Tag: ED Investigation

  • ಇಡಿ ತನಿಖೆಯಿಂದ ವಾಲ್ಮೀಕಿ ನಿಗಮ ಹಗರಣದ ಹಿಂದಿನ ಮಹಾನಾಯಕರ ಮುಖವಾಡ ಕಳಚಲಿದೆ: ಶ್ರೀರಾಮುಲು

    ಇಡಿ ತನಿಖೆಯಿಂದ ವಾಲ್ಮೀಕಿ ನಿಗಮ ಹಗರಣದ ಹಿಂದಿನ ಮಹಾನಾಯಕರ ಮುಖವಾಡ ಕಳಚಲಿದೆ: ಶ್ರೀರಾಮುಲು

    ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು (B.Sriramulu) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಹಗರಣದ ಹಣದಲ್ಲಿ ಇವತ್ತು ಸಂಸದರು ಮತ್ತು ವಿಧಾನಸಭಾ ಸದಸ್ಯರಾಗಿರಬಹುದು. ಆದರೆ ಈ ನಾಡಿನ ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ಹಣ ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

    ಬಳ್ಳಾರಿ ಜಿಲ್ಲೆಯಲ್ಲಿ ಸಂಸದ ತುಕಾರಾಮ್, ಬಳ್ಳಾರಿ ನಗರ ಶಾಸಕ ನಾರ ಭರತ್ ರೆಡ್ಡಿ, ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಮ್ತತು ಕಂಪ್ಲಿ ಶಾಸಕ ಗಣೇಶ್ ಇವರೆಲ್ಲರ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ಆಗುತ್ತಿದೆ. ಈ ನಾಯಕರು ಬಹಳಷ್ಟು ಸಾಚಾವೆಂದು ಮಾತನಾಡುತ್ತಿದ್ದರು. ಇವರೆಲ್ಲ ಮಾಡುವುದೆಲ್ಲ ಅನಾಚಾರ; ಮನೆಮುಂದೆ ಬೃಂದಾವನ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ದರು. ಬಹಳಷ್ಟು ಜನರು ಇವರನ್ನು ಸಾಚಾಗಳು; ಮಾತನಾಡುವ ರೀತಿ ನಡೆದುಕೊಳ್ಳತ್ತಾರೆ ಎಂದು ಅಂದುಕೊಂಡಿದ್ದರು ಎಂದು ಹೇಳಿದ್ದಾರೆ.

    ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ (Valmiki Scam) ಬಗ್ಗೆ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಪಾದಯಾತ್ರೆ ಮಾಡಿದ್ದೆವು. ಸಚಿವ ನಾಗೇಂದ್ರರವರು ರಾಜೀನಾಮೆಯನ್ನು ಕೊಡಬೇಕು ಎಂದು ಒತ್ತಾಯ ಮಾಡಿದ್ದೆವು. ನಮ್ಮ ಒತ್ತಾಯದ ಮೇರೆಗೆ ಆ ಸ್ಥಾನಕ್ಕೆ ಸಚಿವರು ರಾಜೀನಾಮೆ ನೀಡಿ ಜೈಲು ಪಾಲಾದರು ಎಂದು ಹೋರಾಟವನ್ನು ನೆನಪಿಸಿಕೊಂಡಿದ್ದಾರೆ.

    ತನಿಖೆ ನಡೆಯುವ ಸಂದರ್ಭದಲ್ಲಿ ನಿಗಮದ ಒಬ್ಬ ಅಧಿಕಾರಿ ಚಂದ್ರಶೇಖರ್ ರವರು ಡೆತ್‍ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡರು. ಆ ಡೆತ್‍ನೋಟಿನಲ್ಲಿ ಬಹಳ ಸ್ಪಷ್ಟವಾಗಿ ಮಂತ್ರಿಯ ಕೈವಾಡವಿದೆ ಮತ್ತು ಶಾಮೀಲಾಗಿದ್ದಾರೆ ಎಂದಿದ್ದರು. ಯಾವ ಯಾವ ಅಧಿಕಾರಿಗಳು ಶಾಮೀಲಾಗಿದ್ದರು. ಬಿಜೆಪಿ, ಇವತ್ತಿನ ತನಕ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದೆ ಎಂದು ವಿವರಿಸಿದ್ದಾರೆ.

    ಕಳಚಿ ಬೀಳಲಿದೆ ನಾಯಕರ ಮುಖವಾಡ!
    ಇವತ್ತಿನ ಇ.ಡಿ. ದಾಳಿಯಿಂದ ಹಲವಾರು ನಾಯಕರ ಮುಖವಾಡ ಕಳಚಿ ಬೀಳಬೇಕಾಗಿದೆ. ಈ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ ಎಂದು ತಿಳಿಯಬೇಕಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ಮಕ್ಕಳ ವಿದ್ಯಾರ್ಥಿಗಳ ಪ್ರೋತ್ಸಾಹಧನ, ಸ್ಕಾಲರ್‍ಶಿಪ್ ಹಣ, ಗಂಗಾ ಕಲ್ಯಾಣ ಯೋಜನೆಯ ಹಣ, ಬಡವರಿಗೆ ನೀಡಬೇಕಾದ ಯೋಜನೆಯ ಹಣವನ್ನು ಇವರು ನುಂಗಿ ನೀರನ್ನು ಕುಡಿದಿದ್ದಾರೆ ಎಂದು ಆರೋಪಿಸಿದ್ದಾರೆ.

    ನಿಗಮದ 187 ಕೋಟಿ ಹಣವನ್ನು ಬಾರ್ ಶಾಪ್‍ಗಳಿಗೆ, ಸೆಕ್ಯುರಿಟಿ ಏಜೆನ್ಸಿಗಳಿಗೆ, ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದರು. ವರ್ಗಾವಣೆ ಮಾಡಿದ ಹಣ ಎಲ್ಲಿಹೋಯಿತು? ಎಲ್ಲಿ ಹೋಗಿದೆ ಎಂದು ಸರ್ಕಾರಕ್ಕೂ ಉತ್ತರ ಕೊಡುವುದಕ್ಕೆ ಆಗುತ್ತಿಲ್ಲ. ಈ ಸರ್ಕಾರವು ಪರಿಶಿಷ್ಟ ಜಾತಿ-ಪಂಗಡಗಳ ಜನರ ಪರವಾಗಿ ನಾವು ಇದ್ದೇವೆ ಎಂದು ಹೇಳಿಕೆ ನೀಡುತ್ತದೆ. ಆದರೆ ಆ ಮಕ್ಕಳನ್ನು ಉಳಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಸರ್ಕಾರ ಬರಬಹುದು; ಹೋಗಬಹುದು. ಆದರೆ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಯಾವ ರೀತಿ ಇರಬೇಕು ಎಂದು ಅವರಿಗೆ ಜ್ಞಾನವಿರಬೇಕು. ಸರ್ಕಾರದ ಹಣವನ್ನು ಇವರು ನುಂಗಿ ಹಾಕುತ್ತಾರೆ ಎಂದರೆ ಇವರು ರಾಜಕಾರಣಿ ಎಂದು ಕರೆಸಿಕೊಳ್ಳಲು ಯೋಗ್ಯರೇ? ಮುಖ್ಯಮಂತ್ರಿಗಳು ಮತ್ತೊಮ್ಮೆ ನಾಗೇಂದ್ರರವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳುತ್ತಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ನೀಡಿ; ನಮ್ಮ ಆಕ್ಷೇಪವಿಲ್ಲ. ಆದರೆ ನೂರಾರು ಕೋಟಿ ಭ್ರಷ್ಟಾಚಾರ ಮಾಡಿರುವ ಹಣದ ವಸೂಲಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: 

  • ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Valmiki Development Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು (SIT officals) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

    ಸಾಯಿತೇಜ ಬಂಧಿತ ಆರೋಪಿ (Accused). ಚನ್ನಗಿರಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನ ಬಂಧಿಸಿದ್ದಾರೆ. ಮೃತ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದ್ದರಿಂದ ಸಾಯಿತೇಜ ಎಂಬಾತನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ತನಿಖೆ ಆರಂಭಿಸಿದ್ದ ಇಡಿ:
    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ತನಿಖೆ (ED Investigation) ಆರಂಭಿಸಿತ್ತು. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ – ಭಾರತಕ್ಕೂ ಇದೆಯಾ ಆತಂಕ?

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.

  • ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Development Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ (ED Investigation) ಆರಂಭಿಸಿದೆ.

    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ (CBI) ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.