Tag: dwarkish

  • ದ್ವಾರಕೀಶ್ ನಿಧನ : ಮಾಜಿ ಮುಖ್ಯಮಂತ್ರಿಗಳ ಸಂತಾಪ

    ದ್ವಾರಕೀಶ್ ನಿಧನ : ಮಾಜಿ ಮುಖ್ಯಮಂತ್ರಿಗಳ ಸಂತಾಪ

    ಹಿರಿಯ ನಟ ದ್ವಾರಕೀಶ್ (Dwarkish) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ (Death). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

    ಕನ್ನಡದ ಹಿರಿಯ ನಟರಾದ ಶ್ರೀ ದ್ವಾರಕೀಶ್ ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.

    ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ.

     

    ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ನೆನೆದಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

  • ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

    ಹಿರಿಯ ನಟ ದ್ವಾರಕೀಶ್‌ಗೆ ಗೌರವ ಡಾಕ್ಟರೇಟ್

    ಸ್ಯಾಂಡಲ್‌ವುಡ್‌ನ(Sandalwood) ಸಕಲಕಲಾವಲ್ಲಭ ಹಿರಿಯ ನಟ ದ್ವಾರಕೀಶ್ ಅವರು ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಸಾಕಷ್ಟು ವರ್ಷಗಳಿಂದ ಚಿತ್ರರಂಗದಲ್ಲಿ ನಟ ದ್ವಾರಕೀಶ್ ಅವರ ಕಲಾಸೇವೆ ಗುರುತಿಸಿ, ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ (Doctorate) ಘೋಷಣೆ ಮಾಡಿದ್ದಾರೆ.

    ನಟ, ನಿರ್ದೇಶಕ, ನಿರ್ಮಾಪಕ, ಹೀಗೆ ಕಲಾಸೇವೆ ಸಲ್ಲಿಸಿರುವ ಹಿರಿಯ ನಟ ದ್ವಾರಕೀಶ್‌ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟನೆ, 40ಕ್ಕೂ ಹೆಚ್ಚು ಸಿನಿಮಾ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಪ್ರತಿಭಾನ್ವಿತ ನಟ ದ್ವಾರಕೀಶ್‌ಗೆ ಬೆಂಗಳೂರು ವಿವಿ 57ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ. ಇದನ್ನೂ ಓದಿ:ಪ್ರಭಾಸ್ ಲವ್ ಲೈಫ್ ಬಗ್ಗೆ ಸುಳಿವು ಕೊಟ್ಟ ವರುಣ್ ಧವನ್

    ಚಲನಚಿತ್ರ ವಿಭಾಗದಲ್ಲಿ ದ್ವಾರಕೀಶ್, ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರರು ವಿಭಾಗ ಡಾ.ಟಿ. ಅನಿಲ್ ಕುಮಾರ್ ಸೇರಿದಂತೆ ಗೌರವ ಡಾಕ್ಟರೇಟ್ ಅನ್ನು ಡಿ.5ರಂದು ಜ್ಞಾನ ಭಾರತಿ ಆಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು.

    Live Tv
    [brid partner=56869869 player=32851 video=960834 autoplay=true]