Tag: DV Sadananda Gowda

  • ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ -‌ NIAಗೆ ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಳ್ಳೋಕೆ ಅವಕಾಶ ಇದೆ: ಡಿವಿಎಸ್‌

    ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ -‌ NIAಗೆ ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಳ್ಳೋಕೆ ಅವಕಾಶ ಇದೆ: ಡಿವಿಎಸ್‌

    – ಧರ್ಮಸ್ಥಳ ವಿರುದ್ಧದ ಪಿತೂರಿಯಲ್ಲಿ ಎಡಪಂಥೀಯರ ಕೈವಾಡ ಇದೆ ಅಂತ ಆರೋಪ

    ಬೆಂಗಳೂರು: ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು (Dharmasthala Case) ಎನ್ಐಎ ಸೂಮೋಟೋ‌ ಕೇಸ್ ದಾಖಲಿಸಿಕೊಂಡು ತ‌ನಿಖೆ ನಡೆಸಲು ಅವಕಾಶ ಇದೆ ಎಂದು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ (DV Sadananda Gowda) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತಾಡಿದ ಸದಾನಂದ ಗೌಡ್ರು, ಧರ್ಮಸ್ಥಳ ವಿರುದ್ಧ ಭವಿಷ್ಯದಲ್ಲಿ ಇಂಥ ಅಪಪ್ರಚಾರ, ಪಿತೂರಿಗಳಿಗೆ ಫುಲ್ ಸ್ಟಾಪ್ ಹಾಕುವ ಅಗತ್ಯ ಇದೆ. ಇದು ಎಸ್ಐಟಿಯಿಂದ ಸಾಧ್ಯವಿಲ್ಲ, ಎನ್ಐಎ ತನಿಖೆ (NIA Investigation) ನಡೆದರೆ ಮಾತ್ರ ಸಾಧ್ಯ.‌ ಎನ್ಐಎಗೆ ಸೂಮೋಟೋ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶ ಇದೆ. ಎನ್ಐಎ ಸೂಮೋಟೋ ದಾಖಲಿಸಿಕೊಂಡು ಈ ಪ್ರಕರಣದ ತನಿಖೆ ಮಾಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!

    ಧರ್ಮಸ್ಥಳ ವಿರುದ್ಧದ ಪಿತೂರಿಯಲ್ಲಿ ಎಡಪಂಥೀಯರ ಕೈವಾಡ ಇದೆ ಅನ್ನೋ ಅನುಮಾನಗಳಿವೆ. ಎಡಪಂಥೀಯರು ಈಗ ಸ್ವಲ್ಪ ಮಟ್ಟಿಗೆ ಇರುವುದು ಕೇರಳದಲ್ಲಿ ಹಾಗಾಗಿ ಎನ್ಐಎ ಇದನ್ನು ತೆಗೆದುಕೊಳ್ಳಲು ಸೂಕ್ತ ಕಾರಣ ಇದೆ ಎಂದು ಡಿವಿಎಸ್ ಹೇಳಿದ್ರು.

    ಧರ್ಮಸ್ಥಳ ವಿರುದ್ಧ ಸುದೀರ್ಘ ಅವಧಿಯಿಂದ ಷಡ್ಯಂತ್ರ ನಡೆದಿದೆ. ಹೊಸ ಹೊಸ ಪಾತ್ರಧಾರಿಗಳು ಬಂದಿದ್ದಾರೆ. ಎಡಪಂಥೀಯರ ಹೆಗಲ ಮೇಲೆ ಕೋವಿ ಇಟ್ಟು ಗುಂಡು ಹಾರಿಸುವ ಕೆಲಸಗಳೂ ನಡೀತಿವೆ. ಇದೆಲ್ಲ ಸಮಗ್ರವಾಗಿ ತನಿಖೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣ ಎನ್ಐಎಗೆ ಕೊಡಬೇಕು ಅನ್ನೋದು ನಮ್ಮ ಒತ್ತಾಯ ಅಂತ ಇದೇವೇಳೆ ಡಿವಿಎಸ್ ತಿಳಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ; ರಾಜಣ್ಣನಂತೆ ವಜಾ ಮಾಡ್ತೀರಾ – ರಾಗಾಗೆ ಅಶೋಕ್ ಸವಾಲ್

  • ಡಿವಿಎಸ್ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಯತ್ನಾಳ್ ಕಿಡಿ

    ಡಿವಿಎಸ್ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಯತ್ನಾಳ್ ಕಿಡಿ

    ವಿಜಯಪುರ: ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸವಾಲು ಎಸೆದಿದ್ದಾರೆ.ಇದನ್ನೂ ಓದಿ: ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ: ಡಿವಿಎಸ್‌ ಕಿಡಿ

    ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ. ನೀನು ಮಾತನಾಡಿದ ಕೃತಿಗೂ ನಿನ್ನ ನಾಲಿಗೆಗೂ ಎತ್ತ ಸಂಬಂಧವಯ್ಯ ಸದಾನಂದ. ಇದು ನನ್ನ ಹೊಸ ವಚನ, ಇದು ನನ್ನ ಕೂಡಲಸಂಗಮ ಬಸವವಾಣಿ ಎಂದು ಟಾಂಗ್ ಕೊಟ್ಟಿದ್ದಾರೆ.

    ಸದಾನಂದಗೌಡರು (DV Sadananda Gowda) ಯಡಿಯೂರಪ್ಪ ಕುಟುಂಬದ ವಿರುದ್ಧ ಮಾತನಾಡಿರುವುದನ್ನು ನಾನು ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಮಾತನಾಡಿದ್ದಾರೆ. ದೀಪ ಆರಿದವರ ಬಗ್ಗೆ ನಾನು ಮಾತನಾಡಲ್ಲ. ನಿಮ್ಮ ದೀಪ ಈಗಾಗಲೆ ಆರಿಹೋಗಿದೆ. ನಾನು ಯಾರು ಜೊತೆನೂ ಹೊಂದಾಣಿಕೆ ಮಾಡಿಕೊಂಡಿಲ್ಲ. ನನ್ನ ವಿರುದ್ಧ ಮಾತನಾಡಿದವರ ಬಣ್ಣ ಬಯಲು ಮಾಡುತ್ತೇನೆ. ನೀವು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ಇಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಆಣೆಪ್ರಮಾಣಕ್ಕೆ ಪಂಥಾಹ್ವಾನ ನೀಡಿದರು.ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ: ದಿನೇಶ್ ಗುಂಡೂರಾವ್

  • ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ: ಡಿವಿಎಸ್‌ ಕಿಡಿ

    ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ: ಡಿವಿಎಸ್‌ ಕಿಡಿ

    – ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ
    – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ

    ಬೆಂಗಳೂರು: ಕಾಂಗ್ರೆಸ್‌ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು ಜನರು ಮಾತನಾಡುತ್ತಿದ್ದಾರೆ. ಇಗೋ ಸಮಸ್ಯೆಯಿಂದ ಬಿಜೆಪಿಗೆ ದೊಡ್ಡ ಹಾನಿಯಾಗುತ್ತಿದೆ. ಇಷ್ಟೆಲ್ಲಾ ಪಕ್ಷದಲ್ಲಿ ಆಗುತ್ತಿರುವ ರಾದ್ದಾಂತವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

