Tag: Earnings

  • ಕಾಂತಾರ ದಾಖಲೆ : ಶನಿವಾರ ಒಂದೇ ದಿನ 15 ಕೋಟಿ ರೂ. ಗಳಿಕೆ

    ಕಾಂತಾರ ದಾಖಲೆ : ಶನಿವಾರ ಒಂದೇ ದಿನ 15 ಕೋಟಿ ರೂ. ಗಳಿಕೆ

    ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ (Kantara) ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.

    ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್‌ಗೆ ಬಿಗ್ ಟ್ವಿಸ್ಟ್

    ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

    ‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.


    Live Tv

    [brid partner=56869869 player=32851 video=960834 autoplay=true]

  • ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ರಿಪೋರ್ಟ್ : ಪಕ್ಕಾ ಲೆಕ್ಕಾಚಾರ

    ವಿಕ್ರಾಂತ್ ರೋಣ ಬಾಕ್ಸ್ ಆಫೀಸ್ ರಿಪೋರ್ಟ್ : ಪಕ್ಕಾ ಲೆಕ್ಕಾಚಾರ

    ನಿನ್ನೆಯಷ್ಟೇ ವಿಶ್ವದಾದ್ಯಂತ ಬಿಡುಗಡೆ ಆಗಿರುವ ಸುದೀಪ್ ನಟನೆಯ ‘ವಿಕ್ರಾಂತ್ ರೋಣ ‘ ಸಿನಿಮಾದ ಬಾಕ್ಸ್ ಆಫೀಸ್ ರಿಪೋರ್ಟ್ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ದೇಶಾದ್ಯಂತ ಒಳ್ಳೆಯ ಓಪನಿಂಗ್ ಪಡೆದಿರುವ ಸಿನಿಮಾವನ್ನು ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಅದರಲ್ಲೂ ಹಣ ಗಳಿಕೆಯ ಲೆಕ್ಕಾಚಾರಗಳು ರಾತ್ರಿಯಿಂದಲೇ ಶುರುವಾಗಿದ್ದು, ಬಾಕ್ಸ್ ಆಫೀಸಿನಲ್ಲಿ ಗೆಲುವಿನ ದಾಖಲೆಯನ್ನು ಚಿತ್ರ ಬರೆದಿದೆ.

    ಕರ್ನಾಟಕವೊಂದರಲ್ಲೇ 2500ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಪ್ರದರ್ಶನ ಕಂಡಿದೆ. ಬೆಳಗ್ಗೆ 5 ಗಂಟೆಯಿಂದಲೇ ಕೆಲವು ಕಡೆ ಶೋಗಳು ಆರಂಭವಾಗಿವೆ. ಹಾಗಾಗಿ ಕರ್ನಾಟಕವೊಂದರಲ್ಲೇ ಅಂದಾಜು 20 ಕೋಟಿ ರೂಪಾಯಿ ಹರಿದು ಬಂದಿದೆ ಎನ್ನಲಾಗುತ್ತಿದೆ. ಮೊದಲ ದಿನ ಬಹುತೇಕ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿವೆ. ಇದನ್ನೂ ಓದಿ:ʻರಶ್ಮಿಕಾ ನನ್ನ ಡಾರ್ಲಿಂಗ್ʼ ಎಂದ ವಿಜಯ್ ದೇವರಕೊಂಡ

    ಬಾಲಿವುಡ್ ನಲ್ಲೂ ಈ ಸಿನಿಮಾ ಹಿಂದೆ ಬಿದ್ದಿಲ್ಲ. ಈಗಾಗಲೇ ರಿಲೀಸ್ ಆಗಿರುವ ಹಿಂದಿ ಸಿನಿಮಾಗಳ ಲೆಕ್ಕಾಚಾರವನ್ನು ಉಲ್ಟಾ ಮಾಡಿ ಚಿತ್ರ ಮುನ್ನುಗ್ಗುತ್ತಿದೆ. ಬಾಲಿವುಡ್ ನಲ್ಲಿ ಸಾವಿರಾರು ಸ್ಕ್ರೀನ್ ಗಳಲ್ಲಿ ಈ ಚಿತ್ರ ರಿಲೀಸ್ ಆಗಿದೆ. ಹಾಗಾಗಿ ಅಂದಾಜು 10 ಕೋಟಿ ಹಣ ಹರಿದು ಬಂದಿದೆ ಎನ್ನುವುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಸದ್ಯ ಬಿಡುಗಡೆಯಾಗಿರುವ ಬೇರೆ ಸಿನಿಮಾಗಳಿಗೆ ಹೋಲಿಸಿದರೆ, ವಿಕ್ರಾಂತ್ ರೋಣ ಹೆಚ್ಚು ದುಡ್ಡು ಮಾಡಿದೆ.

    ಆಂಧ್ರ ಮತ್ತು ತೆಲಂಗಾಣದಲ್ಲಿ ಹೆಚ್ಚಿನ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ರಿಲೀಸ ಆಗಿತ್ತು. ಅಲ್ಲಿಯೂ ಕೂಡ ಅಂದಾಜು 8 ಕೋಟಿಗೂ ಅಧಿಕ ಹಣ ಬಂದಿದೆಯಂತೆ. ಈ ಸಿನಿಮಾ ರಂಗದಲ್ಲಿ ಟಿಕೆಟ್ ದರ ಕಡಿಮೆ ಇರುವುದರಿಂದ, ಹಣದ ಗಳಿಕೆ ಕಡಿಮೆಯಾಗಿ ಕಾಣುತ್ತಿದೆ. ಆದರೆ, ಒಂದೊಳ್ಳೆ ಕಲೆಕ್ಷನ್ ಎಂದು ಹೇಳಲಾಗುತ್ತಿದೆ. ತಮಿಳು ಸಿನಿಮಾ ರಂಗದಿಂದಲೂ ಅಂದಾಜು 2 ಕೋಟಿ ಹಣ ಬಂದಿದೆ ಎನ್ನುವ ಲೆಕ್ಕಾಚಾರ ಸಿಗುತ್ತಿದೆ. 27 ದೇಶಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಅಷ್ಟೂ ದೇಶಗಳಿಂದ ಮೊದಲ ದಿನದ ಗಳಿಕೆ 2 ಕೋಟಿ ಎಂದು ಹೇಳಲಾಗುತ್ತಿದೆ. ವೀಕೆಂಡ್ ನಲ್ಲಿ ಹೆಚ್ಚಿನ ಪ್ರಮಾಣದ ಹಣವನ್ನು ನಿರೀಕ್ಷೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]