Tag: E. Sreedharan

  • ಕೇರಳದಲ್ಲಿ ಮತ್ತೆ ಅಧಿಕಾರದತ್ತ ಎಲ್‍ಡಿಎಫ್ – 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

    ಕೇರಳದಲ್ಲಿ ಮತ್ತೆ ಅಧಿಕಾರದತ್ತ ಎಲ್‍ಡಿಎಫ್ – 3 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

    ತಿರುವನಂತಪುರಂ: ಕೇರಳದಲ್ಲಿ ಮತ್ತೆ ಪಿಣರಾಯ್ ವಿಜಯನ್ ಅಧಿಕಾರಕ್ಕೆ ಏರುವ ಸಾಧ್ಯತೆ ಹೆಚ್ಚಿದೆ.ಆರಂಭಿಕ ಎಣಿಕೆಗಳಲ್ಲಿ ಎಲ್‍ಡಿಎಫ್ ಮೈತ್ರಿಕೂಟ ಮುನ್ನಡೆಯಲ್ಲಿದೆ.

    ಎಲ್‍ಡಿಎಫ್ ಮೈತ್ರಿಕೂಟ 78 ರಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 57 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸದ್ಯದ ಟ್ರೆಂಡ್ ಪ್ರಕಾರ ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ಆರಂಭದಲ್ಲಿ ಬಿಜೆಪಿ ಕೋಯಿಕ್ಕೋಡ್ ದಕ್ಷಿಣ ಮತ್ತು ಕಾಸರಗೋಡಿನಲ್ಲಿ ಮುನ್ನಡೆ ಸಾಧಿಸಿತ್ತು. ಸದ್ಯ ಬಿಜೆಪಿಯಿಂದ ಸ್ಪರ್ಧಿಸಿರುವ ಮೆಟ್ರೋ ಮ್ಯಾನ್ ಶ್ರೀಧರನ್ ಅವರು ಪಾಲಕ್ಕಾಡ್‍ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ತ್ರಿಶ್ಯೂರಿನಲ್ಲಿ ಸುರೇಶ್ ಗೋಪಿ ಮುನ್ನಡೆಯಲ್ಲಿದ್ದಾರೆ.

    ನೇಮಂನಲ್ಲಿ ಕುಮ್ಮನಂ ರಾಜಶೇಖರ್ ಮುನ್ನಡೆಯಲ್ಲಿದ್ದಾರೆ. 2016ರ ಚುನಾವಣೆಯಲ್ಲಿ ಮೊದಲ ಬಾರಿಗೆ ಇಲ್ಲಿ ಕಮಲ ಅರಳಿತ್ತು. ಮಾಜಿ ಕೇಂದ್ರ ಸಚಿವ ಒ ರಾಜಗೋಪಾಲ್ ಇಲ್ಲಿ ಗೆಲುವು ಸಾಧಿಸಿದ್ದರು.

  • ಕೇರಳ ಸಿಎಂ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಇ ಶ್ರೀಧರನ್- ಬಿಜೆಪಿ ಘೋಷಣೆ

