Tag: Dunki

  • ‘ಡಂಕಿ’  ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ‘ಡಂಕಿ’ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ಬಾಲಿವುಡ್ ಸ್ಟಾರ್ ಶಾರುಖ್ ಖಾನ್ (Shahrukh Khan) ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್‌ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್‌ ಖಾನ್‌ ಸಿದ್ಧರಾಗಿದ್ದಾರೆ. ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ ಅಬ್ಬರಿಸ್ತಿದ್ದ ಶಾರುಖ್ ಡಂಕಿ (Dunki) ಮೂಲಕ ಕ್ಲಾಸ್ ಅವತಾರದಲ್ಲಿ ದರ್ಶನ‌ ಕೊಟ್ಟಿದ್ದು, ಟೀಸರ್ (Teaser)  4 ಕೋಟಿ‌ ಮಿಲಿಯನ್ ಅಧಿಕ ವೀವ್ಸ್ ಕಂಡಿದೆ.   ಈ ವರ್ಷದಲ್ಲಿ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಇದಾಗಿದೆ.

    ನಿನ್ನೆ ಮುಂಬೈನಲ್ಲಿ ನಡೆದ ಡಂಕಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾರುಖ್ ಖಾನ್,  ಪಠಾಣ್ ಹಾಗೂ ಜವಾನ್ ಸಿನಿಮಾಗಿಂತ ಡಂಕಿ ಸಿನಿಮಾ ಅತಿ ಹೆಚ್ಚು ಮನರಂಜನೆ ನೀಡಲಿದೆ. ರಾಜ್ ಕುಮಾರ್ ಹಿರಾನಿ (Rajkumar Hirani) ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವಾಗಿದೆ.  ಹಿರಾನಿ ಚಿತ್ರಗಳಲ್ಲಿ ಯಾವುದೇ ‌ನಿರ್ದಿಷ್ಟ ನಟನಿಗಿಂತ ಕಥೆಯೇ ನಾಯಕತ್ವ ವಹಿಸುತ್ತದೆ. ಶೀಘ್ರದಲ್ಲೇ ಡ್ರಾಪ್ 2 ಮತ್ತು ಡ್ರಾಪ್ 3 ವಿಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದರು.

    ರಾಜ್ಕುಮಾರ್ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಭಾವನೆಗಳಿಗೆ, ಹಾಸ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇರುತ್ತದೆ. ಎಂತಹುದೇ ಮಾಸ್ ಹೀರೋ ಆದರೂ ಅವರಿಗೆ ಬೇರೆಯದೇ ಗೆಟಪ್ ನೀಡುತ್ತಾರೆ. ‘ಡಂಕಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಶಾರುಖ್ ಖಾನ್ ಅವರು ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

    ಶಾರುಖ್ ಖಾನ್ ಜೊತೆ ಈ ಚಿತ್ರದಲ್ಲಿ ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಡಂಕಿ’ ಟೀಸರ್ ಗೆ ‘ಬೆಂಕಿ’ ರೆಸ್ಪಾನ್ಸ್: ಶಾರುಖ್ ಮತ್ತೆ ಗೆಲ್ಲುತ್ತಾರೆ ಎಂದ ಫ್ಯಾನ್ಸ್

    ‘ಡಂಕಿ’ ಟೀಸರ್ ಗೆ ‘ಬೆಂಕಿ’ ರೆಸ್ಪಾನ್ಸ್: ಶಾರುಖ್ ಮತ್ತೆ ಗೆಲ್ಲುತ್ತಾರೆ ಎಂದ ಫ್ಯಾನ್ಸ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shahrukh Khan) ನಟನೆಯ ‘ಡಂಕಿ’ (Dunki) ಚಿತ್ರದ ಟೀಸರ್ (Teaser) ನಿನ್ನೆಯಷ್ಟೇ ಬಿಡುಗಡೆ ಆಗಿತ್ತು. ಟೀಸರ್ ಗೆ ಭಾರೀ ರೆಸ್ಪಾನ್ಸ್ ವ್ಯಕ್ತವಾಗಿದೆ. ಶಾರುಖ್ ಅಭಿಮಾನಿಗಳು ಟೀಸರ್ ನೋಡಿ ಕುಣಿದಿದ್ದಾರೆ. ಶಾರುಖ್ ಹೊಡೆದ ಡೈಲಾಗ್ ಗೆ ಸಿಳ್ಳೆ ಹಾಕಿದ್ದಾರೆ. ಸಂಗೀತ ಕೇಳಿ ಕುಣಿದಿದ್ದಾರೆ. ಒಟ್ಟಾರೆ ‘ಡಂಕಿ ಟೀಸರ್ ಗೆ ಬೆಂಕಿ’ ರೆಸ್ಪಾನ್ಸ್ ಸಿಕ್ಕಿದೆ. ಮತ್ತೆ ಶಾರುಖ್ ಗೆಲ್ಲೋದು ಗ್ಯಾರಂಟಿ ಅಂದಿದ್ದಾರೆ ಫ್ಯಾನ್ಸ್.

    ಶಾರುಖ್ ಖಾನ್ ಜನ್ಮದಿನದ ಸಂಭ್ರಮದಂದು ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ ಸಿನಿಮಾದ ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್  (Rajkumar Hirani) ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಹೆಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

    ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಂಗ್ ಖಾನ್ ಹುಟ್ಟು ಹಬ್ಬಕ್ಕೆ ‘ಡಂಕಿ’ ಟೀಸರ್ ರಿಲೀಸ್

    ಕಿಂಗ್ ಖಾನ್ ಹುಟ್ಟು ಹಬ್ಬಕ್ಕೆ ‘ಡಂಕಿ’ ಟೀಸರ್ ರಿಲೀಸ್

    ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ (Shah Rukh Khan) ಗಿಂದು ಜನ್ಮದಿನದ (Birthday)ಸಂಭ್ರಮ. 58ನೇ ವಸಂತಕ್ಕೆ ಕಾಲಿಟ್ಟಿರುವ ಬಾದ್ ಷಾಗೆ ಶುಭಾಷಯಗಳ ಮಹಾಪೂರವೇ ಹರಿದುಬರ್ತಿದೆ. ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ (Dunki) ಸಿನಿಮಾದ ಟೀಸರ್ (Teaser) ಉಡುಗೊರೆಯಾಗಿ ಸಿಕ್ಕಿದೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ (Raj Kumar Hirani) ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಎಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

    ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

     

    ಶಾರುಖ್ ಖಾನ್ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ನಿನ್ನೆ ಮಧ್ಯರಾತ್ರಿಯಿಂದಲೇ ಆಚರಿಸುತ್ತಿದ್ದಾರೆ. ಶಾರುಖ್ ಮನೆ ಮುಂದೆ ಅಸಂಖ್ಯಾತ ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸುವುದಕ್ಕಾಗಿಯೇ ನಟನೆ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ನಿಯೋಜನೆಯಾಗಿದೆ. ರಾತ್ರಿಯೇ ತಮ್ಮ ಮನೆಯ ಟೆರಸ್ ನಿಂದ ಅಭಿಮಾನಿಗಳತ್ತ ಕೈ ಬೀಸಿ ಧನ್ಯವಾದಗಳನ್ನು ಹೇಳಿದ್ದಾರೆ ಶಾರುಖ್. ಮತ್ತೆ ಬೆಳಗ್ಗೆ ಸಿಗುವುದಾಗಿ ತಿಳಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Salaar VS Dunki: ಬಾಕ್ಸ್‌ ಆಫೀಸ್‌ ಪೈಪೋಟಿ, ಒಂದೇ ದಿನ ಶಾರುಖ್‌-ಪ್ರಭಾಸ್‌ ಸಿನಿಮಾ ರಿಲೀಸ್

    Salaar VS Dunki: ಬಾಕ್ಸ್‌ ಆಫೀಸ್‌ ಪೈಪೋಟಿ, ಒಂದೇ ದಿನ ಶಾರುಖ್‌-ಪ್ರಭಾಸ್‌ ಸಿನಿಮಾ ರಿಲೀಸ್

    ದು ಇಲ್ಲಿಗೇ ನಿಲ್ಲುವ ಹಾಗೆ ಕಾಣುತ್ತಿಲ್ಲ. ಯಾವಾಗ ಸಲಾರ್- ಡಂಕಿ (Dunki) ಒಂದೇ ದಿನ ಅಖಾಡಕ್ಕೆ ಇಳಿಯಲಿವೆ ಎನ್ನುವುದು ಗೊತ್ತಾಯಿತೊ, ಅಲ್ಲಿಂದ ನಾನಾ ನೀನಾ ಎನ್ನುವ ಯುದ್ಧ ಶುರುವಾಗಿದೆ. ಸಲಾರ್ ಮುಂದಕ್ಕೆ ಹೋಗುತ್ತಾ ಅಥವಾ ಡಂಕಿ ಪೋಸ್ಟ್ ಪೋನ್ ಆಗುತ್ತಾ? ಇಬ್ಬರು ಸ್ಟಾರ್ ನಟನರ ಫ್ಯಾನ್ಸ್ ಕೆಂಡ ಕಾರುತ್ತಿದ್ದಾರೆ. ಇದೀಗ ಮತ್ತೆ ಸಲಾರ್- ಡಂಕಿ. ಎರಡರಲ್ಲಿ ಒಂದು ಸಿನಿಮಾ ಮುಂದಿನ ವರ್ಷಕ್ಕೆ ಹೋಗಲಿವೆ ಎನ್ನುವ ಮಾತು ಕೇಳುತ್ತಿದೆ. ಹಾಗಿದ್ದರೆ ಇಬ್ಬರಲ್ಲಿ ಯಾರು ಗಂಟು ಮೂಟೆ ಕಟ್ಟೋರು? ಇಲ್ಲಿದೆ ಮಾಹಿತಿ.

    ಯುದ್ಧಕ್ಕೆ ರಣರಂಗ ಸಜ್ಜಾಗಿದೆ. ಒಂದು ಕಡೆ ಸಲಾರ್ (Salaar) ಇನ್ನೊಂದು ಕಡೆ ಡಂಕಿ. ಒಬ್ಬರು ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್. ಮಗದೊಂದು ಕಡೆ ಬಾದ್‌ಶಾ ಶಾರುಖ್ ಖಾನ್. ಪ್ರಭಾಸ್ ಕೆಲವೇ ವರ್ಷಗಳ ಹಿಂದೆ ಈ ಪಟ್ಟ ಅಲಂಕರಿಸಿದ್ದಾರೆ. ಶಾರುಖ್ ಖಾನ್ ಮೂವತ್ತು ವರ್ಷಗಳಿಂದ ಆ ಸಿಂಹಾಸನದಲ್ಲಿ ರಾರಾಜಿಸುತ್ತಿದ್ದಾರೆ. ಹೊಸ ಹುಡುಗನಾ ಹಳೇ ಹುಲಿಯಾ? ಇಬ್ಬರಲ್ಲಿ ಯಾರು ಗೆಲ್ಲೋರು? ಪ್ರಶ್ನೆ ಎದ್ದಿದೆ. ಕಾರಣ ಪ್ರಭಾಸ್ (Prabhas) ಮೂರು ಸೋಲುಂಡು ಗೆಲ್ಲಲು ತುದಿಗಾಲಲ್ಲಿ ನಿಂತಿದ್ದಾರೆ. ಶಾರುಖ್ (Sharukh Khan) ಒಂದೇ ವರ್ಷದಲ್ಲಿ ಎರಡು ಸೂಪರ್ ಹಿಟ್ ಕೊಟ್ಟಿದ್ದಾರೆ. ಪ್ರಶ್ನೆ ಉಳಿದಿರುವುದು ಒಂದೇ. ಪ್ರಭಾಸ್ ಯುದ್ಧ ಗೆಲ್ಲುತ್ತಾರಾ, ಶಾರುಖ್ ಅಖಾಡ ಕಬ್ಜ ಮಾಡಿಕೊಳ್ಳುತ್ತಾರಾ?

    ನಿಜ ಹೇಳಬೇಕೆಂದರೆ ಈ ಪ್ರಶ್ನೆ ಹುಟ್ಟುತ್ತಿರಲಿಲ್ಲ. ಸಲಾರ್ ಈಗಾಗಲೇ ಬಂದು ಹೋಗಿರಬೇಕಿತ್ತು. ಡಂಕಿ ಬರುವುದು ಬಾಕಿ ಇರಬೇಕಿತ್ತು. ಆದರೆ ಟೈಮು ಯಾರಪ್ಪನ ಸ್ವತ್ತು? ಏಕಾಏಕಿ ಸಲಾರ್ ಹಾಗೂ ಡಂಕಿ ಒಂದೇ ದಿನ ಹಾಜರಿ ಹಾಕುವುದಾಗಿ ಘೋಷಿಸಿದವು. ಅಫ್‌ಕೋರ್ಸ್ ಡಂಕಿ ಮೊದಲೇ ಡೇಟ್ ನಿಗದಿ ಪಡಿಸಿತ್ತು. ಡಿಸೆಂಬರ್ ಬರೋದಾಗಿ ನಿಕ್ಕಿಯಾಗಿತ್ತು. ಈ ಹೊತ್ತಲ್ಲಿ ಸಲಾರ್ ಆಕಸ್ಮಿಕವಾಗಿ ಅಂದೇ ಬರಬೇಕಾಯಿತು. ಈಗ ಒಂದೇ ದಿನ ಎರಡು ಬಿಗ್ ಬಜೆಟ್ ಸಿನಿಮಾ ಬರಲು ರೆಡಿಯಾಗುತ್ತಿದೆ. ಇಬ್ಬರಲ್ಲಿ ಯಾರಾದರೂ ಒಬ್ಬರು ಮುಂದಕ್ಕೆ ಹೋಗುತ್ತಾರಾ? ಗೊಂದಲ ಮುಂದುವರೆದಿದೆ.‌ ಇದನ್ನೂ ಓದಿ:ಮಾನವೀಯತೆ ಮರೆತ ಭಾಗ್ಯಶ್ರೀಗೆ ಕಿವಿ ಹಿಂಡಿದ ಸುದೀಪ್

    ಸಲಾರ್ ರಿಲೀಸ್ ಡೇಟ್ ಹೊರಬಿದ್ದಾಗ, ಕಿಂಗ್‌ ಖಾನ್ ಹೇಳಿದ್ದು ಒಂದೇ ಮಾತು. ಈ ಗಣರಾಜ್ಯೋತ್ಸವಕ್ಕೆ ಪಠಾಣ್ ಬಂತು. ಸಾವಿರ ಕೋಟಿ ಬಾಚಿತು. ಕೃಷ್ಣ ಜನ್ಮಾಷ್ಟಮಿಗೆ ಜವಾನ್ ಹಾಜರಾಯಿತು. ಅದೂ ಸಾವಿರ ಕೋಟಿ ಗಳಿಸಿತು. ಈಗ ಕ್ರಿಸ್‌ಮಸ್‌ಗೆ ಡಂಕಿ ಬರುತ್ತಿದೆ. ಜನರು ನನ್ನನ್ನು ನೋಡಲು ಇಷ್ಟ ಪಟ್ಟಿದ್ದಾರೆ. ಖಂಡಿತ ನಾವು ಅದೇ ದಿನ ಬರಲಿದ್ದೇವೆ. ಶಾರುಖ್ ಹೇಳಿದ್ದಕ್ಕೆ ಒಂದೇ ಅರ್ಥ. ನಾವು ಯಾವುದೇ ಕಾರಣಕ್ಕೂ ಹಿಂದೆ ಸರಿಯಲ್ಲ ಈ ಮಾತು ಕೇಳಿ ಶಾರುಖ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಇದೇ ಹೊತ್ತಿಗೆ ಪ್ರಭಾಸ್ ಫ್ಯಾನ್ಸ್ ನಾವೂ ಮುಂದೆ ಹೋಗಲ್ಲ ಅಂತಿದ್ದಾರೆ.

    ಈ ನಡುವೆ ಇನ್ನೊಂದು ಖಬರ್ ಎದ್ದಿದೆ. ಅದೇ ಸಲಾರ್ (Salaar) ರಿಲೀಸ್ ಡೇಟ್ ಮುಂದಕ್ಕೆ ಹೋಗುವ ಮಾತು. ಈಗಾಗಲೇ ಎರಡು ಬಾರಿ ಸಲಾರ್ ಪೋಸ್ಟ್‌ ಪೋನ್ ಆಗಿದೆ. ಇದಕ್ಕೆ ನಿರ್ಮಾಣ ಸಂಸ್ಥೆ ನೀಡಿರುವ ಕಾರಣ ಒಂದೇ. ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿ ಇದೆ. ಇನ್ನಷ್ಟು ಅದ್ಭುತವಾಗಿ ಸಿನಿಮಾ ನೀಡಲು ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ ಹೀಗೆ ಹೇಳಿದೆ. ಈಗ ಇನ್ನೊಮ್ಮೆ ಸಲಾರ್ (Salaar) ರಿಲೀಸ್ ಡೇಟ್ ಮುಂದಕ್ಕೆ ಹೋಗುವ ಸಾಧ್ಯತೆ ಎನ್ನುವ ಮಾತು ಕೇಳುತ್ತಿದೆ. ಇದು ಅಧಿಕೃತವಲ್ಲ. ಆದರೆ ಸಿನಿಮಾ ವಲಯದಲ್ಲಿ ಇದೇ ಕಿಡಿ ಹೊತ್ತಿಸಿದೆ. ಎಲ್ಲದಕ್ಕೂ ಅಂತಿಮ ಮುದ್ರೆ ಬೀಳಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರುಖ್ ಖಾನ್ ಚಿತ್ರಕ್ಕೆ ಸೆಡ್ಡು ಹೊಡೆಯುತ್ತಾ ಪ್ರಭಾಸ್ ಸಲಾರ್

    ಶಾರುಖ್ ಖಾನ್ ಚಿತ್ರಕ್ಕೆ ಸೆಡ್ಡು ಹೊಡೆಯುತ್ತಾ ಪ್ರಭಾಸ್ ಸಲಾರ್

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಲಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳು ಹೇಳಿಕೊಳ್ಳದೇ ಇದ್ದರೂ, ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಅಧಿಕೃತ ಎನ್ನುವಂತೆ ಹರಿದಾಡುತ್ತಿದೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಇದನ್ನೂ ಓದಿ:ಸಾವಿರ ಕೋಟಿ ಕ್ಲಬ್ ಸೇರಿದ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಅಂದುಕೊಂಡಂತೆ ಆಗಿದ್ದರೆ, ಸೆಪ್ಟೆಂಬರ್ 28ರಂದು ಸಲಾರ್ (Salaar) ಸಿನಿಮಾ ರಿಲೀಸ್ ಆಗಬೇಕಿತ್ತು. ಈ ದಿನಾಂಕವನ್ನು ಘೋಷಿಸಿಯೂ ಆಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ರಿಲೀಸ್ ಆಗಲಿಲ್ಲ. ಮುಂದಿನ ದಿನಾಂಕವನ್ನೂ ಹೊಂಬಾಳೆ ಫಿಲ್ಮ್ಸ್ ಘೋಷಿಸಿಲ್ಲ. ಇದೇ ತಿಂಗಳು 29ರಂದು ಹೊಸ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ. ಡಿಸೆಂಬರ್ 22 ತಾರೀಖನ್ನೇ ಸಂಸ್ಥೆ ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ.

     

    ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗಲಿದೆಯಾ ಎನ್ನುವ ಚರ್ಚೆ ಕೂಡ ಶುರುವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಶಾರುಖ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ (Raj Kumar Hirani) ನಿರ್ದೇಶನದಲ್ಲಿ ತಯಾರಾಗುತ್ತಿರುವ ಡಂಕಿ ಚಿತ್ರದಲ್ಲಿ ಅವರು ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

    ಡಂಕಿ ಸಿನಿಮಾವನ್ನು ನಿರ್ದೇಶಕರು ಕಾಶ್ಮೀರದಿಂದ (Kashmir) ಶುರು ಮಾಡಿದ್ದಾರೆ. ಈ ಭಾಗದ ಚಿತ್ರೀಕರಣಕ್ಕಾಗಿ ಶಾರುಖ್ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಕಾಶ್ಮೀರದಲ್ಲಿ ತಮ್ಮ ನೆಚ್ಚಿನ ನಟ ಶಾರುಖ್ ಶೂಟಿಂಗ್ ನಲ್ಲಿ ಪಾಲ್ಗೊಂಡ ವಿಡಿಯೋವನ್ನು ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಹನ್ನೊಂದು ವರ್ಷದ ನಂತರ ಶಾರುಖ್ ಸಿನಿಮಾ ಕಾಶ್ಮೀರದಲ್ಲಿ ಚಿತ್ರೀಕರಣವಾಗುತ್ತಿದ್ದು,  ಈ ಹಿಂದೆ ಜಬ್ ತಕ್ ಹೈ ಜಾನ್ ಸಿನಿಮಾದ ಶೂಟಿಂಗ್ ಅದೇ ಸ್ಥಳದಲ್ಲೇ ನಡೆದಿತ್ತು ಎಂದು ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ. ಬರೋಬ್ಬರಿ 11 ವರ್ಷಗಳ ಬಳಿಕ ಆ ನೆಲದಲ್ಲಿ ಶಾರುಖ್ ಕಾಲಿಟ್ಟಿರುವುದು ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ. ಇದನ್ನೂ ಓದಿ:ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

    ಡಂಕಿ ಸಿನಿಮಾದಲ್ಲಿ ಶಾರುಖ್ ಜೊತೆ ತಾಪ್ಸಿ ಪನ್ನು(Taapsee Pannu) ಮತ್ತು ವಿಕ್ಕಿ ಕೌಶಲ್ (Vicky Kaushal) ನಟಿಸಿದ್ದು, ಸದ್ಯ ಕಾಶ್ಮೀರದ ಸೋನ್ ಮಾರ್ಗ್ ಪ್ರದೇಶದಲ್ಲಿ ಮಾತಿನ ಭಾಗದ ಚಿತ್ರೀಕರಣವನ್ನು ಮಾಡುತ್ತಿದ್ದಾರಂತೆ ನಿರ್ದೇಶಕ ರಾಜಕುಮಾರ್ ಹಿರಾನಿ.