Tag: election campaign

  • ಮಾವನ ಪರ ಪ್ರಚಾರಕ್ಕೆ ಧುಮುಕಿದ ಸಿದ್ದು ಸೊಸೆ

    ಮಾವನ ಪರ ಪ್ರಚಾರಕ್ಕೆ ಧುಮುಕಿದ ಸಿದ್ದು ಸೊಸೆ

    ಮೈಸೂರು: ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ (Varuna Constituency) ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

    ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ (Smita Rakesh Siddaramaiah) ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುಡಿಯಲು ಹಣ ಕೊಡದಿದ್ದಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ತಂದೆಯನ್ನೇ ಕೊಂದ ಪಾಪಿ ಮಗ

    ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ (Ramya) ಹಾಗೂ ನಟ ದುನಿಯಾ ವಿಜಯ್‌ (Duniya Vijay) ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚುನಾವಣೆಗೆ ಅಣಿಗೊಳಿಸಲು ಮೋದಿ ರಣತಂತ್ರ – 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಈ ಕುರಿತು `ಪಬ್ಲಿಕ್‌ ಟಿವಿ’ಯೊಂದಿಗೆ ಮಾತನಾಡಿದ್ದ ಶಾಸಕ ಯತೀಂದ್ರ ಸಿದ್ದರಾಮಯ್ಯ, ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ, ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡೋಕೆ ಆಗ್ತಿಲ್ಲ. ಹಾಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನ ಬಿಜೆಪಿ ಮಾಡ್ತಿದೆ. ಅದು ಯಶಸ್ವಿಯಾಗಲ್ಲ ಎಂದು ಹೇಳಿದ್ದರು.

  • ಸಿದ್ದರಾಮಯ್ಯ ಪರ ಪ್ರಚಾರಕ್ಕೆ ರಮ್ಯಾ, ದುನಿಯಾ ವಿಜಯ್‌ ಬರ್ತಾರೆ – ಯತೀಂದ್ರ

    ಸಿದ್ದರಾಮಯ್ಯ ಪರ ಪ್ರಚಾರಕ್ಕೆ ರಮ್ಯಾ, ದುನಿಯಾ ವಿಜಯ್‌ ಬರ್ತಾರೆ – ಯತೀಂದ್ರ

    – ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಬರೋದು ಡೌಟ್ ಎಂದ ಶಾಸಕ

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ನಟಿ ರಮ್ಯಾ (Actor Ramya) ಮತ್ತು ನಟ ದುನಿಯಾ ವಿಜಯ್‌ (Duniya Vijay) ಬರುತ್ತಾರೆ. ಆದ್ರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವ ಪ್ಲಾನ್ ಇಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿದ್ದಾರೆ.

    ಈ ಕುರಿತು ʻಪಬ್ಲಿಕ್‌ ಟಿವಿʼಯೊಂದಿಗೆ (Public TV) ಮಾತನಾಡಿರುವ ಯತೀಂದ್ರ ಅವರು, ಸಿದ್ದರಾಮಯ್ಯ (Siddaramaiah) ಅವರು ಮೇ 4 ರಿಂದ ಮೈಸೂರಿನಲ್ಲೇ (Mysuru) ಇದ್ದು ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ

    ಕಳೆದ 10 ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದೇವೆ. ವರುಣಾ ಕ್ಷೇತ್ರದ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಈಗಲೂ ಸಿದ್ದರಾಮಯ್ಯ ಅವರು ಕೊಟ್ಟಂತಹ ಕಾರ್ಯಕ್ರಮಗಳನ್ನ ನೆನೆಯುತ್ತಿದ್ದಾರೆ. ಬಿಜೆಪಿಯವರ ದುರಾಡಳಿತದಿಂದ ಜನ ಬೇಸತ್ತಿದ್ದು, ಕಾಂಗ್ರೆಸ್‌ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ಬಿಜೆಪಿಯವರಿಗೆ ನನ್ನ ತಂದೆ ಕೊಟ್ಟ ಆಡಳಿತದಲ್ಲಿ ತಪ್ಪು ಹುಡುಕಲಾಗುತ್ತಿಲ್ಲ, ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಮಾಡೋಕೆ ಆಗ್ತಿಲ್ಲ. ಹಾಗಾಗಿ ಜಾತಿ ವಿರೋಧಿ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಲಿಂಗಾಯತ ವಿರೋಧಿ ಪಟ್ಟ ಕಟ್ಟುವ ಪ್ರಯತ್ನವನ್ನ ಬಿಜೆಪಿ ಮಾಡ್ತಿದೆ. ಅದು ಯಶಸ್ವಿಯಾಗಲ್ಲ. ಬಿಜೆಪಿ ಐಟಿ ಸೆಲ್ ಒಂದು ರೀತಿ ಸುಳ್ಳಿನ ಫ್ಯಾಕ್ಟರಿ ಇದ್ದಂತೆ. ಲಿಂಗಾಯತ ಸಮಯದಾಯಗಳ ವೋಟ್‌ ಪಡೆಯುವುದಕ್ಕಾಗಿ ಬೇರೆ ದಾರಿಯಿಲ್ಲದೇ ಲಿಂಗಾಯತ ವಿರೋಧಿ ಹಣೆಪಟ್ಟಿ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

  • ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿ – ಇದು ಹೆಚ್‌ಡಿಕೆ ದಿನಚರಿ

    ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿ – ಇದು ಹೆಚ್‌ಡಿಕೆ ದಿನಚರಿ

    ಬೆಂಗಳೂರು: ಮುಂದಿನ ತಿಂಗಳು ವಿಧಾನಸಭಾ ಚುನಾವಣೆ (Assembly Election) ಇರುವುದರಿಂದ ರಾಜಕೀಯ ಪಕ್ಷಗಳು ಬಿರುಸಿನ ವೇಗದಲ್ಲಿ ಪ್ರಚಾರ ಕಾರ್ಯಾಚರಣೆ ನಡೆಸುತ್ತಿವೆ. ಇದೀಗ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಕೂಡಾ ಬಿಡುವಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

    ಸತತ 110 ದಿನಗಳಿಗೂ ಹೆಚ್ಚುಕಾಲ ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಪಂಚರತ್ನ ರಥಯಾತ್ರೆ ನಡೆಸಿದ ಹೆಚ್‌ಡಿ ಕುಮಾರಸ್ವಾಮಿ ಅವರು, ಈಗ ಏಕಾಂಗಿಯಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ನಿರಂತರ ಪಯಣ, ಸಮಯದ ಅಭಾವ ಅವರಿಗೆ ಎಷ್ಟರಮಟ್ಟಿಗೆ ಇದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿಯಾಗಿದೆ.

    ಗುರುವಾರ ರಾತ್ರಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಬೆಂಗಳೂರಿಗೆ ಹೊರಟ ಮಾಜಿ ಮುಖ್ಯಮಂತ್ರಿಗಳು, ಮಾರ್ಗಮಧ್ಯದಲ್ಲಿಯೇ ಕಾರಿನಲ್ಲಿ ಕುಳಿತು ಊಟ ಮಾಡಿದರು. ಬಳಿಕ ಅವರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇದನ್ನೂ ಓದಿ: ಬಂಡಾಯ ಶಮನಕ್ಕೆ ಡಿಕೆಶಿ ಗಿಮಿಕ್? – ಕೆಪಿಸಿಸಿ ಅಧ್ಯಕ್ಷ ಹಾಕಿದ್ದ ಪೋಸ್ಟ್‌ ಸುಳ್ಳೆಂದ ಟಿಕೆಟ್‌ ವಂಚಿತ

    ಹೀಗೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವುದರಿಂದ ಹೆಚ್‌ಡಿಕೆ ಬಿಡುವು ಮಾಡಿಕೊಳ್ಳದೇ ಪ್ರಯಾಣದ ನಡುವೆಯೇ ಪಕ್ಷದ ಕೆಲಸ, ಆಹಾರ ಸೇವನೆ, ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘನೆ – AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

  • ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

    ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನ ಬಳಸಿಕೊಂಡ್ರೆ ಕಠಿಣ ಶಿಕ್ಷೆ – ಖಡಕ್‌ ಸೂಚನೆ

    ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯ ಹಾಗೂ ಪ್ರಚಾರ (Election Campaign) ಕಾರ್ಯದಲ್ಲಿ ಮಕ್ಕಳ ಬಳಕೆಯನ್ನು ನಿಷೇಧಿಸಲಾಗಿದೆ.

    ರಾಜಕೀಯ ಪಕ್ಷಗಳ ಮೆರವಣೆಗೆ, ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ (Election Officer) ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ. ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಈಗಾಗಲೇ ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

  • ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ – ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಪತ್ರ ಬರೆದ ಎನ್‌ಸಿಪಿಸಿಆರ್

    ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ – ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಪತ್ರ ಬರೆದ ಎನ್‌ಸಿಪಿಸಿಆರ್

    ನವದೆಹಲಿ: ಆಮ್ ಆದ್ಮಿ ಪಕ್ಷ(ಎಎಪಿ)ದ ಅಭ್ಯರ್ಥಿ ದುರ್ಗೇಶ್ ಪಾಠಕ್, ದೆಹಲಿಯ ರಾಜಿಂದರ್ ಅವರ ನಗರ ವಿಧಾನಸಭಾ ಉಪಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡ ಬಗ್ಗೆ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್‌ಸಿಪಿಸಿಆರ್) ದೆಹಲಿ ಪೊಲೀಸರಿಗೆ ಪತ್ರ ಬರೆದಿದೆ.

    ಎಎಪಿ ನಾಯಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ, ಮಕ್ಕಳ ಹಕ್ಕುಗಳ ಸಂಸ್ಥೆ ಮುಖ್ಯ ಚುನಾವಣಾ ಆಯುಕ್ತರಿಗೂ ಪತ್ರ ಬರೆದಿದೆ. ಎರಡೂ ಪತ್ರಗಳನ್ನು, ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ನೀಡಿರುವುದಾಗಿ ಎನ್‌ಸಿಪಿಸಿಆರ್ ತಿಳಿಸಿದೆ. ಇದನ್ನೂ ಓದಿ: ಯೋಗದಿಂದ ವಿಶ್ವಕ್ಕೆ ಶಾಂತಿ – ಮೈಸೂರಿನಲ್ಲಿ 15 ಸಾವಿರ ಮಂದಿಯೊಂದಿಗೆ ಮೋದಿ ಯೋಗ

    ಅಪ್ರಾಪ್ತ ಮಕ್ಕಳು ಹಾಗೂ ಕೂಲಿ ಕಾರ್ಮಿಕರಿಗೆ ಸಣ್ಣ ಮೊತ್ತದ ಹಣ ನೀಡಿ, ಅವರನ್ನು ಕರಪತ್ರಗಳನ್ನು ಹಂಚಲು, ಪೋಸ್ಟರ್‌ಗಳನ್ನು ಹಚ್ಚಲು, ಬ್ಯಾನರ್‌ಗಳನ್ನು ನೇತು ಹಾಕಲು ಹಾಗೂ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಬಳಸಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಒದಗಿಸಿರುವುದಾಗಿಯೂ ಎನ್‌ಸಿಪಿಸಿಆರ್ ಪತ್ರದಲ್ಲಿ ತಿಳಿಸಿದೆ. ಇದನ್ನೂ ಓದಿ: ಪ್ರಧಾನಿಯೊಂದಿಗೆ ಭಾಗವಹಿಸಿದ್ದು ಸಂತಸ ತರಿಸಿದೆ: ಯದುವೀರ್

    ಎಎಪಿ ಪಕ್ಷ ಹಾಗೂ ಅದರ ಅಭ್ಯರ್ಥಿ ದುರ್ಗೇಶ್ ಪಾಠಕ್, ಮಕ್ಕಳಿಗೆ ದಿನಕ್ಕೆ 100 ರೂ. ಯ ಆಮಿಷ ನೀಡಿ ರಾಜಿಂದರ್ ನಗರ ಕ್ಷೇತ್ರದಲ್ಲಿ ಕರಪತ್ರಗಳನ್ನು ಹಂಚಲು ಅಲೆದಾಡಿಸುತ್ತಿದ್ದಾರೆ. ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದೆ.

