Tag: Duttanna

  • ಚುನಾವಣೆ ಜಂಜಡದಲ್ಲೂ ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ

    ಚುನಾವಣೆ ಜಂಜಡದಲ್ಲೂ ಜನಮನ ಗೆದ್ದ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ

    ಒಂದು ಕಡೆ ಚುನಾವಣೆ. ಮತ್ತೊಂದು ಕಡೆ ಐಪಿಎಲ್. ಇದರ ನಡುವೆ ಕಳೆದ ವಾರ ಬಿಡುಗಡೆಯಾದ ರಾಘವೇಂದ್ರ ಸ್ಟೋರ್ಸ್ (Raghavendra Stores) ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ಈ ಸಂತೋಷವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ‌ಸಂತೋಷ್ ಆನಂದ್ ರಾಮ್ (Santhosh Anand Ram)ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಜಗ್ಗೇಶ್ (Jaggesh) ನಾಯಕನಾಗಿ ನಟಿಸಿದ್ದಾರೆ.

    ‘ಚುನಾವಣೆ, ಐಪಿಎಲ್ ನಡುವೆ ಈ ಚಿತ್ರ ಬಿಡುಗಡೆ ಮಾಡುತ್ತಾರಾ ಎಂದು ಎಷ್ಟೋ ಜನ‌ ಕೇಳುತ್ತಿದ್ದರು. ಆದರೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರು ಕಂಟೆಂಟ್ ಚೆನ್ನಾಗಿದ್ದರೆ ಜನ ಖಂಡಿತವಾಗಿ ನೋಡುತ್ತಾರೆ ಎಂಬ ನಂಬಿಕೆಯಿಂದ ಈ ಚಿತ್ರವನ್ನು ಬಿಡುಗಡೆ ಮಾಡಿದರು.‌ ಅವರ ಮಾತು ನಿಜವಾಯಿತು. ಜನ ನಮ್ಮ ಚಿತ್ರಕ್ಕೆ ತೋರುತ್ತಿರುವ ಮೆಚ್ಚುಗೆಗೆ ಮನತುಂಬಿ ಬಂದಿದೆ ಹಾಗೂ ಒಂದೊಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ‌. ರಾಯರ ಹೆಸರಿನ ಈ ಚಿತ್ರಕ್ಕೆ ರಾಯರೆ ಯಶಸ್ಸು ನೀಡುತ್ತಿದ್ದಾರೆ ‘ಎಂದರು ನಾಯಕ ಜಗ್ಗೇಶ್. ಇದನ್ನೂ ಓದಿ:ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗ್ಬೇಕು – ದುನಿಯಾ ವಿಜಯ್

    ನಾವು ಈ ಸಿನಿಮಾ ಬಿಡುಗಡೆಗೂ ಹತ್ತು ದಿನಗಳ ಮುಂಚೆ ಪ್ರಮೋಷನ್ ಶುರು ಮಾಡಿದ್ದು. ಆನಂತರ ಬಿಡುಗಡೆಯಾದ ಟ್ರೇಲರ್ ಹಾಗೂ ಹಾಡಿಗೆ ಒಳ್ಳೆಯ ರೆಸ್ಪಾನ್ಸ್ ಬಂತು. ನನ್ನ ಈ ಹಿಂದಿನ‌ ಸಿನಿಮಾಗಳ ಜಾನರ್ ಬೇರೆ. ಈ ಸಿನಿಮಾ ಜಾನರ್‌ ಬೇರೆ. ಲೇಟ್ ಮ್ಯಾರೇಜ್ ಹಾಗೂ ಆನಂತರ ಅವರಿಗೆ ಮಕ್ಕಳಾಗದ ಸಮಸ್ಯೆ ಬಗ್ಗೆಗಿನ ಕಥಾಹಂದರವನ್ನು ಈ ಚಿತ್ರ  ಹೊಂದಿದೆ.  ಚಿತ್ರವನ್ನು ಜನ ಮೆಚ್ಚಿಕೊಂಡಿದ್ದಾರೆ.  ಯಶಸ್ಸಿಗೆ ಕಾರಣರಾದ ನನ್ನ ತಂಡಕ್ಕೆ,‌ ನಿರ್ಮಾಣ ಮಾಡಿರುವ ಖ್ಯಾತ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರಿಗೆ ಹಾಗೂ ಜಗ್ಗೇಶ್ ಅವರ ಆದಿಯಾಗಿ ಚಿತ್ರದಲ್ಲಿ ‌ನಟಿಸಿರುವ ಎಲ್ಲಾ ಕಲಾವಿದರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

    ಚಿತ್ರದಲ್ಲಿ ಅಭಿನಯಿಸಿರುವ ಶ್ವೇತ ಶ್ರೀವಾಸ್ತವ್, ದತ್ತಣ್ಣ, ಮಿತ್ರ, ರವಿಶಂಕರ್ ಗೌಡ, ಚಿತ್ಕಲಾ ಬಿರಾದಾರ್, ಕೆ.ಆರ್.ಜಿ ಸ್ಟುಡಿಯೋಸ್ ನ ಯೋಗಿ ಜಿ ರಾಜ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಹಕ ಶ್ರೀಶ ಕುದುವಳ್ಳಿ ಮುಂತಾದವರು ಈ ಸಂದರ್ಭದಲ್ಲಿ ಚಿತ್ರದ ಕುರಿತು ಮಾತನಾಡಿದರು.

  • ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ‘ಬೇರ’ ಮೂಲಕ ಹಿರಿತೆರೆಗೆ ಕಾಲಿಟ್ಟ ಕಿರುತೆರೆಯ ಫೇಮಸ್ ನಿರ್ದೇಶಕ ವಿನು ಬಳಂಜ

    ಕಿರುತೆರೆಯ ಸಾಕಷ್ಟು ಜನಪ್ರಿಯ ಧಾರಾವಾಹಿಗಳ ನಿರ್ದೇಶಕ ವಿನು ಬಳಂಜ (Vinu Balanja) ‘ಬೇರ’ (Bera) ಚಿತ್ರ ನಿರ್ದೇಶಿಸುವ  ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ದಿವಾಕರ ದಾಸ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಚಿತ್ರತಂಡದ ಸದಸ್ಯರು “ಬೇರ” ಚಿತ್ರದ ಕುರಿತು ಮಾತನಾಡಿದರು.

    ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ. ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ‘ಯಾವ ತಾಯಂದ್ರ ಮಕ್ಕಳೂ ಇನ್ನೊಬ್ರಿಂದಾಗಿ ಸಾಯ್ಬಾರ್ದು’ ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತದೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು.

    ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್ ಎಲ್ ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ ಎಸ್ ಎಲ್ ವಿ ಕಲರ್ಸ್  ಲಾಂಛನದಲ್ಲಿ “ಬೇರ” ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು ನಿರ್ಮಾಪಕ ದಿವಾಕರ ದಾಸ. ಇದನ್ನೂ ಓದಿ:ಬಿಗ್ ಆಫರ್ ನೀಡಿದ ಕಿರಣ್ ರಾಥೋಡ್ : ಫೋಟೋ, ವಿಡಿಯೋಗೆ ಇಂತಿಷ್ಟು ರೇಟು

    ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ್ದ ಖುಷಿಯಿದೆ.  ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದರು ಚಿತ್ರದಲ್ಲಿ ನಟಿಸಿರುವ ದತ್ತಣ್ಣ (Duttanna), ಯಶ್ ಶೆಟ್ಟಿ (Yash Shetty), ಹರ್ಷಿಕಾ ಪೂಣಚ್ಛ (Harshika), ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್  ಮುಂತಾದವರು. ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ಕೂಡ ‘ಬೇರ’ ಚಿತ್ರದ ಕುರಿತು ಮಾತನಾಡಿದರು.

  • ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ರಾಷ್ಟ್ರ ಪ್ರಶಸ್ತಿ ವಿಜೇತ ನಟ ದತ್ತಣ್ಣ (Duttanna) ಮದುವೆ (Marriage) ಆಗದೇ ಇರುವ ವಿಚಾರ ತುಂಬಾ ಜನಕ್ಕೆ ತಿಳಿದಿರಲಿಲ್ಲ. ಸಿನಿಮಾ ರಂಗದ ಆಪ್ತರ ಹೊರತಾಗಿ, ಅವರು ಕೂಡ ಈ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಆದರೆ, ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಈ ಕುರಿತು ಅವರ ಗೆಳೆಯರೇ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ದತ್ತಣ್ಣ ಮದುವೆ ಯಾಕೆ ಆಗಲಿಲ್ಲ ಎನ್ನುವ ಕುರಿತು ಹೇಳಿದ್ದಾರೆ.

    ಓದಿನಲ್ಲಿ ದತ್ತಣ್ಣ ಯಾವಾಗಲೂ ಮುಂದು. ಹಾಗಾಗಿ ಇಂಜಿನಿಯರಿಂಗ್ ಪದವಿ ಪೂರೈಸಿದರು. ಏರ್ ಫೋರ್ಸ್ ನಲ್ಲಿ ವಿಂಗ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದರು. ಚಿಕ್ಕ ವಯಸ್ಸಿನಿಂದಲೇ ನಟನಾ ಕ್ಷೇತ್ರದತ್ತ ಆಸಕ್ತಿಯಿದ್ದರೂ, ಸೇನೆಯಲ್ಲಿ ಕೆಲಸ ಮಾಡಬೇಕು ಎನ್ನುವ ಕಾರಣಕ್ಕಾಗಿ ಏರ್ ಫೋರ್ಸ್ ಸೇರಿಕೊಂಡರು. ಅಂಡಮಾನ್, ದೆಹಲಿ ಸೇರಿದಂತೆ ಅನೇಕ ಕಡೆ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಎಚ್.ಎಎ‍ಲ್ ಗೆ ಬಂದ ಮೇಲೆ ನಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಇದನ್ನೂ ಓದಿ: ಮತ್ತೆ ಒಂದಾಯಿತು ‘ಕರ್ಣನ್’ ಜೋಡಿ: ಧನುಷ್ ಚಿತ್ರಕ್ಕೆ ಮಾರಿ ಸೆಲ್ವರಾಜ್ ಡೈರೆಕ್ಟರ್

    ದತ್ತಣ್ಣ ಚಿತ್ರರಂಗಕ್ಕೆ ಬಂದಾಗ ಅವರಿಗೆ 45 ವರ್ಷ. ಆದರೂ, ಬಣ್ಣದ ಮೇಲಿನ ಗೀಳು ಕಡಿಮೆ ಆಗಿರಲಿಲ್ಲ. ಹಿಂದಿ ಚಿತ್ರರಂಗದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ದತ್ತಣ್ಣ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದಾರೆ. ಇಷ್ಟೊಂದು ಸಾಧನೆ ಮಾಡಿದರೂ ಕೂಡ ಅವರು ಮದುವೆ, ಸಂಸಾರ ಅಂತ ಹೋಗಲಿಲ್ಲ. ಅದಕ್ಕೆ ಕಾರಣ ಸಂಸಾರದ ಮೇಲಿನ ಜಿಗುಪ್ಸೆ ಎಂದೇ ಹೇಳಲಾಗುತ್ತಿದೆ. ಈ ಕುರಿತು ಗೆಳೆಯರು ಮುಕ್ತವಾಗಿ ಮಾತನಾಡಿದ್ದಾರೆ.

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದ ಗೆಳೆಯರು, ದತ್ತಣ್ಣ ಮದುವೆ ಆಗದೇ ಇರುವುದಕ್ಕೆ ಕಾರಣ ಸಂಸಾರ ಎನ್ನುವುದು ಗೋಳು ಎಂದು ಪದೇ ಪದೇ ದತ್ತಣ್ಣ ಮಾತನಾಡುತ್ತಿದ್ದರಂತೆ. ಮದುವೆಯಾದರೆ ಸ್ವತಂತ್ರವಾಗಿ ಇರುವುದಕ್ಕೆ ಆಗುವುದಿಲ್ಲ ಎನ್ನುವ ಕಾರಣಕ್ಕಾಗಿ ಮದುವೆ ಆಗಿಲ್ಲ’ ಎಂದಿದ್ದಾರೆ.

  • ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ ‘ಮೈ ಹೀರೋ’ . ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು.

    ನಾನು ಮೂಲತಃ ರಂಗಭೂಮಿ ಕಲಾವಿದ . ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ ನಲ್ಲಿ ನಿರ್ದೇಶನದ ಕುರಿತು ಹಾಗೂ ಬಾಂಬೆ ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ತರಭೇತಿ ಪಡೆದಿದ್ದೇನೆ. ನಮ್ಮದೇ ಆದ ಎ ವಿ ಸ್ಟುಡಿಯೋಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೇರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಾಗ ಹುಡುಗನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಕೆಲವು ಚಿತ್ರದಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಿ ತೋರಿಸಲಾಗುತ್ತದೆ. ಆದರೆ ನಮ್ಮ ಚಿತ್ರದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ‌. ಚಿತ್ರ ನೋಡಿದ ಮೇಲೆ ಭಾರತವನ್ನು ನೋಡುವ ರೀತಿ ಬದಲಾಗಬಹುದು ಎಂಬುದು ನನ್ನ ಅನಿಸಿಕೆ‌. ಹಾಲಿವುಡ್ ನಟ ಜಿಲಾಲಿ  ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಆರಂಭವಾಗುತ್ತದೆ. ಮಧ್ಯಪ್ರದೇಶ ಹಾಗೂ ಯು ಎಸ್ ಎ ನಲ್ಲೂ ಚಿತ್ರೀಕರಣ ನಡೆಯುತ್ತದೆ. ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ಬರಲಿದೆ‌. ಮುಂದೆ ಬೇರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಸಾಧ್ಯತೆಯಿದೆ.  ಮೂರು ಹಾಡುಗಳಿರುವ ಈ ಚಿತ್ರಕ್ಕೆ ಗಗನ್ ಬಧಾರಿಯಾ ಸಂಗೀತ ನೀಡಲಿದ್ದಾರೆ. ಎರಡು ಕನ್ನಡ ಹಾಗೂ ಒಂದು ಇಂಗ್ಲಿಷ್ ಹಾಡು ಚಿತ್ರದಲ್ಲಿರುತ್ತದೆ. ಕುಮಾರಗೌಡ ಈ ಚಿತ್ರದ ಛಾಯಾಗ್ರಾಹಕರು. ಚಿತ್ರಕಥೆಯನ್ನು ನಾನು  ಮುತ್ತುರಾಜ್ ಬರೆದಿದ್ದೇವೆ. ಜೆಮ್ ಶಿವು ಸಂಭಾಷಣೆ ಬರೆದಿದ್ದಾರೆ. ಇದು ಇಲ್ಲಿನ ತಂತ್ರಜ್ಞರ ಮಾಹಿತಿ. ಹಾಲಿವುಡ್ ನ ತಂತ್ರಜ್ಞರು ಸಹ ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ “ಮೈ ಹೀರೋ” ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ನಾನು ಕೂಡ ರಂಗಭೂಮಿ ಕಲಾವಿದ. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರೀಸ್ ಗಳಲ್ಲಿ ನಟಿಸಿದ್ದೇನೆ‌. ಈ ಚಿತ್ರದ ಕಥೆ ಇಷ್ಟವಾಯಿತು ಎಂದು ಹಾಲಿವುಡ್ ನಟ ಜಿಲಾಲಿ ಹೇಳಿದರು. ಕಲಾವಿದರಾದ ಪ್ರಕಾಶ್ ಬೆಳವಾಡಿ, ದತ್ತಣ್ಣ, ನಿರಂಜನ್ ದೇಶಪಾಂಡೆ ಹಾಗೂ ಸಂಗೀತ ನಿರ್ದೇಶಕ ಗಗನ್ ಬಧಾರಿಯಾ ಪತ್ರಿಕಾಗೋಷ್ಠಿಯಲ್ಲಿ “ಮೈ ಹೀರೋ” ಚಿತ್ರದ ಬಗ್ಗೆ ಮಾತನಾಡಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k