    ಇನ್ನೊಮ್ಮೆ ನಾನು ದೆಹಲಿಗೆ ಹೋಗುವ ನಿರ್ಧಾರ ಮಾಡಿದ್ದೇನೆ. ಡಿಸೆಂಬರ್ 3 ರಂದು ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಇದರ ಬಗ್ಗೆ ಚರ್ಚಿಸಿ ಇದಕ್ಕೆಲ್ಲ ಬ್ರೇಕ್ ಹಾಕುವಂತೆ ಹೈಕಮಾಂಡ್‌ಗೆ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ: ದಿನೇಶ್ ಗುಂಡೂರಾವ್

     

    ಕರ್ನಾಟಕ ಬಿಜೆಪಿ ಬಗ್ಗೆ ನಾನು ವರಿಷ್ಠರಿಗೆ ಎರಡು ಪತ್ರ ಬರೆದಿದ್ದೇನೆ. ನಾನು ಅಧ್ಯಕ್ಷ ಇದ್ದಾಗಲೂ ಇದಕ್ಕಿಂತ ದೊಡ್ಡ ಗುಂಪುಗಳಿದ್ದವು. ಪಕ್ಷದ ಕಟ್ಟಿದ್ದು ನಾವು ಅಂತ ಅನಂತ್‌ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಪ್ರಬಲವಾಗಿ ಸೆಣಸಾಡುತ್ತಿದ್ದವು. ಆದರೆ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಗುಂಪು ಯಾವತ್ತೂ ಬೀದಿಗೆ ಇಳಿದಿರಲ್ಲ ಎಂದರು. ಇದನ್ನೂ ಓದಿ: ಕೃಷ್ಣಾ ನದಿ ಸೇತುವೆ ಮೇಲಿಂದ ಬಿದ್ದ ಕಾರು – ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

    ನೀವು ಇಲ್ಲಿ ಬೀದಿಗೆ ಹೋಗುವ ಬದಲು ದೆಹಲಿಗೆ ವಿಮಾನ ಹತ್ತಿ ಹೋಗಿ. ದೆಹಲಿಯಲ್ಲಿ ನಮ್ಮ ಅದ್ಭುತ ನಾಯಕರು ಇದ್ದಾರೆ. ದೆಹಲಿಗೆ ಹೋಗಿ ಪಕ್ಷದ ವಿಚಾರ ಹೇಳಿ ಸರಿಪಡಿಸಿಕೊಳ್ಳಿ. ಇಲ್ಲದಿದ್ದರೆ ನೀವೆಲ್ಲ ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಕರೆಸಿಕೊಳ್ಳಲು ನಾಲಾಯಕ್ ಎಂದು ವಿಜಯೇಂದ್ರ, ಯತ್ನಾಳ್ ತಂಡಕ್ಕೆ ಡಿವಿಎಸ್ ಕಿವಿಮಾತು ಹೇಳಿದರು.

    ನಾವು ಹಿರಿಯರು ಸೇರಿಕೊಂಡು ಒಂದು ಸಭೆ ಕರೆಯಬೇಕು. ಎರಡೂ ಗುಂಪುಗಳನ್ನು ಕರೆದು ಮಾತಾಡಬೇಕು ಅಂತ ನಮ್ಮ ಮನಸ್ಸಿನಲ್ಲಿತ್ತು. ಆದರೆ ಅವರು ಯಾವಾಗ ಬೀದಿಗೆ ಇಳಿದರೋ ಆಗ ಇದು ನಮ್ಮ ಕೈಯಲ್ಲಿ ಆಗದ ಕೆಲಸ ಅಂತ ಗೊತ್ತಾಯ್ತು. ಬಿಜೆಪಿ ಭಿನ್ನಮತ ರಾಜ್ಯದ ಹಿರಿಯರ ಕೈಮೀರಿ ಹೋಗಿದೆ ಎಂದು ತಿಳಿಸಿದರು.

     

  • ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ: ಡಿವಿಎಸ್‌

    ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ: ಡಿವಿಎಸ್‌

    ಬೆಂಗಳೂರು: ಕರ್ನಾಟಕದಲ್ಲಿ (Karnataka) ವಿರೋಧ ಪಕ್ಷಗಳ (Opposition Party) ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಮಂತ್ರಿ ಡಿವಿ ಸದಾನಂದ ಗೌಡ (DV Sadananda Gowda) ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್‌ಡಿಎ (NDA) ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ (Congress) ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    ಬಿಜೆಪಿ-ಜೆಡಿಎಸ್ (BJP-JDS) ಒಡೆದ ಮನೆ ಆಗಿದೆ. ಕಾಂಗ್ರೆಸ್ ಒಡೆದ ಮನೆಯಾಗಿದೆ ಎನ್ನುವ ಬದಲು ನಮ್ಮದಾಗಿದೆ. ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.

    ನಮ್ಮಲ್ಲಿ ಸಾಮರಸ್ಯವಿಲ್ಲ ಪ್ಲ್ಯಾನ್ ಆಫ್ ಆಕ್ಷನ್ ಇಲ್ಲದ್ದಕ್ಕೆ ನೋವಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಇದು ನಮ್ಮ ಬಿಜೆಪಿ ಕಾರ್ಯಕರ್ತರ ಅಭಿಪ್ರಾಯವೂ ಆಗಿದ್ದು ಫೋನ್ ಮಾಡಿ ತಿಳಿಸುತ್ತಿದ್ದಾರೆ. ಒಂದು ಕಡೆ ರಾಜಕೀಯ ಹೋರಾಟ ಆಗಬೇಕು. ಮತ್ತೊಂದು ಕಡೆ ಕಾನೂನು ಹೋರಾಟ ಮಾಡಬೇಕು ಎಂದರು.

     

  • ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

    ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ- ಸರ್ಕಾರದ ವಿರುದ್ಧ ಕಮಲ ನಾಯಕರ ವಾಗ್ದಾಳಿ

    – ಅತ್ಯಂತ ಹದಗೆಟ್ಟ ಕಾನೂನು ಸುವ್ಯವಸ್ಥೆ ಅಂದ್ರು ಡಿವಿಎಸ್

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯಂತ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ (DV Sadananda Gowda) ಅವರು ಟೀಕಿಸಿದರು.

    ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ನಗರದ ಸ್ವಾತಂತ್ರ‍್ಯ ಉದ್ಯಾನವನದ ಬಳಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದಿ ರಂಪಾಟಗಳು ಗೂಂಡಾ ಪ್ರವೃತ್ತಿ ಹೆಚ್ಚಾಗಿದ್ದು, ಮನೆಯಿಂದ ಹೊರಟ ಮಹಿಳೆಯರು, ಯುವಜನರು ಮನೆ ಸೇರುವ ಧೈರ್ಯ ಇಲ್ಲವಾಗಿದೆ. ರಸ್ತೆಗುಂಡಿಯಲ್ಲಿ ಬಿದ್ದು ಸಾಯುವ ಭಯದಿಂದ ಹಿರಿಯರು ನೆಮ್ಮದಿಯಿಂದ ಓಡಾಡಲು ಸಾಧ್ಯವಿಲ್ಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

    ಸೋಮವಾರ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಂತಿದೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ರಾಜ್ಯದ ಎಲ್ಲಾ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿರುವುದು ಗೊತ್ತಿದೆ. ಅಧಿಕಾರಿಗಳ ಪರವಾಗಿ ಬಿಜೆಪಿ ಇದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರೀ ವಿರೋಧ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಟೆಂಡರ್ ರದ್ದು

    ತಕ್ಷಣ ಗುಂಡಿ ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ, ಭ್ರಷ್ಟಾಚಾರ ಹೀಗೆ ಮುಂದುವರಿದರೆ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ಸರಿದಾರಿಗೆ ಬರದೇ ಇದ್ದರೆ ಅದನ್ನು ಸರಿದಾರಿಗೆ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಭಾಷಣದ ನಡುವೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ!- ವೀಡಿಯೋ ವೈರಲ್‌

    ಬೆಂಗಳೂರಿನ ಕಡೆಗಣನೆ: ಆರ್.ಅಶೋಕ್
    ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಬ್ರ‍್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ಥರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರು. ಒಂದು ವರ್ಷವಾದರೂ ಒಂದು ರೂ. ಹಣವನ್ನು ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಗೋಲ್ಮಾಲ್ – ಏನಿದು ಹಗರಣ? ಅಕ್ರಮ ಹಣ ವರ್ಗಾವಣೆ ಆಗಿದ್ದು ಯಾಕೆ?

    ರಾಜ್ಯದ 60%ರಿಂದ 65% ತೆರಿಗೆ ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಸಿದ್ದರಾಮಯ್ಯನವರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದರು. ಈಗ ಬೆಂಗಳೂರಿನ ಜನತೆ ಬೆಂಗಳೂರಿನ ತೆರಿಗೆ ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಲು ಸಿದ್ಧರಾಗುವಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ- 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್‌ಐಆರ್

    ಮಳೆಯ ಟ್ರೈಲರ್ ಇದು. ಮಳೆಗಾಲ ಆರಂಭವಾಗುವಾಗಲೇ ರಸ್ತೆಗಳು ಹೊಂಡ ಗುಂಡಿಯಿಂದ ಕೂಡಿದೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಕಸ ಎತ್ತುವವರಿಗೆ ಜನವರಿಯಿಂದ ಸಂಬಳ ಕೊಟ್ಟಿಲ್ಲ. ಮುಖ್ಯಮಂತ್ರಿಯವರು ಮೊನ್ನೆ ಒಣಗಿದ ಮರ ತೆಗೆಸಲು ಸೂಚಿಸಿದ್ದರು. ಸಿಎಂ ಹೇಳಿದ್ದಾರೆಂದು ಒಂದಾದರೂ ಮರ ತೆಗೆದಿದ್ದರೆ ಸಾಕ್ಷಿ ತೋರಿಸಿ ಎಂದು ಸವಾಲೆಸೆದರು. ಇದನ್ನೂ ಓದಿ: ಪರಿಷತ್ ಆಯ್ಕೆಗೆ ದೆಹಲಿಯಲ್ಲಿ ಮಾನದಂಡ ನಿಗದಿ: ಡಿಕೆಶಿ

    ಇದು ಎಚ್ಚರಿಕೆ ಗಂಟೆ ಎಂದ ಅಶ್ವಥ್ ನಾರಾಯಣ್:
    ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಮಾತನಾಡಿ, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಈ ಪ್ರತಿಭಟನೆ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಗಂಟೆ. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿದ್ದು, ಈ ಸರ್ಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು ಅತ್ಯಂತ ಕೆಟ್ಟ- ಭ್ರಷ್ಟ ಸರ್ಕಾರ. ಗುತ್ತಿಗೆದಾರರ ರಕ್ತ ಹೀರುವ ಸರ್ಕಾರ ಎಂದು ದೂರಿದರು. ಇದನ್ನೂ ಓದಿ: ಚುನಾವಣೆ ಮುಗಿಯುತ್ತಿದ್ದಂತೆ 2 ದಿನ ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಲಿದ್ದಾರೆ ಮೋದಿ

  • ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್‌

    ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್‌

    – ರಾಜಕೀಯ ಲಾಭಕ್ಕಾಗಿ ಪೆನ್‌ಡ್ರೈವ್‌ ರಿಲೀಸ್‌ ಮಾಡಿದ್ದಾರೆ
    – ವಿಲನ್‌ ಯಾರು ಅನ್ನೋದು ಕೊನೆಯಲ್ಲಿ ಗೊತ್ತಾಗುತ್ತೆ

    ಬೆಂಗಳೂರು: ಬಹಳ ವರ್ಷಗಳಿಂದ ಒಕ್ಕಲಿಗ (Vokkaliga) ನಾಯಕತ್ವಕ್ಕಾಗಿ ಸಂಘರ್ಷ ನಡೆಯುತ್ತಿದೆ. ಒಕ್ಕಲಿಗ ನಾಯಕತ್ವ ವಹಿಸಿಕೊಳ್ಳಲು ಈ ಚಿಲ್ಲರೆ ಕೆಲಸ ಮಾಡಿದರೆ ಆಗುವುದಿಲ್ಲ ಎಂದು ಸಂಸದ ಡಿವಿ ಸದಾನಂದ ಗೌಡ (DV Sadananda gowda) ಹೇಳಿದ್ದಾರೆ.

    ಪ್ರಜ್ವಲ್‌ ರೇವಣ್ಣ (Prajwal Revanna) ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೆನ್‌ಡ್ರೈವ್, ಸಿಡಿ ಬಿಡುವಂಥ ನೀಚ ಕೆಲಸದಿಂದ ಯಾರೂ ಒಕ್ಕಲಿಗ ನಾಯಕರಾಗುವುದಿಲ್ಲ. ರಾಜಕೀಯ ಲಾಭಕ್ಕಾಗಿ ಎಷ್ಟೋ ಮನೆಗಳನ್ನು ಪೆನ್‌ಡ್ರೈವ್ ರಿಲೀಸ್ ಮಾಡಿ ಹಾಳು ಮಾಡಿದ್ದಾರೆ. ದೇವರು ಇದ್ದಾನೋ ಇಲ್ವೋ ಅನ್ನುವಷ್ಟರ ಮಟ್ಟಿಗೆ ಸಂತ್ರಸ್ತರ ವಿಚಾರದಲ್ಲಿ ಕೆಟ್ಟ ಬೆಳವಣಿಗೆ ಆಗಿದೆ. ಪ್ರಜ್ವಲ್ ಪರಾರಿಯಲ್ಲಿ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇದೆ ಎಂದು ದೂರಿದರು.

