Tag: ECI

  • ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    – ಮೋದಿ ಛತ್ ಪೂಜೆಗಾಗಿ ದೆಹಲಿಯಲ್ಲಿ ನಕಲಿ ಯಮುನೆಯ ಸೃಷ್ಟಿ ಮಾಡಿದ್ರು
    – ಚುನಾವಣಾ ಆಯೋಗದೊಂದಿಗೆ ಬಿಜೆಪಿ ಒಳಒಪ್ಪಂದ; ರಾಗಾ ಆರೋಪ

    ನವದೆಹಲಿ: ಮೋದಿ (Narendra Modi) ಮತಕ್ಕಾಗಿ ಡ್ಯಾನ್ಸು, ಡ್ರಾಮಾ ಮಾಡ್ತಾರೆ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ ಅಂತ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಲೇವಡಿ ಮಾಡಿದರು.

    ಬಿಹಾರ ಚುನಾವಣೆಗೆ (Bihar Elections 2025) ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಎಲ್ಲಾ ಪಕ್ಷಗಳು ಬಿರುಸಿನ ಪ್ರವಾರ ಆರಂಭಿಸಿವೆ. ಈ ನಿಟ್ಟಿನಲ್ಲಿ ಮಹಾಘಟಬಂಧನ್‌ ಮೈತ್ರಿಕೂಟದ ವತಿಯಿಂದ ಇಂದು 2 ಕಡೆ ಆಯೋಜಿಸಿದ್ದ ರ‍್ಯಾಲಿಯಲ್ಲಿ (Bihar Rally) ನಾಯಕ ರಾಹುಲ್‌ ಗಾಂಧಿ ಪಾಲ್ಗೊಂಡು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಮುಜಾಫರ್‌ಪುರದಲ್ಲಿ ನಡೆದ ಜಂಟಿ ರ‍್ಯಾಲಿಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ವಿರುದ್ಧ ಲೇವಡಿ ಮಾಡಿದ್ದಾರೆ. ಮೋದಿ ಅವರು ಚುನಾವಣೆ ಗೆಲ್ಲಲು ಏನ್‌ ಬೇಕಾದ್ರೂ ಮಾಡ್ತಾರೆ ಅಂತ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಮೋದಿಗೆ ನಿಮ್ಮ ಮತ ಬೇಕಾಗಿದೆ, ಅದಕ್ಕಾಗಿ ನೀವು ಸ್ಟೇಜ್‌ ಮೇಲೆ ಕುಣೀರಿ ಅಂದ್ರೂ ಕುಣೀತಾರೆ. ಭರತನಾಟ್ಯ ಕೂಡ ಮಾಡ್ತಾರೆ ಅಂತ ತಿವಿದರು. ಇದನ್ನೂ ಓದಿ: ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    ಬಿಹಾರದ ಅತಿ ದೊಡ್ಡ ಹಬ್ಬವಾದ ಛತ್ ಪೂಜೆಯನ್ನು ಉಲ್ಲೇಖಿಸಿ, ದೆಹಲಿಯಲ್ಲಿ ಮಾಲಿನ್ಯಗೊಂಡ ಯಮುನಾ ನದಿಯಲ್ಲಿ ಭಕ್ತರು ಪೂಜೆ ಮಾಡುತ್ತಿದ್ದಾಗ, ಪ್ರಧಾನಿ ಅವರು ವಿಶೇಷವಾಗಿ ನಿರ್ಮಿಸಿದ ಕೊಳದಲ್ಲಿ ಸ್ನಾನ ಮಾಡಿದ್ದಾರೆ. ನರೇಂದ್ರ ಮೋದಿ ತಮ್ಮ ಈಜುಕೊಳದಲ್ಲಿ ಸ್ನಾನ ಮಾಡಲು ಹೋದರು. ಯಮುನಾ ನದಿಯೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಛತ್ ಪೂಜೆಯೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ. ಅವರಿಗೆ ಬೇಕಾಗಿರುವುದು ನಿಮ್ಮ ಮತ ಮಾತ್ರ. ಅದಕ್ಕಾಗಿ ದೆಹಲಿಯಲ್ಲಿ ನಕಲಿ ಯಮುನೆಯ ಸೃಷ್ಟಿ ಮಾಡಿದ್ರು ಅಂತ ಆರೋಪ ಮಾಡಿದ್ರು.

    ಚುನಾವಣಾ ಆಯೋಗದೊಂದಿಗೆ ಒಳಒಪ್ಪಂದ:
    ಮುಂದುವರಿದು… ಬಿಜೆಪಿ ಮತದಾರರಿಗೆ ವಂಚನೆ ಮಾಡಲು ಹಾಗೂ ರಾಜ್ಯ ಚುನಾವಣೆಯ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಚುನಾವಣಾ ಯೋಗದೊಂದಿಗೆ ಒಳಒಪ್ಪಂದ ಮಾಡಿಕೊಂಡಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ಮತಗಳನ್ನ ಕದ್ದರು, ಹರಿಯಾಣದಲ್ಲಿ ಮತ ಕದ್ದರು ಈಗ ಬಿಹಾರದಲ್ಲಿ ಮತಗಳನ್ನ ಕದಿಯಲು ತಮ್ಮ ಕೈಲಾದಷ್ಟು ಪ್ರಯತ್ನ ಪಡ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

  • ದೇಶಾದ್ಯಂತ SIR – ಮೊದಲ ಹಂತದ 10-15 ರಾಜ್ಯಗಳ ವೇಳಾಪಟ್ಟಿ ಇಂದು ಪ್ರಕಟ

    ದೇಶಾದ್ಯಂತ SIR – ಮೊದಲ ಹಂತದ 10-15 ರಾಜ್ಯಗಳ ವೇಳಾಪಟ್ಟಿ ಇಂದು ಪ್ರಕಟ

    ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ (Election Commission Of India) ಸಜ್ಜಾಗಿದೆ. ಈ ನಿಟ್ಟಿನಲ್ಲಿ SIR ಕೈಗೊಳ್ಳುವ ಮೊದಲ 10-15 ರಾಜ್ಯಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ.

