Tag: Education Board

  • ಬೆಂಗಳೂರು | ಡಿಸೆಂಬರ್ 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು | ಡಿಸೆಂಬರ್ 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ – ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ಶಿಕ್ಷಣ ಇಲಾಖೆ (Education Department) ದಿನಾಂಕ ಘೋಷಣೆ ಮಾಡಿದೆ.

    ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಇದನ್ನೂ ಓದಿ: ದೆಹಲಿಯಲ್ಲಿ ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ಗಳಲ್ಲಿ ಭಾರಿ ಬೆಂಕಿ ಅವಘಡ

    ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಮಾಹಿತಿ ನೀಡಿದೆ.

     

  • Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

    Karnataka | ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

    ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

    ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಸಾಂದರ್ಭಿಕ ಚಿತ್ರ

    ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದ್ರು. ಇದನ್ನೂ ಓದಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

    ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

    2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್‌

  • ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ – ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

    ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ – ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ

    – ಪರಿಷ್ಕೃತ ಪರೀಕ್ಷಾ ಶುಲ್ಕ ಎಷ್ಟಿದೆ?

    ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ (SSLC Exam Fee) ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ.

    2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ಅದರನ್ವಯ 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ ಹೀಗಿದೆ…
    – ಪ್ರಥಮ ಬಾರಿ ಹಾಜರಾಗುವ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ – 676 ರೂ. ನಿಂದ 710 ರೂ.ಗೆ ಹೆಚ್ಚಳ.

    ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ
    – ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ – 236 ರೂ. ನಿಂದ 248 ರೂ.ಗೆ ಹೆಚ್ಚಳ.
    – ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕ – 69 ರೂ. ನಿಂದ 72 ರೂ.ಗೆ ಹೆಚ್ಚಳ.

    ಪುನರಾವರ್ತಿತ ಶಾಲಾ/ ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ
    * ಒಂದು ವಿಷಯಕ್ಕೆ- 427 ರೂ ನಿಂದ 448 ಗೆ ಹೆಚ್ಚಳ
    * ಎರಡು ವಿಷಯಕ್ಕೆ -532 ರೂನಿಂದ 559 ರೂಗೆ ಹೆಚ್ಚಳ.
    * ಮೂರು ಮತ್ತು ಮೂರಕ್ಕಿಂತ ಜಾಸ್ತಿ ವಿಷಯಗಳು – 716 ರೂ. ನಿಂದ 752 ರೂ.ಗೆ ಹೆಚ್ಚಳ.

  • SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    SSLC, ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ (SSLC Exam) ಹಾಗೂ ದ್ವಿತೀಯ ಪಿಯುಸಿ (2nd PUC Exam) ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ www.kseab.karnataka.gov.in ನಲ್ಲಿ ಪರೀಕ್ಷೆ-1, ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟಿಸಿದೆ. 2026ರ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್‌ 9ರ ವರೆಗೆ ಕಾಲಾವಕಾಶ ನೀಡಲಾಗಿದೆ.

    ಆಕ್ಷೇಪಣೆಗಳನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

    2nd PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
    ದ್ವಿತೀಯ ಪಿಯುಸಿ ಪರೀಕ್ಷೆ – 1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೊದಲ ಪರೀಕ್ಷೆ 2026ರ ಫೆಬ್ರವರಿ 28 ರಂದು ನಡೆಯಲಿದೆ. ಮಾರ್ಚ್ 17 ರಂದು ಕೊನೆಯ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25 ರಂದು ಪರೀಕ್ಷೆ ಶುರುವಾಗಿ, ಮೇ 9 ರಂದು ಕೊನೆಗೊಳ್ಳಲಿದೆ.

    SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
    SSLC ಪರೀಕ್ಷೆ – 1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಪರೀಕ್ಷೆ 2026ರ ಮಾರ್ಚ್ 18 ರಂದು ಆರಂಭವಾಗಿ ಏಪ್ರಿಲ್ 1 ರಂದು ಕೊನೆಗೊಳ್ಳಲಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.