Tag: Durgamba bus

  • ಬೆಳ್ಳಂಬೆಳಗ್ಗೆ ಭೀಕರ ಅಪಘಾತ: KSRTC ವೋಲ್ವೋ, ದುರ್ಗಾಂಬ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

    ಬೆಳ್ಳಂಬೆಳಗ್ಗೆ ಭೀಕರ ಅಪಘಾತ: KSRTC ವೋಲ್ವೋ, ದುರ್ಗಾಂಬ ಬಸ್ ಡಿಕ್ಕಿಯಾಗಿ ಇಬ್ಬರ ಸಾವು

    ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಹೆದ್ದುರ್ಗ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ.

    ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಎಸ್‍ಆರ್‍ಟಿಸಿ ವೋಲ್ವೋ ಬಸ್ ಮತ್ತು ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು 27 ವರ್ಷದ ಫಾತೀಮಾ, 54 ವರ್ಷದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಸ್ಥಳಕ್ಕೆ ಆಲೂರು, ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಸಂಚಾರ ಸುಗಮಗೊಳಿಸಲು ಹರಸಾಹಸ ಪಡುತ್ತಿದ್ದಾರೆ.