Tag: ED

  • MUDA Case: ತಡರಾತ್ರಿವರೆಗೂ ದೇವರಾಜ್‌ ಮನೆಯಲ್ಲಿ ಇಡಿ ವಿಚಾರಣೆ

    MUDA Case: ತಡರಾತ್ರಿವರೆಗೂ ದೇವರಾಜ್‌ ಮನೆಯಲ್ಲಿ ಇಡಿ ವಿಚಾರಣೆ

    ಬೆಂಗಳೂರು: ಮುಡಾ (MUDA Case) ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿಯಲ್ಲಿರುವ ದೇವರಾಜ್‌ ನಿವಾಸದ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಡರಾತ್ರಿವರೆಗೂ ವಿಚಾರಣೆ ನಡೆಸಿದರು.

    ಭೂ ಮಾಲೀಕ ದೇವರಾಜ್‌ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ಮಧ್ಯರಾತ್ರಿ 12 ಗಂಟೆ ವರೆಗೂ ವಿಚಾರಣೆ ನಡೆಸಿದರು. ಈ ವೇಳೆ ಪ್ರಮುಖ ದಾಖಲೆಗಳ ಪರಿಶೀಲನೆ ಮಾಡಿದರು. ವಿಚಾರಣೆ ಬಳಿಕ ಹೊರಟು ನಿಂತ ಅಧಿಕಾರಿಗಳಿಗೆ ದೇವರಾಜ್‌ ಅವರು ಶೇಕ್‌ ಹ್ಯಾಂಡ್‌ ಮಾಡಿ ಕಳಿಸಿಕೊಟ್ಟರು.

    ದೇವರಾಜ್ ಕುಟುಂಬಕ್ಕೆ ಮೈಸೂರಿನ ಜಾಮೀನು ಬಂದಿದ್ದು ಹೇಗೆ? ಅದರ ಮೂಲ ಯಾವುದು? ಅದನ್ನ ಯಾವಾಗ ಮಾರಾಟ ಮಾಡಿದ್ದು? ಹೀಗೆ ನಾನಾ ವಿಚಾರಗಳ ಬಗ್ಗೆ ಹಾಗೂ ದಾಖಲೆಗಳ‌ ಬಗ್ಗೆ ಇ.ಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದರು.

    ಸಿಎಂ ವಿರುದ್ಧದ ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸೈಟ್‌ನ ಮೂಲ ಮಾಲೀಕ ದೇವರಾಜ್‌. ಲೋಕಾಯುಕ್ತ ದಾಖಲಿಸಿಕೊಂಡಿರುವ ದೂರಿನಲ್ಲಿ ಅವರು ಎ4 ಆರೋಪಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಾಮೈದಾ ಮಲ್ಲಿಕಾರ್ಜುನ್‌ಗೆ ದೇವರಾಜ್‌ ಜಮೀನು ಮಾರಿದ್ದರು.

  • ಧರ್ಮಸ್ಥಳಕ್ಕೆ ಬೇಕಾದ್ರೆ ಬನ್ನಿ, ನಾನು ಮುಡಾ ದಾಖಲಾತಿ ತಂದಿಲ್ಲ: ಬೈರತಿ ಸುರೇಶ್‌

    ಧರ್ಮಸ್ಥಳಕ್ಕೆ ಬೇಕಾದ್ರೆ ಬನ್ನಿ, ನಾನು ಮುಡಾ ದಾಖಲಾತಿ ತಂದಿಲ್ಲ: ಬೈರತಿ ಸುರೇಶ್‌

    ಬೆಂಗಳೂರು: ನಾನು ಯಾವುದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (MUDA) ದಾಖಲಾತಿ ತೆಗೆದುಕೊಂಡು ಬಂದಿಲ್ಲ. ನನ್ನ ಮೇಲೆ ಆರೋಪ ಮಾಡೋ ಕುಮಾರಸ್ವಾಮಿ, ಛಲವಾದಿ ನಾರಾಯಣಸ್ವಾಮಿ ಚಾಮುಂಡೇಶ್ವರಿ ಅಥವಾ ಧರ್ಮಸ್ಥಳಕ್ಕಾಗಲಿ (Dharmasthala) ಬರಲಿ ಅಲ್ಲಿ ಪ್ರಮಾಣ ಮಾಡುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಸವಾಲು ಎಸೆದಿದ್ದಾರೆ.

