Tag: Election Commision

  • ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

    ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

    ನವದೆಹಲಿ: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಬುಧವಾರ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಚುನಾವಣಾ ಆಯುಕ್ತ ಸುಖಬೀರ್ ಸಿಂಗ್ ಸಂಧು (Sukhbir Singh Sandhu), ಜ್ಞಾನೇಶ್ ಕುಮಾರ್‌ರನ್ನು ಅಭಿನಂದಿಸಿದರು.

    ಅಧಿಕಾರ ಸ್ವೀಕಾರದ ಬಳಿಕ ಪ್ರತಿಕ್ರಿಯಿಸಿದ ಜ್ಞಾನೇಶ್ ಕುಮಾರ್ ಅವರು, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ ೧೮ ವರ್ಷಗಳನ್ನು ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು ಮತ್ತು ಯಾವಾಗಲೂ ಮತ ಚಲಾಯಿಸಬೇಕು. ಭಾರತದ ಸಂವಿಧಾನ, ಚುನಾವಣಾ ಕಾನೂನುಗಳು, ನಿಯಮಗಳು ಮತ್ತು ಅದರಲ್ಲಿ ನೀಡಲಾದ ಸೂಚನೆಗಳಿಗೆ ಅನುಗುಣವಾಗಿ, ಭಾರತದ ಚುನಾವಣಾ ಆಯೋಗವು ಮತದಾರರೊಂದಿಗೆ ಇತ್ತು, ಇದೆ ಮತ್ತು ಯಾವಾಗಲೂ ಇರುತ್ತದೆ ಎಂದರು. ಇದನ್ನೂ ಓದಿ: ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದವರಿಗೆ ದಂಡ ಪ್ರಯೋಗ: ಮುನಿಯಪ್ಪ

    ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಎಂಬ ಹೆಗ್ಗಳಿಕೆಗೆ ಜ್ಞಾನೇಶ್ ಕುಮಾರ್ ಪಾತ್ರರಾಗಿದ್ದಾರೆ. ಚುನಾವಣಾ ಆಯುಕ್ತ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು| ಜೆಸಿಬಿ ಹರಿದು 2 ವರ್ಷದ ಮಗು ಸಾವು

  • ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ

    ರೈತ ಬಂಧು ಯೋಜನೆ ಮುಂದೂಡುವಂತೆ ತೆಲಂಗಾಣ ಸರ್ಕಾರಕ್ಕೆ ಚು.ಆಯೋಗ ಸೂಚನೆ

    ನವದೆಹಲಿ: ಚುನಾವಣಾ ಮಾದರಿ ನೀತಿ ಸಂಹಿತೆ (Code Of Conduct) ಉಲ್ಲಂಘನೆ ಆರೋಪ ಹಿನ್ನೆಲೆ ರೈತ ಬಂಧು ಯೋಜನೆ (Rythu Bandhu Scheme) ಮುಂದೂಡುವಂತೆ ತೆಲಂಗಾಣ (Telangana) ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission) ಸೂಚನೆ ನೀಡಿದೆ.

    ಮತದಾನಕ್ಕೂ (Voting) ಮುನ್ನ ರೈತರ ಅಕೌಂಟ್‌ಗೆ ಹಣ ಹಾಕಿ ಅದರ ಲಾಭ ಪಡೆಯಲು ಬಿಆರ್‌ಎಸ್ (BRS) ಚಿಂತಿಸಿತ್ತು. ಇದಕ್ಕೂ ಮೊದಲು ಯೋಜನೆಗೆ ಅನುಮತಿ ನೀಡಿದ್ದ ಕೇಂದ್ರ ಚುನಾವಣಾ ಆಯೋಗ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಷರತ್ತು ವಿಧಿಸಿತ್ತು. ಅದಾಗ್ಯೂ ಬಿಆರ್‌ಎಸ್‌ನಿಂದ ಸ್ಪರ್ಧಿಸಿರುವ ರಾಜ್ಯ ಹಣಕಾಸು ಸಚಿವ ಟಿ ಹರೀಶ್ ರಾವ್ ಚುನಾವಣಾ ಪ್ರಚಾರಗಳಿಗೆ ಯೋಜನೆಯನ್ನು ಬಳಸಿಕೊಂಡಿದ್ದರು. ಈ ಬಗ್ಗೆ ಪ್ರತಿಪಕ್ಷಗಳಿಂದ ದೂರು ದಾಖಲಾದ ಹಿನ್ನೆಲೆ ಯೋಜನೆಗೆ ತಾತ್ಕಾಲಿಕ ತಡೆ ನೀಡಿದೆ. ಇದನ್ನೂ ಓದಿ: ಡಿಸೆಂಬರ್ 1ರಿಂದ ಭಾರತೀಯರಿಗೆ ಮಲೇಷ್ಯಾಕ್ಕೆ ವೀಸಾ ಮುಕ್ತ ಪ್ರಯಾಣ

    2018ರಲ್ಲಿ ಪ್ರಾರಂಭವಾದ ರೈತ ಬಂಧು ಯೋಜನೆಯು ರೈತರಿಗೆ ಅನಿಶ್ಚಿತತೆಗಳನ್ನು ಪೂರೈಸಲು ಮತ್ತು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಅನುವು ಮಾಡಿಕೊಡಲು ಒಂದು ಬೆಳೆ ಋತುವಿಗೆ ಎಕರೆಗೆ 5,000 ರೂ. ನಗದು ಹಣವನ್ನು ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾಯಿಸುತ್ತದೆ. ಕೆಲವು ಷರತ್ತುಗಳ ಅಡಿಯಲ್ಲಿ ಅಕ್ಟೋಬರ್-ಜನವರಿ ಅವಧಿಯಲ್ಲಿ ತಮ್ಮ ರಾಬಿ ಬೆಳೆಗಳನ್ನು ಬೆಳೆಯಲು ರೈತರಿಗೆ ಹಣಕಾಸಿನ ನೆರವು ವಿತರಣೆಗಾಗಿ ತೆಲಂಗಾಣ ಸರ್ಕಾರಕ್ಕೆ ಆಯೋಗ ಅನುಮತಿ ನೀಡಿತ್ತು. ಇದನ್ನೂ ಓದಿ: ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

