Tag: earthquake

  • ವಿಜಯಪುರದಲ್ಲಿ ಸರಣಿ ಭೂಕಂಪನ – 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

    ವಿಜಯಪುರದಲ್ಲಿ ಸರಣಿ ಭೂಕಂಪನ – 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ

    ವಿಜಯಪುರ: ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.

    ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ ಬಳಿಕ ಬುಧವಾರ (ಅ.29) ಬೆಳಿಗ್ಗೆ 5:30ರ ಸುಮಾರಿಗೆ ಭೂಮಿ ಕಂಪಿಸಿದೆ. ಸಿಸಿಟಿವಿ ದೃಶ್ಯದಲ್ಲಿಯೂ ಭೂಕಂಪನದ ತೀವ್ರತೆ ದಾಖಲಾಗಿದೆ.ಇದನ್ನೂ ಓದಿ: ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

    3.0 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸರಣಿ ಭೂಕಂಪನದಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

  • ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳು ನೆಲಸಮ

    ಪಶ್ಚಿಮ ಟರ್ಕಿಯಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಕಟ್ಟಡಗಳು ನೆಲಸಮ

    ಅಂಕಾರಾ: ಪಶ್ಚಿಮ ಟರ್ಕಿಯ (Turkey) ಬಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪರಿಣಾಮ ಕಟ್ಟಡಗಳು ನೆಲಸಮಗೊಂಡಿವೆ.

    ಸೋಮವಾರ (ಅ.27) ಪಶ್ಚಿಮ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದಿಂದಾಗಿ ಮೂರು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ಭಯದಿಂದ ಮನೆಯಿಂದಾಚೆ ಓಡಿಹೋಗಿದ್ದಾರೆ. ಕಳೆದ ಬಾರಿ ಸಂಭವಿಸಿದ್ದ ಭೂಕಂಪದಿಂದಾಗಿ ದುರ್ಬಲಗೊಂಡಿದ್ದ ಮೂರು ಕಟ್ಟಡಗಳು ಹಾಗೂ ಎರಡು ಅಂತಸ್ತಿನ ಅಂಗಡಿ ನೆಲಸಮಗೊಂಡಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ:ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಬಾಲಿಕೇಸಿರ್ ಪ್ರಾಂತ್ಯದ ಸಿಂದಿರ್ಗಿ ಪಟ್ಟಣದಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಸ್ಥಳೀಯ ಸಮಯ ರಾತ್ರಿ 10:48ರ ಸುಮಾರಿಗೆ ಸುಮಾರು 6 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

    ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಇಸ್ತಾನ್‌ಬುಲ್, ಬುರ್ಸಾ, ಮನಿಸಾ, ಇಜ್ಮಿರ್ ಸೇರಿದಂತೆ ಹತ್ತಿರದ ಪ್ರಾಂತ್ಯಗಳಲ್ಲಿ ಭೂಮಿ ಕಂಪಿಸಿದೆ.ಇದನ್ನೂ ಓದಿ: ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಕೇಸ್;‌ ಯುವತಿ, ಆಕೆಗೆ ನಿಶ್ಚಯವಾಗಿದ್ದ ವರ ಬಂಧನ

  • ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ | ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

    ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ ದಾಖಲಾಗಿದೆ.

    ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಿದ್ದು, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ, ಯರನಾಳ, ಹತ್ತರಕಿಹಾಳ, ನಂದ್ಯಾಳ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿಸಿದೆ.ಇದನ್ನೂ ಓದಿ: ವಿಜಯಪುರ | ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

    ಮನಗೂಳಿ ಪಟ್ಟಣದಲ್ಲಿ ಭೂಮಿಯಾಳದಿಂದ ಮೂರು ಬಾರಿ ಭಾರೀ ಶಬ್ದ ಕೇಳಿಸಿದ್ದು, 2.5 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದೆ. ಭಾರೀ ಶಬ್ದಕ್ಕೆ ಆತಂಕಗೊಂಡ ಜನರು ಮನೆಯಿಂದ ಓಡಿ ಹೊರಬಂದಿದ್ದಾರೆ.

