Tag: ekka film

  • ಸೆಟ್ಟೇರಿತು ಸೂರಿ, ಯುವ ಸಿನಿಮಾ- ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

    ಸೆಟ್ಟೇರಿತು ಸೂರಿ, ಯುವ ಸಿನಿಮಾ- ದೊಡ್ಮನೆ ಕುಡಿಗೆ ದುನಿಯಾ ವಿಜಯ್‌ ಪುತ್ರಿ ನಾಯಕಿ

    ಕ್ಕ ಸಿನಿಮಾ (Ekka Film) ಬೆನ್ನಲ್ಲೇ ಹೊಸ ಸಿನಿಮಾವೊಂದನ್ನು ಯುವ ರಾಜ್‌ಕುಮಾರ್‌ (Yuva Rajkumar) ಒಪ್ಪಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸೂರಿ (Soori) ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರದಲ್ಲಿ ಯುವಗೆ ದುನಿಯಾ ವಿಜಯ್‌ ಪುತ್ರಿಗೆ ರಿತನ್ಯಾ (Rithnya Vijay Kumar) ನಾಯಕಿಯಾಗಿದ್ದಾರೆ. ಇದನ್ನೂ ಓದಿ:ಮದುವೆ ಬಳಿಕ ಮೊದಲ ಬಾರಿಗೆ ಪತಿಯೊಂದಿಗಿನ ಫೋಟೋ ಹಂಚಿಕೊಂಡ ಗಾಯಕಿ ಪೃಥ್ವಿ ಭಟ್

    ಬಹಳ ದಿನಗಳಿಂದ ಕೇಳಿ ಬರುತ್ತಿದ್ದ ಯುವರಾಜ್‌ಕುಮಾರ್‌ ಹಾಗೂ ನಿರ್ದೇಶಕ ಸೂರಿ ಸಿನಿಮಾಗೆ ಇಂದು (ಏ.30) ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಅಕ್ಷಯ ತೃತೀಯದಿನವಾದ ಇಂದು ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಸ್ಯಾಂಡಲ್‌ವುಡ್‌ ಸಲಗ ದುನಿಯಾ ವಿಜಯ್‌ಕುಮಾರ್‌ ಕ್ಲ್ಯಾಪ್‌ ಮಾಡಿದ್ದಾರೆ. ಅಪ್ಪು ಅವರ ಮಗಳು ಧೃತಿ ಕ್ಯಾಮೆರಾಗೆ ಚಾಲನೆ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯುವ ಫ್ಯಾಮಿಲಿ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಕಾರ್ತಿಕ್‌ ಗೌಡ, ಯೋಗಿ ಜಿ ರಾಜ್‌, ನಿರ್ದೇಶಕ ಸೂರಿ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಸಿನಿಮಾದಲ್ಲಿ ಪೃಥ್ವಿ ಅಂಬರ್- ‌’ಕೊತ್ತಲವಾಡಿ’ ಚಿತ್ರದ ಪೋಸ್ಟರ್‌ ಔಟ್

    ದುನಿಯಾ, ಕೆಂಡಸಂಪಿಗೆ, ಬ್ಯಾಡ್‌ ಮ್ಯಾನರ್ಸ್‌, ಟಗರು ಸಿನಿಮಾಗಳ ಮೂಲಕ ಸಕ್ಸಸ್‌ ಕಂಡಿರೋ ಸೂರಿ ಗರಡಿಯಲ್ಲಿ ಯುವ ಅವರು  ಯಾವ ರೀತಿ ಕಾಣಿಸಲಿದ್ದಾರೆ ಎಂಬ ಕುತೂಹಲ ಫ್ಯಾನ್ಸ್‌ಗೆ ಇದೆ. ದುನಿಯಾ ವಿಜಯ್‌ (Duniya Vijay) ಮೊದಲ ಪುತ್ರಿ ರಿತನ್ಯಾ ಈ ಚಿತ್ರದ ನಾಯಕಿಯಾಗಿದ್ದಾರೆ.  ಈಗಾಗಲೇ ಅಪ್ಪನ ಜೊತೆ ‘ಲ್ಯಾಂಡ್‌ ಲಾರ್ಡ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ರಿತನ್ಯಾಗೆ ಇದು ಎರಡನೇ ಸಿನಿಮಾವಾದರೆ, ಯುವ ರಾಜ್‌ಕುಮಾರ್‌ಗೆ ಇದು ಮೂರನೇ ಚಿತ್ರವಾಗಿದೆ.