    Live Tv

  • ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.

    HDD

    ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: ಹೆಬ್ಬೆಟ್‌ ಗಿರಾಕಿ ಮೋದಿ ಎಂದ ಕೆಪಿಸಿಸಿ ಐಟಿ ಸೆಲ್‌ ವಿರುದ್ಧ ಡಿಕೆಶಿ ಗರಂ

    HDD

    ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ – ರಸಗೊಬ್ಬರ ಸಬ್ಸಿಡಿ ಭಾರೀ ಏರಿಕೆ

  • ಚುನಾವಣೆಯ ಅಬ್ಬರ ಪ್ರಚಾರ- ಕೊರೊನಾ ನಿಯಮ ಉಲ್ಲಂಘಿಸಿದ ಭಗವಂತ ಖೂಬಾ

    ಚುನಾವಣೆಯ ಅಬ್ಬರ ಪ್ರಚಾರ- ಕೊರೊನಾ ನಿಯಮ ಉಲ್ಲಂಘಿಸಿದ ಭಗವಂತ ಖೂಬಾ

    ಬೀದರ್: ನಗರಸಭೆಯ ಎರಡು ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಕೊರೊನಾ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ.

    ಕೋರ್ಟ್ ತಡೆಯಾಜ್ಞೆ ತೆರವಾದ ಹಿನ್ನಲೆಯಲ್ಲಿ ಬೀದರ್ ನಗರದ 26 ಹಾಗೂ 32ನೇ ನಗರಸಭೆಯ ಎರಡು ವಾರ್ಡ್‌ಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯುತ್ತಿದೆ. ಸ್ಥಳೀಯ ಚುನಾವಣೆಯ ಅಬ್ಬರ ಪ್ರಚಾರದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದನ್ನೂ ಓದಿ:  ಭಾವಿ ಪತಿ ಜೊತೆಗೆ ತವರೂರಲ್ಲಿ ಶುಭಾ

    ಇಂದು ಬಿಜೆಪಿ ಅಭ್ಯರ್ಥಿ ಸುಮಿತ್ರಾ ದಳವೆ ಪರ ಮಯತಯಾಚನೆ ಬಂದ ವೇಳೆ ಭಗವಂತ ಖೂಬಾ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ವಿಕೇಂಡ್ ಕರ್ಪ್ಯೂ ಜಾರಿಯಲ್ಲಿದ್ದರು ಗುಂಪು ಸೇರಿಸಿಕೊಂಡು ಮಾಸ್ಕ್ ಹಾಕದೆ ಹಾಗೂ ಸಾಮಾಜಿಕ ಅಂತರ ಕಾಪಾಡದೆ 32ನೇ ವಾರ್ಡ್‌ ನಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದು, ಎಲ್ಲರೂ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಕೊರೊನಾ ಮೂರನೇ ಅಲೆಗೆ ಆಹ್ವಾನ ನೀಡುತ್ತಿದ್ದಾರೆ.

  • ಕೊರೊನಾ ನಿಯಮ ಉಲ್ಲಂಘಿಸಿ ಶ್ರೀರಾಮುಲು ಚುನಾವಣಾ ಪ್ರಚಾರ

    ಕೊರೊನಾ ನಿಯಮ ಉಲ್ಲಂಘಿಸಿ ಶ್ರೀರಾಮುಲು ಚುನಾವಣಾ ಪ್ರಚಾರ

    ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಆದರೆ ಇದೆಲ್ಲವನ್ನು ಮರೆತಿರುವಂತೆ ಕಾಣುತ್ತಿರುವ ಸಚಿವರಾದ ಶ್ರೀರಾಮುಲು, ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿರುವ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

    ಕೊರೊನಾ ಎರಡನೇ ಅಲೆ ದೇಶದಾದ್ಯಂತ ಜೋರಾಗಿರುವುದರಿಂದಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ನಿಯಮದ ಪ್ರಕಾರ ಕೇವಲ ಐದೇ ಜನ ಸೇರಿಸಿ ಚುನಾವಣಾ ಪ್ರಚಾರ ಮಾಡುವಂತೆ ಸರ್ಕಾರ ಖಡಕ್ ಆದೇಶ ಕೊಟ್ಟಿದೆ. ಆದರೆ ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ರಾಮುಲು, ಬಳ್ಳಾರಿ ಪಾಲಿಕೆ ಚುನಾವಣೆ ಹಿನ್ನಲೆ ವಿವಿಧ ವಾರ್ಡ್‍ಗಳಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರಚಾರದಲ್ಲಿ ನೂರಾರು ಜನರನ್ನು ಸೇರಿಸಿಕೊಂಡು ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ.


    ಮೊನ್ನೆಯಷ್ಟೇ ಜನ ಸಂದಣಿಯಲ್ಲಿ ರಾಮುಲು ಪ್ರಚಾರ ಮಾಡಿದ್ದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಮತ್ತೆ ಇವತ್ತು ಬಳ್ಳಾರಿಯ 16 ನೇ ವಾರ್ಡಿನಲ್ಲಿ ರಾಮುಲು ನೂರಾರು ಜನರನ್ನು ಸೇರಿಸಿಕೊಂಡು ಪ್ರಚಾರ ಮಾಡಿದ್ದಾರೆ. ನಿತ್ಯ ಬಳ್ಳಾರಿಯಲ್ಲಿ ಕರೊನಾ ಸ್ಫೋಟ ಅದ್ರೂ ಕೂಡ ಕೇರ್ ಮಾಡದೆ ರಾಮುಲು ಪ್ರಚಾರದಲ್ಲಿ ತೋಡಗಿಕೊಂಡಿರುವುದನ್ನು ಕಂಡ ಸಾರ್ವಜನಿಕರು ಸರ್ಕಾರ ಮಾಡಿದ ರೂಲ್ಸ್ ಗಳಿಗೆ ಸಚಿವರಿಂದಲೇ ಬೆಲೆ ಇಲ್ವ ಎಂದು ಪ್ರಶ್ನಿಸುವಂತಾಗಿದೆ.

  • ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಪ್ರಧಾನಿಗೆ ಕಪಿಲ್ ಸಿಬಲ್ ಮನವಿ

    ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಪ್ರಧಾನಿಗೆ ಕಪಿಲ್ ಸಿಬಲ್ ಮನವಿ

    ನವದೆಹಲಿ: ದೇಶದಲ್ಲಿ ಪ್ರಾರಂಭವಾಗಿರುವ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹಾಗಾಗಿ ಭಾರತದಲ್ಲಿ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಪ್ರಧಾನಿ ಮೋದಿ ಅವರಿಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಮನವಿ ಮಾಡಿಕೊಂಡಿದ್ದಾರೆ.

    ಇದರೊಂದಿಗೆ ದೇಶದಲ್ಲಿ ನಡೆಯುತ್ತಿರುವ ಚುನಾವಣಾ ರ‍್ಯಾಲಿಗಳಿಗೆ ಕಡಿವಾಣ ಹಾಕುವಂತೆ ಚುನಾವಣಾ ಆಯೋಗಕ್ಕೂ ಕೋರಿಕೆಯೊಂದನ್ನು ಇಟ್ಟಿದ್ದಾರೆ. ಈಗಾಗಲೇ ಪಂಚ ರಾಜ್ಯಗಳ ಚುನಾವಣೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಈಗಾಗಲೇ 5 ಹಂತ ಮುಗಿದಿದ್ದು, ಇನ್ನು ಕೊನೆಯ 3 ಹಂತದ ಚುನಾವಣೆ ಬಾಕಿ ಇದೆ. ಹಾಗಾಗಿ ಅಲ್ಲಿ ನಡೆಯಲಿರುವ ಮುಂದಿನ ಚುನಾವಣಾ ರ‍್ಯಾಲಿಗಳನ್ನು ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ ಕಪಿಲ್ ಸಿಬಲ್, ಮೋದಿಜಿ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ, ಚುನಾವಣಾ ಆಯೋಗ ಚುನಾವಣಾ ರ‍್ಯಾಲಿಗಳನ್ನು ತಡೆ ಹಿಡಿಯಿರಿ, ಕೋರ್ಟ್ ಜನರ ಪ್ರಾಣವನ್ನು ಉಳಿಸಲು ಪ್ರಯತ್ನ ಮಾಡಲಿ ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದಾರೆ.

    ಕಳೆದ ಒಂದು ದಿನದಲ್ಲಿ ದೇಶದಲ್ಲಿ ಬರೋಬ್ಬರಿ 2,61,500 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ಹಾಗೆ ಕಳೆದ ನಾಲ್ಕು ದಿನದಿಂದ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿರುವುದು ಆತಂಕ ಮೂಡಿಸಿದೆ.

  • ಸಿಎಂ ಬಿಎಸ್‍ವೈ ಸಂಪರ್ಕದಲ್ಲಿದ್ದ ಶಾಸಕ ಆನಂದ ಮಾಮನಿಗೆ ಕೊರೊನಾ

    ಸಿಎಂ ಬಿಎಸ್‍ವೈ ಸಂಪರ್ಕದಲ್ಲಿದ್ದ ಶಾಸಕ ಆನಂದ ಮಾಮನಿಗೆ ಕೊರೊನಾ

    ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ.

    ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್‍ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ.

    ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್‍ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ ನಡೆಸಿದರು. ಈ ವೇಳೆ ಸಿಎಂ ಜೊತೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಹಲವಾರು ಸಚಿವರು ಹಾಗೂ ಶಾಸಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಏಪ್ರಿಲ್ 12ನೇ ರಂದು ಮಸ್ಕಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್‍ಗೆ ಕೊರೊನಾ ಪಾಸಿಟಿವ್ ಆಗಿದ್ದು, ಏಪ್ರಿಲ್ 14 ರಂದು ಬಿಜೆಪಿ ಶಾಸಕ ರಾಜೂಗೌಡ, ಪ್ರೀತಂ ಗೌಡ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.

    ಸುರಪುರ ಶಾಸಕ ರಾಜೂಗೌಡರವರಿಗೆ ಏಪ್ರಿಲ್ 14ರಂದು ಕೊರೊನಾ ಕಾಣಿಸಿಕೊಂಡಿದ್ದು, ಗೋವಿಂದ ಕಾರಜೋಳರವರಿಗೆ ಏಪ್ರಿಲ್ 10ರಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಏಪ್ರಿಲ್ 14 ರಂದು ಹಾಸನ ಶಾಸಕ ಪ್ರೀತಂ ಗೌಡಗೆ ಕೊರೊನಾ ಕಾಣಿಸಿಕೊಂಡಿದ್ದು, ಇದೀಗ ಕ್ವಾರಂಟೈನಲ್ಲಿದ್ದಾರೆ.

    ಸದ್ಯ ಸಿಎಂ ಯಡಿಯೂರಪ್ಪನವರಿಗೆ ಇಂದು ಕೊರೊನಾ ದೃಢ ಪಟ್ಟಿರುವುದರಿಂದ ಸಿಎಂ ಜೊತೆ ಸಂಪರ್ಕದಲ್ಲಿದ್ದ ಸಚಿವ ಸುಧಾಕರ್, ಬಸವರಾಜ ಬೊಮ್ಮಾಯಿ, ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಶ್ರೀರಾಮುಲು, ಬಾಲಚಂದ್ರ ಜಾರಕಿ ಹೊಳಿ, ರೇಣುಕಾ ಚಾರ್ಯ, ಪ್ರಭು ಚವ್ಹಾಣ್ ಕೋವಿಡ್ ಪರೀಕ್ಷೆ ಮಾಡಬೇಕಾಗುತ್ತದೆ.