Tag: Election 2018

  • ಲೋಕಸಭೆಗೆ ಸ್ಪರ್ಧಿಸಲು ಸಂಸದೆ ಶೋಭಾ ಕರಂದ್ಲಾಜೆ ನಿರಾಸಕ್ತಿ..!

    ಲೋಕಸಭೆಗೆ ಸ್ಪರ್ಧಿಸಲು ಸಂಸದೆ ಶೋಭಾ ಕರಂದ್ಲಾಜೆ ನಿರಾಸಕ್ತಿ..!

    ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಂಸದೆ ಶೋಭಾ ಕರಂದ್ಲಾಜೆ ನಿರಾಸಕ್ತಿ ತೋರಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಶೋಭಾ ಕರಂದ್ಲಾಜೆ ಅವರು ತಮ್ಮ ಆಪ್ತರ ಬಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿಕೊಂಡಿದ್ದಾರಂತೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

    ಒಂದು ವೇಳೆ 2019ರಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಚುನಾವಣೆ ನಡೆದರೆ ತಾವು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬಹುದು ಎಂಬುದನ್ನು ಶೋಭಾ ಕರಂದ್ಲಾಜೆ ಲೆಕ್ಕ ಹಾಕುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪಕ್ಷದ ಪ್ರಾಥಮಿಕ ಮಟ್ಟದಲ್ಲಿಯೇ ಚರ್ಚೆಗಳು ನಡೆಯುತ್ತಿವೆ. ಉಡುಪಿ -ಚಿಕ್ಕಮಗಳೂರು ಕ್ಷೇತ್ರ ಬಿಜೆಪಿಗೆ ಸೇಫ್ ಎನ್ನಲಾಗುತ್ತಿದ್ದು, ಮಾಜಿ ಸಿಎಂ ಸದಾನಂದಗೌಡ ಹಾಗೂ ಮಾಜಿ ಸಚಿವ ಜೀವರಾಜ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಜೀವರಾಜ್ ಹೆಸರು ಅಭ್ಯರ್ಥಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ.

    ಉಡುಪಿ-ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕರೇ ಹೆಚ್ಚಾಗಿದ್ದಾರೆ. ಶಾಸಕರಾದ ಸಿ.ಟಿ ರವಿ, ಸುರೇಶ್, ಕುಮಾರಸ್ವಾಮಿ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಲಾಲಾಜಿ ಮೆಂಡನ್, ರಘುಪತಿ ಭಟ್, ಸುನಿಲ್ ಕುಮಾರ್ ಎಲ್ಲ ಪ್ರಬಲ ನಾಯಕರು ಉಡುಪಿ-ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಬರುತ್ತಾರೆ. ಈ ಕ್ಷೇತ್ರದಿಂದ ಬಿಜೆಪಿಯ ಯಾವುದೇ ನಾಯಕ ಸ್ಪರ್ಧೆ ಮಾಡಿದ್ರೂ ಪ್ರಚಂಡ ಗೆಲುವು ಪಡೆಯಬಹುದು ಎಂಬುದು ಸದಾನಂದ ಗೌಡರ ಲೆಕ್ಕಾಚಾರವಾಗಿದೆ.

    ಜೀವರಾಜ್ ಅವರಿಗೆ ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬೆಂಬಲ ಸೂಚಿಸಿದ್ದಾರಂತೆ. ಈ ಬಾರಿ ಸದಾನಂದ ಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ಸ್ಪರ್ಧಿಸಲಿ ಎಂಬುದು ಯಡಿಯೂರಪ್ಪ ಅವರ ಲೆಕ್ಕಾಚಾರವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಸದಾನಂದಗೌಡ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

    ಇತ್ತ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಸಹ ಕ್ಷೇತ್ರ ಬದಲಾವಣೆಗೆ ಚಿಂತಿಸುತ್ತಿದ್ದು, ಮಂಡ್ಯದಿಂದ ಬೆಂಗಳೂರು ಉತ್ತರ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಒಂದು ವೇಳೆ ರಮ್ಯಾ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ರೆ, ಎದುರಾಳಿಯಾಗಿ ಬಿಜೆಪಿ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ಕಣಕ್ಕಿಳಿಸುವುದರ ಬಗ್ಗೆ ಚಿಂತನೆಯೂ ನಡೆಸುತ್ತಿದೆ. ತಮ್ಮ ಸ್ವಕ್ಷೇತ್ರ ಬಿಟ್ಟು ಬಂದ್ರೆ, ಖಾಲಿಯಾಗುವ ಕ್ಷೇತ್ರದ ಟಿಕೆಟ್‍ಗಾಗಿ ಡಿ.ವಿ.ಸದಾನಂದಗೌಡ ಮತ್ತು ಜೀವರಾಜ್ ನಡುವೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗುತ್ತಿದೆ.

  • ದೋಸ್ತಿ ಸರ್ಕಾರದಲ್ಲಿ ಮುಸುಕಿನ ಗುದ್ದಾಟ-ಇತ್ತ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿದ ಬಿಜೆಪಿ

    ದೋಸ್ತಿ ಸರ್ಕಾರದಲ್ಲಿ ಮುಸುಕಿನ ಗುದ್ದಾಟ-ಇತ್ತ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸಿದ ಬಿಜೆಪಿ

    ಬೆಂಗಳೂರು: ಒಂದು ಕಡೆ ದೋಸ್ತಿ ಸರ್ಕಾರದಲ್ಲಿ ಮುಸುಕಿನ ಗುದ್ದಾಟ ಮುಂದುವರಿದಿದ್ರೆ, ಮತ್ತೊಂದ್ಕಡೆ ಬಿಜೆಪಿ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇವತ್ತು ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ.

    ಗಾಯತ್ರಿ ವಿಹಾರನಲ್ಲಿ ಮಧ್ಯಾಹ್ನ 12 ಗಂಟೆಗೆ ರಾಜ್ಯ ಕಾರ್ಯಕಾರಿಣಿಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮೈತ್ರಿ ಸರ್ಕಾರ ರಚನೆಯನ್ನು ಖಂಡಿಸುವುದು ಕಾರ್ಯಕಾರಿಣಿಯ ಮೊದಲ ನಿರ್ಣಯವಾಗಿದ್ದು, ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸೋದು 2ನೇ ನಿರ್ಣಯವಾಗಿದೆ ಎಂದು ತಿಳಿದು ಬಂದಿದೆ.

    ಕೇಂದ್ರ ಸಚಿವರಾದ ಅನಂತಕುಮಾರ್, ಡಿವಿ ಸದಾನಂದ ಗೌಡ, ಜಿಗಜಿಣಗಿ, ಅನಂತಕುಮಾರ್ ಹೆಗಡೆ, ಮುರಳೀಧರ್ ರಾವ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಮೈತ್ರಿ ಸರ್ಕಾರ ರಚನೆಯನ್ನ ಖಂಡಿಸಿ ಹೋರಾಟ, ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಜೊತೆಗೆ ರಾಜ್ಯ ಬಿಜೆಪಿ ವಿವಿಧ ಮೋರ್ಚಾಗಳ, ವಿವಿಧ ಕಾರ್ಯಕ್ರಮಗಳ ವರದಿ ಕೂಡ ಸಲ್ಲಿಕೆಯಾಗಲಿದೆ.

  • ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣ – ಆರ್ ಆರ್ ನಗರ ಚುನಾವಣೆ ಮುಂದೂಡಿಕೆ

    ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣ – ಆರ್ ಆರ್ ನಗರ ಚುನಾವಣೆ ಮುಂದೂಡಿಕೆ

    ಬೆಂಗಳೂರು: ಮತದಾನಕ್ಕೆ ಕೆಲವೇ ಗಂಟೆಗಳು ಇರುವಾಗ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದೆ. ಒಂದೇ ಕಡೆ ರಾಶಿ ರಾಶಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ರಾಜರಾಜೇಶ್ವರಿ ನಗರ ವಿಧಾನಸಭೆ ಚುನಾವಣೆಯನ್ನು ಮುಂದೂಡಿದೆ.

