Tag: economics

  • ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 15,000 ಎಕ್ರೆ ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ

    ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 15,000 ಎಕ್ರೆ ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ

    – 50 ಶತಕೋಟಿ ಡಾಲರ್‌ ಸಂಪತ್ತು ಬೆಂಕಿಗಾಹುತಿ, 1 ಲಕ್ಷ ಮಂದಿ ಸ್ಥಳಾಂತರ

    ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದ (South California) ಆಕರ್ಷಕ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು (Los Angeles Wildfires) ಹೊತ್ತಿಕೊಂಡಿದೆ. ಬೆಂಕಿ ನಿಯಂತ್ರಣಕ್ಕೆ ಬಾರದೇ ಕನಿಷ್ಠ 5 ಮಂದಿ ಸಜೀವ ದಹನವಾಗಿದ್ದಾರೆ.

    ಸುಮಾರು 15,832 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, 1,000 ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸುಮಾರು 1 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಕೆಲವೆಡೆ ಅಸಂಖ್ಯಾತ ಐಷಾರಾಮಿ ಮನೆಗಳು ಬೆಂಕಿ ಹೊತ್ತಿಕೊಳ್ಳುವ ಭೀತಿಯಲ್ಲಿವೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: `ನಾಪತ್ತೆ’ಯಾಗಿದ್ದ ಅತುಲ್ ಸುಭಾಷ್ ಪುತ್ರ ಹರ್ಯಾಣ ಬೋರ್ಡಿಂಗ್ ಸ್ಕೂಲ್‌ನಲ್ಲಿ – ಖಚಿತಪಡಿಸಿದ ಫರಿದಾಬಾದ್ ಶಾಲೆ

    ಸಣ್ಣ ಪ್ರಮಾಣದಲ್ಲಿ ಹೊತ್ತಿಕೊಡ್ಡಿಂದ್ದ ಕಾಡ್ಗಿಚ್ಚು ಮಂಗಳವಾರದ ವೇಳೆಗೆ ಜನನಿಬಿಡ ಪ್ರದೇಶಗಳಿಗೆ ವ್ಯಾಪಿಸಿದೆ. ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿದೆ. ಬುಧವಾರ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ. ಇದನ್ನೂ ಓದಿ: ತಿರುಪತಿಯಲ್ಲಿ ದುರಂತ – ಕಾಲ್ತುಳಿತಕ್ಕೆ ಮೂಲ ಕಾರಣ ಏನು? ದಿಢೀರ್‌ ಗೇಟ್‌ ಓಪನ್‌ ಮಾಡಿದ್ದು ಯಾಕೆ?

    50 ಶತಕೋಟಿ ಡಾಲರ್‌ ಸಂಪತ್ತು ನಷ್ಟ:
    ಇನ್ನೂ ಲಾಸ್‌ ಏಂಜಲೀಸ್‌ನಲ್ಲಿ ಹಬ್ಬಿದ ಕಾಡ್ಗಿಚ್ಚಿನಿಂದ ಸುಮಾರು 50 ಶತಕೋಟಿ ಡಾಲರ್‌ (42,000 ಕೋಟಿ ರೂ.) ಸಂಪತ್ತು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯ ಫ್ರಿಡ್ಜ್‌ನಲ್ಲಿತ್ತು ಮಾನವನ ತಲೆಬುರುಡೆ, ಅಸ್ಥಿಪಂಜರ!

  • ಪಾಕ್ ಬೆಂಬಲಕ್ಕೆ ಸೌದಿ ಅರೇಬಿಯಾ – 8 ಸಾವಿರ ಕೋಟಿ ಹೂಡಿಕೆ ಮಾಡೋದಾಗಿ ಘೋಷಣೆ

    ಪಾಕ್ ಬೆಂಬಲಕ್ಕೆ ಸೌದಿ ಅರೇಬಿಯಾ – 8 ಸಾವಿರ ಕೋಟಿ ಹೂಡಿಕೆ ಮಾಡೋದಾಗಿ ಘೋಷಣೆ

    ಇಸ್ಲಾಮಾಬಾದ್: ರಾಜಕೀಯ ಏರಿಳಿತದೊಂದಿಗೆ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದ ಬೆಂಬಲಕ್ಕೆ ಇಸ್ಲಾಮಿಕ್ ರಾಷ್ಟ್ರವಾದ ಸೌದಿ ಅರೇಬಿಯಾ ನಿಂತಿದೆ. ಪಾಕಿಸ್ತಾನದಲ್ಲಿ 100 ಕೋಟಿ ಅಮೆರಿಕನ್ ಡಾಲರ್ (ಸುಮಾರು 8 ಸಾವಿರ ಕೋಟಿ ರೂಪಾಯಿ) ಹೂಡಿಕೆ ಮಾಡುವುದಾಗಿ ಸೌದಿ ಅರೇಬಿಯಾ ಘೋಷಿಸಿದೆ.

