Tag: education

  • ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ. ಲಾಭ ಆಗುವ ಮೊದಲು ಒಳ್ಳೆಯ ದಾರಿ ಕಾಣಿಸಲಿ ಎಂದು ಹೇಳುತ್ತೇನೆ. ಏಕೆಂದರೆ ಒಳ್ಳೆಯ ದಾರಿ ಕಾಣಿಸಿದರೆ ಲಾಭ ಆಗುತ್ತದೆ. ಬಹಳ ಮಕ್ಕಳಿಗೆ ಹಾಗೂ ತಂದೆ-ತಾಯಿಗೆ ಆ ಒಳ್ಳೆಯ ದಾರಿ ಕಾಣಿಸಿದರೆ ಆ ದಿನ ನನಗೆ ತುಂಬಾ ಖುಷಿ ಆಗುತ್ತದೆ. ಮಕ್ಕಳು ಅವರಿಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳಲಿ. ಪೋಷಕರು ಇದರ ಬಗ್ಗೆ ಚಿಂತಿಸಬೇಡಿ ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಗಾರ್ಡನ್ ಸಿಟಿ ವಿವಿಯ ಕುಲಪತಿ ಡಾ. ವಿ.ಜಿ ಜೋಸೆಫ್, ಕೇಂಬ್ರಿಡ್ಜ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ ಮುಖ್ಯಸ್ಥ ಡಿ.ಕೆ ಮೋಹನ್, ಗೀತಂ ವಿವಿಯ ಡೈರೆಕ್ಟರ್ ಆಫ್ ಅಡ್ಮಿಶನ್ ವಂಶಿ ದತ್ಲ ಹಾಗೂ ಶ್ರೀ ವೆಂಕಟೇಶ್ವರ್ ಕಾಲೇಜ್ ಆಫ್ ಎಂಜಿನಿಯರಿಂಗ್‍ನ ಕಾರ್ಯದರ್ಶಿ ಶಶಿಧರ್ ಅತಿಥಿಯಾಗಿ ಆಗಮಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃರ್ತಿ ಪರ ಕೋರ್ಸಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಸಿಇಟಿ, ನೀಟ್ ಮತ್ತು ಔದ್ಯೋಗಿಕ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ನುರಿತ ಶಿಕ್ಷಣ ತಜ್ಞರು ಹಾಗೂ ಆರ್ಥಿಕ ಸಲಹೆಗಾರರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದಾರೆ.

    ಈ ಹಿಂದಿನ ಎರಡು ಕಾರ್ಯಕ್ರಮ 2 ದಿನಗಳ ಕಾಲ ನಡೆದಿತ್ತು. ಎರಡು ದಿನಕ್ಕೆ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಈ ಬಾರಿ ಮೂರು ದಿನಗಳ ಕಾಲ ವಿದ್ಯಾಪೀಠ ವಿಶೇಷ ಕಾರ್ಯಕ್ರಮ ನಡೆಯಲಿದೆ.

    ಯಾವೆಲ್ಲ ಸ್ಪರ್ಧೆ?
    ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2 ರಿಂದ 3:30ರವರೆಗೆ ಪೇಟಿಂಗ್ ಸ್ಪರ್ಧೆ ನಡೆಯಲಿದೆ. ಈ ಅವಧಿಯಲ್ಲೇ ಕ್ವಿಜ್ ಲಿಖಿತ ಪರೀಕ್ಷೆ ಸಹ ನಡೆಯಲಿದೆ. ಶನಿವಾರವೇ ಚರ್ಚಾ ಸ್ಪರ್ಧೆಯ ಅಂತಿಮ ಸುತ್ತು ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೆ ನಡೆಯಲಿದೆ.

    ಭಾನುವಾರ ಮಧ್ಯಾಹ್ನ 2:30 ರಿಂದ 3:30ರವರೆಗೆ ಕ್ವಿಜ್ ಫೈನಲ್ ನಡೆಯಲಿದ್ದು, 3:30 ರಿಂದ 4:30ರವರೆಗೆ ಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಯ ನಂತರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಗುತ್ತದೆ.

    11 ಮತ್ತು 12 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿದ್ಯಾರ್ಥಿಗಳು ತಮ್ಮ ಪ್ರೊಜೆಕ್ಟ್ ಗಳನ್ನು ಪ್ರದರ್ಶನ ಮಾಡಲಿದ್ದಾರೆ. ಈ ಎಲ್ಲ ಸ್ಪರ್ಧೆಗಳಿಗೆ ಪ್ರವೇಶ ಉಚಿತವಾಗಿದ್ದು, 17 ರಿಂದ 22 ವರ್ಷ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು.

    ಬೆಂಗಳೂರು ನಗರದಲ್ಲಿರುವ ಅರಮನೆ ಮೈದಾನದಲ್ಲಿ ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮ ನಡೆಯಲಿದೆ.

  • ಇಂದಿನಿಂದ ಆರಂಭವಾಗಲಿದೆ ಪಬ್ಲಿಕ್ ಟಿವಿಯ ವಿದ್ಯಾಪೀಠ ಶಿಕ್ಷಣ ಮೇಳ

    ಇಂದಿನಿಂದ ಆರಂಭವಾಗಲಿದೆ ಪಬ್ಲಿಕ್ ಟಿವಿಯ ವಿದ್ಯಾಪೀಠ ಶಿಕ್ಷಣ ಮೇಳ

    – ಅರಮನೆ ಮೈದಾನದಲ್ಲಿ 3 ದಿನ ಎಜುಕೇಷನ್ ಫೆಸ್ಟ್ 
    – ಪೋಷಕರೇ, ಮಕ್ಕಳೇ ಬನ್ನಿ ಪಾಲ್ಗೊಳ್ಳಿ

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ಮಕ್ಕಳನ್ನು ಯಾವ ಕಾಲೇಜಿಗೆ ಸೇರಿಸಬೇಕು? ಯಾವ ಕಾಲೇಜಿನಲ್ಲಿ ಶುಲ್ಕ ಎಷ್ಟಿರುತ್ತದೆ? ಇತ್ಯಾದಿ ಗೊಂದಲ ಪೋಷಕರಿಗೆ ಇದ್ದೆ ಇರುತ್ತದೆ. ಈ ಗೊಂದಲ ನಿವಾರಣೆಗಾಗಿ ನಿಮ್ಮ ಪಬ್ಲಿಕ್ ಟಿವಿ ಬೃಹತ್ ಶೈಕ್ಷಣಿಕ ಮೇಳವನ್ನು ಆಯೋಜನೆ ಮಾಡಿದೆ.

    ‘ಇಂದಿನ ಕಲಿಕೆ, ನಾಳಿನ ದಾರಿದೀಪ’ ಘೋಷ ವಾಕ್ಯವನ್ನು ಹೊಂದಿರುವ ವಿದ್ಯಾಪೀಠ ಕಾರ್ಯಕ್ರಮ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಇಂದಿನಿಂದ  ಆರಂಭವಾಗಲಿದೆ. ಉಚಿತ ಪ್ರವೇಶವಿರುವ ಈ ಕಾರ್ಯಕ್ರಮ ಶುಕ್ರವಾರದಿಂದ ಭಾನುವಾರದವರೆಗೆ ನಡೆಯಲಿದೆ.

    ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿ ಪರ ಕೋರ್ಸ್ ಗಳ ಬಗ್ಗೆ ಒಂದೇ ಸೂರಿನಡಿ ಮಾಹಿತಿ ಸಿಗಲಿದೆ. ಮೆಡಿಕಲ್, ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಲ್ಲದೇ, ಕಾಮರ್ಸ್, ಮ್ಯಾನೇಜ್‍ಮೆಂಟ್, ಅನಿಮೇಷನ್, ಮಾಧ್ಯಮ ಲೋಕಕ್ಕೆ ಬರುವ ವಿದ್ಯಾರ್ಥಿಗಳಿಗೂ ಮಾಹಿತಿ ಸಿಗುತ್ತೆ.

    ಸಿಇಟಿ, ನೀಟ್ ಮತ್ತು ಔದ್ಯೋಗಿಕ ಕೋರ್ಸ್ ಗಳ ಬಗ್ಗೆ ಮಾಹಿತಿ ಸಿಗಲಿದ್ದು, 60ಕ್ಕೂ ಹೆಚ್ಚು ಪ್ರಖ್ಯಾತಿ ಪಡೆದಿರುವ ಕಾಲೇಜ್‍ಗಳು ಭಾಗವಹಿಸಲಿವೆ. ನುರಿತ ಶಿಕ್ಷಣ ತಜ್ಞರು, ಆರ್ಥಿಕ ಸಲಹೆಗಾರರು ಮಾಹಿತಿ ನೀಡಲಿದ್ದಾರೆ.

    ಯಾರೆಲ್ಲ ಭಾಗವಹಿಸುತ್ತಾರೆ?
    ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್
    ಆರ್ಕಿಟೆಕ್ಚರ್
    ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು
    ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು
    ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್
    ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು
    ಸಮೂಹ ಸಂವಹನ
    ಎಂಬಿಎ ಇನ್‍ಸ್ಟಿಟ್ಯೂಷನ್
    ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು

    ಯಾರೆಲ್ಲ ಆಗಮಿಸಬಹುದು?
    ಕೌನ್ಸೆಲರ್ ಗಳು
    ಶಿಕ್ಷಣ ತಜ್ಞರು
    ಹಣಕಾಸು ಸಲಹೆಗಾರರು
    ಪೋಷಕರು
    ಪಿಯುಸಿ ವಿದ್ಯಾರ್ಥಿಗಳು
    ಪದವಿ ಓದುತ್ತಿರುವ ವಿದ್ಯರ್ಥಿಗಳು
    ಉದ್ಯೋಗದಲ್ಲಿರುವ ಉದ್ಯೋಗಿಗಳು

    ಸ್ಪರ್ಧೆಯ ಸಮಯ:
    ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2 ರಿಂದ 3:30ರವರೆಗೆ ಪೇಟಿಂಗ್ ಸ್ಪರ್ಧೆ ನಡೆಯಲಿದೆ. ಈ ಅವಧಿಯಲ್ಲೇ ಕ್ವಿಜ್ ಲಿಖಿತ ಪರೀಕ್ಷೆ ಸಹ ನಡೆಯಲಿದೆ. ಶನಿವಾರವೇ ಚರ್ಚಾ ಸ್ಪರ್ಧೆಯ ಅಂತಿಮ ಸುತ್ತು ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೆ ನಡೆಯಲಿದೆ. ಭಾನುವಾರ ಮಧ್ಯಾಹ್ನ 2:30 ರಿಂದ 3:30ರವರೆಗೆ ಕ್ವಿಜ್ ಫೈನಲ್ ನಡೆಯಲಿದ್ದು, 3:30 ರಿಂದ 4:30ರವರೆಗೆ ಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಯ ನಂತರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಗುತ್ತದೆ. ನೇಳೆ ಮತ್ತು ನಾಡಿದ್ದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿದ್ಯಾರ್ಥಿಗಳು ತಮ್ಮ ಪ್ರೊಜೆಕ್ಟ್ ಗಳನ್ನು ಪ್ರದರ್ಶನ ಮಾಡಲಿದ್ದಾರೆ.

    ದಿನಾಂಕ : ಮೇ 10, 11, 12
    ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ : ಬೆಳಗ್ಗೆ 9.30 ರಿಂದ ಸಂಜೆ 6.00 ಗಂಟೆಯವರೆಗೆ

  • ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಚರ್ಚಾ ಸ್ಪರ್ಧೆ

    ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ದಲ್ಲಿ ಚರ್ಚಾ ಸ್ಪರ್ಧೆ

    ಬೆಂಗಳೂರು: ಪಬ್ಲಿಕ್ ಟಿವಿ ಆಯೋಜಿಸಿರುವ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ಶುಕ್ರವಾರ ಚರ್ಚಾ ಸ್ಪರ್ಧೆ ನಡೆಯಲಿದೆ.

    ನಾಳೆ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2 ರಿಂದ 3:30ರವರೆಗೆ ಪೇಟಿಂಗ್ ಸ್ಪರ್ಧೆ ನಡೆಯಲಿದೆ. ಈ ಅವಧಿಯಲ್ಲೇ ಕ್ವಿಜ್ ಲಿಖಿತ ಪರೀಕ್ಷೆ ಸಹ ನಡೆಯಲಿದೆ. ಶನಿವಾರವೇ ಚರ್ಚಾ ಸ್ಪರ್ಧೆಯ ಅಂತಿಮ ಸುತ್ತು ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೆ ನಡೆಯಲಿದೆ.

    ಭಾನುವಾರ ಮಧ್ಯಾಹ್ನ 2:30 ರಿಂದ 3:30ರವರೆಗೆ ಕ್ವಿಜ್ ಫೈನಲ್ ನಡೆಯಲಿದ್ದು, 3:30 ರಿಂದ 4:30ರವರೆಗೆ ಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಯ ನಂತರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಗುತ್ತದೆ.

    11 ಮತ್ತು 12 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿದ್ಯಾರ್ಥಿಗಳು ತಮ್ಮ ಪ್ರೊಜೆಕ್ಟ್ ಗಳನ್ನು ಪ್ರದರ್ಶನ ಮಾಡಲಿದ್ದಾರೆ. ಈ ಎಲ್ಲ ಸ್ಪರ್ಧೆಗಳಿಗೆ ಪ್ರವೇಶ ಉಚಿತವಾಗಿದ್ದು, 17 ರಿಂದ 22 ವರ್ಷ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು. 95389 77753 (ಅಕ್ಷಯ್), 99000 30944 (ನಿತಿನ್) ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ತಿಳಿದು ಹೆಸರನ್ನು ನೊಂದಾಯಿಸಿಕೊಳ್ಳಬಹುದು.

    ಬೆಂಗಳೂರು ನಗರದಲ್ಲಿರುವ ಅರಮನೆ ಮೈದಾನದಲ್ಲಿ ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮ ನಡೆಯಲಿದೆ. ಈ ಹಿಂದಿನ ಎರಡು ಕಾರ್ಯಕ್ರಮ 2 ದಿನಗಳ ಕಾಲ ನಡೆದಿತ್ತು. ಎರಡು ದಿನಕ್ಕೆ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಈ ಬಾರಿ ಮೂರು ದಿನಗಳ ಕಾಲ ವಿದ್ಯಾಪೀಠ ವಿಶೇಷ ಕಾರ್ಯಕ್ರಮ ನಡೆಯಲಿದೆ.

    ಯಾರೆಲ್ಲ ಭಾಗವಹಿಸುತ್ತಾರೆ?
    ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್, ಕಾಲೇಜುಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

    ಯಾರೆಲ್ಲ ಆಗಮಿಸಬಹುದು?
    ಕೌನ್ಸೆಲರ್ ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು.

    ದಿನಾಂಕ : ಮೇ 10, 11, 12
    ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ : ಬೆಳಗ್ಗೆ 9.30 ರಿಂದ ಸಂಜೆ 6.00 ಗಂಟೆಯವರೆಗೆ

  • ‘ವಿದ್ಯಾಪೀಠ’ಕ್ಕೆ ಬನ್ನಿ, ಉಚಿತವಾಗಿ ಕಾಲೇಜುಗಳ ಮಾಹಿತಿ ಪಡೆಯಿರಿ

    ‘ವಿದ್ಯಾಪೀಠ’ಕ್ಕೆ ಬನ್ನಿ, ಉಚಿತವಾಗಿ ಕಾಲೇಜುಗಳ ಮಾಹಿತಿ ಪಡೆಯಿರಿ

    ಬೆಂಗಳೂರು: ಎಸ್‍ಎಸ್‍ಎಲ್‍ಸಿ, ಪಿಯುಸಿ ನಂತರ ಮುಂದೇನು? ಯಾವ ಕಾಲೇಜಿನಲ್ಲಿ ಯಾವೆಲ್ಲ ಕೋರ್ಸ್ ಗಳಿವೆ? ಈಗಿನ ಎಜುಕೇಶನ್ ಟ್ರೆಂಡ್ ಏನು? ಇತ್ಯಾದಿ ಪ್ರಶ್ನೆ, ಗೊಂದಲ ನಿಮ್ಮಲ್ಲಿದ್ಯಾ? ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಗೊಂದಲ, ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ ವಿದ್ಯಾಪೀಠದಲ್ಲಿ ಪರಿಹಾರ ಸಿಗಲಿದೆ.

    ಪಬ್ಲಿಕ್ ಟಿವಿ ಮೂರು ದಿನಗಳ ಕಾಲ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮನ್ನು ಆಯೋಜಿಸಿದೆ. ಬೆಂಗಳೂರು ನಗರದಲ್ಲಿರುವ ಅರಮನೆ ಮೈದಾನದಲ್ಲಿ ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

    ಎರಡು ಬಾರಿ ಯಶಸ್ವಿಯಾಗಿ ಆಯೋಜನೆಗೊಂಡಿದ್ದ ವಿದ್ಯಾಪೀಠ ಈ ಬಾರಿ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಹಿಂದಿನ ಎರಡು ಕಾರ್ಯಕ್ರಮ 2 ದಿನಗಳ ಕಾಲ ನಡೆದಿತ್ತು. ಎರಡು ದಿನಕ್ಕೆ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಈ ಬಾರಿ ಮೂರು ದಿನಗಳ ಕಾಲ ವಿದ್ಯಾಪೀಠ ವಿಶೇಷ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧೆಗಳು ಆಯೋಜನೆಗೊಂಡಿದೆ.

    ಯಾರೆಲ್ಲ ಭಾಗವಹಿಸುತ್ತಾರೆ?
    – ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್
    – ಆರ್ಕಿಟೆಕ್ಚರ್
    – ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು
    – ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು
    – ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್
    – ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು
    – ಸಮೂಹ ಸಂವಹನ
    – ಎಂಬಿಎ ಇನ್‍ಸ್ಟಿಟ್ಯೂಷನ್
    – ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು

    ಯಾರೆಲ್ಲ ಆಗಮಿಸಬಹುದು?
    – ಕೌನ್ಸೆಲರ್ ಗಳು
    – ಶಿಕ್ಷಣ ತಜ್ಞರು
    – ಹಣಕಾಸು ಸಲಹೆಗಾರರು
    – ಪೋಷಕರು
    – ಪಿಯುಸಿ ವಿದ್ಯಾರ್ಥಿಗಳು
    – ಪದವಿ ಓದುತ್ತಿರುವ ವಿದ್ಯರ್ಥಿಗಳು
    – ಉದ್ಯೋಗದಲ್ಲಿರುವ ಉದ್ಯೋಗಿಗಳು

    ಏನೆಲ್ಲ ಸ್ಪರ್ಧೆ ಇರಲಿದೆ?
    ಚರ್ಚಾ ಸ್ಪರ್ಧೆ, ರಸಪ್ರಶ್ನೆ (ಕ್ವಿಜ್), ಗಾಯನ ಸ್ಪರ್ಧೆ, ಪ್ರೊಜೆಕ್ಟ್ ಅನಾವರಣ, ಪೇಂಟಿಂಗ್ ಸ್ಪರ್ಧೆ ನಡೆಯಲಿದೆ. ಈ ಎಲ್ಲ ಸ್ಪರ್ಧೆಗಳಿಗೆ ಪ್ರವೇಶ ಉಚಿತವಾಗಿದ್ದು, 17 ರಿಂದ 22 ವರ್ಷ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು. 95389 77753 (ಅಕ್ಷಯ್), 99000 30944 (ನಿತಿನ್) ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಮತ್ತು ಹೆಸರನ್ನು ನೊಂದಾಯಿಸಿಕೊಳ್ಳಬಹುದು.

    ದಿನಾಂಕ : ಮೇ 10, 11, 12
    ಸ್ಥಳ : ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ : ಬೆಳಗ್ಗೆ 9.30 ರಿಂದ ಸಂಜೆ 6.00 ಗಂಟೆಯವರೆಗೆ

    ಯಾವೆಲ್ಲ ಸ್ಟಾಲ್‍ಗಳು ಇರಲಿವೆ?
    ಆಚಾರ್ಯ ಐಟಿ, ಆರಾರ್ ಇನ್‍ಸ್ಟಿಟ್ಯೂಷನ್, ವಿಷನ್ ಪಿಯು ಕಾಲೇಜ್, ಸಿಂಧಿ ಕಾಲೇಜ್, ಕಮ್ಯೂನಿಟಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಕೆಎಸ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಇಂಡಿಯನ್ ಅಕಾಡೆಮಿ, ಬೃಂದಾವನ್ ಕಾಲೇಜ್, ವಿಬಿಆರ್ ಅಕಾಡೆಮಿ, ವೇಮನ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆದಿಚುಂಚನಗಿರಿ ವಿಶ್ವವಿದ್ಯಾಲಯ, ಐಎಸ್‍ಬಿಆರ್ ಕಾಲೇಜ್, ನಿಟ್ಟೆ ಮೀನಾಕ್ಷಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ ಕಾಲೇಜ್ ಗ್ರೂಪ್ ಇನ್‍ಸ್ಟಿಟ್ಯೂಷನ್ಸ್, ಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಎಂಎಸ್ ರಾಮಯ್ಯ ಫೌಂಡೇಶನ್, ಸಪ್ತಗಿರಿ ಕಾಲೇಜ್ ಆಫ್ ಎಂಜಿನಿಯರಿಂಗ್, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಐಡಿಪಿ ಎಜುಕೇಷನ್, ಏಟ್ರಿಯಾ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ಅರಿಹಂತ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಸ್ಕೂಲಾಸ್ಟಿಕ್ ಓವರ್ಸೀಸ್ ಎಜುಕೇಶನ್, ಶೇಷಾದ್ರಿಪುರಂ ಕಾಲೇಜ್, ಯುನಿವರ್ಸಲ್ ಕೋಚಿಂಗ್ ಸೆಂಟರ್ ಇನ್ನಿತರ ಕಾಲೇಜುಗಳು ಭಾಗವಹಿಸಲಿವೆ.

