Tag: economic

  • ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಅಧಿಕೃತ ಸಲ್ಲಿಕೆ

    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಅಧಿಕೃತ ಸಲ್ಲಿಕೆ

    ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಸಲ್ಲಿಕೆಯಾಗಿದೆ.

    ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು 158.47 ಕೋಟಿ ರೂ. ವೆಚ್ಚದಲ್ಲಿ ಹೆಚ್‌. ಕಾಂತರಾಜ (Kantharaju) ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ (Socio-Economic Survey) ನಡೆಸಿತ್ತು. ಈ ಆಯೋಗದ ಅವಧಿ ಮುಕ್ತಾಯದ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

    ಕೆ. ಜಯಪ್ರಕಾಶ್‌ ಹೆಗ್ಡೆ (Jayaprakash Hegde) ಅಧ್ಯಕ್ಷತೆಯ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ಸಲ್ಲಿಸಿದೆ.  ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

     

    ಜಾತಿ ಗಣತಿ ಉದ್ದೇಶ ಏನು?
    1931ರ ಜನಗಣತಿಯ ನಂತರ ಯಾವುದೇ ಜನಗಣತಿ ದಾಖಲೆಗಳಿಂದ ಜಾತಿ / ಸಮುದಾಯವಾರು ಜನಸಂಖ್ಯೆಯ ಅಂಕಿ-ಅಂಶಗಳು ಖಚಿತವಾಗಿ ದೊರೆಯುತ್ತಿಲ್ಲ. ಜಾತಿವಾರು ಜನಗಣತಿ ಅಂಕಿ-ಅಂಶಗಳು ಲಭ್ಯವಿಲ್ಲದೇ ಇರುವುದರಿಂದ ಕಾರ್ಯಕ್ರಮಗಳ ಮುಖಾಂತರ ಸೌಲಭ್ಯಗಳನ್ನು ಸಾಮಾಜಿಕ ನ್ಯಾಯ ತತ್ವದ ಆಧಾರದ ಮೇಲೆ ಒದಗಿಸುವುದು ಸರ್ಕಾರಕ್ಕೆ ಕಷ್ಟವಾಗುತ್ತಿತ್ತು.

    ಸಮುದಾಯಗಳ ಈಗಿರುವ ಸ್ಥಿತಿಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಶ್ಲೇಷಣೆ ನಡೆಸುವುದು, ಜನಸಂಖ್ಯೆಯ ಪ್ರಮಾಣವನ್ನು ತಿಳಿಯುವುದು ಅಗತ್ಯವಾಗಿದೆ ಎಂಬ ಉದ್ದೇಶಕ್ಕಾಗಿ ಆಗಿನ ಸಿದ್ದರಾಮಯ್ಯ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳು ಹಾಗೂ ಇತರ ಜಾತಿಗಳನ್ನೊಳಗೊಂಡಂತೆ ರಾಜ್ಯದ ಪ್ರತಿಯೊಂದು ಕುಟುಂಬದ ಸಮಗ್ರ ಸಮೀಕ್ಷೆಯನ್ನು ಕೈಗೊಂಡು ವಿವಿಧ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಹಿಂದುಳಿದ ವರ್ಗಗಳ ಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಜವಾಬ್ದಾರಿಯನ್ನು ಆಯೋಗಕ್ಕೆ ‌ನೀಡಲಾಗಿತ್ತು. ರಾಜ್ಯದ ಎಲ್ಲ ವರ್ಗಗಳ / ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಣೆಗೆ ಸೂಚಿಸಲಾಗಿತ್ತು.

  • ವಿಶ್ವವೇ ಆಹಾರ ಕೊರತೆ ಎದುರಿಸುತ್ತಿದೆ, ಜಗತ್ತಿಗೆ ಸಂಕಷ್ಟ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ

    ವಿಶ್ವವೇ ಆಹಾರ ಕೊರತೆ ಎದುರಿಸುತ್ತಿದೆ, ಜಗತ್ತಿಗೆ ಸಂಕಷ್ಟ ಎದುರಾಗಲಿದೆ: ವಿಶ್ವಸಂಸ್ಥೆ ಎಚ್ಚರಿಕೆ

    ಬರ್ಲಿನ್: ಇಡೀ ವಿಶ್ವದಾದ್ಯಂತ ಆಹಾರದ ಕೊರತೆ ಎದುರಾಗುತ್ತಿದ್ದು, ಇದರಿಂದ ಜಗತ್ತು ಸಂಕಷ್ಟ ಎದುರಿಸಲಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರಸ್ ಎಚ್ಚರಿಸಿದ್ದಾರೆ.

    ಹವಾಮಾನ ವೈಪರೀತ್ಯದಿಂದಾಗಿ ಜಗತ್ತು ಎದುರಿಸುತ್ತಿರುವ ಸಮಸ್ಯೆ, ಈಗ ಉಕ್ರೇನ್ ಯುದ್ಧದಿಂದಾಗಿ ಮತ್ತಷ್ಟು ತೀವ್ರಗೊಂಡಿದೆ. ಕೋವಿಡ್ ಪಿಡುಗು ಸಹ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ 10 ಕೋಟಿ ಜನರ ಮೇಲೆ ಅಹಾರ ಕೊರತೆಯ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಆಫ್ಘನ್‌ನಲ್ಲಿ ಭೂಕಂಪನ: ಸಾವಿನ ಸಂಖ್ಯೆ 1,150ಕ್ಕೆ ಏರಿಕೆ, 3 ಸಾವಿರ ಮನೆಗಳು ನಾಶ

    WHEAT EXPORT

    2022ರಲ್ಲಿ ಬಹುಕ್ಷಾಮಗಳು ಅಪ್ಪಳಿಸುವ ಸಾಧ್ಯತೆಗಳಿವೆ. ಈ ವರ್ಷದಲ್ಲಾಗಿರುವ ಆಹಾರ ಸಮಸ್ಯೆಯಿಂದಾಗಿ ಮುಂದಿನ ವರ್ಷದಲ್ಲೂ ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆಯಾಗಬಹುದು. ಸಾಮಾಜಿಕ, ಆರ್ಥಿಕತೆಯ ಮೇಲೂ ಇದರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್

    ಇದರೊಂದಿಗೆ ರಸಗೊಬ್ಬರ ಮತ್ತು ಇಂಧನ ಬೆಲೆಗಳು ಹೆಚ್ಚಿತ್ತಿರುವ ಕಾರಣ ಪ್ರಪಂಚದಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿದ್ಯಮಾನದಿಂದಾಗಿ ಏಷ್ಯಾ, ಆಫ್ರಿಕಾ ಮತ್ತು ಅಮೆರಿಕದಲ್ಲಿ ಕೃಷಿ ಉತ್ಪಾದನೆ ಕುಂಠಿತಗೊಳ್ಳಲಿದೆ ಎಂದೂ ಅವರು ಹೇಳಿದ್ದಾರೆ.

    Live Tv

  • ಪಾಕ್ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ: ಇಮ್ರಾನ್ ಖಾನ್

    ಪಾಕ್ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ: ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

    ಮಂಗಳವಾರ ಇಸ್ಲಾಮಾಬಾದ್‍ನಲ್ಲಿ ನಡೆದ ಅಂತಾರಾಷ್ಟ್ರೀಯ ಚೇಂಬರ್ಸ್ ಶೃಂಗಸಭೆ 2022ರ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿ, ಪಾಕಿಸ್ತಾನವು ಬೇರೆ ದೇಶಗಳಿಗಿಂತ ವಿಶೇಷವಾಗಿ ಭಾರತಕ್ಕಿಂತ ಉತ್ತಮ ಆರ್ಥಿಕ ಸ್ಥಿತಿಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್ 

    ಬೇರೆ ದೇಶಗಳಿಗೆ ಹೋಲಿಸಿದರೆ ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ನಮ್ಮನ್ನು ಅಸಮರ್ಥರು ಎಂದು ಕರೆಯುತ್ತಾರೆ, ಆದರೆ ನಮ್ಮ ಸರ್ಕಾರವು ಎಲ್ಲಾ ಬಿಕ್ಕಟ್ಟುಗಳಿಂದ ರಾಷ್ಟ್ರವನ್ನು ಉಳಿಸಿದೆ ಎಂಬುದು ಸತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    PAK

    ಇತರ ದೇಶಗಳಿಗೆ ಹೋಲಿಸಿದರೆ ಪಾಕಿಸ್ತಾನದಲ್ಲಿ ತೈಲ ಬೆಲೆಗಳು ಇತರ ದೇಶಗಳಿಗಿಂತ ಕಡಿಮೆಯಾಗಿದೆ. ಸದ್ಯದಲ್ಲೇ ಪಾಕ್ ಸಂಸತ್ತಿನಲ್ಲಿ ಹಣಕಾಸು ಮಸೂದೆ ಮಂಡನೆಯಾಗಬೇಕಿದ್ದು, ಪ್ರಧಾನಿ ಇಮ್ರಾನ್ ಖಾನ್ ಈ ಮಾತು ಹೇಳಿರುವುದು ಗಮನಾರ್ಹ. ಸದ್ಯಕ್ಕೆ ಪಾಕಿಸ್ತಾನದ ಆರ್ಥಿಕ ಸ್ಥಿತಿ ದುಃಸ್ಥಿತಿಯಲ್ಲಿದ್ದರು ಪಾಕ್ ಹಣಕಾಸು ಚೆನ್ನಾಗಿಯೇ ಇದೆ ಎಂದಿದ್ದಾರೆ.

  • ಮೋದಿ ಮತ್ತು ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಕುರಿತು ಅರಿವು ಇಲ್ಲ: ಸುಬ್ರಮಣಿಯನ್ ಸ್ವಾಮಿ

    ಮೋದಿ ಮತ್ತು ಹಣಕಾಸು ಸಚಿವರಿಗೆ ಅರ್ಥಶಾಸ್ತ್ರದ ಕುರಿತು ಅರಿವು ಇಲ್ಲ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮ್ ಅವರಿಗೆ ಅರ್ಥಶಾಸ್ತ್ರದ ಕುರಿತಾಗಿ ಯಾವುದೇ ಅರಿವಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿನ ಬೆಲೆ ಏರಿಕೆಗೆ ಕೇಂದ್ರ ಹಣಕಾಸು ಸಚಿವರೇ ಹೊಣೆಯಾಗಿದ್ದಾರೆ. ಸರ್ಕಾರಕ್ಕೆ ಅರ್ಥಶಾಸ್ತ್ರವು ಅರ್ಥವಾಗುತ್ತಿಲ್ಲ. ಈ ಬಗ್ಗೆ ಪ್ರಧಾನಿ ಅಥವಾ ಹಣಕಾಸು ಸಚಿವರಿಗೆ ತಿಳಿದಿಲ್ಲ. ಈ ವಿಚಾರವಾಗಿ ಅವರು ಯಾರ ಬಳಿಯಲ್ಲೂ ಸಮಾಲೋಚನೆ ನಡೆಸುವುದಿಲ್ಲ. ಬೆಳವಣಿಗೆ ದರ ಕುಸಿದಾಗ ಏನು ಮಾಡಬೇಕೆಂದು ಕೂಡ ಅವರಿಗೆ ತಿಳಿದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: `ದಿವ್ಯ ಕಾಶಿ, ಭವ್ಯ ಕಾಶಿ’ ಪ್ರಧಾನಿ ಮೋದಿ ಕನಸಿನ ಯೋಜನೆ ಲೋಕಾರ್ಪಣೆ – ವಿಶೇಷತೆ ಏನು?

    ಕೆಲವು ಹಿಂದೂ ಸಂಘಟನೆಗಳ ಪ್ರಕಾರ ಈಗ ಮಸೀದಿಗಳು ಇರುವ ಸ್ಥಳಗಳಲ್ಲಿ ಹಿಂದೂ ದೇವಾಲಯಗಳು ಇದ್ದವು, ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ, 1991 ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮೊಕದ್ದಮೆಗೆ ಕೇಂದ್ರ ಸರ್ಕಾರ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಕಾಶಿ,ಮಥುರಾದ ಧಾರ್ಮಿಕ ಸ್ಥಳಗಳನ್ನು ಹಿಂದೂಗಳಿಗೆ ನೀಡಬೇಕು ಎಂದು ಕೆಲವು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಗಡಿ ವಿಚಾರವಾಗಿ ಚೀನಾದೊಂದಿಗೆ ಸರ್ಕಾರ ವ್ಯವಹರಿಸುತ್ತಿರುವ ರೀತಿ ಕೂಡ ನನಗೆ ತೃಪ್ತಿದಾಯಕವಾಗಿಲ್ಲ ಎಂದು  ಹೇಳಿದ್ದಾರೆ. ಇದನ್ನೂ ಓದಿ: ಒಳ್ಳೆಯ ಫಲಿತಾಂಶ ಬರುವ ನಿರೀಕ್ಷೆ ಇದೆ: ಬೊಮ್ಮಾಯಿ

    1991ರ ಕಾಯ್ದೆಯ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಹಿಂಪಡೆಯಲು ಅಥವಾ ಸ್ವರೂಪದಲ್ಲಿ ಬದಲಾವಣೆ ಮಾಡಲು ಮೊಕದ್ದಮೆಯನ್ನು ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಆಗಸ್ಟ್ 15, 1947 ರಿಂದ ಚಾಲ್ತಿಯಲ್ಲಿದ್ದ ಸ್ವರೂಪದಲ್ಲೇ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಾಯ್ದೆ ಹೇಳುತ್ತದೆ ಎಂದಿದ್ದಾರೆ.

  • ಆರ್ಥಿಕ ಬಿಕ್ಕಟ್ಟು ನೀಗಿಸಲು ಭಾರತಕ್ಕೆ ಅತಿದೊಡ್ಡ ಪ್ಯಾಕೇಜ್ ಅವಶ್ಯಕತೆ ಇದೆ- ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ

    ಆರ್ಥಿಕ ಬಿಕ್ಕಟ್ಟು ನೀಗಿಸಲು ಭಾರತಕ್ಕೆ ಅತಿದೊಡ್ಡ ಪ್ಯಾಕೇಜ್ ಅವಶ್ಯಕತೆ ಇದೆ- ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ

    ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದಿಂದ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟು ನಿಭಾಯಿಸಲು ಭಾರತಕ್ಕೆ ಅತಿದೊಡ್ಡ ಪ್ಯಾಕೇಜ್ ಅವಶ್ಯಕತೆ ಇದೆ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

    ದೇಶದಲ್ಲಿ ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಘುರಾಮ್ ರಾಜನ್ ಬಳಿಕ ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಇದನ್ನೂ ಓದಿ: ಬಡವರ ಸಹಾಯಕ್ಕೆ 65 ಸಾವಿರ ಕೋಟಿ ರೂ. ಮೀಸಲಿಡಬೇಕು – ರಘುರಾಮ್ ರಾಜನ್

    ಈ ವೇಳೆ ಮಾತನಾಡಿದ ಬ್ಯಾನರ್ಜಿ, ಲಾಕ್‍ಡೌನ್‍ನಿಂದ ತೀವ್ರವಾಗಿ ಹಾನಿಗೊಳಗಾದ ಆರ್ಥಿಕತೆಯನ್ನು ರಕ್ಷಿಸಲು ಭಾರತವು ಒಂದು ದೊಡ್ಡ ಪ್ರತಿಕ್ರಿಯೆಯನ್ನು ಪರಿಗಣಿಸಬೇಕು. ಬೇಡಿಕೆಯನ್ನು ಸೃಷ್ಟಿಸಲು ಮತ್ತು ದಿವಾಳಿತನದ ಸರಪಳಿಗಳನ್ನು ತಡೆಯಲು ಜನರ ಕೈಯಲ್ಲಿ ಹಣವನ್ನು ನೀಡಬೇಕು ಎಂದು ಅಭಿಪ್ರಾಯಪಟ್ಟರು.

    ಭಾರತದಲ್ಲಿ ಬೇಡಿಕೆಯ ಸಮಸ್ಯೆ ಇದೆ. ಈ ಸಮಸ್ಯೆ ಇನ್ನ ಮುಂದೆ ದೊಡ್ಡದಾಗಲಿದೆ. ಜನರ ಬಳಿ ಖರೀದಿಸಲು ಹಣದ ಕೊರತೆ ಇದೆ. ಇದರಿಂದ ಅಂಗಡಿಗಳನ್ನು ಮುಚ್ಚಲಾಗುತ್ತಿದೆ. ಭಾರತದಲ್ಲಿ ದೊಡ್ಡ ಪ್ಯಾಕೇಜ್ ಅನ್ನು ಘೋಷಿಸಿಲ್ಲ. ಯುಎಸ್, ಜಪಾನ್, ಯುರೋಪ್ ಏನು ಮಾಡುತ್ತಿವೆ ಎಂಬುದನ್ನು ನಾವು ನೋಡಬೇಕು. ನಾವು ಇನ್ನೂ ಜಿಡಿಪಿಯ 1% ಬಗ್ಗೆ ಮಾತನಾಡುತ್ತಿದ್ದೇವೆ. ಯುಎಸ್‍ಎ ಜಿಡಿಪಿಯ 10% ಹಣವನ್ನು ಕೊರೊನಾ ವಿರುದ್ಧದ ಹೋರಾಟಕ್ಕೆ ಮೀಸಲಿಟ್ಟಿದೆ ಎಂದರು.

    ಜನರಿಗೆ ನೀಡುತ್ತಿರುವ ನೇರ ನಗದು ವರ್ಗಾವಣೆ ಬಡ ಜನರಿಗೆ ತಲುಪುತ್ತಿದೆಯೇ ಎಂಬುದು ಚರ್ಚೆಯ ವಿಷಯವಾಗಿದೆ. 60% ಜನಸಂಖ್ಯೆಗೆ ಹಣವನ್ನು ನೀಡುವಲ್ಲಿ ಯಾವುದೇ ತಪ್ಪಿಲ್ಲ. ಬಹುಶಃ ಅವರಲ್ಲಿ ಕೆಲವರಿಗೆ ಇದು ಅಗತ್ಯವಿರುವುದಿಲ್ಲ. ಆದರೆ ಅವರು ಅದನ್ನು ಖರ್ಚು ಮಾಡಿದರೆ, ಅದು ಆರ್ಥಿಕತೆ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ. ತಮ್ಮ ಜೀವ ಉಳಿಸಲು ಆಹಾರ ಧಾನ್ಯಗಳ ಅಗತ್ಯವಿರುವ ಪ್ರತಿಯೊಬ್ಬ ವ್ಯಕ್ತಿಗೂ ಮೂರರಿಂದ ಆರು ತಿಂಗಳವರೆಗೆ ಸರ್ಕಾರ ತಾತ್ಕಾಲಿಕ ಪಡಿತರ ಚೀಟಿ ನೀಡಬೇಕು. ಹಣ, ಗೋಧಿ ಮತ್ತು ಅಕ್ಕಿಯನ್ನು ನೀಡಲು ಪಡಿತರ ಚೀಟಿಗಳನ್ನು ಬಳಸಬಹುದು ಎಂದು ಸಲಹೆ ನೀಡಿದರು.

  • ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ ಬಿಗ್ ಗಿಫ್ಟ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.

    ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮೀಸಲಾತಿ ಜಾರಿಯಾದಲ್ಲಿ 8 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಸಾಮಾನ್ಯ ವರ್ಗದ ಕುಟುಂಬದ ಸದಸ್ಯರಿಗೆ ಉದ್ಯೋಗ ಸಿಗಲಿದೆ.

    ಆರ್ಥಿಕವಾಗಿ ಹಿಂದುಳಿದಿದ್ದರೂ ಪ್ರಸ್ತುತ ಉದ್ಯೋಗದಿಂದ ವಂಚಿತರಾಗಿರುವ ಸಾಮಾನ್ಯ ವರ್ಗದವರಿಗೂ ಉದ್ಯೋಗ ನೀಡಲು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಮೀಸಲಾತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಸರ್ಕಾರದ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜಾಗತಿಕ ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಭಾರತ

    ಜಾಗತಿಕ ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಭಾರತ

    ನವದೆಹಲಿ: ಜಾಗತಿಕ ಆರ್ಥಿಕತೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ಅಧ್ಯಯನ ತಿಳಿಸಿದೆ.

    ಅಮೆರಿಕದ ಹಾರ್ವರ್ಡ್ ವಿವಿಯ ಸೆಂಟರ್ ಫಾರ್ ಇಂಟರ್‍ನ್ಯಾಷನಲ್ ಡೆವಲಪ್‍ಮೆಂಟ್ (ಸಿಐಡಿ) ಅಧ್ಯಯನದ ಪ್ರಕಾರ 2025ರವರೆಗೆ ವಿಶ್ವದಲ್ಲೇ ಅತ್ಯಂತ ವೇಗವಾಗಿ ಹೊರಹೊಮ್ಮುವ ಆರ್ಥಿಕ ಶಕ್ತಿಯಾಗಿ ಭಾರತ ಉದಯಿಸಲಿದೆ. ಈ ಸಂದರ್ಭದಲ್ಲಿ ವಾರ್ಷಿಕ ಜಿಡಿಪಿ ಬೆಳವಣಿಗೆ ದರ ಶೇ.7.7 ಇರಲಿದೆ ಎಂದು ಅದು ಅಂದಾಜಿಸಿದೆ.

    ರಾಸಾಯನಿಕ, ವಾಹನ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳ ಬೆಳವಣಿಗೆಯಿಂದ ಭಾರತದ ಆರ್ಥಿಕತೆ ಪ್ರಗತಿ ಕಾಣಲಿದೆ ಎಂದು ಅದು ಅಂದಾಜಿಸಿದೆ.

    ರಾಜಕೀಯ, ಭೌಗೋಳಿಕ, ಸಾಂಸ್ಥಿಕ ಕ್ಷೇತ್ರಗಳಿಂದಾಗಿ, ಭಾರತದ ಜೊತೆ ಇಂಡೋನೇಷ್ಯಾ, ವಿಯೆಟ್ನಾಂ, ಟರ್ಕಿ, ಉಗಾಂಡ, ಬಲ್ಗೇರಿಯಾ ದೇಶಗಳ ಆರ್ಥಿಕತೆಗಳು ವೇಗವಾಗಿ ಬೆಳವಣಿಗೆಯಾಗಲಿದೆ ಎಂದು ಸಿಐಡಿ ತಿಳಿಸಿದೆ.