Tag: Election 2023

  • ವಾರೆ ವಾಹ್.. ಅತಿ ಬುದ್ವಂತ್ರು ವ್ಯಾಪಾರೀ ರಾಜಕೀಯದ ಬಗ್ಗೆ ಕಾಮೆಂಟ್ ಮಾಡಿ ನೋಡೋಣ – ನೆಟ್ಟಿಗರಿಗೆ ಉಪೇಂದ್ರ ಖಡಕ್ ಪ್ರಶ್ನೆ

    ವಾರೆ ವಾಹ್.. ಅತಿ ಬುದ್ವಂತ್ರು ವ್ಯಾಪಾರೀ ರಾಜಕೀಯದ ಬಗ್ಗೆ ಕಾಮೆಂಟ್ ಮಾಡಿ ನೋಡೋಣ – ನೆಟ್ಟಿಗರಿಗೆ ಉಪೇಂದ್ರ ಖಡಕ್ ಪ್ರಶ್ನೆ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Assembly Election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಶ್ನೆಯೊಂದನ್ನು ಎತ್ತಿದ್ದ ನಟ ಹಾಗೂ ಪ್ರಜಾಕಿಯಾ ಪಕ್ಷದ ಸ್ಥಾಪಕ ಉಪೇಂದ್ರ (Upendra), ತಮ್ಮ ವಿರುದ್ಧದ ಟೀಕೆಗಳಿಗೆ ಖಡಕ್ಕಾಗಿ ಉತ್ತರಕೊಟ್ಟಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಎಲೆಕ್ಷನ್ ಡೇಟ್ ಅನೌನ್ಸ್ ಬೆನ್ನಲ್ಲೇ ಪ್ರಶ್ನೆ ಎತ್ತಿದ ನಟ ಉಪೇಂದ್ರ

    ದಿನಾಂಕ ಘೋಷಣೆಯಾಗುತ್ತಿದ್ದಂತೆ ಟ್ವೀಟ್ ಮೂಲಕ ಪ್ರಶ್ನೆಯೊಂದನ್ನು ಎತ್ತಿದ್ದ ನಟ ಉಪೇಂದ್ರ, ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು ಮೇ 13, ಶನಿವಾರ ಫಲಿತಾಂಶ ಪ್ರಕಟ. ಮತ ಎಣಿಕೆಗೆ ಎರಡು ದಿನ ಬೇಕೆ?! ಏಕೆಂದು ಬಲ್ಲವರು ತಿಳಿಸುತ್ತೀರಾ? ಎಂದು ಪ್ರಶ್ನಿಸಿದ್ದರು. 

    ಈ ಪ್ರಶ್ನೆಗಳನ್ನು ಎತ್ತಿದ ಬಳಿಕ ನೆಟ್ಟಿಗರು ಉಪೇಂದ್ರ ಅವರನ್ನ ತರಾಟೆಗೆ ತೆಗೆದುಕೊಂಡಿದ್ದರು. ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ? ಹಳ್ಳಿ-ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ ಎಂದಿದ್ದರು. ಇನ್ನೂ ಕೆಲವರು ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ಬಳಿಕವೇ ರಿಲೀಸ್ ಮಾಡ್ತೀರಾ? ಎಂದು ಉಪ್ಪಿ ಅವ್ರನ್ನ ತರಾಟೆಗೆ ತೆಗೆದುಕೊಂಡಿದ್ದರು.

    ನೆಟ್ಟಿಗರ ಪ್ರಶ್ನೆಗೆ ಖಡಕ್ಕಾಗಿ ಉತ್ತರ ಕೊಟ್ಟಿರುವ ನಟ ಉಪೇಂದ್ರ, ಡಿಜಿಟಲ್ ವೋಟಿಂಗ್ (Digital Voting) ಅಲ್ವಾ? ಮತ ಎಣಿಕೆಗೆ 2 ದಿನಾ ಬೇಕಾ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೆ. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು?! ವಾರೆ ವಾಹ್ ವ್ಯಾಪಾರಿ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ? ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂ ಬಾಲಕರು’ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಚುನಾವಣಾ ಅಕ್ರಮ ತಡೆಗೆ 16 ಚೆಕ್ ಪೋಸ್ಟ್ ಸ್ಥಾಪನೆ- ಐವರು ರೌಡಿಶೀಟರ್‌ಗಳ ಗಡಿಪಾರು

    ಮುಂದುವರಿದು, ಇದು ತಂತ್ರಜ್ಞಾನ ಯುಗ. ಅನಕ್ಷರಸ್ಥ ರಸ್ತೆ ವ್ಯಾಪಾರಿಗಳೂ ಫೋನ್ ಮೂಲಕ ಡಿಜಿಟಲ್ ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ. ವ್ಯಾಪಾರಸ್ಥರು ಕೋಟ್ಯಂತರ ಹಣ ಸುರಕ್ಷಿತವಾಗಿ ಟ್ರಾನ್ಸ್ಫರ್ ಮಾಡುತ್ತಾರೆ. ಬಹು ಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ. ಪ್ರಧಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ ಹಣ ವರ್ಗಾಯಿಸುತ್ತಾರೆ. ಇಷ್ಟೆಲ್ಲಾ ಬದಲಾವಣೆ ಆದರೂ ಚುನಾವಣೆಯಲ್ಲಿ ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ? ಯೋಚಿಸಿ ಇದು ಪ್ರಶ್ನೆ ಅಷ್ಟೇ. ಟೀಕೆಯೂ ಅಲ್ಲ ಎಂದು ಬರೆದುಕೊಂಡಿದ್ದಾರೆ.

  • ಎಲೆಕ್ಷನ್ ಡೇಟ್ ಅನೌನ್ಸ್ ಬೆನ್ನಲ್ಲೇ ಪ್ರಶ್ನೆ ಎತ್ತಿದ ನಟ ಉಪೇಂದ್ರ

    ಎಲೆಕ್ಷನ್ ಡೇಟ್ ಅನೌನ್ಸ್ ಬೆನ್ನಲ್ಲೇ ಪ್ರಶ್ನೆ ಎತ್ತಿದ ನಟ ಉಪೇಂದ್ರ

    ವಿಧಾನಸಭಾ ಚುನಾವಣಾ(Election) ಡೇಟ್ ಅನೌನ್ಸ್ ಆಗಿದೆ.ಇದೇ ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಏಣಿಕೆ ನಡೆಯಲಿದೆ. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ (Actor Upendra) ಪ್ರಶ್ನೆಯೊಂದನ್ನ ಎತ್ತಿದ್ದು, ಸಂಚಲನ ಮೂಡಿಸಿದೆ.

    ಅಂತೂ ಕುತೂಹಲ ಕೆರಳಿಸಿದ ವಿಧಾನಸಭಾ ಚುನಾವಣೆ ದಿನಾಂಕದಲ್ಲಿ ಇದೀಗ ಸ್ಪಷ್ಟನೆ ಸಿಕ್ಕಿದೆ. ಮತದಾನ ಮಾಡಲು ಮುಹೂರ್ತ ಫಿಕ್ಸ್ ಆಗಿದೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಈ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಈ ಪ್ರಶ್ನೆ ಸಾರ್ವಜನಿಕರ ತಲೆಗೆ ಹುಳ ಬಿಟ್ಟಂತಾಗಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ ಬಲ್ಲವರು ತಿಳಿಸುತ್ತೀರಾ ಎಂದು ಟ್ವೀಟ್ ಮಾಡಿದ್ದಾರೆ. ಉಪೇಂದ್ರ ಅವರು ಹೀಗೆ ಯಾಕೆ ಕೇಳಿದ್ದಾರೆ ಅವರ ತಲೆಯಲ್ಲಿ ಹೇಗೆ ಬಂತು ಎಂದು ಸಾರ್ವಜನಕರಿಲ್ಲಿ ಪ್ರಶ್ನೆಗಳ ಜೊತಗೆ ಚರ್ಚೆಗಳು ಸಹ ಶುರುವಾಗಿವೆ.

    ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ? ಎಂದಿದ್ದಾರೆ. ಇನ್ನೂ ಕೆಲವರು ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ಬಳಿಕವೇ ರಿಲೀಸ್ ಮಾಡ್ತೀರಾ ಎಂದು ಉಪ್ಪಿಗೆ ಪ್ರಶ್ನೆ ಮಾಡಿದ್ದಾರೆ.

  • ಅಲೆಮಾರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ: ಈಶ್ವರಪ್ಪ

    ಅಲೆಮಾರಿ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆದುಕೊಳ್ಳಲಿ: ಈಶ್ವರಪ್ಪ

    ಶಿವಮೊಗ್ಗ: ಕ್ಷೇತ್ರಕ್ಕಾಗಿ ಅಲೆಮಾರಿಯಂತೆ ಹುಡುಕಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ರಾಜಕೀಯ ನಿವೃತ್ತಿ (Political Retirement) ಪಡೆದುಕೊಳ್ಳೋದು ಒಳ್ಳೆಯದು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಲೇವಡಿ ಮಾಡಿದ್ದಾರೆ.

    ಶಿವಮೊಗ್ಗದಲ್ಲಿಂದು (Shivamogga) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಚುನಾವಣೆಯಲ್ಲಿ (Election 2023) ಸ್ಪರ್ಧಿಸಲು ಕ್ಷೇತ್ರಕ್ಕಾಗಿ ಹುಡುಕಾಡುತ್ತಾ ಅಲೆಮಾರಿಯಾಗಿಬಿಟ್ಟಿದ್ದಾರೆ. ಎಲ್ಲಿಂದ ಸ್ಪರ್ಧೆ ಮಾಡ್ತೀಯಾ ಅನ್ನೋದಾದ್ರೂ ಹೇಳು ಎಲ್ಲರೂ ಕಾಯ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಹತೈಗೈದ

    ಸಿದ್ದರಾಮಯ್ಯಗೆ ಚುನಾವಣೆಯಲ್ಲಿ (Election) ಗೆಲ್ಲುತ್ತೀನಾ, ಇಲ್ವಾ ಅನ್ನೋ ಭಯದಿಂದ ಎರಡೆರಡು ಕಡೆ ಸಮೀಕ್ಷೆ ಮಾಡಿಸಿದ್ದಾರೆ. ಈ ಭಯ, ಗೊಂದಲ ಇದ್ರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ವಾಸ ಮಾಡುವ ಪ್ರತಿಯೊಬ್ಬರು ಹಿಂದೂಗಳೇ: ಮೋಹನ್ ಭಾಗವತ್

    ಇನ್ನೂ ಕಾಂಗ್ರೆಸ್ (Congress) ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿದೆ. ಈಗಾಗಿಯೇ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿದ್ದಾರೆ. ಏಕೆ ನಿಮಗೆ ಒಳ್ಳೆಯ ಅಭ್ಯರ್ಥಿ ಸಿಗುತ್ತಿಲ್ವಾ ಅಥವಾ ಹಣ ಸಂಗ್ರಹ ಮಾಡಿಕೊಳ್ಳೊ ಉದ್ದೇಶವಾ? ಕಾಂಗ್ರೆಸ್ ಟಿಕೇಟ್‌ಗೆ ಸಿದ್ದರಾಮಯ್ಯ ಅವರೇ ಅರ್ಜಿ ಹಾಕಿಲ್ಲ. ಕೆಪಿಸಿಸಿ (KPCC) ಅಧ್ಯಕ್ಷ ಡಿಕೆಶಿ (DK Shivakumar) ಅವರ ಆದೇಶವನ್ನು ಸಿದ್ದರಾಮಯ್ಯ ಅವರೇ ಪಾಲಿಸುತ್ತಿಲ್ಲ ಎಂದು ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]