Tag: ED

  • ಚುನಾವಣೆ ಸಂದರ್ಭದಲ್ಲಿ ED ನನ್ನನ್ನು ಬಂಧಿಸಲುಬಹುದು – ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಕೆಜಿಎಫ್ ಬಾಬು

    ಚುನಾವಣೆ ಸಂದರ್ಭದಲ್ಲಿ ED ನನ್ನನ್ನು ಬಂಧಿಸಲುಬಹುದು – ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಕೆಜಿಎಫ್ ಬಾಬು

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ (Money Laundering Case) ತನಿಖೆ ನಡೆಸುತ್ತಿರುವ ಇಡಿ (ED) ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ನನ್ನನ್ನು ಬಂಧಿಸಲುಬಹುದು, ನಾನು ದೇವರನ್ನು ನಂಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ಉದ್ಯಮಿ ಕೆಜಿಎಫ್ ಬಾಬು (KGF Babu) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳು ಗುರುವಾರದಿಂದ ತನಿಖೆ ನಡೆಸುತ್ತಿದ್ದಾರೆ. ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದಾರೆ ಮತ್ತೆ ಈಗ ಸೋಮವಾರಕ್ಕೆ ಸಮನ್ಸ್ (Summons) ನೀಡಿದ್ದಾರೆ. ಸೋಮವಾರ ಬೆಳಗ್ಗೆ ಹನ್ನೊಂದು ಗಂಟೆಗೆ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪ, ಮಗಳ ರಾಜಕಾರಣಕ್ಕೆ ಅಂತ್ಯ ಹಾಡಲು ವಿಜಯಸಂಕಲ್ಪ ಅಭಿಯಾನ: ನಳಿನ್ ಕುಮಾರ್ ಕಟೀಲ್

    ವಿಚಾರಣೆ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗಳನ್ನೆ ಪದೇ ಪದೇ ಕೇಳುತ್ತಿದ್ದಾರೆ ನಾನು ಎಲ್ಲದಕ್ಕೂ ಉತ್ತರ ನೀಡುತ್ತಿದ್ದೇನೆ. ಆದರೆ ಅವರು ನನ್ನ ಉತ್ತರದಿಂದ ತೃಪ್ತರಾದಂತೆ ಕಾಣುತ್ತಿಲ್ಲ ಹೀಗಾಗಿ ಸಮನ್ಸ್ ನೀಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಂಧಿಸುತ್ತಾರ ಎನ್ನುವುದು ಗೊತ್ತಿಲ್ಲ. ಆದರೆ ಅವರ ಕೈಯಲ್ಲಿ ಅಧಿಕಾರ ಇದೆ ಯಾವುದನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 1 ವರ್ಷದ ಬಳಿಕ ಜೈಲಿನಿಂದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಿಡುಗಡೆ

    1 ವರ್ಷದ ಬಳಿಕ ಜೈಲಿನಿಂದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಬಿಡುಗಡೆ

    ಮುಂಬೈ: ಹಣ ಅಕ್ರಮ ವರ್ಗಾವಣೆ (Money Laundering Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ (Anil Deshmukh) ಇಂದು ಬಿಡುಗಡೆಯಾಗಿದ್ದಾರೆ.

    72 ವಯಸ್ಸಿನ ದೇಶ್‌ಮುಖ್‌ ಅವರು ಸತತ ಒಂದು ವರ್ಷ ಜೈಲಿನಲ್ಲಿದ್ದರು. ಮುಂಬೈನ (Mumbai) ಅರ್ಥೂರ್‌ ರೋಡ್‌ ಜೈಲಿನಿಂದ ಇಂದು ಬಿಡುಗಡೆಯಾಗುತ್ತಿದ್ದಂತೆ, ಅವರ ಬೆಂಬಲಿಗರು ವೀರೋಚಿತ ಸ್ವಾಗತ ಕೋರಿದರು. ಅನಿಲ್‌ ದೇಶ್‌ಮುಖ್‌ ಅವರು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ – ವಿಮಾನ ಸಂಚಾರಕ್ಕೆ ಅಡಚಣೆ