    ಕಡಿಮೆ ತೀವ್ರತೆಯ ಭೂಕಂಪನ ಸಂಭವಿಸಿದೆ. ಹೀಗಾಗಿ ಜನರು ಭಯಪಡಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.ಇದನ್ನೂ ಓದಿ: BBK 12 | ಈ ಅವಮಾನ ಯಾವತ್ತೂ ಮರೆಯೋಕಾಗಲ್ಲ; ದೊಡ್ಮನೆಯಲ್ಲಿ ಗಳಗಳನೆ ಅತ್ತ ಅಶ್ವಿನಿ ಗೌಡ

  • ಪಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ – ಮೂರು ದಿನಗಳಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

    ಪಾಕ್‌ನಲ್ಲಿ 4.7 ತೀವ್ರತೆಯ ಭೂಕಂಪ – ಮೂರು ದಿನಗಳಲ್ಲಿ ಮೂರನೇ ಬಾರಿ ಕಂಪಿಸಿದ ಭೂಮಿ

    ಇಸ್ಲಾಮಾಬಾದ್: ವಾರಾಂತ್ಯದಲ್ಲಿ ಸಂಭವಿಸಿದ್ದ ಎರಡು ಭೂಕಂಪನದ ಬಳಿಕ ಇದೀಗ ಮೂರನೇ ಬಾರಿಗೆ ಭೂಮಿ ಕಂಪಿಸಿದೆ. ಸೋಮವಾರ (ಅ.20) ಪಾಕಿಸ್ತಾನದಲ್ಲಿ (Pakistan) 10 ಕಿ.ಮೀ ಆಳದಲ್ಲಿ 4.7 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ.

    ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಅ.18 ಹಾಗೂ ಅ.19ರಂದು 4.0 ತೀವ್ರತೆಯಲ್ಲಿ ಭೂಮಿ ಕಂಪಿಸಿದ ಬಳಿಕ ಸೋಮವಾರ 4.7 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಬೆಳಗ್ಗೆ 11:12ರ ಸುಮಾರಿಗೆ ಭೂಮಿ ಕಂಪಿಸಿದ್ದು, ಈ ರೀತಿಯ ಭೂಕಂಪಗಳು ಹೆಚ್ಚು ಅಪಾಯಕಾರಿ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು – 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಆರ್‌ಜೆಡಿ

    ಈ ಭೂಕಂಪನದಿಂದಾಗಿ ಪಂಜಾಬ್‌ನ ಡೇರಾ ಘಾಜಿ ಖಾನ್ ಸುತ್ತಮುತ್ತಿನ ಪ್ರದೇಶದ ಮೇಲೆ ಪರಿಣಾಮ ಬೀರಿದೆ.

    ಪಾಕಿಸ್ತಾನವು ವಿಶ್ವದ ಅತ್ಯಂತ ಭೂಕಂಪನಶೀಲ ದೇಶಗಳಲ್ಲಿ ಒಂದಾಗಿದೆ. ಬಲೂಚಿಸ್ತಾನ್, ಖೈಬರ್ ಪಖ್ತುನ್ಖ್ವಾ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್‌ನಂತಹ ಪ್ರಾಂತ್ಯಗಳು ಯುರೇಷಿಯನ್ ಪ್ಲೇಟ್‌ನ ದಕ್ಷಿಣ ಅಂಚಿನಲ್ಲಿದ್ದರೆ, ಸಿಂಧ್ ಮತ್ತು ಪಂಜಾಬ್ ಭಾರತೀಯ ಪ್ಲೇಟ್‌ನ ವಾಯುವ್ಯ ಅಂಚಿನಲ್ಲಿದ್ದು, ಆಗಾಗ್ಗೆ ಭೂಕಂಪಕ್ಕೆ ಕಾರಣವಾಗುತ್ತದೆ.

    ಅರೇಬಿಯನ್ ಮತ್ತು ಯುರೇಷಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ನಡುವಿನ ಸಕ್ರಿಯ ಗಡಿಯ ಬಳಿ ಇರುವ ಬಲೂಚಿಸ್ತಾನವು, 1945ರ ವಿನಾಶಕಾರಿ 8.1 ತೀವ್ರತೆಯ ಭೂಕಂಪ ಸೇರಿದಂತೆ ಬಲವಾದ ಭೂಕಂಪಗಳ ದೀರ್ಘ ಇತಿಹಾಸವನ್ನು ಹೊಂದಿದೆ.ಇದನ್ನೂ ಓದಿ: ದೀಪಾವಳಿ ಗಿಫ್ಟ್‌ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

  • ವಿಜಯಪುರದ ಹಲವೆಡೆ ಭೂಕಂಪನ – ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

    ವಿಜಯಪುರದ ಹಲವೆಡೆ ಭೂಕಂಪನ – ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನ

    ವಿಜಯಪುರ: ತಿಕೋಟ (Tikota) ಹಾಗೂ ವಿಜಯಪುರ (Vijayapura) ತಾಲೂಕಿನ ಹಲವೆಡೆ ಭೂಕಂಪನದ (Earthquake) ಅನುಭವವಾಗಿದೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.

    ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವ ಆಗಿದೆ. ಇದನ್ನೂ ಓದಿ: ಕೊಡಗಿನ ಹಲವೆಡೆ ಭೂಕಂಪನ – ಬೆಚ್ಚಿದ ಜನ

    ಭೂಕಂಪನ ಆ್ಯಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ ಮೇಲೆ ಇಂತಹ ಅನುಭವ ಆಗುತ್ತಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ.

    ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಕೂಡ ಸರಣಿ ಭೂಕಂಪನ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವ ಆಗಿ ಹೆಚ್ವಿನ ಆತಂಕ ಮೂಡಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಆಗಾಗ್ಗೆ ಭೂಕಂಪನಕ್ಕೆ ಕಾರಣವೇನು?

  • ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – ಸಂಕಷ್ಟಕ್ಕೆ ಸಿಲುಕಿದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿ

    ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – ಸಂಕಷ್ಟಕ್ಕೆ ಸಿಲುಕಿದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿ

    ಚಿಕ್ಕಮಗಳೂರು: ಫಿಲಿಪಿನ್ಸ್‌ನಲ್ಲಿ (Philippines) ಪ್ರಬಲ ಭೂಕಂಪ (Earthquake) ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ. ಇದರಿಂದಾಗಿ ಅಲ್ಲಿಗೆ ಮೆಡಿಕಲ್ ಕೋರ್ಸ್ ಓದಲು ತೆರಳಿದ್ದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿಯೊಬ್ಬರು (Student) ಸಂಕಷ್ಟಕ್ಕೆ ಸಿಲುಕಿದ್ದಾರೆ.

    ಚಿಕ್ಕಮಗಳೂರು (Chikkamagaluru) ನಗರದ ಸತ್ಯಪಾಲ್ ಅವರ ಮಗಳು ಐಶ್ವರ್ಯ ಮೆಡಿಕಲ್ ಕೋರ್ಸ್ ಓದಲು ಫಿಲಿಪಿನ್ಸ್‌ಗೆ ತೆರಳಿದ್ದರು. ಇದೀಗ ಸಿಬುನಗರದಲ್ಲಿ ಅವರು ಸಿಲುಕಿದ್ದಾರೆ. ಭಾರತಕ್ಕೆ ವಾಪಸ್ ಆಗಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಅವರು ಐದು ವರ್ಷದ ಕೋರ್ಸ್ ಮುಗಿಸಿದ್ದರು. ಇನ್ನೇನೂ ಕೆಲವೇ ದಿನಗಳಲ್ಲಿ ಊರಿಗೆ ವಾಪಸ್‌ ಆಗುವವರಿದ್ದರು ಎಂದು ತಿಳಿದುಬಂದಿದೆ.‌ ಇದನ್ನೂ ಓದಿ: ನ್ಯೂಯಾರ್ಕ್‌ ಏರ್‌ಪೋರ್ಟ್‌ನಲ್ಲಿ ಎರಡು ವಿಮಾನಗಳ ಡಿಕ್ಕಿ – ವೀಡಿಯೋ ವೈರಲ್‌

    ಮಗಳನ್ನ ವಾಪಸ್ ಕರೆಸಿಕೊಳ್ಳಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ. ಇನ್ನೂ ಹಲವು ಭಾರತೀಯ ವಿದ್ಯಾರ್ಥಿಗಳು ಭೂಕಂಪದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಊಟ, ತಿಂಡಿ, ನೀರು ಯಾವುದೂ ಸಿಗದೇ ಪರದಾಡುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು

    ಐಶ್ಚರ್ಯ ಮೆಡಿಕಲ್ ಓದುತ್ತಿರುವ ಕಾಲೇಜಿನಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಬೇರೆ ರಾಜ್ಯದ ಸುಮಾರು 50-60 ವಿದ್ಯಾರ್ಥಿಗಳು ಓದುತ್ತಿದ್ದಾರೆ ಎಂದು ತಿಳಿದುಬಂದಿದೆ.

  • ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ

    ರಷ್ಯಾದ ಕರಾವಳಿಯಲ್ಲಿ ಮತ್ತೆ ಪ್ರಬಲ ಭೂಕಂಪ – ಸುನಾಮಿ ಆತಂಕ

    ಮಾಸ್ಕೋ: ರಷ್ಯಾದ ಕರಾವಳಿಯಲ್ಲಿ (Russian East Coast) ಶನಿವಾರ (ಇಂದು) 7.4 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಹಾಗೂ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ದೃಢಪಡಿಸಿದೆ.

    ಒಂದು ತಿಂಗಳ ಹಿಂದೆಯಷ್ಟೇ 8.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿ, ಸುನಾಮಿಯೂ (Tsunami) ಅಪ್ಪಳಿಸಿತ್ತು. ಇದೀಗ ಮತ್ತೆ ಪ್ರಬಲ ಭೂಕಂಪ ಸಂಭವಿಸಿತ್ತು. ಸುನಾಮಿ ಆತಂಕ ಉಂಟಾಗಿದೆ.

    ರಷ್ಯಾದ ಕಮ್ಚಟ್ಕಾ ಪ್ರದೇಶದ ಪೂರ್ವ ಕರಾವಳಿಯ ಬಳಿ ಭೂಕಂಪ ಸಂಭವಿಸಿದೆ. 10 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ

    ತಕ್ಷಣಕ್ಕೆ ಸಾವು ನೋವಿನ ವರದಿಗಳು ಕಂಡುಬಂದಿಲ್ಲ. ಸುನಾಮಿ ಆತಂಕ ಎದುರಾಗಿದ್ದು, ಅಧಿಕಾರಿಗಳು ತಕ್ಷಣದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಸುನಾಮಿ ಎಂದರೇನು? ಭೂಕಂಪಕ್ಕೂ ಇದಕ್ಕೂ ಏನು ಸಂಬಂಧ?

  • ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪ – ಆತಂಕ ಬೇಡ ಎಂದ ಪ್ರಿಯಾಂಕ್ ಖರ್ಗೆ

    ಚಿಂಚನಸೂರು ಗ್ರಾಮದ ಸುತ್ತಮುತ್ತ ಲಘು ಭೂಕಂಪ – ಆತಂಕ ಬೇಡ ಎಂದ ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಕಲಬುರಗಿ (Kalaburagi) ಜಿಲ್ಲೆಯ ಆಳಂದ (Alanda) ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17ರ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ.

    ಘಟನೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು, ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರು, ಬೈಕ್‌ ಮುಖಾಮುಖಿ ಡಿಕ್ಕಿ – ಮದುವೆ ನಿಶ್ಚಯವಾಗಿದ್ದ ಜೋಡಿ ದುರ್ಮರಣ

    ಭೂಕಂಪನ ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

  • ಅಫ್ಘಾನ್ ಭೂಕಂಪ – ಮೃತರ ಸಂಖ್ಯೆ 1,411ಕ್ಕೆ ಏರಿಕೆ, 3000 ಮಂದಿಗೆ ಗಾಯ

    ಅಫ್ಘಾನ್ ಭೂಕಂಪ – ಮೃತರ ಸಂಖ್ಯೆ 1,411ಕ್ಕೆ ಏರಿಕೆ, 3000 ಮಂದಿಗೆ ಗಾಯ

    ಕಾಬೂಲ್‌: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದ (Earthquake) 1,411ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 3,124 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಭಾನುವಾರ ತಡರಾತ್ರಿ ಭೂಕಂಪ ಸಂಭವಿಸಿತ್ತು. ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ತೀವ್ರ ಹಾನಿಗೊಳಗಾದ ಕುನಾರ್ ಪ್ರಾಂತ್ಯದಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು – ನೆರವಿಗೆ ನಿಂತ ಭಾರತ; 15 ಟನ್‌ ಆಹಾರ ಸಾಮಗ್ರಿ ರವಾನೆ

    ಕುನಾರ್‌ನಲ್ಲಿ ನೆಲಸಮವಾದ ಮನೆಗಳ ಅವಶೇಷಗಳಲ್ಲಿ ಬದುಕುಳಿದವರಿಗಾಗಿ ರಕ್ಷಣಾ ಕಾರ್ಯಕರ್ತರು ಮಂಗಳವಾರವೂ ಹುಡುಕಾಟ ನಡೆಸಿದ್ದಾರೆ. ದೂರದ ಹಳ್ಳಿಗಳಲ್ಲಿ ಗಾಯಗೊಂಡವರನ್ನು ಸ್ಥಳಾಂತರಿಸುವ ಕೆಲಸ ಇನ್ನೂ ನಡೆಯುತ್ತಿದೆ. ಸಾರ್ವಜನಿಕರು ಸಹ ಬರಿ ಕೈಯಲ್ಲೇ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ಜೈಶಂಕರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.

    ಭಾರತ ಇಂದು ಕಾಬೂಲ್‌ನಲ್ಲಿ 1000 ಕುಟುಂಬ ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್‌ನಿಂದ ಕುನಾರ್‌ಗೆ ಸಾಗಿಸುತ್ತಿದೆ ಎಂದು ಜೈಶಂಕರ್‌ ತಿಳಿಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

  • ಅಫ್ಘಾನಿಸ್ತಾನ ಭೂಕಂಪ – ಸಾವಿನ ಸಂಖ್ಯೆ 800ಕ್ಕೆ ಏರಿಕೆ: 2000ಕ್ಕೂ ಹೆಚ್ಚು ಜನರಿಗೆ ಗಾಯ

    ಅಫ್ಘಾನಿಸ್ತಾನ ಭೂಕಂಪ – ಸಾವಿನ ಸಂಖ್ಯೆ 800ಕ್ಕೆ ಏರಿಕೆ: 2000ಕ್ಕೂ ಹೆಚ್ಚು ಜನರಿಗೆ ಗಾಯ

    -ಮಾನವೀಯ ದೃಷ್ಟಿಯಿಂದ ಸಹಾಯ ಮಾಡಲು ಸಿದ್ಧ ಎಂದ ಮೋದಿ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಸಂಭವಿಸಿದ 6.0 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಈವರೆಗೆ 800 ಮಂದಿ ಬಲಿಯಾಗಿದ್ದು, 2000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

    ಭಾನುವಾರ ಮಧ್ಯರಾತ್ರಿ (ಆ.31) ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿ.ಮೀ ದೂರದಲ್ಲಿ 6.0 ತೀವ್ರತೆಯ ಭೂಕಂಪ ದಾಖಲಾಗಿದೆ. ಪೂರ್ವ ಅಫ್ಘಾನಿಸ್ತಾನದಾದ್ಯಂತ ಮೊದಲು ಭೂಕಂಪ ಸಂಭವಿಸಿದ ನಂತರ 30 ನಿಮಿಷಗಳ ಅವಧಿಯಲ್ಲಿಯೇ ಮತ್ತೆ ಮೂರರಿಂದ ನಾಲ್ಕು ಕಂಪನಗಳು ಸಂಭವಿಸಿವೆ. ಅವುಗಳ ತೀವ್ರತೆ 4 ರಿಂದ 5ರವರೆಗೆ ಇತ್ತು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ – 622 ಮಂದಿ ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

    ಈ ಕುರಿತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ಪ್ರಕಾರ, ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿ 34.50ಓ ಅಕ್ಷಾಂಶ ಮತ್ತು 70.81ಇ ರೇಖಾಂಶದಲ್ಲಿದೆ ಎಂದು ತಿಳಿಸಿದೆ.

    ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಗ್ರಾಮಗಳು ಸಂಪೂರ್ಣವಾಗಿ ನೆಲಸಮವಾಗಿದ್ದು, ನುರ್ಗಲ್, ಚಾವ್ಕೇ ಮತ್ತು ವಾಟಪುರ್ ಜಿಲ್ಲೆಗಳಲ್ಲಿ ತೀವ್ರ ಹಾನಿಯಾಗಿದೆ. ಜೊತೆಗೆ ಹಲವರು ಮನೆಯ ಛಾವಣಿ ಅಡಿಯಲ್ಲಿಯೇ ಸಿಲುಕಿ ಸಾವನ್ನಪ್ಪಿದ್ದಾರೆ. ಸದ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರದೇಶದ ಗಡಿಯಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ. ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿಯೂ ಭೂಕಂಪದ ಅನುಭವವಾಗಿದೆ. ದೆಹಲಿಯ ಎನ್‌ಸಿಆರ್ ಮತ್ತು ಇತರ ನಗರಗಳ ನಿವಾಸಿಗಳು ಕಂಪನದ ಅನುಭವವಾಗಿ ಭಯದಿಂದ ಮನೆಯಿಂದ ಹೊರಗೆ ಓಡಿದ್ದಾರೆ ಎಂದು ವರದಿಯಾಗಿದೆ.

    ಇನ್ನೂ ಈ ಸಂಬಂಧ ಪ್ರಧಾನಿ ಮೋದಿ ಅಫ್ಘಾನಿಸ್ತಾನಕ್ಕೆ ಅಗತ್ಯ ನೆರವು ಕೊಡ್ತೇವೆ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಇಂತಹ ಸಮಯದಲ್ಲಿ ಮೃತರ ಕುಟುಂಬಸ್ಥರಿಗಾಗಿ ನಾವು ಪಾರ್ಥಿಸುತ್ತೇವೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ. ಮಾನವೀಯ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮಾಡಲು ಸಿದ್ಧವಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ 15 ಟನ್ ಪರಿಹಾರ ಸಾಮಾಗ್ರಿ ತೆರಳಿದೆ.ಇದನ್ನೂ ಓದಿ: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