Tag: DYSP Ganapati

  • ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗ್ತಿವೆ : ಕಾಂಗ್ರೆಸ್‌

    ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗ್ತಿವೆ : ಕಾಂಗ್ರೆಸ್‌

    ಬೆಂಗಳೂರು: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ (CBI) ಬೆತ್ತಲಾಗುತ್ತಲೇ ಇವೆ ಎಂದು ಬಿಜೆಪಿ (BJP) ನಾಯಕರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

    ಪರೇಶ್ ಮೇಸ್ತಾದು ಕೊಲೆಯಲ್ಲ ಬದಲಿಗೆ ಆಕಸ್ಮಿಕ ಸಾವು ಎಂದು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಪರಿಷತ್ ಸದಸ್ಯ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಸಿಬಿಐ ವರದಿಯನ್ನು ನಾವು ಒಪ್ಪುವುದಿಲ್ಲ. ಪರೇಶ್ ಮೇಸ್ತಾದು (Paresh Mesta) ಕೊಲೆಯೇ. ಇವತ್ತು ಏನಾದ್ರು ಸಾಕ್ಷಿ ಸಿಗದಿದ್ದರೆ ಅದಕ್ಕೆ ಸಿದ್ದರಾಮಯ್ಯ (Siddaramaiah) ಸರ್ಕಾರವೇ ಕಾರಣ ಎಂದು ಆರೋಪಿಸಿದ್ದರು.

    ಅಷ್ಟೇ ಅಲ್ಲದೇ ಸಾಕ್ಷಿ ನಾಶ ಮಾಡಿದ್ದು ಹಾಗೂ ಪಿಎಫ್‍ಐ ಘೋಷಣೆ ಮಾಡಿದ್ದಕ್ಕೆ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ವಿಧಾನಸಭೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಕಾಂಗ್ರೆಸ್‍ನವರು ಹೇಳುವುದೆಲ್ಲ ಸತ್ಯ ಅಲ್ಲ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದೆ.

    ಟ್ವೀಟ್‍ನಲ್ಲಿ ಏನಿದೆ?: ಪಾಪಿ ಬಿಜೆಪಿಯ ಸುಳ್ಳುಗಳು ಅವರದ್ದೇ ಆಡಳಿತದಲ್ಲಿರುವ ಸಿಬಿಐನಿಂದ ಬೆತ್ತಲಾಗುತ್ತಲೇ ಇವೆ. ಡಿ.ಕೆ. ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದೆ. ಇನ್ನೂ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೂ ಸರ್ಕಾರಕ್ಕೆ ಸಂಬಂಧವಿಲ್ಲ ಎಂದು ಹೇಳಿದರೆ, ಪರೇಶ್ ಮೇಸ್ತಾ ಪ್ರಕರಣವನ್ನು ಸಹಜ ಸಾವು ಎಂದು ತಿಳಿಸಿದೆ. ಈ ರೀತಿ ಸುಳ್ಳು ಹೇಳಿದ್ದ ಬಿಜೆಪಿ ರಾಜ್ಯದ ಕ್ಷಮೆ ಕೇಳಬೇಕು. ಇದನ್ನೂ ಓದಿ: ಪರೇಶ್‌ ಮೇಸ್ತಾ ಕೇಸ್‌ ರೀ ಓಪನ್‌ ಆಗಲಿ; CBIನದ್ದು ಮೋಸದ ವರದಿ – ಮುತಾಲಿಕ್‌

    ಏನಿದು ಪ್ರಕರಣ?: 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪರೇಶ್ ಮೇಸ್ತಾ ಪತ್ತೆಯಾಗಿದ್ದ. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕೊಮು ಸಂಘರ್ಷಕ್ಕೆ ಕಾರಣವಾಗಿತ್ತು.

    ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ಪರೇಶ್ ಮೇಸ್ತಾದು ಕೊಲೆಯಲ್ಲ, ಆಕಸ್ಮಿಕ ಸಾವು ಎಂದು ವರದಿ ಸಲ್ಲಿಸಿದೆ. ಇದನ್ನೂ ಓದಿ: ಪರೇಶ್ ಮೇಸ್ತಾದು ಕೊಲೆಯೇ, ಸಿದ್ದು ಸರ್ಕಾರದಿಂದ ಸಾಕ್ಷ್ಯ ನಾಶ: ರವಿಕುಮಾರ್‌ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

    ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

    ಬೆಂಗಳೂರು: ಡಿವೈಎಸ್ಪಿ ಗಣಪತಿ ನಿಗೂಢ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ತನಿಖೆ ಆರಂಭಿಸಿರುವ ಸಿಬಿಐ ಇಂದು ಸಚಿವ ಜಾರ್ಜ್ ವಿರುದ್ಧ ಎಫ್.ಐ.ಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ ಗಣಪತಿ ನೀಡಿರುವ ಹೇಳಿಕೆಯನ್ನು ಆಧರಿಸಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಸಿಬಿಐ ಎಫ್.ಐ.ಆರ್ ದಾಖಲಿಸಿದೆ.