    ಸೂರಿ ಗರಡಿಯಲ್ಲಿ ಖಾಯಂ ಆಗಿ ಕೆಲಸ ಮಾಡುವ ದೀಪು ಎಸ್‌ ಕುಮಾರ್‌ ಸಂಕಲನ, ಚರಣ್‌ ರಾಜ್‌ ಸಂಗೀತ ನಿರ್ದೇಶನ, ಸಂತೋಷ್‌ ಕಲಾ ನಿರ್ದೇಶನ, ಶೇಖರ್‌ ಕ್ಯಾಮೆರಾ ವರ್ಕ್‌ ಈ ಚಿತ್ರಕ್ಕೆ ಇರಲಿದೆ. ಮೇ ತಿಂಗಳಾತ್ಯಂತಕ್ಕೆ ಚಿತ್ರತಂಡ ಶೂಟಿಂಗ್‌ ಅಖಾಡಕ್ಕೆ ಇಳಿಯಲಿದೆ. ಪ್ರತಿಷ್ಠಿತ ಮೂರು ನಿರ್ಮಾಣ ಸಂಸ್ಥೆಯಡಿ ಬರುತ್ತಿರುವ ಸಿನಿಮಾ ಬಹಳ ದೊಡ್ಡಮಟ್ಟದಲ್ಲಿ ತಯಾರಗಲಿದೆ.

    ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ಪಿಆರ್‌ಕೆ, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ ಕೆಆರ್‌ಜಿ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ ‘ಎಕ್ಕ’ ಸಿನಿಮಾ ಅದ್ಧೂರಿಯಾಗಿ ತಯಾರಾಗುತ್ತಿದೆ. ಈ ಚಿತ್ರ ಬಿಡುಗಡೆಗೂ ಮುನ್ನವೇ ಈ ಪ್ರೊಡಕ್ಷನ್ಸ್‌ ನಡಿ ಹೊಸ ಸಿನಿಮಾ ಘೋಷಣೆಯಾಗಿದೆ.

  • ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ- ‘‌ಎಕ್ಕ’ ಚಿತ್ರದ ಟೀಸರ್‌ ಔಟ್

    ನ್ನಡ ಚಿತ್ರರಂಗದ ಭರವಸೆ ನಟ ಯುವ ರಾಜ್‌ಕುಮಾರ್‌ (Yuva Rajkumar) ಹುಟ್ಟುಹಬ್ಬದ ಅಂಗವಾಗಿ ನಿನ್ನೆ (ಏ.23) ಬಿಡುಗಡೆಯಾಗಬೇಕಿದ್ದ ಯುವ ಟೀಸರ್‌ ಇಂದು ಅನಾವರಣ ಮಾಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಗೌರವ ಸೂಚಿಸುವ ಸಲುವಾಗಿ ಚಿತ್ರತಂಡ ಟೀಸರ್‌ ಬಿಡುಗಡೆ ಮುಂದೂಡಿತ್ತು. ಇಂದು (ಏ.24) ಅಣ್ಣಾವ್ರ ಜನ್ಮದಿನದ ಜೊತೆಗೆ ಯುವ ಬರ್ತಡೇಗೆ ಸ್ಪೆಷಲ್‌ ಆಗಿಯೇ ಟೀಸರ್‌ ರಿಲೀಸ್‌ ಆಗಿದೆ. ಇದನ್ನೂ ಓದಿ:ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