    ಪ್ಲಾಟಿನಂ ಪ್ರಯೋಜಕರು:
    ರೇವಾ ವಿಶ್ವವಿದ್ಯಾಲಯ, ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ಗೀತಂ ವಿಶ್ವವಿದ್ಯಾಲಯ, ಶ್ರೀ ವೆಂಕಟೇಶ್ವರ ಕಾಲೇಜ್ ಆಫ್ ಎಂಜಿನಿಯರಿಂಗ್

    ಗೋಲ್ಡ್ ಪ್ರಾಯೋಜಕರು:
    ಕೇಂಬ್ರಿಡ್ಜ್ ಇನ್‍ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ, ರಾಮಯ್ಯ ಇನ್‍ಸ್ಟಿಟ್ಯೂಷನ್, ಏಮ್ಸ್ ಇನ್‍ಸ್ಟಿಟ್ಯೂಷನ್, ಸಿಎಂಆರ್ ವಿಶ್ವವಿದ್ಯಾಲಯ, ಎಕ್ಸೆಲ್ ಅಕಾಡೆಮಿಕ್ಸ್

    ಸಿಲ್ವರ್ ಪ್ರಾಯೋಜಕರು:
    ರಾಜರಾಜೇಶ್ವರಿ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್, ಸೌಂದರ್ಯ ಕಾಲೇಜ್, ಪಿಇಎಸ್ ವಿಶ್ವವಿದ್ಯಾಲಯ, ಆಚಾರ್ಯ ಬೆಂಗಳೂರು ಬಿ ಸ್ಕೂಲ್, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ಆಕ್ಸ್‍ಫರ್ಡ್ ಕಾಲೇಜ್, ಕೃಪಾನಿಧಿ ಕಾಲೇಜ್, ದಯಾನಂದ ಸಾಗರ್ ವಿಶ್ವವಿದ್ಯಾಲಯ, ಲೋಹಿತ್ ಅಕಾಡೆಮಿ ಕಾಲೇಜ್ ಆಫ್ ಕಾಮರ್ಸ್.

    ಕ್ರಿಯೇಟಿವ್ ಸ್ಟಾಲ್:
    ನ್ಯೂ ಹಾರಿಜನ್ ಕಾಲೇಜ್ ಆಫ್ ಎಂಜಿನಿಯರಿಂಗ್

  • SSLCಯಲ್ಲಿ ಹಾಸನ ಜಿಲ್ಲೆ ಫಸ್ಟ್ ಬಂದ ಕಥೆ ಬಿಚ್ಚಿಟ್ಟ ರೋಹಿಣಿ ಸಿಂಧೂರಿ!

    SSLCಯಲ್ಲಿ ಹಾಸನ ಜಿಲ್ಲೆ ಫಸ್ಟ್ ಬಂದ ಕಥೆ ಬಿಚ್ಚಿಟ್ಟ ರೋಹಿಣಿ ಸಿಂಧೂರಿ!

    – 31ನೇ ಸ್ಥಾನದಿಂದ 1ನೇ ಸ್ಥಾನಕ್ಕೆ ಏರಿಕೆ
    – ರೇಡಿಯೋ ಮೂಲಕ ಮಕ್ಕಳಿಗೆ ಮಾಹಿತಿ
    – ಆರಂಭದಲ್ಲೇ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ
    – ಖಾಸಗಿ ಶಾಲೆಗಳು, ಅಧಿಕಾರಿಗಳು, ಶಿಕ್ಷಕರ ಸಹಕಾರ

    ವಿಶೇಷ ವರದಿ
    ಬೆಂಗಳೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಾಸನ ರಾಜ್ಯದಲ್ಲೇ ಪ್ರಥಮ ಫಲಿತಾಂಶ ಪಡೆದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದ್ದು ಜಿಲ್ಲಾಡಳಿತ ನಡೆಸಿದ ಸತತ ಪ್ರಯತ್ನ. ಈ ಸತತ ಪ್ರಯತ್ನದಿಂದ ಇದೇ ಮೊದಲ ಬಾರಿಗೆ ಹಾಸನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.89.33 ಫಲಿತಾಂಶದೊಂದಿಗೆ ದಾಖಲೆ ಬರೆದಿದೆ.

    ಹೌದು, ಇದಕ್ಕೆಲ್ಲಾ ಕಾರಣ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ಫಲಿತಾಂಶ ಮೇಲಕ್ಕೆ ಎತ್ತಲು ಮಾಡಿದ ಪ್ಲ್ಯಾನ್. ಈ ಪ್ಲ್ಯಾನ್ ಯಶಸ್ವಿಯಾಗಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರ್ವಹಿಸಿದ ಕೆಲಸ ಮತ್ತು ಜಿಲ್ಲೆಯ ಶಿಕ್ಷಕರ ಕಠಿಣ ಪರಿಶ್ರಮದಿಂದ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಈ ಬಾರಿ ಹೊಸ ಇತಿಹಾಸ ಸೃಷ್ಟಿಸಿದೆ.

    ಈ ಸಾಧನೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೋಹಿಣಿ ಸಿಂಧೂರಿ ಅವರು, ನಾನು ಹಾಸನ ಜಿಲ್ಲಾಧಿಕಾರಿಯಾಗಿ ಬಂದಾಗ ಎಸ್‍ಎಸ್‍ಎಲ್‍ಸಿ ಫಲಿತಾಂಶ ನೋಡಿ ಬಹಳ ಬೇಸರವಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ಮೂಲಭೂತ ಸೌಕರ್ಯ ಇತ್ಯಾದಿ ಕಾರಣಗಳಿಂದ ಫಲಿತಾಂಶ ಕಡಿಮೆ ಬಂದಿದ್ದಕ್ಕೆ ಕಾರಣ ನೀಡುತ್ತಾರೆ. ಆದರೆ ದಕ್ಷಿಣ ಕರ್ನಾಟಕದ ಭಾಗವಾಗಿರುವ ಹಾಸನದಲ್ಲಿ ಯಾವುದೇ ಸಮಸ್ಯೆ ಇಲ್ಲ. ದಕ್ಷಿಣ ಕರ್ನಾಟಕದ ಜಿಲ್ಲೆಗಳು ಉತ್ತಮ ಫಲಿತಾಂಶ ದಾಖಲಿಸಿಕೊಂಡೇ ಬರುತ್ತಿದೆ. ಹೀಗಾಗಿ ಫಲಿತಾಂಶ ಮೇಲಕ್ಕೆ ಎತ್ತಲು ನಾವು ಪ್ಲಾನ್ ಮಾಡಿದ್ವಿ. ಈ ನಿಟ್ಟಿನಲ್ಲಿ ಶಿಕ್ಷಕರು, ಅಧಿಕಾರಿಗಳು ಸಹಕರಿಸಿದ್ದರಿಂದ ಈ ಫಲಿತಾಂಶ ಬಂದಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

    ಹಾಸನದಲ್ಲಿ ಆಗಿದ್ದು ಏನು?
    ರೋಹಿಣಿ ಸಿಂಧೂರಿ ಅವರು ಹಾಸನದಲ್ಲಿ ಅಧಿಕಾರ ಸ್ವೀಕರಿಸಿದ್ದ ಸಮಯದಲ್ಲಿ ಹಾಸನಕ್ಕೆ ಎಸ್‍ಎಸ್‍ಎಲ್‍ಸಿಯಲ್ಲಿ 31ನೇ ಸ್ಥಾನ ಸಿಕ್ಕಿತ್ತು. ಫಲಿತಾಂಶವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ರೇಡಿಯೋ ಮೂಲಕ ಮಕ್ಕಳಿಗೆ ಪಾಠ, ಹೇಗೆ ಪರೀಕ್ಷೆಗೆ ಓದಬೇಕು, ಯಾವ ರೀತಿ ಬರೆಯಬೇಕು ಇತ್ಯಾದಿ ವಿಚಾರಗಳನ್ನು ಪ್ರಸಾರ ಮಾಡಲಾಯಿತು.

    ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದರೂ ಅವರಿಗೆ ನುರಿತ ಶಿಕ್ಷಕರಿಂದ ತರಬೇತಿ ಸಿಗದ ಕಾರಣ ಫೇಲ್ ಆಗುತ್ತಿದ್ದಾರೆ ಎನ್ನುವ ವಿಚಾರ ಜಿಲ್ಲಾಡಳಿತಕ್ಕೆ ಗೊತ್ತಾಯಿತು. ಇದಕ್ಕಾಗಿ ರೋಹಿಣಿ ಸಿಂಧೂರಿ ಅವರು ಖಾಸಗಿ ಶಾಲೆಯ ಜೊತೆ ಮಾತನಾಡಿ ಅಲ್ಲಿರುವ ನುರಿತ ಶಿಕ್ಷಕರಿಂದ ಮಕ್ಕಳಿಗೆ ಪಾಠ ಮಾಡಿಸಿಕೊಡುವಂತೆ ಮನವಿ ಮಾಡಿದರು. ಈ ಸಂಬಂಧ ಜಿಲ್ಲಾಡಳಿತ ಮೂರು ಮೂರು ಬಾರಿ ಖಾಸಗಿ ಶಾಲೆಯ ಪ್ರಿನ್ಸಿಪಾಲ್ ಜೊತೆ ಸಭೆ ನಡೆಸಿ ನಡೆಸಿ ಸಹಕಾರ ಕೋರಿದ್ದರು. ಅಷ್ಟೇ ಅಲ್ಲದೇ ವೈಯಕ್ತಿಕವಾಗಿ ಪ್ರಾಂಶುಪಾಲರಿಗೆ ಪತ್ರ ಬರೆದು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಲು ನಿಮ್ಮ ಸಹಕಾರ ಬೇಕು ಎಂದು ರೋಹಿಣಿ ಸಿಂಧೂರಿ ಅವರು ಮನವಿ ಮಾಡಿದ್ದರು. ಈ ಮನವಿಗೆ ಖಾಸಗಿ ಶಾಲೆಗಳಿಂದ ಉತ್ತಮ ಪ್ರತಿಕ್ರಿಯೆ ದೊರೆಯಿತು. ಶಾಲೆಯ ಶಿಕ್ಷಕರು ಗ್ರಾಮೀಣ ಭಾಗದ ಮಕ್ಕಳಿಗೂ ಶಿಕ್ಷಣ ನೀಡಿದರು.

    ಪರೀಕ್ಷೆ ಹತ್ತಿರ ಬಂದಾಗ ಸ್ಪೆಷಲ್ ಕ್ಲಾಸ್ ಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಾರೆ ಎನ್ನುವುದು ಜಿಲ್ಲಾಡಳಿತಕ್ಕೆ ಗೊತ್ತಾಯಿತು. ಪರೀಕ್ಷೆ ಹತ್ತಿರ ಬಂದಾಗ ಫಲಿತಾಂಶ ಉತ್ತಮ ಬರುತ್ತದೆ ಎಂದಾದರೆ ಯಾಕೆ ಶಾಲೆಗಳು ಆರಂಭಗೊಳ್ಳುವಾಗಲೇ ವಿಶೇಷ ಕೋಚಿಂಗ್ ನೀಡಬಾರದು ಎಂದು ತೀರ್ಮಾನಿಸಲಾಯಿತು. ಆರಂಭದಲ್ಲೇ ತರಬೇತಿ ನೀಡಿದರೆ ಉತ್ತಮ ಫಲಿತಾಂಶ ಬರಬಹುದು ಎನ್ನುವ ಲೆಕ್ಕಾಚಾರ ಹಾಕಿ ಕಳೆದ ವರ್ಷ ನಾವು ಆರಂಭದಲ್ಲೇ ಕೋಚಿಂಗ್ ಕ್ಲಾಸ್ ನೀಡಿ ಮಕ್ಕಳನ್ನು ಶಿಕ್ಷಣದಲ್ಲಿ ಮೇಲುಗೈ ಸಾಧಿಸುವಂತೆ ಮಾಡಿ ಎಂದು ಸಲಹೆ ನೀಡಿದ್ದೆವು. ಈ ಸಲಹೆ ಯಶಸ್ವಿಯಾಗಿದ್ದು ಕಳೆದ ವರ್ಷ ಜಿಲ್ಲೆಗೆ 7ನೇ ಸ್ಥಾನ ಸಿಕ್ಕಿತು. ಈಗ ಇದು ಮತ್ತಷ್ಟು ಯಶಸ್ವಿಯಾಗಿದ್ದು ಮೊದಲ ಸ್ಥಾನ ಸಿಕ್ಕಿದೆ ಎಂದು ರೋಹಿಣಿ ಸಿಂಧೂರಿ ಅವರು ಹೇಳಿದರು.

    ಈ ಬಾರಿಯ ಫಲಿತಾಂಶಲ್ಲಿ ಟಾಪ್ 3 ಒಳಗಡೆ ಬರಬಹುದು ಎಂದು ನಿರೀಕ್ಷೆ ಮಾಡಿದ್ದೆವು. ಅದರಲ್ಲೂ ಉಡುಪಿಯನ್ನು ನಾವು ಹಿಂದೆ ಹಾಕುತ್ತೇವೆ ಎನ್ನುವ ನಿರೀಕ್ಷೆ ಮಾಡಿರಲಿಲ್ಲ. ಆದರೆ ಈ ಬಾರಿ ಮೊದಲ ಸ್ಥಾನ ಹಾಸನಕ್ಕೆ ಬಂದಿದ್ದು ಸಂತೋಷ ನೀಡಿದೆ. ಜಿಲ್ಲಾಡಳಿತದ ಪ್ರಯತ್ನಕ್ಕೆ ಎಲ್ಲ ಅಧಿಕಾರಿಗಳು, ಶಿಕ್ಷಕರು ಸ್ಪಂದಿಸಿದ ಪರಿಣಾಮ ಈ ಸಾಧನೆ ನಿರ್ಮಾಣವಾಗಿದೆ. ಚೀಟಿಂಗ್ ನಡೆಸಿ ಈ ಫಲಿತಾಂಶ ಬಂದಿದೆ ಎಂದು ಕೆಲವರು ಹೇಳಬಹುದು. ಆದರೆ ನಮ್ಮ ಅಧಿಕಾರಿಗಳು ಮತ್ತು ಶಿಕ್ಷಕರು ಉತ್ತಮವಾಗಿ ಕೆಲಸ ಮಾಡಿದ ಪರಿಣಾಮದಿಂದಲೇ ಈ ಫಲಿತಾಂಶ ಬಂದಿದೆ. ಹೀಗಾಗಿ ಈ ಸಾಧನೆಗೆ ನಿರ್ಮಾಣಕ್ಕೆ ಕಾರಣರಾದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಹೇಳಿದರು.

    ಯಾವ ವರ್ಷ ಎಷ್ಟನೇ ಸ್ಥಾನ?
    2014-15 ರಲ್ಲಿ 9ನೇ ಸ್ಥಾನ ಸಿಕ್ಕಿದರೆ, 2015-16 ರಲ್ಲಿ 18ನೇ ಸ್ಥಾನಕ್ಕೆ ಕುಸಿದಿತ್ತು, 2016-17ರ ಅವಧಿಯಲ್ಲಿ ಮತ್ತಷ್ಟು ಕುಸಿದು 31ನೇ ಸ್ಥಾನ ಸಿಕ್ಕಿತ್ತು. 2017-18 ರಲ್ಲಿ 7ನೇ ಸ್ಥಾನಕ್ಕೆ ಏರಿದರೆ ಈ ವರ್ಷ ಪ್ರಥಮ ಸ್ಥಾನ ಪಡೆದಿದೆ.

    ಡಿಸಿ ಪ್ರಯತ್ನಕ್ಕೆ ಹಿನ್ನಡೆಯಾಗಿತ್ತು!
    ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮಗೊಳಿಸಲು ರೋಹಿಣಿ ಸಿಂಧೂರಿ ಅವರು ಕಳೆದ ವರ್ಷದ ಜುಲೈನಲ್ಲಿ ಶಿಕ್ಷಕರಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದರು. ಬದಲಾದ ಪಠ್ಯ ಕ್ರಮಕ್ಕೆ ಶಿಕ್ಷಕರು ಹೊಂದಿಕೊಂಡಿರುವ ಬಗ್ಗೆ ಪರಿಶೀಲಿಸಲು ಈ ಪರೀಕ್ಷೆ ನಡೆಸಲು ಮುಂದಾಗಿದ್ದರು. ಆದರೆ ಡಿಸಿ ನಿರ್ಧಾರಕ್ಕೆ ಸರ್ಕಾರದಿಂದಲೇ ಬ್ರೇಕ್ ಬಿದ್ದಿತ್ತು.

    ವಿಧಾನ ಪರಿಷತ್‍ನಲ್ಲಿ ಈ ಬಗ್ಗೆ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಲಿಖಿತ ಉತ್ತರ ನೀಡಿ, ತರಬೇತಿ ಮೂಲಕವೇ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಸಾಧ್ಯ. ಪರೀಕ್ಷೆಯ ಅವಶ್ಯಕತೆ ಇಲ್ಲ. ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದ್ದರು. ಈ ವೇಳೆ ಉದ್ದೇಶಿತ ಪರೀಕ್ಷೆಯಿಂದ ಶಿಕ್ಷಕರ ಬೋಧನಾ ಆಸಕ್ತಿ ಕಡಿಮೆಯಾಗಲಿದ್ದು, ಶಿಕ್ಷಕರು ಆತಂಕ ಮತ್ತು ಒತ್ತಡಕ್ಕೆ ಒಳಗಾಗುತ್ತಾರೆಂದು ಸದಸ್ಯ ಮರಿತಿಬ್ಬೇಗೌಡ ಕಳವಳ ವ್ಯಕ್ತಪಡಿಸಿದ್ದರು.

    ಯಾರು ರೋಹಿಣಿ ಸಿಂಧೂರಿ?
    ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.

    ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.

    2015ರ ಸೆಪ್ಟೆಂಬರ್‍ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿತ್ತು.

    https://www.youtube.com/watch?v=RIlr3y8t7ow

    https://www.youtube.com/watch?v=c6PoH0rh1XE

    https://www.youtube.com/watch?v=I0pUTEiRfSo

     

  • ಗಮನಿಸಿ, ನಾಳೆಯೇ SSLC ಫಲಿತಾಂಶ

    ಗಮನಿಸಿ, ನಾಳೆಯೇ SSLC ಫಲಿತಾಂಶ

    ಬೆಂಗಳೂರು: ಏಪ್ರಿಲ್ 30 ಮಂಗಳವಾರ ಮಧ್ಯಾಹ್ನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.

    ಈ ಮೊದಲು ಮೇ 2ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ ಲಭ್ಯವಾಗಲಿದೆ ಎಂಬ ಮಾಹಿತಿ ಲಭಿಸಿತ್ತು. ಆದರೆ ಈ ಕುರಿತು ಸ್ಪಷ್ಟನೆ ಸಿಕ್ಕಿದ್ದು ಮಧ್ಯಾಹ್ನ 12 ಗಂಟೆಗೆ ಶಿಕ್ಷಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ಆ ಬಳಿಕ ಇಲಾಖೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

    ಸುದ್ದಿಗೋಷ್ಠಿಯ ಬಳಿಕ ವಿದ್ಯಾರ್ಥಿಗಳು ಇಲಾಖೆಯ ವೆಬ್‍ಸೈಟ್‍ನಲ್ಲಿ ಮಾಹಿತಿ ಪಡೆಯಬಹುದು. ಬುಧವಾರ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,847 ಕೇಂದ್ರಗಳಲ್ಲಿ ಒಟ್ಟು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

    www.karresults.nic.in ಈ ವೆಬ್‍ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ತಿಳಿಯಬಹುದು.