    ನಾಳೆ ಬದಲು ಮೇ 28ಕ್ಕೆ ಆರ್ ಆರ್ ನಗರ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ. ಮೇ 31 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೃಹತ್ ಮತಚೀಟಿ ಹಗರಣ ಸ್ಫೋಟ – ರಾಜಕಾರಣದಲ್ಲಿ ಮಿಡ್‍ನೈಟ್ ಹೈಡ್ರಾಮ

    ಮೇ 8ರಂದು ಜಾಲಹಳ್ಳಿ ಬಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 9,800ಕ್ಕೂ ಹೆಚ್ಚು ವೋಟರ್ ಐಡಿಗಳು ಪತ್ತೆಯಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿತ್ತು. ಚುನಾವಣಾ ಆಯೋಗದ ಮೊರೆ ಕೂಡ ಹೋಗಿದ್ವು. ಕೇಂದ್ರ ಚುನಾವಣಾ ಆಯೋಗ, ಉಪ ಆಯುಕ್ತರನ್ನು ಬೆಂಗಳೂರಿಗೆ ಕಳುಹಿಸಿ ತನಿಖೆ ಮಾಡಿಸಿತ್ತು. ಇದನ್ನೂ ಓದಿ: ನನ್ನ ವಿರುದ್ಧ ಮುನಿರಾಜು, ಕೈ ಮಹಿಳಾ ಕಾರ್ಪೋರೇಟರ್ ಷಡ್ಯಂತ್ರ: ಮುನಿರತ್ನ

  • ಅಮಿತ್ ಶಾ ಸೂಚನೆಯಂತೆ ಬಿಜೆಪಿ ಚಾರ್ಜ್ ಶೀಟ್- 22 ಪುಟಗಳ ಆರೋಪ ಪಟ್ಟಿ ಬಿಡುಗಡೆ

    ಅಮಿತ್ ಶಾ ಸೂಚನೆಯಂತೆ ಬಿಜೆಪಿ ಚಾರ್ಜ್ ಶೀಟ್- 22 ಪುಟಗಳ ಆರೋಪ ಪಟ್ಟಿ ಬಿಡುಗಡೆ

    – ಸಿದ್ದರಾಮಯ್ಯ ಸರ್ಕಾರಕ್ಕೆ ಉರುಳಾಗುತ್ತಾ ಚಾರ್ಜ್ ಶೀಟ್?

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ರಾಜ್ಯ ಬಿಜೆಪಿ ಚಾರ್ಜ್ ಶೀಟ್ ತಯಾರಿಸಿದೆ. ಇವತ್ತು ಬಿಬಿಎಂಪಿ ಆಡಳಿತಕ್ಕೆ ಸಂಬಂಧಿಸಿದಂತೆ 22 ಪುಟಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದೆ.

    ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇವತ್ತು ಮಧ್ಯಾಹ್ನ 12.30ಕ್ಕೆ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದ್ದಾರೆ. ವ್ಯಕ್ತಿ ಆಧಾರಿತ ಚಾರ್ಜ್ ಶೀಟ್ ಕೈ ಬಿಟ್ಟು, ವಿಷಯಾಧಾರಿತ ಚಾರ್ಜ್ ಶೀಟ್ ತಯಾರಿಸಿದೆ ಎನ್ನಲಾಗಿದೆ.

