Tag: Dwarkeesh

  • ಬಂಗ್ಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?

    ಬಂಗ್ಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?

    ನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಅಂತಾನೇ ಫೇಮಸ್ ಆಗಿರುವ ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿರುವ ಇವರಿಗೆ ದ್ವಾರಕೀಶ್ (Dwarkeesh)  ಅಂತ ಹೆಸರು ಇಟ್ಟಿದ್ದು ಬೇರೆ ಯಾರೂ ಅಲ್ಲ ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ ಸಿ.ವಿ ಶಿವಶಂಕರ್.

    ಕನ್ನಡ ಚಿತ್ರೋದ್ಯಮದಲ್ಲಿ ಏನಾದರೂ ಸಾಧನೆ ಮಾಡಬೇಕು ಅಂತ ಬಣ್ಣದ ಪ್ರಪಂಚಕ್ಕೆ ಬಂದ ದ್ವಾರಕೀಶ್, ಸಿನಿಮಾ ರಂಗದ ನಾನಾ ವಿಭಾಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡವರು. ಕೇವಲ ನಟರಾಗಿ ಮಾತ್ರ ಉಳಿಯದೇ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅನೇಕ ಕಲಾವಿದರನ್ನು ಚಿತ್ರೋದ್ಯಮಕ್ಕೆ ಪರಿಚಯಿಸಿದವರು.

    ಮೈಸೂರಿನ ಶಾರದಾ ವಿಲಾಸ್ ಮತ್ತು ಬಾನುಮಯ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಸಿಪಿಸಿ ಪಾಲಿಟೆಕ್ನಿಕ್ ಜೊತೆ ಡಿಪ್ಲೋಮಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಮೈಸೂರಿನಲ್ಲಿ ಭಾರತ್ ಆಟೋ ಸ್ಪೇರ್ಸ್ ಅಂಗಡಿಯಿಂದ ವ್ಯಾಪಾರ ಶುರು ಮಾಡಿದ್ದರು. ಆನಂತರ ಸಿನಿಮಾ ರಂಗಕ್ಕೆ ಬಂದವರು.

    ದ್ವಾರಕೀಶ್ ಅವರ ಚಿಕ್ಕಪ್ಪ ಹುಣಸೂರು ಕೃಷ್ಣಮೂರ್ತಿ ಅವರು. ಅವರನ್ನು ಒಪ್ಪಿಸುವ ಮೂಲಕ 1963ರಲ್ಲಿ ದ್ವಾರಕೀಶ್ ಸಿನಿಮಾ ರಂಗವನ್ನು ಪ್ರವೇಶ ಮಾಡಿದರು. ಹಾಸ್ಯನಟ, ಸಹನಟಾಗಿ ಕೆಲಸ ಮಾಡುತ್ತಿದ್ದವರು, ಏಕಾಏಕಿ 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾದವರು. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತಿದ್ದಂತೆಯೇ ಮತ್ತೆ 1969ರಲ್ಲಿ ಮೇಯರ್ ಮುತ್ತಣ್ಣ ಚಿತ್ರವನ್ನು ತಮ್ಮದೇ ದ್ವಾರಕಾ ಫಿಲ್ಮ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದರು. ಈ ಸಿನಿಮಾದಲ್ಲಿ ಡಾ.ರಾಜ್ ಕುಮಾರ್ ಹೀರೋ, ಭಾರತಿ ನಾಯಕಿ. ಇದು ಕೂಡ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಪ್ರದರ್ಶನ ಮಾಡಿತು.

    ನಟರಾಗಿ ಜನ್ಮ ರಹಸ್ಯ, ಮಂಕುತಿಮ್ಮ, ಪೆದ್ದ ಗೆದ್ದ, ಕಿಟ್ಟು ಪುಟ್ಟಿ, ಸಿಂಗಾಪುರದಲ್ಲಿ ರಾಜಾಕುಳ್ಳ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶಿಲಾ, ಆಪ್ತಮಿತ್ರ, ಭಲೇ ಹುಡುಗ, ಬಂಗಾರದ ಮನುಷ್ಯ, ಗಲಾಟೆ ಸಂಸಾರ, ಪ್ರಪಂಚ ಕುಳ್ಳ, ಗುರು ಶಿಷ್ಯರು, ಕಳ್ಳ ಕಳ್ಳು ಹೀಗೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ.

     

    1974ರಲ್ಲಿ ವಿಷ್ಣುವರ್ಧನ್ ಅವರ ಜೊತೆಯಾಗಿ ಸಿನಿಮಾ ಮಾಡಲು ಮುಂದಾದರು. ಕಳ್ಳ ಕುಳ್ಳ ಸಿನಿಮಾದಿಂದ ಶುರುವಾದ ಇವರ ಜರ್ನಿ ಆಪ್ತಮಿತ್ರ ಚಿತ್ರದ ತನಕವೂ ಕರೆಕೊಂಡ ಬಂದಿತ್ತು. ಈ ನಡುವೆ ವಿಷ್ಣು ಮತ್ತು ದ್ವಾಕರೀಶ್ ಗಲಾಟೆ ಮಾಡಿಕೊಂಡು ಹತ್ತು ವರ್ಷಗಳ ಕಾಲ ದೂರವಿದ್ದರು.

  • ಹಿರಿಯ ನಟ ದ್ವಾರಕೀಶ್ ನಿಧನ

    ಹಿರಿಯ ನಟ ದ್ವಾರಕೀಶ್ ನಿಧನ

    ನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh) ನಿಧನರಾಗಿದ್ದಾರೆ. 81ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.

     

    ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

  • ಚಿತ್ರನಟ ದ್ವಾರಕೀಶ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

    ಚಿತ್ರನಟ ದ್ವಾರಕೀಶ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

    ರ್ನಾಟಕ ಕುಳ್ಳ ಖ್ಯಾತಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇಂದು ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 57ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭಾಗವಹಿಸಿದ್ರು.

    ಘಟಿಕೋತ್ಸವದಲ್ಲಿ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಪ್ರೀ ವೆಡ್ಡಿಂಗ್ ಪಾರ್ಟಿಯಲ್ಲಿ ಮಿಂಚಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

    ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಕೀರ್ತಿ ನೇಗಿನ್ಹಾಲ್ 7 ಚಿನ್ನದ ಪದಕ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ. ಅರ್ಚನ 7 ಚಿನ್ನದ ಪದಕ, ರಸಾಯನಶಾಸ್ತ್ರ, ಬೆಂಗಳೂರು ವಿವಿ. ಮಯೂರ 6 ಚಿನ್ನದ ಪದಕ, ಸಂಸ್ಕೃತ ವಿಭಾಗ ಬೆಂಗಳೂರು ವಿಶ್ವವಿದ್ಯಾಲಯದಿಂದ ಅತಿ ಹೆಚ್ಚು ಚಿನ್ನದ ಪದಕ ಪಡೆದರು. ಸ್ನಾತಕ ಪದವಿ ವಿಭಾಗದಲ್ಲಿ, ರಾಮ್ ಕುಮಾರ್ ಬಿಎಸ್ಸಿ, 6 ಚಿನ್ನದ ಪದಕ, ಸೌಂದರ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಸೈನ್ಸ್, ಸ್ಪೂರ್ತಿ 6 ಚಿನ್ನದ ಪದಕ, ಬಿಕಾಂ, ಜ್ಞಾನವಿಕಾಸ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ & ಕಾಮರ್ಸ್, ಧನುಷ 5 ಚಿನ್ನದ ಪದಕ, ಬಿಬಿಎ, ಸುರಾನ ಕಾಲೇಜು ಅತಿ ಹೆಚ್ಚು ಪದಕ ಬೇಟೆ ಆಡಿದರು.

    Live Tv
    [brid partner=56869869 player=32851 video=960834 autoplay=true]