Tag: ED

  • ಮಾಜಿ ಸಚಿವ ನಾಗೇಂದ್ರ 6 ದಿನ ಇ.ಡಿ ಕಸ್ಟಡಿಗೆ

    ಮಾಜಿ ಸಚಿವ ನಾಗೇಂದ್ರ 6 ದಿನ ಇ.ಡಿ ಕಸ್ಟಡಿಗೆ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ (Valmiki Case) ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

    ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಶಾಂತಿನಗರದಿಂದ ಇ.ಡಿ ಕಚೇರಿಗೆ ಆರೋಪಿಯನ್ನು ಇ.ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ: ಸದನದಲ್ಲಿ ಮುಡಾ, ವಾಲ್ಮೀಕಿ ಹಗರಣ ಅಸ್ತ್ರ ಪ್ರಯೋಗಕ್ಕೆ ಸಜ್ಜು!

    ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್‌ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

    ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಆದರೆ 6 ದಿನ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದಾರೆ. ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಬಿಡಿಎ ಅಕ್ರಮ ಕೇಸ್ ಮುಚ್ಚಿಹಾಕಲು ಲಂಚ ಪಡೆದ ಆರೋಪ – ಸಿಸಿಬಿ ಅಧಿಕಾರಿ ಯತೀಶ್ ಅಮಾನತು

    ನ್ಯಾಯಾಧೀಶರ ಮುಂದೆ ನಾಗೇಂದ್ರ ಅವರು ಅನಾರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಇದೆ ಎಂದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ಬಳಿಕ 30 ನಿಮಷಗಳ ಕಾಲ ವಿಶ್ರಾಂತಿ ನೀಡಬೇಕು. ಪ್ರತಿದಿನ ವೈದ್ಯಕೀಯ ತಪಾಸಣೆ ಮಾಡುವಂತೆ ನ್ಯಾಯಾಧೀಶರು ತಿಳಿಸಿದ್ದಾರೆ.

  • ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ (Nagendra) ಪ್ರತಿಕ್ರಿಯೆ ನೀಡಿದರು.

    ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್‌ – ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

    ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

    ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್‌ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು. ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ – ಸಿಐಎಸ್‌ಎಫ್‌ ಅಧಿಕಾರಿಗೆ ಸ್ಪೈಸ್‌ಜೆಟ್‌ ಮಹಿಳಾ ಸಿಬ್ಬಂದಿಯಿಂದ ಕಪಾಳಮೋಕ್ಷ

  • ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ಬಹುಮಾನ – ವಾಲ್ಮೀಕಿ ಹಗರಣದಲ್ಲಿ 50 ಲಕ್ಷ‌ ಪಡೆದರೇ?

    ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ಬಹುಮಾನ – ವಾಲ್ಮೀಕಿ ಹಗರಣದಲ್ಲಿ 50 ಲಕ್ಷ‌ ಪಡೆದರೇ?

    – ಬಸನಗೌಡ ದದ್ದಲ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ

    ರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ(Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ (ED) ದಾಳಿ ಎರಡನೇ ದಿನವೂ ಮುಂದುವರಿದಿದೆ.

    ವಾಲ್ಮೀಕಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ (Basanagouda Daddal) ಹಾಗೂ ಅವರ ಮಾಜಿ ಪಿಎ ಪಂಪಣ್ಣ (Pampanna) ಮನೆಯಲ್ಲಿ ಇಡಿ ಅಧಿಕಾರಿಗಳು ಬೀಡು ಬಿಟ್ಟಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ರಾಯಚೂರು ತಾಲೂಕು ಪಂಚಾಯತ್‌ನಲ್ಲಿ ಕೇಸ್ ವರ್ಕರ್ ಆಗಿ ಕೆಲಸ‌ ಮಾಡುತ್ತಿರುವ ಪಂಪಣ್ಣ ರಾಥೋಡ್ ಕತೆ ನಿಜಕ್ಕೂ ರೋಚಕವಾಗಿದೆ. ಕಡು ಬಡತನದಲ್ಲಿ ಬೆಳೆದು ಬಂದ ಪಂಪಣ್ಣ ತಾನು ಮಹಾ ಬುದ್ದಿವಂತ ಎನ್ನುವುದನ್ನು ಈ ಹಿಂದೆಯೇ ಸಾಬೀತು ಮಾಡಿದ್ದಾರೆ. ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ನಲ್ಲಿ 50 ಲಕ್ಷ ಗೆಲ್ಲುವ ಮೂಲಕ ಪಂಪಣ್ಣ ಇಡೀ ಕರ್ನಾಟಕಕ್ಕೆ ಪರಿಚಯವಾಗಿದ್ದರು.  ಇದನ್ನೂ ಓದಿ: ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

    ದೇವದುರ್ಗ ಮೂಲದ ಪಂಪಣ್ಣ ಸ್ಮಶಾನದಲ್ಲಿ ಇಡುವ ಎಡೆಯನ್ನು ತಿಂದು ಬೆಳೆದವರು ಅನ್ನೋ ವಿಚಾರ ಸಂಚಲನ ಮೂಡಿಸಿತ್ತು.

    2012 ರಲ್ಲಿ ನಟ ಪುನೀತ್ ರಾಜ್ ಕುಮಾರ್ (Puneeth Rajkumar) ನಡೆಸಿಕೊಡ್ತಿದ್ದ ಕನ್ನಡ ಕೋಟ್ಯಧಿಪತಿ (Kannada Kotyadipathi) ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಪಂಪಣ್ಣ ಕೊನೆಯವರೆಗೂ ಉಳಿದಿದ್ದರು. ಈ ಶೋ ನಲ್ಲಿ 50 ಲಕ್ಷ ರೂ. ಗೆದ್ದಿದ್ದರು. ಒಂದು ಕೋಟಿ ರೂಪಾಯಿಗೆ ಕೇಳಿದ ಕೊನೆ ಪ್ರಶ್ನೆವರೆಗೂ ಸೇಫ್ ಆಗಿ ಆಡಿದ್ದ ಪಂಪಣ್ಣ ಬಳಿಕ ಕನ್ನಡ ಕೋಟ್ಯಧಿಪತಿಯಾಗಲು ಇದ್ದ ಕೊನೆ ಪ್ರಶ್ನೆಗೆ ಉತ್ತರಿಸಲು ಆಗದೇ ಆಟದಿಂದ ನಿರ್ಗಮಿಸಿ 50 ಲಕ್ಷ ರೂಪಾಯಿ ಪಡೆದಿದ್ದರು.

    2012 ರಲ್ಲಿ ಶಿಕ್ಷಕ ವೃತ್ತಿಯಲ್ಲಿದ್ದ ಪಂಪಣ್ಣ 50 ಲಕ್ಷ‌ ರೂ. ಗೆದ್ದ ಬಳಿಕ ಅಂದಿನ ರಾಯಚೂರು ಸಂಸದರಿಗೆ ಸರ್ಕಾರಿ ಆಪ್ತ ಸಹಾಯಕರಾಗಿ ಸೇರಿಕೊಂಡರು. ಬಳಿಕ ಪಿಡಿಓ ಹುದ್ದೆಗೆ ನಿಯೋಜನೆಗೊಂಡರು. ಕಾರ್ಯಕ್ಕೆ ಹಾಜರಾಗದೇ ಜನಪ್ರತಿನಿಧಿಗಳ ಆಪ್ತ ಸಹಾಯಕ ಕೆಲಸವನ್ನೇ ಹುಡುಕಿಕೊಂಡು ಮಾಡತೊಡಗಿದ್ದರು. ಶಾಸಕ ಬಸನಗೌಡ ದದ್ದಲ್‌ ಅವರಿಗೂ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು.

     

    ಸದ್ಯ ರಾಯಚೂರಿನ (Raichuru) ಬಿಚ್ಚಾಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಆದರೆ ಇಲ್ಲೂ ಕೆಲಸಕ್ಕೆ ಹಾಜರಾಗದೇ ತಾಲೂಕು ಪಂಚಾಯತಿ ಕಚೇರಿಯಲ್ಲಿ ಕೇಸ್ ವರ್ಕರ್ ಆಗಿ ಉಳಿದಿದ್ದಾರೆ. ರಾಯಚೂರಿನ ನೂತನ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಆಪ್ತ ಸಹಾಯಕರಾಗಿ ಹೋಗಲು ಪ್ರಯತ್ನ ನಡೆಸಿದ್ದರು. ಆದರೆ ವಾಲ್ಮೀಕಿ ನಿಗಮದ ಹಗರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ ಆ ನೂತನ ಎಂಎಲ್‌ಸಿ ಪಂಪಣ್ಣನನ್ನ ತಮ್ಮ ಪಿಎ ಆಗಿ ಸೇರಿಸಿಕೊಂಡಿಲ್ಲ.

    ವಾಲ್ಮೀಕಿ ನಿಗಮದ ಹಗರಣದಲ್ಲಿ 50 ಲಕ್ಷ ರೂಪಾಯಿ ಪಡೆದಿರುವ ಆರೋಪ ಹಿನ್ನೆಲೆ ನಗರದ ಆಜಾದ್ ನಗರದಲ್ಲಿರುವ ರಾಯಲ್ ಫೋರ್ಟ್ ಅಪಾರ್ಟ್ಮೆಂಟ್‌ನ ಪಂಪಣ್ಣ ಫ್ಲಾಟ್ ಮೇಲೆ ದಾಳಿ ಮಾಡಿರುವ ಇಡಿ ಅಧಿಕಾರಿಗಳು ಬುಧವಾರದಿಂದ ತಪಾಸಣೆ ನಡೆಸುತ್ತಿದ್ದಾರೆ. ಪಂಪಣ್ಣನ ಫ್ಲಾಟ್ ‌ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದ್ದು ಅಧಿಕಾರಿಗಳು ದಾಖಲೆಗಳನ್ನ ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ.

     

  • ದೆಹಲಿ ಮದ್ಯ ಹಗರಣ – ಈಗ ಸಿಬಿಐನಿಂದ ಕೇಜ್ರಿವಾಲ್‌ ಅರೆಸ್ಟ್‌

    ದೆಹಲಿ ಮದ್ಯ ಹಗರಣ – ಈಗ ಸಿಬಿಐನಿಂದ ಕೇಜ್ರಿವಾಲ್‌ ಅರೆಸ್ಟ್‌

    ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಸಿಬಿಐನಿಂದ (CBI) ಈಗ ಬಂಧನಕ್ಕೆ ಒಳಗಾಗಿದ್ದಾರೆ.

    ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅರವಿಂದ್‌ ಕೇಜ್ರಿವಾಲ್‌ ಬಂಧನಕ್ಕೆ ಒಳಗಾಗಿ ತಿಹಾರ್‌ ಜೈಲಿನಲ್ಲಿ (Tihar Jail) ಇದ್ದಾರೆ. ಸಿಬಿಐ ಸೋಮವಾರ ತಿಹಾರ್‌ ಜೈಲಿನಲ್ಲೇ ಅರವಿಂದ್‌ ಕೇಜ್ರಿವಾಲ್‌ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಇಡಿ ವಿವರಣೆ ಪರಿಗಣಿಸಲು ಟ್ರಯಲ್‌ ಕೋರ್ಟ್‌ ವಿಫಲ – ಕೇಜ್ರಿವಾಲ್‌ ಜಾಮೀನಿಗೆ ತಡೆ

     


    ಕಳೆದ ವಾರ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅನುಮತಿ ಕೋರಿತ್ತು. ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಮತ್ತಷ್ಟು ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಸಿಬಿಐ ಕೋರ್ಟ್‌ಗೆ ತಿಳಿಸಿದೆ.

     

    ಆಪ್‌ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಪ್ರತಿಕ್ರಿಯಿಸಿ, ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಗುವ ಸಾಧ್ಯತೆ ಇರುವಾಗ ದೆಹಲಿ ಸಿಎಂ ವಿರುದ್ಧ ನಕಲಿ ಸಿಬಿಐ ಪ್ರಕರಣವನ್ನು ದಾಖಲಿಸಿ ಬಂಧಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ಮೂಲಗಳು ನನಗೆ ತಿಳಿಸಿವೆ. ಇಡೀ ರಾಷ್ಟ್ರವು ಇದನ್ನು ನೋಡಬಹುದು ಮತ್ತು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

  • ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬಹುಕೋಟಿ ಹಗರಣ ಕೇಸ್; ಇಡಿ ತನಿಖೆ ಬೆನ್ನಲ್ಲೇ ಎಸ್‌ಐಟಿಯಿಂದ ಮತ್ತೊಬ್ಬ ಆರೋಪಿ ಬಂಧನ!

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ (Valmiki Development Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು (SIT officals) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

    ಸಾಯಿತೇಜ ಬಂಧಿತ ಆರೋಪಿ (Accused). ಚನ್ನಗಿರಿಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನ ಬಂಧಿಸಿದ್ದಾರೆ. ಮೃತ ಚಂದ್ರಶೇಖರನ್ ಡೆತ್ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದ್ದರಿಂದ ಸಾಯಿತೇಜ ಎಂಬಾತನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ತನಿಖೆ ಆರಂಭಿಸಿದ್ದ ಇಡಿ:
    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಸೋಮವಾರವಷ್ಟೇ ಜಾರಿ ನಿರ್ದೇಶನಾಲಯ ಪ್ರತ್ಯೇಕವಾಗಿ ತನಿಖೆ (ED Investigation) ಆರಂಭಿಸಿತ್ತು. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಜೈಲಿನಲ್ಲಿರುವ ನಟ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಜಪಾನ್‌ ಅನ್ನು ಕಾಡುತ್ತಿದೆ ಮನುಷ್ಯನ ಮಾಂಸ ತಿನ್ನುವ ವೈರಸ್‌ – ಭಾರತಕ್ಕೂ ಇದೆಯಾ ಆತಂಕ?

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.

  • ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Valmiki Development Corporation) ಬಹುಕೋಟಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ (ED Investigation) ಆರಂಭಿಸಿದೆ.

    ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯವು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ್ ಮತ್ತು ಪರುಶರಾಮ್ ಇಬ್ಬರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಮತ್ತೊಂದೆಡೆ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ (CBI) ಕೂಡ ತನ್ನದೇ ಆಯಾಮದಲ್ಲಿ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಸ್ಫೋಟಕ ಟ್ವಿಸ್ಟ್‌ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ‌!

    ಒಟ್ಟು 9 ಆರೋಪಿಗಳ ಬಂಧನ:
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದಲ್ಲಿ ಈವರೆಗೆ ಎಸ್‌ಐಟಿಯಿಂದ ಒಟ್ಟು 9 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಒಟ್ಟು 94 ಕೋಟಿ 73 ಲಕ್ಷ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ

    ಏನಿದು ಪ್ರಕರಣ?
    ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಬಹುಕೋಟಿ ಹಗರಣದ ಹಿನ್ನೆಲೆಯಲ್ಲಿ ಸಿಬಿಐ, ಇಡಿ ಸಹ ತನಿಖೆಗೆ ಎಂಟ್ರಿ ಆಗಿದೆ.

  • ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿಗೆ ರಿಲೀಫ್ – ಇಡಿ ಸಮನ್ಸ್ ಅಮಾನ್ಯಗೊಳಿಸಿದ ಸುಪ್ರೀಂ

    ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಡಿಕೆಶಿಗೆ ರಿಲೀಫ್ – ಇಡಿ ಸಮನ್ಸ್ ಅಮಾನ್ಯಗೊಳಿಸಿದ ಸುಪ್ರೀಂ

    ಬೆಂಗಳೂರು: ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಡಿಕೆಶಿಗೆ ಇ.ಡಿ (ED) ನೀಡಿದ್ದ ಸಮನ್ಸ್ ಮಾನ್ಯವಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶ ಹೊರಡಿಸಿದೆ.

    ಸಮನ್ಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತು. ಪಿಎಂಎಲ್‌ಎ ಅಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿತು. ಈ ಹಿನ್ನೆಲೆ ಸಮನ್ಸ್ ಮಾನ್ಯವಲ್ಲ ಎಂದು ಆದೇಶ ನೀಡಿತು. ಇದನ್ನೂ ಓದಿ: ದರ್ಶನ್ ವಿರುದ್ಧ ರೌಡಿ ಶೀಟ್? – ಗೃಹಸಚಿವ ಪರಮೇಶ್ವರ್ ಹೇಳಿದ್ದೇನು?

    ಈ ಮೊದಲು ಇ.ಡಿ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶವನ್ನು ಡಿಕೆಶಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಭವನ ನೌಕರ ಎ.ಹನುಮಂತಯ್ಯ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದನ್ನೂ ಓದಿ: ಕೆಪಿಸಿಎಲ್ ನೇಮಕಾತಿ ಪರೀಕ್ಷೆ – ಅಂತಿಮ ಅಂಕಪಟ್ಟಿ ಪ್ರಕಟ

    ಏನಿದು ಪ್ರಕರಣ?: 2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಐಟಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂಬಂಧ ಎರಡೂವರೆ ವರ್ಷದ ಬಳಿಕೆ ಆರೋಪ ಪಟ್ಟಿ ತಯಾರಿಸಿದ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್‌ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. 2019ರಲ್ಲಿ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿತ್ತು. ದಾಳಿ ವೇಳೆ 8 ಕೋಟಿ ರೂ. ನಗದು ಪತ್ತೆಯಾಗಿತ್ತು. ಬಳಿಕ ಡಿಕೆಶಿ ವಿರುದ್ಧ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಇಡಿ ಅಧಿಕಾರಿಗಳು ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಮೊದಲ ಕಡತಕ್ಕೆ ಹೆಚ್‌ಡಿಕೆ ಸಹಿ!

    ಡಿ.ಕೆ ಶಿವಕುಮಾರ್ 800 ಕೋಟಿ ರೂ. ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ 200 ಕೋಟಿ ರೂ. ಠೇವಣಿ ಇದೆ. 20ಕ್ಕೂ ಅಧಿಕ ಬ್ಯಾಂಕ್, 317ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್ ಮೂಲಕ ಅಕ್ರಮ ಹಣ ವರ್ಗಾವಣೆ. ಮಗಳ ಹೆಸರಿನಲ್ಲಿ 108 ಕೋಟಿ ರೂ. ಅಕ್ರಮ ವ್ಯವಹಾರ ನಡೆಸಲಾಗಿದೆ. ಡಿಕೆಶಿ ಪುತ್ರಿಗೆ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ತಿಳಿಸಿಲ್ಲ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ

    ದೆಹಲಿ ನಿವಾಸದ 8.59 ಕೋಟಿ ಹಣಕ್ಕೆ ಲೆಕ್ಕ ಕೊಟ್ಟಿಲ್ಲ. ಡಿ.ಕೆ ಶಿವಕುಮಾರ್ ಹೆಸರಲ್ಲಿ 24, ಸಂಸದ ಡಿಕೆ ಸುರೇಶ್ ಹೆಸರಲ್ಲಿ 27, ತಾಯಿ ಹೆಸರಲ್ಲಿ 38 ಆಸ್ತಿಗಳಿವೆ. ಡಿಕೆಶಿ ಕುಟುಂಬದ ಬಳಿ ಒಟ್ಟು 300 ಆಸ್ತಿಗಳಿವೆ. ಡಿ.ಕೆ ಶಿವಕುಮಾರ್ ವ್ಯವಹಾರದಲ್ಲಿ ಅಕ್ರಮ ಆಸ್ತಿ ಗಳಿಕೆ ಮತ್ತು ಹವಾಲ ದಂಧೆ ನಡೆದಿರುವ ಅನುಮಾನಗಳಿವೆ ಎಂದು ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಮೇಲೆ ಆರೋಪ ಹೊರಿಸಿದ್ದರು. ಇದನ್ನೂ ಓದಿ: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಅನ್ನೋದೇ ತಪ್ಪು: ಆರ್.ಅಶೋಕ್

  • ಸಾಕ್ಷ್ಯಗಳಿದ್ದ 9 ಫೋನ್‌ ನಾಶ – ಸ್ಟಾರ್‌ ಹೋಟೆಲ್‌ನಲ್ಲಿ 10 ಲಕ್ಷ ರೂ. ಮೌಲ್ಯದ ರೂಮ್‌ನಲ್ಲಿ ವಾಸ!

    ಸಾಕ್ಷ್ಯಗಳಿದ್ದ 9 ಫೋನ್‌ ನಾಶ – ಸ್ಟಾರ್‌ ಹೋಟೆಲ್‌ನಲ್ಲಿ 10 ಲಕ್ಷ ರೂ. ಮೌಲ್ಯದ ರೂಮ್‌ನಲ್ಲಿ ವಾಸ!

    ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ (Delhi liquor Policy Scam) ಬಂಧನಕ್ಕೊಳಗಾಗಿರುವ ಬಿಆರ್‌ಎಸ್‌ ಶಾಸಕಿ ಕೆ.ಕವಿತಾ, ಪ್ರಕರಣದ ಸಾಕ್ಷ್ಯಾಧಾರಗಳಿದ್ದ 9 ಫೋನ್‌ಗಳನ್ನ ನಾಶ ಮಾಡಿದ್ದರು. ಜೊತೆಗೆ 10 ಲಕ್ಷ ರೂ. ಮೌಲ್ಯದ ಸ್ಟಾರ್‌ ಹೋಟೆಲ್‌ನಲ್ಲಿ ರೂಮ್‌ ಬುಕ್‌ಮಾಡಿದ್ದರು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ (Delhi liquor Policy Scam) ಉಲ್ಲೇಖಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಅಲ್ಲದೇ ಕವಿತಾ ಅವರು ಈ ಹಿಂದೆಯೇ ದೆಹಲಿಯಲ್ಲಿ ಆಡಳಿತಾರೂಢ ಆಪ್‌ ಪಕ್ಷಕ್ಕೆ ಮದ್ಯದ ಪರವಾನಿಗೆಗೆ ಬದಲಾಗಿ 100 ಕೋಟಿ ರೂ. ಪಾವತಿಸಲು ಸೌತ್ ಗ್ರೂಪ್ ಜೊತೆಗೂಡಿ ಪಿತೂರಿ ನಡೆಸಿದ್ದಾರೆ. ಜೊತೆಗೆ ಇಂಡೋ ಸ್ಪೀರಿಟ್‌ನ ಸ್ಟಾಕ್‌ನಲ್ಲಿ ಪಾಲನ್ನು ಧೀನಪಡಿಸಿಕೊಳ್ಳಲು ಸಂಚು ಹೂಡಿದ್ದರು. ಒಟ್ಟಾರೆ ಅಬಕಾರಿ ನೀತಿ ರದ್ದಾಗುವುದಕ್ಕೆ ಮುನ್ನ 192. 8 ಕೋಟಿ ರೂ.ಗಳಷ್ಟು ಲಾಭ ಗಳಿಸಿದ್ದಾರೆ ಎಂದು ಇಡಿ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

    ವಿವಿಧ ರೂಪದಲ್ಲಿ ಪಡೆದ 100 ಕೋಟಿ ರೂ. ಕಿಕ್‌ಬ್ಯಾಕ್‌ ಹಣವನ್ನ ಅಕ್ರಮ ಮಾರ್ಗಗಳ ಮೂಲಕ ಗೋವಾಕ್ಕೆ ಆಪ್‌ ಚುನಾವಣೆಗೆ ವರ್ಗಾವಣೆ ಮಾಡಲಾಗಿದೆ. ಕವಿತಾ ಮತ್ತು ಸಮೀರ್ ಮಹೇಂದ್ರು ಸೇರಿದಂತೆ ಇತರ ಸೌತ್ ಗ್ರೂಪ್ ಸದಸ್ಯರು ತಮ್ಮ ಈ ಅವ್ಯವಹಾರದ ಅಪರಾಧ ಮುಚ್ಚಿ ಹಾಕಲು ಎಲ್ಎನ್‌ಡೋ ಸ್ಪಿರಿಟ್ಸ್ ರಚನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂಬ ಅಚ್ಚರಿ ಸಂಗತಿಗಳನ್ನೂ ಇಡಿ ತೆರೆದಿಟ್ಟಿದೆ.

    ಜು.3ರ ವರೆಗೆ ನ್ಯಾಯಾಂಗ ಬಂಧನ:
    ದೆಹಲಿ ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.

    ಇದೇ ಪ್ರಕರಣದ ಇತರ ಮೂವರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ಕೋರ್ಟ್‌ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಸೋಮವಾರ (ಜೂ.3) ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ನ್ಯಾಯಾಂಗ ಬಂಧನ ವಿಸ್ತರಿಸಿದರು.

    ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮೇ 15ರಂದು ಕವಿತಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ ಮತ್ತು ಇಡಿ, ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಹೇಳಿತ್ತು.

    ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿ ಒಟ್ಟು 18 ಮಂದಿಯನ್ನು ಇಡಿ ಬಂಧಿಸಿದೆ.

  • ಜೈಲಿಗೆ ಶರಣಾದ ಕೇಜ್ರಿವಾಲ್‌ಗೆ ಜೂನ್‌ 5 ರವರೆಗೆ ನ್ಯಾಯಾಂಗ ಬಂಧನ

    ಜೈಲಿಗೆ ಶರಣಾದ ಕೇಜ್ರಿವಾಲ್‌ಗೆ ಜೂನ್‌ 5 ರವರೆಗೆ ನ್ಯಾಯಾಂಗ ಬಂಧನ

    ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜೂನ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ನಿರೀಕ್ಷಣಾ ಜಾಮೀನು ಪಡೆದು 55 ದಿನಗಳ ನಂತರ ಮೇ 10 ರಂದು ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಹೊರಬಂದಿದ್ದರು. ಇದೀಗ 21 ದಿನಗಳ ಮಧ್ಯಂತರ ಜಾಮೀನಿನ ಬಳಿಕ ಕೇಜ್ರಿವಾಲ್‌ ಅವರು ಇಂದು ತಿಹಾರ್‌ ಜೈಲಿಗೆ (Tihar Jail) ಶರಣಾಗಿದ್ದಾರೆ. ಕೇಜ್ರಿವಾಲ್ ಅವರು ಜೈಲಿಗೆ ಶರಣಾಗುತ್ತಿದ್ದಂತೆಯೇ ಅವರನ್ನು ವರ್ಚುವಲ್‌ ಕಾನ್ಫರೆನ್ಸ್ ಮೂಲಕ ಜಡ್ಜ್ ಸಂಜೀವ್ ಅಗರ್ವಾಲ್ ಮುಂದೆ ಹಾಜರುಪಡಿಸಲಾಯಿತು.

    ಮೇ 20 ರಂದು ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಾಗ, ಜಾರಿ ನಿರ್ದೇಶನಾಲಯವು ಅವರ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ಕೇಜ್ರಿವಾಲ್‌ ಪರ ವಕೀಲರಾದ ರಿಷಿಕೇಶ್ ಕುಮಾರ್ ಮತ್ತು ವಿವೇಕ್ ಜೈನ್ ಅವರು ಅರ್ಜಿಯನ್ನು ವಿರೋಧಿಸಿದರು. ಪ್ರಕರಣದಲ್ಲಿ ಅವರ ಬಂಧನವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ ಎಂದು ಹೇಳಿದರು. ಇದೀಗ ನ್ಯಾಯಾಲವು ದೆಹಲಿ ಸಿಎಂ ಅವರನ್ನು ಜೂನ್‌ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಸ್ತರಿಸಿದೆ.

    ಮೂಲಗಳ ಪ್ರಕಾರ, ಶರಣಾದ ನಂತರ ಕೇಜ್ರಿವಾಲ್ ಅವರನ್ನು ಜೈಲು ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಒಳಪಡಿಸಲಿದ್ದಾರೆ. ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಅವರ ಸಕ್ಕರೆ ಮತ್ತು ರಕ್ತದೊತ್ತಡದ ಮಟ್ಟದ ರಿಪೋರ್ಟ್‌ ಅನ್ನು ಸಹ ಜೈಲು ಅಧಿಕಾರಿಗಳು ದಾಖಲಿಸುತ್ತಾರೆ.

  • ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ನವದೆಹಲಿ: ಅಕ್ರಮ ಗಣಿಗಾರಿಕೆ (Illegal Mining) ಪ್ರಕರಣದಲ್ಲಿ ಪಂಜಾಬ್‌ನ (Punjab) ರೋಪರ್ ಜಿಲ್ಲೆಯ 13 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ಬುಧವಾರ ಶೋಧ ನಡೆಸಿದ್ದು, ಇಲ್ಲಿಯವರೆಗೆ 3 ಕೋಟಿ ರೂ. ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜಲಂಧರ್ ಮೂಲದ ಇ.ಡಿ ತಂಡಗಳಿಂದ ಇನ್ನೂ ದಾಳಿಗಳು ನಡೆಯುತ್ತಿವೆ ಎಂದು ಅಭಿವೃದ್ಧಿಯ ಗೌಪ್ಯ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯು ಅಕ್ರಮ ಗಣಿಗಾರಿಕೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿರುವ ಹಲವಾರು ವ್ಯಕ್ತಿಗಳು ಮತ್ತು ಘಟಕಗಳನ್ನು ಗುರುತಿಸಿ ಶೋಧ ಕಾರ್ಯ ಮುಂದುವರಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ಕುಖ್ಯಾತ ಭೋಲಾ ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇಡಿ ವಶಪಡಿಸಿಕೊಂಡ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಪ್ರಕರಣವು ಪ್ರಸ್ತುತ ಮನಿ ಲಾಂಡರಿಂಗ್ ಆಕ್ಟ್ (PMLA) ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಯ ನಿರ್ಣಾಯಕ ಹಂತದಲ್ಲಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