    ಮುಡಾ ಕಚೇರಿ ಮೇಲೆ ಇಡಿ ದಾಳಿ ಸಂಬಂಧ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ನಾನು ಮುಡಾದ ಯಾವುದೇ ಫೈಲ್ ತಂದಿದ್ದರೆ ಶಿಕ್ಷೆಯಾಗಲಿ. ಕುಮಾರಸ್ವಾಮಿ (HD Kumaraswamy) ಮನೆಯಲ್ಲಿ ಫೈಲ್ ಇರಬಹುದು. ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಫೈಲ್ ಕದ್ದಿರಬಹುದು. ನಾನು ಅಂತಹ ಕೆಲಸ ಮಾಡಿಲ್ಲ ಎಂದು ತಿರುಗೇಟು ನೀಡಿದರು.
    ಇದನ್ನೂ ಓದಿ: MUDA Scam: ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ

    ಚಾಮುಂಡೇಶ್ವರಿಗೋ, ಮಂಜುನಾಥ ದೇವಸ್ಥಾನಕ್ಕೋ ಅವರು ಬರಲಿ. ನಾನೂ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಇಡಿಯವರು ದಾಖಲೆಗಳನ್ನು ಕೇಳಿದ್ದಾರೆ. ಎಷ್ಟು ದಾಖಲೆಗಳನ್ನು ಕೇಳುತ್ತಾರೋ ಅಷ್ಟೂ ದಾಖಲೆಗಳನ್ನು ಕೊಡುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಒಂದೇ ಒಂದು ಸಣ್ಣ ಪೇಪರ್ ನಾನು ತಂದಿದ್ದರೆ ದೇವರು ಕೊಡಬಾರದ ಶಿಕ್ಷೆ ಕೊಡಲಿ. ಸುಳ್ಳು ಹೇಳಿ ಹೇಳಿ ಹಾಳಾಗಿ ಹೋಗುತ್ತಾರೆ. ನಾನೂ ನಿಮ್ಮಂತೆ ದೇಶದ ಪ್ರಜೆ. ಇಡಿ ನನಗೆ ನೋಟಿಸ್‌ ನೀಡಿದರೆ ನಾನೂ ಉತ್ತರ ಕೊಡುತ್ತೇನೆ ಎಂದು ಹೇಳಿದರು.

     

  • MUDA Scam: ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ

    MUDA Scam: ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ

    – ತಹಸೀಲ್ದಾರ್‌ ಕಚೇರಿಯಲ್ಲೂ ED ಅಧಿಕಾರಿಗಳಿಂದ ಪರಿಶೀಲನೆ

    ಮೈಸೂರು: ಮುಡಾ ಸೈಟ್‌ (MUDA Scam Case) ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

    ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರು ಆಧರಿಸಿ ಈ ದಾಳಿ ನಡೆಸಲಾಗಿದೆ. ಬೆಳಗ್ಗೆ 11:30 ಕ್ಕೆ ದಾಳಿ ಇ.ಡಿ ದಾಳಿ ನಡೆಸಿದೆ. ಮುಡಾ ಅಧಿಕಾರಿಗೆ ಸಮನ್ಸ್ ನೀಡಿದ್ರೂ ದಾಖಲೆ ಕೊಡದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ.

    ಕೆಂಗೇರಿಯಲ್ಲಿರುವ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಮನೆಯ ಮೇಲೂ ಇ.ಡಿ ದಾಳಿ ನಡೆಸಿದೆ. ಮೈಸೂರು ತಹಸೀಲ್ದಾರ್ ಕಚೇರಿಗೆ ನಾಲ್ಕು ಜನ ಇಡಿ ಅಧಿಕಾರಿಗಳು ತೆರಳಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರು ತಾಲೂಕು ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾದ ಬಗ್ಗೆ ದಾಖಲೆ ಪಡೆದುಕೊಳ್ಳಲು ಹೋಗಿದ್ದಾರೆ.

