Tag: education officer

  • ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

    ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

    ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ.

    ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆಂಬುಲೆನ್ಸ್‌ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್‌

    MEALS

    ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ ಗುಣಾನಂದ್‌ಸಿಂಗ್, ಮಕ್ಕಳಿಗೆ ಮಧ್ಯಾಹ್ನ ನೀಡಲಾದ ಆಹಾರವು ಹಳಸಾಗಿತ್ತು ಎಂದು ತಿಳಿದು ಬಂದಿದೆ. ಈ ಕುರಿತು ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗುವುದು. ಅಲ್ಲದೆ, ಇನ್ನು ಮುಂದೆ ಅಂತಹ ಗುಣಮಟ್ಟದ ಆಹಾರ ನೀಡದಂತೆ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 20 ಕಡೆ ದಾಳಿ, ಸಾವಿರಾರು ಜನರ ಹತ್ಯೆ – ಮೋದಿಗೆ ಕೊಲೆ ಬೆದರಿಕೆ

    ಸರ್ಕಾರೇತರ ಸಂಸ್ಥೆಯೊಂದು ಮಕ್ಕಳಿಗೆ ಮಧ್ಯಾಹ್ನದ ಉಪಹಾರ ನೀಡಲು ಪ್ರಾರಂಭಿಸಿದಾಗಿನಿಂದಲೂ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸುತ್ತಿದೆ. ಈ ಬಗ್ಗೆ ಪೋಷಕರು ಶಾಲಾ ಮುಖ್ಯಸ್ಥರಿಗೆ ದೂರು ನೀಡಿದ್ದರು. ಅಲ್ಲದೆ, ಶಾಲೆಗಳಲ್ಲಿ ಬೇಯಿಸಿದ ಆಹಾರವನ್ನೇ ನೀಡುವಂತೆ ಮನವಿ ಮಾಡಿದ್ದರು. ಕ್ರಮ ಕೈಗೊಳ್ಳದ ಪರಿಣಾಮ ಇಂದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಪೋಷಕರು ವಿಷಾದ ವ್ಯಕ್ತಪಡಿಸಿದ್ದಾರೆ.ಶಾಲೆ, ಪಾಟ್ನಾ, ಬಿಹಾರ, ಶಿಕ್ಷಣಾಧಿಕಾರಿ.

     

  • ಬಸ್ಸಿನಲ್ಲೇ ಎಣ್ಣೆ ಹೊಡೆದ ಶಾಲಾ ಹೆಣ್ಮಕ್ಳು: ವಿಡಿಯೋ ವೈರಲ್

    ಬಸ್ಸಿನಲ್ಲೇ ಎಣ್ಣೆ ಹೊಡೆದ ಶಾಲಾ ಹೆಣ್ಮಕ್ಳು: ವಿಡಿಯೋ ವೈರಲ್

    ಚೆನ್ನೈ: ತಮಿಳುನಾಡಿನ ತಿರುಕಝುಕುಂದ್ರಂ ನಿಂದ ಥಾಚೂರ್ ಮಾರ್ಗವಾಗಿ ತೆರಳುತ್ತಿದ್ದ ಬಸ್‍ನಲ್ಲಿ ಶಾಲಾ ಹೆಣ್ಣುಮಕ್ಕಳು ಮದ್ಯ ಸೇವಿಸುತ್ತಿರುವ ವೀಡಿಯೋ ವೈರಲ್ ಆಗಿದೆ.

    ಚೆಂಗ್ಲಪಟ್ಟು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರು ಮದ್ಯ ಸೇವಿಸುತ್ತಿರುವ ದೃಶ್ಯವನ್ನು ಅಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಿ ಇಂತಹ ಕೆಲಸ ಮಾಡಿರುವುದು, ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನನಗೆ ವಯಸ್ಸಾಯ್ತು ಅಂತ ಕಾಲೆಳೆಯುತ್ತಾರೆ ಅದಕ್ಕೆ ವಾರಕ್ಕೊಮ್ಮೆ ಶೇವ್ ಮಾಡಿಸ್ತೀನಿ: ಸಿದ್ದರಾಮಯ್ಯ

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಶಿಕ್ಷಣಾಧಿಕಾರಿ, ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಈಗಾಗಲೇ ನೋಟೀಸ್ ನೀಡಲಾಗಿದೆ. ಪೊಲೀಸರಿಂದಲೂ ತನಿಖೆ ನಡೆಸಲಾಗುತ್ತದೆ. ಈಗಾಗಲೇ ಒಂದು ಸುತ್ತಿನ ತನಿಖೆ ನಡೆದಿದ್ದು, ಅಂತಹ ವಿದ್ಯಾರ್ಥಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಲಿವುಡ್ ಗಲ್ಲಿ ಬಾಯ್ ಖ್ಯಾತಿಯ ರಾಪರ್ ಧರ್ಮೇಶ್ ಪರ್ಮಾರ್ ಇನ್ನಿಲ್ಲ

  • ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

    ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

    ರಾಯ್ಪುರ: ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿರುವ ಘಟನೆ ಛತ್ತೀಸ್‍ಗಢದ ಆಶ್‍ಪುರದಲ್ಲಿ ನಡೆದಿದೆ.

    ಆಶ್‍ಪುರ ಜಿಲ್ಲೆಯ ತುರಾಂಗ್‍ಖಾರ್ ಎಂಬ ಹಳ್ಳಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲೆಗೆ ಮದ್ಯಪಾನ ಮಾಡಿಕೊಂಡು ಬಂದು ಮಕ್ಕಳಿಗೆ ಪಾಠ ಮಾಡದೇ ತರಗತಿಯಲ್ಲಿ ಮಲಗಿದ್ದ.

    ಕುಡಿದು ಶಾಲೆಗೆ ಬಂದಿದ್ದ ಶಿಕ್ಷಕ ತರಗತಿಯಲ್ಲಿ ಪಾಠ ಮಾಡದೇ ಮಾಲಗಿದ್ದನ್ನು ಅಲ್ಲಿನ ಸ್ಥಳೀಯರು ವಿಡಿಯೋ ಮಾಡಿದ್ದಾರೆ. ನಂತರ ಅವನನ್ನು ಎಬ್ಬಿಸಿ ಪ್ರಶ್ನೆ ಮಾಡಿದ್ದಕ್ಕೆ ನಾನು ಮದ್ಯಪಾನ ಮಾಡಿಲ್ಲ ಎಂದು ಹೇಳಿದ್ದಾನೆ. ಈಗ ಈ ವಿಚಾರವಾಗಿ ಸ್ಥಳೀಯರು ಮಕ್ಕಳ ಬಳಿ ಮಾಹಿತಿ ಪಡೆದು ಶಿಕ್ಷಕನ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜನರು ಒತ್ತಾಯ ಮಾಡಿದ್ದರು.

    ಈ ವಿಚಾರವಾಗಿ ಮಾತನಾಡಿರುವ ಜಿಲ್ಲಾ ಶಿಕ್ಷಣಾಧಿಕಾರಿ ಬಾಲಾ ರಾಮ್ ಧ್ರುವ ಈ ಘಟನೆಯ ಬಗ್ಗೆ ಪ್ರಸ್ತುತ ವರದಿಗಾಗಿ ಕಾಯಲಾಗುತ್ತಿದ್ದು, ವರದಿ ಬಂದಲ್ಲಿ ಅ ವರದಿಯ ಆಧಾರದ ಮೇಲೆ ಅ ಶಿಕ್ಷಕನಿಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

  • 50ಕ್ಕೂ ಹೆಚ್ಚು ಮಕ್ಕಳಿದ್ದಲ್ಲಿ ಈಗ 3 ವಿದ್ಯಾರ್ಥಿಗಳು- ಇದು ಬಂಡೆಮ್ಮ ಸರ್ಕಾರಿ ಶಾಲೆಯ ಕಥೆ

    50ಕ್ಕೂ ಹೆಚ್ಚು ಮಕ್ಕಳಿದ್ದಲ್ಲಿ ಈಗ 3 ವಿದ್ಯಾರ್ಥಿಗಳು- ಇದು ಬಂಡೆಮ್ಮ ಸರ್ಕಾರಿ ಶಾಲೆಯ ಕಥೆ

    ಗದಗ: ಜಿಲ್ಲೆಯ ನರಗುಂದ ತಾಲೂಕಿನ ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಹೇಳೋಕೆ ಸರ್ಕಾರಿ ಶಾಲೆಯಾದ್ರು ಇಲ್ಲಿ ಇರೋದು ಮಾತ್ರ ಕೇವಲ 3 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ.

    ಹೌದು, ಬಂಡೆಮ್ಮ ನಗರದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓರ್ವ ಶಿಕ್ಷಕನಿದ್ದು ಕೇವಲ 3 ಜನ ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕ ಎಚ್.ಎಸ್ ಸುಂಕದ ಈ ಮೂರು ಮಕ್ಕಳ ಪೋಷಕರನ್ನು ಕಾಡಿ, ಬೇಡಿ, ಕರೆತರುತ್ತಾರೆ. ನರಗುಂದ ಪಟ್ಟಣದಿಂದ 6 ಕಿಲೋಮೀಟರ್ ದೂರದಲ್ಲಿರುವ ಬಂಡೆಮ್ಮ ನಗರದಲ್ಲಿ 50 ಕ್ಕೂ ಹೆಚ್ಚು ರೈತ ಕುಟುಂಬಗಳಿವೆ. ಈಗ ಶಾಲೆಗೆ ಬರೋ ಮಕ್ಕಳಲ್ಲಿ ಕೇವಲ 3 ವಿದ್ಯಾರ್ಥಿಗಳಿದ್ದು, ಅಕ್ಷರಶಃ ಬಂಡೆಮ್ಮನಗರದ ಪ್ರಾಥಮಿಕ ಶಾಲೆ ಅನಾಥವಾಗಿದೆ.