  • ವೀರ ಮರಣ ಅಪ್ಪಿದ ಯೋಧರ ಮಕ್ಕಳ ಶಿಕ್ಷಣ ಜವಾಬ್ದಾರಿ ವಹಿಸಿಕೊಂಡ ಸೆಹ್ವಾಗ್

    ವೀರ ಮರಣ ಅಪ್ಪಿದ ಯೋಧರ ಮಕ್ಕಳ ಶಿಕ್ಷಣ ಜವಾಬ್ದಾರಿ ವಹಿಸಿಕೊಂಡ ಸೆಹ್ವಾಗ್

    ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿಯಲ್ಲಿ ಹುತಾತ್ಮರಾದ 40 ಸೈನಿಕರ ಮಕ್ಕಳ ಶಿಕ್ಷಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

    ಹುತಾತ್ಮ ಯೋಧರಿಗೆ ನಾವು ಎಷ್ಟು ನೀಡಿದರೂ ಕೂಡ ಕಡಿಮೆಯೇ. ನನ್ನಿಂದ ಸಣ್ಣ ಸಹಾಯವಾಗಲಿ ಎಂದು ವೀರ ಮರಣ ಹೊಂದಿದ ಎಲ್ಲಾ ಯೋಧರ ಮಕ್ಕಳ ಶಿಕ್ಷಣ ಹಾಗೂ ಅಗತ್ಯ ಸಹಾಯ ಮಾಡುವುದಾಗಿ ಸೆಹ್ವಾಗ್ ತಿಳಿಸಿದ್ದಾರೆ.

    ಇದೇ ವೇಳೆ ಹರಿಯಾಣ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಕ್ಸರ್ ವಿಜಯೇಂದ್ರ ಸಿಂಗ್ ಕೂಡ ತಮ್ಮ ಒಂದು ತಿಂಗಳ ಸಂಬಳವನ್ನು ಯೋಧರ ನಿಧಿಗೆ ನೀಡುವುದಾಗಿ ಹೇಳಿದ್ದಾರೆ.

    ಇದಕ್ಕೂ ಮುನ್ನ ದಾಳಿಯ ಬಗ್ಗೆ ಹೇಡಿಗಳ ಹಿನಾಕೃತ್ಯ ಎಂದು ಕಿಡಿಕಾರಿದ್ದ ಸೆಹ್ವಾಗ್, ಯೋಧರ ಕುಟುಂಬ ನೋವನ್ನು ಹೇಳಲು ಪದಗಳು ಇಲ್ಲ. ಘಟನೆಯಲ್ಲಿ ಗಾಯಗೊಂಡ ಯೋಧರ ಚೇತರಿಕೆಗೆ ಪ್ರಾರ್ಥಿಸುವುದಾಗಿ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಭೂತ ಬಂಗಲೆಯಂತಾದ ಸರ್ಕಾರಿ ಶಾಲೆ-ಪಾಳು ಬಿದ್ದ ಕಟ್ಟಡದಲ್ಲಿಯೇ ಮಕ್ಕಳಿಗೆ ಪಾಠ

    ಭೂತ ಬಂಗಲೆಯಂತಾದ ಸರ್ಕಾರಿ ಶಾಲೆ-ಪಾಳು ಬಿದ್ದ ಕಟ್ಟಡದಲ್ಲಿಯೇ ಮಕ್ಕಳಿಗೆ ಪಾಠ

    ಚಿತ್ರದುರ್ಗ: ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಜಾರಿ ತರೋದರ ಜೊತೆಗೆ ಕೋಟಿ ಕೋಟಿ ಅನುದಾನವನ್ನು ಬಿಡುಗಡೆ ಮಾಡುತ್ತದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಶಾಲೆಯನ್ನು ನೀವು ನೋಡಿದ್ರೆ ಬಿಡುಗಡೆ ಆಗುತ್ತಿರೋ ಹಣವೆಲ್ಲಾ ಎಲ್ಲಿ ಹೋಗುತ್ತಿದೆ ಎಂಬ ಪ್ರಶ್ನೆ ನಿಮ್ಮಲ್ಲಿ ಹುಟ್ಟಿಕೊಳ್ಳುತ್ತದೆ. ಜಿಲ್ಲೆಯ ಹೊಳಲ್ಕರೆ ತಾಲೂಕಿನ ಕೊಳಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಭೂತ ಬಂಗಲೆಯಂತೆ ಕಾಣುತ್ತಿದೆ. ಇಂತಹ ಪಾಳು ಬಿದ್ದ ಕಟ್ಟಡದಲ್ಲಿಯೇ ಮಕ್ಕಳು ಪಾಠವನ್ನು ಕಲಿಯುತ್ತಿದ್ದಾರೆ.

    ಈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಈ ಶಾಲೆಗೆ ಉತ್ತಮ ವ್ಯವಸ್ಥೆ ಮಾತ್ರ ಈವರೆಗೆ ಕಲ್ಪಿಸಲಾಗಿಲ್ಲ. ಈ ಬಗ್ಗೆ ಕೇಳಿದ್ರೆ ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯ ಶಿಕ್ಷಕ ಹನುಮಂತಪ್ಪ ಹೇಳುತ್ತಾರೆ.

    ಹಳೆಯ ಶಾಲಾ ಕೊಠಡಿಗಳಲ್ಲಿ ಇಂದಿಗೂ ಇಲ್ಲಿ ಶಾಲೆ ನಡೆಸಲಾಗುತ್ತಿದೆ. ಹೀಗಾಗಿ, ಮಳೆಗಾಲದಲ್ಲಂತೂ ಶಾಲೆಯ ಗೋಡಗಳು ಯಾವಾಗ ಕುಸಿಯುತ್ತವೆ ಎಂಬ ಆತಂಕದಿಂದ ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡು ಪಾಠ ಕೇಳುತ್ತಿದ್ದಾರೆ. ಬೇಸಿಗೆಯಲ್ಲಿ ಕಾದ ಕಬ್ಬಿಣದಂತಾದ ಮೇಲ್ಛಾವಣೆಯಿಂದ ತೂರಿ ಬರುವ ಬಿಸಿಲ ಜಳ ಮಕ್ಕಳ ಮೈ ಬೆವರುವಂತೆ ಸುಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ಈಗಾಗಲೇ ಡಿಡಿಪಿಐ ಕಚೇರಿವರೆಗೆ ಬಂದು ಧರಣಿ ನಡೆಸಿ ಶಾಲಾ ಕಟ್ಟಡಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ.

    ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆ ಕೊಳಾಳು ಗ್ರಾಮದ ಸರ್ಕಾರಿ ಶಾಲೆ ದುಸ್ಥಿತಿಯಲ್ಲಿದೆ. ಹೀಗಾಗಿ ವಿದ್ಯಾರ್ಥಿಗಳು ಆತಂಕದಲ್ಲೇ ವಿದ್ಯಭ್ಯಾಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನಾದ್ರೂ ಈ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಹಾಗು ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಬಲ್ ಡಿಗ್ರಿ ಓದಿದರೂ ಬಾಣಸಿಗ ಕಾರ್ಯ-ಬಿಡುವಿನ ವೇಳೆ ಮಕ್ಕಳಿಗೆ ಪಾಠ ಬೋಧನೆ

    ಡಬಲ್ ಡಿಗ್ರಿ ಓದಿದರೂ ಬಾಣಸಿಗ ಕಾರ್ಯ-ಬಿಡುವಿನ ವೇಳೆ ಮಕ್ಕಳಿಗೆ ಪಾಠ ಬೋಧನೆ

    ದಾವಣಗೆರೆ: ಪದವೀಧರರು ಅಂದಾಗ ದೊಡ್ಡ ಕೆಲಸಕ್ಕೆ ಸೇರಬೇಕು ಎಂದು ಎಲ್ಲರೂ ಭಾವಿಸುತ್ತಾರೆ. ಈಗಿನ ಪರಿಸ್ಥಿತಿಯೋ ಅಥವಾ ಇವರ ಮನಸ್ಥಿತಿಯೋ ಡಬಲ್ ಡಿಗ್ರಿ ಪಡೆದರೂ ಹಾಸ್ಟೆಲ್‍ನಲ್ಲಿ ಬಾಣಸಿಗರಾಗಿ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯ ಯುವಕರು ಇವತ್ತಿನ ನಮ್ಮ ಪಬ್ಲಿಕ್ ಹೀರೋ.