    ಸಾವಿರಾರು ಪೆನ್‌ಡ್ರೈವ್‌ಗಳಿವೆ. ಇಷ್ಟೆಲ್ಲ ಮಾಡಲು ಎಷ್ಟು ಸಮಯ, ಎಷ್ಟು ಹಣ ಬೇಕಾಗುತ್ತೆ? ಕಳೆದ ಆರು ತಿಂಗಳಿನಿಂದ ಈ ಪೆನ್‌ಡ್ರೈವ್ ಸಿದ್ಧತೆ ನಡೆಯುತ್ತಿರಬಹುದು. ಪ್ರಜ್ವಲ್ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸತ್ಯ ಹೊರಗೆ ಬರಬೇಕು. ಪ್ರಕರಣದಲ್ಲಿ ರಾಜಕೀಯ ಪ್ರವೇಶವಾಗಿದೆ ಎಂದರು.

    ಯಾವುದೇ ಸಂದರ್ಭದಲ್ಲೂ ಇಷ್ಟು ದೊಡ್ಡ ಗಂಭೀರ ಆರೋಪ ಯಾರ ಮೇಲೂ ಬಂದಿರಲಿಲ್ಲ. ಆರೋಪ ಬಂದಾಗಲೇ ವಿದೇಶಕ್ಕೆ ಪ್ರಜ್ವಲ್ ಹೋಗಿದ್ದಾರೆ. ಮೇಲ್ನೋಟಕ್ಕೆ ಪ್ರಜ್ವಲ್ ಮೇಲೆ ಸಂಶಯವಿದೆ. ಹಾಗಂತ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಟಾರ್ಗೆಟ್ ಮಾಡಿ ಬಲಿಪಶು ಮಾಡುವ ಕೆಲಸ ಆಗುತ್ತಿದೆ. ಒಬ್ಬ ರಾಜಕಾರಣಿಯನ್ನು ಬಲಿಪಶು ಮಾಡುವ ಅತ್ಯಂತ ನೀಚ ಕೆಲಸ ಅಂದ್ರೆ ಸಿಡಿ, ಪೆನ್‌ಡ್ರೈವ್ ಬಿಡುವುದು. ಯಾರು ಪೆನ್‌ಡ್ರೈವ್ ರಿಲೀಸ್ ಮಾಡಿದ್ದಾರೋ ಅವರನ್ನ ಹಿಡಿದು ಶಿಕ್ಷೆ ಕೊಡಿಸುವ ಕೆಲಸ ಆಗಬೇಕು. ಸಿಡಿ, ಪೆನ್‌ಡ್ರೈವ್ ಡೈನಮೈಟ್ ಇದ್ದಂತೆ. ಪರದೆಯ ಹಿಂದೆ ಸಿಎಂ, ಡಿಸಿಎಂ ಇದ್ದಾರೆ. ರಿಮೋಟ್ ಕಂಟ್ರೋಲ್‌ ಮೂಲಕ ಎಲ್ಲವನ್ನೂ ಅವರು ನಿಯಂತ್ರಿಸುತ್ತಿದ್ದಾರೆ. ಒಂದು ಮಟ್ಟಿಗೆ ಪ್ರಜ್ವಲ್ ಪ್ರಕರಣ ಬಿಜೆಪಿಗೆ ಮುಜುಗರ ತಂದು ಡ್ಯಾಮೇಜ್‌ ಆಗಿತ್ತು. ಇವತ್ತು ಆ ಡ್ಯಾಮೇಜ್ ಬೌನ್ಸ್ ಬ್ಯಾಕ್ ಆಗಿದೆ ಎಂದು ಹೇಳಿದರು.

     

    ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮತ್ತು ಡಿಕೆ ಶಿವಕುಮಾರ್‌ (DK Shivakumar) ಮಧ್ಯೆ ಮೊದಲಿಂದಲೂ ಸಂಘರ್ಷ ಇದೆ. ಇಬ್ಬರೂ ನಾವು ಜೋಡೆತ್ತುಗಳು ಎನ್ನುತ್ತಿದ್ದರು. ಜೋಡೆತ್ತುಗಳು ಪರಸ್ಪರ ಹಾಯುವುದನ್ನೂ ನೋಡಿದ್ದೇವೆ. ಇಬ್ಬರೂ ಕಥಾ ನಾಯಕ ಅಂದುಕೊಂಡಿದ್ದಾರೆ. ಆದರೆ ಕಥಾನಾಯಕನಷ್ಟೇ ಬಲಿಷ್ಟ ವಿಲನ್ ಇರುತ್ತಾನೆ. ಆದರೆ ವಿಲನ್ ಯಾರು ಅಂತ ಆರಂಭದಲ್ಲಿ ಗೊತ್ತಾಗುವುದಿಲ್ಲ. ಕೊನೆಗೆ ವಿಲನ್‌ ಯಾರು ಅನ್ನೋದು ಗೊತ್ತಾಗುತ್ತದೆ ಎಂದರು.

    ಲೋಕಸಭೆ ಚುನಾವಣೆಯಲ್ಲಿ (Lok Sabha Election) ನಮ್ಮ ಪರ ವಾತಾವರಣ ಇದೆ. ಕಳೆದ ಹತ್ತು ವರ್ಷಗಳಿಂದ ನಿರಂತರ ಕೆಲಸ ಮಾಡಿದ್ದೇವೆ, ಕಾರ್ಯಕ್ರಮ ಮಾಡಿದ್ದೇವೆ. ಕಾಂಗ್ರೆಸ್‌ನವರಲ್ಲಿ ಫೋರ್ಸ್ ಇಲ್ಲ. ಕಾಂಗ್ರೆಸ್‌ನವರು ಹಗಲಲ್ಲಿ ಚುನಾವಣೆ ಮಾಡುವುದಿಲ್ಲ. ಅವರದ್ದು ಏನಿದ್ದರೂ ರಾತ್ರಿ ಚುನಾವಣೆ ಮಾತ್ರ. ಅವರು ರಾತ್ರಿ ಹೋಗಿ ಯಾರ್ಯಾರಿಗೆ ಪೆಟ್ಟಿಗೆ ಕೊಡಬೇಕೋ ಅಂತ ರಾತ್ರಿ ರಾಜಕಾರಣ ಮಾಡುತ್ತಾರೆ. ನಾವು ಸಾಧನೆಗಳ ಮೂಲಕ ನಿರಂತರವಾಗಿ ಜನರ ಕೆಲಸ ಮಾಡುತ್ತಾ ಬರುತ್ತಿದ್ದೇವೆ ಎಂದು ಹೇಳಿದರು.

     

  • Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

    Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

    – 5ನೇ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್
    – ವೀಣಾ ಕಾಶಪ್ಪನವರ್‌ಗೆ ‘ಕೈ’ ಟಿಕೆಟ್ ಮಿಸ್? ಸಂಯುಕ್ತ ಪಾಟೀಲ್‌ಗೆ ಮಣೆ?

    ಸ್ಮಾರಕಗಳ ನೆಲೆ, ದೇವಾಲಯಗಳ ತೊಟ್ಟಿಲು, ಚಾಲುಕ್ಯರ ನಾಡು, ಬಸವಣ್ಣ ನವರ ಐಕ್ಯ ಭೂಮಿ, ಶಕ್ತಿ ಪೀಠ ಬನಶಂಕರಿ ದೇವಿ ನೆಲೆಸಿರುವ ಐತಿಹಾಸಿಕ ಜಿಲ್ಲೆ ಬಾಗಲಕೋಟೆ. ಕಲೆ, ಸಂಸ್ಕೃತಿಗೆ ಈ ನೆಲದ ಕೊಡುಗೆ ಅಪಾರ.

    ಕರ್ನಾಟಕ ರಾಜ ಮನೆತನ ಚಾಲುಕ್ಯರ ನಾಡು ಬಾಗಲಕೋಟೆ (Bagalkot) ಈಗ ‘ಲೋಕ’ಸಮರಕ್ಕೆ ಸಜ್ಜಾಗಿದೆ. ಕ್ಷೇತ್ರಕ್ಕಾಗಿ ಕಲಿಗಳಂತೆ ಕಾದಾಡಲು ಕಾಂಗ್ರೆಸ್-ಬಿಜೆಪಿ (Congress-BJP) ರಣರಂಗಕ್ಕೆ ಇಳಿದಿವೆ. ಆರಂಭದಲ್ಲಿ ಕ್ಷೇತ್ರದಲ್ಲಿ ಭದ್ರಬುನಾದಿ ಹಾಕಿದ್ದ ಕಾಂಗ್ರೆಸ್ ಕಾಲಾನಂತರ ತನ್ನ ಅಸ್ತಿತ್ವ ಕಳೆದುಕೊಂಡಿತು. ಬಾಗಲಕೋಟೆ ಲೋಕಸಭಾ ಕ್ಷೇತ್ರ ಈಗ ಬಿಜೆಪಿ ತೆಕ್ಕೆಯಲ್ಲಿದೆ. ಗೆಲುವಿನ ನಾಗಾಲೋಟ ಮುಂದುವರಿಸಲು ಕಮಲ ಕಲಿಗಳು ಪ್ರಯತ್ನಿಸುತ್ತಿದ್ದಾರೆ. ಇಲ್ಲಿ ಮತ್ತೆ ತನ್ನ ಅಸ್ತಿತ್ವ ಸ್ಥಾಪಿಸಬೇಕು ಎಂದು ‘ಕೈ’ ಪಾಳಯ ತಂತ್ರ ರೂಪಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿದೆ.

    ಕ್ಷೇತ್ರ ಪರಿಚಯ
    ಬಾಗಲಕೋಟೆ ಲೋಕಸಭಾ ಕ್ಷೇತ್ರವು 1967 ರಲ್ಲಿ ಅಸ್ತಿತ್ವಕ್ಕೆ ಬಂತು. ಕ್ಷೇತ್ರದ ಮೊದಲ ಸಂಸದನಾಗಿ ಕಾಂಗ್ರೆಸ್‌ನ ಸಂಗನಗೌಡ ಬಸನಗೌಡ ಪಾಟೀಲ್ ಆಯ್ಕೆಯಾಗಿದ್ದರು. 1991 ರ ವರೆಗೆ ಕಾಂಗ್ರೆಸ್ ಗೆಲುವಿನ ಬಾವುಟ ಹಾರಿಸಿತ್ತು. 1996 ರಲ್ಲಿ ಮೊದಲ ಬಾರಿಗೆ ಜನತಾದಳ ಪಕ್ಷದ ಹೆಚ್.ವೈ.ಮೇಟಿ ಗೆಲುವು ದಾಖಲಿಸಿದರು. ಇದರೊಂದಿಗೆ ಕಾಂಗ್ರೆಸ್ ಸತತ ಗೆಲುವಿನ ಸರಪಳಿಯ ಕೊಂಡಿ ಕಳಚಿತು. ಅದಾದ ಬಳಿಕ ಕ್ಷೇತ್ರದಲ್ಲಿ ಒಮ್ಮೆ ಲೋಕ ಶಕ್ತಿ ಹಾಗೂ ಮತ್ತೊಮ್ಮೆ ಕಾಂಗ್ರೆಸ್ ಗೆದ್ದಿದ್ದು ಬಿಟ್ಟರೆ, ಕಳೆದ 20 ವರ್ಷಗಳಿಂದ ಇಲ್ಲಿ ಬಿಜೆಪಿ ಗೆಲುವಿನ ಓಟ ಮುಂದುವರಿಸಿದೆ. ಪಕ್ಷದ ಪಿ.ಸಿ.ಗದ್ದಿಗೌಡರ್ (2004, 2009, 2014, 2019) ಸತತ ನಾಲ್ಕು ಬಾರಿ ಗೆದ್ದು ಬೀಗಿದ್ದಾರೆ.

    ವಿಧಾನಸಭಾ ಕ್ಷೇತ್ರಗಳೆಷ್ಟು?
    ಬಾಗಲಕೋಟೆ 7 ವಿಧಾನಸಭಾ ಕ್ಷೇತ್ರ ಹಾಗೂ ಪಕ್ಕದ ಗದಗ ಜಿಲ್ಲೆಯ ನರಗುಂದ ಸೇರಿ 8 ಕ್ಷೇತ್ರಗಳನ್ನು ಒಳಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ, ಬೀಳಗಿ, ಮುಧೋಳ, ಜಮಖಂಡಿ, ತೇರದಾಳ, ಬಾದಾಮಿ ಹಾಗೂ ಹುನಗುಂದ. ಗದಗ ಜಿಲ್ಲೆಯ ನರಗುಂದ ಕ್ಷೇತ್ರ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಇದನ್ನೂ ಓದಿ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

    ಒಟ್ಟು ಮತದಾರರು ಎಷ್ಟು?
    ಕ್ಷೇತ್ರದಲ್ಲಿ ಒಟ್ಟು 17,90,118 ಮತದಾರರಿದ್ದಾರೆ. ಅವರ ಪೈಕಿ ಪುರುಷರು 8,87,780 ಹಾಗೂ ಮಹಿಳಾ ಮತದಾರರು 9,02,239 ಇದ್ದಾರೆ. ತೃತೀಯ ಲಿಂಗಿ ಮತದಾರರು 99 ಮಂದಿ ಇದ್ದಾರೆ.

    ಕಳೆದ ಚುನಾವಣೆಯಲ್ಲಿ ಏನಾಗಿತ್ತು?
    2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಪಿ.ಸಿ.ಗದ್ದಿಗೌಡರ್ 1,68,187 ಮತಗಳ ಅಂತರದಿಂದ ಗೆಲುವು ದಾಖಲಿಸಿ ಸತತ ನಾಲ್ಕನೆಯ ಬಾರಿ ಸಂಸದರಾಗಿ ಆಯ್ಕೆಯಾದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಭಾರಿ ಅಂತರದ ಸೋಲು ಅನುಭವಿಸಿದರು. ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಬಿಜೆಪಿ ಅಭ್ಯರ್ಥಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.