    ಕೇರಳ ಸಿಎಂ ಅಭ್ಯರ್ಥಿಯಾಗಿ ಮೆಟ್ರೋ ಮ್ಯಾನ್ ಇ ಶ್ರೀಧರನ್- ಬಿಜೆಪಿ ಘೋಷಣೆ

    ತಿರುವನಂತಪುರಂ: ಮೆಟ್ರೋ ಮ್ಯಾನ್ ಎಂದೇ ಖ್ಯಾತರಾಗಿರುವ ಇ ಶ್ರೀಧರನ್ ಅವರನ್ನು ಕೇರಳ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿರುವ ಬಗ್ಗೆ ಕೇಂದ್ರ ಸಚಿವ ವಿ.ಮುರಳೀಧರನ್ ಟ್ವೀಟ್ ಮೂಲಕ ತಿಳಿಸಿದ್ದರು. ಆದರೆ ಇದೀಗ ಅವರ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಕೇರಳ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಗರಿಗೆದರಿದ್ದು, ಮುಂದಿನ ತಿಂಗಳು ಚುನಾವಣೆ ನಡೆಯುತ್ತಿದೆ. ಮೆಟ್ರೋ ಮ್ಯಾನ್ ಇ ಶ್ರೀಧರನ್ನು ಅವರು ಕೇರಳದ ಮುಖ್ಯಮಂತ್ರಿ ಅಭ್ಯರ್ಥಿ ಮಾಡಿರುವ ಕುರಿತು ಕೇಂದ್ರ ಸಚಿವ ವಿ.ಮುರಳೀಧರನ್ ಟ್ವೀಟ್ ಮಾಡಿದ್ದರು. ಆದರೆ ಈ ಬಗ್ಗೆ ಮುರಳೀಧರನ್ ಮತ್ತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪಕ್ಷದ ಮುಖ್ಯಸ್ಥರು ಯಾವುದೇ ಘೋಷಣೆ ಮಾಡಿಲ್ಲ. ಮಾಧ್ಯಮಗಳ ವರದಿಯನ್ನು ಆಧರಿಸಿ ನಾನು ಈ ರೀತಿ ಹೇಳಿಕೆ ನೀಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಕೇರಳ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇ ಶ್ರೀಧರನ್ ಅವರನ್ನು ಘೋಷಿಸಲಾಗಿದ್ದು, ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಸಿಪಿಎಂ ಹಾಗೂ ಕಾಂಗ್ರೆಸ್‍ನ್ನು ಸೋಲಿಸುತ್ತೇವೆ. ಭ್ರಷ್ಠಾಚಾರ ರಹಿತ ಆಡಳಿತ ನಡೆಸುವ ಮೂಲಕ ಅಭಿವೃದ್ಧಿಪರ ಸರ್ಕಾರವನ್ನು ನೀಡುತ್ತೇವೆ ಎಂದು ಮುರಳಿಧರನ್ ತಿಳಿಸಿದ್ದರು. ಇ ಶ್ರೀಧರನ್ ಅವರು ಫೆ.21 ರಂದು ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೇರಳ ಜನತೆಯ ಅಗತ್ಯತೆಗಳ ಬಗ್ಗೆ ಕಾಳಜಿ ವಹಿಸಲಾಗುವುದು. ಎ ಶ್ರೀಧರನ್ ಅವರ ನೇತೃತ್ವದಲ್ಲಿ ಹೊಸ ಕೇರಳ ತಲೆ ಎತ್ತಲಿದೆ. ರಾಜ್ಯದಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಆಡಳಿತವನ್ನು ನೀಡುತ್ತೇವೆ ಎಂದು ಅವರು ತಿಳಿಸಿದ್ದರು.

    ಯಾವುದೇ ಅನೌನ್ಸ್ ಮೆಂಟ್ ಆಗಿಲ್ಲ
    ಮಾಧ್ಯಮ ವರದಿಗಳನ್ನು ಆಧರಿಸಿ ಪಕ್ಷವೇ ಶ್ರೀಧರನ್ ಅವರನ್ನು ಕೇರಳ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ಟ್ವೀಟ್ ಮಾಡಿದ್ದೆ. ನಂತರ ನಾನು ಈ ಬಗ್ಗೆ ಗ್ರಾಸ್ ಚೆಕ್ ಮಾಡಿದ್ದು, ಪಕ್ಷದ ಮುಖ್ಯಮಸ್ಥರ ಬಳಿ ಮಾತನಾಡಿದೆ. ಅವರು ಈ ಬಗ್ಗೆ ಯಾವುದೇ ರೀತಿಯ ಘೋಷಣೆ ಮಾಡಿಲ್ಲ ಎಂದು ಹೇಳಿದರು ಎಂದು ಮುರಳೀಧರನ್ ಸ್ಪಷ್ಟಪಡಿಸಿದ್ದಾರೆ.