    ಹರಪನಹಳ್ಳಿ ಪಟ್ಟಣದ ಬಾಲಕರ ಬಿಸಿಎಂ ಹಾಸ್ಟೆಲ್ ನಲ್ಲಿ ಡಬಲ್ ಡಿಗ್ರಿ ಪಡೆದುಕೊಂಡಿರುವ ಕೆಲ ಯುವಕರು ಅಡುಗೆ ಮಾಡಿಕೊಂಡಿದ್ದಾರೆ. ಇವರಾರೂ ಅನಕ್ಷರಸ್ಥರಲ್ಲ ಬದಲಿಗೆ ಡಬಲ್ ಡಿಗ್ರಿ ಮಾಡಿರುವ ಪದವೀಧರರು. 2016-17ರಲ್ಲಿ ಬಾಣಸಿಗರ ಹುದ್ದೆಗೆ ಅರ್ಜಿ ಹಾಕಿ ಆಯ್ಕೆಯಾಗಿದ್ದಾರೆ. ಉತ್ತಮ ಶ್ರೇಣಿಯಲ್ಲಿ ಪದವಿ ಮುಗಿಸಿದ್ದರೂ ಯಾವುದೇ ಅಂಜಿಕೆ ಅಳುಕಿಲ್ಲದೆ ಮಕ್ಕಳಿಗೆ ರುಚಿಕಟ್ಟಾದ ಅಡುಗೆ ಮಾಡಿ ಹಾಕುತ್ತಿದ್ದಾರೆ. ಸಮಯ ಸಿಕ್ಕಾಗ ಹಾಗೂ ಸಂಜೆ ಬಿಡುವು ಮಾಡಿಕೊಂಡು ಮಕ್ಕಳಿಗೆ ಶಿಕ್ಷಣವನ್ನೂ ಹೇಳಿಕೊಡ್ತಿದ್ದಾರೆ.

    ಈ ಯುವಕರು ಮಾತ್ರವಲ್ಲದೇ ಪಟ್ಟಣದ ಎಂಎಸ್‍ಸಿ, ಇಂಜಿನಿಯರಿಂಗ್ ಮಾಡಿರುವ ಯುವಕರು ಸಂಜೆ ವೇಳೆ ವಸತಿ ನಿಲಯಕ್ಕೆ ಬಂದು ಪಾಠ ಮಾಡುತ್ತಾರೆ. ಈ ಎಲ್ಲ ಯುವಕರಿಗೆ ಇಲ್ಲಿನ ವಾರ್ಡನ್ ಗಳು ಅವಕಾಶ ಕಲ್ಪಿಸಿದ್ದಾರೆ. ಒಂದ್ಕಡೆ ಬಾಣಸಿಗ ಪದವೀಧರರು, ಮತ್ತೊಂದು ಕಡೆ ಊರಿನ ಯುವಕರು ಸಹ ಬೋಧನೆ ಮಾಡ್ತಿರೋದು ಮಕ್ಕಳ ಶಿಕ್ಷಣಕ್ಕೆ ಉಪಯುಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    15ರ ವಿದ್ಯಾರ್ಥಿನಿಯನ್ನೇ ಮದುವೆಯಾದ ಟ್ಯೂಷನ್ ಟೀಚರ್!

    – ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಗ್ರಾಮಸ್ಥರ ಹಿಂದೇಟು

    ಪಟ್ನಾ: ಟ್ಯೂಷನ್ ಕಲಿಸುತ್ತಿದ್ದ ಬಿಹಾರದ ಗ್ರಾಮವೊಂದರ ಶಿಕ್ಷಕನೊಬ್ಬ ತನ್ನ ಬಳಿ ಬರುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನೇ ಮದುವೆಯಾಗಿದ್ದಾನೆ.

    ನಾರಾಯಣ್‍ಪುರ ಗ್ರಾಮದಲ್ಲಿ ಶಿಕ್ಷಕ ಚಂದ್ರಪ್ರಕಾಶ್ ಮೆಹ್ತಾ(50) ವಿದ್ಯಾರ್ಥಿಗಳಿಗೆ ಖಾಸಗಿ ಟ್ಯೂಷನ್ ಕೇಂದ್ರವನ್ನು ನಡೆಸುತ್ತಿದ್ದನು. ಆತನ ಬಳಿ ಗ್ರಾಮದ ಹಲವು ಹೆಣ್ಣು ಮಕ್ಕಳು ಟ್ಯೂಷನ್‍ಗೆ ಹೋಗುತ್ತಿದ್ದರು. ಆದ್ರೆ ಕೆಲವು ದಿನಗಳ ಹಿಂದೆ ಚಂದ್ರಪ್ರಕಾಶ್ ಟ್ಯೂಷನ್‍ಗೆ ಬರುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಯಾರಿಗೂ ತಿಳಿಯದಂತೆ ವಿವಾಹವಾಗಿದ್ದನು. ಅಷ್ಟೇ ಅಲ್ಲದೆ ಅವಳ ಜೊತೆ ದೈಹಿಕ ಸಂಬಂಧವನ್ನು ಕೂಡ ಇಟ್ಟುಕೊಂಡಿದ್ದನು.

    ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ತಮ್ಮ ಮಕ್ಕಳಿಗೂ ಯಾರಾದರೂ ಮೋಡಿ ಮಾಡಿ ಮದುವೆಯಾಗಿಬಿಟ್ಟರೆ ಏನು ಗತಿ ಎಂದು ಹೆದರಿ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.

    ಯಾರೋ ಮಾಡಿದ ತಪ್ಪಿಗೆ ನಮಗೇಕೆ ಶಿಕ್ಷೆ ಅಂತ ಶಿಕ್ಷಣದಿಂದ ವಂಚಿತರಾಗಿರುವ ಹೆಣ್ಣು ಮಕ್ಕಳು ಈಗ ಕಣ್ಣೀರಿಡುತ್ತಿದ್ದಾರೆ. ಘಟನೆ ಕುರಿತು ತಿಳಿಯುತ್ತಿದಂತೆ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಪರ ಸಂಘಟನೆಯ ಸದಸ್ಯರು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೇ ಗ್ರಾಮಸ್ಥರು ಮಾತ್ರ ಯಾರ ಮೇಲೂ ನಮಗೆ ನಂಬಿಕೆ ಇಲ್ಲ. ನಮ್ಮ ಮಕ್ಕಳ ಭದ್ರತೆ ನಮಗೆ ಮುಖ್ಯ. ನಾವು ಅವರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv