Tag: Eidgah Maidan

  • ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್

    ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Hubballi Eidgah Maidan) ಗಣೇಶ ಪ್ರತಿಷ್ಠಾಪನೆಗೆ ಕಳೆದ ಬಾರಿ ಸುಪ್ರೀಂ ಕೋರ್ಟ್ ನಮಗೆ ಅವಕಾಶ ನೀಡಿದೆ. ಈ ಬಾರಿಯೂ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ನಿರ್ಧಾರ ಮಾಡಿದ್ದು, ಕಾಂಗ್ರೆಸ್ (Congress) ಸರ್ಕಾರ ವಿನಾಕಾರಣ ಅಲ್ಪ ಸಂಖ್ಯಾತರ ತುಷ್ಟೀಕರಣಕ್ಕಾಗಿ ಪರ್ಮಿಶನ್ ಕೊಡ್ತಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ (Arvind Bellad) ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿಯನ್ನು ಅಲ್ಲಿ ಮಾಡಿದ್ದಾರೆ. ನಮಾಜ್ ಕೂಡಾ ಮಾಡಿದ್ದಾರೆ. ನಾವು ಪ್ರತಿಷ್ಠಾಪನೆಗೆ ಮನವಿ ಕೇಳಿದರೆ ಅವಕಾಶ ಕೊಡುತ್ತಿಲ್ಲ. ಅನುಮತಿ ಕೋರಿ ನಾವು ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ. ಅನುಮತಿ ಕೊಡಲಿ ಬಿಡಲಿ. ನಾವು ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ ಎಂದರು.

    ಯಾರೂ ಅನುಮತಿ ಕೊಡಬೇಡಿ ಅಂತಾರೆ ಅವರು ದೇಶ ವಿರೋಧಿ ಸಂಘಟನೆಗಳು. ಒಂದು ತಿಂಗಳ ಹಿಂದೆ ಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಏನೂ ಬಂದಿಲ್ಲ. ಇದು ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ. ಗಣಪತಿ ಪ್ರಿಯರ ಪರವಾಗಿ ನಾನು ಮಾತಾಡ್ತಿದ್ದೇನೆ. ಜನರ ಭಾವನೆ ನಾನು ಸರ್ಕಾರಕ್ಕೆ ಮುಟ್ಟಿಸುತ್ತೇನೆ. ಪಾಲಿಕೆ ಕಮಿಷನರ್ ಸರ್ಕಾರಕ್ಕೆ ಕೇಳೋ ಅವಶ್ಯಕತೆ ಇಲ್ಲ. ಗಣೇಶ ಹಬ್ಬ ಮಾಡಿದರೆ ಅಲ್ಪ ಸಂಖ್ಯಾತರು ಸಿಟ್ಟಾಗುತ್ತಾರೆ ಎಂದು ಕಾಂಗ್ರೆಸ್ ತಿಳಿದುಕೊಂಡಿದೆ. ಹೀಗಾಗಿ ಅನುಮತಿ ತಡ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ರೈಲು ಪ್ರಯಾಣದ ವೇಳೆ 8 ಯುವಕರಿಗೆ ಮತ್ತು ಬರೋ ಚಾಕ್ಲೇಟ್ ನೀಡಿ ದರೋಡೆ

    ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟೀಕರಣ ಬೇಕು. ಕಳೆದ ಒಂದು ತಿಂಗಳಿಂದ ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಅಧಿಕೃತವಾಗಿ ಪಾಲಿಕೆ ಲಿಖಿತವಾಗಿ ಅನುಮತಿ ಕೊಟ್ಟಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣ ಅಧಿಕಾರಿಗಳು ಅವರ ಕೈಗೊಂಬೆ ಆಗಿದ್ದಾರೆ. ದೇಶ ವಿರೋಧಿ ಸಂಘಟನೆಗಳಿಗೆ ಕಾಂಗ್ರೆಸ್ ಸರ್ಕಾರ ಬಂದರೆ ಕಾಂಗ್ರೆಸ್ ಕೊಂಬು ಚಿಗುರು ಬರುತ್ತದೆ ಎಂದರು.

    ಎಸ್‌ಡಿಪಿಐ, ಎಐಎಂಐಎಂ ಸಂಘಟನೆಗಳು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಡಿ ಎಂದು ಮನವಿ ಕೊಟ್ಟಿವೆ. ಅವೆರಡು ದೇಶ ವಿರೋಧಿ ಸಂಘಟನೆಗಳು ಎಂದು ಬೆಲ್ಲದ್ ಹೇಳಿದರು. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    ಬೆಂಗಳೂರು: ಪವಿತ್ರ ಬಕ್ರೀದ್ ಹಬ್ಬ (Bakrid Festival) ಆಚರಣೆ ಹಿನ್ನೆಲೆಯಲ್ಲಿ ನಗರದ ಈದ್ಗಾ ಮೈದಾನದಲ್ಲಿ (EidgahMaidan) ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರೂ ಭಾಗಿಯಾಗಿದ್ದರು.

    ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಮುಸ್ಲಿಂ ಧರ್ಮಗುರುಗಳು ತಮ್ಮ ಸಂಪ್ರದಾಯದಂತೆ ಟೋಪಿ ಹಾಕಿ ಬರಮಾಡಿಕೊಂಡರು. ಇದೇ ವೇಳೆ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಪುಸ್ತಕ ನೀಡಿ ಸ್ವಾಗತಿಸಿದರು. ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಅಲ್ಲಾ ಕೃಪೆಗೆ ಪಾತ್ರರಾದರು.

    ನಂತರ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಸಿಎಂ, ಇಂದು ಪ್ರಾರ್ಥನೆ ಮಾಡಿ ಮನುಕುಲಕ್ಕೆ ಒಳಿತಾಗಲೆಂದು ಕೇಳಿಕೊಂಡಿದ್ದೀರಿ. ಈ ಹಬ್ಬದ ದಿನ ಮುಸ್ಲಿಂ ಬಾಂಧವರೆಲ್ಲ ಸೇರಿದ್ದೀರಿ, ನಾನೂ ನಿಮ್ಮೊಂದಿಗೆ ಭಾಗಿಯಾಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಪತಿ ಅವಾಂತರ

    ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು. ನಮ್ಮಲ್ಲೇ ಕೆಲ ಶಕ್ತಿಗಳಿವೆ, ಇದಕ್ಕೆ ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿವೆ. ಅವುಗಳಿಗೆ ಸೊಪ್ಪು ಹಾಕಬಾರದು. ಎಲ್ಲಾ ಪ್ರೀತಿಯಿಂದ ಇದ್ದರೆ, ರಾಜ್ಯವೂ ಅಭಿವೃದ್ಧಿಯಾಗುತ್ತೆ. ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು ಎಂದು ಸಲಹೆ ನೀಡಿದರು.

    ವಾಹನ ಸಂಚಾರದಲ್ಲಿ ಬದಲಾವಣೆ:
    ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜನೆಗೊಂಡಿದ್ದರಿಂದಾಗಿ ಮೈದಾನದ ಸುತ್ತಮುತ್ತ ಇರುವ ಮಾರ್ಗಗಳಲ್ಲಿ  ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

    ನಗರದ ಬಸವೇಶ್ವರ ವೃತ್ತದಿಂದ ಸಿ.ಐ.ಡಿ ಜಂಕ್ಷನ್‌ವರೆಗಿನ ರಸ್ತೆ ನಿರ್ಬಂಧಿಸಿದ್ದು, ದೇವರಾಜ ಅರಸು ರಸ್ತೆಯಲ್ಲಿ ಸಂಚಾರ ಕಲ್ಪಿಸಲಾಗಿದೆ. ಲಾಲ್‌ಬಾಗ್ ಮುಖ್ಯದ್ವಾರದಿಂದ ಕಣ್ಣಪ್ಪ ಪೆಟ್ರೋಲ್ ಬಂಕ್‌ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ, ಹೊಸೂರು ರಸ್ತೆಯಲ್ಲಿ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.

    ಟೋಲ್‌ಗೇಟ್ ಜಂಕ್ಷನ್‌ನಿಂದ ಸಿರ್ಸಿ ವೃತ್ತದವರೆಗೆ ರಸ್ತೆ ಸಂಚಾರ ಬಂದ್ ಮಾಡಿದ್ದು, ಸಿರ್ಸಿ ವೃತ್ತದಲ್ಲಿ ಬಲಕ್ಕೆ ತಿರುವು ಪಡೆದು ಬಿನ್ನಿಮಿಲ್ ಟ್ಯಾಂಕ್‌ಬಂಡ್ ರಸ್ತೆಮಾರ್ಗವಾಗಿ ಮಾಗಡಿ ರಸ್ತೆ ವಿಜಯನಗರದ ಮೂಲಕ ಮೈಸೂರು ರಸ್ತೆಗೆ ಸಂಪರ್ಕಿಸಲು ಅನುವು ಮಾಡಿಕೊಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಕ್ರೀದ್‌ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ – ಸಿಎಂ ಭಾಗಿ ಸಾಧ್ಯತೆ

    ಬಕ್ರೀದ್‌ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ – ಸಿಎಂ ಭಾಗಿ ಸಾಧ್ಯತೆ

    ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್‌ ಹಬ್ಬ (Bakrid Festival) ಆಚರಣೆ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Chamrajpete Eidgah Maidan) ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಸಾಮೂಹಿಕ ಪ್ರಾರ್ಥನೆ ಆರಂಭವಾಗಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಳ್ಳಲಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಮೈದಾನದ ಸುತ್ತ ಬಿಗಿ ಪೊಲೀಸ್‌ (Police) ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ‘ಲವ್’ ಅಂಗಳದಿಂದ ಬಂತು ಹೊಸದೊಂದು ಪ್ರೇಮಗೀತೆ

    ಬಿಗಿ ಬಂದೋಬಸ್ತ್‌ಗಾಗಿ 300ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಮೈದಾನದ ಸುತ್ತ CCTV ಕ್ಯಾಮೆರಾ ಅಳವಡಿಸಲಾಗಿದೆ. ಬೆಳಗ್ಗೆ 9:30 ಗಂಟೆ ವೇಳೆಗೆ ಪ್ರಾರ್ಥನೆಯಲ್ಲಿ ಸಿಎಂ ಭಾಗಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ತರಕಾರಿ ಖಾಲಿ ಆಗಿದ್ರೆ ಸೇವ್ ಬಳಸಿ ಮಾಡಿ ಸ್ಪೈಸಿ ಪಲ್ಯ

    ಮುಸ್ಲಿಂ ಧರ್ಮಗುರುಗಳು ಸೇರಿದಂತೆ ಸ್ಥಳೀಯ ಶಾಸಕ, ಸಚಿವ ಜಮೀರ್ ಅಹಮ್ಮದ್ ಖಾನ್‌ (Zameer Ahmed Khan) ಹಾಗೂ ಮುಸ್ಲಿಂ ಮುಖಂಡರು ಪ್ರಾರ್ಥನೆಯಲ್ಲಿ ಭಾಗಿಯಾಗಲಿದ್ದಾರೆ. ಮೈದಾನದ ಈದ್ಗಾ ಗೋಡೆ ಮುಂಭಾಗ ಪ್ರಾರ್ಥನೆಗಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ವೇದಿಕೆ ಸುತ್ತಲೂ ಬ್ಯಾರಿಕೇಡ್ ಹಾಕಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈಲು ಸೇರಿರುವ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಖಂಡರ ಮುಂದೆ ಮುಸ್ಲಿಂ ಮಹಿಳೆಯರ ಕಣ್ಣೀರು

    ಜೈಲು ಸೇರಿರುವ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಖಂಡರ ಮುಂದೆ ಮುಸ್ಲಿಂ ಮಹಿಳೆಯರ ಕಣ್ಣೀರು

    ಹುಬ್ಬಳ್ಳಿ: ರಂಜಾನ್ (Ramadan Festival) ಪ್ರಾರ್ಥನೆ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲಿ (Eidgah Maidan), ಹಳೇ ಹುಬ್ಬಳ್ಳಿ (Hubballi) ಗಲಭೆಯಲ್ಲಿ ಜೈಲು ಸೇರಿರುವ ತಮ್ಮ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಸ್ಲಿಂ ಮುಖಂಡರ (Muslim Leaders) ಮುಂದೆ ಮಹಿಳೆಯರು ಕಣ್ಣೀರು ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನೀವೆಲ್ಲರೂ ಸಂತೋಷದಿಂದ ರಂಜಾನ್ ಮಾಡುತ್ತಿದ್ದೀರಿ. ನಮ್ಮ ಕುಟುಂಬಗಳು ಕಷ್ಟದಲ್ಲಿವೆ ಎಂದು ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ಮುಸ್ಲಿಂ ಮುಖಂಡರು ನಮ್ಮ ಮಕ್ಕಳಿಗೆ ಜಾಮೀನು ಕೊಡಿಸುವಲ್ಲಿ, ಕಾನೂನು ಹೋರಾಟದಲ್ಲಿ ವಿಫಲರಾಗಿದ್ದಾರೆಂದು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಹಿಳೆಯರ ಆಕ್ರೋಶ ಕಂಡ ಮುಸ್ಲಿಂ ಮುಖಂಡರು ಈದ್ಗಾ ಮೈದಾನದಿಂದ ಕಾಲ್ಕಿತ್ತಿದ್ದಾರೆ.

