Tag: Educational tour

  • ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

    ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಛತ್ತೀಸ್‌ಗಢ: ಸರಕು ಸಾಗಣೆ ವಾಹನ ಪಲ್ಟಿಯಾಗಿ 5 ಮಂದಿ ಸಾವು

    ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ (Yalaburga) ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಆದೇಶ ಹೊರಡಿಸಿದ್ದಾರೆ.

    ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಅಮಾನತು ಮಾಡಿ ಆದೇಶಿಸಿದ್ದಾರೆ.ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸಿಗರೇಟ್‌ನಿಂದ ಮರ್ಮಾಂಗ ಸುಟ್ಟು ಸ್ನೇಹಿತನ ಹತ್ಯೆ!

  • ಬೀದರ್ | ಚಳಿ ಹೆಚ್ಚಳಕ್ಕೆ ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರವಾಸ ರದ್ದುಪಡಿಸಲು ಒತ್ತಾಯ

    ಬೀದರ್ | ಚಳಿ ಹೆಚ್ಚಳಕ್ಕೆ ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರವಾಸ ರದ್ದುಪಡಿಸಲು ಒತ್ತಾಯ

    ಬೀದರ್: ಜಿಲ್ಲೆಯಲ್ಲಿ ಚಳಿ ಹೆಚ್ಚಾಗಿರುವ ಕಾರಣ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶೈಕ್ಷಣಿಕ ಪ್ರವಾಸ (Educational Tour) ರದ್ದುಪಡಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.

    ಈ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಲಾಗುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದುಪಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕೋ ಕೆಲಸ ಬಿಜೆಪಿ ಮಾಡಿದೆ: ಆರ್.ಅಶೋಕ್‌

    ಈ ಕುರಿತು ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಮಾತನಾಡಿ, ತಾಪಮಾನ ಕುಸಿತ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಈಗಾಗಲೇ ಆಡಳಿತ ಸಲಹೆ ನೀಡಿದೆ. ಹೀಗಾಗಿ ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸದ್ಯಕ್ಕೆ ಪ್ರವಾಸಗಳನ್ನು ಮುಂದೂಡಬೇಕು ಎಂದು ಬೇಡಿಕೆ ಮಂಡಿಸಿದರು. ಬಳಿಕ ಚಳಿ ಕಡಿಮೆಯಾದ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

    ಈ ವೇಳೆ ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಅಜೀಮ್ ಪಟೇಲ್, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಕಾರ್ಯದರ್ಶಿ ಜಿತೇಂದ್ರ ರಾಠೋಡ್, ಪ್ರಧಾನ ಸಂಚಾಲಕ ಸುಧಾಕರ್ ರಾಠೋಡ್, ಜಗದೀಶ್ ಬಿರಾದಾರ, ಸಂತೋಷ ಪಾಟೀಲ, ಗುರುನಾಥ ರಾಠೋಡ್ ಇದ್ದರು.ಇದನ್ನೂ ಓದಿ: Mumbai Boat Accident | 7 ವರ್ಷದ ಬಾಲಕನ ಮೃತದೇಹ ಪತ್ತೆ – ಮೃತರ ಸಂಖ್ಯೆ 15ಕ್ಕೆ ಏರಿಕೆ

  • ಮಕ್ಕಳ ಪ್ರವಾಸಕ್ಕೂ ತಟ್ಟಿದ ಸಿಎಎ ಹೋರಾಟದ ಬಿಸಿ

    ಮಕ್ಕಳ ಪ್ರವಾಸಕ್ಕೂ ತಟ್ಟಿದ ಸಿಎಎ ಹೋರಾಟದ ಬಿಸಿ

    – ಕೆಆರ್ ಪೇಟೆ ಭಾಗದ ಶಾಲೆಗಳ ಪ್ರವಾಸ ರದ್ದು

    ಮಂಡ್ಯ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆ ಬಿಸಿ ಶಾಲಾ ಮಕ್ಕಳ ಪ್ರವಾಸಕ್ಕೂ ತಟ್ಟಿದ್ದು, ಪ್ರವಾಸ ರದ್ದುಪಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

    ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಎಲ್ಲ ಶಾಲಾ ಮಕ್ಕಳ ಪ್ರವಾಸವನ್ನೂ ರದ್ದುಪಡಿಸುವಂತೆ ಕ್ಷೇತ್ರ ಶಿಕ್ಷಣ ಅಧಿಕಾರಿ ಸುಂದರ್ ಸುತ್ತೋಲೆ ಹೊರಡಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಪ್ರತಿಭಟನೆ ಹಾಗೂ ಗಲಭೆಗಳು ಜರುಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದಾಗ ಮಕ್ಕಳಿಗೆ ಯಾವುದೇ ತೊಂದರೆಯಾಗಬಾರದು. ಹೀಗಾಗಿ ಕೆಆರ್ ಪೇಟೆ ತಾಲೂಕಿನ ವ್ಯಾಪ್ತಿಯ ಶಾಲೆಯ ಮಕ್ಕಳು ಪ್ರವಾಸಕ್ಕೆ ಹೋಗಬಾರದು. ಒಂದು ವೇಳೆ ಪ್ರವಾಸ ನಿಗದಿ ಮಾಡಿಕೊಂಡಿದ್ದರೂ ಕೈ ಬಿಡಬೇಕು ಎಂದು ಸುತ್ತೋಲೆಯಲ್ಲಿ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

    ಡಿಸೆಂಬರ್ ಹಾಗೂ ಜನವರಿ ತಿಂಗಳಿನಲ್ಲಿ ಶಾಲೆಯ ಮಕ್ಕಳಿಗೆ ಪ್ರವಾಸಕ್ಕೆ ಹೋಗುವುದು ಸಾಮಾನ್ಯ. ಆದರೆ ಈ ಬಾರಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸ ರದ್ದು ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಸುಂದರ್ ತಿಳಿಸಿದ್ದಾರೆ.

  • ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಬಸ್ಸಿನಲ್ಲೇ ಹೃದಯಾಘಾತದಿಂದ ಸಾವು

    ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿನಿ ಬಸ್ಸಿನಲ್ಲೇ ಹೃದಯಾಘಾತದಿಂದ ಸಾವು

    ಚಿಕ್ಕೋಡಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಬಸ್‍ನಲ್ಲಿಯೇ ಮೃತಪಟ್ಟಿದ್ದಾಳೆ.

    ರಾಯಭಾಗ ತಾಲೂಕಿನ ಹಾರೂಗೇರಿ ಚನ್ನವೃಷಭೇಂದ್ರ ಕಾಲೇಜ್‍ನ ಮೀನಜಾ ಯಲಿಗಾರ (18) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಅಸ್ವಸ್ಥವಾಗಿದ್ದರಿಂದ ಪ್ರವಾಸಿ ಬಸ್ಸನ್ನು ಅಂಕೋಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಯ ಮಧ್ಯದಲ್ಲಿಯೇ ಮೀನಜಾ ಸಾವನ್ನಪ್ಪಿದ್ದಾಳೆ.

    ಘಟನೆಯ ವಿವರ: ಚನ್ನವೃಷಭೇಂದ್ರ ಕಾಲೇಜ್‍ನಲ್ಲಿ ಮೀನಜಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಶೈಕ್ಷಣಿಕ ಪ್ರವಾಸಕ್ಕೆಂದು ಯಾಣ, ಕುಮಟಾ, ಶಿರಸಿ, ಉಡುಪಿ ತಾಣಗಳಿಗೆ ವಿದ್ಯಾರ್ಥಿಗಳು ತೆರಳಿದ್ದರು. ಯಾಣಕ್ಕೆ ಭೇಟಿ ನೀಡಿ ಮುಂದಿನ ಸ್ಥಳಗಳಿಗೆ ಹೋಗುವ ಮುನ್ನವೇ ಮೀನಜಾ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಸಮೀಪದ ಅಂಕೋಲಾ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ದಾರಿಯ ಮಧ್ಯದಲ್ಲಿ ಮೀನಜಾ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

    ಮೀನಜಾ ಮೃತಪಟ್ಟಿದ್ದರಿಂದಾಗಿ ಪ್ರವಾಸವನ್ನು ಮೊಟಕುಗೊಳಿಸಿ ವಿದ್ಯಾರ್ಥಿಗಳು ಹಿಂದಿರುಗಿದ್ದಾರೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv