Tag: Egg Distribution

  • ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್ – ಇಂದಿನಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ

    ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್ – ಇಂದಿನಿಂದ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ

    -ಕಾಂಗ್ರೆಸ್ ಸರ್ಕಾರದ ಮತ್ತೊಂದು ಯೋಜನೆಗೆ ಇಂದು ಚಾಲನೆ

    ಮಂಡ್ಯ: ಕಾಂಗ್ರೆಸ್ ಸರ್ಕಾರದ (Congress Government) ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ.

    ಶಾಲಾ ಮಕ್ಕಳಿಗೆ (School Students) ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ (Egg Distribution) ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ (Mandya) ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ತಾತ್ಕಾಲಿಕ ಸ್ಥಗಿತ- ಪ್ರವಾಸಿಗರಿಗೆ ನಿರಾಸೆ

    ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: KRSನಿಂದ ತಮಿಳುನಾಡಿಗೆ ಗುರುವಾರವೂ ಭಾರೀ ಪ್ರಮಾಣದ ನೀರು – ಇಂದು ರೈತಸಂಘ ಪ್ರತಿಭಟನೆ

    ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ (Anganwadi Centers) ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎಚ್ಚರಿಕೆ ನೀಡಿದರು.

    ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ನಾರಾಯಣಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ: ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಇದಕ್ಕೆ ಉತ್ತರಿಸಿದ ಸಚಿವೆ, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. 39,50,179 ಮಕ್ಕಳು ಇಲ್ಲಿ ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ. ಕಲಬುರಗಿಯಲ್ಲಿ ಇಂತಹ ಕೇಸ್ ಗಮನಕ್ಕೆ ಬಂದಿದೆ. ಈ ಕೇಂದ್ರಕ್ಕೆ ನೊಟೀಸ್ ನೀಡಲಾಗಿದೆ. ಕಳಪೆ ಮೊಟ್ಟೆ ಪ್ರಕರಣಗಳೂ ನನ್ನ ಗಮನಕ್ಕೆ ಬಂದಿದೆ. ಈ‌ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಂಪು ಸುಂದರಿ ಜಾಗಕ್ಕೆ ಹುಣಸೆ ಹಣ್ಣು ಎಂಟ್ರಿ- ಡಿಮ್ಯಾಂಡ್ ಬೆನ್ನಲ್ಲೇ ದರ ಏರಿಕೆ

    ಮಗುವಿನ ಆರೋಗ್ಯಕ್ಕಾಗಿ ಸರ್ಕಾರ ದಿನಕ್ಕೆ 8 ರೂ. ಕೊಡುತ್ತಿದೆ. ನಾನೇ ಒಂದು ಅಂಗನವಾಡಿ ಕೇಂದ್ರಕ್ಕೆ ಹೋಗಿ‌‌ ನೋಡಿದೆ. ನನಗೇ ನಾಚಿಕೆ ಆಯ್ತು. ನಾನು ವಿಸಿಟ್ ಮಾಡಿದ ಕೇಂದ್ರ‌ ಮುಚ್ಚಿಸಿದ್ದೇನೆ. ಯಾರೇ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ತೀವಿ. ಇಲಾಖೆಯಲ್ಲಿ ವಿಕೇಂದ್ರೀಕರಣದಿಂದ ಸಮಸ್ಯೆ ಅಗ್ತಿದೆ. ಹೀಗಾಗಿ ಏಕೀಕೃತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಎಂದು ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    – ಕಳಪೆ ಮೊಟ್ಟೆ ವಿತರಿಸಿದರನ್ನ ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನ ಎಂದ ಸಚಿವೆ

    ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ (Egg Distribution) ಕುರಿತು ನಿಗಾವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದ್ದಾರೆ.

    ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಧಾನಸೌಧದಲ್ಲಿ ಮಾತನಾಡಿ, ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ, ಪೂರೈಕೆ ಮಾಡುವವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಮೊಟ್ಟೆ ವಿತರಕರ ಪಟ್ಟಿಯಿಂದಲೂ ಅವರನ್ನ ಕೈಬಿಡಲಾಗುವುದು ಎಂದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 4 ದಿನಗಳ ಅಂತರದಲ್ಲಿ 2ನೇ ಪ್ರಕರಣ ಬಯಲಿಗೆ – ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

    ಖರೀದಿ ವಿಕೇಂದ್ರೀಕರಣ ಮಾಡಿದ್ದರಿಂದಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿಯಾಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೇ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳ ವಿತರಣೆ

    ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]