    ಸಿಬಿಐ ದಾಖಲಿಸಿರೋ ಎಫ್.ಐ.ಆರ್ ನಲ್ಲೇನಿದೆ.?
    ಕೆ.ಜೆ. ಜಾರ್ಜ್- ಎ1 ಆರೋಪಿ (ಬೆಂಗಳೂರು ನಗರಾಭಿವೃದ್ಧಿ ಸಚಿವ), ಪ್ರಣವ್ ಮೊಹಾಂತಿ- ಎ2 ಆರೋಪಿ (ಆಧಾರ್, ಉಪ ಮಹಾನಿರ್ದೇಶಕ, ಐಪಿಎಸ್ ಅಧಿಕಾರಿ), ಎ.ಎಂ. ಪ್ರಸಾದ್- ಎ-3 ಆರೋಪಿ (ಗುಪ್ತಚರ ಇಲಾಖೆ ಡಿಜಿ)

    ಕೆ.ಜೆ. ಜಾರ್ಜ್ ವಿರುದ್ಧ ಎಫ್‍ಐಆರ್ ದಾಖಲಿಸುತ್ತಿದ್ದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದರು. ಪೂರ್ವ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ, ಸಚಿವ ಜಾರ್ಜ್ ಸೇರಿದಂತೆ, ತಮ್ಮ ಆಪ್ತ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಸಚಿವ ಜಾರ್ಜ್ ರಾಜೀನಾಮೆ ನೀಡುವ ಸಾಧ್ಯತೆಗಳಿಲ್ಲ. ಮೂರು ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚಿಸಿರುವುದರಿಂದ ಈ ವರದಿಯನ್ನು ಆಧರಿಸಿ ಜಾರ್ಜ್ ಮುಂದಿನ ಹೆಜ್ಜೆ ಇಡಲಿದ್ದಾರೆ ಎನ್ನಲಾಗಿದೆ. ಪ್ರಕರಣದ ಮುಂದಿನ ಹಂತದಲ್ಲಿ ಸಿಬಿಐನಿಂದ ವಿಚಾರಣೆಗಾಗಿ ಸಮನ್ಸ್ ಜಾರಿಯಾಗುವ ಸಾಧ್ಯತೆಯಿದೆ.

    ನಾಳೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ: ಎಫ್.ಐ.ಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಬಿಐ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಕೆ.ಜೆ.ಜಾರ್ಜ್ ಪರ ವಕೀಲರು ಸಿಟಿ ಸಿವಿಲ್ ಕೋರ್ಟ್ ನಲ್ಲಿರೋ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಶನಿವಾರ ಮತ್ತು ಭಾನುವಾರ ಕೋರ್ಟ್ ರಜೆ ಇರುವ ಕಾರಣ ಶುಕ್ರವಾರವೇ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡುವ ಸಾಧ್ಯತೆಯಿದೆ.

    ಎಫ್.ಐ.ಆರ್ ಬೆನ್ನಲ್ಲೆ ತನಿಖೆ ಚುರುಕುಗೊಳಿಸಿದ ಸಿಬಿಐ ತಂಡ ಕರ್ನಾಟಕ ಸಿಐಡಿ ಅಧಿಕಾರಿಗಳಿಂದ ಇನ್ನೂ ಮಾಹಿತಿ ಪಡೆಯುತ್ತಿದ್ದಾರೆ. ಘಟನೆ ನಡೆದ ವಿವರ, ಎಫ್.ಎಸ್.ಎಲ್ ವರದಿ ಎಲ್ಲದರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ನಾಳೆಯೇ ಬೆಂಗಳೂರಿಗೆ ಬರಲು ಸಿದ್ಧತೆ ನಡೆಸಿರೋ ಸಿಬಿಐ ತಂಡ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೂ ಇದೆ.

    2016ರ ಜುಲೈ 7ರಂದು ಡಿವೈಎಸ್‍ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು.

    ಸಿಬಿಐ ಎಫ್.ಐ.ಆರ್ ದಾಖಲಾದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಗಣಪತಿ ಸೋದರಿ ಸಬಿತಾ, ನನ್ನ ಸೋದರನ ಸಾವಿಗೆ ಕಾರಣ ಯಾರು ಎನ್ನುವುದು ಗೊತ್ತಾಗಬೇಕು. ಈ ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿದೆ ಎಂದರು.

    ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ರಮೇಶ್ ಕುಮಾರ್, ಇದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ. ಸಿಬಿಐ ರಾಜಕೀಯ ಪ್ರೇರಿತವಾಗಿ ಕೆಲಸ ಮಾಡುತ್ತದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ನಾವು ಯಾವುದೇ ಕಾರಣಕ್ಕೂ ಜಾರ್ಜ್ ರಾಜೀನಾಮೆ ಕೊಡಲು ಬಿಡುವುದಿಲ್ಲ. ನಾವು ರಾಜಕೀಯವಾಗೇ ಉತ್ತರ ನೀಡುತ್ತೇವೆ. ಕೇಂದ್ರದಲ್ಲಿ ಯಾರ ವಿರುದ್ಧವೆಲ್ಲಾ ಎಫ್.ಐ.ಆರ್ ದಾಖಲಾಗಿಲ್ಲ ಹೇಳಿ ಎಂದು ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಹಿಟ್ಲರ್ ನ ತಮ್ಮನಂತೆ ವರ್ತಿಸುತ್ತಿದ್ದಾರೆ ಎಂದರು.

    ಇದೇ ವೇಳೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಇದು ರಾಜಕೀಯ ಪ್ರೇರಿತ. ಸಿದ್ದರಾಮಯ್ಯರನ್ನು ದುರ್ಬಲಗೊಳಿಸಲು ಎಫ್.ಐ.ಆರ್ ಹಾಕುವ ಕ್ರಮಕೈಗೊಂಡಿದ್ದಾರೆ. ನಮ್ಮಲ್ಲಿ ಬೌಲರ್ ಗಳು, ಬ್ಯಾಟ್ಸ್ ಮನ್‍ಗಳು, ವಿಕೆಟ್ ಕೀಪರ್ ಗಳು ಇದ್ದಾರೆ ಎಂದರು.

  • ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

    ಗಣಪತಿ ಕೇಸ್- ಸಾಕ್ಷ್ಯ ನಾಶಪಡಿಸುವಲ್ಲಿ ಕೆಂಪಯ್ಯ ಪಾತ್ರವಿದೆ: ಬಿಎಸ್‍ವೈ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ದುರ್ಬಳಕೆ ಆಗುತ್ತಿದ್ದು ಎಸಿಬಿ, ಸಿಐಡಿಗಳ ದುರ್ಬಳಕೆಗೆ ಸಾಕ್ಷಿಗಳು ಸಿಕ್ಕಿವೆ. ಗಣಪತಿ ಸಾವಿನ ಕೇಸ್‍ನಲ್ಲಿ ಸಿಐಡಿ ತನಿಖೆ ಸರಿಯಾಗಿ ಆಗಿಲ್ಲ. ಪೋನ್ ಕಾಲ್‍ಗಳು, ಮೆಸೇಜ್‍ಗಳು, ಡಾಕ್ಯೂಮೆಂಟ್‍ಗಳು,ಫೋಟೋಗಳು ನಾಪತ್ತೆಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಕ್ಷ್ಯ ನಾಶಪಡಿಸುವಲ್ಲಿ ಗೃಹ ಸಚಿವಾಲಯದ ಸಲಹೆಗಾರ ಕೆಂಪಯ್ಯ ಪಾತ್ರ ಇದೆ. ಅಷ್ಟೇ ಅಲ್ಲ ಆಡಳಿತ ಪಕ್ಷದ ಕೆಲ ನಾಯಕರ ಕೈವಾಡ ಸಹ ಇದೆ. ಜಾರ್ಜ್ ರಾಜೀನಾಮೆ ನೀಡಿದ್ರೂ ಮತ್ತೆ ತರಾತುರಿಯಲ್ಲಿ ಸಂಪುಟಕ್ಕೆ ಸೇರಿಕೊಂಡಿದ್ದಾರೆ. ಈ ಸಾಕ್ಷಿ ನಾಶದ ಹಿಂದೆ ಆಡಳಿತ ಪಕ್ಷದ ಮುಖಂಡರ ಪ್ರಭಾವ ಇದೆ ಎಂದು ಬಿಎಸ್‍ವೈ ಅವರು ಆರೋಪಿಸಿದರು.