    Shehbaz Sharif

    ಈ ಕುರಿತಂತೆ ಸೌದಿ ವಿದೇಶಾಂಗ ಸಚಿವ ಪ್ರಿನ್ಸ್ ಫೈಸಲ್ ಬಿನ್ ಫರ್ಹಾನ್ ಬಿನ್ ಅಬ್ದುಲ್ಲಾ ಹಾಗೂ ಅವರ ಪಾಕಿಸ್ತಾನಿ ಸಹವರ್ತಿ ಬಿಲಾವಲ್ ಭುಟ್ಟೋ ಜರ್ದಾರಿ ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದೆ. ಇದೇ ವೇಳೆ ಪಾಕಿಸ್ತಾನ ಹಾಗೂ ಸೌದಿ ಅರೇಬಿಯಾದ ಅಂತಾರಾಷ್ಟ್ರೀಯ ಸಂಬಂಧಗಳನ್ನೂ ಗಟ್ಟಿಗೊಳಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಇದನ್ನೂ ಓದಿ: ಭಾರತದೊಂದಿಗಿನ ಶಾಶ್ವತ ಶಾಂತಿಗೆ ಯುದ್ಧವೊಂದೇ ಆಯ್ಕೆಯಾಗಿಲ್ಲ: ಪಾಕ್ ಪ್ರಧಾನಿ

    ಪಾಕಿಸ್ತಾನದ ಆರ್ಥಿಕತೆ ಅಭಿವೃದ್ಧಿಪಡಿಸುವ ಜೊತೆಗೆ ತಮ್ಮ ಬೆಂಬಲ ದೃಢೀಕರಿಸುವ ಸಲುವಾಗಿ ಪಾಕಿಸ್ತಾನದಲ್ಲಿ 1 ಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡುವುದಾಗಿ ಹೇಳಿದೆ. ಸೌದಿ ಅರೇಬಿಯಾದ ಈ ನಿರ್ಧಾರವನ್ನೂ ವಿದೇಶಾಂಗ ಸಚಿವರು ಸ್ವಾಗತಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನಕ್ಕೆ ಮಿತ್ರ ರಾಷ್ಟ್ರಗಳು 4 ಶತಕೋಟಿ ಡಾಲರ್‌ಗಳಷ್ಟು ಹಣಕಾಸಿನ ನೆರವನ್ನು ಸ್ವೀಕರಿಸಿದ ನಂತರ ಸೌದಿ ಅರೇಬಿಯಾದ ಹೂಡಿಕೆಯ ಕುರಿತು ಪ್ರಕಟಣೆಯಲ್ಲಿ ತಿಳಿಸಿದೆ.

    ಪಾಕಿಸ್ತಾನವು ಮುಂದೂಡಲ್ಪಟ್ಟ ತೈಲ ಸೌಲಭ್ಯದ ಅಡಿಯಲ್ಲಿ ಕತಾರ್‌ನಿಂದ 2 ಶತಕೋಟಿ ಯುಎಸ್ ಡಾಲರ್, ಸೌದಿ ಅರೇಬಿಯಾದಿಂದ 1 ಶತಕೋಟಿ ಯುಎಸ್ ಡಾಲರ್‌ನಷ್ಟು ಹಾಗೂ ವಿವಿಧ ಕ್ಷೇತ್ರಗಳಲ್ಲಿ 1 ಕೋಟಿ ಯುಎಸ್ ಡಾಲರ್ ಹೂಡಿಕೆಗಳನ್ನು ಪಡೆಯಲಿದೆ ಎಂದು ತನ್ನ ಪ್ರಕಟಣೆಯಲ್ಲಿ ಹೇಳಿದೆ.