    1 ನಿಮಿಷ 9 ಸೆಕೆಂಡ್‌ ಇರುವ ‘ಯುವ’ ಟೀಸರ್‌ ಸಖತ್‌ ಆಗಿ ಮೂಡಿ ಬಂದಿದೆ. ಹೊಸ ಅವತಾರದಲ್ಲಿ ಯುವ ರಾಜ್‌ಕುಮಾರ್‌ ಎಂಟ್ರಿ ಕೊಟ್ಟಿದ್ದಾರೆ. ಮಸ್ತ್‌ ಆಗಿ ಡೈಲಾಗ್‌ ಹೊಡೆಯುತ್ತಾ ಕೈಯಲ್ಲಿ ಪೊರಕೆ ಹಿಡಿದು ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದ್ ವಿಷ್ಯ ಇದು ಇಲ್ಲಿಗೆ ನಿಲ್ಲೋದಿಲ್ಲ ಅಂತ ಯುವ ಡೈಲಾಗ್‌ ಹೊಡೆದಿದ್ದಾರೆ. ಇದರಿಂದ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಿಸಿದೆ. ‘ಎಕ್ಕ’ (Ekka) ಚಿತ್ರದಲ್ಲಿ ಯುವ ನಟನೆ, ರೋಹಿತ್‌ ಪದಕಿ ನಿರ್ದೇಶನ, ಚರಣ್‌ ರಾಜ್‌ ಅವರ ಮ್ಯೂಸಿಕ್‌ ಕಿಕ್‌ ಈ ಚಿತ್ರದ ಟೀಸರ್‌ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಈಗಾಗಲೇ ‘ಯುವ’ ಸಿನಿಮಾದ ಟೈಟಲ್‌ ಟ್ರ್ಯಾಕ್‌ ಚಿಂದಿ ಉಡಾಯಿಸಿದ್ದು, ಈಗ ‘ಎಕ್ಕ’ ಟೀಸರ್‌ ಸರದಿ ಅಂತ ಫ್ಯಾನ್ಸ್‌ ಖುಷಿಪಡುತ್ತಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

    ರೋಹಿತ್ ಪದಕಿ ನಿರ್ದೇಶನದ ಈ ಚಿತ್ರದಲ್ಲಿ ಯುವರಾಜ್‌ಕುಮಾರ್ ನಾಯಕನಾಗಿ, ಸಂಪದಾ ಹಾಗೂ ಸಂಜನಾ ಆನಂದ್ (Sanjana Anand) ನಾಯಕಿಯರಾಗಿ ಅಭಿನಯಿಸಿದ್ದಾರೆ. ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍. ಕುಮಾರ್ ಸಂಕಲನ ಒದಗಿಸಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾವ್ ಅವರ ಕೆಆರ್‌ಜಿ ಸಂಸ್ಥೆ, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಶೂಟಿಂಗ್‌ ಭರದಿಂದ ಸಾಗುತ್ತಿದ್ದು, ಜೂನ್ 6ರಂದು ‘ಎಕ್ಕ’ ಸಿನಿಮಾ ರಿಲೀಸ್‌ ಆಗಲಿದೆ.

  • ‘ಎಕ್ಕ’ ಸಿನಿಮಾದ ಫಸ್ಟ್‌ ಸಾಂಗ್‌ ಔಟ್- ಯುವ ರಾಜ್‌ಕುಮಾರ್ ಜಬರ್ದಸ್ತ್ ಪರ್ಫಾಮೆನ್ಸ್

    ‘ಎಕ್ಕ’ ಸಿನಿಮಾದ ಫಸ್ಟ್‌ ಸಾಂಗ್‌ ಔಟ್- ಯುವ ರಾಜ್‌ಕುಮಾರ್ ಜಬರ್ದಸ್ತ್ ಪರ್ಫಾಮೆನ್ಸ್

    ‘ಯುವ’ ಬಳಿಕ ಯುವರಾಜ್ ಕುಮಾರ್ ‘ಎಕ್ಕ’ (Ekka Film) ಅವತಾರವೆತ್ತಿರುವುದು ಗೊತ್ತೇ ಇದೆ. ಶೂಟಿಂಗ್ ಹಂತದಲ್ಲಿಯೇ ಭಾರೀ ಹೈಪ್ ಕ್ರಿಯೇಟ್ ಮಾಡಿರುವ ‘ಎಕ್ಕ’ ಸಿನಿಮಾದ ಮೊದಲ ಹಾಡು ಇಂದು (ಮಾ.17) ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಬಿಡುಗಡೆ ಮಾಡಲಾಗಿದೆ. ‘ಎಕ್ಕ’ ಟೈಟಲ್ ಸಾಂಗ್ ಅನಾವರಣಗೊಂಡಿದೆ.