    ಪಕ್ಷದ ನಿಯಮವನ್ನೂ ಮೀರಿ ಬಿಜೆಪಿ ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂಬ ಚರ್ಚೆ ನಡೆಯುತ್ತಿದ್ದವು. ಬಿಜೆಪಿ ನಿಯಮಗಳ ಪ್ರಕಾರ 75 ವರ್ಷ ಮೇಲ್ಪಟ್ಟವರು ನಿವೃತ್ತರಾಗಬೇಕು. ಆದರೆ ಶ್ರೀಧರನ್ ಅವರಿಗೆ ಜೂನ್ ತಿಂಗಳಿಗೆ 89 ವರ್ಷಗಳಾಗುತ್ತವೆ. ಇವರನ್ನು ಹೊರತುಪಡಿಸಿದರೆ ರಾಜ್ಯದ ಬಿ.ಎಸ್.ಯಡಿಯೂರಪ್ಪ ಅವರು 2019ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ 76 ವರ್ಷಗಳಾಗಿದ್ದವು.

    ಯಾರು ಇ ಶ್ರೀಧರನ್?
    ಭಾರತೀಯ ಎಂಜಿನಿಯರಿಂಗ್ ಸೇವೆ (ಐಇಎಸ್) ಸಲ್ಲಿಸಿ ಈಗ ನಿವೃತ್ತರಾಗಿರುವ ಇವರು 1995 ರಿಂದ 2012ರ ವರೆಗೂ ದೆಹಲಿ ಮೆಟ್ರೋ ಮುಖ್ಯಸ್ಥರಾಗಿದ್ದರು. ಶ್ರೀಧರನ್ ದೇಶಾದ್ಯಂತ ಸ್ವದೇಶಿ ಮೆಟ್ರೋ ರೈಲು ವ್ಯವಸ್ಥೆ ಜಾರಿಗೆ ಮೋದಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.

    ಕೊಂಕಣ ರೈಲ್ವೆ ಮತ್ತು ದಿಲ್ಲಿ ಮೆಟ್ರೋವನ್ನು ನಿರ್ಮಿಸಿದ ನಂತರ ಭಾರತದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬದಲಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. 2003 ರಲ್ಲಿ ಟೈಮ್ಸ್ ನಿಯತಕಾಲಿಕೆಯು ಏಷ್ಯಾದ ಸೆಲೆಬ್ರಿಟಿ ಹೀರೋಗಳಲ್ಲಿ ಒಬ್ಬರೆಂದು ಅವರನ್ನು ಹೆಸರಿಸಿತ್ತು. ವಿಶ್ವಸಂಸ್ಥೆಯ ಸುಸ್ಥಿರ ಸಾರಿಗೆ ಕುರಿತು ಉನ್ನತ ಮಟ್ಟದ ಸಲಹಾ ಸಮೂಹದಲ್ಲಿ ಸೇವೆ ಸಲ್ಲಿಸಲು ಶ್ರೀಧರನ್ ಅವರನ್ನು ನೇಮಕ ಮಾಡಲಾಗಿತ್ತು.

    ಈ ಹಿಂದೆ ದೆಹಲಿ ಮೆಟ್ರೋದಲ್ಲಿ ಮಹಿಳೆಯರ ಉಚಿತ ಸಂಚಾರಕ್ಕೆ ಸಿಎಂ ಕೇಜ್ರಿವಾಲ್ ಅನುವು ಮಾಡಿಕೊಡಲು ಮುಂದಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಇದಕ್ಕೆ ಅವಕಾಶ ನೀಡಬಾರದು ಎಂದು ಶ್ರೀಧರನ್ ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಒಂದೊಮ್ಮೆ ಮೆಟ್ರೋ ಪ್ರಯಾಣದಲ್ಲಿ ಉಚಿತ ಸಂಚಾರ ಆರಂಭಿಸಿದರೆ ಸಂಸ್ಥೆಗಳು ದಿವಾಳಿ ಆಗಲಿದೆ. ಯಾವುದೇ ಕಾರಣಕ್ಕೂ ಇವುಗಳಿಗೆ ಪ್ರೋತ್ಸಾಹ ನೀಡಬಾರದು. ಮೆಟ್ರೋ ಸಿಬ್ಬಂದಿ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಕೂಡ ಟಿಕೆಟ್ ಖರೀದಿಸಿ ಪ್ರಯಾಣ ನಡೆಸಬೇಕು ಎಂದು ಹೇಳಿದ್ದರು.

