Tag: DySP ganapathi

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ

    ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್‍ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.

    ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

    ಇಂದು ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.

    ಮರು ತನಿಖೆ ಯಾಕೆ?
    2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಿಬಿಐ ನ್ಯಾಯಲಾಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಆದರೆ ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‍ನ್ನು ನ್ಯಾಯಾಲಯ ತಿರಸ್ಕರಿಸಿ, ಮರು ತನಿಖೆಗೆ ಆದೇಶಿಸಿತ್ತು. ಹೀಗಾಗಿ ಪ್ರಕರಣಕ್ಕೆ ಮರುಜೀವ ಬಂದಿದೆ. ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿರುವುದನ್ನು ಗಣಪತಿ ಅವರ ಪುತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಪ್ರಕರಣದ ಆರೋಪಿಗಳಾದ ಕೆ.ಜೆ.ಜಾರ್ಜ್, ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್‍ಗೆ ಸೆ.28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    ಏನಿದು ಪ್ರಕರಣ?
    2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮು ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಜಾರ್ಜ್‍ಗೆ ತನಿಖಾ ಆಯೋಗದಿಂದಲೂ ಕ್ಲೀನ್‍ ಚಿಟ್?

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಜಾರ್ಜ್‍ಗೆ ತನಿಖಾ ಆಯೋಗದಿಂದಲೂ ಕ್ಲೀನ್‍ ಚಿಟ್?

    ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಕೇಶವನಾರಾಯಣ ಆಯೋಗದಿಂದ ಗೃಹ ಸಚಿವ ರಾಮಲಿಂಗಾರೆಡ್ಡಿಗೆ ವರದಿ ಸಲ್ಲಿಕೆಯಾಗಿದ್ದು, ಕೆಜೆ ಜಾರ್ಜ್‍ಗೆ ಕ್ಲೀನ್ ಚಿಟ್ ಸಿಕ್ಕಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

    ಪ್ರಮುಖ ಆರೋಪ ಎದುರಿಸುತ್ತಿದ್ದ ಮಾಜಿ ಗೃಹ ಸಚಿವ, ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಜೆ.ಜಾರ್ಜ್ ಅವರನ್ನು ಕರೆಯಿಸಿ ತನಿಖೆ ನಡೆಸಿಲ್ಲ. ಇದೊಂದು ಒತ್ತಡದಿಂದ ಮಾಡಿಕೊಂಡಿರುವ ಕೃತ್ಯ ಎಂದು ಆಯೋಗ ಅಭಿಪ್ರಾಯಪಟ್ಟಿದೆ ಎನ್ನುವ ಅಂಶ ವರದಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

    ವಿಕಾಸಸೌಧದ ಕಚೇರಿಯಲ್ಲಿ ವರದಿ ಸಲ್ಲಿಕೆ ನಂತರ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನ್ಯಾ. ಕೇಶವನಾರಾಯಣ ಆಯೋಗದ ವರದಿ ನೀಡಿದೆ. ಆಯೋಗ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದೆ. ಎಸಿಎಸ್ ಅವರಿಗೆ ವರದಿ ನೀಡಲಾಗುತ್ತದೆ. ಅಂತಿಮವಾಗಿ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

    ನ್ಯಾ.ಕೇಶವ ನಾರಾಯಣ ಮಾತನಾಡಿ, ವರದಿ ಸರ್ಕಾರಕ್ಕೆ ಒಪ್ಪಿಸಲಾಗಿದೆ. ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಅವಕಾಶ ಇರುತ್ತದೆ. ಇದು ಒಂದು ಸತ್ಯಶೋಧನೆ ಸಮಿತಿ ರೀತಿಯಲ್ಲಿದೆ. ನಮ್ಮ ಮುಂದೆ ಯಾರು ಆರೋಪಿಗಳು ಇರುವುದಿಲ್ಲ. ಒಟ್ಟು 50 ಸಾಕ್ಷ್ಯಗಳನ್ನು ವಿಚಾರಣೆ ಮಾಡಲಾಗಿದೆ. 320 ಪುಟಗಳ ವರದಿ ನೀಡಲಾಗಿದೆ ಎಂದು ತಿಳಿಸಿದ್ರು.

  • ಬಿಜೆಪಿ ನಾಯಕರನ್ನು ಟೇಪ್ ರೆಕಾರ್ಡ್ ಗೆ ಹೋಲಿಸಿ ಟಾಂಗ್ ಕೊಟ್ಟ ಜಾರ್ಜ್

    ಬಿಜೆಪಿ ನಾಯಕರನ್ನು ಟೇಪ್ ರೆಕಾರ್ಡ್ ಗೆ ಹೋಲಿಸಿ ಟಾಂಗ್ ಕೊಟ್ಟ ಜಾರ್ಜ್

    ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿದ ಸುಪ್ರೀಂ ಆದೇಶವನ್ನು ನಾನು ನಾನು ಸ್ವಾಗತಿಸುತ್ತೇನೆ. ಈ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಮೊದಲು ಸೆಷನ್ಸ್ ಕೋರ್ಟ್‍ನಲ್ಲಿ ಎಫ್‍ಐಆರ್ ದಾಖಲಾದಾಗ ನಾನೇ ರಾಜೀನಾಮೆ ಕೊಟ್ಟಿದ್ದೇನೆ. ನಂತರ ಸಿಐಡಿ ಬಿ ರಿಪೋರ್ಟ್ ಹಾಕಿದ್ದರು. ಈಗಲೂ ಸಿಬಿಐಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

    ಬಿಜೆಪಿ ನಾಯಕರ ರಾಜೀನಾಮೆ ನೀಡಬೇಕೆಂಬ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಟೇಪ್ ರೆಕಾರ್ಡ್ ಇದ್ದಂತೆ ಯಾವಾಗಲೂ ರಾಜೀನಾಮೆ ಕೇಳುತ್ತಾರೆ. ನಾನು ಯಾಕೆ ರಾಜೀನಾಮೆ ನೀಡಬೇಕು? ಕೇಂದ್ರ ಸಚಿವರ ಮೇಲೂ ಎಫ್‍ಐಆರ್ ದಾಖಲಾಗಿದೆ. ಅವರು ರಾಜೀನಾಮೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿ ತಿರುಗೇಟು ನೀಡಿದರು.

    ಮೂರು ತಿಂಗಳಲ್ಲಿ ಸಿಬಿಐ ತನಿಖೆ ಮುಗಿಯುತ್ತದೆ. ಆಗ ನಾನೇ ಉತ್ತರ ನೀಡುತ್ತೇನೆ. ನನ್ನ ಹೆಸರು ಕೆ.ಜೆ. ಜಾರ್ಜ್. ನನ್ನನ್ನ ಕಂಡರೆ ಬಿಜೆಪಿ ಅವರಿಗೆ ರೆಡ್ ಫ್ಲಾಗ್ ನೋಡಿದ ಹಾಗೆ ಆಗುತ್ತೆ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ ಎಂದರು.

    ಇದನ್ನೂ ಓದಿ:ಗಣಪತಿ ಕೇಸ್: ಸುಪ್ರೀಂ ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಸರ್ಕಾರಿ ವಕೀಲರು ಸುಸ್ತು: ಕಲಾಪದ ಪೂರ್ಣ ವರದಿ ಇಲ್ಲಿದೆ

  • ಗಣಪತಿ ಕೇಸ್: ಸುಪ್ರೀಂ  ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಸರ್ಕಾರಿ ವಕೀಲರು ಸುಸ್ತು: ಕಲಾಪದ ಪೂರ್ಣ ವರದಿ ಇಲ್ಲಿದೆ

    ಗಣಪತಿ ಕೇಸ್: ಸುಪ್ರೀಂ ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಸರ್ಕಾರಿ ವಕೀಲರು ಸುಸ್ತು: ಕಲಾಪದ ಪೂರ್ಣ ವರದಿ ಇಲ್ಲಿದೆ

    ನವದೆಹಲಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

    ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ನ್ಯಾ, ಉದಯ ಲಲಿತ್, ನ್ಯಾ ಆದರ್ಶಕುಮಾರ್ ನೇತೃತ್ವದ ದ್ವಿಸದಸ್ಯ ಪೀಠದಿಂದ ಮಹತ್ವದ ಆದೇಶ ಪ್ರಕಟವಾಗಿದೆ.

    ವಿಚಾರಣೆ ವೇಳೆ ಪೀಠ ಸರ್ಕಾರಿ ವಕೀಲರಿಗೆ ಪ್ರಶ್ನೆಗಳನ್ನು ಕೇಳಿತ್ತು. ಆತ್ಮಹತ್ಯೆ ಗೆ ಬಳಸಿದ ವಸ್ತುವಿನ ಬಗ್ಗೆ ಸರ್ಕಾರದ ಪರ ವಕೀಲರು ಸ್ವಷ್ಟ ಮಾಹಿತಿ ನೀಡಲಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರುವ ಮೊದಲೇ ಸಿಐಡಿ ತನಿಖೆ ಪೂರ್ಣಗೊಳಿಸಿ ವರದಿ ನೀಡಿದ್ದು ಹೇಗೆ ಮತ್ತು ಯಾಕೆ? ಆತ್ಮಹತ್ಯೆಗೆ ಬಳಸಿದ ಸಾಧನ ಯಾವುದು ಎಂದು ಪ್ರಶ್ನಿಸಿದ ಪೀಠ ಸಿಐಡಿ ತನಿಖೆಯಲ್ಲಿ ಗೊಂದಲವಿದೆ ಎಂದು ತೀರ್ಮಾನಿಸಿ ಸಿಬಿಐ ತನಿಖೆಗೆ ಆದೇಶಿಸಿದೆ.

    ಸರ್ಕಾರಿ ವಕೀಲರಿಗೆ ಪ್ರಶ್ನೆಗಳ ಸುರಿಮಳೆ:
    ಸಿಐಡಿ ವರದಿಯಲ್ಲಿ ಗೊಂದಲವಿದ್ದು ಗುಂಡು ಹಾರಿದ ಬಗ್ಗೆ ಅನುಮಾನವಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳ ಬಹುದಿತ್ತು. ಮಾಡಿಕೊಳ್ಳಲಿಲ್ಲ ಯಾಕೆ? ಗಣಪತಿ ಆತ್ಮಹತ್ಯೆ ಗೆ ಬಳಸಿದ ವಸ್ತು ಯಾವುದು? ರಿವಾಲ್ವರ್ ಇದ್ದರೂ ನೇಣು ಬಿಗಿದುಕೊಳ್ಳಲು ಕಾರಣವೇನು? ಬದುಕಿದ ಕೊನೆ ಸಮಯದಲ್ಲಿ ಯಾರನ್ನು ಭೇಟಿಯಾಗಿದ್ದರು? ಅವರನ್ನ ಸಂದರ್ಶನ ನಡೆಸಿದ ವರದಿಗಾರ ಯಾರು, ಹೇಗೆ ಪರಿಚಯ? ಆತ್ಮಹತ್ಯೆ ಹತ್ಯೆ ಬಳಿಕ ಮೊದಲು ನೋಡಿದವರು ಯಾರು? ಜೊತೆಗೆ ಒಳಗೆ ಮೃತ ದೇಹ ಇರುವ ಬಗ್ಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನಿಸಿತು.

    ಗಂಭೀರ ಸಂದರ್ಶನದ ಬಳಿಕವೂ ವರದಿಗಾರ ಗಣಪತಿಯ ಸಂಬಂಧಿಕರಿಗೆ ಯಾಕೆ ಮಾಹಿತಿ ಕೊಡಲಿಲ್ಲ ಎಂದು ಪ್ರಶ್ನಿಸಿತು. ಆತ್ಮಹತ್ಯೆಗೆ ಬಳಸಿದ ವಸ್ತು ಯವುದು ಎಂದು ಕೇಳಿದ್ದಕ್ಕೆ ಒಮ್ಮೆ ಹಸಿರು ಬಣ್ಣದ ನೈಲಾನ್ ಬಟ್ಟೆ ಇನ್ನೊಮ್ಮೆ ಚರ್ಮದ ಬೆಲ್ಟ್ ಎಂದು ಸರ್ಕಾರಿ ವಕೀಲರು ಉತ್ತರಿಸಿದರು. ಕೂಡಲೇ ಜಡ್ಜ್ ಆ ವಸ್ತು ಅಲ್ಲಿ ದೊರಕ್ಕಿದ್ದು ಹೇಗೆ? ಸಾಮಾನ್ಯವಾಗಿ ಆ ವಸ್ತು ಬೇಗ ಸಿಗುವುದಿಲ್ಲ. ಮೊದಲೇ ಪ್ಲಾನ್ ಮಾಡಲಾಗಿತ್ತಾ ಎಂದು ಪ್ರಶ್ನಿಸಿದರು.

    ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಸರ್ವಿಸ್ ರಿವಾಲ್ವರ್ ನಿಂದ ಎರಡು ಬುಲೆಟ್ ಹೊರ ಬಂದಿದ್ದು ಹೇಗೆ? ಒಂದು ವೇಳೆ ಕೊಲೆ ಬಂದಾಗ ಸ್ವಯಂ ರಕ್ಷಣೆಗೆ ಗಣಪತಿ ಅವರೇ ಶೂಟ್ ಮಾಡಿರಬಹುದಲ್ಲವೇ? ಒಂದು ಬುಲೆಟ್ ಗೋಡೆಯಲ್ಲಿ ಇನ್ನೊಂದು ಬುಲೆಟ್ ಹಾಸಿಗೆಯಲ್ಲಿ ಸಿಕ್ಕಿದ್ದು ಹೇಗೆ ಎನ್ನುವ ಪ್ರಶ್ನೆಗಳನ್ನು ಕೋರ್ಟ್ ಕೇಳಿತು. ಈ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರ ನೀಡುವಲ್ಲಿ ಸರ್ಕಾರಿ ವಕೀಲರು ವಿಫಲರಾದರು.

    ಸರ್ಕಾರಿ ವಕೀಲರ ಉತ್ತರ ಹೀಗಿತ್ತು:
    ಮಂಗಳೂರಿನಲ್ಲಿ ನಡೆದ ಚರ್ಚ್ ಗಲಾಟೆಯಲ್ಲಿ ಗಣಪತಿ ಅವರ ಪಾತ್ರವಿತ್ತು. ಅಷ್ಟೇ ಅಲ್ಲದೇ ಅವರನ್ನು ವರ್ಗಾವಣೆ ಮಾಡಿದ ವಿಚಾರದಲ್ಲಿ ನೊಂದಿದ್ದರು. ಈ ಮಧ್ಯೆ ಕುಟುಂಬ ಸಮಸ್ಯೆ ಇತ್ತು. ಹೀಗಾಗಿ ಗಣಪತಿ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ವರ್ಗಾವಣೆ ವಿಚಾರದಲ್ಲಿ ನೊಂದಿದ್ದ ಕಾರಣ ತನ್ನ ವರ್ಗಾವಣೆಗೆ ಕಾರಣರಾದವರ ಹೆಸರನ್ನು ಪ್ರಸ್ತಾಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಿದರು. ಈ ಉತ್ತರಕ್ಕೆ ನ್ಯಾ.ಉದಯ್ ಲಲಿತ್ ಅವರು ಬೇರೆಯವರು ಹೇಳಿದ್ದಾರೆ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರುವುದು ಎಷ್ಟು ಸರಿ? ಮಾನಸಿಕ ಖಿನ್ನತೆ ಒಳಗಾದ ವ್ಯಕ್ತಿಯನ್ನು ಪರೀಕ್ಷೆ ಮಾಡಿದರೆ ಮಾತ್ರ ಅವರಿಗೆ ಏನಾಗಿದೆ ಎನ್ನುವುದನ್ನು ತಿಳಿಯಬಹುದು. ಏನು ಪರೀಕ್ಷೆಗೆ ಮಾಡದೇ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತೀರ್ಮಾನಿಸಿ ಹೇಗೆ ವರದಿ ನೀಡುತ್ತೀರಿ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

    ಮತ್ತೆ ವಿಚಾರಣೆ: ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ, ಎಎನ್‍ಎಸ್ ಪ್ರಸಾದ್‍ಗೆ ಅಲ್ಲದೇ ಸಂದರ್ಶನದಲ್ಲಿ 15 ಜನರ ಹೆಸರನ್ನು ಗಣಪತಿ ಪ್ರಸ್ತಾಪಿಸಿದ್ದರು. ಹೀಗಾಗಿ ಈ ವಿಡಿಯೋದಲ್ಲಿ ಪ್ರಸ್ತಾಪವಾಗಿರುವ ಎಲ್ಲ ಐಪಿಎಸ್ ಅಧಿಕಾರಿಗಳನ್ನು ರಾಜಕಾರಣಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

    ಏನಿದು ಪ್ರಕರಣ? 2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು.

    ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆ ಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.

    ದಾಖಲೆಗಳು ನಾಶ: ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿತ್ತು. ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೊಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಸಿಐಡಿ ಫೊರೆನ್ಸಿಕ್ ವರದಿಯನ್ನು ತನಿಖೆ ವೇಳೆ ಪರಿಗಣಿಸಿದೇ ಸಚಿವ ಜಾರ್ಜ್ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್ ಚೀಟ್ ನೀಡಿದೆ. ಈ ವೇಳೆ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳನ್ನು ವಾಹಿನಿ ಮಾತನಾಡಿಸಿತ್ತು. ಜಗನ್ ಬೆಳ್ಳಿಯಪ್ಪ ಮಾತನಾಡಿ, ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಜಾಸ್ತಿ ಪ್ರಶ್ನೆ ಕೇಳಿಲ್ಲ. ಕೆಲ ಪ್ರಶ್ನೆ ಕೇಳಿದರು. ಏನು ಪ್ರಶ್ನೆ ಕೇಳಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕೊನೆಗೆ ಖಾಲಿ ಬಿಳಿ ಹಾಳೆಯಲ್ಲಿ ಸಹಿ ಹಾಕಲು ಹೇಳಿದರು. ನಾವು ಸಹಿ ಹಾಕಿದ್ವಿ ಎಂದು ತಿಳಿಸಿದ್ದಾರೆ.

    ಏನೇನು ಡಿಲೀಟ್ ಆಗಿದೆ?: 100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರಿಸಿತ್ತು.

    ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ.

    https://youtu.be/AGmp1M_0q2s

    https://youtu.be/p2V1xEclj3g

  • ಗಣಪತಿ ಕೇಸ್‍ನಲ್ಲಿ ಸಾಕ್ಷ್ಯ ಇದ್ರೆ ತೋರಿಸಲಿ: ಬಿಜೆಪಿಗೆ ಜಾರ್ಜ್ ಸವಾಲು

    ಗಣಪತಿ ಕೇಸ್‍ನಲ್ಲಿ ಸಾಕ್ಷ್ಯ ಇದ್ರೆ ತೋರಿಸಲಿ: ಬಿಜೆಪಿಗೆ ಜಾರ್ಜ್ ಸವಾಲು

    ಬೆಂಗಳೂರು: ಬಿಜೆಪಿಯವರು ಸುಳ್ಳು ಹೇಳುವುದನ್ನು ತಮ್ಮ ಕಸುಬಾಗಿ ಮಾಡಿಕೊಂಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ತಿರುಗೇಟು ನೀಡಿದ್ದಾರೆ.

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಆಗ್ರಹಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಡಿವೈಎಸ್ಪಿ ಪ್ರಕರಣವು ಈಗ ಸುಪ್ರೀಂ ಕೋರ್ಟ್‍ನಲ್ಲಿದೆ. ಹೀಗಾಗಿ ಪ್ರಕರಣದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

    ಬಿಜೆಪಿಯವರು ಸಾಕ್ಷ್ಯಗಳು ನಾಶ ಆಗಿದೆ ಎಂದು ಹೇಳುತ್ತಿದ್ದಾರೆ. ನನಗೂ ಹಾಗೂ ಫೋನ್ ಕಾಲ್‍ಗಳಿಗೆ ಯಾವುದೇ ಸಂಬಂಧವಿಲ್ಲ. ಈ ಪ್ರಕರಣಕ್ಕೂ ನನಗೂ ಸಂಬಂಧ ಇದ್ದರೆ ಸಾಕ್ಷ್ಯ ತೋರಿಸಲಿ ಎಂದು ಜಾರ್ಜ್ ಸವಾಲು ಹಾಕಿದರು.

    ಸಿಐಡಿಯಿಂದ ಸಾಕ್ಷ್ಯ ನಾಶವಾಗಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಪ್ರಶ್ನೆಗೆ ಸಿಐಡಿಯವರು ಉತ್ತರಿಸಬೇಕು. ವರದಿ ಸರಿ ಇಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ದಾಖಲೆ ಇದ್ದರೆ ಸಿಐಡಿಗೆ ಕೊಡಬಹುದಿತ್ತಲ್ಲ ಯಾಕೆ ಸಾಕ್ಷ್ಯಗಳನ್ನು ಕೊಡಲಿಲ್ಲ ಎಂದು ಜಾರ್ಜ್ ಪ್ರಶ್ನಿಸಿದರು.

    ಈ ಪ್ರಕರಣದಲ್ಲಿ ನನ್ನ ಹೆಸರು ಕೇಳಿಬಂದ ಕೂಡಲೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದೆ. ನಂತರ ಸಿಐಡಿಯವರು ಬಿ ರಿಪೋರ್ಟ್ ಹಾಕಿದಾಗ ಸಿಎಂ ನನ್ನನ್ನು ಮತ್ತೆ ಮಂತ್ರಿಯನ್ನಾಗಿ ಮಾಡಿದ್ದರು. ಯಾರೂ ಹೀಗೆ ರಾಜಿನಾಮೆ ಕೊಡುವುದಿಲ್ಲ. ಆದರೆ ನಾನು ಕೊಟ್ಟಿದ್ದೇನೆ. ಈಗಲೂ ಕೇಂದ್ರದ ಹಾಲಿ ಸಚಿವರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆಯೇ? ಅವರೆಲ್ಲ ಯಾಕೆ ರಾಜಿನಾಮೆ ಕೊಟ್ಟಿಲ್ಲ ಎನ್ನುವುದನ್ನು ಜನ ಗಮನಿಸುತ್ತಾರೆ ಎಂದರು.

    ಮೇಯರ್ ಚುನಾವಣೆ ವಿಚಾರವಾಗಿ ಮಾತನಾಡಿದ ಜಾರ್ಜ್ ಬಿಬಿಎಂಪಿ ಮೇಯರ್ ಚುನಾವಣೆ ಮುಂದಿನ ತಿಂಗಳಲ್ಲಿ ನಡೆಯಲಿದೆ ಹಾಗೂ ಈ ಸಲವೂ ಬಿಬಿಎಂಪಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ಹೇಳಿದರು.

    ಇದನ್ನೂ ಓದಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್‍ಗೆ ತಿರುವು: ಗಣಪತಿ ಸಹೋದರ, ತಂದೆ ಹೇಳಿದ್ದೇನು?

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್‍ಗೆ ತಿರುವು: ಗಣಪತಿ ಸಹೋದರ, ತಂದೆ ಹೇಳಿದ್ದೇನು?

    ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿರುವ ಹಿನ್ನೆಲೆಯಲ್ಲಿ ನಮಗೆ ನ್ಯಾಯ ಸಿಗುತ್ತೆ ಎಂಬ ಆಶಾಭಾವನೆ ಮೂಡಿದೆ ಎಂದು ಮೃತ ಗಣಪತಿ ಸಹೋದರ ಮಾಚಯ್ಯ ಮತ್ತು ಗಣಪತಿ ತಂದೆ ಕುಶಾಲಪ್ಪ ಹೇಳಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತನಾಡಿದ ಮಾಚಯ್ಯ, ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭ ಪೊಲೀಸ್ ಇಲಾಖೆಯ ಅಧಿಕಾರಿಗಳು ಅಂದಿನಿಂದಲೇ ಸಾಕ್ಷ್ಯಧಾರಗಳನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದ್ದರು. ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಇದ್ದ ಪೆನ್‍ಡ್ರೈವ್, ದಾಖಲೆಗಳು, ಫೋನ್ ನಲ್ಲಿ ಇರುವ ಸಾಕ್ಷ್ಯಧಾರಗಳನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದ್ದರು. ಆದರೆ ಇದೀಗ ಸತ್ಯ ಹೊರಗೆ ಬರುತ್ತಿದೆ ಅಂತ ಹೇಳಿದ್ರು. ನಮಗೆ ನ್ಯಾಯ ಸಿಗುತ್ತದೆ. ಅಲ್ಲದೇ ಸಿಬಿಐ ತನಿಖೆಗೆ ಹೋಗಲಿದೆ ಎಂಬ ನಂಬಿಕೆ ನಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಮಾತನಾಡಿದ ಗಣಪತಿ ತಂದೆ ಕುಶಾಲಪ್ಪ, ಪ್ರಕರಣ ಸಿಬಿಐಗೆ ವಹಿಸಿದ್ರೆ ಖಂಡಿತ ನಮಗೆ ನ್ಯಾಯ ಸಿಗುತ್ತೆ ಅಂತ ಹೇಳಿದ್ರು.

    ಇದನ್ನೂ ಓದಿ:  ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್ 

    https://youtu.be/AGmp1M_0q2s

    https://youtu.be/p2V1xEclj3g

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್: ಕಂಪ್ಯೂಟರ್ ಫೈಲ್, ಫೋನ್ ಕಾಲ್ ಡಿಲೀಟ್

    ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿದೆ.

    ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೊಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಸಿಐಡಿ ಫೊರೆನ್ಸಿಕ್ ವರದಿಯನ್ನು ತನಿಖೆ ವೇಳೆ ಪರಿಗಣಿಸಿದೇ ಸಚಿವ ಜಾರ್ಜ್ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್ ಚೀಟ್ ನೀಡಿದೆ. ಈ ವೇಳೆ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳನ್ನು ವಾಹಿನಿ ಮಾತನಾಡಿಸಿದೆ. ಜಗನ್ ಬೆಳ್ಳಿಯಪ್ಪ ಮಾತನಾಡಿ, ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಜಾಸ್ತಿ ಪ್ರಶ್ನೆ ಕೇಳಿಲ್ಲ. ಕೆಲ ಪ್ರಶ್ನೆ ಕೇಳಿದರು. ಏನು ಪ್ರಶ್ನೆ ಕೇಳಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕೊನೆಗೆ ಖಾಲಿ ಬಿಳಿ ಹಾಳೆಯಲ್ಲಿ ಸಹಿ ಹಾಕಲು ಹೇಳಿದರು. ನಾವು ಸಹಿ ಹಾಕಿದ್ವಿ ಎಂದು ತಿಳಿಸಿದ್ದಾರೆ.

    ಏನೇನು ಡಿಲೀಟ್ ಆಗಿದೆ?
    100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರಿಸಿದೆ.

    ಏನಿದು ಪ್ರಕರಣ?:
    2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು.

    ಸುಪ್ರೀಂನಲ್ಲಿದೆ ಮತ್ತೊಂದು ಅರ್ಜಿ: ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆ ಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದು, ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

    ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ.

    https://youtu.be/AGmp1M_0q2s

    https://youtu.be/p2V1xEclj3g

  • ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ

    ಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ

    ನವದೆಹಲಿ: ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ.

    ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ಸಿಐಡಿ ವರದಿಯನ್ನು ಭಾಷಾಂತರ ಮಾಡುವ ನಿಟ್ಟಿನಲ್ಲಿ ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಜೊತೆಗೆ ಜೊತೆಗೆ ಅರ್ಜಿದಾರ ಕುಶಾಲಪ್ಪ ಪರ ವಕೀಲರು ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ನಾಲ್ಕು ವಾರಗಳ ಸಮಯ ನೀಡುವಂತೆ ಮನವಿ ಮಾಡಿದ್ದರು.

    ವಿಚಾರಣೆ ಆಲಿಸಿದ ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠ ಎರಡು ವಾರಗಳ ಅವಕಾಶ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

    ಏನಿದು ಪ್ರಕರಣ?
    ಡಿವೈಎಸ್ಪಿ ಎಂಕೆ. ಗಣಪತಿ ಮಡಿಕೇರಿಯ ಲಾಡ್ಜ್‍ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್‍ಗೆ ಕ್ಲೀನ್ ಚೀಟ್ ನೀಡಿತ್ತು. ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲಿನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ತಂದೆ ಕುಶಾಲಪ್ಪ ಸುಪ್ರೀಂ ಕೋರ್ಟ್ ನಲ್ಲಿ ಸಿಬಿಐ ತನಿಖೆಗೆ ಆದೇಶಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

    ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ   ಈ ಹಿಂದೆ ಸಿಬಿಐ ತನಿಖೆಗೆ ಆದೇಶಿಸುವಂತೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ.ಮಾಚಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

    https://www.youtube.com/watch?v=AGmp1M_0q2s

     

    https://www.youtube.com/watch?v=p2V1xEclj3g