    ನಾನೊಬ್ಬ ಪದವಿಧರನಾಗಿ ನನ್ನಲ್ಲಿರುವ ಜ್ಞಾನವನ್ನ ಮಕ್ಕಳಿಗೆ ಹೇಳಬೇಕೆಂಬ ಆಸೆ, ಆದ್ರೆ ಈ ಶಾಲೆಗೆ ಮಕ್ಕಳೇ ಬರೋದಿಲ್ಲ. ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿಕೊಂಡರು ಪ್ರಯೋಜವಾಗ್ತಿಲ್ಲ. ಸುಖಾ ಸುಮ್ಮನೇ ತಿಂಗಳ ಸಂಬಳ ಪಡೆಯೋಕೆ ಮನಸ್ಸು ಒಪ್ಪುತ್ತಿಲ್ಲ ಅಂತ ಶಾಲೆಯ ಶಿಕ್ಷಕ ಎಚ್.ಎಸ್ ಸುಂಕದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

    ಇನ್ನು ಗದಗ ಜಿಲ್ಲೆಯ ಬಂಡೆಮ್ಮ ನಗರದಲ್ಲಿ 2000 ರಲ್ಲಿ ಕಿರಿಯ ಪ್ರಾಥಮಿಕ ಶಾಲೆ ತೆರೆಯಲಾಯಿತು. ಮೊದ ಮೊದಲು 50 ಕ್ಕೂ ಹೆಚ್ಚು ಮಕ್ಕಳು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈಗ 3+1 ಅನ್ನೊ ಹಾಗೆ ಮಕ್ಕಳ ಸಂಖ್ಯೆ ಇಳಿಮುಖವಾಗಿದೆ. ಶಾಲೆಯಲ್ಲಿ 1 ರಿಂದ 5 ತರಗತಿ ಇದ್ದು, 1ನೇ ಕ್ಲಾಸ್ ಅಪ್ಸಾನಾ, 2ನೇ ಕ್ಲಾಸ್ ಸುಭಾಷ್ ಕುಳಗೇರಿ, 5 ನೇ ಕ್ಲಾಸ್ ಕೌಸರ್ ಬಾನು ಎಂಬ ಮೂವರು ವಿದ್ಯಾರ್ಥಿಗಳು ವ್ಯಾಸಂಗ ಮಾಡ್ತಿದ್ದಾರೆ.

    ಶಾಲೆಯಲ್ಲಿ ಇರೋ ಮೂರು ಮಕ್ಕಳಲ್ಲಿ ಕೆಲವೊಮ್ಮೆ ಯಾವೊಂದು ಮಗುವೂ ತರಗತಿಗೆ ಹಾಜರಾಗಲ್ಲ. ಆ ವೇಳೆ ಶಿಕ್ಷಕ ಒಬ್ಬನೆ ಕಾಲ ಕಳೆಯಬೇಕು. ಬಿಸಿಯೂಟ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಇಲ್ಲಿ ಮರಿಚಿಕೆಯಾಗಿವೆ. ಈಗ ಬಂಡೆಮ್ಮ ನಗರದ ಸರ್ಕಾರಿ ಶಾಲೆಗೆ ಮುಚ್ಚುವ ಭೀತಿ ಎದುರಾಗಿದೆ. ಇನ್ನು ಏನ್ ಸರ್ ಈ ಶಾಲೆಯ ಕಥೆ. ಸಮಸ್ಯೆ ಪರಿಹರಿಸೋಕೆ ಏನ್ ಮಾಡ್ತೀರಾ ಅಂತ ಡಿಡಿಪಿಐ ಅವರನ್ನು ಕೇಳಿದ್ರೆ, ನನ್ನ ಗಮನಕ್ಕೆ ಈ ವಿಷಯ ಬಂದಿಲ್ಲ. ನೋಡೋಣ ಅಧಿಕಾರಿಗಳೊಂದಿಗೆ ಮಾತನಾಡುತ್ತೀನಿ ಅಂತ ಶಿಕ್ಷಣ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಾರೆ.

    ಶಾಲೆಯಲ್ಲಿ ನಿತ್ಯ ಕೇಳಿಬರಬೇಕಿದ್ದ ಚಿಣ್ಣರ ಕಲರವ ಇಲ್ಲಿ ಮಾಯವಾಗಿದೆ. ಇಲ್ಲಿ ಶಿಕ್ಷಕರ ಪಾಠ ನಿಂತು ಹೋಗಿವೆ. ಶಾಲಾ ಕಟ್ಟಡವೀಗ ವಿಷಾದ ತುಂಬಿದ ಸೌಧದಂತಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲೇ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv