Tag: ED

  • ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಅಶೋಕ್‌ ಗುಡುಗು

    ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಅಶೋಕ್‌ ಗುಡುಗು

    ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation Scam) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಗುಡುಗಿದ್ದಾರೆ.

    ವಿಧಾನಸೌಧದಲ್ಲಿಂದು (Vidhana Soudha) ಮಾತನಾಡಿದ ಅವರು, ವಿಧಾನಸಭೆ ಅಧಿವೇಶನದಲ್ಲಿ ಸಿಎಂ ಇಡೀ ಅಧಿವೇಶನದ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದ ಬಗ್ಗೆ ಇಡಿ ವರದಿ ಬಿಡುಗಡೆ ಮಾಡಿದೆ. ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಮಂತ್ರಿ ಹೆಸರು ಇದೆ. ನಿಗಮದ ಅಧ್ಯಕ್ಷ ದದ್ದಲ್ ಹೆಸರೂ ಇದೆ. ಎರಡೂ ಹೆಸರು ಡೆತ್ ನೋಟ್‌ನಲ್ಲಿ ಇದೆ. ಆದ್ರೆ ಸಿಎಂ ಎರಡೂ ಪದ ಬಿಟ್ಟು, ಅವರಿಗೆ ಬೇಕಾದದ್ದನ್ನು ಓದಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಪ್ರಕರಣ ಮುಚ್ಚಿ ಹಾಕ್ತಿದ್ದಾರೆ. ಅವರಿಂದ ತನಿಖೆಗೆ ಸಹಕಾರ ಇಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮದ್ಯದ ಅಂಗಡಿಗೆ ಪರವಾನಗಿ ನೀಡಲು ಅಧಿಕಾರಿಗಳು ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದಾರೆ – ಕಾಂಗ್ರೆಸ್‌ ಸದಸ್ಯ ಬಾಂಬ್‌!

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಉಪನಾಯಕ ಬೆಲ್ಲದ್, ಜೆಡಿಎಸ್‌ ನಾಯಕ ಸುರೇಶ್ ಬಾಬು ಎಲ್ಲರೂ ಚರ್ಚೆ ಮಾಡಿದ್ದೇವೆ. ಬ್ಯಾಂಕ್ ಡೆಪಾಸಿಟ್, ಆಡಿಯೋ, ಫೋನ್‌ ಕಾಲ್ ಎಲ್ಲಾ ದಾಖಲೆ ನೀಡಿದ್ದೇವೆ. ಇದೆಲ್ಲಾ ಇದ್ದರೂ ಸಿಎಂ ಡೆತ್ ನೋಟ್ ತಿರುಚುವ ಪ್ರಯತ್ನ ಮಾಡ್ತಿದ್ದಾರೆ. ನಮಗೆ ಅವರ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೈತನಿಗೆ ಅಪಮಾನ ಪ್ರಕರಣ – ಬೆಂಗಳೂರಿನ ಜಿ.ಟಿ ಮಾಲ್ ಬಂದ್!

    ಎಸ್ಸಿ – ಎಸ್ಟಿ ಜನಾಂಗದ ಹಣ ದುರ್ಬಳಕೆ ಮಾಡಿಕೊಂಡಿದ್ದು, ಅವರಿಗೆ ದ್ರೋಹ ಬಗೆದಿದ್ದಾರೆ, ಹರಿ ಕಥೆ ಹೇಳ್ತಿದ್ದಾರೆ. ಭ್ರಷ್ಟಾಚಾರ ಆಗಿರೋದು ನಿಜ. ಯಾರು ಭಾಗಿಯಾಗಿದ್ದಾರೆ ಅಂತ ಉಲ್ಲೇಖ ಮಾಡಿಲ್ಲ. ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲ್ಲ ಅಂದಿದ್ದಾರೆ. ಪಾಪ ಆ ಜನಾಂಗದವರು ನಮಗೆ ಹಣ ಬರುತ್ತೆ ಅಂತ ಕಾಯ್ತಿದ್ದಾರೆ. ಹಾಗಾಗಿ ರಾಜೀನಾಮೆ ಕೊಡುವವರೆಗೂ ನಾವು ವಿರಮಿಸಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ತುಘಲಕ್ ಆಡಳಿತ ಇಲ್ಲ, ಸಿದ್ದರಾಮಯ್ಯ ಸರ್ಕಾರವೇ ಇರೋದು: ಬಿಜೆಪಿಗೆ ಸಿಎಂ ತಿರುಗೇಟು

  • Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

    Valmiki Corporation Scam | ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ – ಕೋರ್ಟ್ ಆದೇಶ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam) ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ (ED Custody) ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ (Representative Court) ಆದೇಶಿಸಿದೆ.