    ಯಾವುದೇ ಅನೌನ್ಸ್ ಮೆಂಟ್ ಆಗಿಲ್ಲ
    ಮಾಧ್ಯಮ ವರದಿಗಳನ್ನು ಆಧರಿಸಿ ಪಕ್ಷವೇ ಶ್ರೀಧರನ್ ಅವರನ್ನು ಕೇರಳ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ಟ್ವೀಟ್ ಮಾಡಿದ್ದೆ. ನಂತರ ನಾನು ಈ ಬಗ್ಗೆ ಗ್ರಾಸ್ ಚೆಕ್ ಮಾಡಿದ್ದು, ಪಕ್ಷದ ಮುಖ್ಯಮಸ್ಥರ ಬಳಿ ಮಾತನಾಡಿದೆ. ಅವರು ಈ ಬಗ್ಗೆ ಯಾವುದೇ ರೀತಿಯ ಘೋಷಣೆ ಮಾಡಿಲ್ಲ ಎಂದು ಹೇಳಿದರು ಎಂದು ಮುರಳೀಧರನ್ ಸ್ಪಷ್ಟಪಡಿಸಿದ್ದಾರೆ.

  • ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮೆಟ್ರೋ ಮ್ಯಾನ್‌ ಖ್ಯಾತಿಯ ಇ ಶ್ರೀಧರನ್‌

    ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮೆಟ್ರೋ ಮ್ಯಾನ್‌ ಖ್ಯಾತಿಯ ಇ ಶ್ರೀಧರನ್‌

    ತಿರುವನಂತಪುರಂ: ಕೊಂಕಣ ರೈಲಿನ ಸೂತ್ರಧಾರ, ಮೆಟ್ರೋ ಮ್ಯಾನ್‌ ಎಂದೇ ಖ್ಯಾತರಾಗಿರುವ ಇ ಶ್ರೀಧರನ್‌ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಫೆ.21 ರಂದು ಕಾಸರಗೋಡಿನಲ್ಲಿ ʼವಿಜಯ ಯಾತ್ರೆʼ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

    ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್‌ ಪ್ರತಿಕ್ರಿಯಿಸಿ, ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿ ಮಾಡಿದ್ದ ಇ ಶ್ರೀಧರನ್‌ ಬಿಜೆಪಿಗೆ ಸೇರಿ ಕೆಲಸ ಮಾಡಲಿದ್ದಾರೆ. ಫೆ.21 ರಂದು ಅವರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು. ಕೆಲ ತಿಂಗಳಿನಲ್ಲಿ ಕೇರಳದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶ್ರೀಧರನ್‌ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಭಾರೀ ಮಹತ್ವ ಪಡೆದಿದೆ.

    ಯಾರು ಇ ಶ್ರೀಧರನ್‌?
    ಭಾರತೀಯ ಎಂಜಿನಿಯರಿಂಗ್ ಸೇವೆ (ಐಇಎಸ್) ಸಲ್ಲಿಸಿ ಈಗ ನಿವೃತ್ತರಾಗಿರುವ ಇವರು 1995 ರಿಂದ 2012ರ ವರೆಗೂ ದೆಹಲಿ ಮೆಟ್ರೋ ಮುಖ್ಯಸ್ಥರಾಗಿದ್ದರು. ಶ್ರೀಧರನ್‌ ದೇಶಾದ್ಯಂತ ಸ್ವದೇಶಿ ಮೆಟ್ರೋ ರೈಲು ವ್ಯವಸ್ಥೆ ಜಾರಿಗೆ ಮೋದಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.

    ಕೊಂಕಣ ರೈಲ್ವೆ ಮತ್ತು ದಿಲ್ಲಿ ಮೆಟ್ರೋವನ್ನು ನಿರ್ಮಿಸಿದ ನಂತರ ಭಾರತದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬದಲಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. 2003 ರಲ್ಲಿ ಟೈಮ್ಸ್ ನಿಯತಕಾಲಿಕೆಯು ಏಷ್ಯಾದ ಸೆಲೆಬ್ರಿಟಿ ಹೀರೋಗಳಲ್ಲಿ ಒಬ್ಬರೆಂದು ಅವರನ್ನು ಹೆಸರಿಸಿತ್ತು. ವಿಶ್ವಸಂಸ್ಥೆಯ ಸುಸ್ಥಿರ ಸಾರಿಗೆ ಕುರಿತು ಉನ್ನತ ಮಟ್ಟದ ಸಲಹಾ ಸಮೂಹದಲ್ಲಿ ಸೇವೆ ಸಲ್ಲಿಸಲು ಶ್ರೀಧರನ್‌ ಅವರನ್ನು ನೇಮಕ ಮಾಡಲಾಗಿತ್ತು.

     

     

    ಈ ಹಿಂದೆ ದೆಹಲಿ ಮೆಟ್ರೋದಲ್ಲಿ ಮಹಿಳೆಯರ ಉಚಿತ ಸಂಚಾರಕ್ಕೆ ಸಿಎಂ ಕೇಜ್ರಿವಾಲ್ ಅನುವು ಮಾಡಿಕೊಡಲು ಮುಂದಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಇದಕ್ಕೆ ಅವಕಾಶ ನೀಡಬಾರದು ಎಂದು ಶ್ರೀಧರನ್‌ ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

    ಒಂದೊಮ್ಮೆ ಮೆಟ್ರೋ ಪ್ರಯಾಣದಲ್ಲಿ ಉಚಿತ ಸಂಚಾರ ಆರಂಭಿಸಿದರೆ ಸಂಸ್ಥೆಗಳು ದಿವಾಳಿ ಆಗಲಿದೆ. ಯಾವುದೇ ಕಾರಣಕ್ಕೂ ಇವುಗಳಿಗೆ ಪ್ರೋತ್ಸಾಹ ನೀಡಬಾರದು. ಮೆಟ್ರೋ ಸಿಬ್ಬಂದಿ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಕೂಡ ಟಿಕೆಟ್ ಖರೀದಿಸಿ  ಪ್ರಯಾಣ ನಡೆಸಬೇಕು ಎಂದು ಹೇಳಿದ್ದರು.

  • ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು: ಮೆಟ್ರೋಮ್ಯಾನ್ ಇ. ಶ್ರೀಧರನ್

    ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು: ಮೆಟ್ರೋಮ್ಯಾನ್ ಇ. ಶ್ರೀಧರನ್

    ಬೆಂಗಳೂರು: ಬುಲೆಟ್ ಟ್ರೈನ್‍ನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳಷ್ಟೇ ಓಡಾಡಬಹುದು. ಅದು ಅತ್ಯಂತ ದುಬಾರಿ. ಅದು ಜನಸಾಮಾನ್ಯರನ್ನು ತಲುಪಲು ಸಾಧ್ಯವೇ ಇಲ್ಲ. ನಮಗೆ ಬೇಕಾಗಿರೋದು ಆಧುನಿಕ, ಸ್ವಚ್ಛ, ಸುರಕ್ಷಿತ ಮತ್ತು ವೇಗದ ರೈಲು ವ್ಯವಸ್ಥೆ ಎಂದು ಮೆಟ್ರೋಮ್ಯಾನ್ ಎಂದೇ ಖ್ಯಾತರಾಗಿರೋ ಇ. ಶ್ರೀಧರನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

    ಖಾಸಗಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತಾಡಿದ ಶ್ರೀಧರನ್, ಪರೋಕ್ಷವಾಗಿಯೇ ಪ್ರಧಾನಿ ಮೋದಿಯ ಮಹತ್ವಕಾಂಕ್ಷೆಯ 1 ಲಕ್ಷ ಕೋಟಿ ರೂಪಾಯಿ ವೆಚ್ಚದ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್ ಟ್ರೈನ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪ್ರಾಮಾಣೀಕರಣ ಹಾಗೂ ಸ್ಥಳೀಯೀಕರಣಕ್ಕಾಗಿ ಮೆಟ್ರೋ ಸೇವೆ ದೀರ್ಘ ಕಾಲ ಇರಲಿ. ಪ್ರಾಮಾಣೀಕರಣದಿಂದ ರೈಲುಗಳ ಸಾಮಥ್ರ್ಯ ಹೆಚ್ಚುತ್ತದೆ ಹಾಗೂ ವೆಚ್ಚ ಕಡಿಮೆಗೊಳಿಸುತ್ತದೆ. ನಾವು ಇದರಿಂದ ‘ಮೇಕ್ ಇನ್ ಇಂಡಿಯಾ’ ಪ್ರಾಜೆಕ್ಟ್ ನಲ್ಲಿ ಕೋಚ್ ಹಾಗೂ ಉಳಿದ ಭಾಗಗಳನ್ನು ತಯಾರಿಸಬಹುದು ಎಂದು ಹೇಳಿದ್ದಾರೆ.

    ದೆಹಲಿ ಮೆಟ್ರೋ ದೇಶದಲ್ಲೇ ಒಂದು ಹೊಸ ಮೆಟ್ರೋ ಕ್ರಾಂತಿಯನ್ನು ಸೃಷ್ಟಿಸಿದೆ. ಈಗ 13 ಮೆಟ್ರೋ ರೈಲುಗಳನ್ನು ತಯಾರಿಸಲಾಗುತ್ತಿದೆ. 20 ವರ್ಷದಲ್ಲಿ ದೆಹಲಿ ಮೆಟ್ರೋ 260 ಕಿ.ಮೀವರೆಗೂ ತಲುಪುತ್ತಿದ್ದು, ವಿಶ್ವದಲ್ಲೇ ಅತ್ಯಂತ ವೇಗವಾಗಿ ತಲುಪುತ್ತಿದೆ. ನನಗೆ ದೆಹಲಿ ಮೆಟ್ರೋ ರೈಲ್ ಕಾರ್ಪೋರೇಶನ್ ಬಗ್ಗೆ ಹಮ್ಮೆ ಇದೆ ಎಂದು ತಿಳಿಸಿದ್ದಾರೆ.

    ಭಾರತೀಯ ರೈಲ್ವೇ ವ್ಯವಸ್ಥೆ 20 ವರ್ಷಗಳಷ್ಟು ಹಿಂದಿದೆ. ಬಯೋ ಟಾಯ್ಲೆಟ್ ಬಿಟ್ಟು ರೈಲ್ವೆಯಲ್ಲಿ ಏನೂ ಸುಧಾರಣೆ ಆಗಿಲ್ಲ. ರೈಲುಗಳ ವೇಗ ಅದರಲ್ಲೂ ಪ್ರತಿಷ್ಠಿತ ರೈಲುಗಳ ಸರಾಸರಿ ವೇಗ ಕಡಿಮೆಯಾಗಿದೆ. ರೈಲು ಅಪಘಾತಗಳಲ್ಲಿ ಪ್ರತಿವರ್ಷ 20 ಸಾವಿರ ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶ್ರೀಧರನ್, ದೇಶಾದ್ಯಂತ ಸ್ವದೇಶಿ ಮೆಟ್ರೋ ರೈಲು ವ್ಯವಸ್ಥೆ ಜಾರಿಗೆ ಮೋದಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಮುಖ್ಯಸ್ಥರೂ ಆಗಿದ್ದಾರೆ.