Tag: Eid al Adha

  • ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಬೆಂಗಳೂರು: ಪವಿತ್ರ ಬಕ್ರೀದ್ ಹಬ್ಬ (Bakrid Festival) ಆಚರಣೆ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ (EidgahMaidan) ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರೂ ಭಾಗಿಯಾಗಿದ್ದರು.

    ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಮುಸ್ಲಿಂ ಧರ್ಮಗುರುಗಳು ತಮ್ಮ ಸಂಪ್ರದಾಯದಂತೆ ಟೋಪಿ ಹಾಕಿ ಬರಮಾಡಿಕೊಂಡರು. ಇದೇ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಪುಸ್ತಕ ನೀಡಿ ಸ್ವಾಗತಿಸಿದರು. ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಅಲ್ಲಾ ಕೃಪೆಗೆ ಪಾತ್ರರಾದರು.

    ನಂತರ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಸಿಎಂ, ಇಂದು ಪ್ರಾರ್ಥನೆ ಮಾಡಿ ಮನುಕುಲಕ್ಕೆ ಒಳಿತಾಗಲೆಂದು ಕೇಳಿಕೊಂಡಿದ್ದೀರಿ. ಈ ಹಬ್ಬದ ದಿನ ಮುಸ್ಲಿಂ ಬಾಂಧವರೆಲ್ಲ ಸೇರಿದ್ದೀರಿ, ನಾನೂ ನಿಮ್ಮೊಂದಿಗೆ ಭಾಗಿಯಾಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಪತಿ ಅವಾಂತರ

    ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು. ನಮ್ಮಲ್ಲೇ ಕೆಲ ಶಕ್ತಿಗಳಿವೆ, ಇದಕ್ಕೆ ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿವೆ. ಅವುಗಳಿಗೆ ಸೊಪ್ಪು ಹಾಕಬಾರದು. ಎಲ್ಲಾ ಪ್ರೀತಿಯಿಂದ ಇದ್ದರೆ, ರಾಜ್ಯವೂ ಅಭಿವೃದ್ಧಿಯಾಗುತ್ತೆ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು ಎಂದು ಸಲಹೆ ನೀಡಿದರು.

    ವಾಹನ ಸಂಚಾರದಲ್ಲಿ ಬದಲಾವಣೆ:
    ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆಗೊಂಡಿದ್ದರಿಂದಾಗಿ ಮೈದಾನದ ಸುತ್ತಮುತ್ತ ಇರುವ ಮಾರ್ಗಗಳಲ್ಲಿ  ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

    ನಗರದ ಬಸವೇಶ್ವರ ವೃತ್ತದಿಂದ ಸಿ.ಐ.ಡಿ ಜಂಕ್ಷನ್‌ವರೆಗಿನ ರಸ್ತೆ ನಿರ್ಬಂಧಿಸಿದ್ದು, ದೇವರಾಜ ಅರಸು ರಸ್ತೆಯಲ್ಲಿ ಸಂಚಾರ ಕಲ್ಪಿಸಲಾಗಿದೆ. ಲಾಲ್‌ಬಾಗ್ ಮುಖ್ಯದ್ವಾರದಿಂದ ಕಣ್ಣಪ್ಪ ಪೆಟ್ರೋಲ್ ಬಂಕ್‌ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ, ಹೊಸೂರು ರಸ್ತೆಯಲ್ಲಿ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.

    ಟೋಲ್‌ಗೇಟ್ ಜಂಕ್ಷನ್‌ನಿಂದ ಸಿರ್ಸಿ ವೃತ್ತದವರೆಗೆ ರಸ್ತೆ ಸಂಚಾರ ಬಂದ್ ಮಾಡಿದ್ದು, ಸಿರ್ಸಿ ವೃತ್ತದಲ್ಲಿ ಬಲಕ್ಕೆ ತಿರುವು ಪಡೆದು ಬಿನ್ನಿಮಿಲ್ ಟ್ಯಾಂಕ್‌ಬಂಡ್ ರಸ್ತೆಮಾರ್ಗವಾಗಿ ಮಾಗಡಿ ರಸ್ತೆ ವಿಜಯನಗರದ ಮೂಲಕ ಮೈಸೂರು ರಸ್ತೆಗೆ ಸಂಪರ್ಕಿಸಲು ಅನುವು ಮಾಡಿಕೊಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಕ್ರೀದ್‌ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ – ಸಿಎಂ ಭಾಗಿ ಸಾಧ್ಯತೆ

    ಬಕ್ರೀದ್‌ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ – ಸಿಎಂ ಭಾಗಿ ಸಾಧ್ಯತೆ

    ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್‌ ಹಬ್ಬ (Bakrid Festival) ಆಚರಣೆ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Chamrajpete Eidgah Maidan) ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸಾಮೂಹಿಕ ಪ್ರಾರ್ಥನೆ ಆರಂಭವಾಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮೈದಾನದ ಸುತ್ತ ಬಿಗಿ ಪೊಲೀಸ್‌ (Police) ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ

    ಬಿಗಿ ಬಂದೋಬಸ್ತ್‌ಗಾಗಿ 300ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಮೈದಾನದ ಸುತ್ತ CCTV ಕ್ಯಾಮೆರಾ ಅಳವಡಿಸಲಾಗಿದೆ. ಬೆಳಗ್ಗೆ 9:30 ಗಂಟೆ ವೇಳೆಗೆ ಪ್ರಾರ್ಥನೆಯಲ್ಲಿ ಸಿಎಂ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ತರಕಾರಿ ಖಾಲಿ ಆಗಿದ್ರೆ ಸೇವ್ ಬಳಸಿ ಮಾಡಿ ಸ್ಪೈಸಿ ಪಲ್ಯ

    ಮುಸ್ಲಿಂ ಧರ್ಮಗುರುಗಳು ಸೇರಿದಂತೆ ಸ್ಥಳೀಯ ಶಾಸಕ, ಸಚಿವ ಜಮೀರ್ ಅಹಮ್ಮದ್ ಖಾನ್‌ (Zameer Ahmed Khan) ಹಾಗೂ ಮುಸ್ಲಿಂ ಮುಖಂಡರು ಪ್ರಾರ್ಥನೆಯಲ್ಲಿ ಭಾಗಿಯಾಗಲಿದ್ದಾರೆ. ಮೈದಾನದ ಈದ್ಗಾ ಗೋಡೆ ಮುಂಭಾಗ ಪ್ರಾರ್ಥನೆಗಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ವೇದಿಕೆ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]