    6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ (Medical Test) ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದ್ರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು. 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ `ಸುಪಾರಿ’ ಗಲಾಟೆ: ಬಿಜೆಪಿ ಶಾಸಕರ ಮಾತಿಗೆ ಕಾಂಗ್ರೆಸ್ ಕೆಂಡಾಮಂಡಲ!

    ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
    ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಇದೇ ಜುಲೈ 12ರಂದು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು. 6 ದಿನಗಳ ಕಸ್ಟಡಿ ಅಂತ್ಯಗೊಂಡ ಬೆನ್ನಲ್ಲೇ ನಾಗೇಂದ್ರ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಇ.ಡಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್ ವಾದಿಸಿ, 8 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಇದಕ್ಕೆ ಆಕ್ಷೇಪಣೆ ಎತ್ತಿದ ಆರೋಪಿ ಪರ ವಕೀಲ ಶ್ಯಾಂ ಸುಂದರ್, ಈಗಾಗಲೇ ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ. ಇದೂವರೆಗೂ ಸಂಪೂರ್ಣ ರಿಮ್ಯಾಂಡ್ ಕಾಪಿ ಸಿಕ್ಕಿಲ್ಲ. ಈಗ ಹಾಜರುಪಡಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ಪೊಲೀಸರ ಅಲ್ಲ. ಅವರು ದಾಖಲು ಮಾಡೋದು ಇಸಿಐಆರ್, ಎಫ್‌ಐಆರ್ ಅಲ್ಲ. ಅವರಿಗೆ ಬಂಧನ ಮಾಡುವ ಅಧಿಕಾರವೇ ಇಲ್ಲ. ಯಾವ ಅಧಿಕಾರದಲ್ಲಿ ಕಸ್ಟಡಿಗೆ ಕೇಳುತ್ತಾ ಇದ್ದಾರೆ? ಯಾವ ವಿಚಾರ ಇಟ್ಟುಕೊಂಡು ಕೇಳಲಾಗ್ತಿದೆ? ಎಂದು ವಾದಿಸಿದರು. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

    ಇದಕ್ಕೆ ಪ್ರತಿವಾದ ಮಂಡಿಸಿದ ಪ್ರಸನ್ನಕುಮಾರ್, ಮತ್ತೆ ರಿಮ್ಯಾಂಡ್ ಕೇಳುತ್ತಾ ಇದ್ದಾರೆ. ನನಗೆ ಕಾಪಿ ಈಗ ಕೊಡ್ತಾ ಇದ್ದಾರೆ ಸರಿ ಅಲ್ಲ. ನೀವು ಹೊಸ ಅಡ್ವಕೇಟ್ ಅಲ್ಲ. ಕಾನೂನಿನ ಪ್ರಕಾರ ಮೊದಲೇ ರಿಮ್ಯಾಂಡ್ ಕಾಪಿ ಕೊಡಬೇಕು ಅಂತ ಇಲ್ಲ. ನಾವು ನ್ಯಾಯಾಲಯಕ್ಕೆ ಕೊಡಬೇಕು. ನ್ಯಾಯಾಲಯದ ಗಮನಕ್ಕೆ ತಂದ ಮೇಲೆಯೇ ಕಸ್ಟಡಿಗೆ ಪಡೆಯೋದು. ಡಿಫೆನ್ಸ್ ಅಡ್ವೊಕೇಟ್‌ಗೆ ಮಾಹಿತಿ ನೀಡಲು ಸಾಧ್ಯವಿಲ್ಲ. ಇದೆಲ್ಲ ಅವರಿಗೆ ಗೊತ್ತಿದೆ ಎಂದು ಕುಟುಕಿದರು. ಇದನ್ನೂ ಓದಿ: ನಟ ದರ್ಶನ್ & ಗ್ಯಾಂಗ್‌ಗೆ ಆ.1ರ ವರೆಗೆ ಜೈಲೇ ಗತಿ – ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

    ಅಲ್ಲದೇ ತನಿಖೆಗೆ ನಾಗೇಂದ್ರ ಸಹಕರಿಸುತ್ತಿಲ್ಲ. ಹೆಚ್ಚಿನ ವಿಚಾರಣೆ ಮುಂದುವರಿಸುವ ಅಗತ್ಯ ಇದೆ. ಪಿಎಂಎಲ್‌ಎ ಸೆಕ್ಷನ್ 65 ಅಡಿ ಆರೋಪಿ ಹೇಳಿಕೆ ದಾಖಲಿಸಲು ಅಧಿಕಾರ ಇದೆ ಎಂದರು. ಈ ವೇಳೆ ಶ್ಯಾಂ ಸುಂದರ್ ಅವರು, ನಾಗೇಂದ್ರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿ, ಇಡಿ ಅಧಿಕಾರಿಗಳು ಅಲ್ಲಿಯೇ ವಿಚಾರಣೆ ಮಾಡಬಹುದು. ಇಲ್ಲಿದ್ದರೇ ಅವರ ಮೇಲೆ ಒತ್ತಡ ಹೇರಲಾಗುತ್ತೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿ, ಈಗಾಗಲೇ ಹೇಳಿಕೆ ದಾಖಲು ಮಾಡಿ ಆಗಿದೆ ಎಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ಮತ್ತೆ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು. ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – ಕಟ್ಟೆಯೊಡೆದ ಆಕ್ರೋಶ!

  • Valmiki Corporation Scam | ನಿಗಮದ ಹಣವನ್ನ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ – ಇಡಿ ಸ್ಫೋಟಕ ಹೇಳಿಕೆ!

    Valmiki Corporation Scam | ನಿಗಮದ ಹಣವನ್ನ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ – ಇಡಿ ಸ್ಫೋಟಕ ಹೇಳಿಕೆ!

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕೃತವಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ನಿಗಮದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ ಎಂದು ಉಲ್ಲೇಖಿಸಿದೆ.

    4 ರಾಜ್ಯಗಳಲ್ಲಿ 23 ಕಡೆ ಇಡಿ ಅಧಿಕಾರಿಗಳ (ED Officers) ತಂಡ ದಾಳಿ ನಡೆಸಿತ್ತು. ಈ ವೇಳೆ ಅನೇಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದ ಇಡಿ ಬುಧವಾರ ಮಾಹಿತಿ ಬಹಿರಂಗಪಡಿಸಿದೆ. ಈ ಪ್ರಕರಣದಲ್ಲಿ ಸುಮಾರು 90 ಕೋಟಿ ರೂ.ಗಳಷ್ಟು ಅಕ್ರಮ ಮಾಡಲು 18 ನಕಲಿ ಬ್ಯಾಂಕ್‌ ಖಾತೆಗಳನ್ನ ಬಳಸಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಮದ್ಯ ಖರೀದಿ ಮಾಡಲು ಬಳಕೆ ಮಾಡಿರೋದು ಬೆಳಕಿಗೆ ಬಂದಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ.

    ಅಲ್ಲದೇ, ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬಿ.ಎನ್‌ ನಾಗೇಂದ್ರ ಮತ್ತು ದದ್ದಲ್ ಅವರ ಮನೆಯಲ್ಲಿ ಕೆಲ ಪ್ರಮುಖ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ (Basanagouda Daddal) ಕೂಡ ಭಾಗಿ ಆಗಿದ್ದಾರೆ ಅಂತ ಇಡಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ

    ಮೇ 26ರಂದು ನಿಗಮದ ಉದ್ಯೋಗಿ ಚಂದ್ರಶೇಖರನ್‌ ಆತ್ಮಹತ್ಯೆಯ ಬಳಿಕ ರಾಜ್ಯ ಪೊಲೀಸರು ಹಾಗೂ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ಗಳ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು. ಅಕ್ರಮದ ಬೆನ್ನತ್ತಿ ಹೊರಟಾಗ ಗಣನೀಯ ಪ್ರಮಾಣದ ಹಣವನ್ನು ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಲಾಗಿದೆ. ಇದರೊಂದಿಗೆ ಅಕ್ರಮದಲ್ಲಿ ಬಂದ ಇತರೇ ಹಣವನ್ನು ಬಳಸಿಕೊಂಡು ಲ್ಯಾಂಬೋರ್ಗಿನಿ ಸೇರಿದಂತೆ ಐಷಾರಾಮಿ ವಾಹನಗಳನ್ನ ಖರೀದಿಸಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ ನೀಡುವ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುತ್ತಿದೆ: ಡಿಕೆಶಿ

    ಮಾಜಿ ಸಚಿವ ನಾಗೇಂದ್ರ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ನಗದು ನಿರ್ವಹಣೆಯಲ್ಲಿ ತೊಡಗಿದ್ದ ಸಹವರ್ತಿಗಳ ಬಗ್ಗೆಯೂ ಮಾಹಿತಿ ಬಯಲಾಗಿದೆ. ಅಷ್ಟೇ ಅಲ್ಲದೇ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರ ನಿವಾಸದಲ್ಲಿ ಅಕ್ರಮ ಹಣ ನಿರ್ವಹಣೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ. ಆ ನಂತರ ನಾಗೇಂದ್ರ ಅವರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಜು.18ರ ವರೆಗೆ ಇಡಿ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಲೋಕಾರ್ಪಣೆ – ಪ್ರಾಯೋಗಿಕ ಸಂಚಾರಕ್ಕೆ ಡಿಕೆಶಿ ಚಾಲನೆ!

  • Valmiki Scam| ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ

    Valmiki Scam| ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದೆ.

    ಬೆಂಗಳೂರಿನ ಡಾಲರ್ಸ್‌ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ (Manjula) ಅವರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು ಈಗ ಅವರನ್ನು ಶಾಂತಿನಗರದ ಕಚೇರಿಗೆ ಕರೆ ತಂದುವಿಚಾರಣೆ ನಡೆಸುತ್ತಿದ್ದಾರೆ.

    ವಶಕ್ಕೆ ಪಡೆದಿದ್ದು ಯಾಕೆ?
    ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್‌ ಖಾತೆಗಳಿಗೆ (Bank Account) ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್‌ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

    Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ.

    ಹೌದು. ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಜಾರಿ ನಿರ್ದೇಶನಾಲಯದ (ED) ಪ್ರವೇಶದ ಬಳಿಕ ಒಂದೊಂದೇ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿವೆ.

    ಕೋಟಿ ಕೋಟಿ ಹಣವನ್ನು ಲೂಟಿ ಹೊಡೆಯಲು ಎಂಡಿ ಪದ್ಮನಾಭ್ (Padmanabh) ನಕಲಿ ವ್ಯಕ್ತಿಯನ್ನೇ ಸೃಷ್ಟಿಸಿ ನಿಗಮದಲ್ಲಿ ಹುದ್ದೆ ಸಹ ನೀಡಿದ್ದರು. ಈ ನಕಲಿ ವ್ಯಕ್ತಿ 45 ಕೋಟಿ ರೂ. ಹಣ ವ್ಯವಹಾರ ಮಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

    ಲೂಟಿಗಾಗಿ ನಕಲಿ ಹುದ್ದೆ:
    ಕೋಟಿ ಕೋಟಿ ಲೂಟಿ ಹೊಡೆಯಲು ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆಯನ್ನು ಸೃಷ್ಟಿಸಿದ್ದರು. ಈ ಹುದ್ದೆಗೆ ಶಿವಕುಮಾರ್‌ ಹೆಸರಿನಲ್ಲಿ ಉದ್ಯೋಗಿಯನ್ನು ನೇಮಕ ಮಾಡಲಾಗಿತ್ತು. ಜ್ಯೂನಿಯರ್ ಅಕೌಂಟೆಂಟ್ ಅಂತಾ ಐಡಿ ಕಾರ್ಡ್ ನೀಡಿ ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಲಾಗಿತ್ತು. ಅಸಲಿಗೆ ಶಿವಕುಮಾರ್‌ ಹೆಸರಿನ ವ್ಯಕ್ತಿಯೇ ಇರಲಿಲ್ಲ. ಇದನ್ನೂ ಓದಿ: ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆಎಲ್‌ ರಾಹುಲ್‌ ಭಾಗಿ

    ಹಣಕ್ಕೆ ಕನ್ನ ಹಾಕಲು ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ನಲ್ಲಿ ಫೆ. 21ರಂದು 034123030001619 ಖಾತೆ ಓಪನ್‌ ಆಗುತ್ತದೆ.ಈ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಹೋಗುತ್ತದೆ. ಮನವಿ ಮೇರೆಗೆ ನಿಗಮದಿಂದ ಮಾ 5ರಿಂದ ಮೇ 6 ರವರೆಗೆ 187 ಕೋಟಿ ರೂ. ಹಣ ವರ್ಗಾವಣೆಯಾಗುತ್ತದೆ. ಶಿವಕುಮಾರ್‌ ಖಾತೆಯಿಂದ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಆಗುತ್ತದೆ. ಪದ್ಮನಾಭ್ ಕೃತ್ಯಕ್ಕೆ ಯೂನಿಯನ್‌ ಬ್ಯಾಂಕ್ ಸಿಬ್ಬಂದಿ ಸಾಥ್ ನೀಡಿದ್ದರಿಂದ ಇಷ್ಟೊಂದು ಹಣವನ್ನು ಲೂಟಿ ಮಾಡಲಾಗಿದೆ.

  • Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

    Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

    ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ (Valmiki Scam) ನಡೆದಿರುವ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆದಾಯದ ಮೂಲ ಕೆದಕಲು ಜಾರಿ ನಿರ್ದೇಶನಾಲಯ (ED) ಮುಂದಾಗಿದೆ.

    2023ರ ವಿಧಾನಸಭೆ ಚುನಾವಣೆ (Vidhan Sabha Election) ವೇಳೆ ನಾಗೇಂದ್ರ ಸಲ್ಲಿಕೆ ಮಾಡಿರುವ ಅಫಿಡವಿಟ್ ಹಾಗೂ ದಾಳಿ ವೇಳೆ ಸಿಕ್ಕಿದ ಆಸ್ತಿ ಪತ್ರಗಳನ್ನು ತಾಳೆ ಮಾಡಲು ಮಂದಾಗಿದೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ನಾಗೇಂದ್ರ ಆಸ್ತಿ ಎಷ್ಟಿದೆ?
    ಚುನಾವಣೆ ಸಮಯದಲ್ಲಿ ಒಟ್ಟು 17 ಕೋಟಿ 20 ಲಕ್ಷಕ್ಕೂ ಅಧಿಕ ಆಸ್ತಿಯನ್ನು ನಾಗೇಂದ್ರ ಘೋಷಿಸಿದ್ದರು. ವಾಹನ, ಚಿನ್ನಾಭರಣ ಸೇರಿ 12.35 ಕೋಟಿ ರೂ. ಚರಾಸ್ತಿ, 4.88 ಕೋಟಿ ರೂ. ಸ್ಥಿರಾಸ್ತಿಯನ್ನು ಘೋಷಿಸಿದ್ದರು.  ಇದನ್ನೂ ಓದಿ: ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆಎಲ್‌ ರಾಹುಲ್‌ ಭಾಗಿ

    ಬ್ಯಾಂಕ್ ಖಾತೆ, ಇನ್ಶೂರೆನ್ಸ್, ಖಾಸಗಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ನಾಗೇಂದ್ರ ಸಿರಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿಯಲ್ಲಿ 4.25 ಎಕರೆ ಜಮೀನು, ಬಳ್ಳಾರಿ ನಗರದ ನೆಹರು ಕಾಲೋನಿಯಲ್ಲಿ ಫ್ಲ್ಯಾಟ್‌, ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಫ್ಲ್ಯಾಟ್‌, ಬಿಇಎಲ್ ರಸ್ತೆಯಲ್ಲಿ ಫ್ಲ್ಯಾಟ್‌ ಹೊಂದಿದ್ದಾರೆ.

    ತನಿಖೆಯ ವೇಳೆ ಈಗಿನ ಆಸ್ತಿ ಮತ್ತು 2023ರ ಅಫಿಡವಿಟ್‌ನಲ್ಲಿರುವ ಆಸ್ತಿ ತಾಳೆ ಹಾಕಿದಾಗ ವ್ಯತ್ಯಾಸ ಕಂಡುಬಂದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಲಿದೆ.

     

  • ಇಡಿ ಬಂಧನ ಭೀತಿ – ಅಜ್ಞಾತವಾಸದಲ್ಲಿ ದದ್ದಲ್, ರಾಯಚೂರಿನಲ್ಲಿ ಆಪ್ತರ ಭೇಟಿ

    ಇಡಿ ಬಂಧನ ಭೀತಿ – ಅಜ್ಞಾತವಾಸದಲ್ಲಿ ದದ್ದಲ್, ರಾಯಚೂರಿನಲ್ಲಿ ಆಪ್ತರ ಭೇಟಿ

    – ಮಳೆಗಾಲದ ಅಧಿವೇಶನ ನೆಪದಲ್ಲಿ ವಿಚಾರಣೆಗೆ ಗೈರಾಗ್ತಾರಾ ದದ್ದಲ್?

    ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ (Basanagouda Daddal) ಇಡಿ (ED) ಬಂಧನದ ಭೀತಿಯಲ್ಲೇ ಓಡಾಡುತ್ತಿದ್ದಾರೆ. ಯಾರ ಸಂಪರ್ಕಕ್ಕೂ ಸಿಗದ ದದ್ದಲ್ ರಾತ್ರೋರಾತ್ರಿ ರಾಯಚೂರಿಗೆ (Raichur)  ಬಂದು ಆಪ್ತರನ್ನು ಮಾತ್ರ ಭೇಟಿ ಮಾಡಿ ಹೋಗಿದ್ದಾರೆ.

    ವಾಲ್ಮೀಕಿ ನಿಗಮದ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿಯಲ್ಲಿರುವ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಇಡಿ ವಿಚಾರಣೆಗೆ ಹಾಜರಾಗ್ತಾರಾ? ಅಥವಾ ಯಾರ ಸಂಪರ್ಕಕ್ಕೂ ಸಿಗದೇ ಅಜ್ಞಾತವಾಸದಲ್ಲೇ ಮುಂದುವೆರೆಯುತ್ತಾರಾ? ಅನ್ನೋದು ಸದ್ಯದ ಕುತೂಹಲ. ಆದರೆ ಇಡಿ ಬಂಧನದ ಭೀತಿಯಲ್ಲಿ ಎಸ್‌ಐಟಿ ಅಧಿಕಾರಿಗಳಿಗೆ ಬಂಧಿಸುವಂತೆ ಕೇಳಿಕೊಂಡಿರುವ ದದ್ದಲ್ ಈಗ ಪ್ಲಾನ್ ಬಿ ನಡೆಸಿರುವ ಸಾಧ್ಯತೆಯನ್ನೂ ಅಲ್ಲಗೆಳೆಯುವಂತಿಲ್ಲ. ಇದನ್ನೂ ಓದಿ: ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್‌, ಕೆಎಲ್‌ ರಾಹುಲ್‌ ಭಾಗಿ

    ಇಂದಿನಿಂದ ಆರಂಭವಾಗುವ ಮಳೆಗಾಲದ ಅಧಿವೇಶನ ನೆಪದಲ್ಲಿ ಇಡಿ ವಿಚಾರಣೆಗೆ ಗೈರಾಗುವ ಸಾಧ್ಯತೆಗಳೂ ಇವೆ. ಎರಡು ದಿನಗಳ ಕಾಲ ನಡೆದ ಇಡಿ ದಾಳಿಯಲ್ಲಿ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ಕಲೆ ಹಾಕಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿರುವ ದದ್ದಲ್ ಇಂದಿನ ಅಧಿವೇಶನದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ವಿಚಾರಣೆಗೆ ಗೈರಾದರೆ ಸ್ಪೀಕರ್ ಅನುಮತಿ ಪಡೆದು ದದ್ದಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸುವ ಅವಕಾಶವಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕಸ ತೆಗೆಯಲು 30 ವರ್ಷಕ್ಕೆ ಗುತ್ತಿಗೆ – 45 ಸಾವಿರ ಕೋಟಿ ಟೆಂಡರ್‌ನಲ್ಲಿ 15 ಸಾವಿರ ಕಿಕ್‌ ಬ್ಯಾಕ್‌: ಹೆಚ್‌ಡಿಕೆ ಬಾಂಬ್‌

    ಯಾರ ಸಂಪರ್ಕಕ್ಕೂ ಸಿಗದ ಬಸನಗೌಡ ದದ್ದಲ್ ರಾತ್ರೋರಾತ್ರಿ ರಾಯಚೂರಿಗೆ ಬಂದು ಬೆಳಗಾಗುತ್ತಿದ್ದಂತೆ ಹೊರಟು ಹೋಗಿದ್ದು ಯಾಕೆ ಎಂಬ ಪ್ರಶ್ನೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಕುಟುಂಬ ಬಿಟ್ಟು ಏಕಾಂಗಿಯಾಗಿ ರಾಯಚೂರಿಗೆ ಬಂದ ದದ್ದಲ್ ಕೆಲವೇ ಕೆಲವು ಆಪ್ತರೊಂದಿಗೆ ಸಮಾಲೋಚನೆ ನಡೆಸಿ, ಬೆಳಗ್ಗೆ ಮಂತ್ರಾಲಯ ಮಾರ್ಗವಾಗಿ ಬೆಂಗಳೂರು ಕಡೆಗೆ ಹೊರಟು ಹೋಗಿದ್ದಾರೆ. ತನ್ನ ಕಾರನ್ನು ಬಳಸದೆ ಬೆಂಗಳೂರಿನಿಂದ ಬರುವಾಗ ಆಪ್ತರ ಕಾರನ್ನು ಬಳಸಿದ್ದಾರೆ. ಮಂತ್ರಾಲಯದವರೆಗೂ ಆಪ್ತನ ಕಾರಿನಲ್ಲೇ ತೆರಳಿ ಮಂತ್ರಾಲಯದಿಂದ ಕಾರು ಬದಲಿಸಿ ಬೆಂಗಳೂರು ಕಡೆಗೆ ಹೋಗಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!

    ಭಾನುವಾರ ಬೆಳಗ್ಗೆ ರಾಯಚೂರಿನಿಂದ ಹೊರಟ ಬಸನಗೌಡ ದದ್ದಲ್ ಮಾರ್ಗಮಧ್ಯೆ ಗಿಲ್ಲೆಸುಗೂರಿನಲ್ಲಿ ಕಾರ್ಯಕರ್ತರನ್ನು ಮಾತನಾಡಿಸಿದ್ದಾರೆ. ಗುಡದೂರಿನ ರಾಮರಾವು ತಾತನ ಆಶಿರ್ವಾದ ಪಡೆದು ದದ್ದಲ್ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಆದರೆ ಬೇರೆ ಯಾರ ಸಂಪರ್ಕಕ್ಕೆ ಸಿಗದೆ ಓಡಾಡಿಕೊಂಡಿರುವ ದದ್ದಲ್ ಇಡಿ ಬಂಧನ ಭೀತಿಯಲ್ಲಿ ಕಣ್ಣಾಮುಚ್ಚಾಲೆ ಆಟ ನಡೆಸಿದ್ದಾರೆ. ಇದನ್ನೂ ಓದಿ: Karnataka Assembly Session| ಟಾರ್ಗೆಟ್‌ ಸಿದ್ದರಾಮಯ್ಯ – ಪ್ರತಿಪಕ್ಷಗಳಿಗೆ ಸಿಕ್ಕಿವೆ 3 ಬ್ರಹ್ಮಾಸ್ತ್ರಗಳು

  • ಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

    ಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

    ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದ (Valmiki Case) 187 ಕೋಟಿ ರೂಪಾಯಿ ಹಗರಣದ ಪ್ರಕರಣ ಹಿನ್ನೆಲೆ ಇ.ಡಿ‌ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರಾತ್ರೋರಾತ್ರಿ ರಾಯಚೂರಿಗೆ (Raichuru) ಆಗಮಿಸಿ ಬೆಳಗ್ಗೆಯೇ ನಗರದಿಂದ ಕಾಲ್ಕಿತ್ತಿದ್ದಾರೆ.

    ಬೆಳಗ್ಗೆ ಯಾರನ್ನೂ ಭೇಟಿಯಾಗದೆ ಮನೆಯಿಂದ ಅವಸರಲ್ಲಿ ಕಾರು ಹತ್ತಿ ಪ್ರಯಾಣ ಮಾಡಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಂಡು ವೇಗವಾಗಿ ಕಾರಿನಲ್ಲಿ ಹೊರಟು ಹೋಗಿದ್ದಾರೆ. ‌ಮಂತ್ರಾಲಯ ರಸ್ತೆ ಮಾರ್ಗವಾಗಿ ಬೆಂಗಳೂರು ಕಡೆಗೆ ತಮ್ಮ‌ ಆಪ್ತರ ಜೊತೆ ಹೊರಟಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಕೇಸ್‌: 18 ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು ಹೇಗೆ? ಇಂಚಿಂಚು ಮಾಹಿತಿ ಬಿಚ್ಚಿಟ್ಟ ED!

    ಮಾರ್ಗಮಧ್ಯೆ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗಿಲ್ಲೆಸುಗೂರಿನಲ್ಲಿ ಕೆಲ ಕಾರ್ಯಕರ್ತರನ್ನ ಭೇಟಿಯಾಗಿ ಮುಂದೆ ತೆರಳಿದ್ದಾರೆ. ತಮ್ಮ ಕಾರನ್ನ ಬಿಟ್ಟು ಕಾರ್ಯಕರ್ತನ ಕ್ರೇಟಾ ಕಾರ್‌ನಲ್ಲಿ ಬಸನಗೌಡ ದದ್ದಲ್‌ (Basanagouda Daddal) ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

    ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ದದ್ದಲ್‌ಗೆ ಈಗಾಗಲೇ ಜಾರಿ ನಿರ್ದೇಶನಾಲಯ (Enforcement Directorate) ನೋಟಿಸ್‌ ನೀಡಿದೆ. ಇ.ಡಿ ಬಂಧನ ಭೀತಿಯಲ್ಲಿರುವ ಶಾಸಕರಿದ್ದಾರೆ. ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರರನ್ನು ಬಂಧಿಸಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್

  • ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್

    ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್

    ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ (Valmiki Development Corporation Scam) ಪ್ರಕರಣದಲ್ಲಿ ನಾಗೇಂದ್ರ (B Nagendra) ಬಂಧನ ವಿಚಾರವಾಗಿ ಗೃಹಸಚಿವ ಜಿ ಪರಮೇಶ್ವರ್  (G Parameshwar) ಪ್ರತಿಕ್ರಿಯಿಸಿದ್ದು, ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು. ತನಿಖೆಗೆ ನಮ್ಮ ತಕರಾರಿಲ್ಲ ಎಂದು ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಡಿಯವರು (ED) ತನಿಖೆ ನಡೆಸುತ್ತಿದ್ದಾರೆ. ಅವರಿಗೆ ಏನು ಮಾಹಿತಿ ಸಿಕ್ಕಿದೆಯೋ ಆ ಆಧಾರದಲ್ಲಿ ಬಂಧಿಸಿದ್ದಾರೆ. ಇದು ಕಾನೂನಿನ ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಬಳಸಬಾರದು. ಸಿಐಡಿ ತನಿಖೆ ನಡೆಯುತ್ತಿತ್ತು. ಪ್ರಕರಣದಲ್ಲಿ ಇದ್ದಕ್ಕಿದ್ದಂತೆ ಇಡಿ ಪ್ರವೇಶ ಆಗಿದೆ ಎಂದರು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿದ್ದರಾಮಯ್ಯ, ಡಿಕೆಶಿಯೂ ಇದ್ದಾರೆ – ಕೇಂದ್ರ ಸಚಿವ ಜೋಶಿ ಬಾಂಬ್‌!

    ಇಡಿ ಬಂಧನದಿಂದ ತಪ್ಪಿಸಿಕೊಂಡು ಶಾಸಕ ದದ್ದಲ್ ಓಡಾಡುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಎಸ್‌ಐಟಿಯವರು ನಾಗೇಂದ್ರ, ದದ್ದಲ್ ಇಬ್ಬರನ್ನೂ ಕರೆದು ವಿಚಾರಣೆ ಮಾಡಿದ್ದಾರೆ. ಅಗತ್ಯ ಕಂಡುಬಂದರೆ ಮತ್ತೆ ಕರೆಯುತ್ತಾರೆ. ದದ್ದಲ್ ಅವರು ಎಲ್ಲಿಗೂ ತಪ್ಪಿಸಿಕೊಂಡು ಹೋಗಿಲ್ಲ. ಇಲ್ಲೇ ಎಲ್ಲೋ ಅವರ ಕುಟುಂಬದವರ ಜೊತೆ ಇದ್ದಾರೆ. ಶುಕ್ರವಾರವೂ ನಾನು ದದ್ದಲ್ ಬಗ್ಗೆ ಕೇಳಿದಾಗ ಅವರು ಇಲ್ಲೇ ಅವರ ಕುಟುಂಬದವರ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ಎಸ್‌ಐಟಿಯವರೇ ಬಂಧನ ಮಾಡಲಿ ಅಂತ ಸಿಐಡಿ ಕಚೇರಿಗೆ ದದ್ದಲ್ ಹೋಗಿದ್ದ ವಿಚಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಗೆ ನಿತಿನ್‌ ಗಡ್ಕರಿ ಎಚ್ಚರಿಕೆ

    ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಬಳಕೆ ಆರೋಪದಲ್ಲಿ ಇಡಿ ದಾಳಿ ಆಗಿದೆ ಎಂಬ ವಿಚಾರದ ಕುರಿತು ಮಾತನಾಡಿ, ಇದು ನನಗೆ ಗೊತ್ತಿಲ್ಲ. ಇಡಿಯವರು ನಮ್ಮ ಪೊಲೀಸರಿಗೆ ಈ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ನಾವು ಊಹೆ ಮಾಡಿ ಹೇಳೋದು ಸರಿಯಲ್ಲ ಎಂದರು. ಬಿಜೆಪಿ ಮಾಜಿ ಎಮ್‌ಎಲ್‌ಸಿ ಡಿಎಸ್ ವೀರಯ್ಯ ಬಂಧನ ವಿಚಾರದ ಬಗ್ಗೆ ಮಾತನಾಡಿದ ಅವರು, ಅದೊಂದು 40-50 ಕೋಟಿ ರೂ. ಅವ್ಯವಹಾರದ ವಿಚಾರ. ವೀರಯ್ಯ ಅವರು ಹಿಂದೆ ದೇವರಾಜ ಅರಸು ನಿಗಮದ ಅಧ್ಯಕ್ಷರಾಗಿದ್ದಾಗ ಟ್ರಕ್ ಟರ್ಮಿನಲ್ ಸಂಸ್ಥೆಯಲ್ಲಿ ಅಕ್ರಮ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಆ ತನಿಖೆ ಹಿನ್ನೆಲೆಯಲ್ಲಿ ವೀರಯ್ಯ ಅವರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಯಾತ್ರಾರ್ಥಿಗಳಿದ್ದ ಬಸ್ ಹಿಂದಿನಿಂದ ಟ್ರಕ್‌ಗೆ ಡಿಕ್ಕಿ – ಮೂವರು ಸಾವು, 14 ಮಂದಿ ಗಂಭೀರ

    ನಾಳೆ ಕಾವೇರಿ ಸರ್ವಪಕ್ಷ ಸಭೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾಳೆ ತಾಂತ್ರಿಕ ಸಮಿತಿ ಏನು ವರದಿ ಕೊಡುತ್ತೋ ನೋಡಬೇಕು. ಎಷ್ಟು ನೀರು ಬರುತ್ತಿದೆ, ಎಷ್ಟು ನೀರು ನಾವು ಕೊಡಲು ಸಾಧ್ಯ ಎಮದು ನಾಳೆ ಸಮಿತಿ ಹೇಳುತ್ತದೆ. ಅವರಿಗೆ ಕೊಡುವಷ್ಟು ನೀರು ನಮ್ಮಲ್ಲಿ ಇರಬೇಕಲ್ಲ. ಈಗ ತಾನೇ ಮಳೆ ಬರುತ್ತಿದೆ. ನೀರು ಬಂದ ನಂತರ ಎಷ್ಟು ಹಂಚಿಕೆ ಮಾಡಲು ಆಗುತ್ತದೆ ಎಂದು ನೋಡಬೇಕು ಎಂದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ಇಂಡಿಗೋ – ಪರಮೇಶ್ವರ್ ಪ್ರವಾಸ ರದ್ದು