    ಡಿಸೆಂಬರ್ 12 ರಂದು ದೇಶ್‌ಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತು. ಆದರೆ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಸಮಯ ಕೋರಿದ್ದರಿಂದ ನ್ಯಾಯಾಧೀಶರು ಆದೇಶವನ್ನು 10 ದಿನಗಳವರೆಗೆ ಸ್ಥಗಿತಗೊಳಿಸಿದರು. ಸಿಬಿಐ, ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಆದರೆ ಚಳಿಗಾಲದ ರಜೆಯ ನಂತರ ಜನವರಿಯಲ್ಲಿ ಕೋರ್ಟ್‌ ಮತ್ತೆ ತೆರೆದ ನಂತರವೇ ಅದರ ಮೇಲ್ಮನವಿಯನ್ನು ಆಲಿಸಬಹುದು.

    ಈ ಹಿಂದೆ, ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ದೇಶ್‌ಮುಖ್‌ ಅವರಿಗೆ ನೀಡಿದ್ದ ಜಾಮೀನಿನ ವಿಚಾರವಾಗಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ನಂತರ ಅಕ್ಟೋಬರ್‌ನಲ್ಲಿ ಜಾಮೀನು ಪಡೆದರು. ಆದರೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲೇ ಇರಬೇಕಾಯಿತು. ಇದನ್ನೂ ಓದಿ: ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ದೇಶ್‌ಮುಖ್ ಅವರು ರಾಜ್ಯದ ಗೃಹ ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ಮುಂಬೈನ ವಿವಿಧ ಬಾರ್‌ಗಳಿಂದ 4.7 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂಬ ಗಂಭೀರ ಆರೋಪ ಹೊರಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಮಾನ್ಯತಾ ಗ್ರೂಪ್‌ ಮೇಲೆ ಇಡಿ ದಾಳಿ

    ಮಾನ್ಯತಾ ಗ್ರೂಪ್‌ ಮೇಲೆ ಇಡಿ ದಾಳಿ

    ಬೆಂಗಳೂರು: ನಗರದ ಪ್ರಸಿದ್ಧ ರಿಯಲ್‌ ಎಸ್ಟೇಟ್‌ ಕಂಪನಿ ಮಾನ್ಯತಾ ಗ್ರೂಪ್‌(Manyata Group) ಮೇಲೆ ಜಾರಿ ನಿರ್ದೇಶನಾಲಯ(Enforcement Directorate) ದಾಳಿ ನಡೆಸಿದೆ.

    ಬೆಂಗಳೂರಿನ ರಿಚ್ಮಂಡ್‌ ರೋಡ್‌ನಲ್ಲಿರುವ ಕೇಂದ್ರ ಕಚೇರಿಯೂ ಸೇರಿದಂತೆ ಹಲವು ಕಡೆ ಇದು ಮುಂಜಾನೆಯಿಂದಲೇ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

    ಇನ್ನೋವಾ ಕಾರುಗಳಲ್ಲಿ ಆಗಮಿಸಿದ ಇಡಿ ತಂಡ ತಂಡ ಸಂಸ್ಥೆಯ ಮುಖ್ಯಸ್ಥರಿಗೆ ಸೇರಿದ ಸದಾಶಿವ ನಗರ ಮನೆ ಮೇಲೆಯೂ ದಾಳಿ ಮಾಡಿದೆ. ಇದನ್ನೂ ಓದಿ: ಹೆಲ್ಮೆಟ್ ಧರಿಸದ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುತ್ತೇನೆ: SP ಹರಿರಾಂ ಶಂಕರ್ ಎಚ್ಚರಿಕೆ

    ಮಾನ್ಯತಾ ಪ್ರೊಜೆಕ್ಟ್ ಪ್ರೈವೇಟ್ ಲಿಮಿಟೆಡ್, ಮಾನ್ಯತಾ ಪ್ರಮೋಟರ್ಸ್, ರೆಡ್ಡಿ ವೀರಣ್ಣ ಇನ್‌ವೆಸ್ಟ್‌ಮೆಂಟ್, ರೆಡ್ಡಿ ವೀರಣ್ಣ ಕನ್‌ಸ್ಟ್ರಕ್ಷನ್, ಮಾನ್ಯತಾ ಡೆವಲಪರ್ಸ್, ಮಾನ್ಯತಾ ಇನ್‌ಫ್ರಾಸ್ಟ್ರಕ್ಚರ್‌ ಡೆವಲಪ್‌ಮೆಂಟ್‌ ಪ್ರೈವೇಟ್ ಲಿಮಿಟೆಡ್ ಕಂಪನಿಗಳ ಮೇಲೆ ದಾಳಿ ನಡೆದಿದೆ.

    ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಕ್ರಮ ನಡೆಸಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಹಣ ವರ್ಗಾವಣೆ ಕೇಸ್ – ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

    ಅಕ್ರಮ ಹಣ ವರ್ಗಾವಣೆ ಕೇಸ್ – ಛತ್ತಿಸ್‌ಗಢ ಸಿಎಂ ಉಪಕಾರ್ಯದರ್ಶಿ ಅರೆಸ್ಟ್

    ರಾಯಪುರ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಛತ್ತಿಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh Baghel) ಅವರ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ (Saumya Chaurasia) ಅವರನ್ನ ಶುಕ್ತವಾರ ಜಾರಿ ನಿರ್ದೇಶನಾಲಯ ಬಂಧಿಸಿದೆ.

    ಸೌಮ್ಯಾ ಅವರನ್ನು ಬಂಧಿಸಿದ ಬಳಿಕ ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲಿನಲ್ಲಿ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಇದನ್ನೂ ಓದಿ: ಶ್ರದ್ಧಾ ಬಿಟ್ಟು ಹೋಗುವ ಆತಂಕದಲ್ಲಿ ಹತ್ಯೆ ಮಾಡಿದೆ – ಮಂಪರು ಪರೀಕ್ಷೆಯಲ್ಲಿ ಅಫ್ತಾಬ್ ಮತ್ತೊಮ್ಮೆ ತಪ್ಪೊಪ್ಪಿಗೆ

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್‌ನಲ್ಲಿ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಭಾರತ ಆಡಳಿತ ಸೇವೆಯ (IAS) ಅಧಿಕಾರಿ ಸಮೀರ್ ವಿಷ್ಣೋಯ್ ಹಾಗೂ ಇತರ ಇಬ್ಬರನ್ನು ಬಂಧಿಸಿತ್ತು.

    ಆದಾಯ ತೆರಿಗೆ ಇಲಾಖೆ ನೀಡಿದ್ದ ದೂರಿನ ಅನ್ವಯ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತ್ತು. ಛತ್ತಿಸ್‌ಗಢದಿಂದ ಸಾಗಾಣಿಕೆ ಮಾಡುವ ಪ್ರತಿ ಟನ್ ಕಲ್ಲಿದ್ದಲಿನ ಮೇಲೆ ಟನ್‌ಗೆ 25 ರೂ. ಅಕ್ರಮ ಚಂದಾ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ಸೌಮ್ಯಾ ಅವರ ಮನೆಯ ಮೇಲೆ 2020ರಲ್ಲಿಯೂ ದಾಳಿ ನಡೆದಿತ್ತು. ಆಗ ಕೇಂದ್ರ ಸರ್ಕಾರವು ರಾಜಕೀಯ ಸೇಡು ತೀರಿಸಿಕೊಳ್ಳಲು ಸಂಸ್ಥೆ ಮೂಲಕ ದಾಳಿ ನಡೆಸಿದೆ ಎಂದು ಬಘೇಲ್ ಆರೋಪಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

    ಸದ್ಯಕ್ಕೆ ಡಿಕೆ ಶಿವಕುಮಾರ್ ಬಂಧಿಸಲ್ಲ: ಇಡಿ

    ನವದೆಹಲಿ: ಅಕ್ರಮ ಹಣ ವರ್ಗಾವಣೆ (Money laundering Case) ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದೆಹಲಿ ಹೈಕೋರ್ಟ್‍ಗೆ ತಿಳಿಸಿದ್ದಾರೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಅಧಿಕಾರಿಗಳು ಈ ಹೇಳಿಕೆ ದಾಖಲಿಸಿದ್ದಾರೆ.

    ಜಾರಿ ನಿರ್ದೇಶನಾಲಯದಲ್ಲಿ ತಮ್ಮ ವಿರುದ್ಧ ದಾಖಲಾದ ಎರಡನೇ ಇಸಿಆರ್ (ದೂರು) ರದ್ದುಗೊಳಿಸುವಂತೆ, ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ (Delhi HighCourt) ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ವಾದ ಮಂಡಿಸಿದರು. ಇದನ್ನೂ ಓದಿ: ಕೇರಳ ಕಾಂಗ್ರೆಸ್‌ನಲ್ಲಿ ಬಿರುಕು – ನಾನು ಯಾರಿಗೂ ಹೆದರುವುದಿಲ್ಲ ಎಂದ ಶಶಿ ತರೂರ್

    ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ದಾಖಲಾದ ಮೊದಲ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎರಡನೇ ಕೇಸ್ ದಾಖಲಿಸಿ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ. ಇದನ್ನು ಈಗಾಗಲೇ ಸಿಬಿಐ (CBI) ತನಿಖೆ ನಡೆಸುತ್ತಿದೆ. ಈ ಮಧ್ಯೆ ಇಡಿ ಎರಡನೇ ಕೇಸ್ ದಾಖಲಿಸಿ ವಿಚಾರಣೆಗೆ ಕರೆದಿದೆ. ಇಡಿ ದಾಖಲಿಸಿರುವ ಇಸಿಐಆರ್ ರದ್ದು ಮಾಡಬೇಕು, ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.

    ಇದಕ್ಕೆ ಇಡಿ ಪರ ವಾದ ಮಂಡಿಸಿದ ವಕೀಲರು, ಸದ್ಯಕ್ಕೆ ಡಿ.ಕೆ ಶಿವಕುಮಾರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎರಡನೇ ಪ್ರಕರಣದಲ್ಲಿ ಸಿಬಿಐ ಶಿಫಾರಸು ಆಧರಿಸಿ ದಾಖಲೆಗಳ ಪರಿಶೀಲನೆ ನಡೆದಿದೆ. ಅವರನ್ನು ಬಂಧಿಸುವ ಪ್ರಯತ್ನ ಇಡಿ ಮಾಡಿಲ್ಲ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ಡಿಸೆಂಬರ್ 2ಕ್ಕೆ ವಿಚಾರಣೆ ಮುಂದೂಡಿದೆ.

    Live Tv
    [brid partner=56869869 player=32851 video=960834 autoplay=true]

  • EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್

    EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್

    ನವದೆಹಲಿ: ಜಾರಿ ನಿರ್ದೇಶನಾಲಯ (ED) ಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ವಿಚಾರಣೆಗೂ ಮುನ್ನ ಮಾತನಾಡಿದ ಅವರು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

    ನ್ಯಾಷನಲ್ ಹೆರಾಲ್ಡ್ ಪ್ರಕರಣ (National Herald Case) ಕ್ಕೆ ಸಂಬಂಧಿಸಿದಂತೆ, ಯಂಗ್ ಇಂಡಿಯಾಕ್ಕೆ ದೇಣಿಗೆ ನೀಡಿದ ವಿಚಾರದಲ್ಲಿ ಡಿ.ಕೆ ಸುರೇಶ್ ಅವರಿಗೆ ಎರಡನೇ ಬಾರಿಗೆ ಸಮನ್ಸ್ ನೀಡಲಾಗಿತ್ತು. ಸಮನ್ಸ್ ಹಿನ್ನಲೆ ಇಂದು ದೆಹಲಿಯಲ್ಲಿರುವ ಇಡಿ ಕಚೇರಿಗೆ ಹಾಜರಾದರು. ಇದನ್ನೂ ಓದಿ: ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

    ವಿಚಾರಣೆಗೂ ಮುನ್ನ ಮಾತನಾಡಿದ, ಇಡಿ ಕಿರುಕುಳ ನೀಡುವ ಸಂಸ್ಥೆಯಾಗಿದೆ, ಇಡಿ ಅನ್ನೋ ಹೆಸರು ಬದಲಿಸಿ ಕಿರುಕುಳ ಸಂಸ್ಥೆ ಮಾಡಬೇಕು, ರಾಜಕೀಯ ಕಾರಣಗಳಿಗೆ ಕಿರುಕುಳ ನೀಡುತ್ತಿದ್ದಾರೆ ಅನಿಸುತ್ತಿದೆ. ಕಳೆದ ಬಾರಿ ವಿಚಾರಣೆ ಎದುರಿಸಿದ್ದೆವು, ಆನ್ ಲೈನ್ (Online)ನಲ್ಲಿ ದಾಖಲೆಗಳನ್ನು ಸಲ್ಲಿಸುವುದಾಗಿ ಹೇಳಿದ್ದೆವು. ಆದರೂ ಮತ್ತೆ ವಿಚಾರಣೆಗೆ ಕರೆದಿದ್ದಾರೆ.

    ಡಿ.ಕೆ ಶಿವಕುಮಾರ್ (D.K Shivakumar) ಅವರಿಗೂ ಸಮನ್ಸ್ ನೀಡಿದ್ದರು. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನಲೆ ವಿಚಾರಣೆಗೆ ಬಂದಿಲ್ಲ. ವಿಚಾರಣೆಗೆ ಬರಲು ಇನ್ನೊಂದು ದಿನಾಂಕ ಕೇಳಿದ್ದಾರೆ. ಬೇರೆ ತನಿಖಾಧಿಕಾರಿಯಿಂದ ಸಮನ್ಸ್ ಬಂದಿದೆ. ತನಿಖಾಧಿಕಾರಿ ಬದಲಾಗಿರುವ ಬಗ್ಗೆ ವಿಚಾರಣೆ ಬಳಿಕ ಮಾಹಿತಿ ಕೊಡುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

    ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಿಂದ (National Herald case) ಗಾಂಧಿ ಕುಟುಂಬಕ್ಕೆ (Gandhi Famiy) ಸದ್ಯಕ್ಕೆ ಮುಕ್ತಿ ದೊರೆತಂತೆ ಕಾಣ್ತಿಲ್ಲ. ಕಾಂಗ್ರೆಸ್ (Congress) ಒಡೆತನದ ಯಂಗ್ ಇಂಡಿಯನ್‌ನಲ್ಲಿ ಸಂಶಯಾಸ್ಪದ ವಹಿವಾಟುಗಳು ನಡೆದಿದ್ದು, ಜಾರಿ ನಿರ್ದೇಶನಾಲಯ (ED) ಮತ್ತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಹುಲ್‌ ಗಾಂಧಿಯವರಿಗೆ (Rahul Gandhi) ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

    ಶೆಲ್ ಕಂಪನಿಗಳ ಮೂಲಕ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸುಮಾರು 4 ರಿಂದ 5 ಕೋಟಿ ರೂ.ಗಳ ವಹಿವಾಟು ನಡೆದಿದೆ. ಈ ಹೇಳಿಕೆಯನ್ನು ಇ.ಡಿ (ED) ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಖರ್ಗೆ ಸಮ್ಮುಖದಲ್ಲಿ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಶೋಧ: ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ

    ಪವನ್ ಬನ್ಸಾಲ್, ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್‌ನ ಎಲ್ಲಾ ಪದಾಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಕರೆಸಲಾಗುತ್ತದೆ. ಜೊತೆಗೆ ಅನುಮಾನಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಇಟ್ಟುಕೊಂಡೇ ಅವರ ವಿಚಾರಣೆ ನಡೆಸಲು ಇಡಿ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ (AICC President) ಮಲ್ಲಿಕಾರ್ಜುನ ಖರ್ಗೆಗೂ ಸಮನ್ಸ್ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ – ಯಂಗ್‌ ಇಂಡಿಯಾ ಕಚೇರಿ ಸೀಲ್‌ ಮಾಡಿದ ED

    ಸೋನಿಗಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯಂಗ್ ಇಂಡಿಯನ್‌ನಲ್ಲಿ ಹೆಚ್ಚಿನ ಷೇರು ಹೊಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಆಗಸ್ಟ್‌ ಇಡಿ ದೆಹಲಿಯ ಯಂಗ್ ಇಂಡಿಯನ್ ಕಚೇರಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    ಹೆರಾಲ್ಡ್ ಹೌಸ್ ಕಟ್ಟಡದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ 6 ಗಂಟೆಗಳಿಗೂ ಹೆಚ್ಚು ಕಾಲ ಶೋಧ ನಡೆಸಲಾಗಿತ್ತು. ಸಂಸತ್ತಿನ ಅಧಿವೇಶನದ ಮಧ್ಯದಲ್ಲಿಯೇ ಮಲ್ಲಿಕಾರ್ಜುನ್ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಇಂದು ಇಡಿ ವಿಚಾರಣೆಗೆ ಹಾಜರಾಗಲ್ಲ: ಡಿ.ಕೆ ಶಿವಕುಮಾರ್

    ಇಂದು ಇಡಿ ವಿಚಾರಣೆಗೆ ಹಾಜರಾಗಲ್ಲ: ಡಿ.ಕೆ ಶಿವಕುಮಾರ್

    ಬೆಂಗಳೂರು: ನ್ಯಾಷನಲ್ ಹೆರಾಲ್ಡ್ (National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದ್ದು, ಆದರೆ ಇಂದು ವಿಚಾರಣೆಗೆ ಹಾಜರಾಗಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಇಡಿ (ED) ವಿಚಾರಣೆಗೆ ದೆಹಲಿಗೆ ಹೋಗಬೇಕಿತ್ತು. ಆದರೆ ನಿನ್ನೆ ಖರ್ಗೆಯವರ ಕಾರ್ಯಕ್ರಮ ಇತ್ತು. ಇಂದು ವಿನಯ್ ಕುಲಕರ್ಣಿಯವರ ಪೂರ್ವ ನಿಯೋಜಿತ ಕಾರ್ಯಕ್ರಮವಿದೆ. ಆದ್ದರಿಂದ ಇಡಿ ವಿಚಾರಣೆಗೆ ಹಾಜರಾಗಲು ಆಗಲ್ಲ ಪೂರ್ವ ನಿಯೋಜಿತ ಕಾರ್ಯಕ್ರಮ ಇದೆ ಎಂದು ಮನವಿ ಮಾಡಿದ್ದೇನೆ. ಸಂಸದ ಡಿ.ಕೆ.ಸುರೇಶ್ (D.K Suresh) ಇಂದು ಇಡಿ ವಿಚಾರಣೆಗೆ ಹಾಜರಾಗ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈ, ಥಾಣೆ ನಡುವೆ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಪ್ಲಾನ್: ಏಕನಾಥ್ ಶಿಂಧೆ

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಡಿಕೆ ಬ್ರದರ್ಸ್‍ಗೆ ಸಮನ್ಸ್ ನೀಡಿತ್ತು. ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಇಂದು ಕಿತ್ತೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಇಂದು ವಿಚಾರಣೆಗೆ ಗೈರಾಗಲಿದ್ದಾರೆ. ಅಲ್ಲದೆ ಬೇರೆ ದಿನಾಂಕ ನಿಗದಿಗೆ ಇ-ಮೇಲ್ ಮೂಲಕ ಇಡಿಗೆ ಮನವಿ ಮಾಡಿದ್ದಾರೆ. ಇಂದು ಸಂಸದ ಡಿಕೆ.ಸುರೇಶ್ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ED ಪ್ರಕರಣದಲ್ಲಿ ಬಂಧನದ ಭೀತಿ – ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಕೋರ್ಟ್ ಮೊರೆ

    ED ಪ್ರಕರಣದಲ್ಲಿ ಬಂಧನದ ಭೀತಿ – ಮಧ್ಯಂತರ ರಕ್ಷಣೆ ಕೋರಿ ಡಿಕೆಶಿ ಕೋರ್ಟ್ ಮೊರೆ

    ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ (Assembly Elections)  ಸಿದ್ಧವಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ (DK Shivakumar) ಬಂಧನ ಭೀತಿ ಶುರುವಾಗಿದೆ. ಇಡಿ (ED) ಅಧಿಕಾರಿಗಳು ತಮ್ಮ ವಿರುದ್ಧ ಎರಡನೇ ದೂರು ದಾಖಲಿಸಿಕೊಂಡ ಬಳಿಕ ಅವರನ್ನು ಬಂಧಿಸುವ ಸಾಧ್ಯತೆ ಇರುವ ಹಿನ್ನೆಲೆ ಮಧ್ಯಂತರ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

    ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಡಿ.ಕೆ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲ ಮಯಾಂಕ್ ಜೈನ್, ಡಿ.ಕೆ ಶಿವಕುಮಾರ್‌ಗೆ ವಿಚಾರಣೆ ಹೆಸರಲ್ಲಿ ಸಮನ್ಸ್ ನೀಡಿ ಚುನಾವಣಾ ಹೊತ್ತಲ್ಲಿ ಕಿರುಕುಳ ನೀಡಬಾರದು ಮತ್ತು ಏಕಾಏಕಿ ಬಂಧಿಸಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: Breaking-ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಕೆ : ರಾಹುಲ್ ವಿರುದ್ಧ ಎಫ್ಐಆರ್‌

    ವಾದ ಆಲಿಸಿದ ಕೋರ್ಟ್ ಇಡಿ ಪರ ವಕೀಲರನ್ನು ತನಿಖೆ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಇಡಿ ಪರ ವಕೀಲರು ಸದ್ಯ ಡಿ.ಕೆ ಶಿವಕುಮಾರ್‌ಗೆ ಸಮನ್ಸ್ ನೀಡುವ ಯಾವುದೇ ಉದ್ದೇಶಗಳನ್ನು ಇಡಿ ಹೊಂದಿಲ್ಲ ಎಂದು ತಿಳಿಸಿದರು. ಈ ಹಿನ್ನೆಲೆ ಮಧ್ಯಂತರ ಆದೇಶ ನೀಡದೆ, ಪ್ರಕರಣದ ವಿಸ್ತೃತ ವಿಚಾರಣೆಗಾಗಿ ನವೆಂಬರ್ 23ಕ್ಕೆ ಮುಂದೂಡಲಾಯಿತು. ಇದನ್ನೂ ಓದಿ: ಟಿಕೆಟ್ ಆಕಾಂಕ್ಷಿಗಳಿಂದ ಡಿಕೆಶಿ ಲಕ್ಷ-ಲಕ್ಷ ಲೂಟಿ; BJP

    ಇದಕ್ಕೂ ಮುನ್ನ ಡಿ.ಕೆ ಶಿವಕುಮಾರ್ ತಮ್ಮ ಮೇಲಿನ ಇಡಿ ಪ್ರಕರಣಗಳನ್ನು ರದ್ದು ಮಾಡುವಂತೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ನಡೆಸಿ ಇಡಿಗೆ ನೋಟಿಸ್ ನೀಡಿದ್ದ ಕೋರ್ಟ್, ಡಿಸೆಂಬರ್ 15ಕ್ಕೆ ವಿಚಾರಣೆ ಮುಂದೂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಂಕಷ್ಟ- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

    ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಂಕಷ್ಟ- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

    ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ (Hemant Soren) ಅವರಿಗೆ ಸಮನ್ಸ್ ನೀಡಿದೆ. ಗುರುವಾರ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸಿಎಂಗೆ ತಿಳಿಸಲಾಗಿದೆ.

    ಹೇಮಂತ್ ಸೊರೆನ್ ಅವರ ಸಹಾಯಕ ಪಂಕಜ್ ಮಿಶ್ರಾ ತನಿಖೆಯ ವೇಳೆ ಕೆಲವು ಸತ್ಯಗಳು ಬಹಿರಂಗಗೊಂಡಿವೆ, ಅದನ್ನು ಪರಿಶೀಲಿಸಬೇಕಾಗಿದೆ. ಈ ಹಿನ್ನಲೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜುಲೈನಲ್ಲಿ ಸೊರೆನ್ ಅವರ ಆಪ್ತ ಸಹಾಯಕ ಮತ್ತು ಬರ್ಹೈತ್ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಮಿಶ್ರಾ ಅವರನ್ನು ಏಜೆನ್ಸಿ ಬಂಧಿಸಿತ್ತು. ಬಳಿಕ ಮಿಶ್ರಾ ಒಳಗೊಂಡಂತೆ ಪ್ರಕರಣದಲ್ಲಿ ಇತರ ಇಬ್ಬರ ವಿರುದ್ಧ ಪ್ರಾಸಿಕ್ಯೂಷನ್ ದೂರನ್ನು (ಚಾರ್ಜ್‌ಶೀಟ್‌ಗೆ ಸಮಾನ) ಸಲ್ಲಿಸಿತ್ತು. ಇದರಲ್ಲಿ ಮಿಶ್ರಾ ಅವರ ನಿಯಂತ್ರಣದಲ್ಲಿರುವ ಸಾಹಿಬ್‌ಗಂಜ್ ಜಿಲ್ಲೆ ಮತ್ತು ಜಾರ್ಖಂಡ್‌ನ ಪಕ್ಕದ ಪ್ರದೇಶಗಳಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪತ್ತೆಹಚ್ಚಿದೆ ಎಂದು ಸೆಪ್ಟೆಂಬರ್‌ನಲ್ಲಿ ಸಂಸ್ಥೆ ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇದನ್ನೂ ಓದಿ: ʼನಮ್ಮ ಮೆಟ್ರೊʼದಿಂದ ಆನ್‌ಲೈನ್‌ ಟಿಕೆಟ್‌ ಲೋಕಾರ್ಪಣೆ – ಪ್ರಯಾಣಿಕರಿಂದ ಭರ್ಜರಿ ರೆಸ್ಪಾನ್ಸ್‌

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಪ್ರಾಸಿಕ್ಯೂಷನ್ ದೂರಿನಲ್ಲಿ ಇಡಿ, ಮಿಶ್ರಾ ಅವರು ಕ್ರಷರ್‌ಗಳ ಸ್ಥಾಪನೆಯನ್ನು ನಿಯಂತ್ರಿಸುತ್ತಿದ್ದರು. ‘ಬಹುತೇಕ ಎಲ್ಲಾ ಗಣಿಗಳಲ್ಲಿ’ ಮತ್ತು ವಸ್ತುಗಳ ಸಾಗಣೆಯಲ್ಲಿ ಸ್ಥಿರ ಪಾಲು ಹೊಂದಿದ್ದಾರೆ ಎಂದು ಹೇಳಿದರು. ಇಡಿ ಮೂವರನ್ನು ಆರೋಪಿಗಳೆಂದು ಹೆಸರಿಸಿದೆ. ಈ ಪೈಕಿ ಮಿಶ್ರಾ, ಅವರ ಸಹವರ್ತಿ ಬಚ್ಚು ಯಾದವ್ ಮತ್ತು ಅಕ್ರಮ ಗಣಿಗಾರಿಕೆಯ ಮೂಲಕ ಗಳಿಸಿದ ಆದಾಯವನ್ನು ಮನಿ ಲಾಂಡರಿAಗ್ ಮಾಡಿದ ಪ್ರೇಮ್ ಪ್ರಕಾಶ್ ಮೂವರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಮಾಜಿ ಖಜಾಂಚಿ ರವಿ ಕೇಜ್ರಿವಾಲ್ ಅವರ ಹೇಳಿಕೆಯನ್ನು ಇಡಿ ತನ್ನ ದೂರಿನಲ್ಲಿ ಉಲ್ಲೇಖಿಸಿದೆ. ಇದರಲ್ಲಿ ಒಮ್ಮೆ ಸಭೆಯಲ್ಲಿ ಅವರು ಕಲ್ಲು ಮತ್ತು ಮರಳು ಗಣಿಗಾರಿಕೆಯಿಂದ ಬರುವ ಹಣವನ್ನು ನೇರವಾಗಿ ಹಸ್ತಾಂತರಿಸುವಂತೆ ಮಿಶ್ರಾ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಭೀಕರ ಮಳೆಗೆ ಇಬ್ಬರು ಬಲಿ- 7 ಜಿಲ್ಲೆಯ ಶಾಲಾ, ಕಾಲೇಜಿಗೆ ರಜೆ

    ಜುಲೈ 17 ರಂದು, ಮಿಶ್ರಾ ಬಂಧನಕ್ಕೆ 2 ದಿನಗಳ ಮೊದಲು, ಜೆಎಂಎಂ ಪತ್ರಿಕಾಗೋಷ್ಠಿಯಲ್ಲಿ ಇಡಿ ಸಿಎಂ ಸೊರೆನ್ ಅವರ ಇಮೇಜ್‌ಗೆ ಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿತ್ತು.

    Live Tv
    [brid partner=56869869 player=32851 video=960834 autoplay=true]