Tag: Educational Events

  • ಈಗಿನ ಶಿಕ್ಷಣದ ಹೊಸ ಟ್ರೆಂಡ್‌ ಏನು? – ಪಬ್ಲಿಕ್‌ ಟಿವಿ ʼವಿದ್ಯಾಪೀಠʼಕ್ಕೆ ಬನ್ನಿ ಮಾಹಿತಿ ಪಡೆಯಿರಿ

    ಈಗಿನ ಶಿಕ್ಷಣದ ಹೊಸ ಟ್ರೆಂಡ್‌ ಏನು? – ಪಬ್ಲಿಕ್‌ ಟಿವಿ ʼವಿದ್ಯಾಪೀಠʼಕ್ಕೆ ಬನ್ನಿ ಮಾಹಿತಿ ಪಡೆಯಿರಿ

    – ಅರಮನೆ ಮೈದಾನದಲ್ಲಿ ಜೂನ್‌ 24 ರಿಂದ ಆರಂಭ
    – ಮೂರು ದಿನಗಳ ಕಾಲ ನಡೆಯಲಿದೆ ವಿದ್ಯಾಪೀಠ

    ಬೆಂಗಳೂರು: ಈಗಿನ ಶಿಕ್ಷಣದ ಹೊಸ ಟ್ರೆಂಡ್ ಏನು? ಎಸ್‍ಎಸ್‍ಎಲ್‍ಸಿ, ಪಿಯುಸಿಯ ನಂತರ ಯಾವ ಕಾಲೇಜ್‍ನಲ್ಲಿ ಯಾವ ಕೋರ್ಸ್ ಇದೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತದೆ? ಈ ಕಾಲೇಜ್‍ಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಇದ್ಯಾ? ಈ ರೀತಿಯ ಪ್ರಶ್ನೆಗಳು ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬರುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಪಬ್ಲಿಕ್ ಟಿವಿಯ 5ನೇ ಆವೃತ್ತಿ ‘ವಿದ್ಯಾಪೀಠ’ದಲ್ಲಿ ಸುಲಭವಾಗಿ ಉತ್ತರ ಸಿಗಲಿದೆ.

    ಪಬ್ಲಿಕ್ ಟಿವಿ ಮೂರು ದಿನ `ವಿದ್ಯಾಪೀಠ’ದ ಹೆಸರಿನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಗಾ ಶೈಕ್ಷಣಿಕ ಉತ್ಸವವನ್ನು ಆಯೋಜಿಸಿದೆ. ಈ ಹಿಂದೆ ಆಯೋಜಿಸಿದ ನಾಲ್ಕು ಮೆಗಾ ಶೈಕ್ಷಣಿಕ ಉತ್ಸವಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂನ್ 24, 25, 26 ರಂದು ಐದನೇ ಆವೃತ್ತಿಯ ವಿದ್ಯಾಪೀಠ ಕಾರ್ಯಕ್ರಮ ನಡೆಯುಲಿದೆ.

    ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯಮಿಕ ಕೋರ್ಸ್‍ಗಳ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ವೇಳೆ ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ ಪರೀಕ್ಷೆಗಳಿಗಾಗಿ ಕೆಇಎ ಅಧಿಕಾರಿಗಳಿಂದ ಆಪ್ತ ಸಮಾಲೋಚನೆ, ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ಅಷ್ಟೇ ಅಲ್ಲದೇ ಮೂರು ದಿನ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಅರ್ಧಗಂಟೆ ಉಪನ್ಯಾಸ ನಡೆದ ಬಳಿಕ 15 ನಿಮಿಷ ಪ್ರಶ್ನೋತ್ತರಕ್ಕೂ ಅವಕಾಶವಿದೆ.

    ಯಾರೆಲ್ಲ ಭಾಗವಹಿಸುತ್ತಾರೆ?
    ಅನಿಮೇಷನ್, ಮೀಡಿಯಾ ಮತ್ತು ಗೇಮಿಂಗ್, ಆರ್ಕಿಟೆಕ್ಚರ್, ಕಾಮರ್ಸ್ ಮತ್ತು ಬ್ಯಾಂಕಿಂಗ್ ಸಂಸ್ಥೆಗಳು, ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜ್‍ಗಳು, ಫ್ಯಾಷನ್ ಮತ್ತು ಹೋಟೆಲ್ ಮ್ಯಾನೇಜ್‍ಮೆಂಟ್, ಕಾನೂನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜ್‍ಗಳು, ಸಮೂಹ ಸಂವಹನ, ಎಂಬಿಎ ಇನ್‍ಸ್ಟಿಟ್ಯೂಷನ್, ವಿದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳು.

    ಯಾರೆಲ್ಲ ಆಗಮಿಸಬಹುದು?
    ಕೌನ್ಸೆಲರ್‌ಗಳು, ಶಿಕ್ಷಣ ತಜ್ಞರು, ಹಣಕಾಸು ಸಲಹೆಗಾರರು, ಪೋಷಕರು, ಪಿಯುಸಿ ವಿದ್ಯಾರ್ಥಿಗಳು, ಪದವಿ ಓದುತ್ತಿರುವ ವಿದ್ಯಾರ್ಥಿಗಳು, ಉದ್ಯೋಗದಲ್ಲಿರುವ ಉದ್ಯೋಗಿಗಳು

    ದಿನಾಂಕ: ಜೂನ್ 24, 25, 26
    ಸ್ಥಳ: ಗಾಯತ್ರಿ ವಿಹಾರ್, ಅರಮನೆ ಮೈದಾನ, ಬೆಂಗಳೂರು
    ಸಮಯ: ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