Tag: DY ChandraChud

  • Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

    Article 370 ರದ್ದು- ವಿಚಾರಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ: ಸಿಜೆಐ ಡಿವೈ ಚಂದ್ರಚೂಡ್

    ನವದೆಹಲಿ: ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಪಟ್ಟಿ ಮಾಡುವ ಬಗ್ಗೆ ನಾವು ಅಂತಿಮ ತಿರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ (CJI DY Chandrachud) ಹೇಳಿದ್ದಾರೆ.

    ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಮುಂದೆ ವಿಷಯ ಪ್ರಸ್ತಾಪಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ. ಇವುಗಳ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಭಾರತದಲ್ಲಿದ್ದ ಮೂರರ ಪೈಕಿ ಎರಡು ಟ್ವಿಟ್ಟರ್ ಕಚೇರಿ ಬಂದ್!

    ಮಾರ್ಚ್ 2020 ರಲ್ಲಿ ಸುಪ್ರೀಂಕೋರ್ಟ್ (Supreme Court) ನ 5 ನ್ಯಾಯಾಧೀಶರ ಸಾಂವಿಧಾನಿಕ ಪೀಠವು ವಿಚಾರಣೆ ನಡೆಸಿದ್ದರು. ಅರ್ಜಿದಾರರು ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಮನವಿ ಮಾಡಲಾಗಿತ್ತು. ಆದರೆ ಏಳು ಮಂದಿ ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಲು ಸಾಂವಿಧಾನಿಕ ಪೀಠ ನಿರಾಕರಿಸಿತ್ತು.

    370 ನೇ ವಿಧಿಯ ವ್ಯಾಖ್ಯಾನದೊಂದಿಗೆ ವ್ಯವಹರಿಸಿದ ಅರ್ಜಿದಾರರು ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ನೀಡಿದ ಎರಡು ತೀರ್ಪುಗಳು ಸಂಘರ್ಷದಲ್ಲಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ 5 ನ್ಯಾಯಾಧೀಶರ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು, ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪೀಠ ಹೇಳಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ

    ನವದೆಹಲಿ: ಪ್ರಮುಖ ಸುದ್ದಿವಾಹಿನಿಗಳ ಲೋಗೋ ಬಳಸಿ ಪ್ರಧಾನಿ ನರೇಂದ್ರ ಮೋದಿ (Narendra Modi) , ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ಸೇರಿದಂತೆ ಪ್ರಮುಖ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ಒಟ್ಟು 33 ಲಕ್ಷ ಚಂದಾದಾರರನ್ನು ಹೊಂದಿದ್ದ 3 ಯೂಟ್ಯೂಬ್ (Youtube) ಚಾನೆಲ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಸುಳ್ಳು ಸುದ್ದಿಗಳನ್ನು (Fake News) ಹರಡುತ್ತಿದ್ದ `ನ್ಯೂಸ್ ಹೆಡ್‌ಲೈನ್ಸ್, ಆಜ್ ತಕ್ ಲೈವ್ ಹಾಗೂ ಸರ್ಕಾರಿ ಅಪ್‌ಡೇಟ್’ ಹೆಸರಿನ ಯೂಟ್ಯೂಬ್ ಚಾನೆಲ್‌ಗಳನ್ನು ಪತ್ತೆಹಚ್ಚಲಾಗಿದೆ. ಸರ್ಕಾರದ ನೋಡೆಲ್ ಏಜೆನ್ಸಿಯಾದ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ (PIB) ಸತ್ಯ ಪರಿಶೀಲನಾ ಘಟಕವು ಇದರ ತನಿಖೆ ನಡೆಸಿದೆ. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ

    ಈ ಘಟಕವು 40ಕ್ಕೂ ಹೆಚ್ಚು ಫ್ಯಾಕ್ಟ್‌ಚೆಕ್‌ಗಳನ್ನು ನಡೆಸಿದ್ದು, ಪ್ರಧಾನಿ ಮೋದಿ, ಸಿಜೆಐ, ಸುಪ್ರೀಂ ಕೋರ್ಟ್ (Supreme Court), ಚುನಾವಣಾ ಆಯೋಗ ಹಾಗೂ ಇವಿಎಂ ಮತದಾನ ವ್ಯವಸ್ಥೆಯ ಬಗ್ಗೆ ಅನೇಕ ತಪ್ಪು ಮಾಹಿತಿ ಪ್ರಸಾರ ಮಾಡಿರುವುದನ್ನು ಕಂಡುಹಿಡಿದಿದೆ. 30 ಕೋಟಿಗೂ ಅಧಿಕ ಮಂದಿ ಹೆಚ್ಚು ಬಾರಿ ಈ ವೀಡಿಯೋಗಳನ್ನ ವೀಕ್ಷಣೆ ಮಾಡಿದ್ದಾರೆ. ಅಲ್ಲದೇ ಈ ಯೂಟ್ಯೂಬ್ ಚಾನೆಲ್‌ಗಳು ಪ್ರಮುಖ ಸುದ್ದಿ ವಾಹಿನಿಯ ಲೋಗೋ ಹಾಗೂ ಸುದ್ದಿ ನಿರೂಪಕರ ಚಿತ್ರಗಳನ್ನು ಬಳಸಿಕೊಂಡಿದ್ದವು. ಈ ಮೂಲಕ ತಮ್ಮ ವೀಕ್ಷಕರಿಗೆ ಸುದ್ದಿ ಅಧಿಕೃತ ಎಂದು ನಂಬುವಂತೆ ಮಾಡಿದ್ದವು. ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವ ಮೂಲಕ ಹಣ ಗಳಿಸುತ್ತಿದ್ದವು ಎಂದು ಪಿಐಬಿ (ತನಿಖಾ ಘಟಕ) ಹೇಳಿದೆ.

    ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕಳೆದ 1 ವರ್ಷದಲ್ಲಿ ತಪ್ಪು ಮಾಹಿತಿ ಪ್ರಸಾರದ ವಿರುದ್ಧ ಶಿಸ್ತುಕ್ರಮದ ಭಾಗವಾಗಿ 100ಕ್ಕೂ ಹೆಚ್ಚು ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ (DY Chandrachud) ಇಂದು ಪ್ರಮಾಣವಚನ ಸ್ವೀಕರಿಸಿದರು.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದರು. ಇದನ್ನೂ ಓದಿ: ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣ (NV Ramana) ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ (UU Lalit) ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು. ಇಂದು 50ನೇ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಇದನ್ನೂ ಓದಿ: ಗುಡ್ಡ ಹತ್ತಿ ಆಯುಷ್ಮಾನ್ ಕಾರ್ಡ್ ನೋಂದಣಿ – ಧರ್ಮಸ್ಥಳ ಸಂಘದ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಯಾರಿದು ಚಂದ್ರಚೂಡ್:
    1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. 2000 ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಮೊಟ್ಟ ಮೊದಲ ಬಾರಿಗೆ ಫೋನ್‌ಕಾಲ್ ಮೂಲಕ ವಿಚಾರಣೆ ನಡೆಸಿದ ಸುಪ್ರೀಂ

    ಮೊಟ್ಟ ಮೊದಲ ಬಾರಿಗೆ ಫೋನ್‌ಕಾಲ್ ಮೂಲಕ ವಿಚಾರಣೆ ನಡೆಸಿದ ಸುಪ್ರೀಂ

    ನವದೆಹಲಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ (Supreme Court) ದೂರವಾಣಿ ಕರೆಯ (Phone Call) ಮೂಲಕ ಮೊಕದ್ದಮೆಯೊಂದರ ವಿಚಾರಣೆ ನಡೆಸಿದೆ. ಆದರೆ ಪರಿಹಾರ ನೀಡಲು ನಿರಾಕರಿಸಿದೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ (DY Chandrachud) ಹಾಗೂ ಹಿಮಾ ಕೊಹ್ಲಿ (Hima Kohli) ಅವರ ವಿಭಾಗೀಯ ಪೀಠವು ಅರ್ಜಿಯನ್ನು ತಿರಸ್ಕರಿಸುವ ಮುನ್ನ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರ ವಿಚಾರಣೆ ಆಲಿಸಿತು. ಇದನ್ನೂ ಓದಿ: CMಗೆ ಧಮ್ ಇದ್ರೆ ಸಿದ್ದರಾಮಯ್ಯನ ಮೇಲಿನ ಆರೋಪಗಳನ್ನು ತನಿಖೆ ಮಾಡಿಸಲಿ- HDK ಸವಾಲ್

    ಅರ್ಜಿದಾರರು ತಮ್ಮ ಮಗಳಿಗೆ ಈ ವರ್ಷ ಪದವಿಪೂರ್ವ ವೈದ್ಯಕೀಯ ಸೀಟುಗಳಲ್ಲಿ (Medical Seats) ವಸತಿ ಕಲ್ಪಿಸುವಂತೆ ಕೋರಿದ್ದರು. ಆದರೆ ಅರ್ಜಿದಾರರ ಪುತ್ರಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-2022 (NEET 2022) ನಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಸಂಸ್ಥೆಯಲ್ಲಿ ವಿಮಾದಾರರ ಕೋಟಾದಡಿ ಪ್ರವೇಶ ಪಡೆಯಲು ಅವರು ಬಯಸಿದ್ದರು. ಇದನ್ನೂ ಓದಿ: ಐಸಿಸ್‌ಗೆ ಭಾರೀ ಆರ್ಥಿಕ ಸಹಾಯ – ಕೋರ್ಟ್‌ ಮುಂದೆ ಫ್ರಾನ್ಸ್‌ ಸಿಮೆಂಟ್‌ ಕಂಪನಿಯಿಂದ ತಪ್ಪೊಪ್ಪಿಗೆ

    ಈ ವೇಳೆ ದೂರವಾಣಿ ಮೂಲಕ ಆಕೆಯ ವಾದವನ್ನು ಆಲಿಸಿದ ಪೀಠವು ವಾರ್ಡ್‌ನಲ್ಲಿ ನೀಟ್‌ಗೆ ಹಾಜರಾಗದ ಕಾರಣ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿತು. ಈ ವರ್ಷ ಪರೀಕ್ಷೆಗೆ ಕುಳಿತುಕೊಳ್ಳದಿದ್ದರೇ ನಾವು ಸೀಟು ನೀಡಲು ಸಾಧ್ಯವಿಲ್ಲ, ಸೀಟು ಸಹ ಇಲ್ಲ ಎಂದು ಕೋರ್ಟ್ತಿ (Court) ಳಿಸಿತು.

    ಮೇಡಂ ನಾವು ಈ ರೀತಿಯ ಪ್ರವೇಶ ನೀಡಲು ಸಾಧ್ಯವಿಲ್ಲ, ಅವಳು ಪರೀಕ್ಷೆಗೆ ಕುಳಿತುಕೊಳ್ಳದ ಕಾರಣ ಇದು ಮತ್ತೊಂದು ದಾವೆ ಹೂಡಲು ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದೆ.

    ಅಲ್ಲದೇ ಯುವತಿ ನೀಟ್ ಪರೀಕ್ಷೆಯಲ್ಲಿ ಕಾಣಿಸಿಕೊಂಡ ನಂತರ ಸುಪ್ರೀಂ ಕೋರ್ಟ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗೆ (HighCourt) ತೆರಳಲು ಅರ್ಜಿದಾರರಿಗೆ ಸ್ವಾತಂತ್ರ‍್ಯ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿತು.

    Live Tv
    [brid partner=56869869 player=32851 video=960834 autoplay=true]

  • ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

    ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‌ನ (Supreme Court) ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ ಚಂದ್ರಚೂಡ್ (DY Chandrachud) ಅವರನ್ನು ನೇಮಿಸಿ ಕೇಂದ್ರ ಸರ್ಕಾರ (Government Of India) ಅಧಿಸೂಚನೆ ಹೊರಡಿಸಿದೆ.

    ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (CJI) ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಸಂವಿಧಾನದ 124ನೇ (Constitution of India) ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ (President Of Inida) ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ (Law) ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

    ಅಕ್ಟೋಬರ್ 11ರಂದೇ ಹಾಲಿ ಸಿಜೆಐ ಲಲಿತ್ (UU Lalit) ಅವರು ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಇದನ್ನೂ ಓದಿ: 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

    ಚಂದ್ರಚೂಡ್ ಹಿನ್ನೆಲೆ ಏನು?
    ಎಲ್‌ಎಲ್‌ಎಂ (LLM) ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

    2000ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ (Allahabad High Court) ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

    Live Tv
    [brid partner=56869869 player=32851 video=960834 autoplay=true]

  • CJI ಹುದ್ದೆಗೆ ನ್ಯಾಯಮೂರ್ತಿ ಚಂದ್ರಚೂಡ್ ಹೆಸರು ಶಿಫಾರಸು

    CJI ಹುದ್ದೆಗೆ ನ್ಯಾಯಮೂರ್ತಿ ಚಂದ್ರಚೂಡ್ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ (UU Lalit) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY ChandraChud) ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.

    ಸಿಜೆಐ ಲಲಿತ್ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ (Central Government Of India) ಪತ್ರ ಬರೆದಿದ್ದು, 2 ವರ್ಷಗಳ ಸುದೀರ್ಘ ಅಧಿಕಾರವಧಿಯನ್ನು ಹೊಂದಿರುವ ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

    ಇಂದು ನ್ಯಾಯಾಧೀಶರ ಲಾಂಜ್‌ನಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ಎಲ್ಲಾ ನ್ಯಾಯಾಧೀಶರು ಹಾಜರಿರಬೇಕು ಎಂದು ಹಾಲಿ ಸಿಜೆಐ (CJI) ಮನವಿ ಮಾಡಿದ್ದರು. ಈ ವೇಳೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಮುಂದಿನ ಸಿಜೆಐ ಆಗಿ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾಪಿಸಲಾಯಿತು. ತಮ್ಮ ಉತ್ತರಾಧಿಕಾರಿಯ ಹೆಸರನ್ನು ಶಿಫಾರಸು ಮಾಡುವಂತೆ ಅಕ್ಟೋಬರ್ 7 ರಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಂದ ಸಿಜೆಐ ಸಚಿವಾಲಯವು ಸಂದೇಶವನ್ನು ಸ್ವೀಕರಿಸಿತ್ತು. ನವೆಂಬರ್ 8 ರಂದು ಸಿಜೆಐ ಲಲಿತ್ ಅವರ ಅಧಿಕಾರಾವಧಿ ಅಂತ್ಯವಾಗುತ್ತಿರುವ ಹಿನ್ನಲೆ ಈ ಸಂದೇಶ ಕಳುಹಿಸಲಾಗಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಈ ವರ್ಷ ಆಗಸ್ಟ್ 27ರಂದು ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ನಿವೃತ್ತಿ ಹೊಂದಿದ ಬಳಿಕ 49ನೇ ಸಿಜೆಐ ಆಗಿ ಯುಯು ಲಲಿತ್ ಅಧಿಕಾರ ವಹಿಸಿಕೊಂಡಿದ್ದರು. ಲಲಿತ್ ಅವರ ನಂತರ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕಾರದ ಗದ್ದುಗೆ ಏರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]