    ಹಳೇ ಹುಬ್ಬಳ್ಳಿ ಗಲಭೆಯಲ್ಲಿ 149 ಮುಸ್ಲಿಂ ಯುವಕರು ಕಳೆದ ಒಂದು ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದಾರೆ. 149 ಮಂದಿ ಯುವಕರು ಬಳ್ಳಾರಿ, ಕಲಬುರ್ಗಿ ಹಾಗೂ ಮೈಸೂರು ಜೈಲುಗಳಲ್ಲಿ ಇದ್ದಾರೆ. ಇದನ್ನೂ ಓದಿ: ಬಿಜೆಪಿ, ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಮಾರಾಮಾರಿ – ಹಲ್ಲೆಯಿಂದ ತಪ್ಪಿಸಿಕೊಳ್ಳ

    ಏಪ್ರಿಲ್ 16 ರಂದು ತಡರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಕೋಮುಗಲಭೆಯಲ್ಲಿ ಈ ಯುವಕರನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ಪಾಂಡ್ಯ ಪರಾಕ್ರಮದ ಮುಂದೆ ಮಂಡಿಯೂರಿದ ರಾಹುಲ್‌ ಪಡೆ – ಗುಜರಾತ್‌ಗೆ 7 ರನ್‌ಗಳ ರೋಚಕ ಜಯ

  • ಈದ್ಗಾ ಮೈದಾನದ ಸುತ್ತ 1,600 ಪೊಲೀಸರಿಂದ ಬಿಗಿ ಭದ್ರತೆ

    ಈದ್ಗಾ ಮೈದಾನದ ಸುತ್ತ 1,600 ಪೊಲೀಸರಿಂದ ಬಿಗಿ ಭದ್ರತೆ

    ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಅವಕಾಶ ನಿರಾಕರಿಸಿದ ಬೆನ್ನಲ್ಲೇ ಮೈದಾನದ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೂ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ.

    ಸಂಘಟನೆಗಳ ಮುಖಂಡರು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಂಗಳವಾರ ಬೆಳಿಗ್ಗೆ ಸಿದ್ಧತೆಯಲ್ಲಿ ತೊಡಗಿದ್ದರು. ಪೆಂಡಾಲ್ ಸಹ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದರು. ಸಂಜೆ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಪೆಂಡಾಲ್ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿದ್ದಾರೆ. ಇದನ್ನೂ ಓದಿ: 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

    ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಬೆಂಗಳೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳಿಂದ ಈದ್ಗಾ ಬಂದೋಬಸ್ತ್ಗೆ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 1,600 ಪೊಲೀಸರು ಹಗಲು, ಗ್ರೌಂಡ್‌ಬಳಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಗಣೇಶೋತ್ಸವಕ್ಕೆ ಅವಕಾಶ ಕೊಡಲಿ ಬಿಡಲಿ, ಶಾಂತಿ ಭಂಗಕ್ಕೆ ಅವಕಾಶವಿಲ್ಲ ಅನ್ನೋ ಸಂದೇಶ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ- ತಂದೆಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ 7ರ ಬಾಲಕ

    ಹೇಗಿದೆ ಬಂದೋಬಸ್ತ್?
    ಮೈದಾನದ ಸುತ್ತ 3 ಡಿಸಿಪಿ, 21 ಎಸಿಪಿ, 47 ಪಿಐ, 130 ಪಿಎಸ್‌ಐ, 126 ಎಎಸ್‌ಐ, 900 ಹೆಚ್‌ಇ ಪಿಸಿ, 120 ಆರ್‌ಎಎಫ್, 100 ಸ್ವಾಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮಂಗಳವಾರ ಪಥಸಂಚಲನ ನಡೆಸಿ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಸ್ವಾತಂತ್ರ್ಯ ಬಂದ ಮೇಲೂ ಗಣೇಶೋತ್ಸವಕ್ಕೆ ಪರದಾಡುತ್ತಿದ್ದೇವೆ: ಮುತಾಲಿಕ್‌

    ಧಾರವಾಡ: ಬ್ರಿಟಿಷರು ಇದ್ದಾಗಲೇ ಗಣೇಶೋತ್ಸವಕ್ಕೆ ಅಡ್ಡಿ ಇರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಗಣೇಶೋತ್ಸವ ಆಚರಣೆಗೆ ಪರದಾಡುವಂತಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಬೇಸರ ವ್ಯಕ್ತಪಡಿಸಿದ್ದಾರೆ

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸುಪ್ರೀಂ ಕೋರ್ಟ್‌ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಲೇಬೇಕು. ಆದರೆ ಸಮಸ್ಯೆ ಹಾಗೆಯೇ ಉಳಿಯಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಥಾಸ್ಥಿತಿ ಕಾಪಾಡಿ – ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ

    ಸುಪ್ರೀಂ ಕೋರ್ಟ್‌ನಲ್ಲಿ ದಾರಿ ತಪ್ಪಿಸುವ ವಾದಗಳು ನಡೆದಿವೆ. ವಕ್ಫ್ ಬೋರ್ಡ್ ಪಾರ್ಟಿಯಾಗೇ ಇರಲಿಲ್ಲ. ಅದರೆ ಏಕಾಏಕಿ ವಕ್ಫ್ ಬೋರ್ಡ್ ಪ್ರವೇಶವಾಗಿದೆ. ವಕ್ಫ್ ಬೋರ್ಡ್ ಅಧ್ಯಕ್ಷ 3 ದಿನಗಳಿಂದ ದೆಹಲಿಗೆ ಹೋಗಿ ಕೂತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಗಣೇಶನ ವಿರೋಧಿಗಳ ರೀತಿ ವರ್ತಿಸಬಾರದು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇರಾಕ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ – ಗುಂಡಿನ ದಾಳಿಗೆ 23 ಮಂದಿ ಸಾವು, 300 ಜನರಿಗೆ ಗಾಯ

    ಕಾಂಗ್ರೆಸ್ ಹಾಗೂ ವಕ್ಫ್ ಬೋರ್ಡಿನಿಂದ ಗಣೇಶೋತ್ಸವಕ್ಕೆ ಅಡ್ಡಿಯಾಗುತ್ತಿದೆ. ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಹೋಗಿ ಅಂತ ಹೇಳಿರುವುದರಿಂದ ಸರ್ಕಾರವೇ ಹೈಕೋರ್ಟ್‌ ಮೂಲಕ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

    ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

    ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.

    ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್‌ ಈರೇಶ ಅವರು, ನಗರಪಾಲಿಕೆ ಸಮಿತಿಯ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡೇ ಮಾಡ್ತೀವಿ – ಗುಂಡು ಹಾರಿಸ್ತೀರಾ ಹಾರಿಸಿ: ಮುತಾಲಿಕ್

     

    ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ. ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂಧನ ಸೋರಿಕೆ – ಆರ್ಟೆಮಿಸ್-1 ರಾಕೆಟ್ ಲಾಂಚಿಂಗ್ ಸ್ಥಗಿತ

    ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ. ಆದರೆ ಮೂರು ದಿನ ಗಣೇಶೋತ್ಸವ ಆಚರಣೆ ಮಾತ್ರ ಇರುತ್ತದೆ. ಮುಂದಿನ ವರ್ಷ ಪರಿಸ್ಥಿತಿ ನೋಡಿಕೊಂಡು ದಿನಗಳನ್ನು ಹೆಚ್ಚಿಗೆ ಮಾಡಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಒತ್ತಡ –ಜಮೀರ್ ಬಾಯಿ ಮುಚ್ಚಿಸಿದ ನಾಯಕರು

    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಒತ್ತಡ –ಜಮೀರ್ ಬಾಯಿ ಮುಚ್ಚಿಸಿದ ನಾಯಕರು

    ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣಕ್ಕೆನೋ ಮುಹೂರ್ತ ನಿಗದಿ ಆಗಿದೆ. ಧ್ವಜಾರೋಹಣ ಇರಲಿ ಗಣೇಶೋತ್ಸವವೇ ಆಗಲಿ ವಿವಾದ ಮಾಡದಂತೆ ಶಾಸಕ ಜಮೀರ್‌ಗೆ ಪಕ್ಷದಿಂದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

    ವಿವಾದ ಮಾಡಿಕೊಂಡರೆ ಪಕ್ಷ ಮುಲಾಜಿಲ್ಲದೇ ಅಂತರ ಕಾಯ್ದುಕೊಳ್ಳುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎನ್ನಲಾಗುತ್ತಿದೆ. ಈದ್ಗಾ ಮೈದಾನ ಅಲ್ಲ ಕಂದಾಯ ಇಲಾಖೆಗೆ ಸೇರಿದ್ದು ಎಂದ ಮೇಲೆ ಸೈಲೆಂಟ್ ಆಗಿರಲು ಸೂಚನೆ ನೀಡಲಾಗಿದೆ. ಧರ್ಮ ರಾಜಕಾರಣದ ಸುಳಿಯನ್ನು ಬಿಡಿಸಿ ಹೇಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಜಮೀರ್‌ಗೆ ಯಾವುದೇ ವಿವಾದ ಮಾಡಿಕೊಳ್ಳದಂತೆ ಕಿವಿ ಮಾತು ಹೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

    ಈದ್ಗಾ ಮೈದಾನದಲ್ಲಿ ಸರ್ಕಾರದಿಂದ ಧ್ವಜಾರೋಹಣ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ. ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಇಂದು ಪೊಲೀಸ್ ಪಥಸಂಚಲನ ನಡೆಯಲಿದೆ. ಈ ಮಧ್ಯೆ ಆರ್‌ಎಸ್‍ಎಸ್ ವತಿಯಿಂದ ಈದ್ಗಾದಲ್ಲಿ ರಕ್ಷಾ ಬಂಧನ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ತಿರಂಗಾ, ಗಣೇಶ ಹಬ್ಬ ನಡುವೆ ಆರ್‌ಎಸ್‍ಎಸ್ ರಕ್ಷಾಬಂಧನ ಉತ್ಸವ ಆಯೋಜನೆಗೆ ಹೊಸ ಸಂಘರ್ಷಕ್ಕೆ ಎಡೆ ಮಾಡಿಕೊಡಲಿದ್ಯಾ ಎಂಬ ಕುತೂಹಲ ಹೆಚ್ಚಾಗಿದೆ. ಸಂಘದ ಈ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿಲ್ಲ. ಇದನ್ನೂ ಓದಿ: ʻಜೈಭೀಮ್‌ʼಗೆ ಬಿಗ್‌ ರಿಲೀಫ್‌ – ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ದಾಖಲಾದ ವಿರುದ್ಧ FIR ರದ್ದು

    ಈಗಾಗಲೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಎಂದು ತೀರ್ಮಾನ ಆಗಿದೆ. ಆದರೆ ಗಣೇಶೋತ್ಸವ ಆಚರಣೆ ಕೂಗು ಮಾತ್ರ ನಿಂತಿಲ್ಲ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕು ಅಂತಾ ಜಿಲ್ಲಾಡಳಿತಕ್ಕೆ ಕೆಲ ಸಂಘಟನೆಗಳು ಮನವಿ ಮಾಡಿವೆ. ಅತಿ ಸೂಕ್ಷ್ಮ ವಿಚಾರ ಆಗಿರುವುದರಿಂದ ಸ್ವಾತಂತ್ರ್ಯ ದಿನಾಚರಣೆ ನಂತರ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಈ ನಡುವೆ ಇಂದು ಬೆಳಗ್ಗೆ 11ಕ್ಕೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಸಭೆಯಲ್ಲಿ ಬೆಂಗಳೂರು ಸಚಿವರಿಂದ ಅಭಿಪ್ರಾಯ ವ್ಯಕ್ತವಾಗುವ ಸಾಧ್ಯತೆ ಇದೆ. ಧ್ವಜಾರೋಹಣ ತೀರ್ಮಾನಕ್ಕಿಂತ ಗಣೇಶೋತ್ಸವ ಆಚರಣೆ ಇನ್ನಷ್ಟು ಸೂಕ್ಷ್ಮ ಆಗಿರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ಕರಾವಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣ ಇನ್ನೂ ಮಾಸಿಲ್ಲ. ಹಾಗಾಗಿ ಕಾನೂನು ಸುವ್ಯವಸ್ಥಿತ ಕಾಪಾಡಬೇಕಾದ ಬಹು ದೊಡ್ಡ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದ್ದು, ಅನುಮತಿ ನೀಡಬೇಕಾ? ಬೇಡ್ವಾ? ಎಂಬ ಬಗ್ಗೆ ಪೊಲೀಸ್ ಕ್ಲಿಯರೆನ್ಸ್, ಗುಪ್ತ ದಳದ ಅಭಿಪ್ರಾಯ, ಕಾನೂನು ತಜ್ಞರ ಅಭಿಪ್ರಾಯದ ಬಳಿಕವಷ್ಟೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

    Live Tv
    [brid partner=56869869 player=32851 video=960834 autoplay=true]