    ಕಾಮಗಾರಿಗಳಲ್ಲಿನ ಅವ್ಯವಹಾರ, ಕಸದ ಸಮಸ್ಯೆ, ವೈಟ್ ಟ್ಯಾಪಿಂಗ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದ್ದಾರೆ ಅಂತಾ ಬಿಜೆಪಿ ಮೂಲಗಳು ತಿಳಿಸಿವೆ. ಇವತ್ತು ಬಿಡುಗಡೆಯಾಗುವ ಚಾರ್ಜ್ ಶೀಟ್ ಸಿದ್ದರಾಮಯ್ಯ ಸರ್ಕಾರಕ್ಕೆ ಚಾರ್ಜ್ ಆಗುವ ತರಹ ಇರುತ್ತಾ…? ಅನ್ನೋದನ್ನ ಕಾದುನೋಡಬೇಕಿದೆ.

  • ಜೆಡಿಎಸ್‍ನಲ್ಲಿ ಫಿಕ್ಸ್ ಆಯ್ತು ಟಿಕೆಟ್ ಮುಹೂರ್ತ-ಅಭ್ಯರ್ಥಿಗಳ ಎದೆಯಲ್ಲಿ ಶುರುವಾಯ್ತು ಢವ..! ಢವ..!

    ಜೆಡಿಎಸ್‍ನಲ್ಲಿ ಫಿಕ್ಸ್ ಆಯ್ತು ಟಿಕೆಟ್ ಮುಹೂರ್ತ-ಅಭ್ಯರ್ಥಿಗಳ ಎದೆಯಲ್ಲಿ ಶುರುವಾಯ್ತು ಢವ..! ಢವ..!

    ಬೆಂಗಳೂರು: ಜೆಡಿಎಸ್ ನಲ್ಲಿ ಟಿಕೆಟ್ ಮುಹೂರ್ತಕ್ಕೆ ದಿನಾಂಕ ನಿಗದಿಯಾಗಿದ್ದು, ಈಗಾಗಲೇ ಪಕ್ಷದ ರಾಷ್ಟ್ರಧ್ಯಕ್ಷರು ಪಟ್ಟಿಯನ್ನು ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

    ಫೆಬ್ರವರಿ 17ಕ್ಕೆ ಜೆಡಿಎಸ್ ವರಿಷ್ಠರು ಅಭ್ಯರ್ಥಿಗಳ ಪಟ್ಟಿಗೆ ಬಿಡುಗಡೆ ಮಾಡಲು ದಿನಾಂಕ ಫಿಗ್ಗ ಮಾಡಿದ್ದು, ದೊಡ್ಡಗೌಡರು ಕೂಡ ಹಸಿರುನಿಶಾನೆ ಕೊಟ್ಟಿದ್ದಾರೆ ಅಂತ ಎನ್ನಲಾಗಿದೆ. ಮೊದಲ ಪಟ್ಟಿಯಲ್ಲಿ 150 ಮಂದಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಎಲೆಕ್ಷನ್‍ಗೆ ನಾವು ರೆಡಿ, ನಮ್ಮ ಪಾರ್ಟಿಯೂ ರೆಡಿ ಅಂತ ಜೆಡಿಎಸ್ ಹೇಳಲು ಹೊರಟಿದೆ. ಎರಡನೇ ಪಟ್ಟಿಯನ್ನು ಯಾವಾಗ ಬಿಡುಗಡೆ ಮಾಡಲಾಗುತ್ತಿದೆ ಜೆಡಿಎಸ್ ಖಚಿತ ಪಡಿಸಿಲ್ಲ.