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಾಟಕೀಯ. ತನಿಖೆಯನ್ನು ಸಿಐಡಿ ಸರ್ಕಾರದ ಇಚ್ಛೆಗೆ ತಕ್ಕಂತೆ ನಡೆಸಿದೆ. ವಿಧಿವಿಜ್ಞಾನ ಪ್ರಯೋಗಾಲಯ ಮೂಲಕ ಈ ಸತ್ಯ ಬಹಿರಂಗವಾಗಿದೆ. ಪ್ರಕರಣ ಕುರಿತು ದೊರೆತಿದ್ದ ಸಾಕ್ಷ್ಯಗಳು ನಾಶವಾಗಿವೆ. ಆರೋಪ ಕೇಳಿ ಬಂದ ನಾಯಕರನ್ನು ರಕ್ಷಿಸಲು ಪ್ರಮುಖ ದಾಖಲೆಗಳನ್ನು ನಾಶಮಾಡಲಾಗಿದೆ. ಈ ಸಾಕ್ಷ್ಯ ನಾಶ ಕುರಿತು ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

    ಪ್ರಕರಣ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳ ಮತ್ತು ಸರ್ಕಾರದ ನಡುವೆ ಸಂಚು ನಡೆದಿದೆ. ಈ ಎಲ್ಲ ಬೆಳವಣಿಗೆಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊರಬೇಕು. ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದರು. ತನಿಖೆ ವೇಳೆ ಕೊಠಡಿಯಲ್ಲಿ ಮೂರು ಗುಂಡು ಹಾರಿಸಿದ್ದ ಬಗ್ಗೆ ಸ್ಪಷ್ಟನೆ ಇಲ್ಲ. ಪ್ರಕರಣದಲ್ಲಿ ಸರ್ಕಾರದ ಪ್ರಭಾವಿ ನಾಯಕರ ಕೈವಾಡವಿದೆ. ಸಾಕ್ಷ್ಯ ನಾಶ ಪತ್ತೆ ಹಚ್ಚಿ ನ್ಯಾಯ ಸಿಗಬೇಕು ಅನ್ನೋದು ಬಿಜೆಪಿಯ ಕೆಲಸ ಎಂದರು.

    ಸಾವಿಗೂ ಮುನ್ನ ಗಣಪತಿ ಪೊಲೀಸ್ ಅಧಿಕಾರಿಗಳ ಮತ್ತು ಜಾರ್ಜ್ ಹೆಸರನ್ನು ಉಲ್ಲೇಖ ಮಾಡಿದ್ದರು. ಪ್ರಾಮಾಣಿಕ ಅಧಿಕಾರಿಗಳಿಗೆ ರಾಜ್ಯದಲ್ಲಿ ಕೆಲಸ ಮಾಡದಂತೆ ವಾತಾವರಣವಿದೆ. ಈ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಿದವರು ಯಾರು ಎಂದು ಪತ್ತೆ ಹಚ್ಚಬೇಕು. ಸಚಿವ ಸ್ಥಾನಕ್ಕೆ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು. ಸಿಎಂ ಮತ್ತು ಕೆಜೆ ಜಾರ್ಜ್ ರಾಜೀನಾಮೆ ನೀಡದೆ ಇದ್ದಲ್ಲಿ ಬಿಜೆಪಿಯಿಂದ ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಜಾರ್ಜ್ ರಾಜೀನಾಮೆ ನೀಡದೇ ಇದ್ದರೆ ಆ.26 ರಂದು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕರಣ ಕುರಿತು ಮುಂದಿನ ಕ್ರಮ ಕೈಗೊಳ್ಳುತ್ತೇವೆ.

    ಈ ಪ್ರಕರಣದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಅವರ ಪುತ್ರನ ಹೆಸರು ಕೂಡ ಕೇಳಿ ಬಂದಿದೆ ಎನ್ನುವ ಪ್ರಶ್ನೆಗೆ ಸಾವಿಗೆ ಯಾರದೇ ಪಾತ್ರ ಇದ್ದರೂ ತನಿಖೆ ಪೂರ್ಣಗೊಂಡ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು.

    ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಕ್ಲೀನ್ ಚಿಟ್ ವಿಚಾರದಲ್ಲಿ ನ್ಯಾ.ಕೆಂಪಣ್ಣ ಆಯೋಗದ ವರದಿಗೆ ಕಿಮ್ಮತ್ತಿಲ್ಲ. ಕೆಂಪಣ್ಣ, ಕೆಂಪಯ್ಯ ಎಲ್ಲಾ ಒಂದೇ ಅಲ್ವಾ? ತರಾತುರಿಯಲ್ಲಿ ವರದಿ ಕೊಟ್ಟಿದ್ದಾರೆ. ವರದಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿಎಸ್‍ವೈ ಹೇಳಿದರು.