    ಪಾಕಿಸ್ತಾನವು ಮತ್ತೆ ಆರ್ಥಿಕ ಕುಸಿತದ ಅಂಚಿನಲ್ಲಿದ್ದು, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ದೇಶದ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಾಜ್ವಾ ಅವರು ಸೌದಿಗೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಸೌದಿಯು 100 ಶತಕೋಟಿ ಡಾಲರ್‌ಗಳಷ್ಟು ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಇದು ಪಾಕಿಸ್ತಾನದ ಆರ್ಥಿಕ ಪುನಶ್ಚೇತನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

    ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

    ಪಾಟ್ನಾ: ಉನ್ನತ ಶಿಕ್ಷಣ ಪಡೆದರೂ ಹಲವು ಮಂದಿಗೆ ಕೆಲಸ ಸಿಗದೆ ಮನೆಯಲ್ಲಿಯೇ ಇರುವ ಅನೇಕ ಉದಾಹರಣೆಗಳು ಮನಮ್ಮ ಕಣ್ಣ ಮುಂದಿವೆ. ಆದರೆ ಇಲ್ಲೊಬ್ಬ ಯುವತಿ ಮಾತ್ರ ತನಗೆ ಕೆಲಸ ಸಿಕ್ಕಿಲ್ಲ ಎಂದು ಕೈ ಕಟ್ಟಿ ಕುಳಿತುಕೊಳ್ಳದೆ ಪರ್ಯಾಯ ಉಪಾಯ ಕಂಡುಕೊಂಡು ಜೀವನ ರೂಪಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

    ಹೌದು. ಪ್ರಿಯಾಂಕಾ ಗುಪ್ತಾ ಪರ್ಯಾಯ ಮಾರ್ಗ ಕಂಡುಕೊಂಡು ಯಶಸ್ಸು ಕಂಡ ಯುವತಿ. ಪಾಟ್ನಾ ಮೂಲದವರಾಗಿರುವ ಈಕೆ 2019ರಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ. ಆದರೆ ಆ ಬಳಿಕ ಇವರು ಸಾಕಷ್ಟು ಕಡೆಗಳಲ್ಲಿ ಪ್ರಯತ್ನಿಸಿದರೂ ಎಲ್ಲಿಯೂ ಉದ್ಯೋಗ ದೊರಕಲಿಲ್ಲ. ಬರೋಬ್ಬರಿ 2 ವರ್ಷಗಳಿಂದ ಹುಡುಕಿದರೂ ಕೆಲಸ ಸಿಗದ ಪರಿಣಾಮ 24 ವರ್ಷದ ಪ್ರಿಯಾಂಕಾ, ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ. ಅಂತೆಯೇ ಚಹಾ ಅಂಗಡಿಯೊಂದನ್ನು ಓಪನ್ ಮಾಡಿದ್ದಾರೆ.

    ಪಾಟ್ನಾದ ಮಹಿಳಾ ಕಾಲೇಜು ಮುಂದೆ ಚಹಾ ಅಂಗಡಿ ತೆರೆದು, ಇದೀಗ ಇದರಲ್ಲಿ ಯಶಸ್ಸು ಕಂಡಿದ್ದಾರೆ. ತಮ್ಮ ಅಂಗಡಿಯಲ್ಲಿ ಅತೀ ಕಡಿಮೆ ಬೆಲೆಗೆ ಕುಲ್ಹಾದ್ ಟೀ, ಮಸಾಲಾ ಟೀ, ಪಾನ್ ಚಹಾ ಮತ್ತು ಚಾಕ್ಲೇಟ್ ಟೀ ಮಾರಾಟ ಮಾಡುತ್ತಿದ್ದಾರೆ. ಅತಿ ಕಡಿಮೆ ಅವಧಿಯಲ್ಲಿ ಟೀ ಸ್ಟಾಲ್ ಹೆಚ್ಚು ಜನಪ್ರಿಯವಾಗಿದ್ದು, ಕೇವಲ 15ರಿಂದ 20ರೂ.ಗೆ ಚಹಾ ಮಾರಾಟ ಮಾಡುತ್ತಿರುವುದರಿಂದ ಇದೀಗ ಪ್ರಿಯಾಂಕಾ ಹೆಚ್ಚಿನ ಆದಾಯ ಸಹ ಗಳಿಸುತ್ತಿದ್ದಾರೆ.

    ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಬ್ಯಾಂಕ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅನುತ್ತೀರ್ಣವಾದ ಬಳಿಕ ಚಹಾ ಅಂಗಡಿ ಓಪನ್ ಮಾಡುವ ನಿರ್ಧಾರ ಮಾಡಿದ್ದೇನೆ. ಇದೀಗ ಸ್ವಂತ ಚಹಾ ಅಂಗಡಿ ನಡೆಸುತ್ತಿದ್ದು, ಆರಂಭದಲ್ಲಿ ನನ್ನ ಸ್ನೇಹಿತರು ಆರ್ಥಿಕವಾಗಿ ಸಹಾಯ ಮಾಡಿದ್ದಾರೆ. ಇದೀಗ ಸ್ವಾವಲಂಬಿಯಾಗಿ ಜೀವನ ನಡೆಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಭಾರತದಿಂದ ವೈದ್ಯಕೀಯ ಉಪಕರಣ ಬಯಸಿದ ರಷ್ಯಾ

    ಪ್ರಿಯಾಂಕಾ ತಮ್ಮ ಟೀ ಸ್ಟಾಲ್‍ಗೆ ‘ಚಾಯ್ ವಾಲಿ’ ಎಂದು ಹೆಸರಿಟ್ಟಿದ್ದಾರೆ. ಇವರಿಗೆ ಬೆಂಗಳೂರಿನ ಎಂಬಿಎ ಚಾಯ್ ವಾಲಾ ಎಂದೇ ಖ್ಯಾತಿ ಪಡೆದಿರುವ ಪ್ರಫುಲ್ ಬಿಲೋರ್ ಅವರು ಮಾದರಿಯಂತೆ. ಅಲ್ಲದೆ ಅವರ ಅಂಗಡಿಯ ಕೆಲವೊಂದು ಪಂಚ್ ಲೈನ್ ಅನ್ನು ತಮ್ಮ ಅಂಗಡಿಯಲ್ಲಿ ಪ್ರಿಯಾಂಕಾ ಬರೆದುಕೊಂಡಿದ್ದಾರೆ.

  • 2021-22ರಲ್ಲಿ ‘ವಿ’ ಶೇಪ್‌ ಪ್ರಗತಿ – ಶೇ.11 ರಷ್ಟು ಜಿಡಿಪಿ ಬೆಳವಣಿಗೆ

    2021-22ರಲ್ಲಿ ‘ವಿ’ ಶೇಪ್‌ ಪ್ರಗತಿ – ಶೇ.11 ರಷ್ಟು ಜಿಡಿಪಿ ಬೆಳವಣಿಗೆ

    – ಈ  ವರ್ಷಮೈನಸ್‌ 7.7% ಜಿಡಿಪಿ

    ನವದೆಹಲಿ: 2021-22ರ ಆರ್ಥಿಕ ವರ್ಷದಲ್ಲಿ ʼವಿʼ ಶೇಪ್ ಪ್ರಗತಿ ಸಾಧಿಸಲಿದ್ದು, ಅಂದಾಜು 11%ರಷ್ಟು ಜಿಡಿಪಿ ಬೆಳವಣಿಗೆ ದರ ನಮೂದಾಗಲಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ.

    ಪ್ರಸಕ್ತ ಆರ್ಥಿಕ ವರ್ಷದ ಬೆಳವಣಿಗೆ ದರ ಮೈನಸ್ 7.7%ಕ್ಕೆ ಇಳಿಕೆಯಾಗಲಿದೆ. ಲಾಕ್‍ಡೌನ್‍ನಿಂದ ಲಕ್ಷ ಲಕ್ಷ ಪ್ರಜೆಗಳ ಪ್ರಾಣ ಉಳಿದಿದೆ. ಬಿಗಿಯಾದ ಲಾಕ್‌ಡೌನ್‌ನಿಂದಾಗಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದೆ.

    ಕೋವಿಡ್ ಸಂದರ್ಭದಲ್ಲಿ ಕೃಷಿ ವಲಯ ಮಾತ್ರ ಬೆಳವಣಿಗೆ ಸಾಧಿಸಿದೆ. ನೂತನ ಕೃಷಿ ಕಾಯ್ದೆಗಳಿಂದ ರೈತರಿಗೆ ನೆರವಾಗಲಿದೆ ಎಂದು ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

    ಸಂಸತ್‍ನ ಬಜೆಟ್ ಅಧಿವೇಶನ ಆರಂಭಕ್ಕೆ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ದೇಶದ ಚರಿತ್ರೆಯಲ್ಲೇ ಮೊದಲ ಬಾರಿಗೆ ಕಳೆದ ವರ್ಷ ಆರ್ಥಿಕ ಪ್ಯಾಕೇಜ್‍ಗಳ ರೂಪದಲ್ಲಿ ವಿತ್ತ ಸಚಿವರು ನಾಲ್ಕೈದು ಮಿನಿ ಬಜೆಟ್ ಮಂಡಿಸಿದ್ದಾರೆ. ಈ ಬಾರಿ ಮಂಡಿಸುವ ಬಜೆಟ್ ಆ ಮಿನಿ ಬಜೆಟ್‍ಗಳ ಒಂದು ಭಾಗವಾಗಿ ಇರಲಿದೆ ಎಂದು ಹೇಳಿದರು.

    ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಿದ ನಂತರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಿದರು. ಆರ್ಥಿಕ ಸಮೀಕ್ಷೆ ರೂಪಿಸಿದ ಮುಖ್ಯ ಆರ್ಥಿಕ ಸಲಹೆಗಾರ ಕೆವಿ ಸುಬ್ರಹ್ಮಣ್ಯಂ ಮಾಧ್ಯಮಗಳ ಜೊತೆ ಮಾತನಾಡಿ. ಕೋವಿಡ್ ಕಾರಣದಿಂದ ಹದಗೆಟ್ಟ ದೇಶದ ಆರ್ಥಿಕತೆ ಮತ್ತೆ ಚೇತರಿಸಿಕೊಳ್ಳಲಿದೆ. ದೇಶದ ಜಿಡಿಪಿ ಮತ್ತೆ ಎರಡಂಕಿಗೆ ಜಿಗಿಯಲಿದೆ ಎಂದು ಭವಿಷ್ಯ ನುಡಿದರು.

    ಜಿಡಿಪಿ ದಿಢೀರ್‌ ಕುಸಿದು ದಿಢೀರ್‌ ಮೇಲಕ್ಕೆ ಏರುವುದನ್ನು ವಿ ಶೇಪ್‌ ಪ್ರಗತಿ ಎಂದು ಕರೆಯಲಾಗುತ್ತದೆ. ಬೆಳವಣಿಗೆಯ ಗ್ರಾಫ್‌ ಲೆಕ್ಕಾಚಾರಗಳು ನೋಡುವಾಗ ಇಂಗ್ಲೀಷಿನ ‘V’ ಅಕ್ಷರದಂತೆ ಕಾಣುತ್ತದೆ. ಈ ಕಾರಣಕ್ಕೆ ಈ ಪ್ರಗತಿಯನ್ನು ಅರ್ಥ ಶಾಸ್ತ್ರದಲ್ಲಿ ವಿ ಶೇಪ್‌ಗೆ ಹೋಲಿಸಲಾಗುತ್ತದೆ.

  • ಭಯೋತ್ಪಾದನೆ ಮಾನವೀಯತೆಗೆ ಅತೀ ದೊಡ್ಡ ಬೆದರಿಕೆ – ಜಪಾನ್‍ನಲ್ಲಿ ಮೋದಿ

    ಭಯೋತ್ಪಾದನೆ ಮಾನವೀಯತೆಗೆ ಅತೀ ದೊಡ್ಡ ಬೆದರಿಕೆ – ಜಪಾನ್‍ನಲ್ಲಿ ಮೋದಿ

    ಒಸಾಕಾ: ಭಯೋತ್ಪಾದನೆ ಮಾನವೀಯತೆಗೆ ಅತಿದೊಡ್ಡ ಬೆದರಿಕೆಯಾಗಿದೆ. ಭಯೋತ್ಪಾದನೆ ಅಮಾಯಕರನ್ನು ಹತ್ಯೆ ಮಾಡುವುದಷ್ಟೇ ಅಲ್ಲದೇ ಸಾಮಾಜಿಕ ಸ್ಥಿರತೆ ಮತ್ತು ಆರ್ಥಿಕ ಅಭಿವೃದ್ಧಿ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

    ಜಪಾನ್‍ನ ಒಸಾಕಾದಲ್ಲಿ ನಡೆದ ಜಿ20 ಶೃಂಗ ಸಭೆಯಲ್ಲಿ ಭಾಗವಹಿಸಿದ್ದ ಮೋದಿ, ಇಂದು ಬ್ರಿಕ್ಸ್ ದೇಶಗಳ ಮುಖಂಡರ ಜತೆ ಅನೌಪಚಾರಿಕ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆ ಮತ್ತು ವರ್ಣಭೇದ ನೀತಿಗೆ ಬೆಂಬಲಿಸುವ ಎಲ್ಲ ಶಕ್ತಿಗಳನ್ನು ನಿಯಂತ್ರಿಸಬೇಕಾಗಿದೆ ಎಂದು ಹೇಳಿದ್ದಾರೆ.

    ಸಂಪನ್ಮೂಲಗಳ ಕೊರತೆಯಿದೆ ಮೂಲಭೂತ ಸೌಕರ್ಯಗಳಲ್ಲಿ ಹೂಡಿಕೆಗೆ ಬಹುತೇಕ 1.3 ಟ್ರಿಲಿಯನ್ ಡಾಲರ್‍ಗಳ (1,30,000 ಕೋಟಿ) ಕೊರತೆಯಾಗಿದೆ. ಅಭಿವೃದ್ಧಿಯನ್ನು ಸುಸ್ಥಿರಗೊಳಿಸಿ ಎಲ್ಲರನ್ನೂ ಒಳಗೊಳ್ಳಿಸುವುದು ಮತ್ತೊಂದು ಸವಾಲು. ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಗಳಾದ ಡಿಜಿಟಲೀಕರಣ ಮತ್ತು ಹವಾಮಾನ ಬದಲಾವಣೆಯಿಂದ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಇಂದು ಮಾರಕ ಎಂದು ಮೋದಿ ಹೇಳಿದರು.

    ವಿಶ್ವ ವಾಣಿಜ್ಯ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವ, ರಕ್ಷಣಾತ್ಮಕ ಧೋರಣೆ ವಿರುದ್ಧ ಹೋರಾಡುವ, ಇಂಧನ ಭದ್ರತೆ ಖಾತ್ರಿಪಡಿಸುವ ಮತ್ತು ಭಯೋತ್ಪಾದನೆ ವಿರುದ್ಧ ಒಗ್ಗೂಡಿ ಹೋರಾಡುವ ಅಗತ್ಯವಿದೆ. ಇಂದು ನಮ್ಮ ಮುಂದಿರುವ ಮೂರು ಪ್ರಮುಖ ಸವಾಲುಗಳ ಬಗ್ಗೆ ನಾನು ಗಮನಹರಿಸುತ್ತೇನೆ. ಮೊದಲನೆಯದಾಗಿ ಜಾಗತಿಕ ಆರ್ಥಿಕತೆಯ ಅಸ್ಥಿರತೆ ಮತ್ತು ಅವನತಿ. ನಿಯಮಗಳ ಆಧಾರಿತ ಬಹುಪಕ್ಷೀಯ ಜಾಗತಿಕ ವ್ಯಾಪಾರ ವ್ಯವಸ್ಥೆಯಲ್ಲಿ ಏಕಪಕ್ಷೀಯವಾದ ಮತ್ತು ಸ್ಪರ್ಧಾತ್ಮಕತೆಗಳ ಪರಸ್ಪರ ವಿರೋಧಾಭಾಸ ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ.

    ಇದೇ ವೇಳೆ ಬ್ರೆಜಿಲ್ ಅಧ್ಯಕ್ಷರಾಗಿ ಚುನಾಯಿತರಾದ ಜೈರ್ ಬೊಲ್ಸೊನಾರೊ ಅವರಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ ಬ್ರಿಕ್ಸ್ ಕುಟುಂಬಕ್ಕೆ ಅವರನ್ನು ಸ್ವಾಗತಿಸಿದರು. ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಮುಖಂಡರ ಸಭೆ ನಡೆಸಿ, ದಕ್ಷಿಣ ಆಫ್ರಿಕಾ ಅಧ್ಯಕ್ಷರಾಗಿ ಚುನಾಯಿತರಾದ ಸಿರಿಲ್ ರಮಫೋಸಾ ಅವರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು.

  • ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

    ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು ಬೆಳಗ್ಗೆ 9:15 ಸಮಯಕ್ಕೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ತೆಗೆದು ಕೋಚಿಂಗ್ ಸೆಂಟರ್ ಮಾಲೀಕನಿಗೆ ಕಳುಹಿಸಿದ್ದಾರೆ. ಮಾಲೀಕನು ವಿದ್ಯಾರ್ಥಿಗಳಿಗೆ ಕಳಿಸಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಎರಡು ರೂಪದಲ್ಲಿ ಸೋರಿಕೆ: ಪ್ರಶ್ನೆಪತ್ರಿಕೆ ಎರಡು ರೂಪದಲ್ಲಿ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಒಂದು ಮುದ್ರಿತ ಪ್ರಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಹಾಗೂ ಕೈ ಬರಹದ ಪ್ರಶ್ನೆಪತ್ರಿಕೆ ಕೂಡ ಹರಿದಾಡಿದೆ. ದೆಹಲಿಯ ಬವನಾದಲ್ಲಿ ಕೋಚಿಂಗ್ ಸೆಂಟರ್ ಅನ್ನು ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸಿಬಿಎಸ್‍ಸಿ ಮತ್ತು ಕೇಂದ್ರ ಸರ್ಕಾರ ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರು ಪರೀಕ್ಷೆಗೆ ಆದೇಶಿಸಿದೆ.

    ದೇಶಾದ್ಯಂತ ಏಪ್ರಿಲ್ 25 ರಂದು ದ್ವಿತೀಯ ಪಿಯುಸಿ ಅರ್ಥಶಾಸ್ತ್ರದ ಮರುಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿ ದೊರೆಯುವರೆಗೂ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ನಿರ್ಧಾರವನ್ನು ಮುಂದೂಡಿದ್ದೇವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಸೋರಿಕೆಯ ಹೆಚ್ಚಿನ ಮಾಹಿತಿ ದೊರೆತ ನಂತರ 10ನೇ ತರಗತಿ ಗಣಿತಶಾಸ್ತ್ರದ ಮರು ಪರೀಕ್ಷೆ ದೆಹಲಿ, ಹರಿಯಾಣ ವಲಯದಲ್ಲಿ ಮಾತ್ರ ನಡೆಯಲಿದೆ. ಮರುಪರೀಕ್ಷೆ ಜುಲೈನಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಸಚಿವರು ತಿಳಿಸಿದ್ದಾರೆ.

    ಸಿಬಿಎಸ್‍ಸಿ 10ನೇ ತರಗತಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಜಾರ್ಖಂಡ್ ಪೊಲೀಸರು ಚಾತ್ರ ಜಿಲ್ಲೆಯಲ್ಲಿ 12 ಜನ ವಿದ್ಯಾರ್ಥಿಗಳು ಹಾಗೂ ಕೋಚಿಂಗ್ ಸೆಂಟರ್ ಸಿಬ್ಬಂಧಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಎಂಎ ಅರ್ಥಶಾಸ್ತ್ರ ಪರೀಕ್ಷೆ ಪಾಸ್ ಮಾಡಿದ್ರು 98ರ ಹಿರಿಯ ವ್ಯಕ್ತಿ!

    ಎಂಎ ಅರ್ಥಶಾಸ್ತ್ರ ಪರೀಕ್ಷೆ ಪಾಸ್ ಮಾಡಿದ್ರು 98ರ ಹಿರಿಯ ವ್ಯಕ್ತಿ!

    ಪಾಟ್ನಾ: 98 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಮುಕ್ತ ವಿಶ್ವವಿದ್ಯಾಲಯದ ಮೂಲಕ ಅರ್ಥಶಾಸ್ತ್ರ ಸ್ನಾತಕೋತ್ತರ ಪರೀಕ್ಷೆಯನ್ನು ತೇರ್ಗಡೆಯಾಗಿ ಸುದ್ದಿಯಾಗಿದ್ದಾರೆ.

    1938ರಲ್ಲಿ ಪದವಿ ಪಡೆದಿದ್ದ ರಾಜ್ ಕುಮಾರ್ ವೈಶ್ಯ ಈಗ ಪಾಟ್ನಾದ ನಳಂದಾ ಮುಕ್ತ ವಿಯಲ್ಲಿ ಅರ್ಥಶಾಸ್ತ್ರ ಪರೀಕ್ಷೆಯನ್ನು ಬರೆದು ತೇರ್ಗಡೆಯಾಗಿದ್ದಾರೆ.

    ತನ್ನ ಸಾಧನೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ ಅವರು, ಕೊನೆಗೂ ನನ್ನ ಜೀವನದ ದೊಡ್ಡ ಕನಸನ್ನು ನನಸು ಮಾಡಿದ್ದೇನೆ. ಸ್ನಾತಕೋತ್ತರ ಪದವಿ ಪಡೆದಿದ್ದಕ್ಕೆ ಸಂತೋಷ ಆಗುತ್ತಿದೆ. ಯಾರು ಯಾವ ವರ್ಷದಲ್ಲಿ ಬೇಕಾದರೂ ಕನಸು ನನಸು ಮಾಡಬಹುದು ಎನ್ನುವುದಕ್ಕೆ ನಾನು ಉತ್ತಮ ಉದಾಹರಣೆ ಎಂದು ಅವರು ಹೇಳಿದರು.

    ಯಾರು ಅವರ ಸ್ವ ಸಾಮಾರ್ಥ್ಯದ ಬಗ್ಗೆ ನಂಬಿಕೆ ಇಡುತ್ತಾರೋ ಅವರಿಗೆ ಯಾವಾಗಲೂ ಅವಕಾಶಗಳು ತೆರೆದಿರುತ್ತದೆ. ಯಾವತ್ತೂ ನಿರಾಶೆ ಭಾವನೆಯನ್ನು ಇಟ್ಟುಕೊಳ್ಳಬೇಡಿ ಎಂದು ಅವರು ಕಿರಿಯರಿಗೆ ಸಲಹೆ ನೀಡಿದರು.

    ಈ ಪ್ರಾಯದಲ್ಲಿ ಬೆಳಗ್ಗೆ ಬೇಗ ಎದ್ದು ಪರೀಕ್ಷೆಗೆ ತಯಾರಾಗುವುದು ಬಹಳ ಕಷ್ಟದ ಕೆಲಸವಾಗಿತ್ತು . 2015ಕ್ಕೆ ಸ್ನಾತಕೋತ್ತರ ಪದವಿಗೆ ದಾಖಲಾದ ವೈಶ್ಯ ಅವರು ಮುಂದೆ ಪಿಎಚ್‍ಡಿ ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ನಲಂದಾ ಮುಕ್ತ ವಿವಿಯ ಅಧಿಕಾರಿ ಪ್ರತಿಕ್ರಿಯಿಸಿ, ಮೂರು ಗಂಟೆ ಬರೆದು ರಾಜ್ ಕುಮಾರ್ ವೈಶ್ಯ ಪರೀಕ್ಷೆ ಪೂರ್ಣಗೊಳಿಸಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆದ ಅವರು ಎರಡು ಡಜನ್‍ಗಿಂತ ಹೆಚ್ಚು ಉತ್ತರ ಪತ್ರಿಕೆ ತೆಗೆದುಕೊಂಡು ಉತ್ತರ ಬರೆದಿದ್ದಾರೆ ಎಂದು ತಿಳಿಸಿದರು.

    1920 ಏಪ್ರಿಲ್ 1ರಂದು ಉತ್ತರಪ್ರದೇಶದ ಬರೇಲಿಯಲ್ಲಿ ಜನಿಸಿದ ಇವರು 1938ರಲ್ಲಿ ಅಗ್ರಾ ವಿವಿಯಿಂದ ಪದವಿ ಪಡೆದ ಬಳಿಕ 1940ರಲ್ಲಿ ಕಾನೂನು ಡಿಗ್ರಿ ಪಡೆದಿದ್ದರು. ಕುಟುಂಬ ಸಮಸ್ಯೆಯಿಂದಾಗಿ ವೈಶ್ಯ ಅವರಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ.

    ಜಾರ್ಖಂಡ್ ನಲ್ಲಿ 1980ರವರೆಗೆ ಉದ್ಯೋಗದಲ್ಲಿದ್ದ ಇವರು ಜನರ ಮತ್ತು ದೇಶದ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಸ್ನಾತಕೋತ್ತರ ಅರ್ಥಶಾಸ್ತ್ರ ಪದವಿ ಓದಿದ್ದೇನೆ ಎಂದು ಹೇಳಿದ್ದಾರೆ.

    10 ವರ್ಷದ ಹಿಂದೆ ಪತ್ನಿಯನ್ನು ಕಳೆದುಕೊಂಡ ಇವರು ಮಗನ ಜೊತೆ ವಾಸವಾಗಿದ್ದಾರೆ. ಶುದ್ಧ ಸಸ್ಯಾಹಾರಿಯಾಗಿರುವ ವೈಶ್ಯ ಇದೂವರೆಗೆ ಆಧುನಿಕ ಜಗತ್ತಿನ ತಿಂಡಿಗಳನ್ನು ತಿನ್ನಿಲ್ಲವಂತೆ.