    ಮಧ್ಯ ಕರ್ನಾಟಕ ಅಂದ್ರೆ ದಾವಣಗೆರೆ ಅಥವಾ ಬೆಂಗಳೂರಿನಲ್ಲಿ ದೊಡ್ಡದಾದ ಸಮಾರಂಭ ಆಯೋಜಿಸಿ ಪಟ್ಟಿ ಬಿಡುಗಡೆ ಮಾಡಲು ಜೆಡಿಎಸ್ ಚಿಂತನೆ ನಡೆಸಿದೆ. ಮಾಜಿ ಪ್ರಧಾನಿ ದೇವೇಗೌಡರು ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿದೆ ದೊಡ್ಡ ಸಮಾರಂಭದಲ್ಲಿ ಮತದಾರರನ ಮುಂದೆ ಅಭ್ಯರ್ಥಿಗಳ ಪ್ರಮಾಣ ಮಾಡಿಸುವ ಕರ್ನಾಟಕ ರಾಜಕೀಯದಲ್ಲಿ ಹೊಸ ಪ್ರಯತ್ನದತ್ತ ಜೆಡಿಎಸ್ ಹೆಜ್ಜೆ ಹಾಕಲಿದೆ. ಭ್ರಷ್ಟಾಚಾರ ಮಾಡೋಲ್ಲ, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ ಎಂದು ಅಭ್ಯರ್ಥಿಗಳು ಸಮಾರಂಭದಲ್ಲಿ ಪ್ರಮಾಣ ಮಾಡಬೇಕಿದೆ.

  • ವಿಧಾನಸಭಾ ಚುನಾವಣೆ ವೇಳೆಯಲ್ಲೇ ಬಿಜೆಪಿಗೆ ಬಿಗ್ ಶಾಕ್

    ವಿಧಾನಸಭಾ ಚುನಾವಣೆ ವೇಳೆಯಲ್ಲೇ ಬಿಜೆಪಿಗೆ ಬಿಗ್ ಶಾಕ್

    ಬಳ್ಳಾರಿ: ಜಿಲ್ಲೆಯ ವಿಜಯನಗರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದಾಗಿ ಹೇಳಿದ್ದಾರೆ.

    ಇಂದು ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಪ್ರವಾಸಿ ಮಂದಿರದಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡರನ್ನ ಭೇಟಿ ಮಾಡಿದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಮೂಲಕ ಇದರಿಂದ ಹಲವು ದಿನಗಳಿಂದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಲ್ಲದೇ ಆನಂದ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾಗಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ರಾಜಕಾರಣದಲ್ಲಿ ಶುರುವಾಗುತ್ತಾ ಜೆಡಿಎಸ್ ಪರ್ವ?

    ರಾಜೀನಾಮೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ ಸಿಂಗ್ ಅವರು, ಪಕ್ಷದಲ್ಲಿನ ಆಂತರಿಕ ಗೊಂದಲಗಳಿಂದ ಬೇಸತ್ತು ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದಲ್ಲಿನ ಆಂತರಿಕ ಗೊಂದಲಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮತ್ತು ಜಿಲ್ಲೆಯ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೆ. ಆದರೆ ಯಾರೂ ಸಹ ನನ್ನನ್ನು ಕರೆದು ಮಾತನಾಡಲಿಲ್ಲ. ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಬೇಕು ಎಂದಿದ್ದರೆ ನಾಯಕರು ಕರೆದು ಮಾತನಾಡುತ್ತಿದ್ದರು. ಹೀಗಾಗಿ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ಕೆಲವು ದಿನಗಳಲ್ಲಿ ನನ್ನ ಮುಂದಿನ ನಿರ್ಧಾರ ಪ್ರಕಟಿಸಲಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೆ ವಿರೋಧ

    ಇದನ್ನೂ ಓದಿ: ತೆನೆ ಹೊರಲು ರೆಡಿಯಾದ ಬಿಜೆಪಿ ಮಾಜಿ ಸಚಿವ ಆನಂದ್ ಆಸ್ನೋಟಿಕರ್ -ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಜೆಡಿಎಸ್ ಪ್ರಾಬಲ್ಯ

    ಇದನ್ನೂ ಓದಿ: ಕಮಲಕ್ಕೆ ಆಪರೇಷನ್: ಜೆಡಿಎಸ್‍ಗೆ ಹಾರಲಿದ್ದಾರೆ 15 ಬಿಜೆಪಿ ಶಾಸಕರು!

    ಇದನ್ನೂ ಓದಿ: ಪಕ್ಷದ ವಿರೋಧದ ನಡುವೆಯೂ ಟಿಪ್ಪು ಜಯಂತಿಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಆನಂದ್ ಸಿಂಗ್ ಗೆ ಶೋಕಾಸ್ ನೋಟಿಸ್ ಜಾರಿ

  • ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ- ಬಾರ್ಡರ್ ಆ್ಯಕ್ಷನ್ ಫೋರ್ಸ್ ರಚಿಸಲು ರಾಹುಲ್ ನಿರ್ಧಾರ

    ವಿಧಾನಸಭಾ ಚುನಾವಣೆ ಗೆಲ್ಲಲು ಕಾಂಗ್ರೆಸ್ ತಂತ್ರ- ಬಾರ್ಡರ್ ಆ್ಯಕ್ಷನ್ ಫೋರ್ಸ್ ರಚಿಸಲು ರಾಹುಲ್ ನಿರ್ಧಾರ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಣತಂತ್ರಗಳನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಬಾರ್ಡರ್ ಆ್ಯಕ್ಷನ್ ಫೋರ್ಸ್ ರಚಿಸಲು ನಿರ್ಧರಿಸಿದ್ದು, ಈ ಟೀಮ್ ಹೈಕಮಾಂಡ್ ಅಣತಿಯಂತೆ ಕೆಲಸ ಮಾಡಲಿದೆ ಎನ್ನಲಾಗಿದೆ.

    ಆ್ಯಕ್ಷನ್ ಫೋರ್ಸ್ ಗೂ ರಾಜ್ಯದ ಕೆಪಿಸಿಸಿ ನಾಯಕರಿಗೂ ಯಾವುದೇ ಸಂಬಂಧವಿಲ್ಲ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಹೊಣೆಗಾರಿಕೆ ನೆರೆಯ ರಾಜ್ಯದ ಕಾಂಗ್ರೆಸ್ ನಾಯಕರ ಮೇಲಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಜೆಡಿಎಸ್ ಪರ ನಟ ಪವನ್ ಕಲ್ಯಾಣ್ ಪ್ರಚಾರ!

    ಏನಿದು ಬಾರ್ಡರ್ ಆ್ಯಕ್ಷನ್ ಫೋರ್ಸ್: ಬಾರ್ಡರ್ ಆ್ಯಕ್ಷನ್ ಫೋರ್ಸ್ ನಲ್ಲಿ ತಮಿಳುನಾಡು, ಕೇರಳ, ಗೋವಾ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಕಾಂಗ್ರೆಸ್ ನಾಯಕರು ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕೆಲಸ ಮಾಡಲಿದ್ದಾರೆ. ಈ ಟೀಮ್ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಯ 35 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲಸ ಮಾಡಲಿದೆ. ಈ ಟೀಮ್‍ನ ಮೇಲುಸ್ತುವಾರಿಯನ್ನು ರಾಹುಲ್ ಗಾಂಧಿ ಕಚೇರಿಯಿಂದಲೇ ನಿಯಂತ್ರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ನೆರೆಯ ರಾಜ್ಯದ ಕಾಂಗ್ರೆಸ್ ನಾಯಕರು ಕರ್ನಾಟಕದಲ್ಲಿಯ ತಮ್ಮ ಸ್ನೇಹಿತರು, ಬಿಸಿನೆಸ್ ಎನ್‍ಆರ್‍ಐ, ಪರಿಚಿತರನ್ನು ಮನವೊಲಿಸುವ ಕೆಲಸ ಮಾಡಲಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಜನರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಈ ಹೊಸ ರಣತಂತ್ರವನ್ನು ಮಾಡಲಿದೆ ಎಂದು ಹೇಳಲಾಗುತ್ತಿದೆ.