  • ಜೈಲಿನಿಂದ ಬಿಡುಗಡೆಯಾಗಿ ಜಮೀರ್‌ ಮನೆಗೆ ಆಗಮಿಸಿದ ನಾಗೇಂದ್ರ – ಟೈಗರ್‌ ಈಸ್‌ ಬ್ಯಾಕ್‌ ಎಂದ ಸಚಿವ

    ಜೈಲಿನಿಂದ ಬಿಡುಗಡೆಯಾಗಿ ಜಮೀರ್‌ ಮನೆಗೆ ಆಗಮಿಸಿದ ನಾಗೇಂದ್ರ – ಟೈಗರ್‌ ಈಸ್‌ ಬ್ಯಾಕ್‌ ಎಂದ ಸಚಿವ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಹಗರಣದ ಪ್ರಮುಖ ಆರೋಪಿ ಮಾಜಿ ಮಂತ್ರಿ ನಾಗೇಂದ್ರಗೆ(Nagendra) ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.

    ಸೋಮವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಬೆಳಗ್ಗೆ ಜಾಮೀನಿನ ವಿಧಿವಿಧಾನಗಳನ್ನು ಪೂರೈಸಿದ ಮಾಜಿ ಮಂತ್ರಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು.

    ಜೈಲಿನಿಂದ ಬಿಡುಗಡೆಯಾಗಿ ನೇರವಾಗಿ ಸಚಿವ ಜಮೀರ್ ಅಹ್ಮದ್ (Zameer Ahmed) ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತಾಡಿದ ನಾಗೇಂದ್ರ, ಕೇಂದ್ರ ಸರ್ಕಾರ ಮತ್ತು ಇಡಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಇದನ್ನೂ ಓದಿ: ಭಾರತ-ಕಿವೀಸ್ ಟೆಸ್ಟ್; ಮೊದಲ ದಿನದಾಟ ಮಳೆಗೆ ಬಲಿ

    ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಇಡಿ ಮೂಲಕ ಕೇಂದ್ರ ಸರ್ಕಾರ ಯತ್ನಿಸಿದೆ. ಸಿಎಂ-ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹೇರಿದ್ರು ಎಂದು ಆಪಾದಿಸಿ ಸಂಡೂರು ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

    ಈ ವೇಳೆ ಮಾತನಾಡಿದ ಸಚಿವ ಜಮೀರ್, ಟೈಗರ್ ಈಸ್ ಬ್ಯಾಕ್ ಎಂದು ಬಣ್ಣಿಸಿದರು.

  • ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ

    ಮಾಜಿ ಸಚಿವ ನಾಗೇಂದ್ರ ಇಂದು ಜೈಲಿಂದ ಬಿಡುಗಡೆ ಸಾಧ್ಯತೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರಗೆ (Nagendra) ಜಾಮೀನು ಸಿಕ್ಕಿದೆ. ಇಂದು (ಮಂಗಳವಾರ) ಅವರು ಜೈಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

    ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಸೋಮವಾರ (ಅ.14) ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special MP/MLA Court) ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿತ್ತು. ಈ ಪ್ರಕರಣದಲ್ಲಿ ಜುಲೈ 12 ರಂದು ಜಾರಿ ನಿರ್ದೇಶನಾಲಯ (ED) ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಕೋರ್ಟ್‌ ಷರತ್ತು ವಿಧಿಸಿದೆ.

    ವಾಲ್ಮೀಕಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿತ್ತು.

    ನಾಗೇಂದ್ರ ಅವರ ಸೂಚನೆ ಮೇರೆಗೆ ವಿಜಯ್ ಕುಮಾರ್ ಗೌಡ ನಗದನ್ನು ನಿರ್ವಹಿಸುತ್ತಿದ್ದರು. ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ಹೇಳಿತ್ತು.

  • ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ

    ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ

    ಬೆಂಗಳೂರು: ಒಂದು ಕಡೆ ನಟ ದರ್ಶನ್ (Darshan) ಜಾಮೀನು ತೀರ್ಪು ಮತ್ತೊಂದು ಕಡೆ ರಾಜಕೀಯ ನಾಯಕರ ತೀರ್ಪು ಭಾರಿ ಕುತೂಹಲ ಮೂಡಿಸಿದೆ.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation scam) ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ತೀರ್ಪು ಸೋಮವಾರ (ಇಂದು) ಪ್ರಕಟವಾಗಲಿದೆ. ಬಹುತೇಕ 12 ಗಂಟೆ ವೇಳೆಗೆ ಜಾಮೀನು ತೀರ್ಪು ಬರುವ ಸಾಧ್ಯತೆಯಿದೆ. ಹಾಗಾಗಿ ಇವತ್ತು ಸಿಟಿ ಸಿವಿಲ್ ನ್ಯಾಯಾಲಯದತ್ತ ಚಿತ್ತ ನೆಟ್ಟಿದೆ. ಇದನ್ನೂ ಓದಿ: ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ಈಗಾಗಲೇ ನಾಗೇಂದ್ರ (BN Nagendra) ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಬೇಲ್ ಸಿಕ್ಕಿದರಷ್ಟೇ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ. ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ:
    ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ಇದೇ ಅಕ್ಟೋಬರ್‌ 5ರಂದು ಸಲ್ಲಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್‌ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು.

    ಆರೋಪ ಪಟ್ಟಿಯಲ್ಲಿ ಏನಿದೆ?
    ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತು. ಸುಮಾರು 89.62 ಕೋಟಿ ರೂ.ಗಳನ್ನು ನಿಗಮದ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆಯಲಾದ ನಕಲಿ ಖಾತೆಗಳಿಗೆ ವರ್ಗಾಯಿಸಿ ನಂತರ ಆ ಹಣವವನ್ನು ಶೆಲ್‌ ಕಂಪನಿಗಳಿಗೆ ಮೂಲಕ ಅಕ್ರಮ ಎಸಗಲಾಗಿದೆ.

    ಬಿ.ನಾಗೇಂದ್ರ ಅವರು ತಮ್ಮ ಪ್ರಭಾವ ಬಳಸಿ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ  ಬೆಂಗಳೂರಿನಎಂಜಿ ರಸ್ತೆ ಶಾಖೆಗೆ ವರ್ಗಾಯಿಸಿದ್ದಾರೆ. 187 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಯಡಿ ರಾಜ್ಯ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೇ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ.

    ತನಿಖೆಯ ವೇಳೆ 20.19 ಕೋಟಿ ರೂ. ಹಣವನ್ನು ಬಳ್ಳಾರಿ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಯ ಪ್ರಚಾರಕ್ಕೆ ದುರ್ಬಳಕೆ ಬಳಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಗೇಂದ್ರ ಅವರ ವೈಯಕ್ತಿಕ ಖರ್ಚಿಗೆ ಬಳಸಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಾಪಸ್‌ – ಹೊಸ ಸರ್ಕಾರ ರಚನೆಗೆ ಅಸ್ತು

    ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.

  • ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ದುಬೈನಲ್ಲಿ ಅರೆಸ್ಟ್‌

    ಮಹಾದೇವ್ ಆ್ಯಪ್ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ದುಬೈನಲ್ಲಿ ಅರೆಸ್ಟ್‌

    ‌ನವದೆಹಲಿ: ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಹಗರಣದ (Mahadev App Betting Scam) ಮಾಸ್ಟರ್ ಮೈಂಡ್ ಸೌರಭ್ ಚಂದ್ರಕರ್‌ನನ್ನು ದುಬೈನಲ್ಲಿ (Dubai) ಬಂಧಿಸಲಾಗಿದೆ. ಇಡಿ (ED) ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್ ಬಳಿಕ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಕಿಂಗ್‌ಪಿನ್‌ನ್ನು ಬಂಧಿಸಲಾಗಿದೆ.

    ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದ ಈ ಹಗರಣವು ಸಾರ್ವಜನಿಕರಿಗೆ 5,000 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದೆ ಎಂದು ಅಂದಾಜಿಸಲಾಗಿದೆ. ಭಾರತದಾದ್ಯಂತ ಪ್ಯಾನಲ್ ಆಪರೇಟರ್‌ಗಳ ಜಾಲದ ಮೂಲಕ ಈ ಆ್ಯಪ್ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳ ಹಣ ವರ್ಗಾವಣೆಯನ್ನು ಇದು ಸುಗಮಗೊಳಿಸುತ್ತದೆ. ಈ ಆ್ಯಪ್ ಕಂಪನಿಗೂ ಚಂದ್ರಕರ್‌ಗೂ ಸಂಪರ್ಕ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

    ಚಂದ್ರಕರ್ ಬಂಧನವು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಅಧಿಕಾರಿಗಳು ಆತನನ್ನು ಭಾರತಕ್ಕೆ ಕರೆತರುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಹಸ್ತಾಂತರ ಪ್ರಕ್ರಿಯೆ ಆರಂಭವಾಗಿದ್ದು, ಒಂದು ವಾರದೊಳಗೆ ಭಾರತಕ್ಕೆ ಕರೆತರುವ ನಿರೀಕ್ಷೆ ಇದೆ. ಬಂಧನದ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಪ್ರಕರಣ ಸಂಬಂಧ ಡಿಸೆಂಬರ್ 2023ರಲ್ಲಿ ರವಿ ಉಪ್ಪಲ್ ಎಂಬಾತನನ್ನು ದುಬೈನಲ್ಲಿ ಸ್ಥಳೀಯ ಅಧಿಕಾರಿಗಳು ಇಡಿ ಮನವಿಯ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ಕಾರ್ನರ್ ನೋಟಿಸ್ (ಆರ್‌ಎನ್) ಮೇಲೆ ಬಂಧಿಸಿದ್ದರು. ಮಹಾದೇವ್ ಆನ್‌ಲೈನ್ ಬುಕ್ಕಿಂಗ್ ಆ್ಯಪ್ ಯುಎಇಯನಿಂದ ಕಾರ್ಯನಿರ್ವಹಿಸುತ್ತಿದೆ ಇಡಿ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಮಹದೇವ್ ಆ್ಯಪ್ ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಆ್ಯಪ್ ಕಾರ್ಯಾಚರಣೆಗಳ ಕುರಿತು ತನಿಖೆ ನಡೆಯುತ್ತಿದೆ.

    ಏನಿದು ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್?
    ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ. ಇದು ಕೋರುವ ದೇಶದಲ್ಲಿ ನ್ಯಾಯಾಂಗ ಅಧಿಕಾರಿಗಳು ನೀಡಿದ ಬಂಧನದ ವಾರಂಟ್ ಅಥವಾ ನ್ಯಾಯಾಲಯದ ಆದೇಶವನ್ನು ಇದಕ್ಕಾಗಿ ಒದಗಿಸಬೇಕು. ಆದಾಗ್ಯೂ, ಆ ವ್ಯಕ್ತಿಯನ್ನು ಬಂಧಿಸಬೇಕೆ ಬೇಡವೇ ಎಂಬುದನ್ನು ನಿರ್ಧರಿಸುವಾಗ ಸದಸ್ಯ ರಾಷ್ಟ್ರಗಳು ತಮ್ಮದೇ ಆದ ಕಾನೂನುಗಳ ಪ್ರಕಾರ ನಡೆದುಕೊಳ್ಳುತ್ತವೆ. ರೆಡ್ ನೋಟಿಸ್ ಎಂಬುದು ಬೇಕಾಗಿರುವ ವ್ಯಕ್ತಿಗೆ (ವಾಂಟೆಡ್) ನೀಡುವ ಅಂತಾರಾಷ್ಟ್ರೀಯ ಎಚ್ಚರಿಕೆ ಮಾತ್ರ, ಇದು ಬಂಧನದ ವಾರಂಟ್ ಅಲ್ಲ. ಆದ್ದರಿಂದ ಅಗತ್ಯವಿರುವ ವ್ಯಕ್ತಿಯನ್ನು ಗುರುತಿಸಲು ಮಾಹಿತಿ, ಅವರ ಹೆಸರು, ಹುಟ್ಟಿದ ದಿನಾಂಕ, ರಾಷ್ಟ್ರೀಯತೆ, ಕೂದಲು ಮತ್ತು ಕಣ್ಣಿನ ಬಣ್ಣ, ಛಾಯಾಚಿತ್ರಗಳು ಮತ್ತು ಬೆರಳಚ್ಚುಗಳು ಲಭ್ಯವಿದ್ದರೆ ಅವುಗಳನ್ನು ಒದಗಿಸುತ್ತಾರೆ

  • Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ

    – ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ (B Nagendra) ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

    ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಇಂದು ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್‌ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್‌ರಾವ್, ನೆಕ್ಕಂಟಿ ನಾಗರಾಜ್, ವಿಜಯ್‌ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

    ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉತ್ತರ ಪ್ರದೇಶ| ಹಳಿಗಳ ಮೇಲೆ ಇರಿಸಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲು ಡಿಕ್ಕಿ

    ಆರೋಪ ಪಟ್ಟಿಯಲ್ಲಿ ಏನಿದೆ?
    ಕರ್ನಾಟಕ ಪೊಲೀಸ್ ಮತ್ತು ಸಿಬಿಐ ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತು. ಸುಮಾರು 89.62 ಕೋಟಿ ರೂ.ಗಳನ್ನು ನಿಗಮದ ಖಾತೆಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆಯಲಾದ ನಕಲಿ ಖಾತೆಗಳಿಗೆ ವರ್ಗಾಯಿಸಿ ನಂತರ ಆ ಹಣವವನ್ನು ಶೆಲ್‌ ಕಂಪನಿಗಳಿಗೆ ಮೂಲಕ ಅಕ್ರಮ ಎಸಗಲಾಗಿದೆ.

    ಬಿ.ನಾಗೇಂದ್ರ ಅವರು ತಮ್ಮ ಪ್ರಭಾವ ಬಳಸಿ ಖಾತೆಯನ್ನು ಯಾವುದೇ ಸೂಕ್ತ ಅನುಮತಿಯಿಲ್ಲದೆ  ಬೆಂಗಳೂರಿನಎಂಜಿ ರಸ್ತೆ ಶಾಖೆಗೆ ವರ್ಗಾಯಿಸಿದ್ದಾರೆ. 187 ಕೋಟಿ ರೂ. ಗಂಗಾ ಕಲ್ಯಾಣ ಯೋಜನೆಯಡಿ ರಾಜ್ಯ ಖಜಾನೆಯಿಂದ 43.33 ಕೋಟಿ ರೂ.ಗಳನ್ನು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೇ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಠೇವಣಿ ಮಾಡಲಾಗಿದೆ.

    ತನಿಖೆಯ ವೇಳೆ 20.19 ಕೋಟಿ ರೂ. ಹಣವನ್ನು ಬಳ್ಳಾರಿ ಕ್ಷೇತ್ರದಿಂದ 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಯ ಪ್ರಚಾರಕ್ಕೆ ದುರ್ಬಳಕೆ ಬಳಕೆ ಮಾಡಲಾಗಿದೆ. ಅಷ್ಟೇ ಅಲ್ಲದೇ ನಾಗೇಂದ್ರ ಅವರ ವೈಯಕ್ತಿಕ ಖರ್ಚಿಗೆ ಬಳಸಲಾಗಿದೆ.

    ನಾಗೇಂದ್ರ ಅವರ ಸೂಚನೆ ಮೇರೆಗೆ ನಗದನ್ನು ನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಗೌಡ ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ.

  • MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

    MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಮತ್ತೊಂದು ಇಸಿಐಆರ್‌(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ.

    2022ರಲ್ಲಿ ಲೋಕಾಯುಕ್ತ (Lokayukta) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಇದನ್ನೂ ಓದಿ: ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

    ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ  2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್‌ ಪ್ರಶ್ನೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.9ರಂದು 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.

    14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ECIR ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು.

     

  • Valmiki Scam| ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ನಾಗೇಂದ್ರ – ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

    Valmiki Scam| ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ನಾಗೇಂದ್ರ – ಇಡಿ ಚಾರ್ಜ್‌ಶೀಟ್‌ ಸಲ್ಲಿಕೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ಮಾಜಿ ಸಚಿವ ನಾಗೇಂದ್ರ (Nagendra) ಎಂದು ಆರೋಪ ಹೊರಿಸಿ ಜಾರಿ ನಿರ್ದೇಶನಾಲಯ (ED) ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

    ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಇಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ. ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇಡಿ ಉಲ್ಲೇಖಿಸಿದೆ.ಇದನ್ನೂ ಓದಿ: ಶುಭಾ ಪೂಂಜಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್: ನಟಿ ಹೇಳೋದೇನು?

    ಚಾರ್ಜ್‌ಶೀಟ್‌ನಲ್ಲಿ ಏನಿದೆ?
    ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

    ನಾಗೇಂದ್ರ, ದದ್ದಲ್‌ ಹೆಸರು ಇರಲಿಲ್ಲ:
    ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (SIT) ಪೊಲೀಸರು 12 ಮಂದಿ ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ಕೋರ್ಟ್‌ನಲ್ಲಿ ಆಗಸ್ಟ್‌ ತಿಂಗಳಿನಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ (Nagendra), ಬಸನಗೌಡ ದದ್ದಲ್ (Basanagouda Daddal) ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ.

    ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.