    ಪಿ.ಸಿ.ಗದ್ದಿಗೌಡರ್‌ಗೆ ಬಿಜೆಪಿ ಮತ್ತೆ ಟಿಕೆಟ್
    ಬಾಗಲಕೋಟೆ ಜಿಲ್ಲೆಯಲ್ಲಿ ಹಿಂದುತ್ವ ಗಟ್ಟಿಯಾಗಿ ಬೇರೂರಿದ್ದು, ಬಿಜೆಪಿಯ ಅಬೇಧ್ಯ ಕೋಟೆಯಾಗಿದೆ. 2004 ರಿಂದ 2019 ರ ವರೆಗಿನ ನಾಲ್ಕು ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿದೆ. ಪ್ರಬಲ ಲಿಂಗಾಯತ ಗಾಣಿಗ ಸಮಾಜದ ಪಿ.ಸಿ.ಗದ್ದಿಗೌಡರ್ (P. C. Gaddigoudar) ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಬಿಜೆಪಿಯ ಒಗ್ಗಟ್ಟು, ಜಿಲ್ಲೆಯ ಕೈ ನಾಯಕರ ಒಳೇಟು, ತಂತ್ರ-ಕುತಂತ್ರಗಳಿಂದ ಗದ್ದಿಗೌಡರ್‌ಗೆ ಗೆಲುವು ನಿರಾಯಾಸವಾಗಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಈ ಹಿನ್ನೆಲೆಯಲ್ಲಿ ಸೋಲಿಲ್ಲದ ಸರದಾರ ಗದ್ದಿಗೌಡರ್‌ಗೆ ಈ ಬಾರಿಯೂ ಬಿಜೆಪಿ ಟಿಕೆಟ್ ನೀಡಿ ಮಣೆ ಹಾಕಿದೆ. ಆದರೂ ನಾಲ್ಕು ಬಾರಿ ಗೆದ್ದಿರುವ ಗದ್ದಿಗೌಡರ್ ಮೇಲೆ ಕೆಲ ಆರೋಪಗಳಿವೆ. ಕ್ಷೇತ್ರಕ್ಕಾಗಿ ವಿಶೇಷ ಯೋಜನೆಗಳನ್ನು ತಂದಿಲ್ಲ ಎಂಬ ಆರೋಪ ಎದುರಿಸುತ್ತಿದ್ದಾರೆ. ಕೆಲವು ದೀರ್ಘಾವಧಿ ಕಾಮಗಾರಿಗಳು (ಬಾಗಲಕೋಟೆ-ಕುಡಚಿ ರೈಲು ಮಾರ್ಗ, ಗದಗ-ಹುಟಗಿ ಡಬ್ಲಿಂಗ್ ಕಾಮಗಾರಿ) ದಶಕ ಕಳೆದರೂ ಮುಗಿಯದಕ್ಕೆ ಜನರಲ್ಲಿ ಅಸಮಾಧಾನವಿದೆ. ಇದನ್ನೂ ಓದಿ: ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್‌ ಘೋಷಣೆ

    ವೀಣಾ ಕಾಶಪ್ಪನವರ್‌ಗೆ ‘ಕೈ’ ಟಿಕೆಟ್ ಮಿಸ್?
    2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ರೆ ಈ ಬಾರಿ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮಾಜಿ ಸಚಿವ ಅಜಯಕುಮಾರ್ ಸರನಾಯಕ್, ವೀಣಾ ಕಾಶಪ್ಪನವರ್, ವಿಜಯಪುರದ ಸಂಯುಕ್ತಾ ಪಾಟೀಲ್, ರಕ್ಷಿತಾ ಈಟಿ ಹೀಗೆ ಹಲವು ಹೆಸರುಗಳು ಮುಂಚೂಣಿಯಲ್ಲಿವೆ. ಕಳೆದ ಬಾರಿ ಪಕ್ಷದಿಂದ ಟಿಕೆಟ್ ಗಿಟ್ಟಿಸಿ ಸೋಲನುಭವಿಸಿದ್ದ ವೀಣಾ ಕಾಶಪ್ಪನವರ್‌ಗೆ ಈ ಬಾರಿ ಟಿಕೆಟ್ ಮಿಸ್ ಆಗಲಿದೆ. ಬುಧವಾರ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಾಧ್ಯಮಗಳ ಮುಂದೆ ವೀಣಾ ಕಾಶಪ್ಪನವರ್ (Veena Kashappanavar) ಟಿಕೆಟ್ ವಿಚಾರವಾಗಿ ಕಣ್ಣೀರಿಟ್ಟರು. ಈ ಬಾರಿ ವಿಜಯಪುರ ಜಿಲ್ಲೆಯ ಸಂಯುಕ್ತ ಪಾಟೀಲ್ ಅವರ ಹೆಸರು ಮುಂಚೂಣಿಯಲ್ಲಿದೆ. ಬಹುತೇಕ ಅವರಿಗೆ ಟಿಕೆಟ್ ಪಕ್ಕ ಎನ್ನುವ ಮಾಹಿತಿ ಇದೆ.

    ಮೈತ್ರಿಯಿಂದ ಬಿಜೆಪಿಗೆ ಲಾಭ?
    ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದೆ. ಕಾಂಗ್ರೆಸ್ ಮಾತ್ರ ಪೈಪೋಟಿ ಕೊಟ್ಟರೆ, ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬMತಿದೆ. ಬಿಜೆಪಿಗೆ ತನ್ನದೇ ಆದ ಮತಬ್ಯಾಂಕ್ ಇದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇದ್ದಾಗಲೇ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್ ನಿರಾಯಾಸ ಗೆಲುವು ಸಾಧಿಸಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದು, ಕಮಲಕ್ಕೆ ಮತ್ತಷ್ಟು ಅನುಕೂಲವಾಗುವ ಸಾಧ್ಯತೆ ಇದೆ.

    ‘ಕೈ’ ಹಿಡಿಯುತ್ತಾ ಗ್ಯಾರಂಟಿ ಯೋಜನೆಗಳು?
    ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈಹಿಡಿಯಲಿವೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಹೀಗಾಗಿ ಬಿಜೆಪಿಗೆ ಈ ಸಲ ಕಾಂಗ್ರೆಸ್‌ನಿಂದ ಪ್ರಬಲ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳ ಪೈಕಿ 5 ಕಾಂಗ್ರೆಸ್ ತೆಕ್ಕೆಗೆ ಸೇರಿವೆ. ಮೂರರಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಇದು ಕೂಡ ಕಾಂಗ್ರೆಸ್ ವರದಾನ ಆಗಬಹುದು ಎನ್ನಲಾಗಿದೆ.

     

    ಜಾತಿವಾರು ಲೆಕ್ಕಾಚಾರ
    ಲಿಂಗಯತ ಪಂಚಮಸಾಲಿ: 1,80,000
    ಲಿಂಗಾಯತ ಗಾಣಿಗ: 98,000
    ಲಿಂಗಾಯತ ರೆಡ್ಡಿ: 80,000
    ಲಿಂಗಾಯತ ಬಣಜಿಗ: 50,000
    ದೇವಾಂಗ & ನೇಯ್ಗೆ: 80,000
    ಪರಿಶಿಷ್ಟ ಜಾತಿ (ಎಸ್‌ಸಿ): 3,05,000
    ವಿಶ್ವಕರ್ಮ: 30,000
    ಅಂಬಿಗರು: 32,000
    ಕ್ಷತ್ರಿಯ: 65,0000
    ಪರಿಶಿಷ್ಟ ಪಂಗಡ (ಎಸ್‌ಟಿ): 85,000
    ಮುಸ್ಲಿಂ: 1,70,000
    ಕುರುಬ: 2,60,000
    ಉಪ್ಪಾರ್: 25,000
    ಬ್ರಾಹ್ಮಣ: 25,000
    ಜೈನ್: 15,000
    ಕುಂಬಾರ್: 12,000
    ಇತರೆ: 40,000

  • ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್‌ ಘೋಷಣೆ

    ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್‌ ಘೋಷಣೆ

    ಬೆಂಗಳೂರು: ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿಯಲ್ಲೇ (BJP) ಇದ್ದು ಶುದ್ದೀಕರಣದ ಕಡೆಗೆ ನಾನು ಗಮನ ನೀಡುತ್ತೇನೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿ ಸದಾನಂದ ಗೌಡ (DV Sadananda Gowda) ಹೇಳಿದ್ದಾರೆ.

    ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಡಿವಿಎಸ್‌ ಬಿಜೆಪಿಗೆ (BJP) ರಾಜೀನಾಮೆ ನೀಡಿ ಕಾಂಗ್ರೆಸ್‌ (Congress) ಸೇರ್ಪಡೆಯಾಗುತ್ತಾರೆ ಎಂಬ ಒಂದು ಸುದ್ದಿ ಹರಡಿತ್ತು. ಈ ಸುದ್ದಿಯ ಬೆನ್ನಲ್ಲೇ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಬಿಜೆಪಿಯನ್ನು ಬಿಡುವುದಿಲ್ಲ. ಕಾಂಗ್ರೆಸ್‌ನಿಂದ ಆಹ್ವಾನ ಬಂದಿದ್ದು ನಿಜ. ಆದರೆ ನಾನು ಕಾಂಗ್ರೆಸ್‌ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಇದನ್ನೂ ಓದಿ: ಕಾಲೇಜು ದಿನಗಳಲ್ಲೇ ‘ಕಾಂತಾರ’ ಕಥೆ ಹೊಳೆದಿತ್ತು: ನಟ ರಿಷಬ್ ಶೆಟ್ಟಿ

    ನಾನು ಚುನಾವಣಾ (Election) ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದೆ. ಆಗ ಮಾಜಿ ಸಿಎಂ, ಮಾಜಿ ಡಿಸಿಎಂ ಬಂದು ಮನವೊಲಿಸಿದರು. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬದಲಿ ಅಭ್ಯರ್ಥಿ ಬಂದ ಬಳಿಕ ಕುತೂಹಲ ಹೆಚ್ಚಾಯಿತು ಎಂದು ಹೇಳಿದರು.

    ಟಿಕೆಟ್‌ ಕೈತಪ್ಪಿದ್ದರಿಂದ ಬೇಸರವಾಗಿದ್ಯಾ ಎಂಬ ಪ್ರಶ್ನೆಗೆ, ಬೇಸರವಾಗಿದೆ ಎಂದು ಹೇಳಿದ ಡಿವಿಎಸ್‌ ನನ್ನನ್ನು ಅವಮಾನಿಸಿದವರು ಮುಂದೆ ಪಶ್ಚಾತ್ತಾಪ ಅನುಭವಿಸುತ್ತಾರೆ. ಸಹಿಸಿಕೊಳ್ಳುವವರಿಗೆ ತಾಳ್ಮೆ ಇದ್ದರೆ, ದುಃಖ ಕೊಟ್ಟವರು ಇದ್ದೂ ಸತ್ತಂತೆ ಎಂದು ತನ್ನನ್ನು ಅವಮಾನಿಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ನೀರು ಕುಡಿಯೋ ನೆಪದಲ್ಲಿ ಬಂದು ಎಳೆದಾಡಿದ – ಡೆಲಿವರಿ ಬಾಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ 

    ಕರ್ನಾಟಕದಲ್ಲಿ ಮೋದಿ (PM Narendra Modi) ಪರ ವಾತಾವರಣ ಸೃಷ್ಟಿಯಾಗಬೇಕು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ಇದಕ್ಕಾಗಿ ಬಿಜೆಪಿ ಜನಪರವಾದ ಪಕ್ಷ ಆಗಬೇಕು, ಜನ ಒಪ್ಪಿಕೊಳ್ಳಬಲ್ಲ ಪಕ್ಷ ಆಗಬೇಕು ಎಂದರು.

    ಮೋದಿ ಅವರು ಹೇಳಿದಂತಹ ಪರಿವಾರವಾದ, ಮೋದಿ ಅವರು ಹೇಳಿದಂತಹ ಭ್ರಷ್ಟಾಚಾರವಾದ, ಮೋದಿ ಅವರು ಹೇಳಿದಂತಹ ಜಾತಿವಾದ ಕರ್ನಾಟಕದಲ್ಲಿ ಇರಬಾರದು. ಈ ಶುದ್ದೀಕರಣಕ್ಕೆ ವೇಗ ಕೊಡುವಂತದ್ದು ನನ್ನಿಂದ ಮಾತ್ರ ಸಾಧ್ಯ. ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ನನ್ನ ಮಕ್ಕಳಿಗೆ, ನನ್ನ ಕುಟುಂಬದವರಿಗೆ, ನನ್ನ ಸಂಬಂಧಿಕರಿಗೆ, ನನ್ನ ಚೇಲಾಗಳಿಗೆ ಇರುವಂತಹ ಪಕ್ಷ ಬಿಜೆಪಿಯಾಗಬಾರದು ಎಂದು ಹೇಳಿದರು.

    ಬಿಜೆಪಿಯೊಳಗೆ ಶುದ್ದೀಕರಣ ಆಗುವ ತನಕ ವಿರಮಿಸುವುದಿಲ್ಲ. ಮೋದಿ ಚುನಾವಣೆ ಬಳಿಕ ಜನರ ಮನಸ್ಸಿನಲ್ಲಿ ಏನಿದೆ ಅದು ಆಗುತ್ತೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರು ಬದಲಾಗ್ತಾರೆ ಅಂತಾ ಈಶ್ವರಪ್ಪ ಹೇಳಿದ್ದಾರೆ. ನೀವು ಅರ್ಥ ಮಾಡಿಕೊಳ್ಳಿ ಎಂದು ತಿಳಿಸಿದರು.

     

  • ಸುಳ್ಯಕ್ಕೆ ತೆರಳಿದ ಡಿವಿಎಸ್‌ – ಇನ್ನೂ ನಡೆ ನಿಗೂಢ

    ಸುಳ್ಯಕ್ಕೆ ತೆರಳಿದ ಡಿವಿಎಸ್‌ – ಇನ್ನೂ ನಡೆ ನಿಗೂಢ

    ಬೆಂಗಳೂರು: ಸಂಸದ ಡಿವಿ ಸದಾನಂದ ಗೌಡರ (DV Sadananda  Gowda) ನಡೆ ಇನ್ನೂ ನಿಗೂಢವಾಗಿದ್ದು ಬೆಂಗಳೂರಿನಿಂದ ಸುಳ್ಯಕ್ಕೆ (Sullia) ಪ್ರಯಾಣಿಸಿದ್ದಾರೆ.