    ಇಂದು ಸಂಜೆ 4.45ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಹಂತಹಂತವಾಗಿ ಎಸ್‌ಐಆರ್‌ ನಡೆಸುವ ರಾಜ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಪರಿಷ್ಕರಣೆಯು 2026 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು (Assembly Elections 2026) ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಳ್ಳುವ ನಿರೀಕ್ಷೆಯಿದೆ.

    ಮುಂದಿನ ವಿಧಾನಸಭಾ ಚುನಾವಣೆಗಳು ಸಂಭವಿಸುತ್ತಿರುವ ಕೇರಳ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 10-15 ರಾಜ್ಯಗಳಲ್ಲಿ ಸರ್‌ ನಡೆಯಲಿದೆ. ಬಹುತೇಕ ರಾಜ್ಯಗಳಲ್ಲಿ 2002 ಮತ್ತು 2004ರ ನಡುವೆ SIR ನಡೆದಿತ್ತು.

    2026ರಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಹಾರ ಚುನಾವಣೆಗೂ ಮುನ್ನವೇ ಅಂದ್ರೆ ನವೆಂಬರ್‌ 1ರಿಂದಲೇ ಈ ಕಾರ್ಯ ಪ್ರಾರಂಭವಾಗುವ ನಿರೀಕ್ಷೆಯಿದೆ.

    ಬಂಗಾಳದಲ್ಲಿ ಮತಗಟ್ಟೆಗಳ ಸಂಖ್ಯೆ ಏರಿಕೆ ಸಾಧ್ಯತೆ
    ಬಂಗಾಳದಲ್ಲಿ ಪರಿಷ್ಕರಣೆ ವೇಳೆ ಬೂತ್-ಮಟ್ಟದ ಅಧಿಕಾರಿಗಳಿಗೆ (BLO) ಸಹಾಯ ಮಾಡಲು ಚುನಾವಣಾ ಆಯೋಗ ಸ್ವಯಂ ಸೇವಕರನ್ನ ನೇಮಕ ಮಾಡಲಿದೆ. ಸ್ವಯಂಸೇವಕರು, ಪ್ರಾಥಮಿಕವಾಗಿ ಸರ್ಕಾರಿ ನೌಕರರು, 1,200ಕ್ಕೂ ಹೆಚ್ಚು ಮತದಾರರನ್ನ ಹೊಂದಿರುವ ಮತದಾನ ಕೇಂದ್ರಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಾರೆ. ಅಲ್ಲದೇ ಪ್ರತಿ ಬೂತ್‌ಗೆ ಮತದಾರರ ಸಂಖ್ಯೆಯ ಮೇಲೆ ಮಿತಿ ಹೇರಿರುವುದರಿಂದ, ಪಶ್ಚಿಮ ಬಂಗಾಳದಲ್ಲಿ ಸುಮಾರು 14,000 ಮತಗಟ್ಟೆಗಳು ಹೆಚ್ಚಾಗಬಹುದು, ಒಟ್ಟು 80,000 ರಿಂದ ಸರಿಸುಮಾರು 94,000ಕ್ಕೆ ಮತಗಟ್ಟೆಗಳು ತಲುಪುವ ಸಾಧ್ಯತೆಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ತಮಿಳುನಾಡಿನಲ್ಲಿ ಶೀಘ್ರವೇ SIR- ಮದ್ರಾಸ್ ಹೈಕೋರ್ಟ್‌ಗೆ ಚುನಾವಣಾ ಆಯೋಗ ಮಾಹಿತಿ

    ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆ ಸಿದ್ಧತೆಯಾಗಿ ತಮಿಳುನಾಡಿನಲ್ಲಿ (Tamil Nadu) ಶೀಘ್ರದಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲಾಗುವುದು ಎಂದು ಚುನಾವಣಾ ಆಯೋಗ (Election Commission of India) ಮದ್ರಾಸ್ ಹೈಕೋರ್ಟ್‌ಗೆ (Madras High Court) ತಿಳಿಸಿದೆ. ಪರಿಷ್ಕರಣೆ ಪ್ರಕ್ರಿಯೆಯು ಮುಂದಿನ ವಾರ ಪ್ರಾರಂಭವಾಗುವ ಸಾಧ್ಯತೆ ಇದೆ.

    ಇದಲ್ಲದೆ, ಚುನಾವಣೆ ಎದುರಿಸುತ್ತಿರುವ ಇತರ ಹಲವಾರು ರಾಜ್ಯಗಳು ಸಹ ಬಿಹಾರದ ಮಾದರಿಯಲ್ಲಿ ಇದೇ ರೀತಿಯ ವ್ಯಾಯಾಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಚುನಾವಣಾ ಆಯೋಗ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರ ಪೀಠದ ಮುಂದೆ ತಿಳಿಸಿದೆ. ಇದನ್ನೂ ಓದಿ: ಸಿಎಂ ಅವ್ರೇ ನಿಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ, ಪ್ರತಿ ಇಲಾಖೆಯೂ ರೇಡ್‌ ಕಾರ್ಡ್‌ ಫಿಕ್ಸ್‌ ಮಾಡಿದೆ: ಮೋಹನ್ ದಾಸ್ ಪೈ

    ಎಐಎಡಿಎಂಕೆ ಮಾಜಿ ಶಾಸಕ ಬಿ. ಸತ್ಯನಾರಾಯಣನ್ ಅವರು ಟಿ.ನಗರ ವಿಧಾನಸಭಾ ಕ್ಷೇತ್ರದ 229 ಮತಗಟ್ಟೆಗಳಲ್ಲಿ ಸಂಪೂರ್ಣ ಮತ್ತು ಪಾರದರ್ಶಕ ಮರು ಪರಿಶೀಲನೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು. ಚೆನ್ನೈನ ಟಿ ನಗರ ಕ್ಷೇತ್ರದ ಅಧಿಕಾರಿಗಳು ಆಡಳಿತಾರೂಢ ಡಿಎಂಕೆಗೆ ಲಾಭ ಮಾಡಿಕೊಡಲು ಉದ್ದೇಶಪೂರ್ವಕವಾಗಿ ಸುಮಾರು 13,000 ಎಐಎಡಿಎಂಕೆ ಬೆಂಬಲಿಗರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಆಯೋಗ ಹೈಕೋರ್ಟ್‌ಗೆ ಈ ಮಾಹಿತಿ ನೀಡಿದೆ. ಇದನ್ನೂ ಓದಿ: FATF ಹೊಸ ಪಟ್ಟಿ ಬಿಡುಗಡೆ – ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ ಮತ್ತೆ ಕಪ್ಪುಪಟ್ಟಿಗೆ

  • ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ನವದೆಹಲಿ: ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ (Bihar Assembly Elections) ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.

    ನವೆಂಬರ್‌ 6ರ ಗುರುವಾರ ಮೊದಲ ಹಂತ, ನವೆಂಬರ್‌ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್‌ 14 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ತಿಳಿಸಿದ್ದಾರೆ.

    ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್‌ 10 ರಂದು ಗೆಜೆಟ್‌ ಅಧಿಸೂಚನೆ ಪ್ರಕಟವಾಗಲಿದೆ. ಅದೇ ರೀತಿ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್‌ 13ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ.

    ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರು ಇದ್ದಾರೆ. ಈ ಪೈಕಿ 3.92 ಕೋಟಿ ಪುರುಷ ಮತದಾರರು, 3.50 ಕೋಟಿ ಮಹಿಳಾ ಮತದಾರರು, 1,725 ತೃತೀಯಲಿಂಗಿ ಮತದಾರರಿದ್ದಾರೆ, 14.01 ಲಕ್ಷ ಫಸ್ಟ್‌ ಟೈಮ್‌ ವೋಟರ್ಸ್‌ ಇದ್ದಾರೆ. ಒಟ್ಟು 90,712 ಬೂತ್‌ಗಳನ್ನ ನಿರ್ಮಾಣ ಮಾಡಲಾಗಿದ್ದು, ನಗರದಲ್ಲಿ 13,911 ಹಾಗೂ ಗ್ರಾಮೀಣ ಭಾಗದಲ್ಲಿ 76,801 ಬೂತ್‌ಗಳಿರಲಿವೆ. ಎಲ್ಲಾ ಬೂತ್‌ಗಳಲ್ಲೂ ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ.

    ಒಟ್ಟಾರೆ 90,712 ಬೂತ್‌ ಮಟ್ಟದ ಅಧಿಕಾರಿಗಳು, 243 ಇಆರ್‌ಓ (ಮತದಾರರ ನೋಂದಣಾಧಿಕಾರಿ), 38 ಡಿಇಒ (ಜಿಲ್ಲಾ ಚುನಾವಣಾ ಅಧಿಕಾರಿ) ಬಳಿಕ ಮುಖ್ಯ ಚುನಾವಣಾ ಆಯುಕ್ತರು ಕರ್ತವ್ಯದಲ್ಲಿ ಇರಲಿದ್ದದಾರೆ. ಮತದಾರರಿಗೆ ಯಾವುದೇ ಗೊಂದಲಗಳಿದ್ದರೂ 1950 ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ (NDA) ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. 2024ರಲ್ಲಿ ಮತ್ತೆ ನಿತೀಶ್‌ ಕುಮಾರ್‌ ಮಹಾಘಟಬಂಧನ್ ಜೊತೆಗಿನ ಸಂಬಂಧ ಕಡಿದುಕೊಂಡು ಎನ್‌ಡಿಎ ಜೊತೆಗೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

    ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

    ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ (ECI) ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.

    ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು. ಈ ವೇಳೆ ಆಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಅಳಿಸಲು ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸಲ್ಲಿಸಿರುವ ಬಗ್ಗೆ ಆರೋಪ ಎತ್ತಿದ್ದರು. ಇದಕ್ಕೆ ಚುನಾವಣಾ ಆಯೋಗ ಸ್ಪಷ್ಟನೆಯನ್ನೂ ನೀಡಿತ್ತು. ಈ ಬೆನ್ನಲ್ಲೇ ವೋಟರ್‌ ಐಡಿ ದುರುಪಯೋಗ ತಡೆಯಲು ECINET ಪೋರ್ಟಲ್ ಮತ್ತು ಅಪ್ಲಿಕೇಶನ್‌ನಲ್ಲಿ ‘ಇ-ಸೈನ್’ (E-Sign) ಎಂಬ ಹೊಸ ವೈಶಿಷ್ಟ್ಯವನ್ನು ಪ್ರಾರಂಭಿಸಿದೆ.

    ʻಇ-ಸೈನ್‌ʼ ವ್ಯವಸ್ಥೆ ಅಡಿಯಲ್ಲಿ, ಮತದಾರರು ನೋಂದಣಿ ಅಥವಾ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸುವಾಗ ತಮ್ಮ ಆಧಾರ್‌ ಲಿಂಕ್‌ ಮಾಡಲಾದ ಮೊಬೈಲ್‌ ಸಂಖ್ಯೆಯನ್ನ ಬಳಸಿಕೊಂಡು ಪರಿಶೀಲಿಸಬೇಕಾಗುತ್ತದೆ. ಈ ಹಿಂದೆ ಅರ್ಜಿದಾರರು ಯಾವುದೇ ಪರಿಶೀಲನೆಯಿಲ್ಲದೇ ಫಾರ್ಮ್‌ಗಳನ್ನು ಸಲ್ಲಿಸಬಹುದಿತ್ತು, ಇದು ವೋಟರ್‌ ಐಡಿ ದುರುಯೋಗವಾಗುವ ಸಾಧ್ಯತೆಯಿತ್ತು. ಹಾಗಾಗಿ ಆಯೋಗ ಈ ವ್ಯವಸ್ಥೆ ಪ್ರಾರಂಭಿಸಿದೆ ಎಂದು ಆಯೋಗ ಹೇಳಿದೆ. ಇದನ್ನೂ ಓದಿ: ಕಾರುಗಳ ಬೆಲೆ ಭಾರೀ ಇಳಿಕೆ- ಯಾವ ಕಾರುಗಳ ಬೆಲೆ ಎಷ್ಟು ಇಳಿಕೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

    ಇ-ಸೈನ್‌ ಹೇಗೆ ಕೆಲಸ ಮಾಡುತ್ತೆ?
    ಹೊಸ ವ್ಯವಸ್ಥೆಯಲ್ಲಿ ಯಾವುದೇ ಒಬ್ಬ ವ್ಯಕ್ತಿ ECINET ಪೋರ್ಟಲ್‌ ಅಥವಾ ಅಪ್ಲಿಕೇಶನ್‌ನಲ್ಲಿ ಫಾರ್ಮ್‌-6 (ಹೊಸ ನೋಂದಣಿಗಾಗಿ), ಫಾರ್ಮ್-7 (ಹೆಸರು ಅಳಿಸುವಿಕೆಗಾಗಿ) ಅಥವಾ ಫಾರ್ಮ್-8 (ಹೆಸರು ಅಥವಾ ವಿಳಾಸ ತಿದ್ದುಪಡಿಗಾಗಿ) ಅನ್ನು ಭರ್ತಿ ಮಾಡಿದಾಗ ಇ-ಸೈನ್ ಮಾಡಬೇಕಾಗುತ್ತದೆ. ಅಂದ್ರೆ ಮತದಾರರ ಗುರುತಿನ ಚೀಟಿ ಮತ್ತು ಆಧಾರ್‌ನಲ್ಲಿರುವ ಹೆಸರು ಹೊಂದಿಕೆ ಆಗಿದೆಯೇ? ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್‌ ಆಗಿಯೇ ಎಂಬುದನ್ನೂ ಖಚಿತಪಡಿಸಿಕೊಳ್ಳಬೇಕಾಗುತ್ತದೆ. ನಂತರ ಅರ್ಜಿದಾರರನ್ನು ಬಾಹ್ಯ ಇ-ಸೈನ್ ಪೋರ್ಟಲ್‌ಗೆ ನಿರ್ದೇಶಿಸಲಾಗುತ್ತದೆ, ಅಲ್ಲಿ ತಮ್ಮ ಆಧಾರ್‌ ಸಂಖ್ಯೆ ನಮೂದಿಸಬೇಕಾಗುತ್ತದೆ. ಇದನ್ನೂ ಓದಿ: ಆಳಂದ ಫೈಲ್ಸ್‌ | ಆನ್‌ಲೈನ್‌ನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಇಂಚಿಚು ವಿವರ ನೀಡಿದ ಚುನಾವಣಾ ಆಯೋಗ 

    OTP ಕಡ್ಡಾಯ
    ಇಸೈನ್‌ ಪ್ರವೇಶಿಸಿ ಆಧಾರ್ ಸಂಖ್ಯೆ ನಮೂದಿಸಿದ ನಂತ್ರ, ಆಧಾರ್‌ಗೆ ಲಿಂಕ್ ಮಾಡಲಾದ ಫೋನ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. OTP ಅನ್ನು ನಮೂದಿಸಿ ಒಪ್ಪಿಗೆ ನೀಡಿದ ನಂತರವೇ ಪರಿಶೀಲನೆ ಪೂರ್ಣಗೊಳ್ಳುತ್ತದೆ. ನಂತರ ಅರ್ಜಿದಾರರನ್ನು ಫಾರ್ಮ್ ಸಲ್ಲಿಸಲು ECINET ಪೋರ್ಟಲ್‌ಗೆ ಹಿಂತಿರುಗಿಸಲಾಗುತ್ತದೆ. ಈ ಪ್ರಕ್ರಿಯೆಯು ನಕಲಿ ಅರ್ಜಿಗಳನ್ನು ತಡೆಯಲು ಅನುಕೂಲವಾಗುತ್ತದೆ.

    ಬದಲಾವಣೆ ಏಕೆ?
    ಕಾಂಗ್ರೆಸ್‌ ಹಿರಿಯ ನಾಯಕ ರಾಹುಲ್‌ ಗಾಂಧಿ ಇದೇ ಸೆಪ್ಟೆಂಬರ್‌ 8ರಂದು ಆಳಂದ ಕ್ಷೇತ್ರದಲ್ಲಿ ಆನ್‌ಲೈನ್‌ ಅರ್ಜಿಗಳ ಮೂಲಕ 6,000 ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

  • ಆಳಂದ ಫೈಲ್ಸ್ ಕೇಸ್ ತನಿಖೆಗೆ ಎಸ್‌ಐಟಿ ರಚನೆಗೆ ಕ್ಯಾಬಿನೆಟ್ ಒಲವು

    ಆಳಂದ ಫೈಲ್ಸ್ ಕೇಸ್ ತನಿಖೆಗೆ ಎಸ್‌ಐಟಿ ರಚನೆಗೆ ಕ್ಯಾಬಿನೆಟ್ ಒಲವು

    ಬೆಂಗಳೂರು: ಆಳಂದ ಫೈಲ್ಸ್ ಕೇಸ್ (Alanda Files Case) ತನಿಖೆಗೆ ಎಸ್ಐಟಿ (SIT) ರಚನೆಗೆ ಕ್ಯಾಬಿನೆಟ್ ಒಲವು ತೋರಿದೆ. ಸಿಐಡಿ ಮುಖ್ಯಸ್ಥ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಸಾಧ್ಯತೆ ಇದೆ. ಆಳಂದ ಫೈಲ್ಸ್ ಬಗ್ಗೆ ಕ್ಯಾಬಿನೆಟ್ ನಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಎಸ್‌ಐಟಿ ರಚನೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

    ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರ ವಿಚಾರವಾಗಿ ಸುಗ್ರೀವಾಜ್ಞೆ ಬೇಡ ಎಂದು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡೋಣ, ಈಗಿರುವ ಕಾನೂನಿನಲ್ಲೇ ಅವಕಾಶ ಇದೆ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲಿಂಗಾಯತರನ್ನು ತುಂಡು ತುಂಡು ಮಾಡಲು ಹೇಳಿದ್ಯಾರು- ಪೇಪರ್‌ ಎಸೆದು ಕ್ಯಾಬಿನೆಟ್‌ ಸಭೆಯಲ್ಲಿ ಎಂಬಿಪಿ ರೋಷಾವೇಶ

    ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾತನಾಡಿ, ಮತಪತ್ರ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವ ಅವಶ್ಯಕತೆ ಇದೆಯೋ ಇಲ್ಲವೋ ಎಂಬ ಬಗ್ಗೆ ಚರ್ಚೆ ನಡೆದಿದೆ. ಚುನಾವಣಾ ಆಯೋಗದ ಆಯುಕ್ತರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿಯವರು ಗಂಭೀರವಾದ ಆರೋಪ ಮಾಡಿದ್ದಾರೆ. ಅದರ ಸಂಬಂಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಚುನಾವಣಾ ಆಯೋಗ ಅಫಿಡವಿಟ್ ನೀಡಲು ಹೇಳುವುದು ಸರಿಯಲ್ಲ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕ್ಯಾಬಿನೆಟ್‌ ಸಭೆಯಲ್ಲಿ ಜಾತಿ ಜಟಾಪಟಿ – ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ

  • ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

    ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

    ಬೆಂಗಳೂರು: ಬಿಹಾರದ (Bihar) ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಯಲಿದೆ. ಅದರಂತೆ ರಾಜ್ಯದ ಎಲ್ಲ ಮತದಾರರು ಎಸ್‌ಐಆರ್‌ಗೆ ಒಳಪಡಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯ ಚುನಾವಣಾ ಆಯೋಗ (Karnataka Election Commission) ಮಾಹಿತಿ ನೀಡಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ನೋಟಿಫಿಕೇಷನ್ ಜಾರಿಯಾದ ತಕ್ಷಣ ರಾಜ್ಯದ ಎಲ್ಲಾ ಮತದಾರರು ʻಸರ್‌ʼ ಅಭಿಯಾನಕ್ಕೆ ಒಳಪಡಲಿದ್ದಾರೆ.

    ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿ (Voter List), ಮತಗಟ್ಟೆಗಳು ಬದಲಾಗಲಿವೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶ‌ನದಂತೆ ರಾಜ್ಯದಲ್ಲಿ ಎಸ್ ಐಆರ್‌ಗೆ ಸಿದ್ಧತೆ ಮಾಡಿಕೊಳ್ತಿರೋ ರಾಜ್ಯ ಚುನಾವಣಾ ಆಯೋಗ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ಪೂರ್ಣಗೊಂಡಿದೆ. ಅಧೀನ ಅಧಿಕಾರಿ ಮತ್ತು ಸಿಬ್ಬಂದಿಗೆ ಸೆಪ್ಟೆಂಬರ್ 25ರ ಒಳಗಡೆ ಪೂರ್ಣ ಆಗಲಿದೆ. 2025ರಲ್ಲಿ 5.40 ಕೋಟಿ ಮತದಾರರು ಮತದಾರರ ಪಟ್ಟಿಯಲ್ಲಿ ಇದ್ದಾರೆ. 2002 ರಲ್ಲಿ 3.40 ಕೋಟಿ ಮತದಾರರ ಪಟ್ಟಿಯಲ್ಲಿ ಇದ್ದವರು. 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆಗಿದ್ರೆ ಡಿಜಿಟಲ್ ಸ್ವರೂಪಕ್ಕೆ ತಂದಿಲ್ಲ. ಪ್ರಸ್ತುತ ʻಸರ್‌ʼ ಅಡಿ ಆದ್ರೆ ಡಿಜಿಟಲ್ ಸ್ವರೂಪಕ್ಕೆ ತರಲಿದ್ದೇವೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಮಾಹಿತಿ ನೀಡಿದ್ದಾರೆ.‌

    ನೋಟಿಫಿಕೇಷನ್ ಆದ ತಕ್ಷಣವೇ ʻಸರ್‌ʼ
    ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆ ಬಂದ ಬಳಿಕ ಎಸ್‌ಐಆರ್ ಪ್ರಕ್ರಿಯೆ ಶುರುವಾಗಲಿದೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ಎಸ್‌ಐಆರ್ ಪ್ರಕ್ರಿಯೆ ಯಾಕೆ ?
    ನಕಲಿ ಮತದಾನ ತಡೆಗಟ್ಟುವುದಕ್ಕೆ ಹಾಗೂ ಯಾರೊಬ್ಬರೂ ಮತದಾನ ಹಕ್ಕಿನಿಂದ ವಂಚಿತರಾಗಬಾರದು ಅನ್ನೋ ಉದ್ದೇಶದಿಂದ ಸರ್‌ ಅಭಿಯಾನ ನಡೆಸಲಾಗುತ್ತಿದೆ. ಬೂತ್ ಮಟ್ಟದಲ್ಲಿ, ಶಿಬಿರಗಳನ್ನ ಆಯೋಜನೆ ಮಾಡಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ನಡೆಯಲಿದೆ. ಇದನ್ನೂ ಓದಿ: ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ: ಚುನಾವಣಾ ಆಯೋಗ

    ಎಸ್‌ಐಆರ್ ಪ್ರಕ್ರಿಯೆ ಹೇಗಿರಲಿದೆ?
    1. ಬಿಎಲ್‌ಓಗಳು ಮನೆ ಮನೆಗೆ ಭೇಟಿ ಕೊಡ್ತಾರೆ.
    2. ಕ್ಯೂಆರ್‌ ಕೋಡ್ ಮಾದರಿಯ ಆಧಾರಿತ ಅರ್ಜಿ 2 ಪ್ರತಿಯಲ್ಲಿ ಮಾಹಿತಿ ಸಂಗ್ರಹ.
    3. ಅಧಿಕಾರಿ ಸಹಿ ಮಾಡಿದ ಒಂದು ಪ್ರತಿ ಮತದಾರರಿಗೆ ಸಲ್ಲಿಕೆ.
    4. ಮನೆಯಲ್ಲಿ ಯಾರೂ ಇಲ್ಲದಿದ್ದರೆ ಮೂರು ಭಾರಿ ಮನೆಗೆ ಭೇಟಿ ನೀಡಲಿದ್ದಾರೆ.
    5. ಸಂಪರ್ಕಕ್ಕಾಗಿ ‌ಪಕ್ಕದ ಮನೆಯವರ ಸಹಾಯ ಪಡೆಯಲಿದ್ದಾರೆ.

    ಮತದಾರರು ಏನು ಮಾಡಬೇಕು ?
    1. ಗುರುತಿನ ಚೀಟಿಯಲ್ಲಿ ಪೋಟೋ ಸರಿ ಇಲ್ಲದಿದ್ದರೆ ಸ್ಪಷ್ಟವಾದ ಫೋಟೋ ನೀಡಬೇಕು
    2. ಚುನಾವಣಾ ಆಯೋಗ ಕೇಳುವ ದಾಖಲೆಗಳನ್ನ ನೀಡಬೇಕು
    3. ಮನೆಯಲ್ಲಿ ಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು

    ʻಸರ್‌ʼ ಅಭಿಯಾನ ವೇಳೆ ಚುನಾವಣಾ ಆಯೋಗ ಕೈಗೊಳ್ಳುವ ಕ್ರಮಗಳೇನು?
    1. ಎರಡು ಕಡೆ ಹೆಸರು ಇದ್ದರೆ ಫೋಟೊ ಸ್ಕ್ಯಾನಿಂಗ್‌ ಸಿಸ್ಟಮ್‌ ಮೂಲಕ ಪತ್ತೆ ಹಚ್ಚಿ ಕ್ರಮ
    2. ಒಂದೇ ವ್ಯಕ್ತಿ ಎರಡು ಕಡೆ ಅರ್ಜಿ ಹಾಕಿದರೆ ಪ್ರಕರಣ ದಾಖಲು
    3. ಪರಿಷ್ಕರಣೆ ನಂತರವೂ ಹೆಸರು ಸೇರದಿದ್ದರೆ ಬಿಎಲ್‌ಒಗಳು ಸಹಿ ಮಾಡಿ ನೀಡಿರುವ ನಮೂನೆ ಮೂಲಕ ಪ್ರಶ್ನಿಸಬಹುದು

    ಪಕ್ಷಗಳ ಸಂಬಂಧ
    1. ವಿಶೇಷ ಪರಿಷ್ಕರಣೆ ಕುರಿತು ಈಗಾಗಲೇ ರಾಜಕೀಯ ಪಕ್ಷಗಳ ಸಭೆ ನಡೆಸಿ, ವಿವರ ನೀಡಿಕೆ
    2. ಪ್ರತಿ ಬೂತ್‌ಗೆ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ಪಕ್ಷಗಳ ಮುಖಂಡರಿಗೆ ಸೂಚನೆ. ಇದನ್ನೂ ಓದಿ: EC ಮೊಬೈಲ್‌ ಸಂಖ್ಯೆ, ಐಪಿ ವಿಳಾಸ ನೀಡಿದ್ರೂ ಕರ್ನಾಟಕದ ಸಿಐಡಿ ಏನು ಮಾಡುತ್ತಿದೆ: ಅನುರಾಗ್‌ ಠಾಕೂರ್‌ ಪ್ರಶ್ನೆ

  • ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ: ಈಶ್ವರ್ ಖಂಡ್ರೆ ಕಿಡಿ

    ಬೆಂಗಳೂರು: ಚುನಾವಣಾ ಆಯೋಗ (Election Commission of India) ಬಿಜೆಪಿ (BJP) ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwara Khandre) ಕಿಡಿಕಾರಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಕಾಂಗ್ರೆಸ್‌ (Congress) ನಾಯಕ ರಾಹುಲ್ ಗಾಂಧಿಯವರ (Rahul Gandhi)  ವೋಟ್ ಚೋರಿ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದರು. ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

    ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡ್ತೀವಿ. ಹಿಂಬಾಗಿಲಿನಿಂದ ಬಂದಿರೋ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಮತ ಕಳ್ಳತನದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡಲಿ: ಶಿವರಾಜ್ ತಂಗಡಗಿ

  • ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

    ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

    – ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ

    ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ (Bihar Assembly Elections) ದಿನಾಂಕ ಘೋಷಿಸುವ ಮುನ್ನವೇ ಭಾರತೀಯ ಚುನಾವಣಾ ಆಯೋಗ ಹೊಸ ಮಾರ್ಗಸೂಚಿಗಳನ್ನ ಪರಿಷ್ಕರಿಸಿದೆ. ವಿದ್ಯುನ್ಮಾನ ಮತಯಂತ್ರ (EVM) ಮತಪತ್ರಗಳ ವಿನ್ಯಾಸದಲ್ಲಿ ಬದಲಾವಣೆ ತಂದಿದೆ. ಅದರಂತೆ ಅಭ್ಯರ್ಥಿಗಳ ಗುರುತನ್ನು ಸುಲಭವಾಗಿ ಪತ್ತೆಹಚ್ಚಲು ಇನ್ಮುಂದೆ ಇವಿಎಂನಲ್ಲಿ ಕಪ್ಪು-ಬಿಳುಪಿನ ಫೋಟೋ ಬದಲಿಗೆ ಕಲರ್‌ ಫೋಟೋ ಅಳವಡಿಸಲಾಗುತ್ತದೆ.

    ಮತದಾರರಿಗೆ (Voters) ಅಭ್ಯರ್ಥಿಗಳ ಚಿತ್ರ ಸ್ಪಷ್ಟವಾಗಿ ಕಾಣಬೇಕೆಂಬುದು ಇದರ ಉದ್ದೇಶವಾಗಿದೆ. ಅಲ್ಲದೇ ಅಭ್ಯರ್ಥಿಗಳ ಸರಣಿ ಸಂಖ್ಯೆಯು 30 ಗಾತ್ರದಷ್ಟು ಫಾಂಟ್‌ನಲ್ಲಿ ಇರಲಿದೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲೇ ಈ ಮಾರ್ಗಸೂಚಿ ಅನ್ವಯವಾಗಲಿದ್ದು, ಮುಂದಿನ ದಿನಗಳಲ್ಲಿ ದೇಶಾದ್ಯಂತ ಚುನಾವಣೆಗಳಿಗೆ ಅನ್ವಯವಾಗಲಿದೆ. ಚುನಾವಣೆಗಳ ಗುಣಮಟ್ಟ ಮತ್ತು ವಿಶ್ವಾಸಾರ್ಹತೆ ಸುಧಾರಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ (ECI) ಮಹತ್ವದ ಹೆಜ್ಜೆ ಇದಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

    ಪರಿಷ್ಕರಿಸಿದ ಮಾರ್ಗಸೂಚಿಯಲ್ಲಿ ಏನಿದೆ?
    * ಚುನಾವಣಾ ನೀತಿ ನಿಯಮಗಳು, 1961ರ ನಿಯಮ 49B ಅಡಿಯಲ್ಲಿ, ಅಭ್ಯರ್ಥಿಗಳ ಫೋಟೋವನ್ನು ಸುಲಭವಾಗಿ ಗುರುತಿಸಲು ನೆರವಾಗಬೇಕು. ಅದಕ್ಕಾಗಿ ಹಿಂದಿನ ಕಪ್ಪು-ಬಿಳುಪು ಅಥವಾ ಫೋಟೋ ರಹಿತ ಆವೃತ್ತಿಗಳನ್ನು ಬದಲಾಯಿತಿ ಕಲರ್‌ ಫೋಟೋಗಳನ್ನು ಮುದ್ರಿಸಲಾಗುತ್ತದೆ.

    * ಫೋಟೋ ನಿಗದಿಪಡಿಸಿದ ಸ್ಥಳದ ಮುಕ್ಕಾಲು ಭಾಗದಷ್ಟು ಅಂದ್ರೆ ನಾಲ್ಕನೇ ಮೂರು ಭಾಗ ಇರುತ್ತದೆ. ಇದರಿಂದ ಮತದಾರರು ಅಭ್ಯರ್ಥಿಗಳ ಮುಖವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿದೆ.

    * ಅಲ್ಲದೇ ಮತಪತ್ರದಲ್ಲಿ ಅಭ್ಯರ್ಥಿಗಳ ಸರಣಿ ಸಂಖ್ಯೆಯನ್ನು ಸ್ಪಷ್ಟವಾಗಿ ಕಾಣುವಂತೆ ಮಾಡಲು ಒತ್ತು ನೀಡಲಾಗಿದೆ. ಅದಕ್ಕಾಗಿ ಅಕ್ಷರ ಗಾತ್ರವು 30 ಫಾಂಟ್‌ ಗಾತ್ರದಲ್ಲಿ ಮುದ್ರಿಸಲಾಗುತ್ತದೆ. ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು, ಎಲ್ಲಾ ಅಭ್ಯರ್ಥಿಗಳ ಅಥವಾ ನೋಟಾ ಹೆಸರುಗಳನ್ನು ಒಂದೇ ಫಾಂಟ್‌ನಲ್ಲಿ ಮತ್ತು ಸುಲಭವಾಗಿ ಓದಲು ಸಾಧ್ಯವಾಗುವಂತೆ ಮುದ್ರಿಸಲಾಗುತ್ತದೆ. ಈ ಹಿಂದಿನ ಮಾರ್ಗಸೂಚಿಯಲ್ಲಿ ಅಭ್ಯರ್ಥಿಯ ಹೆಸರು, ಪಕ್ಷದ ಚಿಹ್ನೆ ಮತ್ತು ಸರಣಿ ಸಂಖ್ಯೆಯಂತಹ ಮೂಲಭೂತ ವಿವರಗಳು ಮಾತ್ರ ಅಗತ್ಯವಿರುತ್ತಿತ್ತು. ಫೋಟೋಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿರಲಿಲ್ಲ. ಫೋಟೋ ಗಾತ್ರವೂ ಚಿಕ್ಕದಾಗಿರುತ್ತಿತ್ತು.

    * ಇನ್ನೂ ಇವಿಎಂ ಬ್ಯಾಲೆಟ್ ಪೇಪರ್‌ಗಳನ್ನು 70 ಜಿಎಸ್‌ಎಂ ಪೇಪರ್‌ನಲ್ಲಿ ಮುದ್ರಿಸಲಾಗುತ್ತದೆ. ವಿಧಾನಸಭಾ ಚುನಾವಣೆಗಳಿಗೆ ಗುಲಾಬಿ ಬಣ್ಣದ ಪೇಪರ್ ಅನ್ನು ಬಳಸಲಾಗುತ್ತದೆ.

    ಒಟ್ನಲ್ಲಿ ಚುನಾವಣಾ ಪ್ರಕ್ರಿಯೆ ಸುಗಮಗೊಳಿಸುವ ಜೊತೆಗೆ ಮತದಾರರ ಅನುಕೂಲತೆ ಹೆಚ್ಚಿಸಲು ಕಳೆದ 6 ತಿಂಗಳ ಕಾಲ ಚುನಾವಣಾ ಆಯೋಗ ತೆಗೆದುಕೊಂಡ 28 ಉಪಕ್ರಮಗಳಿಗೆ ಅನುಗುಣವಾಗಿ ಈ ಉಪಕ್ರಮಗಳನ್ನು ಮಾರ್ಗಸೂಚಿಯಲ್ಲಿ ತರಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

  • Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

    Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

    – ರಾಹುಲ್‌ ಗಾಂಧಿಗೆ ಮತಗಳ್ಳತನ ಆಗಿದ್ದು ಮಾಲೂರಲ್ಲಿ ಎಂದಿದ್ದೆ!

    ಕೋಲಾರ: ಹಲವಾರು ಸ್ವತಂತ್ರ ಅಭ್ಯರ್ಥಿಗಳು ನಮ್ಮ ಕ್ಷೇತ್ರದಲ್ಲಿದ್ದಾರೆ. ಅವರು ಪಡೆದ ಮತಗಳನ್ನು ಗೆದ್ದವರಿಗೆ ಸೇರಿಸಿದ್ದಾರೆ ಎಂದು ಮಾಲೂರು ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಎಸ್‌ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ, ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ ನೀಡಿದ ಬಗ್ಗೆ ಅವರು ʻಪಬ್ಲಿಕ್‌ ಟಿವಿʼಗೆ ಪ್ರತಿಕ್ರಿಯಿಸಿದರು. ಈ ವೇಳೆ, ಪ್ರಜಾಪ್ರಭುತ್ವವನ್ನು ಸಾಯಿಸಲು ಯತ್ನಿಸಿದ್ದಾರೆ. ನನ್ನನ್ನು ಇವರು ಸೋಲಿಸಿದ್ದಾರೆ. ಸ್ವಲ್ಪ ದಿನದಲ್ಲಿ ಗೆದ್ದಿರೋದು ಯಾರು? ಸೋತವರು ಯಾರು ಎಂದು ಗೊತ್ತಾಗುತ್ತದೆ. ನನ್ನ ಗೆಲುವನ್ನು ಘೋಷಿಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಮತ ಎಣಿಕೆ ವೀಡಿಯೋಗಳನ್ನು ನಾಶ ಮಾಡಿದ್ದಾರೆ. ಮರು ಎಣಿಕೆಗೆ ಮನವಿ ಮಾಡಿದರೆ, ಮಾಡಿಲ್ಲ. ವೀಡಿಯೋ ಡಿಲಿಟ್‌ ಮಾಡಿದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶಿಸಲಾಗಿದೆ. ರೀಕೌಂಟಿಂಗ್‌ಗೆ ಲಿಖಿತ ರೂಪದಲ್ಲಿ ಮನವಿ ಮಾಡಿದ್ರೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಅದಕ್ಕೆ ನಾವು ಕೋರ್ಟ್‌ಗೆ ಹೋಗಿದ್ದೆವು ಎಂದಿದ್ದಾರೆ.

    ರಾಹುಲ್‌ ಗಾಂಧಿಯವರು ಮತಗಳ್ಳತನ ಆಗಿದೆ ಎಂದು ಹೇಳುತ್ತಿದ್ದಾರೆ. ಅವರಿಗೆ ಮತಗಳ್ಳತನ ಆಗಿದ್ದು ಮಾಲೂರಲ್ಲಿ, ನನಗೆ ಸಹಾಯ ಮಾಡಿ ಎಂದಿದ್ದೆ. ಆದರೆ ಅದಕ್ಕೆ ಅವರು ಯಾವ ಪ್ರತಿಕ್ರಿಯೆ ನೀಡಿರಲಿಲ್ಲ ಎಂದಿದ್ದಾರೆ.

    ಏನಿದು ಪ್ರಕರಣ ?
    2023ರ ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ ಅವರು 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದನ್ನ ಪ್ರಶ್ನಿಸಿ ಮತ ಮರು ಎಣಿಕೆಗೆ ಕೋರಿ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಇಂದು (ಸೆ.16) ತೀರ್ಪು ಹೊರಬಿದ್ದಿದ್ದು, ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ (High Court) ಮಹತ್ವದ ತೀರ್ಪು ನೀಡಿದೆ. ನಾಲ್ಕು ವಾರದ ಒಳಗೆ ಮರು ಎಣಿಕೆ ಮಾಡಿ, ಹೊಸದಾಗಿ ಚುನಾವಣಾ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಮಾಲೂರು ಶಾಸಕ ನಂಜೇಗೌಡ (K.Y Nanjegowda) ಆಯ್ಕೆಯನ್ನು ಅಸಿಂಧುಗೊಳಿಸಲಾಗಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡ ಪರ ವಕೀಲರು ಆದೇಶವನ್ನು 30 ದಿನಗಳ ಕಾಲ ಅಮಾನತಿನಲ್ಲಿಡುವಂತೆ ಮನವಿ ಮಾಡಿದರು. ಈ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಇದನ್ನೂ ಓದಿ: 19ನೇ ವಯಸ್ಸಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು – ಮಾಲೂರು ಪುರಸಭೆ ಸದಸ್ಯೆ ಆಯ್ಕೆ ಅಸಿಂಧು