Tag: Election Rally

  • ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಹೈದರಾಬಾದನ್ನು ಭಾಗ್ಯನಗರ್ ಅಂತ ಮರುನಾಮಕರಣ: ಅಸ್ಸಾಂ ಸಿಎಂ

    ಹೈದರಾಬಾದ್: ತೆಲಂಗಾಣದಲ್ಲಿ (Telangana) ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 30 ನಿಮಿಷದಲ್ಲಿ ಹೈದರಾಬಾದ್ ಅನ್ನು ‘ಭಾಗ್ಯನಗರ್’ (Bhagya Nagar) ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ಹೇಳಿಕೆಯೊಂದನ್ನು ನೀಡಿದ್ದಾರೆ.

    ಹೈದರಾಬಾದ್‍ನಲ್ಲಿ ಚುನಾವಣಾ ಪ್ರಚಾರದಲ್ಲಿನ (Election Rally) ತಮ್ಮ ಭಾಷಣದ ವೇಳೆ ಈ ಮಾತನ್ನು ಹೇಳಿದ್ದಾರೆ. ಹೈದರಾಬಾದ್ ಹೆಸರನ್ನು ಭಾಗ್ಯನಗರ್ ಎಂಬುದಾಗಿ ಮರುನಾಮಕರಣ ಮಾಡಬೇಕು ಎಂಬುದಾಗಿ ನಾನು ಅಂದುಕೊಂಡಿದ್ದೇನೆ. ಅದರಂತೆ ಬಿಜೆಪಿ (BJP) ಅಧಿಕಾರಕ್ಕೆ ಬಂದ ಅರ್ಧ ಗಂಟೆಯಲ್ಲಿ ಮರುನಾಮಕರಣ ಮಾಡುತ್ತೇನೆ. ಇದನ್ನು ಯಾರೂ ಕೂಡ ವಿರೋಧಿಸುವ ಧೈರ್ಯ ಮಾಡಲ್ಲ ಎಂದರು.

    ಕೆಲವು ವಿಷಯಗಳು ಅಸಾಧ್ಯವೆಂದು ತೋರುತ್ತದೆ. ಓಲ್ಡ್ ಸಿಟಿಗೆ ಮೆಟ್ರೋ ರೈಲು ವ್ಯವಸ್ಥೆ ಕಲ್ಪಿಸಬಹುದೇ? ಕೆಲವು ಜನರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗುತ್ತದೆಯೇ?, ಇನ್ನೂ ಕೆಲವರು ಬಹಿರಂಗವಾಗಿ ಪೊಲೀಸರಿಗೆ ಬೆದರಿಕೆ ಹಾಕಿದಾಗ ನಾವು ಅದನ್ನು ತಡೆಯಬಹುದೇ? ಎಂದು ಇತ್ತೀಚೆಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಕ್ಬರುದ್ದೀನ್ ಓವೈಸಿ ಅವರನ್ನು ಒಳಗೊಂಡ ಘಟನೆಯನ್ನು ಉಲ್ಲೇಖಿಸಿ ಹಳಿದರು. ಇದನ್ನೂ ಓದಿ: 4 ತಿಂಗಳ ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

    ಬಿಜೆಪಿ ಸರ್ಕಾರ ರಚನೆಯಾದ ನಂತರ 30 ನಿಮಿಷಗಳಲ್ಲಿ ಈ ಕೆಲಸಗಳನ್ನು ಮಾಡಲಾಗುವುದು ಎಂದರು. ಶರ್ಮಾ ಅವರು ಕೋಮುವಾದದ ಧ್ವನಿಯೊಂದಿಗೆ ಹಲವಾರು ಕಾಮೆಂಟ್‍ಗಳನ್ನು ಮಾಡಿದ್ದಾರೆ. ಈ ದೇಶದಲ್ಲಿ ಬಹುಪತ್ನಿತ್ವದ ಜೊತೆಗೆ ತುಷ್ಟೀಕರಣ ರಾಜಕಾರಣವೂ ಕೊನೆಗೊಳ್ಳಬೇಕು ಎಂದರು. ತ್ರಿವಳಿ ತಲಾಖ್ ನಿಷೇಧ, ಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆಯೂ ಅವರು ಮನವಿ ಮಾಡಿದರು. ಇದನ್ನೂ ಓದಿ: ಭಾರತ ವಿಶ್ವಕಪ್ ಸೋಲಲು ಇಂದಿರಾ ಗಾಂಧಿ ಕಾರಣವೆಂದ ಅಸ್ಸಾಂ ಸಿಎಂ!

  • ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

    ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

    ಲಕ್ನೋ: ಜನರನ್ನು ಹೆದರಿಸಲು ಮತ್ತು ಕೊಲ್ಲಲು ಈ ಮುನ್ನ ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು. ಆದರೆ ಈಗ ದೇಶವನ್ನು ರಕ್ಷಿಸಲು ಶೆಲ್‍ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

    ಚುನಾವಣಾ ರ್‍ಯಾಲಿಯೊಂದರಲ್ಲಿ ಮಾತನಾಡಿದ ಅವರು, ಹಿಂದೆ, ಉತ್ತರ ಪ್ರದೇಶದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿತ್ತು. ಅದನ್ನು ಜನರನ್ನು ಹೆದರಿಸಲು ಅಥವಾ ಕೊಲ್ಲಲು ಬಳಸಲಾಗುತ್ತಿತ್ತು. ಇಂದು ಇಲ್ಲಿ ಶೆಲ್‍ಗಳು ಮತ್ತು ಕ್ಷಿಪಣಿಗಳನ್ನು ತಯಾರಿಸಲಾಗುತ್ತಿದೆ. ಇವುಗಳನ್ನು ಭಾರತವನ್ನು ರಕ್ಷಿಸಲು ಬಳಸಲಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಬದಲಾವಣೆಯಾಗಿದೆ. ಈ ಬಾರಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾನು ಯುಪಿಯಲ್ಲಿ ಸುಮಾರು 150 (ಅಸೆಂಬ್ಲಿ) ಸ್ಥಾನಗಳಿಗೆ ಹೋಗಿದ್ದೇನೆ ಮತ್ತು ಪ್ರತಿ ಸ್ಥಳದಲ್ಲೂ ಚುನಾವಣಾ ಮೂಡ್ ನೋಡಿದ್ದೇನೆ. ಮೊದಲ ಐದು ಹಂತದ ಚುನಾವಣೆಗಳಲ್ಲಿ ಎಸ್‍ಪಿ ಮತ್ತು ಬಿಎಸ್‍ಪಿ ಪಕ್ಷಗಳು ನಿರ್ನಾಮವಾಗಲಿದ್ದು, ಬಿಜೆಪಿ ಸರ್ಕಾರ ರಚನೆಗೆ ಜನ ಬಯಸುತ್ತಿದ್ದಾರೆ. ಈಗ, 300 ಕ್ಕಿಂತ ಹೆಚ್ಚು ಸ್ಥಾನಗಳನ್ನು ಪಡೆಯಲು ನೀವು ಮತ ಹಾಕಬೇಕು ಎಂದರು. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ

    ಉತ್ತರಪ್ರದೇಶದಲ್ಲಿ ಇನ್ನೂ ಒಂದಿಬ್ಬರು ‘ಬಾಹುಬಲಿಗಳು’ ಉಳಿದಿದ್ದಾರೆ. ಅವರನ್ನು ಮಾರ್ಚ್ 10ರ ನಂತರ ಜೈಲಿಗೆ ಕಳುಹಿಸಲಾಗುತ್ತದೆ. ಇನ್ನೂ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವವರೆಗೂ ಅಭಿವೃದ್ಧಿ ಸಾಧ್ಯವಿಲ್ಲ ಮತ್ತು ಕೈಗಾರಿಕಾ ಹೂಡಿಕೆಗಳು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. ಇದನ್ನು ಓದಿ: ಕಾರು ಡ್ರೈವಿಂಗ್‌ ಮಾಡ್ಕೊಂಡೆ ಆಸ್ಪತ್ರೆಗೆ – ಹೆಣ್ಣು ಮಗುವಿನ ತಾಯಿಯಾದ ದಿಶಾ ಮದನ್

    ಇದೇ ವೇಳೆ ರಾಜ್ಯದಲ್ಲಿ ಮುಂಬರಲಿರುವ ರಕ್ಷಣಾ ಕೈಗಾರಿಕಾ ಕಾರಿಡಾರ್ ಕುರಿತಂತೆ ಮಾತನಾಡಿದರು. ಜೊತೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಮಾಡಿದ ವಿವಿಧ ಸಾಧನೆಗಳನ್ನು ತಿಳಿಸಿದರು. ಚಂದೌಲಿ ಏಳನೇ ಹಂತದಲ್ಲಿ ಮಾರ್ಚ್ 7 ರಂದು ಚುನಾವಣೆ ನಡೆಯಲಿದೆ.

  • ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ- ಮೋದಿ ವಾಗ್ದಾಳಿ

    ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ- ಮೋದಿ ವಾಗ್ದಾಳಿ

    ರಾಂಚಿ: ಪಾಕಿಸ್ತಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮೊದಲ ಬಾರಿಗೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಜಾರ್ಖಂಡ್‍ನ ಡುಮ್ಕಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್‍ನ ಭಾರತ್ ಬಚಾವೋ ರ್ಯಾಲಿ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮೊದಲ ಬಾರಿಗೆ ಪಾಕಿಸ್ತಾನದಂತೆ ಮಾಡಿದೆ. ಈ ಹಿಂದೆ ಯಾರಾದರೂ ಭಾರತೀಯ ರಾಯಭಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಇತಿಹಾಸವಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಭಾರತದಲ್ಲಿನ ನಿರುದ್ಯೋಗ, ಆರ್ಥಿಕತೆ ಕುಸಿತ ಹಾಗೂ ದೇಶದ ರೈತರ ಸ್ಥಿತಿಗತಿ ಕುರಿತು ವಿಶ್ವ ಮಟ್ಟದಲ್ಲಿ ಭಾರತ್ ಬಚಾವೋ ಶೀರ್ಷಿಕೆಯಡಿ ಕಾಂಗ್ರೆಸ್ ವಿಶ್ವಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಮೂಲಕ ವಿದೇಶಗಳಲ್ಲಿರುವ ಎಲ್ಲ ರಾಯಭಾರಿ ಕಚೇರಿಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಮಾತನಾಡಿದ ಅವರು, ಈ ಕಾನೂನು ಲೋಕಸಭೆಯ ಎರಡೂ ಮನೆಗಳಲ್ಲಿ ಪಾಸ್ ಆಗಿದೆ. ಪಾಕಿಸ್ತಾನ, ಅಫ್ಘಾನಿಸ್ಥಾನ ಹಾಗೂ ಬಾಂಗ್ಲಾದೇಶದ ಅಲ್ಪಸಂಖ್ಯಾತರು ಭಾರತದಲ್ಲಿ ನಿರಾಶ್ರಿತರಾಗಿಯೇ ಉಳಿದಿದ್ದರು. ಇಂತಹವರಿಗೆ ಪೌರತ್ವ ನೀಡುವುದು ಇದರ ಉದ್ದೇಶವಾಗಿದೆ. ಆದರೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಈ ಕುರಿತು ಊಹಾಪೋಹಗಳನ್ನು ಸೃಷ್ಟಿಸುತ್ತಿವೆ. ಅಲ್ಲದೆ ನಾವೂ ಅವರಂತೆ ಮಾಡಿಲ್ಲವಲ್ಲ ಎಂಬ ಕಾರಣಕ್ಕೆ ಈ ಕುರಿತು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಈ ವಿಚಾರದಲ್ಲಿ ಹಿಂಸಾಚಾರ ನಡೆಸುತ್ತಿರುವವರು ಯಾರು ಎಂಬುದನ್ನು ಅವರ ಬಟ್ಟೆಗಳಿಂದಲೇ ಗುರುತಿಸಬಹುದು. ಇವರು ದೇಶದ ಅಭಿವೃದ್ಧಿ ಮಾರ್ಗಸೂಚಿಯನ್ನೇ ಹೊಂದಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಅತ್ತ ಈಶಾನ್ಯ ರಾಜ್ಯಗಳಲ್ಲಿಯೂ ಸಹ ವಿರೋಧದ ಹೋರಾಟ ಜೋರಾಗಿದೆ. ಇದೆಲ್ಲದರ ಮಧ್ಯೆ ಕಾಂಗ್ರೆಸ್ ನಾಯಕರು ಭಾರತ್ ಬಚಾವೋ ರ್ಯಾಲಿ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪೌರತ್ವ ಮಸೂದೆ ತಿದ್ದುಪಡಿ ಕುರಿತು ಮಾತನಾಡಿ, ಇದು ಭಾರತ ಆತ್ಮವನ್ನು ಬೇರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದರು.