲ್ಲಿ 10 ಜಿಲ್ಲಾ ರಿಸರ್ವ್ ಗಾರ್ಡ್ (DRG) ಸಿಬ್ಬಂದಿ ಮತ್ತು ಒಬ್ಬ ಚಾಲಕ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ದೇಶದಾದ್ಯಂತ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದೆ. ಇದನ್ನೂ ಓದಿ: ಇಬ್ಬರ ತಲೆಗೆ ಒಟ್ಟು 11 ಲಕ್ಷ ಘೋಷಣೆಯಾಗಿದ್ದ ನಕ್ಸಲರ ಎನ್‍ಕೌಂಟರ್

  • ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಟ್ರಕ್‌ ಹತ್ತಿಸಿ ಕೊಲೆ – 24 ಗಂಟೆಯಲ್ಲಿ 3ನೇ ದುರ್ಘಟನೆ

    ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಟ್ರಕ್‌ ಹತ್ತಿಸಿ ಕೊಲೆ – 24 ಗಂಟೆಯಲ್ಲಿ 3ನೇ ದುರ್ಘಟನೆ

    ಗಾಂಧೀನಗರ: ತಡೆಯಲು ಮುಂದಾದ ಗುಜರಾತ್‌ ಪೊಲೀಸ್‌ಗೆ ಟ್ರಕ್‌ ಹತ್ತಿಸಿ ಕೊಲೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಕಳೆದ 24 ಗಂಟೆಯಲ್ಲಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆ ಮಾಡಿದ ಮೂರನೇ ಘಟನೆ ಇದಾಗಿದೆ.

    ಪೊಲೀಸ್‌ ಕಾನ್‌ಸ್ಟೇಬಲ್‌ ಕಿರಣ್‌ ರಾಜ್‌ ಹತ್ಯೆಯಾದವರು. ಗುಜರಾತ್‌ನ ಬೋರ್ಸಾದ್‌ನಲ್ಲಿ ಪೊಲೀಸ್ ಪೇದೆ ಮೇಲೆ ಟ್ರಕ್‌ ಹತ್ತಿಸಿ ಕೊಲೆ ಮಾಡಲಾಯಿತು. ಇದನ್ನೂ ಓದಿ: DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    ವಾಹನದಲ್ಲಿ ರಾಜಸ್ಥಾನದ ನಂಬರ್‌ ಪ್ಲೇಟ್‌ ಹೊಂದಿದ್ದ ಅನುಮಾನಾಸ್ಪದ ಟ್ರಕ್ ಅನ್ನು ನಿಲ್ಲಿಸಲು ಕಾನ್‌ಸ್ಟೇಬಲ್‌ ಪ್ರಯತ್ನಿಸಿದ್ದಾರೆ. ಆದರೆ ಟ್ರಕ್ ಚಾಲಕ ನಿಲ್ಲಿಸುವ ಬದಲು ವೇಗವನ್ನು ಹೆಚ್ಚಿಸಿ ಅವರ ಮೇಲೆ ಹತ್ತಿಸಿದ್ದಾರೆ. ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಕಾನ್‌ಸ್ಟೇಬಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಟ್ರಕ್ ಚಾಲಕನನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ- ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

    ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಬ್ಬರು ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ಈಚೆಗೆ ನಡೆದಿತ್ತು. ಅಂತೆಯೇ ಜಾರ್ಖಂಡ್‌ನಲ್ಲಿ ತಪಾಸಣೆಗೆ ಮುಂದಾದ ಮಹಿಳಾ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗೆ ವಾಹನದಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವ ಘಟನೆಯೂ ಬೆಳಕಿಗೆ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    DSP‌ ಮಾದರಿಯಲ್ಲೇ ಮಹಿಳಾ PSI ಹತ್ಯೆ?- ತಪಾಸಣೆಗೆ ಮುಂದಾದ ಅಧಿಕಾರಿಗೆ ವಾಹನ ಡಿಕ್ಕಿ ಹೊಡೆದು ಸಾವು

    ರಾಂಚಿ: ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾದ ಡಿಎಸ್‌ಪಿ ಮೇಲೆ ಟ್ರಕ್‌ ಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದ ಬೆನ್ನಲ್ಲೇ, ಜಾರ್ಖಂಡ್‌ನಲ್ಲಿ ತಪಾಸಣೆಗೆ ಮುಂದಾದ ಮಹಿಳಾ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗೆ ವಾಹನದಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

    ಕಳೆದ ರಾತ್ರಿ ವಾಹನ ತಪಾಸಣೆ ವೇಳೆ ಸಂಧ್ಯಾ ಟೋಪ್ನೋ ಹೆಸರಿನ ಮಹಿಳಾ‌ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಧ್ಯಾ ಅವರನ್ನು ತೂಪುದಾನ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ- ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

    ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆಗೆ ಎಸ್‌ಐ ಸಂಧ್ಯಾ ಅವರು ಮುಂದಾಗಿದ್ದಾರೆ. ಈ ವೇಳೆ ವಾಹನ ನಿಲ್ಲಿಸದೆ ಚಾಲಕ, ಅಧಿಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ರಾಂಚಿ ಹಿರಿಯ ಸೂಪರಿಂಟೆಂಡೆಂಟ್‌ ಪೊಲೀಸ್‌ ತಿಳಿಸಿದ್ದಾರೆ.

    ಆರೋಪಿಯನ್ನು ಬಂಧಿಸಲಾಗಿದ್ದು, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಕ್ಷೇತ್ರದ ಉದ್ಯೋಗಿಗಳಿಗೆ ಗುಡ್‌ನ್ಯೂಸ್: ವರ್ಕ್ ಫ್ರಂ ಹೋಮ್ – ಹೊಸ ನಿಯಮ ಹೇಳೋದೇನು ಗಮನಿಸಿ

    ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿತ್ತು. ಈ ಘಟನೆ ಬೆನ್ನಲ್ಲೇ ಮತ್ತೊಬ್ಬರು ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಹಾಯಕ ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಅಧಿಕಾರಿ ಡಿ ಗ್ರೂಪ್ ಮಹಿಳಾ ನೌಕರರು ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ ಎಂದು ಕರೆಯುತ್ತಾನೆ ಎಂದು ನೌಕರರು ಸಾಕ್ಷಿ ಸಮೇತ ದೂರು ನೀಡಿದ್ದಾರೆ.

    CRIME COURT

    ಡಿವೈಎಸ್‌ಪಿ ರ‍್ಯಾಂಕ್‌ನ ಸಹಾಯಕ ಆಡಳಿತಾಧಿಕಾರಿ ಮಲ್ಲಿನಾಥ್ ಕಚೇರಿಯ ಡಿ ಗ್ರೂಪ್ ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ನೀಡುವ ಆರೋಪ ಕೇಳಿಬಂದಿದೆ. ಅನುಕಂಪದ ಆಧಾರದಡಿ ಕೆಲಸಕ್ಕೆ ಸೇರಿರೋ ವಿಧವಾ ಮಹಿಳಾ ನೌಕರರೇ ಇತನಿಗೆ ಟಾರ್ಗೆಟ್ ಎಂದು ನೊಂದ ಮಹಿಳೆಯರು ಎಸ್‌ಪಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ತಡೆಯಬೇಕಾದ್ರೆ ಸೆಕ್ಸ್ ಮಾಡೋದು ನಿಲ್ಲಿಸಿ, ಇಲ್ಲವೇ 8 ವಾರ ಕಾಂಡೋಮ್ ಬಳಸಿ – UK

    crime

    ಮಹಿಳಾ ನೌಕರರು ರಜೆ ಸೇರಿ ಇತರೇ ಸೌಲಭ್ಯ ಬೇಕು ಎಂದರೂ ಲಾಡ್ಜಗೆ ಬಂದು ಬಟ್ಟೆ ಬಿಚ್ಚಬೇಕು ಎಂದು ಮಲ್ಲಿನಾಥ್ ಹೇಳುತ್ತಾನೆ ಎಂದು ಮಹಿಳೆಯರು ಕಷ್ಟ ಹೇಳಿಕೊಂಡಿದ್ದಾರೆ. ಅಲ್ಲದೇ ಎಸ್‌ಪಿ ಕಚೇರಿಯಲ್ಲೇ ಸ್ವಚ್ಛತಾ ಕೆಲಸಕ್ಕೆ ಬರುವ ಡಿ ಗ್ರೂಪ್ ಮಹಿಳಾ ಸಿಬ್ಬಂದಿಯನ್ನು ಎಳೆದು ಕೊಂಡು ಚುಂಬಿಸುವ ಮತ್ತು ಅಸಭ್ಯವಾಗಿ ವರ್ತಿಸುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಗನ್ ಸಂಸ್ಕೃತಿಗೆ ಕಡಿವಾಣ ಹಾಕಲು ನ್ಯೂಜಿಲೆಂಡ್‍ನ ಸಹಕಾರ ಕೇಳಿದ ಬೈಡನ್

    ಈ ದೃಶ್ಯಗಳ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿರೋ ನೊಂದ ಮಹಿಳೆಯರು ಈತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕಳೆದ 2019ರಲ್ಲೇ ಇಬ್ಬರು ಮಹಿಳಾ ಸಿಬ್ಬಂದಿ ಈತನ ವಿರುದ್ಧ ದೂರು ನೀಡಿದ್ದಾರೆ. ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಗೆ ಕಿಸ್ ಮಾಡುವ ಸಿಸಿಟಿವಿ ಕ್ಯಾಮೆರಾ ಪುಟೇಜ್ ಸಹಿತ ದೂರು ನೀಡಿದ್ದು, ಆಗಿನ ಡಿವೈಎಸ್‌ಪಿ ವೆಂಕಟಪ್ಪ ನಾಯಕ ತನಿಖೆ ಮಾಡಿ ವರದಿ ನೀಡಿದ್ದಾರೆ.

    CRIME

    ಕೊಪ್ಪಳ ಎಸ್‌ಪಿ ಕಚೇರಿಯಲ್ಲಿನ ಎಲ್ಲ ಡಿ ಗ್ರೂಪ್ ನೌಕರರನ್ನು ತನಿಖೆಗೆ ಒಳಪಡಿಸಲಾಗಿದ್ದು, ದೂರು ಪ್ರತಿಯಲ್ಲಿ ಹೆಸರು ಇರುವ ರೇಣುಕಮ್ಮ ಮತ್ತು ರೇಖಾ ಕೂಡ ಇಂಥ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನಂತರವೂ ಕೆಲ ಮಹಿಳಾ ಸಿಬ್ಬಂದಿಗೆ ಕಿರುಕುಳ ಮುಂದುವರಿದಿದೆ. ಈ ಹಿನ್ನೆಲೆ ಮಲ್ಲಿನಾಥ್‌ನ ಕಾಟಕ್ಕೆ ಬೇಸತ್ತು ಇದೀಗ ದೂರು ಪ್ರತಿ ಮತ್ತು ಸಿಸಿಟಿವಿ ಕ್ಯಾಮೆರಾ ಫುಟೇಜ್‌ಗಳನ್ನು ಮಹಿಳಾ ನೌಕರರು ಮಾಧ್ಯಮಗಳಿಗೆ ತಲುಪಿಸಿದ್ದಾರೆ. ಈ ಎಲ್ಲ ಆರೋಪಗಳನ್ನು ಮಲ್ಲಿನಾಥ್ ಅಲ್ಲಗಳೆದಿದ್ದಾನೆ.

    CRIME 2

    ಡಿವೈಎಸ್‌ಪಿ ರ‍್ಯಾಂಕ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಆತನನ್ನು ಅಮಾನತು ಮಾಡಿ. ತನಿಖೆ ಮಾಡಿದ್ರೆ ಮಾತ್ರ ಕೆಳ ಹಂತದ ನೌಕರರು ಸತ್ಯ ಬಾಯಿಬಿಡಲು ಸಾಧ್ಯ. ಆದರೆ ಖಡಕ್ ನಿರ್ಧಾರಕ್ಕೆ ಯಾವೊಬ್ಬ ಅಧಿಕಾರಿಯೂ ಮುಂದಾಗದಿರುವುದು ನೊಂದ ಮಹಿಳೆಯರಲ್ಲಿ ನ್ಯಾಯ ಸಿಗುವ ಆಸೆ ಕಮರಿದೆ.

  • ಫ್ರೆಂಡ್‌ ಜೊತೆ ಜ್ಯೂಸ್ ಕುಡಿಯಲು ಬಂದಿದ್ದ ಯುವತಿ ಶಾಪಿಂಗ್‌ ಮಾಲ್‌ನಿಂದ ಆಯತಪ್ಪಿ ಬಿದ್ದು ಸಾವು

    ಫ್ರೆಂಡ್‌ ಜೊತೆ ಜ್ಯೂಸ್ ಕುಡಿಯಲು ಬಂದಿದ್ದ ಯುವತಿ ಶಾಪಿಂಗ್‌ ಮಾಲ್‌ನಿಂದ ಆಯತಪ್ಪಿ ಬಿದ್ದು ಸಾವು

    ಬೆಂಗಳೂರು: ಜ್ಯೂಸ್ ಕುಡಿಯಲು ಶಾಂಪಿಗ್ ಕಾಂಪ್ಲೆಕ್ಸ್‌ಗೆ ಬಂದಿದ್ದ ಯುವತಿ ವಾಶ್‍ರೂಂನಿಂದ ಕಾಲು ಜಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿಯನ್ನು ಕಾಪಾಡಲು ಹೋದ ಯುವಕನಿಗೆ ಗಂಭೀರ ಗಾಯವಾದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

    ಲಿಯಾ(18) ಮೃತ ಯುವತಿ ಹಾಗೂ ಪೀಟರ್ (18) ಗಾಯಗೊಂಡ ಯುವಕ. ಬೆಂಗಳೂರಿನ ಫ್ರೇಜರ್ ಟೌನ್ ನಿವಾಸಿ ಲಿಯಾ ಹಾಗೂ ಆಂಧ್ರ ಮೂಲದ ಪೀಟರ್ ಇಬ್ಬರೂ ಸೆಂಟ್ ಜಾನ್ಸ್ ಕಾಲೇಜಿನಲ್ಲಿ ಓದುತ್ತಾ ಇದ್ದರು. ಈ ಇಬ್ಬರೂ ಸ್ನೇಹಿತರು ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್‌ಗೆ ಬಂದಿದ್ದರು.

    ಫುಡ್ ಕೋರ್ಟ್‍ನಲ್ಲಿ ಊಟ ಮುಗಿಸಿ ವಾಷ್ ರೂಂಗೆ ಹೋಗಿದ್ದರು. ಈ ವೇಳೆ ಲಿಯಾ ಕಾಲುಜಾರಿ ಬಿದ್ದಿದ್ದಾಳೆ. ಅವಳನ್ನು ಕಾಪಾಡಲು ಹೋದ ಪೀಟರ್ ಕೂಡ ಆಯತಪ್ಪಿ ಬಿದ್ದಿದ್ದಾನೆ. ಘಟನೆ ವೇಳೆ ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಘಟನೆ ಕುರಿತು ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ

    POLICE JEEP

    ಈ ಬಗ್ಗೆ ಮಾತನಾಡಿದ ಡಿಸಿಪಿ ಶರಣಪ್ಪ ಅವರು, ಸ್ನೇಹಿತರೊಂದಿಗೆ ಲೀಯಾ ಜ್ಯೂಸ್ ಕುಡಿಯೋದಕ್ಕೆ ಬಂದಿದ್ದರು. ವಾಷ್ ರೂಂಗೆ ಹೋಗಿ ಬರುವಾಗ ಸ್ಟೇರ್ ಕೇಸ್‍ನಿಂದ ಇಬ್ಬರು ಕಾಲು ಜಾರಿ ಕೆಳಗಡೆ ಬಿದ್ದಿದ್ದಾರೆ. ಆತ್ಮಹತ್ಯೆ ಯತ್ನದ ಬಗ್ಗೆ ಪ್ರಾಥಮಿಕವಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಡಿಸಿ ಕಚೇರಿ ಮೇಲೆ ಎಸಿಬಿ ದಾಳಿ – ಇಬ್ಬರು ಭ್ರಷ್ಟ ಅಧಿಕಾರಿಗಳು ಬಲೆಗೆ

  • ಪತ್ನಿ, ಪುತ್ರ ಆಸ್ಪತ್ರೆಯಿಂದ ಮನೆಗೆ ಬರೋಷ್ಟರಲ್ಲಿ ಶವವಾಗಿ ಡಿಎಸ್‍ಪಿ ಪತ್ತೆ

    ಪತ್ನಿ, ಪುತ್ರ ಆಸ್ಪತ್ರೆಯಿಂದ ಮನೆಗೆ ಬರೋಷ್ಟರಲ್ಲಿ ಶವವಾಗಿ ಡಿಎಸ್‍ಪಿ ಪತ್ತೆ

    – ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆ
    – ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ರು

    ಹೈದರಾಬಾದ್: ಅನುಮಾನಾಸ್ಪದ ರೀತಿಯಲ್ಲಿ ಶ್ರೀಕಾಕುಲಂ ಉಪ ಪೊಲೀಸ್ ವರಿಷ್ಠಾಧಿಕಾರಿ (ವಿಶೇಷ ವಿಭಾಗ) ಕೃಷ್ಣ ವರ್ಮಾ ಅವರು ವಿಶಾಖಪಟ್ಟಣಂನ ತಮ್ಮ ನಿವಾಸದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

    ಡಿಎಸ್‍ಪಿ ಅವರ ಮಗನಿಗೆ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಡಿಎಸ್‍ಪಿ ಅವರ ಪತ್ನಿ ಮತ್ತು ಮಗ ಆಸ್ಪತ್ರೆಗೆ ಹೋಗಿದ್ದರು. ಡಿಎಸ್‍ಪಿ ವರ್ಮಾ ಮನೆಯಲ್ಲಿಯೇ ಇದ್ದರು. ಆದರೆ ಪತ್ನಿ ಮತ್ತು ಮಗ ಮನೆಗೆ ಹಿಂದಿರುಗಿ ಬಂದು ನೋಡಿದಾಗ ನೆಲದ ಮೇಲೆ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಾಥಮಿಕ ತನಿಖೆಯ ಪ್ರಕಾರ, ಶುಕ್ರವಾರ ಬೆಳಗ್ಗೆ ಸುಮಾರು 10.30 ರಿಂದ ಮಧ್ಯಾಹ್ನ 1.30ರ ನಡುವೆ ಸಾವು ಸಂಭವಿಸಿರಬಹುದು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ಸದ್ಯಕ್ಕೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ವರದಿಯ ಪ್ರಕಾರ ಡಿಎಸ್‍ಪಿ ಆತ್ಮಹತ್ಯೆಗೆ ಶರಣಾಗಿರಬೇಕು ಎಂದು ಹೇಳಲಾಗಿದೆ.

    ಡಿಎಸ್‍ಪಿ ಮನೆಯೊಳಗೆ ನೇಣು ಹಾಕಿಕೊಳ್ಳಲು ಹಗ್ಗ ಕಟ್ಟುವಾಗ ಕುರ್ಚಿ ಅಥವಾ ಟೇಬಲ್‍ನಿಂದ ಕೆಳಗೆ ಬಿದ್ದಂತೆ ಕಾಣುತ್ತದೆ. ಅಲ್ಲದೆ ಅವರ ಕುತ್ತಿಗೆಯಲ್ಲಿ ಹಗ್ಗದ ಗುರುತು ಇದೆ. ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದೇವೆ. ತನಿಖೆಯ ನಂತರ ಇದು ಆತ್ಮಹತ್ಯೆವೋ ಇಲ್ಲವೋ ಎಂಬುದು ತಿಳಿಯುತ್ತದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಷಣ್ಮುಖ ರಾವ್ ತಿಳಿಸಿದ್ದಾರೆ.

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಂಗ್ ಜಾರ್ಜ್ ಆಸ್ಪತ್ರೆಗೆ ರವಾನಿಸಲಾಗಿದೆ. ವರ್ಮಾ ಅವರು ಆರೋಗ್ಯದ ಕಾರಣ ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಅವರು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಕೃಷ್ಣ ವರ್ಮಾ ವೈಜಾಗ್‍ನ ಮೂರು ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ್ದರು. ಶ್ರೀಕಾಕುಲಂಗೆ ವರ್ಗಾವಣೆಯಾಗುವ ಮೊದಲು ವರ್ಮಾ ಅವರು ವೈಜಾಗ್‍ನಲ್ಲಿ ಪೊಲೀಸ್ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

  • ಕ್ರಿಕೆಟ್ ಆಟಗಾರ್ತಿ ಹರ್ಮನ್‍ಪ್ರೀತ್ ಕೌರ್ ಗೆ  ಡಿಎಸ್‍ಪಿ ಹುದ್ದೆ ರದ್ದು!

    ಕ್ರಿಕೆಟ್ ಆಟಗಾರ್ತಿ ಹರ್ಮನ್‍ಪ್ರೀತ್ ಕೌರ್ ಗೆ ಡಿಎಸ್‍ಪಿ ಹುದ್ದೆ ರದ್ದು!

    ಚಂಡೀಗಡ: ನಕಲಿ ಪದವಿ ಪ್ರಮಾಣ ಪತ್ರಗಳನ್ನು ನೀಡಿದ್ದ ಕಾರಣ ಟೀಂ ಇಂಡಿಯಾ ಮಹಿಳಾ ಟಿ-20 ಕ್ರಿಕೆಟ್ ತಂಡದ ನಾಯಕಿ ಹರ್ಮನ್‍ಪ್ರೀತ್ ಕೌರ್ ಅವರಿಗೆ ಗೌರವಾರ್ಥವಾಗಿ ನೀಡಿದ್ದ ಡಿಎಸ್‍ಪಿ ಹುದ್ದೆಯನ್ನು ಪಂಜಾಬ್ ಸರ್ಕಾರ ಹಿಂಪಡೆದುಕೊಂಡಿದೆ.

    2017ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ನಲ್ಲಿ ಭಾರತ ರನ್ನರ್ ಅಪ್ ಪ್ರಶಸ್ತಿಗಳಿಸಲು ಹರ್ಮತ್‍ಪ್ರೀತ್ ನಿರ್ಣಾಯಕ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಡಿಎಸ್‍ಪಿ ಹುದ್ದೆಯನ್ನು ನೀಡಿ ಗೌರವಿಸಿತ್ತು.

    ಈ ಮೊದಲು ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದ ಅವರು ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ದೃಷ್ಟಿಯಿಂದ ರೈಲ್ವೆ ಇಲಾಖೆ ನೀಡಿದ್ದ ಕೆಲಸಕ್ಕೆ ರಾಜೀನಾಮೆ ನೀಡಿ ಡಿಎಸ್‍ಪಿ ಹುದ್ದೆಯನ್ನು ಅಲಂಕರಿಸಿದ್ದರು.

    ಮಾರ್ಚ್ 1 ರಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಡಿಎಸ್‍ಪಿ ಸುರೇಶ್ ಅರೋರರವರು ಹರ್ಮನ್‍ಪ್ರೀತ್ ಕೌರ್ ರವರಿಗೆ ಡಿಎಎಸ್‍ಪಿ ಹುದ್ದೆ ಜವಾಬ್ದಾರಿಯನ್ನು ನೀಡಿ ಗೌರವಿಸಿದ್ದರು. ಡಿಎಸ್‍ಪಿ ಹುದ್ದೆಗೆ ಸಂಬಂಧಿಸಿದಂತೆ ಅವರು ಉತ್ತರ ಪ್ರದೇಶದ ಮೀರತ್ ನ ಚೌಧರಿ ಸಿಂಗ್ ವಿಶ್ವ ವಿದ್ಯಾನಿಲಯದಲ್ಲಿ ಪದವಿ ಪೂರ್ಣಗೊಳಿಸಿದರ ಪ್ರಮಾಣ ಪತ್ರವನ್ನು ಇಲಾಖೆಗೆ ಸಲ್ಲಿಸಿದ್ದರು.

    ಇಲಾಖೆಗೆ ಸಲ್ಲಿಸಿದ್ದ ದಾಖಲೆಗಳನ್ನು ಸಂಬಂಧಪಟ್ಟ ವಿಶ್ವವಿದ್ಯಾಲಯದ ಜೊತೆ ಪರಿಶೀಲನೆ ನಡೆಸಿದಾಗ ಡಿಗ್ರಿ ಪ್ರಮಾಣಪತ್ರಗಳು ನಕಲಿಯೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹರ್ಮನ್‍ಪ್ರೀತ್ ಕೌರ್ ರವರಿಗೆ ನೀಡಿದ ಡಿಎಸ್‍ಪಿ ಹುದ್ದೆಯನ್ನು ಪಂಜಾಬ್ ಸರ್ಕಾರ ಹಿಂತೆಗೆದುಕೊಂಡಿದೆ.

    ಪದವಿ ಪ್ರಮಾಣಪತ್ರಗಳು ನಕಲಿ ಆಗಿರುವುದರಿಂದ ಅವರು ಡಿಎಸ್‍ಪಿ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಅವರ ಕನಿಷ್ಠ ವಿದ್ಯಾರ್ಹತೆ 12ನೇ ತರಗತಿ ಆಗಿರುವುದರಿಂದ ಅವರು ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಯಲ್ಲಿ ಮುಂದುವರೆಯಬಹುದು. ಈ ಕುರಿತು ಕ್ರಿಕೆಟ್ ಆಟಗಾರ್ತಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಹಿಂದೆ ಕಾಮನ್‍ವೇಲ್ತ್ ಕೂಟದಲ್ಲಿ ಚಿನ್ನದ ಪದಕ ನೀಡಿದ್ದ ಮಂದೀಪ್ ಕೌರ್ ಅವರಿಗೆ ಪಂಜಾಬ್ ಸರ್ಕಾರ ಡಿಎಸ್‍ಪಿ ಹುದ್ದೆಯನ್ನು ನೀಡಿತ್ತು. ಬಳಿಕ ದಾಖಲಾತಿ ಪರಿಶೀಲನೆ ವೇಳೆ ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡಿದ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗಿದ್ದ ಡಿಎಸ್‍ಪಿ ಹುದ್ದೆಯನ್ನು ಹಿಂದಕ್ಕೆ ಪಡೆದುಕೊಂಡಿತ್ತು.