Tag: Election Officer

  • ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿ ಅಮಾನತು

    ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿ ಅಮಾನತು

    ಶಿವಮೊಗ್ಗ: ಚುನಾವಣಾ (Election) ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ (Suspend) ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ (Election Officer) ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ (Meggan Hospital) ಕಳುಹಿಸಿದ್ದರು. ಇದನ್ನೂ ಓದಿ: ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ – ಮಹಿಳಾ ಇನ್‌ಸ್ಪೆಕ್ಟರ್‌ ಅಮಾನತು

    ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಹುಲ್ ದ್ರಾವಿಡ್ ಸ್ವಾಗತ ಕಮಾನು – ಯಂಗ್ ವೋಟರ್ಸ್ ಸೆಳೆಯಲು ಯುವ ಮತಗಟ್ಟೆ

  • ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆ: ದಾಖಲೆಯಿಲ್ಲದೆ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌ (Flying Squad) ಹಾಗೂ ಲೋಕಾಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

    ಹಣ ಸಾಗಿಸುವ ಬೊಲೆರೋ (Bolero) ವಾಹನದಲ್ಲಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ಯೂನಿಯನ್ ಬ್ಯಾಂಕಿನಿಂದ (Union Bank) ಮುಧೋಳ ಯೂನಿಯನ್ ಬ್ಯಾಂಕ್‌ಗೆ 5 ಕೋಟಿ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಲೋಕಾಪುರ ಬಳಿಯಿರುವ ಲಕ್ಷಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ಹಣ ಸಾಗಾಟ ಕಂಡುಬಂದಿದೆ. ಇದನ್ನೂ ಓದಿ: ಸಿಎಂ ಮನೆ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆ..!

    ಈ ಹಣ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ನೀಡಿದರೂ ಸಹ ಸಮರ್ಪಕ ದಾಖಲೆಯಿಲ್ಲದ ಹಿನ್ನೆಲೆ ಹಣವನ್ನು ಜಪ್ತಿಪಡಿಸಿಕೊಂಡು ಕಾರಿನಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

  • ಡಿಕೆಶಿ ಕುಟುಂಬಕ್ಕೂ ತಟ್ಟಿದ ಚುನಾವಣೆ ಬಿಸಿ – ಹೆಲಿಕಾಪ್ಟರ್ ತಪಾಸಣೆ ವೇಳೆ ಮಾತಿನ ಚಕಮಕಿ

    ಡಿಕೆಶಿ ಕುಟುಂಬಕ್ಕೂ ತಟ್ಟಿದ ಚುನಾವಣೆ ಬಿಸಿ – ಹೆಲಿಕಾಪ್ಟರ್ ತಪಾಸಣೆ ವೇಳೆ ಮಾತಿನ ಚಕಮಕಿ

    ಮಂಗಳೂರು: ಚುನಾವಣೆ (Election) ಕಾವೇರಿರುವ ಹೊತ್ತಲ್ಲೇ ಡಿಕೆ ಶಿವಕುಮಾರ್ (D.K.Shivakumar) ಅವರ ಕುಟುಂಬಕ್ಕೂ ಚುನಾವಣಾ ಬಿಸಿ ತಟ್ಟಿದೆ. ಡಿಕೆಶಿ ಕುಟುಂಬ ಖಾಸಗಿ ಹೆಲಿಕಾಪ್ಟರ್‌ನಲ್ಲಿ (Helicopter) ಧರ್ಮಸ್ಥಳಕ್ಕೆ (Dharmasthala) ಬಂದಿಳಿದ ವೇಳೆ ಚುನಾವಣಾ ಅಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆಗೆ ಮುಂದಾಗಿದ್ದಾರೆ.

    ಶನಿವಾರ ಮತ್ತು ಭಾನುವಾರ ಡಿಕೆಶಿ ಕುಟುಂಬ ಟೆಂಪಲ್ ರನ್ ನಡೆಸುತ್ತಿದ್ದು, ಶನಿವಾರ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆಂದು ಡಿಕೆಶಿ ಪತ್ನಿ ಉಷಾ, ಮಗಳು ಮತ್ತು ಅಳಿಯ ಹಾಗೂ ಮಗ ಒಂದು ಹೆಲಿಕಾಪ್ಟರ್‌ನಲ್ಲಿ ಬಂದಿಳಿದರು. ಹೆಲಿಪ್ಯಾಡಿನಲ್ಲಿ ಹೆಲಿಕಾಪ್ಟರ್ ಲ್ಯಾಂಡಿಗ್ (Landing) ಆಗುತ್ತಿದ್ದಂತೆ ಚುನಾವಣೆ ಅಧಿಕಾರಿಗಳು ತಪಾಸಣೆಗೆ (Inspection) ಮುಂದಾಗಿದ್ದಾರೆ. ಇದನ್ನೂ ಓದಿ: ಹಳೇ ಮೈಸೂರು ಮೇಲೆ ಕಣ್ಣು – ಏ.30ಕ್ಕೆ ಕುಮಾರಸ್ವಾಮಿ ಅಡ್ಡದಲ್ಲಿ ಮೋದಿ ಸಮಾವೇಶ 

    ಇದು ಖಾಸಗಿ ಹೆಲಿಕಾಪ್ಟರ್ ಆಗಿದ್ದು, ಇದನ್ನು ತಪಾಸಣೆ ಮಾಡಲು ಅವಕಾಶವಿಲ್ಲ ಎಂದು ಪೈಲೆಟ್ (Pilot) ರಾಮ್‌ದಾಸ್ ಹೇಳಿದ್ದಾರೆ. ಈ ವೇಳೆ ಚುನಾವಣಾ ಅಧಿಕಾರಿ (Election Officer) ಹಾಗೂ ಪೈಲೆಟ್ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಚುನಾವಣಾ ಅಧಿಕಾರಿಗಳು ಹೆಲಿಕಾಪ್ಟರ್ ಮತ್ತು ಅವರ ಕಾರನ್ನೂ ಕೂಡಾ ತಪಾಸಣೆ ಮಾಡಿದ್ದಾರೆ. ಇದನ್ನೂ ಓದಿ: ಭಯ, ಆ ಭಯ ಇರಬೇಕು ಸಿದ್ದರಾಮಯ್ಯನವರೇ: ಪ್ರತಾಪ್‌ ಸಿಂಹ

  • ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭ

    ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ (Election) ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

    ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್. ಶಂಕರ್ 

    ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇದನ್ನೂ ಓದಿ: ರಾಜಕಾರಣ ನನಗೆ ಹೊಸದಲ್ಲ, ಹೊಂದಾಣಿಕೆ ಮಾತೇ ಇಲ್ಲ: ಡಿಕೆಶಿ 

    ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಯಶಸ್ವಿಯಾಗಿದ್ದೇವೆ, ಯಾವ ಬಂಡಾಯಕ್ಕೆ ಹೆದರಬೇಡಿ – ಬೊಮ್ಮಾಯಿಗೆ ಹೈಕಮಾಂಡ್‌ ಭರವಸೆ

    ಗುರುವಾರ ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ (Press Release) ತಿಳಿಸಿರುತ್ತಾರೆ. ಇದನ್ನೂ ಓದಿ: ಮತ್ತೆ ಜೆಡಿಎಸ್‌ ಬಾಗಿಲು ತಟ್ಟಿದ ದತ್ತಾ

  • ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ಬೆಂಗಳೂರು: ಕಳೆದ ಹನ್ನೆರಡು ದಿನಗಳಲ್ಲಿ ಚುನಾವಣೆ ಅಧಿಕಾರಿಗಳು (Election Officer) ಹಾಗೂ ಪೊಲೀಸರು ಚುನಾವಣಾ (Election) ಅಕ್ರಮಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ ನೂರು ಕೋಟಿಯಷ್ಟು ಹಣ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಇದರಲ್ಲಿ ಹಣಕ್ಕಿಂತ ಕುಕ್ಕರ್, ತವಾ ಮತ್ತು ಸೀರೆಗಳೇ ಮೇಲುಗೈ ಸಾಧಿಸಿದೆ.

    ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದಾರೆ. ಒಂದು ಕಡೆ ಟಿಕೆಟ್ ಗೊಂದಲ, ಮತ್ತೊಂದು ಕಡೆ ಮತದಾರರನ್ನು ಓಲೈಸಿಕೊಳ್ಳಲು ಆಮಿಷಗಳು. ಇದನ್ನು ಮನಗಂಡ ಚುನಾವಣಾ ಆಯೋಗ ಮಾರ್ಚ್ 29 ರಂದು ನೀತಿ ಸಂಹಿತೆ (Code Of Conduct) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಅಂದಿನಿಂದಲೇ ಅಲರ್ಟ್ ಆದ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಆಯಾ ವಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು (Check Post) ಹಾಕಿ ವಾಹನಗಳ ಪರಿಶೀಲನೆ ಶುರುಮಾಡಿದರು. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ 

    ಮತ್ತೊಂದು ಕಡೆ ರಾಜಕೀಯ ನಾಯಕರು ಮತ್ತು ಬೆಂಬಲಿಗರ ಮನೆಗಳಲ್ಲಿ ಅಕ್ರಮವಾಗಿ ಮತದಾರರಿಗೆ ಹಂಚಲು ಹಣ, ದಿನಸಿ ವಸ್ತುಗಳು, ಗಿಫ್ಟ್‌ಗಳ ಶೇಖರಣೆ ಬಗ್ಗೆ ಕಣ್ಣಿಟ್ಟು ದಾಳಿ ನಡೆಸಿ ವಶಕ್ಕೆ ಪಡೆದು ಕೇಸ್ ದಾಖಲಿಸುತ್ತಿದ್ದಾರೆ. ಬಹುತೇಕ ಪತ್ತೆಯಾದ ಕಡೆಗಳಲ್ಲೆಲ್ಲಾ ಸಾವಿರಾರು ಸಂಖ್ಯೆಯಲ್ಲಿ ಕುಕ್ಕರ್‌ಗಳು ಮತ್ತು ತವಾಗಳು ಪತ್ತೆಯಾಗುತ್ತಿವೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ 

    ನಾಮಿನೇಷನ್ ಹಾಕಿದ ನಂತರವಷ್ಟೇ ಹಣ, ಮದ್ಯ, ಗೃಹಬಳಕೆ ವಸ್ತುಗಳು ಹೆಚ್ಚಾಗಿ ಸಿಗುತ್ತವೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಸೂಕ್ತ ತಯಾರಿ ನಡೆಸಿದ್ದಾರೆ. ಆದರೆ ನಾಮೀನೇಷನ್ ಹಾಕುವ ಮುನ್ನವೇ ರಾಜ್ಯಾದ್ಯಂತ ಮೂರು ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸೇರಿದ ಬರೋಬ್ಬರಿ ನೂರು ಕೋಟಿ ಅಕ್ರಮ ಹಣ, ವಸ್ತುಗಳು ಪತ್ತೆಯಾಗಿದ್ದು, ಸ್ವತಃ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

  • ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು

    ಮತದಾನ ಮಾಡಿದ ಸದಸ್ಯರಿಂದ ಮತ ಪತ್ರ ಬಹಿರಂಗ- ಚುನಾವಣಾಧಿಕಾರಿಗೆ ದೂರು

    ಚಿಕ್ಕಮಗಳೂರು: ನಿನ್ನೆ ನಡೆದ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ತಾನು ಚಲಾಯಿಸಿದ ಅಧಿಕೃತ ಮತಪತ್ರವನ್ನ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಬಹಿರಂಗಪಡಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

    ಮತಪತ್ರವನ್ನ ಬಹಿರಂಗಪಡಿಸಿ ಕಾನೂನನ್ನ ಉಲ್ಲಂಘಿಸಿರುವ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ಇದನ್ನೂ ಓದಿ: ಜಗಳ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!

    ಈ ಪರಿಣಾಮ ಶುಕ್ರವಾರ ಸಂಜೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಮತ್ತು ವಿಧಾನ ಪರಿಷತ್ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಏಜೆಂಟ್ ಹಿರೇಮಗಳೂರು ಪುಟ್ಟಸ್ವಾಮಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ರಮೇಶ್ ಅವರಿಗೆ ದೂರು ನೀಡಿದ್ದಾರೆ.

    ತಾಲೂಕಿನ ಕಸಬಾ ಹೋಬಳಿಯ ಮತಗಟ್ಟೆಯೊಂದರಲ್ಲಿ ಒಬ್ಬ ಸದಸ್ಯರು ತಾನು ಮತ ಚಲಾಯಿಸಿದ ಮತ ಪತ್ರವನ್ನ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಮೊಬೈಲ್ ನಲ್ಲೇ ಬಹಿರಂಗಪಡಿಸಿದ್ದಾರೆ. ಮತದಾನ ಮಾಡುವುದು ಗೌಪ್ಯವಾಗಿದ್ದು, ಸದರಿ ಸದಸ್ಯರು ತಮ್ಮ ಮೊಬೈಲ್ ನಲ್ಲಿ ಅದನ್ನು ಬಹಿರಂಗಪಡಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಸಿಸಿ ಕ್ಯಾಮೆರಾ, ಭದ್ರತಾ ಸಿಬ್ಬಂದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ನಡುವೆಯೂ ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿರುವುದು ಗಮನಿಸಿದಾಗ ಕಾನೂನು ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿರುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಸ್ಪಷ್ಟವಾಗಿರುತ್ತದೆ. ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟ ಸದಸ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

  • ಬೆಂಜ್ ಕಾರಿನಲ್ಲಿ ಸಾಗಿಸುತ್ತಿದ್ದ 52 ಲಕ್ಷ ಹಣ ಮಂಡ್ಯದಲ್ಲಿ ಜಪ್ತಿ

    ಬೆಂಜ್ ಕಾರಿನಲ್ಲಿ ಸಾಗಿಸುತ್ತಿದ್ದ 52 ಲಕ್ಷ ಹಣ ಮಂಡ್ಯದಲ್ಲಿ ಜಪ್ತಿ

    ಮಂಡ್ಯ: ತಮಿಳುನಾಡು ರಾಜ್ಯದ ನೊಂದಣಿ ಹೊಂದಿದ್ದ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ 52 ಲಕ್ಷ 60 ಸಾವಿರ ಹಣವನ್ನು ಮಂಡ್ಯದಲ್ಲಿ ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ತಮಿಳುನಾಡಿನ ಹೊಸೂರು ಮೂಲದ ಆದಿತ್ಯ ಎಂಬುವವರಿಗೆ ಸೇರಿದ ಬೆಂಜ್ ಕಾರಿನಲ್ಲಿ ಯಾವುದೇ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ 52 ಲಕ್ಷ 60 ಸಾವಿರ ಹಣ ಪತ್ತೆಯಾಗಿದೆ.

    ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಕಾರು ಬರುತ್ತಿದ್ದಾಗ ಮದ್ದೂರಿನ ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿದಾಗ ಹಣ ಸಿಕ್ಕಿದೆ. ಈಗ 52 ಲಕ್ಷದ 60 ಸಾವಿರ ಹಣ, ಕಾರು ಹಾಗೂ ಕಾರಿನ ಮಾಲೀಕ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಳೆಯೇ ಬಿಬಿಎಂಪಿ ಮೇಯರ್ ಚುನಾವಣೆ – ಚುನಾವಣಾಧಿಕಾರಿ ಹರ್ಷಗುಪ್ತ

    ನಾಳೆಯೇ ಬಿಬಿಎಂಪಿ ಮೇಯರ್ ಚುನಾವಣೆ – ಚುನಾವಣಾಧಿಕಾರಿ ಹರ್ಷಗುಪ್ತ

    ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆ ನಾಳೆ ನಡೆಯುತ್ತಾ ಇಲ್ಲವೋ ಎನ್ನುವ ಗೊಂದಲದ ಮಧ್ಯೆ ನಾಳೆಯೇ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಈಗಾಗಲೇ ನಿಗದಿಪಡಿಸಿದಂತೆ ಅಕ್ಟೋಬರ್ ಒಂದರಂದು ಮೇಯರ್-ಉಪಮೇಯರ್ ಹಾಗೂ ನಾಲ್ಕು ಸ್ಥಾಯಿಸಮಿತಿಗಳ ಚುನಾವಣೆ ನಡೆಯುತ್ತದೆ ಎಂದು ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ ತಿಳಿಸಿದ್ದಾರೆ.

    ನಗರಾಭಿವೃದ್ಧಿ ಇಲಾಖೆ ಪತ್ರದಲ್ಲಿ ತಿಳಿಸಿರುವಂತೆ, ಕೆಎಮ್‍ಸಿ ಕಾಯ್ದೆ 10(1), 11(2), (ಬಿ) ಹಾಗೂ ಉಚ್ಛ ನ್ಯಾಯಾಲಯದ ತೀರ್ಪಿನ ಅನ್ವಯ ಕಾನೂನಿನ ಪ್ರಕಾರವೇ ನಾಳೆ ಚುನಾವಣೆ ನಡೆಯಲಿದೆ. ಚುನಾವಣೆ ಮುಂದೂಡುವ ಅಗತ್ಯವಿಲ್ಲ. ಮೇಯರ್ ಅವಧಿ ಸೆಪ್ಟೆಂಬರ್ 27ಕ್ಕೆ ಮುಗಿದಿರುವುದರಿಂದ ಚುನಾವಣೆ ನಡೆಸುವುದು ಚುನಾವಣಾಧಿಕಾರಿಯಾಗಿ ನನ್ನ ಕರ್ತವ್ಯ ಎಂದು ಹರ್ಷಗುಪ್ತ ತಿಳಿಸಿದರು.

    ಒಟ್ಟಿನಲ್ಲಿ ಮೇಯರ್, ಉಪಮೇಯರ್, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಮಾರುಕಟ್ಟೆ, ಲೆಕ್ಕಪತ್ರ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಚುನಾವಣೆ ನಡೆಯಲಿದೆ. ಬೆಳಗ್ಗೆ 8:30 ನಾಮಪತ್ರ ಸಲ್ಲಿಕೆಗೆ ನಡೆಯಲಿದ್ದು, 11:30 ಕ್ಕೆ ಚುನಾವಣೆ ನಡೆಯಲಿದೆ. ಆದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾದರೂ, ಮೇಯರ್ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ. ಮೇಯರ್ ಆಯ್ಕೆ ಬಿಜೆಪಿ ಪಕ್ಷದೊಳಗೇ ಅಸಮಾಧಾನ ಉಂಟುಮಾಡಿದೆ.

    ಇಂದು ಮಧ್ಯಾಹ್ನ ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ವಿಜಯ್‍ಕುಮಾರ್ ಅವರು ಪ್ರಾದೇಶಿಕ ಆಯುಕ್ತರಿಗೆ ಚುನಾವಣೆ ಮುಂದೂಡುವಂತೆ ಸೂಚಿಸಿದ್ದರು. ಬಿಬಿಎಂಪಿ ಮೇಯರ್/ ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸುವ ಸಂದರ್ಭದಲ್ಲೇ ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸಿದೆ. ಹೀಗಾಗಿ ಮೇಯರ್ ಉಪಮೇಯರ್ ಚುನಾವಣೆಯಂದ ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಬೇಕೆಂದು ವಿಜಯ್ ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದರು.

    ಈ ಸಂಬಂಧ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, ಬಿಬಿಎಂಪಿ ಚುನಾವಣೆ ಮಾಡಲು ಸಿಎಂ ಆದೇಶ ಮಾಡಿದ್ದರು. ಆದರೆ ಸಮಿತಿಗಳ ಚುನಾವಣೆ ಕೂಡ ಮಾಡಬೇಕು ಎಂದು ನ್ಯಾಯಾಲಯದ ಆದೇಶ ಇದೆ. ಮತ್ತೊಂದು ಕಡೆ ಕೆಲವು ಸಮಿತಿ ಚುನಾವಣೆ ಬೇಡ ಎಂದು ಮತ್ತೊಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಚುನಾವಣೆ ಮುಂದೂಡಲಾಗಿದೆ ಎಂದು ತಿಳಿಸಿದ್ದರು. ಆದರೆ ಸಂಜೆಯ ವೇಳೆ ಚುನಾವಣೆ ನಡೆಸಲಾಗುವುದು ಎಂದು ಹರ್ಷಗುಪ್ತ ತಿಳಿಸಿದ್ದಾರೆ.

  • ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದ 1.75 ಕೋಟಿ ರೂ. ಜಪ್ತಿ

    ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದ 1.75 ಕೋಟಿ ರೂ. ಜಪ್ತಿ

    ಚಿಕ್ಕಬಳ್ಳಾಪುರ: ಕರ್ನಾಟಕ-ಆಂಧ್ರ ಗಡಿಭಾಗದ ರಾಷ್ಟ್ರೀಯ ಹೆದ್ದಾರಿ 7ರ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಕಚೇರಿಯಲ್ಲಿ ಇದ್ದ 1.75 ಕೋಟಿ ರೂ. ಹಣವನ್ನ ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಆಂಧ್ರದ ಅನಂತಪುರ ಎಸ್ಪಿ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರ ಎಸ್ಪಿ ಸ್ಥಳೀಯ ಬಾಗೇಪಲ್ಲಿ ಪೊಲೀಸರು ಸುಂಕ ವಸೂಲಾತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಭಾರೀ ಮೊತ್ತದ ಹಣ ಪತ್ತೆಯಾದ ಹಿನ್ನೆಲೆ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಚುನಾವಣಾಧಿಕಾರಿಗಳು ಐಟಿ ಇಲಾಖಾಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಬಂದ ಐಟಿ ಅಧಿಕಾರಿಗಳು ಹಣ ಪರಿಶೀಲನೆ ನಡೆಸಿದ್ದು ಸಬಂಧಪಟ್ಟ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕ ಸೂಕ್ತ ದಾಖಲಾತಿಗಳನ್ನು ಓದಗಿಸುವಲ್ಲಿ ವಿಫಲರಾಗಿದ್ದಾರೆ.

    ಕಳೆದ 20 ದಿನಗಳಿಂದ ಸುಂಕ ವಸೂಲಾತಿ ಕೇಂದ್ರದಲ್ಲಿ ವಸೂಲಿ ಆದ ಹಣ ಎಂದು ಹೇಳಿದ್ದು, ಆದರೆ ಇದರ ಬಗ್ಗೆ ಸೂಕ್ತ ದಾಖಲಾತಿಗಳಿಲ್ಲದ ಕಾರಣ ಚುನಾವಣಾ ಅಧಿಕಾರಿಗಳು ಎಲ್ಲಾ ಹಣವನ್ನ ಜಪ್ತಿ ಮಾಡಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

  • ಸೂಕ್ತ ದಾಖಲೆಗಳಿಲ್ಲದ 1.75 ಕೋಟಿ ರೂ. ವಶ

    ಸೂಕ್ತ ದಾಖಲೆಗಳಿಲ್ಲದ 1.75 ಕೋಟಿ ರೂ. ವಶ

    ಚಿಕ್ಕಬಳ್ಳಾಪುರ: ಕರ್ನಾಟಕ – ಆಂಧ್ರ ಗಡಿಭಾಗದ ಬಾಗೇಪಲ್ಲಿಯ ಸುಂಕ ವಸೂಲಾತಿ ಕೇಂದ್ರದ ವ್ಯವಸ್ಥಾಪಕರ ಕಚೇರಿಯಲ್ಲಿ ಸೂಕ್ತ ದಾಖಲೆಗಳಿಲ್ಲದ 1 ಕೋಟಿ 75 ಲಕ್ಷ ರೂ. ಮೌಲ್ಯದ ಹಣ ಪತ್ತೆಯಾಗಿದೆ.

    ಕೇಂದ್ರದ ವ್ಯವಸ್ಥಾಪಕ ಸುಬ್ಬಾರೆಡ್ಡಿ ಅವರ ಕಚೇರಿಯಲ್ಲಿ ನಗದು ಪತ್ತೆಯಾಗಿದ್ದು, ಈ ಸಂಬಂಧ ಮಾಹಿತಿ ತಿಳಿದ ಚುನಾವಣಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಕಚೇರಿಗೆ ಭೇಟಿ ನೀಡಿ ಹಣ ವಶಕ್ಕೆ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆ ಚುನಾವಣಾ ಅಕ್ರಮಗಳಿಗೆ ಬಳಸಲು ದೊಡ್ಡ ಮೊತ್ತದ ಹಣ ಸಂಗ್ರಹಿಸಿರುವ ಶಂಕೆ ವ್ಯಕ್ತವಾಗಿದೆ.

    ಸ್ವತಃ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನಟರಾಜ್ ಅವರು ಕೂಡ ಸ್ಥಳಕ್ಕೆ ನೀಡಿದ್ದು, ಐಟಿ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹಣ ಜಪ್ತಿ ಮಾಡಲು ಚುನಾವಣಾಧಿಕಾರಿಗಳು ಮುಂದಾಗಿದ್ದಾರೆ.

    ಇದು ಸುಂಕ ವಸೂಲಾತಿ ಕೇಂದ್ರಕ್ಕೆ ಸೇರಿದ ಹಣ ಎಂದು ವ್ಯವಸ್ಥಾಪಕರು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸೂಕ್ತ ದಾಖಲೆಗಳನ್ನ ನೀಡಿಲ್ಲ. ಹೀಗಾಗಿ ಅನುಮಾನಗೊಂಡಿರುವ ಚುನಾವಣಾಧಿಕಾರಿಗಳು ಹಣ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.