Tag: education department

  • RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್

    RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್

    ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ (Education Department) ನೋಟಿಸ್ ನೀಡಿದೆ.

    ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು ಅ.7 ಮತ್ತು ಅ.13ರಂದು ಔರಾದ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಈ ಹಿನ್ನೆಲೆ ದಲಿತ ಸೇನೆ ಮುಖಂಡರು ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅ.27ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಮೂಲ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ

    ದೂರು ಸಲ್ಲಿಸಿದ ಮರುದಿನವೇ ನಾಲ್ಕು ಜನ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ನೋಟಿಸ್ ನೀಡಿದ್ದಾರೆ. ಸರ್ಕಾರಿ ನೌಕರರು ರಾಜಕೀಯ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ. ನೀವು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿರುವ ವಿಡಿಯೋ ಹಾಗೂ ಫೋಟೋ ವೈರಲ್ ಆಗಿದೆ. ಸರ್ಕಾರದ ಸೇವಾ ನಿಬಂಧನೆಗೆ ವಿರುದ್ಧವಾಗಿ ಕರ್ತವ್ಯ ಮಾಡಿದ್ದೀರಿ. ಹೀಗಾಗಿ ಖುದ್ದಾಗಿ ಕಚೇರಿಗೆ ಬಂದು ಹೇಳಿಕೆ ನೀಡಿ, ಇಲ್ಲದಿದ್ರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ನೋಟಿಸ್ ಉಲ್ಲೇಖಿಸಿದ್ದಾರೆ.

  • ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಬೆಂಗಳೂರು: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದೆ.

    ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ ಮಾಡಿ ಶಿಕ್ಷಕರನ್ನ (Teachers) ಸರ್ವೆ (Caste Census) ಕಾರ್ಯಕ್ಕೆ ಬಳಸಿಕೊಂಡಿತ್ತು. ಸದ್ಯ ಸರ್ವೆ ಕಾರ್ಯ ಮುಂದುವರಿಯುತ್ತಿದ್ದರೂ ಶಿಕ್ಷಕರನ್ನ ಸರ್ವೆ ಕಾರ್ಯದಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರನ್ನ ಹೊರತುಪಡಿಸಿ ಉಳಿದವರಿಂದ ಸರ್ವೆ ಕಾರ್ಯ ಮುಂದುವರಿಯುತ್ತಿದೆ. ಈ ಹಿನ್ನೆಲೆ ಇಂದಿನಿಂದ ತರಗತಿಗಳು ಮರು ಪ್ರಾರಂಭವಾಗಿದೆ. ರಜೆಯಲ್ಲಿ ಮಿಸ್ ಆಗಿರುವ ಸಿಲಬಸ್ ಮುಕ್ತಾಯಕ್ಕೆ ಕೆಲವು ಮಹತ್ವದ ಸೂಚನೆಯನ್ನು ಶಿಕ್ಷಣ ಇಲಾಖೆ ನೀಡಿದೆ. ಇದನ್ನೂ ಓದಿ: ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

    ಶಿಕ್ಷಣ ಇಲಾಖೆ ಸೂಚನೆಗಳೇನು?
    *ಡಿಸೆಂಬರ್- ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು.
    *ಒಂದು ತಿಂಗಳು ಆಗಿರೋ ಸಿಲಬಸ್ ಲಾಸ್ ತುಂಬಲು ವಿಶೇಷ ತರಗತಿಗಳನ್ನ ನಡೆಸಬೇಕು.
    *ಬೆಳಗ್ಗೆ ಶಾಲೆ ಮುಂಚೆ ಅಥವಾ ಸಂಜೆ ಶಾಲೆ ಮುಗಿದ ಮೇಲೆ ವಿಶೇಷ ತರಗತಿ ತೆಗೆದುಕೊಂಡು ಪಠ್ಯ ಪೂರ್ಣ ಮಾಡಬೇಕು.
    *ಶನಿವಾರ ಅರ್ಧ ದಿನದ ಬದಲಾಗಿ ಪೂರ್ಣ ತರಗತಿಗಳನ್ನು ನಡೆಸಿ ಪಠ್ಯ ಪೂರ್ಣ ಮಾಡಬೇಕು.
    *ತೀರಾ ಅಗತ್ಯವಿದ್ದರೆ ರಜಾ ದಿನಗಳಲ್ಲೂ ವಿಶೇಷ ತರಗತಿ ನಡೆಸಿ ಪಠ್ಯ ಬೋಧನೆ ಪೂರ್ಣ ಮಾಡಬೇಕು.

  • ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜನ – ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?

    ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜನ – ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?

    – ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ

    ಬೆಂಗಳೂರು: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ (Water Bell) ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

    ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು ಬಾರಿ ಕೇರಳದಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದು ಈ ಕಾರ್ಯಕ್ರಮದ ಉದ್ದೇಶ.‌ ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?

    ಕೇರಳದಲ್ಲಿ ಶುರು ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ಇವೆ ಎನ್ನಲಾಗುತ್ತಿದೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ವಾಟರ್ ಬೆಲ್ ಕಾರ್ಯಕ್ರಮ ಉದ್ದೇಶವೇನು?
    * ಶಾಲೆಗಳಲ್ಲಿ ಮಕ್ಕಳು ಹೆಚ್ಚು ನೀರು ಕುಡಿಯಲು ಉತ್ತೇಜಿಸುವ ಕಾರ್ಯಕ್ರಮ ಇದು.
    * ಮಕ್ಕಳು ಹೆಚ್ಚು ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು.
    * ಕೇರಳದಲ್ಲಿ ದಿನಕ್ಕೆ ಎರಡು ಬಾರಿ ವಾಟರ್ ಬೆಲ್ ಮಾಡೋ ಮೂಲಕ ಮಕ್ಕಳು ನೀರು ಕುಡಿಯಲು ಉತ್ತೇಜಿಸಲಾಗುತ್ತಿದೆ.
    * ದಿನಕ್ಕೆ 2-3 ಬಾರಿ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ಆರೋಗ್ಯದ ಕಾಳಜಿ ಜತೆ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

  • ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

    ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

    – 625 ಅಂಕಗಳಿಗೆ ಕನಿಷ್ಠ 206 ಅಂಕ ಕಡ್ಡಾಯ

    ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತೀರ್ಣ ನಿಯಮ ಬದಲಾವಣೆ ಸಂಬಂಧ ಸರ್ಕಾರ ಕರಡು ಆದೇಶ ಹೊರಡಿಸಿದೆ.

    ಈಗ ಇರುವ ಉತ್ತೀರ್ಣ ನಿಯಮ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಆಂತರಿಕ ಮೌಲ್ಯಮಾಪನ, ಬಾಹ್ಯ ಪರೀಕ್ಷೆ ಸೇರಿ 33% ಅಂಕ ಗಳಿಸಿದ್ರೆ ವಿದ್ಯಾರ್ಥಿಗಳು ಪಾಸ್ ಎಂದು ಪರಿಗಣಿಸಲಾಗುವುದು. 625 ಅಂಕಗಳಿಗೆ ಕನಿಷ್ಠ 206 ಅಂಕ ಗಳಿಸಬೇಕು. ಜೊತೆಗೆ ಆಯಾ ವಿಷಯದಲ್ಲಿ ಒಟ್ಟು ಅಂಕಗಳಲ್ಲಿ ಕನಿಷ್ಠ 30% ಅಂಕಗಳು ಪಡೆದರೆ ಅಂತಹ ವಿದ್ಯಾರ್ಥಿಯೂ ಪಾಸ್ ಅಂತ ಘೋಷಣೆ ಮಾಡಲಾಗುತ್ತದೆ ಎಂದು ರಾಜ್ಯ ಪತ್ರದಲ್ಲಿ ತಿಳಿಸಿದೆ. ಇದನ್ನೂ ಓದಿ: WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

    15 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆಕ್ಷೇಪಣೆ ಸಲ್ಲಿಕೆ ಬಳಿಕ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಇದನ್ನೂ ಓದಿ: 1988ರ ರೇಪ್ ಕೇಸ್‌ಗೆ ಶಿಕ್ಷೆ ಪ್ರಕಟಿಸಿದ ಸುಪ್ರೀಂ – 53 ವರ್ಷದ ವ್ಯಕ್ತಿ ಈಗ ಬಾಲಾಪರಾಧಿ

  • SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

    SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

    ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ (Education Department) 29 ಅಂಶಗಳ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ.

    ಈ ಕುರಿತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಆದೇಶ ಹೊರಡಿಸಿದ್ದು, 29 ಅಂಶಗಳ ಈ ಕಾರ್ಯಕ್ರಮವನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶಿಸಿದ್ದಾರೆ.ಇದನ್ನೂ ಓದಿ: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ – ಸುದ್ದಿ ತಿಳಿದ ತಂದೆ ಹೃದಯಾಘಾತಕ್ಕೆ ಬಲಿ

    29 ಅಂಶಗಳ ಕಾರ್ಯಕ್ರಮವೇನು?
    – ಡಿಸೆಂಬರ್ ಅಂತ್ಯದ ಒಳಗೆ ಪಠ್ಯಕ್ರಮ ಪೂರ್ಣಗೊಳಿಸಬೇಕು.
    – ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಪರಿಹಾರ ಬೋಧನೆಗೆ ಕ್ರಮವಹಿಸಬೇಕು.
    – ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳು ಮಾಡಿ, ಶಾಲೆ ಮುಗಿದ ನಂತರ ವಿದ್ಯಾರ್ಥಿಗಳ ಬರವಣಿಗೆ ಗುಣಮಟ್ಟ ಹೆಚ್ವಿಸಲು, ಓದುವ ಅಭ್ಯಾಸ ಮಾಡಿಸುವುದು.
    – ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಅವಧಿಯಲ್ಲಿ ಚಟುವಟಿಕೆಗಳನ್ನು ಮಾಡಿಸುವುದು.
    – ಮೊಬೈಲ್ ಫೋನ್ ಬಳಕೆ ಸೀಮಿತ ಮಾಡುವುದು.
    – ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ ಸರಿಯಾಗಿ ನೀಡಿ ಸಮತೋಲನ ಆರೋಗ್ಯ ಶೈಲಿ ರೂಪಿಸುವುದು.
    – ಶಾಲೆಗಳಲ್ಲಿ ತಿಂಗಳಿಗೆ ಎರಡು ಬಾರಿ ಪೋಷಕರ ಹಾಗೂ ಶಿಕ್ಷಕರ ಸಭೆ ನಡೆಸುವುದು.
    – ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯ ಹೋಗಲಾಡಿಸಲು ಮಾದರಿ ಪ್ರಶ್ನೆ ಪತ್ರಿಕೆ ಸಹಾಯ ಮಾಡಲು ಕ್ರಮವಹಿಸುವುದು.
    – ವಿಷಯವಾರು ನೀಲಿ ನಕ್ಷೆ ಪ್ರಕಟಿಸಲು ಕ್ರಮವಹಿಸುವುದು.
    – ಪೂರ್ವ ಸಿದ್ದತಾ ಪರೀಕ್ಷೆಗಳಿಗೆ ಅಗತ್ಯ ಕ್ರಮವಹಿಸುವುದು.
    – ಆರೋಗ್ಯ ಇಲಾಖೆ ಸಹಾಯದಲ್ಲಿ ಶಾಲೆಯಲ್ಲಿಯೇ ಆರೋಗ್ಯ ತಪಾಸಣೆ ನಡೆಸುವುದು.
    – ಶಾಲೆಯಲ್ಲಿಯೇ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಕಾರ್ಯಗಾರ ಮಾಡುವುದು
    – ಕಡಿಮೆ ಸಾಧನೆಯ ಶಾಲೆಗಳನ್ನು ಗುರುತಿಸಿ ಫಲಿತಾಂಶ ವೃದ್ಧಿಗೆ ಕ್ರಮವಹಿಸುವುದು
    – ಶಾಲೆಗೆ ವಿದ್ಯಾರ್ಥಿಗಳು ಗೈರಾಗದಂತೆ ಕ್ರಮವಹಿಸುವುದು.
    – ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವುದು.
    – 10ನೇ ತರಗತಿಯ ವಿಷಯವಾರು, ಘಟಕವಾರು ಪ್ರಶ್ನೆ ಕೋಷ ತಯಾರಿ ಮಾಡುವುದು.
    – ಶಾಲೆಗಳಲ್ಲಿ ಇಬ್ಬರು ವಿದ್ಯಾರ್ಥಿಗಳ ಗುಂಪು ಮಾಡುವ ಮೂಲಕ ನಿಧಾನಗತಿ ಕಲಿಕಾ ವಿದ್ಯಾರ್ಥಿಗಳಿಗೆ ಕಲಿಕೆಯ ಬಲವರ್ಧನೆ ಮಾಡುವುದು.ಇದನ್ನೂ ಓದಿ: ಪ್ರದೀಪ್‌ ಈಶ್ವರ್‌ ಬೆಂಬಲಿಗನ ಮನೆ ಮೇಲೆ ಡಿಆರ್‌ಐ ದಾಳಿ

  • ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

    ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

    1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದ ಬಾಳೆಹಣ್ಣು ಕೊಡ್ತಿದ್ದಾರೆ. ಇದನ್ನೂ ಓದಿ: ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್‌ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು

    762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ ಮೊಟ್ಟೆ ಕಡ್ಡಾಯವಾಗಿ ಕೊಡುತ್ತಿಲ್ಲದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 568 ಶಾಲೆಗಳಿಗೆ ಭೇಟಿ ನೀಡಿ SDMC ಅವರಿಗೆ ತಿಳುವಳಿಕೆ ಹೇಳಬೇಕು ಎಂದು DDPIಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    ಪಿಎಂ ಪೋಷಣ್‌ ಶಕ್ತಿ ನಿರ್ಮಾಣದ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

  • ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ‌ಇಲಾಖೆ ಪತ್ರ

    ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ‌ಇಲಾಖೆ ಪತ್ರ

    ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಇನ್ಮುಂದೆ ಬಿಎಲ್‌ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ಇಲಾಖೆ ಪತ್ರ ಬರೆದು ಮನವಿ ಮಾಡಿದೆ.

    ಶಿಕ್ಷಣ ‌ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಚುನಾವಣೆ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಹಸು ಕೆಚ್ವಲು ಕೊಯ್ದ ಕೇಸ್‌ | ಕಾಂಗ್ರೆಸ್ ಅಧಿಕಾರ – ಮಾನಸಿಕ ಅಸ್ವಸ್ಥರಿಗೂ ಏನಾದ್ರೂ ಸಂಬಂಧ ಇದೆಯೇ?: ಸಿ.ಟಿ ರವಿ

    ಈಗಷ್ಟೇ ಶೈಕ್ಷಣಿಕ ವರ್ಷ ಆರಂಭವಾಗಿದೆ. ಮಕ್ಕಳ ಶಿಕ್ಷಣ ದೃಷ್ಟಿಯಿಂದ ಶಿಕ್ಷಕರು ಭೋದನಾ ಕಾರ್ಯಕ್ಕೆ ಹೆಚ್ಚು ಒತ್ತು ಕೊಡ್ಬೇಕು. ಜೊತೆಗೆ ಉತ್ತಮ ಫಲಿತಾಂಶ ಬರಬೇಕಂದ್ರೆ ಶಿಕ್ಷಕರ ಪಾತ್ರ ತುಂಬಾ ಮುಖ್ಯ. ಆದ್ರೆ ಕೆಲ ಜಿಲ್ಲೆಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಶಿಕ್ಷಕರು ನಿಯೋಜನೆ ಆಗಿದ್ದಾರೆ. ಇದರಿಂದ ಮಕ್ಕಳಿಗೆ ತೊಂದರೆ ಆಗ್ತಿದೆ.

    ಹೀಗಾಗಿ, ಮತದಾರರ ಪರಿಷ್ಕರಣೆಗೆ ನಿಯೋಜಿಸಿರುವ ಶಿಕ್ಷಕರನ್ನ ಹಿಂಪಡೆಯಬೇಕೆಂದು ತಮ್ಮ ಪತ್ರದಲ್ಲಿ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.

  • 2025-26ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಕ್ಕೆ ಶಿಕ್ಷಣ ಇಲಾಖೆ ಆದೇಶ

    2025-26ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಕ್ಕೆ ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಇದನ್ನೂ ಓದಿ: Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ

    ಈ ಮೂಲಕ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗದಿತ ವಿದ್ಯಾರ್ಹತೆಯನ್ನು ಪಡೆದುಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಬೇಕು. 3 ವರ್ಷಗಳ ನಂತರ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಮತ್ತು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ.25ರಷ್ಟು ಗಣನೆಗೆ ಗರಿಷ್ಠ 25 ಅಂಕಗಳಿಗೆ ಮಿತಿಗೊಳಿಸಲಾಗಿದೆ.

    ಈ ಪ್ರಕ್ರಿಯೆಯನ್ನು ಆ.4ರ ಒಳಗೆ ಮುಗಿಸಲು ಇಲಾಖೆ ಆದೇಶಿಸಿದೆ.ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು

  • ಕರ್ನಾಟಕ, ಬೆಂಗ್ಳೂರು ಪಬ್ಲಿಕ್ ಶಾಲೆ & ಪಿ.ಎಂ.ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳ ದಾಖಲಾತಿ ಮಿತಿ ಹೆಚ್ಚಳ – ಸರ್ಕಾರ ಆದೇಶ

    ಕರ್ನಾಟಕ, ಬೆಂಗ್ಳೂರು ಪಬ್ಲಿಕ್ ಶಾಲೆ & ಪಿ.ಎಂ.ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ತರಗತಿಗಳ ದಾಖಲಾತಿ ಮಿತಿ ಹೆಚ್ಚಳ – ಸರ್ಕಾರ ಆದೇಶ

    ಬೆಂಗಳೂರು: ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳು (KPS), ಬೆಂಗಳೂರು ಪಬ್ಲಿಕ್ ಶಾಲೆಗಳು (BPS) ಮತ್ತು ಪಿ.ಎಂ.ಶ್ರೀ ಶಾಲೆಗಳಲ್ಲಿ ದ್ವಿ-ಭಾಷಾ ಮಾಧ್ಯಮದ ತರಗತಿಗಳಿಗೆ ಮಕ್ಕಳ ಗರಿಷ್ಠ ದಾಖಲಾತಿ ಮಿತಿ ಹೆಚ್ಚಳ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ.

    ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಹೊಸ ಆದೇಶದ ಪ್ರಕಾರ, ಶೈಕ್ಷಣಿಕ ವರ್ಷ 2025-26ರಿಂದ ಜಾರಿಗೆ ಬರುವಂತೆ, ಪೂರ್ವ ಪ್ರಾಥಮಿಕ ವಿಭಾಗದಲ್ಲಿ (ಎಲ್‌ಕೆಜಿ ಮತ್ತು ಯುಕೆಜಿ) ಪ್ರತಿ ತರಗತಿಗೆ ಗರಿಷ್ಠ 40 ಮಕ್ಕಳು, ಪ್ರಾಥಮಿಕ ಶಾಲೆಗಳಲ್ಲಿ (1 ರಿಂದ 7ನೇ ತರಗತಿ) ಗರಿಷ್ಠ 50 ಹಾಗೂ ಪ್ರೌಢ ಶಾಲೆಗಳಲ್ಲಿ (8 ರಿಂದ 10ನೇ ತರಗತಿ) ಗರಿಷ್ಠ 50 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿಸಲಾಗಿದೆ. ಈ ಮೊದಲು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳಿಗೆ ಗರಿಷ್ಠ ದಾಖಲಾತಿ ಮಿತಿಯನ್ನು 30 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿತ್ತು.ಇದನ್ನೂ ಓದಿ: ಪಾಕಿಸ್ತಾನಕ್ಕೆ 5ನೇ ತಲೆಮಾರಿನ 40 ಸ್ಟೆಲ್ತ್ ಫೈಟರ್ ಜೆಟ್‌ ಪೂರೈಸಲು ಚೀನಾ ಮೆಗಾ ಡೀಲ್‌

    ಶಿಕ್ಷಣ ಇಲಾಖೆ ನೀಡಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಪ್ರಸ್ತುತ ಕೆಪಿಎಸ್‌ಗಳಲ್ಲಿ ದ್ವಿ-ಭಾಷಾ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿದ್ದು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC), ಪೋಷಕರು ಹಾಗೂ ಜನಪ್ರತಿನಿಧಿಗಳಿಂದ ದಾಖಲಾತಿ ಮಿತಿ ಹೆಚ್ಚಿಸುವಂತೆ ನಿರಂತರ ಬೇಡಿಕೆ ಇತ್ತು.

    ರಾಜ್ಯದಲ್ಲಿ 2017-18ನೇ ಸಾಲಿನಿಂದ ಹಂತ-ಹಂತವಾಗಿ 308 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು, ಕನ್ನಡ/ಇತರ ಮಾಧ್ಯಮದ ತರಗತಿಗಳು ಹಾಗೂ ಒಂದನೇ ತರಗತಿಯಿಂದ ದ್ವಿ-ಭಾಷಾ ಮಾಧ್ಯಮ ತರಗತಿಗಳನ್ನು ಸಹ ಪ್ರಾರಂಭಿಸಲಾಗಿದೆ. ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ಶಾಲೆಗಳು ಹೆಚ್ಚು ಮಕ್ಕಳನ್ನು ದಾಖಲಿಸಿಕೊಂಡು ಯಶಸ್ಸು ಸಾಧಿಸಿರುವ ಕುರಿತು ಉಲ್ಲೇಖಿಸಿರುವ ರಾಜ್ಯ ಸರ್ಕಾರ, ಲಭ್ಯವಿರುವ ಸಂಪನ್ಮೂಲಗಳನ್ನು ಗರಿಷ್ಠವಾಗಿ ಬಳಸಿಕೊಂಡು ಹೆಚ್ಚಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಸಂವಿಧಾನಾತ್ಮಕ ಜವಾಬ್ದಾರಿಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

    ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳದ ಮಿತಿಯು 2025-26ನೇ ಶೈಕ್ಷಣಿಕ ಸಾಲಿನಿಂದಲೇ ಎಲ್ಲ ಶಾಲೆಗಳಲ್ಲಿ ಜಾರಿಗೆ ಬರಲಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿ, ನಿಯಮಗಳಂತೆ ಅನುಷ್ಠಾನಗೊಳಿಸಲು ಕ್ರಮವಹಿಸಬೇಕು. ಪೂರ್ವ ಪ್ರಾಥಮಿಕ ವಿಭಾಗದ ಪ್ರತಿ ತರಗತಿಯ ಶಿಕ್ಷಕ/ಶಿಕ್ಷಕಿಯ ಜೊತೆ ಒಬ್ಬ ಆಯಾ ಕಡ್ಡಾಯವಾಗಿ ಇರಬೇಕು. ಶಾಲಾ ಆವರಣದಲ್ಲಿ ಲಭ್ಯವಿರುವ ಕಟ್ಟಡಗಳು, ಇನ್ನಿತರ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ದಾಖಲಾತಿ ಹಾಗೂ ವಿದ್ಯಾಭ್ಯಾಸಕ್ಕಾಗಿ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸಬೇಕು ಎಂದು ಷರತ್ತುಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದನ್ನೂ ಓದಿ: ಘಾಟಿ ಇಶಾ ಫೌಂಡೇಷನ್ ಹೆಸರಲ್ಲಿ ನೂತನ ಪ್ರವಾಸ ಮಾರ್ಗ ಪರಿಚಯಿಸಿದ BMTC

  • ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

    ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

    ಬೆಂಗಳೂರು: ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

    2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದೆ.

    ಮುಖ್ಯ ಅಡುಗೆಯವರಿಗೆ ಮಾಸಿಕ ಗೌರವಧನವನ್ನು 3,700 ರಿಂದ 4,700 ರೂ.ಗೆ ಹೆಚ್ಚಿಸಲಾಗಿದೆ. ಅಂತೆಯೇ ಅಡುಗೆ ಸಹಾಯಕರಿಗೆ 3,600 ರೂ.ನಿಂದ 4,600 ರೂ.ಗೆ ಹೆಚ್ಚಳ ಮಾಡಲಾಗಿದೆ.

    ರಾಜ್ಯದ ಎಲ್ಲಾ 31 ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಹಾಗೂ ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ.

    ಗೌರವ ಸಂಭಾವನೆಯನ್ನು ನೇರ ನಗದು ವರ್ಗಾವಣೆ ವೇದಿಕೆ ಮೂಲಕವೇ ಪಾವತಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.