    ನೀತಿ ಸಂಹಿತೆ ಅಸ್ತಿತ್ವಕ್ಕೆ ಬಂದ ನಂತರ ಹಣ ನೀಡಿರುವುದನ್ನು ಪ್ರಚಾರ ಮಾಡದಂತೆ ಚುನಾವಣಾ ಸಂಸ್ಥೆ ರಾಜ್ಯ ಸರ್ಕಾರವನ್ನು ಕೋರಿತ್ತು. ಆದರೆ ಹಲವು ನಾಯಕರು ಈ ಬಗ್ಗೆ ಉಲ್ಲೇಖಿಸಿದ ಹಿನ್ನೆಲೆ ಯೋಜನೆಯಡಿ ಯಾವುದೇ ವಿತರಣೆಯನ್ನು ನೀಡದಂತೆ ತೆಲಂಗಾಣ ಸರ್ಕಾರಕ್ಕೆ ಆಯೋಗ ಆದೇಶಿಸಿದೆ. ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ. ಇದನ್ನೂ ಓದಿ: Constitution Day: ರಾಷ್ಟ್ರಪತಿಯಿಂದ ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ

    119 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಆರ್‌ಎಸ್, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಡುವೆ ಮೂರು ಪಕ್ಷಗಳ ತೀವ್ರ ಪೈಪೋಟಿ ಕಂಡುಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೊಂದು ವೈರಸ್; ಆಸ್ಪತ್ರೆಗಳಲ್ಲಿ ತುರ್ತುಕ್ರಮ ಪರಿಶೀಲಿಸುವಂತೆ ರಾಜ್ಯಗಳಿಗೆ ಖಡಕ್‌ ವಾರ್ನಿಂಗ್‌

  • ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ – ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗದಿಂದ ಪತ್ರ

    ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ – ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗದಿಂದ ಪತ್ರ

    ಬೆಂಗಳೂರು: ಬೇಸಿಗೆ ರಜೆ ಎಂದು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸುವಂತಿಲ್ಲ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಚುನಾವಣಾ ಆಯೋಗಕ್ಕೆ ಮಕ್ಕಳ ಆಯೋಗ ಪತ್ರ ಬರೆದಿದೆ.

    ಚುನಾವಣಾ ಸಂದರ್ಭದಲ್ಲಿ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಈಗ ಮಕ್ಕಳಿಗೆ ಬೇಸಿಗೆ ರಜೆಯೂ ಇದೆ. ಆದರಿಂದ ಮಕ್ಕಳನ್ನು ಪ್ರಚಾರಕ್ಕೆ ಬಳಸುತ್ತಿರೋದು ಕಂಡುಬಂದರೆ ದೂರು ದಾಖಲಿಸಿಕೊಳ್ಳಲಾಗುತ್ತದೆ. ಈ ರೀತಿ ಮಕ್ಕಳ ಬಳಕೆ ಕಂಡು ಬಂದರೆ ಮಕ್ಕಳ ಆಯೋಗದ ಗಮನಕ್ಕೆ ತಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಎಲ್ಲ ಪಕ್ಷದವರು ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಮಾಡುತ್ತಿರುವ ಹಿನ್ನಲೆ ಆಯೋಗಕ್ಕೆ ಪತ್ರ ಬರೆಯಲಾಗಿದೆ.

    ಪತ್ರದಲ್ಲಿ ಏನಿದೆ?
    ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳ ಕಾಯ್ದೆ 2005ರ ಸೆಕ್ಷನ್ 13ರ ಅನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಮತ್ತು ಸೆಕ್ಷನ್ 14ರ ಅಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿರುತ್ತದೆ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ಸ್ವ-ಪ್ರೇರಣೆಯಿಂದ (ಸುಮೊಟೋ) ದೂರು ದಾಖಲಿಸಿ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.

    ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳಿಗೆ ಬೇಸಿಗೆಯ ನಿಮಿತ್ತ ಶಾಲೆಗಳಿಗೆ ರಜೆ ಘೋಷಿಸಿರುವುದರಿಂದ ಈ ಮಕ್ಕಳನ್ನು ವಿವಿಧ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಮಕ್ಕಳನ್ನು ಈ ರೀತಿಯ ಚುನಾವಣಾ ಪ್ರಚಾರದಲ್ಲಿ ದುಡಿಸಿಕೊಳ್ಳುವುದು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ.

    ಈ ಬಗ್ಗೆ ತಾವುಗಳು ವೈಯಕ್ತಿಕ ಗಮನ ಹರಿಸಿ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ/ ಚುನಾವಣಾ ಅಧಿಕಾರಿಗಳಿಗೆ ಯಾವುದೇ ರೀತಿಯಲ್ಲಿ ಮಕ್ಕಳಿಂದ ದುಡಿಮೆಯನ್ನು ಮಾಡಿಸುವಂತಿಲ್ಲ ಹಾಗೂ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಮಕ್ಕಳ ಹಿತದೃಷ್ಟಿಯಿಂದ ಸೂಕ್ತ ನಿರ್ದೇಶನ ನೀಡುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.