    ಬೆಂಗಳೂರು ಉತ್ತರ (Bengaluru North) ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸದಾನಂದ ಗೌಡ ಇಂದು ಬೆಳಗ್ಗೆಯೇ ಸುಳ್ಯದತ್ತ ಪ್ರಯಾಣಿಸಿದ್ದು ಕುಟುಂಬಸ್ಥರು, ಸಂಬಂಧಿಕರ ಜತೆ ಸಮಾಲೋಚನೆ ನಡೆಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ 2ನೇ ಪಟ್ಟಿ ಇಂದು ಬಿಡುಗಡೆ – ಸಂಭಾವ್ಯ ಅಭ್ಯರ್ಥಿಗಳು ಯಾರು?

     

    ಮಾರ್ಚ್‌ 18 ರಂದು ಹುಟ್ಟುಹಬ್ಬ ಆಚರಿಸಿದ್ದ ವೇಳೆ ನಾನು ನಾಳೆ ಸುದ್ದಿಗೋಷ್ಠಿ ನಡೆಸಿ ಮುಂದಿನ ನಡೆಯ ಬಗ್ಗೆ ಹೇಳುತ್ತೇನೆ ಎಂದು ತಿಳಿಸಿದ್ದರು. ಆದರೆ ಅವರು ಸುದ್ದಿಗೋಷ್ಠಿ ನಡೆಸಿರಲಿಲ್ಲ. ‌ ಹೀಗಾಗಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿತ್ತು.

    ಸದಾನಂದ ಗೌಡ ಗುರುವಾರ ಬೆಂಗಳೂರಿಗೆ (Bengaluru) ವಾಪಸ್‌ ಆಗಲಿದ್ದಾರೆ ಎನ್ನಲಾಗಿದೆ. ಬೆಂಗಳೂರಿಗೆ ಬಂದ ನಂತರ ಮುಂದಿನ ರಾಜಕೀಯ ನಡೆಯ ಬಗ್ಗೆ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಸಂಜೆ ನೆರೆ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಹತ್ಯೆ – ರಾತ್ರಿ ಯುಪಿ ಪೊಲೀಸರ ಎನ್‌ಕೌಂಟರ್‌ಗೆ ಪಾತಕಿ ಬಲಿ

     

    ಬೆಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ಕೈ ತಪ್ಪಿದರಿಂದ ಅಸಮಾಧಾನಗೊಂಡಿರುವ ಡಿವಿಎಸ್‌ ಮೈಸೂರಿನಿಂದ (Mysuru) ಕಾಂಗ್ರೆಸ್‌ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಯಾರೂ ಈ ವಿಚಾರವನ್ನು ಅಧಿಕೃತಗೊಳಿಸಿಲ್ಲ.

    ಮಾಧ್ಯಮಗಳ ಜೊತೆ ಮಾತನಾಡಿದ್ದ ಸದಾನಂದ ಗೌಡ ಕಾಂಗ್ರೆಸ್‌ ನಾಯಕರು (Congress) ನನ್ನನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.

  • ಈಶ್ವರಪ್ಪ ಮುನಿಸು ಒಂದು ವಾರದಲ್ಲಿ ಶಮನ: ಆರ್.ಅಶೋಕ್

    ಈಶ್ವರಪ್ಪ ಮುನಿಸು ಒಂದು ವಾರದಲ್ಲಿ ಶಮನ: ಆರ್.ಅಶೋಕ್

    ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ (KS Eshwarappa) ಪಕ್ಷದ ಹಿರಿಯ ನಾಯಕರು. ಬಂಡಾಯದಂತಹ ಯಾವುದೇ ನಿರ್ಧಾರ ಅವರು ಮಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದ್ದಾರೆ.

    ಈಶ್ವರಪ್ಪ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅಂತಹ ಯಾವುದೇ ನಿರ್ಧಾರ ಮಾಡಲ್ಲ. ಒಂದು ವಾರ ಕಾದು ನೋಡಿ ಎಲ್ಲವೂ ಸರಿ ಆಗುತ್ತದೆ. ಈಶ್ವರಪ್ಪ ಪಕ್ಷ ಬಿಡಲ್ಲ. ಯಡಿಯೂರಪ್ಪ-ಈಶ್ವರಪ್ಪ ನಡುವೆ ಏನು ಮಾತುಕತೆ ಆಗಿದೆ ನಮಗೆ ಗೊತ್ತಿಲ್ಲ. ಯಡಿಯೂರಪ್ಪ (BS Yediyurappa) ಏನು ಮಾತು ಕೊಟ್ಟಿದ್ದಾರೋ ಗೊತ್ತಿಲ್ಲ. ಇದನ್ನು ಯಡಿಯೂರಪ್ಪ-ಈಶ್ವರಪ್ಪ ಕೂತು ಮಾತನಾಡಬೇಕು. ಹೈಕಮಾಂಡ್ ನಾಯಕರು ಇದನ್ನು ನೋಡಿಕೊಳ್ಳುತ್ತಾರೆ. ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇದ್ದಾಗ ಅಸಮಾಧಾನ ಸಹಜ. ಹೀಗಾಗಿ ಈಶ್ವರಪ್ಪ ಹೀಗೆ ರಿಯಾಕ್ಟ್ ಮಾಡುತ್ತಾರೆ. ಹೈಕಮಾಂಡ್ ನಾಯಕರು ಅವರ ಜೊತೆ ಮಾತನಾಡುತ್ತಾರೆ. ಅವರು ಪಕ್ಷ ಬಿಡುವುದಿಲ್ಲ, ಎಲ್ಲವೂ ಸರಿ ಆಗುತ್ತದೆ ಎಂದರು. ಇದನ್ನೂ ಓದಿ: ನಾವು ಯಾರಿಗೂ ವಿಷ ಹಾಕುವವರಲ್ಲ- ಹೆಚ್‍ಡಿಕೆಗೆ ಡಿಕೆ ಸುರೇಶ್ ತಿರುಗೇಟು

    ಸದಾನಂದಗೌಡ (DV Sadananda Gowda) ಅನ್ಯ ಪಕ್ಷ ಸೇರ್ಪಡೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸದಾನಂದಗೌಡ ಅವರ ಜೊತೆ ಮಾತನಾಡಿದ್ದೇನೆ. ಅವರು ಆತುರದ ನಿರ್ಧಾರ ಮಾಡಲ್ಲ. ನಾವೆಲ್ಲರು ಸದಾನಂದಗೌಡರಿಗೆ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಆದರೆ ಹೈಕಮಾಂಡ್ ನಾಯಕರು ಟಿಕೆಟ್ ಶೋಭಾ ಅವರಿಗೆ ಕೊಟ್ಟಿದ್ದಾರೆ. ಹೈಕಮಾಂಡ್ ನಾಯಕರು ಸದಾನಂದಗೌಡರ ಜೊತೆ ಮಾತನಾಡುತ್ತಾರೆ. ಅವರು ಪಕ್ಷ ಬಿಡುವ ತೀರ್ಮಾನ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಮುರಿಯೋಲ್ಲ, ಹಾಲು-ಜೇನು ರೀತಿ ಸಂಬಂಧ ಇರಲಿದೆ: ಆರ್.ಅಶೋಕ್