    ‘ಎಕ್ಕಾ ಮಾರ್ ಮಾರ್’ ಅಂತಾ ಯುವ ರಾಜ್‌ಕುಮಾರ್ (Yuva Rajkumar) ಚಿಂದಿ ಪರ್ಫಾಮೆನ್ಸ್ ಕೊಟ್ಟಿದ್ದಾರೆ. ಬಾಬಾ ಭಾಸ್ಕರ್ ಕೊರಿಯೋಗ್ರಫಿಗೆ ಯುವ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ನಾಗಾರ್ಜುನ್ ಶರ್ಮಾ ಕ್ಯಾಚಿ ಮ್ಯಾಚಿ ಪದ‌ಪೊಣಿಸಿ ಸಾಹಿತ್ಯ ಬರೆದಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಿಕ್ ಜೊತೆ ಯುವ ಎನರ್ಜಿ ಬೊಂಬಾಟ್ ಆಗಿ ಮೂಡಿ ಬಂದಿದೆ. ಇದನ್ನೂ ಓದಿ:‘ಸಿಕಂದರ್’ ಸಲ್ಮಾನ್ ಜೊತೆ ರಶ್ಮಿಕಾ ಡ್ಯಾನ್ಸ್- ಟೀಸರ್ ಔಟ್

    ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ ಒಟ್ಟಾಗಿ ‘ಎಕ್ಕ’ ಚಿತ್ರ ನಿರ್ಮಾಣ ಮಾಡುತ್ತಿವೆ. ಬಹಳ ಅದ್ಧೂರಿಯಾಗಿಯೇ ಈ  ಚಿತ್ರ ಜೂನ್ 6ಕ್ಕೆ ಪ್ರೇಕ್ಷಕರ ಮುಂದೆ ಬರಲಿದೆ. ರೋಹಿತ್ ಪದಕಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಎಕ್ಕ’ ಸಿನಿಮಾದಲ್ಲಿ ಅತುಲ್ ಕುಲಕರ್ಣಿ, ಡೆಡ್ಲಿ ಆದಿತ್ಯಾ ಸೇರಿದಂತೆ ದೊಡ್ಡ ತಾರಗಣ ಚಿತ್ರದಲ್ಲಿ. ಸಂಜನಾ ಆನಂದ್, ಸಂಪದಾ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ರೋಹಿತ್‍ ಪದಕಿ, ವಿಕ್ರಂ ಹತ್ವಾರ್ ಜೊತೆಗೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇನ್ನು, ನಿರ್ದೇಶನವೂ ಅವರದ್ದೇ. ಚರಣ್ ರಾಜ್ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ದೀಪು ಎಸ್‍ ಕುಮಾರ್ ಸಂಕಲನ ‘ಎಕ್ಕ’ ಸಿನಿಮಾಗಿದೆ. ಈ ಸಿನಿಮಾ ಮೂಲಕ ಭೂಗತ ಜಗತ್ತಿನ ಕಥೆಯನ್ನು ಬಿಚ್ಚಿಡುತ್ತಿದ್ದಾರೆ.

  • ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

    ಸೆಟ್ಟೇರಿತು ಯುವ ರಾಜ್‌ಕುಮಾರ್‌ 2ನೇ ಚಿತ್ರ- ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಚಿತ್ರತಂಡ

    ಪಿ.ಆರ್.ಕೆ ಪ್ರೊಡಕ್ಷನ್ಸ್‌, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್‌ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್‌ ಕುಮಾರ್‌ ಅವರ ಬಹುನಿರೀಕ್ಷಿತ ‘ಎಕ್ಕ’ ಸಿನಿಮಾಗೆ (Ekka Film) ಇಂದು (ನ.28) ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

    ವಿಜಯ್‌ ಕಿರಗಂದೂರ್‌ ಅವರ ಪತ್ನಿ ಶ್ರೀಮತಿ ಶೈಲಜಾ ವಿಜಯ್‌ ಕ್ಲಾಪ್‌ ಮಾಡುವ ಮೂಲಕ ‘ಎಕ್ಕ’ ಚಿತ್ರಕ್ಕೆ ನಾಂದಿ ಹಾಡಲಾಯಿತು, ಮೊದಲ ಶಾಟ್‌ ಅನ್ನು ಡಾಲಿ ಧನಂಜಯ್‌ ನಿರ್ದೇಶಿಸಿದ್ದು, ನಿರ್ಮಾಪಕ ಕಾರ್ತಿಕ್ ಗೌಡ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮೀ ರಾಮಕೃಷ್ಣ ಕ್ಯಾಮೆರಾ ಬಟನ್‌ ಆನ್‌ ಮಾಡುವ ಮೂಲಕ ಚಾಲನೆ ನೀಡಿದರು.

    ಕಾಶ್ಮೀರ, ಬೆಂಗಳೂರು, ಮೈಸೂರು, ದೆಹಲಿ, ಕೋಲ್ಕತ್ತಾ, ಮುಂಬೈ ಸೇರಿದಂತೆ ಹಲವಾರು ಸ್ಥಳಗಳಲ್ಲಿ ‘ಎಕ್ಕ’ ಚಿತ್ರದ ಚಿತ್ರೀಕರಣ ನಡೆಯುವುದಾಗಿ ತಂಡ ಇಂದು ತಿಳಿಸಿದೆ. ಈ ಚಿತ್ರದ ನಿರ್ದೇಶಕ ರೋಹಿತ್‌ ಪದಕಿ ಮಾತನಾಡಿ, ‘ಎಕ್ಕ’ ಒಂದು ಮೆಗಾ ಚಿತ್ರವಾಗಿದ್ದು, ಇದರ ಜವಾಬ್ದಾರಿ ಹೊತ್ತಿರುವ ಹೆಮ್ಮೆ ನನಗಿದೆ. ಚಿತ್ರದ ಎಲ್ಲ ನಿರ್ಮಾಪಕರು, ಕನ್ನಡ ಜನರು, ಯುವ ರಾಜ್‌ ಕುಮಾರ್‌ ಮತ್ತು ಅವರ ಅಭಿಮಾನಿಗಳ ಎಲ್ಲರ ನಂಬಿಕೆಯನ್ನು ಈ ಚಿತ್ರ ಉಳಿಸಲಿದೆ, ಜನರ ಮೇಲೆ ಆಳವಾದ ಭಾವನಾತ್ಮಕ ಪ್ರಭಾವ ಬೀರಲಿದೆ ಎಂದು ತಿಳಿಸಿದರು.

    ನಟ ಯುವ ರಾಜ್‌ ಕುಮಾರ್‌ (Yuva Rajkumar) ಮಾತನಾಡಿ, ತಾಯಿ ಆಶಿರ್ವಾದದೊಂದಿಗೆ, ಅಪ್ಪು ಚಿಕ್ಕಪ್ಪನ ಆಶಿರ್ವಾದದೊಂದಿಗೆ ಇವತ್ತು ‘ಎಕ್ಕ’ ಚಿತ್ರವನ್ನು ಆರಂಭಿಸಿದ್ದೇವೆ. ಮೂರು ಹೆಸರಾಂತ ನಿರ್ಮಾಣ ಸಂಸ್ಥೆಗಳೊಡನೆ, ರೋಹಿತ್ ಪದಕಿ ಅಂತಹ ದೊಡ್ಡ ನಿರ್ದೇಶಕರೊಡನೆ ಕೆಲಸ ಮಾಡುತ್ತಿರುವುದು ನನಗೆ ತುಂಬಾ ಖುಷಿ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಚಿತ್ರದ ನಾಯಕಿ ಸಂಪದಾ ಮಾತನಾಡಿ, ‘ಎಕ್ಕ’ ಚಿತ್ರದ ಆರಂಭ ಬಹಳ ಮಂಗಳಕರವಾಗಿ ನೆರವೇರಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಚಿತ್ರೀಕರಣವನ್ನು ನಾನು ಕಾತುರವಾಗಿ ಎದುರು ನೋಡುತ್ತಿದೇನೆ ಎಂದು ತಿಳಿಸಿದರು. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

     

    View this post on Instagram

     

    A post shared by Yuva Rajkumar (@yuva_rajkumar)

    ರೋಹಿತ್‌ ಪದಕಿ ನಿರ್ದೇಶನದ ‘ಎಕ್ಕ’ ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ ಎಕ್ಕ ಸಿನಿಮಾ. ‘ಎಕ್ಕ’ ಚಿತ್ರದಲ್ಲಿ ಯುವ ರಾಜ್‌ ಕುಮಾರ್‌, ಸಂಪದಾ, ಅತ್ತುಲ್‌ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್‌ ದೇವ್‌ ಶೆಟ್ಟಿ ಮುಂತಾದವರು ನಟಿಸಲಿದ್ದು, ಚಿತ್ರಿಕಥೆಯನ್ನು ರೋಹಿತ್‌ ಪದಕಿ ಮತ್ತು ವಿಕ್ರಮ್‌ ಹತ್ವಾರ್‌ ರಚಿಸಿರುತ್ತಾರೆ. ಚಿತ್ರಕ್ಕೆ ಸಂಗೀತವನ್ನು ಚರಣ್‌ ರಾಜ್‌ ಸಂಯೋಜಿಸಲಿದ್ದು, ಹಾಡುಗಳಿಗೆ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್‌, ನಾಗಾರ್ಜುನ ಶರ್ಮ, ಡಾಲಿ ಧನಂಜಯ, ರೋಹಿತ್‌ ಪದಕಿ ರಚಿಸಲಿದ್ದಾರೆ.

    ಸತ್ಯ ಹೆಗಡೆ ಮುಖ್ಯ ಛಾಯಾಗ್ರಾಹಕರಾಗಿದ್ದು, ದೀಪು ಎಸ್‌ ಕುಮಾರ್‌ ಸಂಕಲನಕಾರರಾಗಲಿದ್ದಾರೆ. ವಿಶ್ವಾಸ್‌ ಕಶ್ಯಪ್‌ ಪ್ರೊಡಕ್ಷನ್‌ ವಿನ್ಯಾಸವನ್ನು ಮಾಡಲಿದ್ದಾರೆ. ಚಿತ್ರದ ಫೈಟ್ಸ್‌ಗಳನ್ನು ಅರ್ಜುನ್‌ ರಾಜ್‌ ಮತ್ತು ಚೇತನ್‌ ಡಿಸೌಜಾ಼ ನಿರ್ದೇಶಿಸಲಿದ್ದಾರೆ. ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಪಿ.ಆರ್.ಕೆ ಪ್ರೊಡಕ್ಷನ್ಸ್‌ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್‌ ಲಾಂಛನದಡಿಯಲ್ಲಿ‌ ಹಾಗು ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ ರಾಜ್‌ ಕೆ.ಆರ್.ಜಿ.ಸ್ಟುಡಿಯೋಸ್‌ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ‘ಎಕ್ಕ’ ಚಿತ್ರವು ಜೂನ್ 6 , 2025 ರಂದು ತೆರೆ ಕಾಣುವುದಾಗಿ ಚಿತ್ರತಂಡ ತಿಳಿಸಿದೆ. ಈ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಹೊಸ‌ ಮೈಲಿಗಲ್ಲನ್ನು ಸಾಧಿಸಲಿದೆ ಎಂಬ ಆಶ್ವಾಸನೆಯನ್ನು ಚಿತ್ರ ತಂಡ ನೀಡಿದೆ.

  • ಯುವ ರಾಜ್‌ಕುಮಾರ್ ನಟನೆಯ ‘ಎಕ್ಕ’ ಸಿನಿಮಾದಲ್ಲಿ ಅತುಲ್ ಕುಲಕರ್ಣಿ

    ಯುವ ರಾಜ್‌ಕುಮಾರ್ ನಟನೆಯ ‘ಎಕ್ಕ’ ಸಿನಿಮಾದಲ್ಲಿ ಅತುಲ್ ಕುಲಕರ್ಣಿ

    ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ (Yuva Rajkumar) ನಟನೆಯ ‘ಎಕ್ಕ’ (Ekka) ಸಿನಿಮಾಗೆ ಬಹುಭಾಷಾ ನಟ ಅತುಲ್ ಕುಲಕರ್ಣಿ (Atul Kulkarni) ಎಂಟ್ರಿ ಕೊಟ್ಟಿದ್ದಾರೆ. ಅತುಲ್ ಕುಲಕರ್ಣಿ ಕೂಡ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:‘ಪುಷ್ಪ 3’ ಬಗ್ಗೆ ರಶ್ಮಿಕಾ ಮಂದಣ್ಣ ಹಿಂಟ್- 5 ವರ್ಷಗಳ ಜರ್ನಿ ನೆನೆದು ನಟಿ ಎಮೋಷನಲ್

    ಯುವ ನಟನೆಯ ‌’ಎಕ್ಕ’ ಸಿನಿಮಾದ ಶೂಟಿಂಗ್ ನ.28ರಿಂದ ಪ್ರಾರಂಭವಾಗಲಿದೆ. ಈ ಸಿನಿಮಾದಲ್ಲಿ ಅತುಲ್ ಕುಲಕರ್ಣಿ ಕೂಡ ಭಾಗವಾಗಲಿದ್ದಾರೆ ಎನ್ನಲಾಗಿದೆ. ಈ ಚಿತ್ರವು ಬೆಂಗಳೂರಿನ ಕರಾಳ ಮತ್ತು ಭೂಗತ ಜಗತ್ತಿನ ಕಥೆಯನ್ನು ಒಳಗೊಂಡಿದೆ. ಈ ಅಪಾಯಕಾರಿ ಜಗತ್ತಿನಲ್ಲಿ ಸಿಕ್ಕಿಹಾಕಿಕೊಂಡಿರುವ ವ್ಯಕ್ತಿಯ ಕಥೆಯನ್ನು ವಿವರಿಸಲಿದೆ.

     

    View this post on Instagram

     

    A post shared by Yuva Rajkumar (@yuva_rajkumar)

    ಈ ಸಿನಿಮಾವನ್ನು ‘ಉತ್ತರಾಕಾಂಡ’ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಅಶ್ವಿನಿ ಪುನೀತ್‌ರಾಜ್‌ಕುಮಾರ್ ಜೊತೆ ಜಯಣ್ಣ ಫಿಲ್ಮ್ಸ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

  • ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್

    ಯುವ ರಾಜ್‌ಕುಮಾರ್ ನಟನೆಯ 2ನೇ ಸಿನಿಮಾಗೆ ಟೈಟಲ್ ಫಿಕ್ಸ್

    ದೊಡ್ಮನೆ ಕುಡಿ ಯುವ ರಾಜ್‌ಕುಮಾರ್ (Yuva Rajkumar) ನಟನೆಯ 2ನೇ ಸಿನಿಮಾದ ಟೈಟಲ್ ಅನ್ನು ಇಂದು (ನ.1) ಅನೌನ್ಸ್ ಮಾಡಿದ್ದಾರೆ. ಕ್ಯಾಚಿ ಟೈಟಲ್‌ನೊಂದಿಗೆ ಯುವ ರಗಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ:ಮೊದಲ ಮಗುವಿನ ನಿರೀಕ್ಷೆಯಲ್ಲಿ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ

    ಯುವ ನಟನೆಯ ಮುಂದಿನ ಸಿನಿಮಾ ಯಾವುದು ಎಂಬುದಕ್ಕೆ ಉತ್ತರ ಸಿಕ್ಕಿದೆ. ಆಯುಧವೊಂದನ್ನು ಹಿಡಿದು ರಕ್ತಸಿಕ್ತವಾಗಿ ಯುವ ಎಂಟ್ರಿ ಕೊಟ್ಟಿದ್ದಾರೆ. ಖಡಕ್ ಆಗಿ ಲುಕ್ ಕೊಟ್ಟಿದ್ದಾರೆ. ಈ ಸಿನಿಮಾಗೆ ‘ಎಕ್ಕ’ (Ekka) ಎಂದು ಟೈಟಲ್ ಫಿಕ್ಸ್ ಮಾಡಿದ್ದಾರೆ. ಈ ಪೋಸ್ಟರ್‌ ಶೇರ್‌ ಮಾಡಿ, ಪ್ರಪಂಚದ ಪಾಪದಲ್ಲಿ, ಎಲ್ಲರೂ ಪಾಲುದಾರರೂ ಎಂದು ಯುವ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ‘ಎಕ್ಕ’ ಚಿತ್ರವನ್ನು ಕೆಆರ್‌ಜಿ ಸಂಸ್ಥೆ ಮತ್ತು ಪಿಆರ್‌ಕೆ ಸಂಸ್ಥೆಯ ಅಡಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneethrajkumar), ಜಯಣ್ಣ & ಭೋಗೇಂದ್ರ ನಿರ್ಮಾಣ ಮಾಡಲಿದ್ದಾರೆ.

    ಇನ್ನೂ ಕಳೆದ ವರ್ಷ ‘ಯುವ’ ಸಿನಿಮಾದ ಮೂಲಕ ಯುವ ರಾಜ್‌ಕುಮಾರ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲೇ ಅವರು ಮೆಚ್ಚುಗೆ ಗಳಿಸಿದರು. ಈ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿಯಾದರು. ಈ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡಿತ್ತು.