Tag: Dunia Vijay

  • ದುನಿಯಾ ವಿಜಯ್ ಜೈಲಿಂದ ಬಿಡಿಸಿದ್ದ ಆರೋಪಿಯಿಂದ ಜೋಡಿ ಕೊಲೆ

    ದುನಿಯಾ ವಿಜಯ್ ಜೈಲಿಂದ ಬಿಡಿಸಿದ್ದ ಆರೋಪಿಯಿಂದ ಜೋಡಿ ಕೊಲೆ

    – ದುನಿಯಾ ವಿಜಿ ಅವರ ಆಶಯವನ್ನು ವ್ಯರ್ಥ ಮಾಡಿದ ಕೊಲೆ ಪಾತಕಿ

    ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಡಬಲ್‌ ಮರ್ಡರ್‌ ಮಾಡಿರುವ ಆರೋಪಿಯನ್ನು ಈ ಹಿಂದೆ ಪ್ರಕರಣವೊಂದರಲ್ಲಿ ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Dunia Vijay) ಜೈಲಿಂದ ಬಿಡಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಆದರೆ, ದುನಿಯಾ ವಿಜಿ ಅವರ ಆಶಯವನ್ನು ಕೊಲೆ ಪಾತಕಿ ವ್ಯರ್ಥ ಮಾಡಿದ್ದಾನೆ ಎನ್ನಲಾಗಿದೆ.

    ಬಾಗಲೂರು ಡಬಲ್ ಮರ್ಡರ್ ಆರೋಪಿ ಸುರೇಶ್‌ಗೆ ಈ ಹಿಂದೆ ಪ್ರಕರಣವೊಂದರಲ್ಲಿ ಶ್ಯೂರಿಟಿ ಹಣ ನೀಡಿ ದುನಿಯಾ ವಿಜಯ್ ಬಿಡಿಸಿದ್ದರು. ಈ ಹಿಂದೆ ಡಬಲ್ ಮರ್ಡರ್ ಕೇಸ್ ಹಾಗೂ ರೇಪ್‌ ಕೇಸಲ್ಲಿ ಆರೋಪಿ ಸುರೇಶ್‌ ಜೈಲು ಸೇರಿದ್ದ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ಡಬಲ್‌ ಮರ್ಡರ್‌ ಕೇಸ್‌ – ಆರೋಪಿ ಬಂಧನ

    10 ವರ್ಷ ಶಿಕ್ಷೆ ಅನುಭವಿಸಿದ್ದ ಅಪರಾಧಿಗೆ ಶ್ಯೂರಿಟಿ ಹಣ ನೀಡಲು ಯಾರೂ ಇರಲಿಲ್ಲ. ಈ ಸಮಯದಲ್ಲಿ ಒಂದಷ್ಟು ಅಪರಾಧಿಗಳಿಗೆ ತಲಾ ಮೂರು ಲಕ್ಷದಂತೆ ಶ್ಯೂರಿಟಿ ಹಣವನ್ನು ನಟ ವಿಜಯ್‌ ಕಟ್ಟಿದ್ದರು. ಈ ವೇಳೆ ಸುರೇಶ್‌ಗೂ ಕೂಡ ಮೂರು ಲಕ್ಷ ಶ್ಯೂರಿಟಿ ಹಣ ನೀಡಿ ಜೈಲಿಂದ ಬಿಡುಗಡೆಗೊಳಿಸಿದ್ದರು.

    ಜೈಲಿಂದ ಬಿಡುಗಡೆ ಬಳಿಕ ಮಾರ್ಕೆಟ್‌ನಲ್ಲಿ ಕೊತ್ತಮಿರಿ ಸೊಪ್ಪು ಮಾರಾಟ ಮಾಡಿ ಸುರೇಶ್‌ ಜೀವನ ಸಾಗಿಸುತ್ತಿದ್ದ. ಸುರೇಶ್ ಸಂಬಂಧಿಯಿಂದ ಶೆಡ್‌ನಲ್ಲಿ ಕೆಲಸ ಪಡೆದುಕೊಂಡಿದ್ದ. ಗುಜರಿ ಮಾರುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದ. ಕೊಲೆಯಾದ ನಾಗೇಶ್ ಮತ್ತು ಮಂಜುನಾಥ್, ‘ನೀನು ಕಳ್ಳ, ಕೊಲೆಗಾರ’ ಅಂತಾ ಹೀಯಾಳಿಸಿದ್ದರು. ಹೀಗಾಗಿ, ಈಚೆಗೆ ಇಬ್ಬರನ್ನೂ ಆರೋಪಿ ಸುರೇಶ್‌ ಕೊಲೆ ಮಾಡಿದ್ದ. ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್​ನಲ್ಲೂ ಪ್ರಜ್ವಲ್‌ ರೇವಣ್ಣಗೆ ಸಿಗಲಿಲ್ಲ ಜಾಮೀನು!

  • ದುನಿಯಾ ವಿಜಯ್‍ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಚಯ್ಯ’ನಾದ ಭೀಮ

    ದುನಿಯಾ ವಿಜಯ್‍ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಚಯ್ಯ’ನಾದ ಭೀಮ

    ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ (Satya Prakash) ಅವರು ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ  (Jadesh Hampi) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ದುನಿಯಾ ವಿಜಯ್ (Duniya Vijay) ನಾಯಕ. ಈ ಚಿತ್ರಕ್ಕೆ ಈಗ ಟೈಟಲ್ ಫಿಕ್ಸ್ ಆಗಿದೆ. ರಾಚಯ್ಯ (Rachaiah) ಅನ್ನೋ ಕ್ಯಾಚಿ ಶೀರ್ಷಿಕೆಯನ್ನು ಚಿತ್ರಕ್ಕೆ ಇಡಲಾಗಿದೆ.

    ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ.  ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ.   ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ. ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ ಎಂದಿದ್ದಾರೆ ದುನಿಯಾ ವಿಜಯ್.

     

    ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್  ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ  ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್,  ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ ನಾಯಕ ದುನಿಯಾ ವಿಜಯ್.

  • ಮೂರನೇ ಬಾರಿ ಒಂದಾದ ದುನಿಯಾ ವಿಜಯ್, ನಿರ್ದೇಶಕ ಎಸ್.ನಾರಾಯಣ್

    ಮೂರನೇ ಬಾರಿ ಒಂದಾದ ದುನಿಯಾ ವಿಜಯ್, ನಿರ್ದೇಶಕ ಎಸ್.ನಾರಾಯಣ್

    ಹೆಸರಾಂತ ದಿಗ್ಗಜರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್ (S. Narayan) ಅವರ  ನಿರ್ದೇಶನದ  “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ (Duniya Vijay) ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

    ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.

    ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

    ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು  ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ.  ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ “ಪ್ರೊಡಕ್ಷನ್ ನಂ 1” ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

  • ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ

    ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆಲ್ಲಿಸುವ ಮೂಲಕ ಮತದಾರ ಕಾಂಗ್ರೆಸ್ (Congress) ಪಕ್ಷಕ್ಕೆ ಬಹುಮತ ಘೋಷಣೆ ಮಾಡಿದ್ದಾನೆ. ಐದು ವರ್ಷದ ಮಹಾ ಅಜ್ಞಾತವಾಸವನ್ನು ಮುಗಿಸಿಕೊಂಡು ಕಾಂಗ್ರೆಸ್ ನಾಯಕರು ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದಾರೆ. ಬಿಜೆಪಿ ಪರವಾಗಿ ಸ್ಟಾರ್ ನಟರು ಕ್ಯಾಂಪೇನ್ ಮಾಡಿದರೂ, ಅಂದುಕೊಂಡಷ್ಟು ಸೀಟು ಗೆಲ್ಲಲಿಲ್ಲ ಎನ್ನುವ ನೋವಿನ ನಡುವೆಯೂ ಕೆಲ ನಟ ನಟಿಯರು ಹಾಗೂ ನಿರ್ದೇಶಕರು ಕಾಂಗ್ರೆಸ್ ಪಕ್ಷದ ಗೆಲುವಿನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

    ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಪ್ರಕಾಶ್ ರಾಜ್ ಮೊದಲಿನಿಂದಲೂ ಬಿಜೆಪಿ ವಿರೋಧಿ ಹೇಳಿಕೆಗಳನ್ನು ಕೊಡುತ್ತಾ ಬಂದಿದ್ದಾರೆ. ಆದರೆ, ಅಚ್ಚರಿ ಎನ್ನುವಂತೆ ಬಿಜೆಪಿ ಸರಕಾರದ ವಿರುದ್ಧ ಕೆಲ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕಿಡಿಕಾರಿದ್ದಾರೆ. ಇನ್ನೂ ಕೆಲವರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ.

    ಗೂಗ್ಲಿ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟಿರುವ ನಿರ್ದೇಶಕ ಪವನ್ ಒಡೆಯರ್ (Pawan Wodeyar), ಟ್ವೀಟ್ ಮಾಡಿ, ‘ಸಿಎಂ ಬಸವರಾಜ್ ಬೊಮ್ಮಾಯಿ ಅವರದ್ದು ದುರಹಂಕಾರದ ವ್ಯಕ್ತಿತ್ವ’ ಎಂದಿದ್ದಾರೆ. ‘ಡೊಳ್ಳು ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಾಗ ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೊರಿದ್ದೆವು. ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ. ತೆಲುಗು ಚಿತ್ರದ ಕಾರ್ಯಕ್ರಮಕ್ಕೆ ಮಾಮ 3 ತಾಸು ಕುಳಿತುಕೊಳ್ಳುವಷ್ಟು ಸಮಯವಿದೆ. ಕನ್ನಡಿಗರು ಮುಟ್ಟಾಳರಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

    ಕನ್ನಡದಲ್ಲಿ ‘ರಾಮ ಬಾಮಾ ಶ್ಯಾಮ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಕಮಲ್ ಹಾಸನ್ (Kamal Haasan) ಕೂಡ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ‘ರಾಹುಲ್ ಗಾಂಧಿ ಅವರೆ, ಈ ಅದ್ಭುತ ವಿಜಯಕ್ಕೆ ನಿಮಗೆ ಅಭಿನಂದನೆಗಳು. ಗಾಂಧೀಜಿಯವರಂತೆ ನೀವು ಜನರ ಹೃದಯದೊಳಗೆ ನಡೆದುಕೊಂಡು ಹೋದಿರಿ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು: ಸಿ.ಟಿ ರವಿ

    ನಟ ದುನಿಯಾ ವಿಜಯ್ (Dunia Vijay) ಕೂಡ ಟ್ವೀಟ್ ಮಾಡಿದ್ದು, ‘ತಾವು ಪ್ರಜ್ಞಾವಂತ ಮತದಾರರು ಎಂಬುದನ್ನು ಸಾಬೀತುಪಡಿಸಿದ್ದೀರಿ. ಗೆದ್ದವರಿಗೆ ಶುಭಾಶಯಗಳು. ಸೋತವರು ಆತ್ಮವಿಮರ್ಶೆ ಮಾಡಿಕೊಳ್ಳುವ ಕಾಲ. ಸಂಪೂರ್ಣ ಬಹುಮತ ಪಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳು. ಸಾಮಾನ್ಯ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಉತ್ತಮ ಆಡಳಿತ ನೀಡಿ’ ಎಂದು ಬರೆದುಕೊಂಡಿದ್ದಾರೆ.

    ನಟ ಶಿವರಾಜ್ ಕುಮಾರ್, ಕಾರುಣ್ಯ ರಾಮ್, ನಿರ್ದೇಶಕ ಮಂಸೋರೆ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಗೆಲುವನ್ನು ಸಂಭ್ರಮಿಸಿದ್ದಾರೆ. ಜೊತೆಗೆ ಉತ್ತಮ ಆಡಳಿತ ಕೊಡಲಿ ಎಂದು ಹಾರೈಸಿದ್ದಾರೆ. ನಿನ್ನೆಯಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ಶುಭಾಶಯಗಳನ್ನು ಹೇಳಿದ್ದು, ಚಿತ್ರೋದ್ಯಮಕ್ಕೂ ಪಕ್ಷ ಸಹಕಾರ ನೀಡಲಿ ಎಂದು ಆಶಿಸಿದ್ದಾರೆ.

  • ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು

    ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು

    – ವರುಣಾ ಕ್ಷೇತ್ರದಲ್ಲಿ ಸ್ಯಾಂಡಲ್‌ವುಡ್‌ ನಟ-ನಟಿಯರ ಅಬ್ಬರದ ಪ್ರಚಾರ

    ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಪರವಾಗಿ ವರುಣಾ ಕ್ಷೇತ್ರದಲ್ಲಿ (Varuna Constituency) ಗುರುವಾರ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭರ್ಜರಿ ಪ್ರಚಾರ ನಡೆಸಿದರು.

    ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರಮ್ಯಾ (Ramya), ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಮತ್ತು ಸಿದ್ಧರಾಮಯ್ಯನವರಿಗೆ ಆಪ್ತರಾಗಿರುವ ದುನಿಯಾ ವಿಜಯ್ (Dunia Vijay) ಹಾಗೂ ನಿಶ್ಚಿಕಾ ನಾಯ್ದು ವರುಣಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಇದನ್ನೂ ಓದಿ: ಅಂಜನಾದ್ರಿ ಅಭಿವೃದ್ಧಿ ಮಾಡ್ತೇವೆ, ಯುವಕರಿಗೆ ಆಂಜನೇಯನ ವಿಚಾರಗಳ ಬೆಳೆಸಲು ವಿಶೇಷ ಕಾರ್ಯಕ್ರಮ: ಡಿಕೆಶಿ

    ಈ ವೇಳೆ ಪಬ್ಲಿಕ್‌ ಟಿವಿಯೊಂದಿಗೆ ಮಾತನಾಡಿದ ನಿಶ್ವಿಕಾ ನಾಯ್ಡು (Nishvika Naidu), ಸಿದ್ದರಾಮಯ್ಯ ಅಪ್ಪಾಜಿ ಪರ ಜನರ ಪ್ರೀತಿ ಉಕ್ಕಿ ಹರಿಯುತ್ತಿದೆ. ಜನರು ಅವರಿಗೆ ಹೆಚ್ಚಿನ ಪ್ರೀತಿ ತೋರಿಸುತ್ತಿದ್ದಾರೆ ಎಂದು ಹೇಳಿದರು.

    ಇದೇ ಮೊದಲ ಬಾರಿಗೆ ಚುನಾವಣಾ ಕ್ಯಾಂಪೇನ್‌ನಲ್ಲಿ ಭಾಗವಹಿಸಿದ್ದು, ಇಲ್ಲಿ ನಮಗಿಂತಲೂ ಸಿದ್ದರಾಮಯ್ಯನವರ ಮೇಲೆ ಜನರ ಪ್ರೀತಿ ಜಾಸ್ತಿ ಇದೆ. ಕಾಂಗ್ರೆಸ್‌ ಪಕ್ಷ, ಅವರು ಮಾಡಿರುವ ಕೆಲಸಗಳ ಮೇಲೆ ಜನರು ನಂಬಿಕೆಯಿಟ್ಟಿದ್ದಾರೆ. ಪ್ರಚಾರಕ್ಕೆ ಬಂದಿದ್ದು ನನಗೂ ತುಂಬಾ ಖುಷಿಯಿದೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್

    ಮುಂದೆ ರಾಜಕೀಯಕ್ಕೆ ಬರ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಶ್ವಿಕಾ, ಸಮಾಜಕ್ಕೆ ಬೇರೆ ಬೇರೆ ರೀತಿಯಲ್ಲಿ ಸೇವೆ ಮಾಡಬಹುದು. ಸದ್ಯಕ್ಕೆ ನಾನು ಸಿನಿಮಾ ರಂಗದಲ್ಲಿದ್ದೇನೆ. ಜನರನ್ನು ರಂಜಿಸುವುದೂ ಒಂದು ಸೇವೆಯೇ, ಸದ್ಯಕ್ಕೆ ರಾಜಕೀಯಕ್ಕೆ ಬರುವ ಯೋಚನೆಯಿಲ್ಲ. ಮುಂದಿನದ್ದು ನೋಡೋಣ ಎಂದು ಮಾತು ಮುಗಿಸಿದರು.

  • ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್

    ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್

    ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಪರವಾಗಿ ವರುಣಾ (Varuna) ಕ್ಷೇತ್ರದಲ್ಲಿ ಇಂದು ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಪ್ರಚಾರ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ರಮ್ಯಾ (Ramya), ಮೊನ್ನೆಯಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿರುವ ಗೀತಾ ಶಿವರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಮತ್ತು ಸಿದ್ಧರಾಮಯ್ಯನವರಿಗೆ ಆಪ್ತರಾಗಿರುವ ದುನಿಯಾ ವಿಜಯ್ (Dunia Vijay) ಇಂದು ವರುಣಾ ಕ್ಷೇತ್ರದಲ್ಲಿದ್ದಾರೆ.

    ಕಳೆದ ಎರಡು ದಿನಗಳಿಂದ ಶಿವರಾಜ್ ಕುಮಾರ್ (Shivaraj Kumar)ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ. ರಮ್ಯಾ ಕೂಡ ಮಂಡ್ಯದಿಂದ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ. ದುನಿಯಾ ವಿಜಯ್ ಕೇವಲ ಸಿದ್ಧರಾಮಯ್ಯನವರ ಪರವಾಗಿಯಷ್ಟೇ ಪ್ರಚಾರ ಮಾಡಲಿದ್ದಾರಂತೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್- ಸೈಫ್ ಅಲಿ ಖಾನ್ ಚಿತ್ರದಲ್ಲಿ ಕನ್ನಡದ ನಟಿ ಚೈತ್ರಾ ರೈ

    ಈ ಬಾರಿ ಸ್ಯಾಂಡಲ್ ವುಡ್ ಅನೇಕ ಕಲಾವಿದರು ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಸುದೀಪ್ ಹತ್ತಾರು ಕ್ಷೇತ್ರಗಳಿಗೆ ಹೋಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ. ಹರ್ಷಿಕಾ ಪೂಣಚ್ಚ ಕೂಡ ಗದಗ ಮತ್ತು ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಪ್ರಚಾರ ಕಾರ್ಯದಲ್ಲಿದ್ದಾರೆ.

  • ಮುಂದಿನ ವಾರ ವಿಚಾರಣೆಗೆ ಹಾಜರಾಗುತ್ತೇನೆ: ಪೊಲೀಸ್ ನೋಟಿಸ್ ಗೆ ದುನಿಯಾ ವಿಜಯ್ ಉತ್ತರ

    ಮುಂದಿನ ವಾರ ವಿಚಾರಣೆಗೆ ಹಾಜರಾಗುತ್ತೇನೆ: ಪೊಲೀಸ್ ನೋಟಿಸ್ ಗೆ ದುನಿಯಾ ವಿಜಯ್ ಉತ್ತರ

    ಪಾನಿಪುರಿ ಕಿಟ್ಟಿ ಗಲಾಟೆಗೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸ್ಟೇಶನ್ ಗೆ ಬರುವಂತೆ ತಿಳಿಸಲಾಗಿತ್ತು. ಆದರೆ, ಈ ವಾರ ನಿಗಧಿತ ಚಿತ್ರೀಕರಣ ಇರುವುದರಿಂದ ಮುಂದಿನ ವಾರ ವಿಚಾರಣೆಗೆ ಬರುವುದಾಗಿ ವಿಜಯ್ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಭೀಮ ಸೇರಿದಂತೆ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ವಿಜಯ್ ಭಾಗಿಯಾಗಿದ್ದಾರೆ. ಹಾಗಾಗಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ.

    ಪಾನಿಪುರಿ ಕಿಟ್ಟಿ ಜೊತೆಗಿನ ಗಲಾಟೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಕಿಟ್ಟಿ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಎಫ್.ಐ.ಆರ್ ದಾಖಲಾಗುತ್ತಿದ್ದಂತೆಯೇ ಕಿಟ್ಟಿ ಪೊಲೀಸ್ ಅಧಿಕಾರಿಯ ಮುಂದೆ ಹಾಜರು ಕೂಡ ಆಗಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಹೈಗ್ರೌಂಡ್ ಪೊಲೀಸರಿಂದ ನೋಟಿಸ್ ನಲ್ಲಿ ತಿಳಿಸಲಾಗಿದೆ.

    ಪಾನಿಪುರಿ ಕಿಟ್ಟಿ ವಿರುದ್ಧ ದುನಿಯಾ ವಿಜಯ್ ದೂರು ನೀಡಿದ್ದರು. ದೂರುದಾರ ಆಗಿರುವ ಹಿನ್ನೆಲೆಯಲ್ಲಿ ಈ  ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ. ಕಿಟ್ಟಿ ಮತ್ತು ದುನಿಯಾ ವಿಜಯ್ ಆಪ್ತ ಸ್ನೇಹಿತರು ಪ್ರಕರಣವೊಂದರಲ್ಲಿ ಇಬ್ಬರೂ ಬಡಿದಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಸ್ಪರ ಇಬ್ಬರೂ ದೂರು ದಾಖಲಿಸಿದ್ದರು. ಇದನ್ನೂ ಓದಿ: ಪುತ್ರಿ ಐಶ್ವರ್ಯ ಜೊತೆ ತಿರುಪತಿ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ

    2018ರಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆದಿತ್ತು. ಈ ಸಂದರ್ಭದಲ್ಲಿ  ಪಾನಿಪುರಿ ಕಿಟ್ಟಿ ಟೀಂಗೂ ಹಾಗೂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು. ಅಂದು ಸ್ಪರ್ಧೆ ಮಾಡಿದ್ದ ಪಾನಿಪುರಿ ಕಿಟ್ಟಿಯ ಸಹೋದರ ಮಾರುತಿ‌ ಗೌಡನನ್ನು ಗಲಾಟೆ ನಂತರ ದುನಿಯಾ ವಿಜಯ್ ಕಾರಿನಲ್ಲಿ ಕರೆದುಕೊಂಡು ಹೋಗಿ, ಹಿಗ್ಗಾ ಮುಗ್ಗ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು. ನಂತರ ಮಧ್ಯರಾತ್ರಿ ಪೊಲೀಸರ ಕರೆ ಮೇರೆಗೆ ವಾಪಸ್ ಕರೆತಂದಿದ್ದೂ ಬಿಟ್ಟಿದ್ದರು ಎಂದು ಹೇಳಲಾಗಿತ್ತು. ತೀವ್ರ ಥಳಿತಕ್ಕೊಳಗಾಗಿದ್ದ ಮಾರುತಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾಳೆ ಉಪೇಂದ್ರ ಹೊಸ ಸಿನಿಮಾಗೆ ಮುಹೂರ್ತ : ಅತಿಥಿಗಳಾದ ನಾಲ್ವರು ಸ್ಟಾರ್ ನಟರು

    ನಾಳೆ ಉಪೇಂದ್ರ ಹೊಸ ಸಿನಿಮಾಗೆ ಮುಹೂರ್ತ : ಅತಿಥಿಗಳಾದ ನಾಲ್ವರು ಸ್ಟಾರ್ ನಟರು

    ತೀ ನಿರೀಕ್ಷೆ ಇಟ್ಟುಕೊಳ್ಳಲಾದ ಉಪೇಂದ್ರ ನಿರ್ದೇಶಿಸಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ನಾಳೆ ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಈ ಸಿನಿಮಾ ಮುಹೂರ್ತ ಸಮಾರಂಭಕ್ಕೆ ಕನ್ನಡದ ನಾಲ್ವರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ.  ಮಹೂರ್ತದ ಜೊತೆಗೆ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಉಪೇಂದ್ರ ಅವರಿಗೆ ಆತ್ಮಿಯರಾದ ಮತ್ತು ತಮ್ಮದೇ ಆದ ರೀತಿಯಲ್ಲಿ ಸಿನಿಮಾಗಳನ್ನು ನೀಡಿರುವ ಶಿವರಾಜ್ ಕುಮಾರ್, ಸುದೀಪ್, ದುನಿಯಾ ವಿಜಯ್ ಮತ್ತು  ಧನಂಜಯ್ ಈ ನಾಲ್ವರು ನಾಳೆ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ನಿರ್ಮಾಣ ಮಾಡುತ್ತಿರುವ ಲಹರಿ ಫಿಲ್ಮ್ಸ್ ಸಂಸ್ಥೆ ಹೇಳಿಕೊಂಡಿದೆ. ಈ ನಾಲ್ವರ ಪೋಸ್ಟರ್ ಕೂಡ ರಿಲೀಸ್ ಮಾಡಿದೆ. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಈಗಾಗಲೇ ಸಿನಿಮಾದ ಹೆಸರು ಮತ್ತು ಫಸ್ಟ್ ಲುಕ್ ನಿಂದಾಗಿ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರದ ಮತ್ತೊಂದು ಪೋಸ್ಟರ್ ಅನ್ನು ನಿನ್ನೆ ಉಪೇಂದ್ರ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮೆದುಳು, ಕತ್ತಿಗಳು ಮತ್ತು ಗಡಿಯಾರಾಕೃತಿಯಂತೆ ಕಾಣುವ ಪೋಸ್ಟರ್ ಅನ್ನು ರಿಲೀಸ್ ಮಾಡಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ : ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

    ನಾಲ್ಕೈದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಇದೊಂದು ಮಧ್ಯಮ ವರ್ಗದ ಸಂಘರ್ಷದ ಕಥೆ ಎಂದು ಹೇಳಲಾಗುತ್ತಿದೆ. ಉಪ್ಪಿ 2 ಸಿನಿಮಾದ ಮುಂದುವರೆಕೆಯ ಭಾಗವೂ ಈ ಸಿನಿಮಾ ಆಗಲಿದೆ ಎನ್ನುವ ಸುದ್ದಿಯಿದೆ.

  • ದುನಿಯಾ ವಿಜಯ್ ಹೊಸ  ಚಿತ್ರಕ್ಕೆ ಟೈಟಲ್ ಫಿಕ್ಸ್

    ದುನಿಯಾ ವಿಜಯ್ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್

    ಲಗ ಸಿನಿಮಾದ ನಂತರ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಟೈಟಲ್ ಇಂದು ಲಾಂಚ್ ಆಗಿದೆ. ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ವಿಜಯ್ “ಭೀಮ” ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ ಸಿನಿಮಾದಲ್ಲಿ ವಾಸ್ಕೋಡಿಗಾಮನ ಕಥೆ

    ಈ ಸಿನಿಮಾದಲ್ಲಿ ವಿಜಯ್, ಕೇವಲ ನಟನೆಯನ್ನು ಮಾಡುತ್ತಾರಾ ಅಥವಾ ನಿರ್ದೇಶನದ ಜೊತೆ ಜೊತೆಗೆ ನಟಿಸುತ್ತಾರೆ ಎನ್ನುವ ಪ್ರಶ್ನೆ ಇತ್ತು. ಅದಕ್ಕೂ ಇದೀಗ ಉತ್ತರ ಸಿಕ್ಕಿದೆ. ನಟನೆಯ ಜತೆಗೆ ನಿರ್ದೇಶನವನ್ನೂ ಅವರು ಮಾಡಲಿದ್ದಾರೆ. ಸದ್ಯಕ್ಕೆ ಶೀರ್ಷಿಕೆ ಮಾತ್ರ ಅನಾವರಣಗೊಂಡಿದೆ. ನಿರ್ಮಾಪಕರ ಹೊರತಾಗಿ ಉಳಿದಂತೆ ಯಾವುದೇ ಮಾಹಿತಿಯನ್ನೂ ಅವರು ಹೊರಹಾಕಿಲ್ಲ. ಇದನ್ನೂ ಓದಿ : ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಸದ್ಯ ತೆಲುಗಿನ ಬಾಲಯ್ಯ ನಟನೆಯ ಹೊಸ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಈ ಮಧ್ಯೆಯೇ ಅವರು ಹೊಸ ಸಿನಿಮಾದ ಸ್ಕ್ರೀಪ್ಟ್ ಕೆಲಸದಲ್ಲೂ ತೊಡಗಿದ್ದಾರೆ. ತಾಂತ್ರಿಕ ತಂಡದಲ್ಲಿ ಬಹುತೇಕ ಸಲಗ ಟೀಮ್ ಇರಲಿದೆಯಂತೆ. ಇದನ್ನೂ ಓದಿ : ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

    ದುನಿಯಾ ವಿಜಯ್ ಅಂದಾಕ್ಷಣ ಸಾಮಾನ್ಯವಾಗಿ ಸಾಹಸ ಪ್ರಧಾನ ಅಥವಾ ಭೂಗತ ಜಗತ್ತಿನ ಕಥೆಗಳ ಸಿನಿಮಾಗಳೇ ನೆನಪಿಗೆ ಬರುತ್ತವೆ. ಹೊಸ ಸಿನಿಮಾದಲ್ಲೂ ಅದೇ ಇದೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ರಕ್ತ, ಲಾಂಗ್ ಮಚ್ಚುಗಳ ಆರ್ಭಟವೇ ಇದೆ. ಅಲ್ಲದೇ, 80ರ ದಶಕದ ಪಾಪ್ಯುಲರ್ ಬೈಕ್ ಇರುವುದರಿಂದ, ಆ ಕಾಲದ ಕಥೆಯನ್ನು ಅವರು ಹೇಳಲಿದ್ದಾರಾ ಎಂದು ಕಾದು ನೋಡಬೇಕಿದೆ.

  • ಮೊಬೈಲ್ ಸ್ಟುಡಿಯೋ ಉದ್ಘಾಟಿಸಿದ ದುನಿಯಾ ವಿಜಯ್

    ಮೊಬೈಲ್ ಸ್ಟುಡಿಯೋ ಉದ್ಘಾಟಿಸಿದ ದುನಿಯಾ ವಿಜಯ್

    ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್.ಟಿ.ನಗರ ಮುಖ್ಯರಸ್ತೆಯಲ್ಲಿ ಮೊಬೈಲ್ ಸ್ಟುಡಿಯೋ ಶೋ ರೂಮನ್ನು ಖ್ಯಾತ ಚಲನಚಿತ್ರ ನಟ ದುನಿಯಾ ವಿಜಯ್, ಶಾಸಕರಾದ ಭೈರತಿ ಸುರೇಶ್, ಮಾಜಿ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ವಾಜಿದ್ ಮತ್ತು ಓಪೋ ಕಂಪನಿಯ ನಿರ್ದೇಶಕಿ ಜೊಯ ಅವರು ಉದ್ಘಾಟಿಸಿದರು.

    Duniya Vijay

    ಕಾರ್ಯಕ್ರಮದಲ್ಲಿ ದುನಿಯಾ ವಿಜಯ್ ಮತ್ತು ಶಾಸಕರಾದ ಭೈರತಿ ಸುರೇಶ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತಡಿದ ದುನಿಯಾ ವಿಜಯ್ ಅವರು, ಕಳೆದ 20 ತಿಂಗಳಿಂದ ಕೊರೊನಾ ಸಾಂಕ್ರಮಿಕ ರೋಗದಿಂದ ಚಲನಚಿತ್ರರಂಗ ಮತ್ತು ವ್ಯಾಪಾರ ವಹಿವಾಟುಗಳು ಆರ್ಥಿಕ ಸಂಕಷ್ಟ ಮತ್ತು ಜನರಿಗೆ ಉದ್ಯೋಗ ಅವಕಾಶವಿಲ್ಲದಂತೆ ಆಗಿತ್ತು. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಇದೀಗ ಕೊರೊನಾ ಕಡಿಮೆಯಾಗಿದೆ. ಎಲ್ಲ ಉದ್ದಿಮೆ, ವಹಿವಾಟು ಮತ್ತೆ ಚುರುಕು ಕಂಡಿದೆ. ತಾಯಿ ಚಾಮುಂಡೇಶ್ವರಿ, ಅಣ್ಣಮ್ಮ ದೇವಿಯ ಆಶೀರ್ವಾದ ಕೃಪೆ ನಾಡಿನ ಜನರ ಮೇಲೆ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್‍ವೈ